ಲೇಖಕ: admin

ಮಡಿಕೇರಿ NEWS DESK ಸೆ.21 : ಕೊಡವರು ಸಾಮೂಹಿಕವಾಗಿ ಸಾಂವಿಧಾನಿಕ ಮಾನ್ಯತೆಯನ್ನು ಪಡೆಯುವಾಗ, ನಮ್ಮ ಪ್ರಾಚೀನತೆಯನ್ನು ಜನಾಂಗೀಯ ಮತ್ತು ಮಾನವಶಾಸ್ತ್ರೀಯ ಗುಣಲಕ್ಷಣಗಳ ಮೂಲಕ ದೃಢೀಕರಿಸಬೇಕು, ಅದು ಅಂತಿಮವಾಗಿ ನಮ್ಮ ಹಕ್ಕನ್ನು ಗಟ್ಟಿಗೊಳಿಸುತ್ತದೆ. ಈ ಕಾರಣಕ್ಕಾಗಿ ಸರ್ವ ಕೊಡವರು ಜಾತಿ ಜನಗಣತಿಯ ಸಂದರ್ಭ ‘ಕೊಡವ’ ಎಂದು ನಮೂದಿಸುವಂತೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಿಂದಿನ ಯುಗದಲ್ಲಿ ನಮ್ಮ ಪೂರ್ವಜರು ಬರೆದ ಕೊಡವ ಜನಾಂಗೀಯ ತತ್ವಗಳ ಪ್ರಕಾರ, ಕೊಡವರು ಒಂದು ಜಾತಿಯಲ್ಲ, ಕೊಡವರು ಚತುರ್ಭುಜ ಜಾತಿ ವ್ಯವಸ್ಥೆಯಡಿಯಲ್ಲಿ ಬರುವುದಿಲ್ಲ. ಕೊಡವರು ಒಂದೇ ಜನಾಂಗ, ಏಕ ಜನಾಂಗೀಯ ಸಮುದಾಯ ಎಂದು ಉಲ್ಲೇಖಿಸಿದ್ದಾರೆ. ಕೊಡವರ ಕುರಿತಾದ ಸ್ವಾತಂತ್ರö್ಯಪೂರ್ವದ ದಾಖಲೆಗಳು ಹೆಚ್ಚಿನ ಮೌಲ್ಯವನ್ನು ಹೊಂದಿವೆ ಎಂದು ತಿಳಿಸಿದ್ದಾರೆ. ಕೊಡವ ಜನಾಂಗೀಯ ಸಮುದಾಯ ಆನಿಮಿಸ್ಟಿಕ್ ನಂಬಿಕೆಯುಳ್ಳವರಾಗಿದ್ದಾರೆ. ಪೂರ್ವಜರನ್ನು (ಗುರು-ಕಾರೋಣ), ಅಗಲಿದ ಆತ್ಮಗಳು, ಸಮಾಧಿ ಸ್ಥಳಗಳು, ಯುದ್ಧಭೂಮಿಗಳು, ನರಮೇಧದ ಸ್ಮಾರಕಗಳು, ಯುದ್ಧ ಸ್ಮಾರಕಗಳು, ಪರ್ವತ ದೇವತೆ, ಪವಿತ್ರ ಮಂದ್(ಪವಿತ್ರ…

