ಲೇಖಕ: admin

ಮಡಿಕೇರಿ ಸೆ.5 NEWS DESK : ಮಾಯಮುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ನಡೆದ ವಿರಾಜಪೇಟೆ ತಾಲ್ಲೂಕು ಮಟ್ಟದ ಬಾಲಕರ ವಿಭಾಗದ ವಾಲಿಬಾಲ್  ಪಂದ್ಯಾವಳಿಯಲ್ಲಿ ಬಾಳೆಲೆ ವಿಜಯಲಕ್ಷ್ಮಿ ಪ್ರೌಢ ಶಾಲಾ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ. ತಿತಿಮತಿ ಸರ್ಕಾರಿ ಪ್ರೌಢಶಾಲಾ ತಂಡದೊಡನೆ ನಡೆದ ಫೖನಲ್ ಪಂದ್ಯದ ಪ್ರಥಮ ಸೆಟ್ ನಲ್ಲಿ ಆಕರ್ಷಕ ಸ್ಮೇಶ್ ಗಳ ಮೂಲಕ ತಿತಿಮತಿ ತಂಡದ ವಿರುದ್ಧ 21-10 ಅಂಕಗಳ ಅಂತರದಲ್ಲಿ ಗೆಲುವು ಸಾಧಿಸಿದರೆ, ದ್ವಿತೀಯ ಸೆಟ್ ನಲ್ಲಿ 21-11 ಅಂಕಗಳ ಅಂತರದಲ್ಲಿ  ಬಾಳೆಲೆ ವಿಜಯಲಕ್ಷ್ಮಿ ಪ್ರೌಢ ಶಾಲಾ ತಂಡ ಗೆಲುವು ಸಾಧಿಸಿ  ಸತತ ಐದನೇ ಬಾರಿಗೆ ಚಾಂಪಿಯನ್ನರಾಗಿ ಹೊರಹೊಮ್ಮಿತು. ವಿಜೇತ ತಂಡಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಜಯಮ್ಮ ಅವರು ಟ್ರೋಫಿ ವಿತರಣೆ ಮಾಡಿದರು. ಬಾಳೆಲೆ ವಿಜಯಲಕ್ಷ್ಮಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಅಳಮೇಂಗಡ ಬೋಸ್ ಮಂದಣ್ಣ ಹಾಗೂ ಗೌರವ ಕಾರ್ಯದರ್ಶಿ ಚಿಮ್ಮಣಮಾಡ ಕೃಷ್ಣಾ ಗಣಪತಿ ವಿದ್ಯಾರ್ಥಿಗಳನ್ನು ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಪರವಾಗಿ ಅಭಿನಂದಿಸಿದರು. …

Read More

ಮಡಿಕೇರಿ ಸೆ.5 NEWS DESK : ಕೊಡಗು ಜಿಲ್ಲೆಯಲ್ಲಿ 2025-26ನೇ ಸಾಲಿನಲ್ಲಿ ಅತೀವೃಷ್ಟಿ, ಬರ, ಪ್ರಾಕೃತಿಕ ವಿಕೋಪ, ಹವಾಮಾನ ವೈಪರೀತ್ಯ ಮತ್ತಿತರ ಕಾರಣಗಳಿಂದಾಗಿ ಹಾನಿಯಾಗಿರುವ ಬೆಳೆಗಳ ಸಮೀಕ್ಷೆ ನಡೆಸಿ, ಗ್ರಾಮವಾರು, ಹೋಬಳಿವಾರು ಎಷ್ಟೆಷ್ಟು ಹಾನಿಯಾಗಿರುತ್ತದೆ ಎಂಬುದನ್ನು ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಹಾಗೂ ಈ ಸಂಬಂಧ ಸಂಬಂಧಪಟ್ಟ ಸಂತ್ರಸ್ತರಿಗೆ ಪರಿಹಾರ ಪಾವತಿಸುವ ಸಲುವಾಗಿ ತಂಡ ರಚಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.  ಕೃಷಿ ಇಲಾಖೆ ಜಂಟಿ ನಿರ್ದೇಶಕರು, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು, ವಿರಾಜಪೇಟೆಯ ಕಾಫಿ ಮಂಡಳಿ ಉಪ ನಿರ್ದೇಶಕರು ಹಾಗೂ ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ, ಕುಶಾಲನಗರ ಮತ್ತು ಪೊನ್ನಂಪೇಟೆ ಈ ತಾಲ್ಲೂಕುಗಳ ತಹಶೀಲ್ದಾರರು ತಂಡದಲ್ಲಿದ್ದಾರೆ. ಈ ತಂಡವು ಬೆಳೆಹಾನಿಯಾದ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸ್ಥಳ ಪರಿಶೀಲನೆ ನಡೆಸಿ ಛಾಯಾಚಿತ್ರದೊಂದಿಗೆ ಬೆಳೆ ಹಾನಿಯ ಬಗ್ಗೆ ಖಚಿತ ವರದಿ ಸಲ್ಲಿಸುವುದು. ತಾಲ್ಲೂಕುವಾರು ತಂಡಗಳನ್ನು ಇಲಾಖೆಗಳ ಸಹಯೋಗದೊಂದಿಗೆ ರಚಿಸಿಕೊಂಡು ವರದಿಯನ್ನು ಕ್ರೋಢೀಕರಿಸಿ ಅ.6 ರೊಳಗೆ ಸಂಬಂಧಿಸಿದ ತಹಶೀಲ್ದಾರರು…

