ಮಡಿಕೇರಿ NEWS DESK ಸೆ.4 : ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್‌ಟಿ ವರ್ಗೀಕರಣವು ಸೇರಿದಂತೆ 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು, ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಸೆ.8ರಂದು ಗೋಣಿಕೊಪ್ಪದಲ್ಲಿ 12ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ನಿರ್ಮಿಸಿ ವಿವಿಧ ಸಂವಿಧಾನಿಕ ಬೇಡಿಕೆಗಳ ಕುರಿತು ಹಕ್ಕೊತ್ತಾಯ ಮಂಡಿಸಲಾಗುವುದು. ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ವಿವರಿಸಲಾಗುವುದು ಎಂದು ಹೇಳಿದ್ದಾರೆ. 2025-26 ರ ರಾಷ್ಟಿçÃಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ…
ಲೇಖಕ: admin
ಮಡಿಕೇರಿ ಸೆ.4 NEWS DESK : ಪ್ರಸಕ್ತ (2025-26) ಸಾಲಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಿಸಲಾಗಿದೆ. ಮಡಿಕೇರಿ ತಾಲ್ಲೂಕಿನ ಮೊಣಕಾಲ್ಮುರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಕೆ.ಆರ್.ಶಾಲಿನಿ, ಅರೆಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಎ.ಡಿ.ಮೀನಾಕ್ಷಿ, ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಾದ ಎಂ.ವನಜ, ಸೋಮವಾರಪೇಟೆ ತಾಲ್ಲೂಕಿನ ಬಡುಬನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಕೆ.ವಿ.ಜಾನ್ಸಿ, ಕೂಡಿಗೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಎಸ್.ಎ.ಯೋಗೇಶ್, ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು(ಪ್ರೌಢ ಶಾಲಾ ವಿಭಾಗ) ಮುಖ್ಯ ಶಿಕ್ಷಕರಾದ ಅಬ್ದುಲ್ ರಬ್ ಎಂ.ಎಸ್., ವಿರಾಜಪೇಟೆ ತಾಲ್ಲೂಕಿನ ಎಮ್ಮೆಗುಂಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಎ.ಕೆ.ಮಾಚಮ್ಮ, ಚೆನ್ನಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಸುಷಾ ಕೆ.ಕೆ., ದೇವಣಗೇರಿ ಬಿ.ಸಿ.ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಎಚ್.ಡಿ.ಲೋಕೇಶ್ ಅವರು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಗೋಣಿಕೊಪ್ಪ NEWS DESK ಸೆ.4 : ಕೊಡಗು ಜಿಲ್ಲಾ ಶಾಲಾ ಶಿಕ್ಷಣ, ಸಾಕ್ಷರತಾ ಇಲಾಖೆ ನೀಡುವ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ವಿರಾಜಪೇಟೆ ತಾಲೂಕು ದೇವಣಗೇರಿ ಬಿಸಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಲೋಕೇಶ್ ಹೆಚ್ .ಡಿ ಭಾಜನರಾಗಿದ್ದಾರೆ. ಲೋಕೇಶ್ ಅವರು ಬಿಸಿ ಪ್ರೌಢಶಾಲೆ ದೇವಣಗೇರಿಯಲ್ಲಿ ಕಳೆದ 18 ವರ್ಷಗಳಿಂದ ಆಂಗ್ಲಭಾಷೆ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಕಳೆದ 13 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಉನ್ನತೀಕರಣಕ್ಕೆ ಶ್ರಮಿಸುತ್ತಿರುವ ಇವರು 10ನೇ ತರಗತಿ ಪರೀಕ್ಷೆ ಪಲಿತಾಶವನ್ನು ಸುತತ ಎಂಟು ವರ್ಷಗಳ ಕಾಲ ನಿರಂತರವಾಗಿ ಶೇಕಡಾ ನೂರರಷ್ಟು ನೀಡಿದ ಹೆಗ್ಗಳಿಕೆ ಇದೆ. ಇವರೊಂದಿಗೆ, ವಿರಾಜಪೇಟೆ ತಾಲ್ಲೂಕಿನ ಎಮ್ಮೆಗುಂಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಎ.ಕೆ. ಮಾಚಮ್ಮ, ಚೆನ್ನಂಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸುಷಾ ಕೆ.ಕೆ.ಮತ್ತು ಮಡಿಕೇರಿ ತಾಲೂಕಿನ ಮೊಣಕಾಲ್ಮುರಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶಾಲಿನಿ, ಅರೆಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಮೀನಾಕ್ಷಿ…