Read More

ಮಡಿಕೇರಿ NEWS DESK ಸೆ.20 : ಮಾನಸಿಕ ಅಸ್ವಸ್ಥರ ಆರೈಕೆಗಾಗಿ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರವೊಂದು ಸರಕಾರದ ನಿಯಮಗಳನ್ನು ಉಲ್ಲಂಘಸಿ ಅನುದಾನವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ನಗರಸಭಾ ಸದಸ್ಯ ಹಾಗೂ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಉಪಾಧ್ಯಕ್ಷ ಎಂ.ಕೆ.ಮನ್ಸೂರ್ ಆಲಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಸರಕಾರದ ಯೋಜನೆಯ ಪ್ರಕಾರ ನಿಗಧಿತ ಮನೋರೋಗಿಗಳು ಹಾಗೂ ಅಗತ್ಯ ಸಿಬ್ಬಂದಿ ವರ್ಗ ಸುಸಜ್ಜಿತ ಕಟ್ಟಡದೊಂದಿಗೆ ಕಾರ್ಯನಿರ್ವಹಿಸಬೇಕಾಗುತ್ತದೆ. ವಿಪರ್ಯಾಸವೆಂದರೆ ಇಲ್ಲಿ ಯಾವುದೇ ವೃತ್ತಿಪರ ಸಿಬ್ಬಂದಿಗಳಿಲ್ಲ, ಒಬ್ಬ ಅಡುಗೆ ಸಹಾಯಕ ಹಾಗೂ ಕೆಲವೇ ಮಂದಿ ಬುದ್ದಿಮಾಂದ್ಯ ವ್ಯಕ್ತಿಗಳ ಹಾಜರಾತಿಯೊಂದಿಗೆ ಕೇಂದ್ರವನ್ನು ನಡೆಸುತ್ತಾ ಮಾನಸಿಕ ಆರೋಗ್ಯ ಕಾಯಿದೆ ಮತ್ತು ಮಾನವ ಹಕ್ಕುಗಳನ್ನು ಉಲ್ಲಂಘನೆ ಮಾಡಲಾಗುತ್ತಿದೆ. ಈ ಆರೈಕೆ ಕೇಂದ್ರವನ್ನು ನಿರ್ವಹಿಸಲು ಸರಕಾರದಿಂದ ವಾರ್ಷಿಕವಾಗಿ ಲಕ್ಷಾಂತರ ರೂ. ಹಣ ಬರುತ್ತಿದೆ. ಕೇಂದ್ರದ ಉಸ್ತುವಾರಿ ವಹಿಸಿರುವ ವ್ಯಕ್ತಿ ತಿಂಗಳಿಗೆ ಸುಮಾರು 20 ರಿಂದ 30 ಫಲಾನುಭವಿಗಳ ಹಾಜರಾತಿಯನ್ನು ತೋರಿಸಿ ಹಣ ದುರುಪಯೋಗ ಪಡಿಸುತ್ತಿರುವುದು ಕಂಡು ಬಂದಿದೆ. ನಾಲ್ವರು ವೃತ್ತಿಪರ ಸಿಬ್ಬಂದಿಗಳು…

Read More

ಮಡಿಕೇರಿ NEWS DESK ಸೆ.20 : ವಿರಾಜಪೇಟೆಯ ಗಾಂಧಿನಗರದಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದು ಬ್ಯೂಟಿ ಪಾರ್ಲರ್ ಮತ್ತು ಸ್ಪಾ ಹೆಸರಿನಲ್ಲಿ ಮಹಿಳೆಯರನ್ನು ವೇಶ್ಯಾವಾಟಿಕೆಗೆ ಬಳಕೆ ಮಾಡುತ್ತಿದ್ದ ಆರೋಪದಡಿ ವಿರಾಜಪೇಟೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಕೇರಳ ಕಣ್ಣೂರು ಜಿಲ್ಲೆಯ ಪಿ.ಪಿ.ಪ್ರದೀಪನ್(48), ಕಲೇಶ್ ಕುಮಾರ್(45), ಶಾಜಿ(38) ಹಾಗೂ ವಿರಾಜಪೇಟೆ ಅಮ್ಮತ್ತಿ ನಿವಾಸಿ ಪೊನ್ನಣ್ಣ(48) ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ದಾಳಿ ವೇಳೆ ಸ್ಥಳದಲ್ಲಿದ್ದ ನಾಲ್ವರು ಮಹಿಳೆಯರನ್ನು ರಕ್ಷಿಸಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದಲ್ಲಿ ಶಾಮೀಲಾಗಿರುವ ಇತರರ ಬಂಧನಕ್ಕೆ ಬಲೆ ಬೀಸಲಾಗಿದೆ. ಆರೋಪಿಗಳ ವಿರುದ್ದ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿರಾಜಪೇಟೆ ಡಿವೈಎಸ್‌ಪಿ ಮಹೇಶ್ ಕುಮಾರ್, ವಿರಾಜಪೇಟೆ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಠಾಣಾಧಿಕಾರಿ ಎನ್.ಜೆ.ಲತಾ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.

