ಮಡಿಕೇರಿ ಸೆ.5 NEWS DESK : ಕೊಡಗು ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಶೀಘ್ರದಲ್ಲಿಯೇ ಮಂಡಿ ಸಮಸ್ಯೆಯ ಪರಿಹಾರಕ್ಕಾಗಿ ರೋಬೋಟಿಕ್ ಸಜ೯ರಿ ಸೌಲಭ್ಯ ದೊರಕಲಿದೆ. ಇದಕ್ಕಾಗಿ 3 ಕೋಟಿ ರು. ವೆಚ್ಚದ ರೋಬೋಟಿಕ್ ಉಪಕರಣಕ್ಕಾಗಿ ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಮತ್ತು ನಿದ೯ಶಕ ಡಾ.ಎ.ಜಿ. ಲೋಕೇಶ್ ತಿಳಿಸಿದ್ದಾರೆ. ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕನಾ೯ಟಕ ಆರ್ಥೋಪೆಡಿಕ್ ಅಸೋಸಿಯೇಷನ್’ ಹಾಗೂ ಸಂಸ್ಥೆಯ ಕೀಲು ಮತ್ತು ಮೂಳೆ ವಿಭಾಗ’ದ ವತಿಯಿಂದ ಇದೇ ಮೊದಲ ಬಾರಿಗೆ ಆಯೋಜಿಸಲಾಗಿದ್ದ ಮಧ್ಯವಾರ್ಷಿಕ ರಾಜ್ಯಮಟ್ಟದ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಈ ಬಾರಿಯ ಸಮ್ಮೇಳನವು ಮಂಡಿ ಚಿಪ್ಪು ಮತ್ತು ಕೀಲು ಸಮಸ್ಯೆಗಳ ಸಂಪೂರ್ಣ ಅಧ್ಯಯನ ಎಂಬ ಶೀರ್ಷಿಕೆಯಡಿ ನಡೆಯಲಿದ್ದು, ಮಂಡಿ ಕೀಲು ನುಣುಪು ಸಮಸ್ಯೆಗಳು, ದಿನನಿತ್ಯದ ನಡಿಗೆ ಹಾಗೂ ಕಾರ್ಯಚಟುವಟಿಕೆಗಳಲ್ಲಿ ಎದುರಾಗುವ ತೊಂದರೆಗಳು, ಕ್ರೀಡಾಪಟುಗಳ ಮಂಡಿ ಗಾಯಗಳು ಸುಧಾರಿತ ಕೀಲು ಬದಲಿ ಶಸ್ತ್ರಚಿಕಿತ್ಸೆಗಳು ಕೀಲು ತಪಾಸಣೆ ಸೇರಿದಂತೆ ನಾನಾ ಜಟಿಲ ಸಮಸ್ಯೆಗಳ…
ಲೇಖಕ: admin
ಮಡಿಕೇರಿ, NEWS DESK ಸೆ.5: ಬೆಂಗಳೂರಿನಿಂದ ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟುಹೋದ ಘಟನೆ ಮೈಸೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಹುಣಸೂರು ತಾಲೂಕಿನ ರಂಗಯ್ಯನಕೊಪ್ಪಲು ಬಳಿ ಶನಿವಾರ ಸಂಜೆ ನಡೆದಿದೆ. ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷಿತವಾಗಿ ಕೆಳಗಿಳಿದಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯ ಸಂಭವಿಸಿಲ್ಲ. ಆದರೆ ಕೆಲ ಪ್ರಯಾಣಿಕರ ಲಗ್ಗೇಜ್ ಬ್ಯಾಗ್‌ಗಳನ್ನು ಬಸ್‌ನಿಂದ ಹೊರತೆಗೆಯಲು ಸಾಧ್ಯವಾಗದೆ, ಅವುಗಳಲ್ಲಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಘಟನೆ ತಿಳಿಯುತ್ತಿದ್ದಂತೆ ಬಿಳಿಕೆರೆ ಠಾಣೆಯ ಇನ್ಸ್‌ಪೆಕ್ಟರ್ ಪುನೀತ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವಾಹನಗಳನ್ನು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅನುವು ಮಾಡಿಕೊಟ್ಟು, ಸಂಚಾರಕ್ಕೆ ತಾತ್ಕಾಲಿಕ ವ್ಯವಸ್ಥೆ ಮಾಡಲಾಯಿತು. ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಕೆಲಹೊತ್ತು ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಇದರಿಂದ ಸಂಭವಿಸಬಹುದಾಗಿದ್ದ ಹೆಚ್ಚಿನ ಅನಾಹುತವನ್ನು ತಪ್ಪಿಸಲಾಯಿತು. ಬಸ್‌ನಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದು…