Read More

ಮಡಿಕೇರಿ ಸೆ.5 NEWS DESK : ರಾಷ್ಟ್ರೀಯ ಮಿಲಿಟರಿ ಸ್ಕೂಲ್, ಬೆಂಗಳೂರು ಇಲ್ಲಿ ಅಸಿಸ್ಟೆಂಟ್ ಮಾಸ್ಟರ್ (ಇಂಗ್ಲೀಷ್) (ಇಡಬ್ಲ್ಯುಎಸ್) (ಗ್ರೂಪ್ ‘ಬಿ’ ನಾನ್ ಗೆಜೆಟೆಡ್) ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಪತ್ರಿಕಾ ಪ್ರಕಟಣೆಯಿಂದ 42 ದಿನಗಳು ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ www.rashtriyamilitaryschools.edu.in ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಸೆ.5 NEWS DESK : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 13 ಫಲಾನುಭವಿ ಆಧಾರಿತ ಯೋಜನೆಗಳನ್ನು 2025-26 ನೇ ಸಾಲಿನಲ್ಲಿ ಸೇವಾ ಸಿಂಧು, ಆನ್‍ಲೈನ್ ತಂತ್ರಾಂಶದಡಿ ಅಳವಡಿಸಲಾಗಿರುತ್ತದೆ. ಆದ್ದರಿಂದ ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆ ಹಾಗೂ ಸಾಧನ ಸಲಕರಣೆ ಯೋಜನೆ ಈ ಯೋಜನೆಗಳಿಗೆ 2025-26ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್‍ಲೈನ್ ಮೂಲಕ (https://sevasindhu.karnataka.gov.in/Sevasindhu/Kannada) ಪೋರ್ಟ್‍ಲ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 30 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ. ಹೆಚ್ಚಿನ…

Read More

ಮಡಿಕೇರಿ ಸೆ.5 NEWS DESK : ಅಮ್ಮತಿಯಲ್ಲಿ ನಡೆದ ಪ್ರಾಥಮಿಕ ವಿಭಾಗದ ಬಾಲಕರ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ವಿರಾಜಪೇಟೆ ಕಾವೇರಿ ಶಾಲೆಯ ತಂಡ ರನ್ನರ್ಸ್ ಟ್ರೋಫಿ ತಮ್ಮದಾಗಿಸಿಕೊಂಡಿದೆ. ತಂಡದಲ್ಲಿ ವಿದ್ಯಾರ್ಥಿಗಳಾದ ಚೇತನ್ ಪೊನ್ನಪ್ಪ ಬಿ.ಎಸ್, ಸಾತ್ವಿಕ್ ಸಿ.ಆರ್, ಹಿತಾರ್ಥ್ ಪಿ.ಜಿ, ಚಿರಾಗ್ ಪಿ.ಆರ್, ಶಾಝಿಲ್ ಮುಸ್ತಾಫ ಪಿ.ಎಂ, ನೇಹನ್ ಎಂ.ಎ, ಸಿನಾಜ್ ಬಿ.ಎಸ್, ಅಜಾನ್ ಎಂ.ಎ, ತಾತಂಡ ದಕ್ಷ್ ಬೋಜಣ್ಣ ಟಿ, ಭೌತಿಕ್ ಶೆಟ್ಟ ಬಿ.ಎಸ್., ಪುಗ್ಗೇರ ಗದಿನ್ ಬೋಪಣ್ಣ, ಆದಿತ್ಯನ್ ಎಮ್.ಎಸ್, ಅನ್ವಿತ್ ಬಿ.ಬಿ., ಮೊಹಮ್ಮದ್ ರಾಹಿಲ್, ಕೌಶಿಕ್ ಯು. ಎಸ್. ಭಾಗವಹಿಸಿದ್ದರು. ಇವರಿಗೆ ದೈಹಿಕ ಶಿಕ್ಷಕರುಗಳಾದ ಮೋನಿಕ ಹಾಗೂ ಲಾವಣ್ಯ ಮಾರ್ಗದರ್ಶನ ನೀಡಿದ್ದಾರೆ. ತಂಡದ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಕಿ, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ಗೋಣಿಕೊಪ್ಪ ಸೆ.5 NEWS DESK : ಗೋಣಿಕೊಪ್ಪ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹೆಚ್.ಕೆ ಕುಮಾರ್ ಉತ್ತಮ ಶಿಕ್ಷಕರ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ಗೋಣಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ಶಾಲೆಯ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ರೂಪಿಸಿ, ಮಕ್ಕಳ ಶಿಕ್ಷಣದ ಉನ್ನತೀಕರಣಕ್ಕೆ ಶ್ರಮಿಸುತ್ತಿದ್ದಾರೆ. ಕಳೆದ ಬಾರಿ ನಡೆದ ಶತಮಾನೋತ್ಸವ ಸಂಭ್ರಮವನ್ನು ಅತ್ಯುತ್ತಮವಾಗಿ ಆಯೋಜಿಸುವ ಮೂಲಕ ರಾಜ್ಯಮಟ್ಟದಲ್ಲಿ ಗಮನ ಸೆಳೆಯಲಾಗಿತ್ತು. ಶಾಲೆಯಲ್ಲಿ, ಸಮಸ್ಯೆಯಾಗಿ ಕಾಡುತ್ತಿದ್ದ ಕುಡಿಯುವ ನೀರು ಸುಚಿತ್ವ ಕೊಟ್ಟಡಿಗಳ ನವೀಕರಣ ಸರಿದಂತೆ ಹಲವಾರು ಕಾರ್ಯೋಜನೆಗಳನ್ನ ರೂಪಿಸುವ ಮೂಲಕ ಸರ್ಕಾರಿ ಶಾಲೆಯ ಮಕ್ಕಳ ಓದಿಗೆ ಪೂರಕ ವಾತಾವರಣ ನಿರ್ಮಿಸುವಲ್ಲಿ ಕುಮಾರ್ ಬಹುಮುಖ್ಯ ಪಾತ್ರ ನಿರ್ವಹಿಸುತ್ತಿದ್ದಾರೆ. ಇವರು ಕುಶಾಲನಗರದ ನಿವಾಸಿಯಾಗಿದ್ದಾರೆ.