Read More

ಮಡಿಕೇರಿ NEWS DESK ಸೆ.20 : ರಾಜ್ಯ ಸರಕಾರ ನಡೆಸುತ್ತಿರುವ ಜಾತಿ ಜನಗಣತಿಯ ಸಂದರ್ಭ ಜಿಲ್ಲೆಯ ಮುಸಲ್ಮಾನರು ಯಾವುದೇ ಗೊಂದಲಕ್ಕೊಳಗಾಗದೆ ಧರ್ಮದ ಕಾಲಂನಲ್ಲಿ ‘ಇಸ್ಲಾಂ’, ಜಾತಿ ಕಾಲಂನಲ್ಲಿ “ಮುಸ್ಲಿಂ”, ಉಪಜಾತಿ ಕಾಲಂನಲ್ಲಿ ತಮ್ಮ ಉಪಜಾತಿ ಮತ್ತು ಭಾಷೆಯ ಕಾಲಂನಲ್ಲಿ ನೀವಾಡುವ ಭಾಷೆಯನ್ನು ನಮೂದಿಸುವಂತೆ ಕೊಡಗು ಜಿಲ್ಲಾ ಮುಸ್ಲಿಂ ಯೂನಿಟಿ ಅಧ್ಯಕ್ಷ ಕೆ.ಎ.ಯಾಕುಬ್ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯೊಂದಿಗೆ ಜನಗಣತಿಗೆ ರಾಜ್ಯ ಸರಕಾರ ಈಗಾಗಲೇ ಎಲ್ಲಾ ಪೂರ್ವ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಮುಸ್ಲಿಂ ಸಮುದಾಯದ 124 ಉಪಜಾತಿಗಳ ಪಟ್ಟಿಯನ್ನು ಹಿಂದುಳಿದ ವರ್ಗಗಳ ಆಯೋಗ ಬಿಡುಗಡೆ ಮಾಡಿದೆ. ಇದರಲ್ಲಿರುವ ಯಾವುದೇ ಉಪಜಾತಿಗೆ ಸೇರಿದವರಾಗಿದ್ದಲ್ಲಿ ಆಯಾ ಉಪಜಾತಿಯನ್ನು ನಮೂದಿಸಬಹುದೆಂದು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮಿಕ್ಷೆ-2025 ಕುಟುಂಬ ಅನುಸೂಚಿಗಾಗಿ ತಯಾರಿಸಲಾದ ಮಾದರಿ ನಮೂನೇ ಅರ್ಜಿಯಲ್ಲಿ ಕುಟುಂಬದ ಮುಖ್ಯಸ್ಥರ ಮಾಹಿತಿ, ದೂರವಾಣಿ ಸಂಖ್ಯೆ, ಆಧಾರ್ ಸಂಖ್ಯೆ, ಕುಟುಂಬದ ಪಡಿತರ…

Read More

ಸಿದ್ದಾಪುರ ಸೆ.20 NEWS DESK : ರಾಜ್ಯ ಸರ್ಕಾರವು ಸೆ.22 ರಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದ್ದು, ಈ ಸಮೀಕ್ಷೆಯಲ್ಲಿ ಹಲವಾರು ನ್ಯೂನತೆಗಳಿದ್ದು ಈ ನೂನ್ಯತೆಗಳನ್ನು ಸರಿಪಡಿಸಬೇಕೆಂದು ಜಿಲ್ಲಾ ಎಸ್.ಎನ್.ಡಿ.ಪಿ.ಯೂನಿಯನ್‌ನ ಜಿಲ್ಲಾಧ್ಯಕ್ಷ ವಿ.ಕೆ.ಲೋಕೇಶ್ ಒತ್ತಾಯಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಪ್ರಸ್ತುತ ಇರುವ ಜಾತಿ ಕಾಲಂಮಿನಲ್ಲಿ ಮಲಯಾಳಿ ಬಿಲ್ಲವ ಎಂಬ ಜಾತಿ ಇದ್ದು, ಈ ರೀತಿ ಜಾತಿ ಇರುವುದಿಲ್ಲ ಎಂದು ತಿಳಿಸಿದರು. ನಮ್ಮ ಜನಾನಂಗದವರು ತೀಯಾನ್ (ezhava) ಎಂದು ನಮೂದಿಸಬೇಕೆಂದು ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರವು ಈಗಿರುವ ಕ್ರೈಸ್ತ ಧರ್ಮ ದ ಎದುರು 46 ಹಿಂದೂ ಜಾತಿಗಳ ಹೆಸರುಗಳನ್ನು ನಮೂದಿಸಿರುವುದು ಮುಂದಿನ ದಿನಗಳಲ್ಲಿ ಸರ್ಕಾರವೇ ಮತಾಂತರಕ್ಕೆ ಪ್ರಚೋದನೆ ಕೊಟ್ಟಂತಾಗುತ್ತದೆ ಎಂದು ಆರೋಪಿಸಿದರು.ಈ ಹಿನ್ನೆಲೆಯಲ್ಲಿ ಸರ್ಕಾರವು ಇದೀಗ ಕೈಗೊಂಡಿರುವ ಸಮೀಕ್ಷೆಯನ್ನು ಕೈಬಿಡಬೇಕೆಂದು ಲೋಕೇಶ್ ಮನವಿ ಮಾಡಿಕೊಂಡಿದ್ದಾರೆ. ಸಮಾಜ ಬಾಂಧವರು ಜಾತಿಯ‌ ಕಾಲಂನಲ್ಲಿ ತೀಯನ್ ಮತ್ತು ಧರ್ಮದ ‌ಕಾಲಂನಲ್ಲಿ ಹಿಂದೂ ಧರ್ಮ ಎಂದು ನಮೂದಿಸಬೇಕೆಂದು ಮನವಿ ಮಾಡಿದ್ದಾರೆ.