ಮಡಿಕೇರಿ ಸೆ.5 NEWS DESK : ಕೊಡಗು ಜಿಲ್ಲೆಯ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಶಾಸಕರ ಶಾಸಕ ಪ್ರದೇಶಾಭಿವೃದ್ಧಿ ಅನುದಾನ ಮತ್ತು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು ಕೈಜೋಡಿಸಿ ತಂತ್ರಜ್ಞಾನಾಧಾರಿತ ಶಿಕ್ಷಣ ಒದಗಿಸಲು ಯೋಜನೆ ರೂಪಿಸಲಾಗುವುದು ಎಂದು ಕೃಷಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರಸ್ವಾಮಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ಸಂಯುಕ್ತಾಶ್ರಯದಲ್ಲಿ ನಗರದ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಜಿಲ್ಲೆಯ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಟ್ಯಾಬ್ ನೀಡಲು ವೆಚ್ಚವಾಗಲಿದ್ದು, ಶಾಸಕರು ತಲಾ ರೂ.25 ಲಕ್ಷ ಹಾಗೂ ಖಾಸಗಿ ಸಂಸ್ಥೆಗಳ ಸಿಎಸ್‍ಆರ್ ನಿಧಿಯಿಂದ ಉಳಿದ ಮೊತ್ತ ಭರಿಸಿ ಯೋಜನೆಯನ್ನು ಶೇ.100 ರಷ್ಟು ಪೂರ್ಣಗೊಳಿಸಲು ಯೋಜನೆ ರೂಪಿಸಲು ಚಿಂತಿಸುವಂತೆ ಸಚಿವರು ಸಲಹೆ ಮಾಡಿದರು.…
ಮಡಿಕೇರಿ ಸೆ.5 NEWS DESK : ಜನರ ಮನೆ ಬಾಗಿಲಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವುದರ ಜೊತೆಗೆ, ಸಾರ್ವಜನಿಕರ ಕುಂದುಕೊರತೆ ಆಲಿಸಿ ಇತ್ಯರ್ಥಪಡಿಸುವಲ್ಲಿ ಸರ್ಕಾರ ಪ್ರಜಾಸೇವಾ ಅಭಿಯಾನ/ಆಂದೋಲನ ಆರಂಬೀಸಿದ್ದು, ಈ ಅವಕಾಶವನ್ನು ಸಾರ್ವಜನಿಕರು ಬಳಸಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ‘ಪ್ರಜಾಸೇವಾ ಆಂದೋಲನ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಜಾಸೇವಾ ಇಲಾಖೆಗೆ ಶನಿವಾರ ವಿಜಯನಗರದ ಕೂಡ್ಲಗಿಯಲ್ಲಿ ಚಾಲನೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ವಿವಿಧ ಜಿಲ್ಲೆಗಳಲ್ಲಿಯೂ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ ನೀಡಲಾಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು. ಮೊದಲ ಮತ್ತು ಮೂರನೇ ಶನಿವಾರದಂದು, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ, ಎರಡನೇ ಮತ್ತು ನಾಲ್ಕನೇ ಶನಿವಾರದಂದು ಶಾಸಕರ ನೇತೃತ್ವದಲ್ಲಿ ಆಯಾಯ ತಾಲ್ಲೂಕು ಅಥವಾ ವಿಧಾನಸಭಾ ಕ್ಷೇತ್ರವಾರು ಪ್ರಜಾಸೇವಾ ಅಭಿಯಾನ ನಡೆಯಲಿದೆ.…