ಕೋಲಾರ ಸೆ.4 NEWS DESK : ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಕೆ.ಸಿ ವ್ಯಾಲಿ 2ನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಚಾಲನೆ ನೀಡಿದರು. ಕೋಲಾರ ತಾಲ್ಲೂಕಿನ ಲಕ್ಷ್ಮಿಸಾಗರದಲ್ಲಿ ಪಂಪ್‌ಹೌಸ್ ಇದ್ದು, ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಯಿಂದ ಅವರು ವರ್ಚುವಲ್ ವೇದಿಕೆಯಲ್ಲಿ ಉದ್ಘಾಟನೆ ಮಾಡಲಿದ್ದಾರೆ. ನಂತರ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ. 250ಕ್ಕೂ ಹೆಚ್ಚು ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಪ್ರತಿನಿತ್ಯ ಹರಿಸಲಾಗುತ್ತಿದೆ ಎಂದು ಹೇಳಿದರು. ಕೆ.ಸಿ.ವ್ಯಾಲಿ ಎರಡನೇ ಹಂತದ ಯೋಜನೆಯಡಿ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸಲಾಗುವುದು. ಮೊದಲನೇ ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ – ಚಿಕ್ಕಬಳ್ಳಾಪುರ ಕೆರೆಗಳನ್ನು ಯಶಸ್ವಿಯಾಗಿ ತುಂಬಿಸಲಾಗಿದೆ. ಈ ನೀರನ್ನು ಕುಡಿಯಲು ಬಳಸುವುದಿಲ್ಲ.…
ಮಡಿಕೇರಿ ಸೆ.4 NEWS DESK : ಮದೆ ಸಹಕಾರ ಬ್ಯಾಂಕಿಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನಿಂದ ಪ್ರಶಸ್ತಿ ಲಭಿಸಿದೆ. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ವತಿಯಿಂದ 2023 -24 ನೇ ಸಾಲಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ಮದೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಬ್ಯಾಂಕಿನ ಬಹುಮಾನ ಯೋಜನೆ ಅಡಿಯಲ್ಲಿ 10,000 ನಗದು ಮತ್ತು ಪ್ರಶಸ್ತಿ ಪತ್ರವನ್ನು ನೀಡಲಾಗಿದೆ. ಈ ಬಹುಮಾನವನ್ನು ಕೊಡಗು ಜಿಲ್ಲಾ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು.
ಮಡಿಕೇರಿ ಸೆ.4 NEWS DESK : ವೈದ್ಯಕೀಯ ಸ್ನಾತಕೋತ್ತರ ನೀಟ್ ಪರೀಕ್ಷೆಯಲ್ಲಿ ಐಗೂರು ಗ್ರಾಮದ ಡಾ.ಅಮೂಲ್ಯ ಪೆಮ್ಮಯ್ಯ ಅಖಿಲ ಭಾರತ ಮಟ್ಟದಲ್ಲಿ 4419 ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಡಾ.ಅಮೂಲ್ಯ ಸೋಮವಾರಪೇಟೆ ತಾಲ್ಲೂಕಿನ ಐಗೂರು ಗ್ರಾಮದ ದೊಡ್ಡೆಗೌಡ ನ ಮನೆ ಕೆ.ವಿ.ಗೀತಾ ಹಾಗೂ ಡಿ.ಡಿ.ಪೆಮ್ಮಯ್ಯ ಅವರ ಪುತ್ರಿ.
ಸುಂಟಿಕೊಪ್ಪ ಸೆ.4 NEWS DESK : ಜನಸಾಮಾನ್ಯರು ಕೇಂದ್ರ ಸರಕಾರದ ಜನ ಸುರಕ್ಷಾ ಯೋಜನೆಗಳ ಗರಿಷ್ಠ ಪ್ರಯೋಜನಗಳನ್ನು ಪಡೆದುಕೊಳ್ಳುವಂತೆ ಸುಂಟಿಕೊಪ್ಪ ಕೆನಾರ ಬ್ಯಾಂಕಿನ ವ್ಯವಸ್ಥಾಪಕರಾದ ಅನಿಕೆತ್ ಕರೆ ನೀಡಿದರು. ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಸಹಯೋಗದೊಂದಿಗೆ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಗ್ರಾಮದಲ್ಲಿ, ಕೇಂದ್ರ ಸರಕಾರದ ಆದೇಶದಂತೆ ಆಯಾ ಗ್ರಾಮದ ಬ್ಶಾಂಕ್ ಶಾಖೆ ಮುಖಾಂತರ ಪ್ರತಿ ವರ್ಷವೂ ನಡೆಸುವ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮವನ್ನು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು. ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು ವಾರ್ಷಿಕ 20ರೂ ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 2 ಲಕ್ಷ ರೂಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು.…
ಬೆಂಗಳೂರು ಸೆ.4 NEWS DESK : ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಅವರ ನೇತೃತ್ವದಲ್ಲಿ ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ನಾಡ ಹಬ್ಬ ದಸರಾಗೆ ಆಹ್ವಾನಿಸಿದರು. ಈ ಸಂದರ್ಭ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಉಪಸ್ಥಿತರಿದ್ದರು.