Read More

ಮಡಿಕೇರಿ ಸೆ.20 NEWS DESK : ರಾಜ್ಯ ಹಿಂದುಳಿದ ವರ್ಗಗಳ ಆಯೋಗ ವತಿಯಿಂದ ಜಿಲ್ಲೆಯ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆಯು ಸೆ.22 ರಿಂದ ಆರಂಭವಾಗಲಿದ್ದು, ಎರಡನೇ ಹಂತದ ತರಬೇತಿ ಕಾರ್ಯಾಗಾರವು ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಿತು. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಿದ್ಧತೆ ಬಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸಮೀಕ್ಷೆದಾರರು ಮತ್ತು ಮೇಲ್ವಿಚಾರಕರ ನಿಯೋಜನೆ, ಕಿಟ್ ವಿತರಣೆ ಮತ್ತಿತರ ಬಗ್ಗೆ ಮಾಹಿತಿ ಪಡೆದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ದೀಪಕ್ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ 1132 ಸಮೀಕ್ಷಾದಾರರು ಮತ್ತು 71 ಮಂದಿ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಸಮೀಕ್ಷಾದಾರರ ಮ್ಯಾಪಿಂಗ್ ಕಾರ್ಯವು ಶೇ.90 ರಷ್ಟು ಪೂರ್ಣಗೊಂಡಿದೆ. ಮೊಬೈಲ್ ಆ್ಯಪ್ ಮೂಲಕ ಸಮೀಕ್ಷೆ ನಡೆಯಲಿದೆ ಎಂದು ಹೇಳಿದರು. ಈಗಾಗಲೇ ಪ್ರತೀ ಕುಟುಂಬಗಳಿಗೂ ಸ್ಟಿಕ್ಕರ್‍ಗಳನ್ನು ಅಂಟಿಸಲಾಗಿದೆ. ಆ ನಿಟ್ಟಿನಲ್ಲಿ ಪ್ರತೀ ಕುಟುಂಬದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ…