Read More

ಮಡಿಕೇರಿ NEWS DESK ಸೆ.4 : ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕದ ವತಿಯಿಂದ ಕರ್ನಾಟಕ ಮಾಜಿ ಮುಖ್ಯಮಂತ್ರಿ, ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ್ ಅರಸು ಅವರ 110ನೇ ಜನ್ಮದಿನಾಚರಣೆಯ ಪ್ರಯುಕ್ತ ವಿದ್ಯುತ್ ಇಲಾಖೆಯ ನೌಕರರನ್ನು ಸನ್ಮಾನಿಸಲಾಯಿತು. ನಗರದ ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮಮದಲ್ಲಿ ಗಣ್ಯರು ಡಿ.ದೇವರಾಜ್ ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್‌ನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್, ವಿದ್ಯುತ್ ಇಲ್ಲದೆ ದಿನ ಕಳೆಯಲು ಸಾಧ್ಯವಿಲ್ಲ. ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ವಿದ್ಯುತ್ ಇಲಾಖೆಯ ನೌಕರರು ಹಗಲು ರಾತ್ರಿ ಎನ್ನದೇ, ಗಾಳಿ, ಮಳೆ, ಚಳಿಯನ್ನು ಲೆಕ್ಕಿಸದೇ ದಿನದ ಇಪ್ಪತ್ತನಾಲ್ಕು ಗಂಟೆಯೂ ನಾಗರಿಕರ ಸೇವೆಗೆ ಶ್ರಮಿಸುತ್ತಿರುವುದು ಶ್ಲಾಘನೀಯ. ಸಾರ್ವಜನಿಕರು ವಿದ್ಯುತ್ ನೌಕರರ ಸಮಸ್ಯೆಯನ್ನು ಅರಿತು ಅವರಿಗೆ ಉತ್ತಮ ಸಹಕಾರ ನೀಡಬೇಕು ಎಂದರು. ಹಿಂದುಳಿದ ವರ್ಗಗಳ ಹರಿಕಾರ ಡಿ.ದೇವರಾಜು ಅರಸು ಅವರ ಹೆಸರಿನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ…

Read More

ಮಡಿಕೇರಿ NEWS DESK ಸೆ.4 : ಮತಾಂತರ ಪಿಡುಗಿನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಪರಿವಾರ ಸಂಘಟನೆಯ ಪ್ರಮುಖರು ಗೋಣಿಕೊಪ್ಪದಲ್ಲಿ ಪ್ರತಿಭಟನಾ ಜಾಥ ನಡೆಸಿದರು. ಶ್ರೀ ಮಹಾಲಕ್ಷ್ಮಿ ದೇವಾಲಯದ ಆವರಣದಿಂದ ಆತೂರು ವರೆಗೆ ಜಾಥಾ ನಡೆಸಿದ ಪ್ರತಿಭಟನಾಕಾರರು ಇತ್ತೀಚೆಗೆ ಖಾಸಗಿ ಶಾಲೆಯ ಸಭಾಂಗಣವೊಂದರಲ್ಲಿ ಮತಾಂತರದ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು. ಹಿಂದೂ ಜಾಗರಣಾ ವೇದಿಕೆಯ ಪ್ರಾಂತ ಕಾರ್ಯಕಾರಿಣಿಯ ಪ್ರಮುಖ ಕುಕ್ಕೇರ ಅಜಿತ್ ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಮತಾಂತರದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಖಾಸಗಿ ಶಾಲೆಯ ಸಭಾಂಗಣದಲ್ಲಿ ನಡೆದ ಮತಾಂತರ ಪ್ರಯತ್ನದ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ವಿಶ್ವ ಹಿಂದೂ ಪರಿಷತ್, ಪರಿವಾರ ಸಂಘಟನೆಯ ಪ್ರಮುಖರು ಹಾಗೂ ಕಾರ್ಯಕರ್ತರು ಜಾಥಾದಲ್ಲಿ ಪಾಲ್ಗೊಂಡು ಮತಾಂತರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