ಸೋಮವಾರಪೇಟೆ ಸೆ.4 NEWS DESK : ಕೃಷಿ ಭೂಮಿಯನ್ನು ಮೀಸಲು ಅರಣ್ಯವನ್ನಾಗಿ ಪರಿವರ್ತನೆ ಮಾಡಿದರೆ ಮನುಷ್ಯ ತಿನ್ನಬೇಕಾದ ಆಹಾರ ಬೆಳೆಗಳನ್ನು ಎಲ್ಲಿ ಬೆಳೆಯುವುದು ಎಂದು ರೈತ ಹೋರಾಟ ಸಮಿತಿಯ ಅಧ್ಯಕ್ಷ ಕೆ.ಬಿ.ಸುರೇಶ್ ಪ್ರಶ್ನಿಸಿದರು. ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಗ್ರಾಮೀಣ ಭಾಗದ ಕೆಲ ರೈತರ ಪೈಸಾರಿ ಕೃಷಿ ಭೂಮಿಯ ಮ್ಯೂಟೆಷನ್ ಕಾಫಿ(ಎಂ.ಸಿ.)ಯಲ್ಲಿ ಸಿ ಆ್ಯಂಡ್ ಡಿ ಎಂದು ದಾಖಲಾಗುತ್ತಿತ್ತು ಕೃಷಿಕರು ಆತಂಕಗೊಂಡಿದ್ದಾರೆ. ಮ್ಯೂಟೆಷನ್ ಕಾಫಿಯಲ್ಲಿ ಪೈಸಾರಿ ಜಾಗ, ಸಿ ಆ್ಯಂಡ್ ಡಿ ಎಂದು ಪರಿವರ್ತನೆಯಾದರೆ, ಕೃಷಿಕರು ಯಾವುದೇ ಭೂಮಿ ದಾಖಲಾತಿಯನ್ನು ಪಡೆಯಲು ಸಾಧ್ಯವಿಲ್ಲ. ಇದರಿಂದ ಕೃಷಿಕರು ಆತಂಕಗೊಂಡಿದ್ದಾರೆ ಎಂದು ಹೇಳಿದರು. ಸೋಮವಾರಪೇಟೆ ತಾಲ್ಲೂಕಿನ ನೇಗಳ್ಳೆ ಗ್ರಾಮದಲ್ಲಿ ಜಾಗವನ್ನು ಸಿ ಆ್ಯಂಡ್ ಡಿ ಎಂದು ಅರಣ್ಯ ಇಲಾಖೆಯವರು ಮೇಲಾಧಿಕಾರಿಗಳಿಗೆ ವರದಿ ನೀಡಿರುವ ಬಗ್ಗೆ ಮಾಹಿತಿ ಇದ್ದು, ಕೃಷಿಕರಿಗೆ ಯಾವುದೇ ಮಾಹಿತಿ ನೀಡದೆ, ಕೃಷಿಕರ ಆಹವಾಲು ಸ್ವೀಕರಿಸದೆ, ಏಕಾಏಕಿ ಸಿ ಆ್ಯಂಡ್ ಡಿ ಭೂಮಿ ಎಂದು ಗುರುತು ಮಾಡಿರುವುದು ನಿಯಮ…
ಮಡಿಕೇರಿ ಸೆ.4 NEWS DESK : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 24.70 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.89 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2656.81 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2642.19 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 38.95 ಮಿ.ಮೀ. ಕಳೆದ ವರ್ಷ ಇದೇ ದಿನ 1.18 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 4006.73 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3799.21 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 18.75 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2384.80 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2380.40 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 26.10 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ…