Read More

ಮಡಿಕೇರಿ ಸೆ.20 NEWS DESK : ಕುಶಾಲನಗರದ ಮಾದಪಟ್ಟಣದಲ್ಲಿ ಕೊಡಗಿನ ಮೊದಲ ಕಾರ್ಡಿಯಾಕ್ ಕ್ಯಾಥ್ ಲ್ಯಾಬ್ ಸೇವೆ ಒಳಗೊಂಡ ನೂತನ ಸೈರಸ್ ಆಸ್ಪತ್ರೆಯು ಸೆ.23 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಮತ್ತು ಸೆನೆಟ್ ಸದಸ್ಯ ಡಾ.ಭರತ್ ಹಂಚೆ ತಿಳಿಸಿದರು. ನಗರದಲ್ಲಿ ಸುದ್ದಿಗೋಷಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11 ಗಂಟೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ ಎಂದರು. ಸಮಾರಂಭದಲ್ಲಿ ಸಣ್ಣ ನೀರಾವರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್ ಬೋಸರಾಜು, ಸಂಸದ ಯದುವೀರ್ ಒಡೆಯರ್, ಶಾಸಕರಾದ ಮಂತರ್ ಗೌಡ, ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಜಿಲ್ಲಾಧಿಕಾರಿ ವೆಂಕಟರಾಜ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸತೀಶ್, ಕೆ.ಐ.ಓ.ಎಂ.ಎಸ್ ಡೀನ್ ಹಾಗೂ ನಿರ್ದೇಶಕರಾದ ಡಾ.ಎ.ಜೆ.ಲೋಕೇಶ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಕುಶಾಲನಗರ ಪಟ್ಟಣ ಪಾಲಿಕೆ ಅಧ್ಯಕ್ಷರಾದ ಜಯಲಕ್ಷ್ಮೀ ಚಂದ್ರು ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಹೇಳಿದರು. ಆಸ್ಪತ್ರೆಯಲ್ಲಿ ತುರ್ತು…

Read More

ಕುಶಾಲನಗರ, ಸೆ.20 NEWS DESK : ಮಕ್ಕಳು ಉತ್ತಮ ಶಿಕ್ಷಣ ಪಡೆದು ವಿದ್ಯಾವಂತರಾದರೆ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಪ್ರತಿನಿತ್ಯ ವಿದ್ಯಾರ್ಥಿಗಳು ಶಿಕ್ಷಕರು ನೀಡುವ ಪಾಠ ಪ್ರವಚನಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಉತ್ತಮ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ನಿವೃತ್ತ ಹಿರಿಯ ಅಧಿಕಾರಿಯೂ ಆದ ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಯ ಸದಸ್ಯೆ ಸೂದನ ರತ್ನಾವತಿ ಹೇಳಿದರು. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ ಡಿ ಎಂ ಸಿ ಸಹಯೋಗದೊಂದಿಗೆ ಶಾಲೆಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ನೋಟ್‌ಬುಕ್‌, ಲೇಖನ ಸಾಮಗ್ರಿ ವಿತರಣಾ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸ್ವತಃ ಲೇಖನ ಸಾಮಾಗ್ರಿಗಳನ್ನು ಉಚಿತವಾಗಿ ವಿತರಿಸಿ ಮಾತನಾಡಿದರು. ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಸಂಖ್ಯೆಯಲ್ಲಿ ದಾನಿಗಳು ಮುಂದಾಗಬೇಕು. ಸರ್ಕಾರಿ ಶಾಲೆಗಳಲ್ಲಿ ನೀಡುತ್ತಿರುವ ಉತ್ತಮ ಗುಣಮಟ್ಟದ ಶಿಕ್ಷಣದಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಹೆಚ್ಚಾಗಿದೆ. ಸಾರ್ವಜನಿಕವಾಗಿಯೂ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳು ಕೊಡುಗೆ ನೀಡುವ ಮೂಲಕ ಪ್ರೋತ್ಸಾಹಿಸಬೇಕು ಎಂದು ಮನವಿ…