Read More

ಮಡಿಕೇರಿ ಸೆ.4 NEWS DESK : ಹತ್ತು ಹಲವು ಸಂಕಷ್ಟಗಳ ನಡುವೆಯೂ ಪತ್ರಿಕೆಯನ್ನು ಮನೆ ಬಾಗಿಲಿಗೆ ವಿತರಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಾ ಬರುತ್ತಿರುವ ಪತ್ರಿಕಾ ವಿತರಕರೇ ಪತ್ರಿಕೆಗಳ ಜೀವನಾಡಿಯಾಗಿದ್ದಾರೆ ಎಂದು ಕೊಡಗು ಪತ್ರಿಕಾ ಭವನದ ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಪತ್ರಕರ್ತರ ಸಂಘ ಹಾಗೂ ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಕೊಡಗು ಘಟಕದ ಸಂಯಕ್ತಾಶ್ರಯದಲ್ಲಿ ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ನಡೆದ ‘ಪತ್ರಿಕಾ ವಿತರಕರ ದಿನಾಚರಣೆ’ಯಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು ಪತ್ರಿಕಾ ವಿತರಕರು ಪತ್ರಿಕೆ ಮತ್ತು ಓದುಗರ ನಡುವಿನ ಸಂಪರ್ಕ ಸೇತುವೆಯಾಗಿದ್ದು, ಇವರ ಸಂಕಷ್ಟಕ್ಕೆ ಸಂಘಟನಾತ್ಮಕವಾಗಿ ಸ್ಪಂದಿಸುವ ಅಗತ್ಯವಿದೆ ಎಂದರು. ಸಾಮಾಜಿಕ ಜಾಲತಾಣಗಳ ಮಾಧ್ಯಮಗಳ ಪ್ರಭಾವದ ನಡುವೆಯೂ ಇಂದು ಪತ್ರಿಕೆಗಳು ಜೀವಂತವಾಗಿವೆ. ಊರು, ಗ್ರಾಮಗಳ ಮೂಲೆ ಮೂಲೆಗೆ ಪತ್ರಿಕೆಗಳು ತಲುಪುತ್ತಿವೆ ಎಂದರೆ ಅದರ ಹಿಂದೆ ವಿತರಕರ ಅಪಾರ ಪರಿಶ್ರಮ ಅಡಗಿದೆ. ಪತ್ರಿಕೆಯ…

Read More

ಮಡಿಕೇರಿ ಸೆ.4 NEWS DESK : ಜಾಗತಿಕ ವಾಣಿಜ್ಯ ವ್ಯವಹಾರದಲ್ಲಿ ಕಾಫಿ ಬೇಡಿಕೆ ಕಡಿಮೆಯಾಗಿರುವುದರಿಂದ ಕಾಫಿ ಬೆಲೆಯಲ್ಲಿ ಭಾರೀ ಏರಿಳಿತವಾಗುತ್ತಿದೆ. ಇದರ ನಡುವೆಯೇ ಕೇಂದ್ರ ಸರಕಾರ ಜಾರಿಗೆ ತಂದಿರುವ ಹೊಸ ಜಿಎಸ್‍ಟಿ ನೀತಿಯಿಂದ ಕಾಫಿ ಉದ್ಯಮಕ್ಕೆ ಮತ್ತಷ್ಟು ಹೊಡೆತ ಬೀಳಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಾಫಿ ಬೆಲೆಯಲ್ಲಿನ ಅತಂತ್ರತೆ ಮತ್ತು ಅಮೆರಿಕ ದೇಶ ಭಾರತದ ಮೇಲೆ ವಿಧಿಸಿರುವ ಶೇ.50ರಷ್ಟು ರಫ್ತು ಸುಂಕದಿಂದ ಕಾಫಿ ಉದ್ಯಮ ಹಾಗೂ ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ ವಿತ್ತ ಸಚಿವರು ಘೋಷಣೆ ಮಾಡಿರುವ ಹೊಸ ಜಿಎಸ್‍ಟಿ ನೀತಿಯಲ್ಲಿ ಕೆಫೀನ್ ಹೊಂದಿರುವ ಪಾನೀಯ ಮೇಲೆ ಶೇ.40ರಷ್ಟು ತೆರಿಗೆ ವಿಧಿಸಿದ್ದು, ಇದು ದೇಶೀಯ ಉತ್ಪಾದನೆಯ ಬೇಡಿಕೆ ಮೇಲೆ ಹೊಡೆತ ಬೀಳಲಿದೆ ಎಂದು ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಕಾಫಿ ಬೆಳೆಗಾರರು, ಉದ್ಯಮಗಳು ಹಾಗೂ ರಪ್ತು ವಲಯ ತೀವ್ರ ಸ್ವರೂಪದ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿದ್ದು,…

Read More