ಮಡಿಕೇರಿ, NEWS DESK ಸೆ.5 : ಮಡಿಕೇರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹತ್ತು ದೇವಾಲಯಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಶಾಸಕರ ಅನುದಾನದಡಿ ಶಾಸಕ ಡಾ.ಮಂತರ್ ಗೌಡ ಅವರು ತಲಾ ರೂ.5 ಲಕ್ಷದಂತೆ ಅನುದಾನ ನೀಡಿದ್ದಾರೆ. ಎರಡು ದೇವಾಲಯಗಳಲ್ಲಿ ಕಾಮಗಾರಿ ಆರಂಭಕ್ಕೆ ಪೂಜಾ ಕಾರ್ಯಕ್ರಮ ನಡೆಯಿತು. ಶ್ರೀ ಚೌಡೇಶ್ವರಿ ದೇವಾಲಯ ಹಾಗೂ ಶ್ರೀ ಕೋದಂಡರಾಮ ದೇವಾಲಯದಲ್ಲಿ ಶಾಸಕ ಡಾ.ಮಂತರ್ ಗೌಡ ಅವರು ವಿಶೇಷ ಪೂಜೆ ಸಲ್ಲಿಸಿದರು. ಶಾಸಕರ ಅನುದಾನದಡಿ ಕ್ಷೇತ್ರದ ಒಟ್ಟು ಹತ್ತು ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ಒದಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬಾಕಿ ಇರುವ ಎಂಟು ದೇವಾಲಯಗಳಿಗೂ ಭೇಟಿ ನೀಡಿ ಕಾಮಗಾರಿಗಾಗಿ ಪೂಜೆಯಲ್ಲಿ ಪಾಲ್ಗೊಳ್ಳುವುದಾಗಿ ಶಾಸಕರು ತಿಳಿಸಿದರು. ದೇವಾಲಯ ಸಮಿತಿಯ ಪ್ರಮುಖರು, ಮೂಡ ಹಾಗೂ ನಗರಸಭೆಯ ಪ್ರತಿನಿಧಿಗಳು, ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಮತ್ತಿತರರು ಹಾಜರಿದ್ದರು.
ಮಡಿಕೇರಿ, NEWS DESK ಸೆ. 5: 1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ, ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ ಸೆ. 7ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡವ ಮಕ್ಕಡ ಕೂಟ, ಅಜ್ಜಮಾಡ ಒಕ್ಕ (ಕುಟುಂಬಸ್ಥರು) ಹಾಗೂ ಸ್ವಾ.ಲೀ. ಅಜ್ಜಮಾಡ ದೇವಯ್ಯ ಟ್ರಸ್ಟ್‌ನ ಸಹಯೋಗದಲ್ಲಿ ಬೆಳಗ್ಗೆ 11 ಗಂಟೆಗೆ ಸ್ವಾ.ಲೀ. ಅಜ್ಜಮಾಡ ಬಿ. ದೇವಯ್ಯ ವೃತ್ತದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಪುಣ್ಯಸ್ಮರಣೆಯನ್ನು ಆಚರಿಸಲಾಗುವುದು ಎಂದು ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ,…
ಮಡಿಕೇರಿ, NEWS DESK ಸೆ.5 : ಕೊಡವ ಕೂಟಾಳಿಯಡ ಕೂಟ ಸಂಘಟನೆಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನೂತನ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆಯು ಶನಿವಾರ ಪೊನ್ನಂಪೇಟೆ ಜೋಡುಬಿಟ್ಟಿಯಲ್ಲಿರುವ ಇಗ್ಗುತ್ತಪ್ಪ ಕೊಡವ ಸಂಘದ ಸಭಾಂಗಣದಲ್ಲಿ ಸಂಘಟನೆಯ ಅಧ್ಯಕ್ಷರಾಗಿದ್ದ ಚೊಟ್ಟಂಡ ಪ್ರಭು ಸೋಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಘಟನೆಯ ನೂತನ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಉಪಾಧ್ಯಕ್ಷರಾಗಿ ಆಚೆಯಡ ಗಗನ್ ಗಣಪತಿ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಮುತ್ತಣ್ಣ ಹಾಗೂ ಖಜಾಂಚಿಯಾಗಿ ಪಾಂಡಿರ ದಿವ್ಯಾ ಉತ್ತಪ್ಪ, ನಿರ್ದೇಶಕರುಗಳಾಗಿ ಅಜ್ಜಮಾಡ ಸಾವಿತ್ರಿ, ಚೆಕ್ಕೆರ ಧನ್ಯ ಅಶ್ವಥ್ ಹಾಗೂ ಕಾಡ್ಯಮಾಡ ಸುಮನ್ ಅವರು ಆಯ್ಕೆಯಾದರು. ನೂತನ ಅಧ್ಯಕ್ಷೆ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ ಅವರು ಮಾತನಾಡಿ, ಕಳೆದ ಆರು ವರ್ಷಗಳಿಂದ ಸಂಘಟನೆಯು ಕೊಡವ ಜನಾಂಗದ ಹಿತದೃಷ್ಟಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿಯೂ ಸಂಘಟನೆಯ ಎಲ್ಲಾ ಸದಸ್ಯರ ಸಲಹೆ ಹಾಗೂ ಸಹಕಾರದೊಂದಿಗೆ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಾರ್ಯರೂಪಕ್ಕೆ ತರಲಾಗುವುದು ಎಂದು ತಿಳಿಸಿದರು.…
ಮಡಿಕೇರಿ, NEWS DESK ಸೆ.5 : ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಪ್ಲೇಟ್, ಪೇಪರ್ ಕಪ್, ಆಹಾರ ಕಂಟೈನರ್ ಸೇರಿದಂತೆ ವಿವಿಧ ವಸ್ತುಗಳ ಬಳಕೆಗೆ ನಿಷೇಧ ಹೇರಿರುವ ನಗರಸಭೆಯ ನಿರ್ಧಾರಕ್ಕೆ ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ನಿರ್ದೇಶಕ ಎಂ.ಧನAಜಯ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಡಿಕೇರಿ ಪ್ರವಾಸೋದ್ಯಮದ ಪ್ರಮುಖ ಕೇಂದ್ರವಾಗಿದ್ದು, ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ನಗರಕ್ಕೆ ಆಗಮಿಸುತ್ತಿದ್ದಾರೆ. ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಅದಕ್ಕೆ ಪೂರಕವಾಗಿ ಮೂಲಸೌಕರ್ಯ ಹಾಗೂ ಸಮರ್ಪಕ ತ್ಯಾಜ್ಯ ನಿರ್ವಹಣಾ ವ್ಯವಸ್ಥೆ ಕಲ್ಪಿಸಬೇಕಾದ ನಗರಸಭೆ ತ್ಯಾಜ್ಯ ನಿರ್ವಹಣೆಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬದಲು ಏಕಾಏಕಿ ವಿವಿಧ ವಸ್ತುಗಳ ಬಳಕೆಯನ್ನು ನಿಷೇಧಿಸುವ ನಿರ್ಧಾರ ಕೈಗೊಂಡಿರುವುದು ಅವೈಜ್ಞಾನಿಕ ಕ್ರಮವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದ ಯಾವುದೇ ಊರಿನಲ್ಲಿ ಅಡಿಕೆ ತಟ್ಟೆಗಳ ಬಳಕೆಗೆ ಇಂತಹ ನಿಷೇಧ ಹೇರಿರುವುದು ಕಂಡುಬರುವುದಿಲ್ಲ. ಪರಿಸರ ಸ್ನೇಹಿ ಪರ್ಯಾಯ ವಸ್ತುವಾಗಿರುವ ಅಡಿಕೆ ಹಾಳೆಯಿಂದ ತಯಾರಿಸಲಾದ ತಟ್ಟೆಗಳನ್ನು ನಿಷೇಧಿಸುವುದು ಸಮಂಜಸವಲ್ಲ…