Read More

ವಿರಾಜಪೇಟೆ ಸೆ.20 NEWS DESK : ಸರಕಾರದ ಪಂಚ ಯೋಜನೆಯನ್ನು ಸರ್ವರಿಗೂ ಕೊಡಿಸುವ ಉದ್ದೇಶದ ಅಂಗವಾಗಿ ವಿರಾಜಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ ನಡೆಯಿತು. ವಿರಾಜಪೇಟೆ ಶಾಸಕರ ಭವನದಲ್ಲಿ ನಡೆದ ಸಭೆಯಲ್ಲಿ ಹಲವಾರು ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿರಾಜಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ವಿ.ಜಾನ್ಸನ್, ವಿರಾಜಪೇಟೆಯ ಕೆಲವು ನ್ಯಾಯಬೆಲೆ ಅಂಗಡಿಯಲ್ಲಿ ಸರಕಾರದ ವತಿಯಿಂದ ಉಚಿತವಾಗಿ ನೀಡುವ ಅಕ್ಕಿಗೆ ಹಣ ಪಡೆಯುತ್ತಿರುವ ಅಂಗಡಿಗಳ ಮೇಲೆ ಕಾನೂನು ಕ್ರಮವನ್ನು ಕೈಗೊಳ್ಳಬೇಕು ಎಂದು ಆಹಾರ ನಿರೀಕ್ಷರು ತಕ್ಷಣ ನೋಟಿಸ್ ಜಾರಿ ಮಾಡುವಂತೆ ಸೂಚಿಸಿದರು. ಕಾಕೋಟುಪರಂಬವಿನ ನ್ಯಾಯಬೆಲೆ ಅಂಗಡಿಯಲ್ಲಿ ಒಂದು ಕೆಜಿ ಅಕ್ಕಿಗೆ ಎರಡು ರೂಪಾಯಿ ಹೆಚ್ಚಿಗೆ ಪಡೆಯುತ್ತಿರುವ ಅಂಗಡಿ ಮೇಲೆ ಕ್ರಮವನ್ನು ಕೈಗೊಳ್ಳಬೇಕು. ಇದೇ ರೀತಿ ಬಡವರಿಂದ ಉಚಿತವಾಗಿ ನೀಡುವ ಅಕ್ಕಿಗೆ ಹಣ ಪಡೆಯುವುದು ಮುಂದುವರಿದರೆ ಅಂತಹ ನ್ಯಾಯಬೆಲೆ ಅಂಗಡಿಯನ್ನು ಮುಚ್ಚಿಸಿ ಉತ್ತಮ ರೀತಿಯಲ್ಲಿ ನಡೆಸಲು ಬೇರೆಯವರಿಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಅದ್ಯಕ್ಷ ಜಾನ್ಸನ್…

Read More

ಮಡಿಕೇರಿ ಸೆ.20 NEWS DESK : ರಾಜ್ಯ ಸರಕಾರ ಕೈಗೊಂಡಿರುವ ಜಾತಿ ಜನಗಣತಿಯಲ್ಲಿ ಕೊಡವರು ಯಾವುದೇ ಗೊಂದಲಕ್ಕೆ ಒಳಗಾಗದೆ ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ಕೊಡವ ಮತ್ತು ಭಾಷೆ ಕಾಲಂನಲ್ಲಿ ಕೊಡವ ಭಾಷೆ ಎಂದು ನಮೂದಿಸುವಂತೆ ಕೊಡಗು ಜಿಲ್ಲಾ ಬಿಜೆಪಿ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಕೊಡಗು ಜಿಲ್ಲೆಯಲ್ಲಿ ಕೆಲವು ಸಂಘಟಣೆಗಳು ಜಾತಿ ಜನಗಣತಿಯ ಧರ್ಮದ ಕಾಲಂನಲ್ಲ್ಲಿ ಕೊಡವರು “ಕೊಡವ ಧರ್ಮ” ಎಂದು ನಮೂದಿಸಬೇಕೆಂದು ಕರೆ ನೀಡುವ ಮೂಲಕ ಗೊಂದಲ ಸೃಷ್ಟಿಸುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅನಾದಿ ಕಾಲದಿಂದಲು ಕೊಡವರು ಹಾಗೂ ಕೊಡವ ಭಾಷಿಕರು ಪ್ರಕೃತಿ ಮತ್ತು ಗುರುಕಾರೋಣರನ್ನು ಆರಾದಿಸಿಕೊಂಡು ಬರುತ್ತಿದ್ದು, ಹಿಂದೂ ಧರ್ಮದ ಭಾಗವಾಗಿ ಗುರುತಿಸಿಕೊಂಡಿದ್ದಾರೆ. ಕೊಡವರ ಆಚಾರ, ವಿಚಾರ, ಪದ್ಧತಿ ಪರಂಪರೆ, ಉಡುಗೆ, ತೊಡುಗೆ ಮತ್ತು ಆಹಾರ ಪದ್ಧತಿ ವಿಶಿಷ್ಟವಾಗಿದೆ. ಕೊಡಗಿನ ಬಹುತೇಕ ದೇವಾಲಯಗಳ ತಕ್ಕ ಮುಖ್ಯಸ್ಥರು ಕೊಡವರೇ ಆಗಿದ್ದು, ಎಲ್ಲಾ ಹಿಂದೂ ದೇವರುಗಳನ್ನು ಪೂಜಿಸಿಕೊಂಡು…

Read More