ಕಕ್ಕಬೆ, NEWS DESK ಸೆ.05: ಕೊಡಗಿನ ದೇವನೆಲೆಗಳು, ಐನ್‌ಮನೆಗಳು, ಸಮಾಜಗಳು ಹಾಗೂ ವಿದ್ಯಾಸಂಸ್ಥೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕು. ಸಾಂಸ್ಕೃತಿಕವಾದ ಬೆಳವಣಿಗೆಯು ಸಾಹಿತ್ಯಕ್ಕೆ ಒತ್ತು ನೀಡುತ್ತದೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಕೊಡವ ಪುಸ್ತಕ ಪತ್ತಾಯ ಇದಕ್ಕೆ ಪೂರಕವಾಗಿ ಕೆಲಸ ಮಾಡುತ್ತಿದೆ. ಇದರಿಂದ ಆಯಾಯ ದೇವನೆಲೆಗಳ ಪೌರಾಣಿಕ ಹಿನ್ನೆಲೆ, ಚಾರಿತ್ರಿಕ ಘಟನಾವಳಿಗಳು, ಮಹತ್ವ-ಮಹಿಮೆಯನ್ನು ತಿಳಿದುಕೊಳ್ಳಲು ಅನುಕೂಲವಾಗುತ್ತದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಕಕ್ಕಬೆಯಲ್ಲಿರುವ ಪಾಡಿ ಶ್ರೀ ಇಗ್ಗುತಪ್ಪ ದೇವಸ್ಥಾನದಲ್ಲಿ ಅಕಾಡೆಮಿಯ 20ನೇ ಕೊಡವ ಪುಸ್ತಕ ಪತ್ತಾಯ ಅನಾವರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊಡಗಿನ ಊರೂರುಗಳಲ್ಲಿರುವ ಪುರಾತನ ದೇವನೆಲೆಗಳಲ್ಲಿ ಪುಸ್ತಕ ಪತ್ತಾಯ ಸ್ಥಾಪಿಸುವುದರಿಂದ ಅಲ್ಲಿಗೆ ಬರುವ ಭಕ್ತರಿಗೆ ಆಯಾಯ ದೇವಸ್ಥಾನಗಳು ಹಾಗೂ ಆ ಭಾಗದ ಊರು-ನಾಡುಗಳ ವಿಚಾರವಾಗಿ ಪುಸ್ತಕಗಳನ್ನು ಓದಿ ಅರಿತುಕೊಳ್ಳಲು ಅನುಕೂಲವಾಗುತ್ತದೆ ಎಂದರು. ದೇವಸ್ಥಾನಕ್ಕೆ ಬರುವ ಭಕ್ತರು ಬಿಡುವಿನ ವೇಳೆ ಇನ್ನಿತರೆ ಮಾತನಾಡುವುದರ ಬದಲು ಆಯಾಯ ಕ್ಷೇತ್ರದ ಮಹತ್ವ-ಮಹಿಮೆಯ ಬಗ್ಗೆ…
ಮಾದಾಪುರ, NEWS DESK ಸೆ. 5: ಡಾರ್ಜಿಲಿಂಗ್ ಗೂರ್ಖಾಲ್ಯಾಂಡ್, ವಿಶಾಖಪಟ್ಟಣಂ ಹಾಗೂ ಗೋದಾವರಿ ಗುಡ್ಡಗಾಡು ಪ್ರಾಂತ್ಯಗಳ ಮಾದರಿಯಲ್ಲಿ ಸಂವಿಧಾನದ 5ನೇ ಪರಿಚ್ಛೇದದ ಅಡಿಯಲ್ಲಿ ಕೊಡವಲ್ಯಾಂಡ್‌ಗೆ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡುವುದೊಂದೇ ಆದಿಮಸಂಜಾತ ಕೊಡವರು ಎದುರಿಸುತ್ತಿರುವ ಭೌಗೋಳಿಕ-ರಾಜಕೀಯ ದುರಂತಕ್ಕೆ ಪರಿಹಾರ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದಿಸಿದರು. ಮಾದಾಪುರದಲ್ಲಿ ಶನಿವಾರ ಆಯೋಜಿಸಿದ್ದ ಸಿಎನ್‌ಸಿಯ 2ನೇ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆದಿಮಸಂಜಾತ ಕೊಡವರನ್ನು ಸಂವಿಧಾನದ ಅಡಿಯಲ್ಲಿ ವಿಶಿಷ್ಟ ಪ್ರಕೃತಿ ಆರಾಧಕ ಧಾರ್ಮಿಕ ಸಮುದಾಯವೆಂದು ಗುರುತಿಸಿ, ಕೊಡವಲ್ಯಾಂಡ್‌ಗೆ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಹಾಗೂ ಸ್ವಯಂ-ಆಡಳಿತದ ಭದ್ರತೆ ನೀಡಿದರೆ ಮಾತ್ರ ಕೊಡವರ ಜಮೀನು, ಜಲ, ಸಂಸ್ಕೃತಿ, ಪರಂಪರೆ, ಪರಿಸರ ಮತ್ತು ಜೀವವೈವಿಧ್ಯವನ್ನು ರಕ್ಷಿಸಲು ಸಾಧ್ಯ ಎಂದರು. ಕೊಡವರ ಪವಿತ್ರ ಕ್ಷೇತ್ರಗಳಾದ ಮಂದ್, ವಿಶಿಷ್ಟ ಕೊಡವ ವಂಶಾವಳಿ ಹಾಗೂ ಸಾಂಪ್ರದಾಯಿಕ ತಾಯ್ನಾಡಿನ ಇತಿಹಾಸವನ್ನು ಮುನ್ನೆಲೆಗೆ ತರಬೇಕು. 2027ರ ರಾಷ್ಟ್ರೀಯ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ಪ್ರತ್ಯೇಕವಾಗಿ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದರು. ಸಿಎನ್‌ಸಿ ವತಿಯಿಂದ ಕೊಡವ ಪ್ರಾಂತದಾದ್ಯಂತ…






