ಲೇಖಕ: admin

ಹುಣುಸೂರು NEWS DESK ಆ.4 : ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ನಾಗರಹೊಳೆಯ ವೀರನಹೊಸಹಳ್ಳಿ ಗೇಟ್ ಬಳಿಯಿಂದ ಇಂದು ಗಜಪಯಣ ಆರಂಭಗೊ0ಡಿತು. ಅರಣ್ಯ ಸಚಿವ ಈಶ್ವರ ಖಂಡ್ರೆ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಅರಣ್ಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಈ ಸಂದರ್ಭ ಹಾಜರಿದ್ದು, ಶುಭ ಹಾರೈಸಿದರು. ವಿವಿಧ ಕಲಾತಂಡಗಳು ಬೀಳ್ಕೊಡುಗೆ ಸಮಾರಂಭಕ್ಕೆ ಮೆರುಗು ತಂದವು.

Read More

ಮಡಿಕೇರಿ ಆ.4 NEWS DESK : ಕುಶಾಲನಗರದ ಅತ್ತೂರಿನ ಜ್ಞಾನಗಂಗಾ ಶಾಲೆಯ ಮೂವರು ಶಿಕ್ಷಕರಿಗೆ ಮೈಸೂರಿನಲ್ಲಿ ಪರೀಕ್ಷಾ ಸ್ಫೂರ್ತಿ ಗುರು ಶ್ರೇಷ್ಠ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಪರೀಕ್ಷಾ ಸ್ಫೂರ್ತಿ ಫೌಂಡೇಷನ್ ಹಾಗೂ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸರಸ್ವತಿ ಪುರಂ ನ ಜೆಎಸ್‍ಎಸ್ ಮಹಿಳಾ ಕಾಲೇಜ್ ನ ನವಜ್ಯೋತಿ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜ್ಞಾನಗಂಗಾ ವಸತಿ ಶಾಲೆಯ ಕನ್ನಡ ಶಿಕ್ಷಕರಾದ ಭಾಸ್ಕರ್ ಹೆಚ್, ಅರುಣ್ ಕುಮಾರ್ ಕೆ.ಇ ಹಾಗೂ ಜಲಾವತಿ ಎ.ಎ ಅವರು ರಾಜ್ಯ ಮಟ್ಟದ ಪ್ರಶಸ್ತಿ ಸ್ವೀಕರಿಸಿದರು. ಕಳೆದ ವರ್ಷ ನಡೆದ ಸಿಬಿಎಸ್‍ಸಿ 10ನೇ ತರಗತಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ತಂದುಕೊಟ್ಟ ಹೆಗ್ಗಳಿಕೆ ಈ ಮೂವರು ಶಿಕ್ಷಕರದ್ದಾಗಿದೆ.

Read More

ವಿರಾಜಪೇಟೆ ಆ.4 NEWS DESK : ವಿರಾಜಪೇಟೆ ತಾಲ್ಲೂಕಿನ ಕೆದಮಳ್ಳೂರು ಗ್ರಾಮ ಪಂಚಾಯಿತಿಯ ವಿಶೇಷ ಗ್ರಾಮ ಸಭೆ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಕೆ.ಉತ್ತಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮ ಪಂಚಾಯಿತಿಯ ಭಾರಿಕಾಡುವಿನಲ್ಲಿ ಎಂಟು ವರ್ಷಗಳಿಂದ ಶೆಡ್ ನಿರ್ಮಿಸಿಕೊಂಡು ವಾಸಿಸುತ್ತಿರುವ 59 ಪರಿಶಿಷ್ಟ ಪಂಗಡ ಕುಟುಂಬಗಳು ಹಾಗೂ ಕೆಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಲೈನ್ ಮನೆಗಳಲ್ಲಿ ವಾಸವಿರುವ 70 ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ನಿವೇಶನ ಮತ್ತು ಮನೆಗಳನ್ನು ಹಂಚುವ ಸಲುವಾಗಿ ವಿಶೇಷ ಸಭೆಯನ್ನು ನಡೆಸಲಾಯಿತು. ಈ ಸಂದರ್ಭ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಂ.ಎಂ.ಪರಮೇಶ್ವರ ಅವರು, ಈಗಾಗಲೇ ಪರಿಶಿಷ್ಟ ಪಂಗಡದ 33 ಕುಟುಂಬಗಳಿಗೆ ಸರಕಾರದಿಂದ ಮನೆ ನೀಡಲು ಗುರುತಿಸಲಾಗಿದೆ. ಇವರಿಗೆ ಗ್ರಾಮದಲ್ಲಿ ಸ್ವಚ್ಛತೆಯನ್ನು ಕಾಪಾಡುವ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಬೇಕು. ಹಾಗೆಯೇ ಇವರುಗಳು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲಾ ಕಾಲೇಜುಗಳಿಗೆ ಕಳುಹಿಸಬೇಕು. ಗ್ರಾಮಸ್ಥರ ವಿಶ್ವಾಸ ಗಳಿಸಿಕೊಂಡು ಗ್ರಾಮ ಪಂಚಾಯಿತಿಗೆ, ಗ್ರಾಮಕ್ಕೆ ಬದ್ಧರಾಗಿರುವಂತೆ ಸಲಹೆ ನೀಡಿದರಲ್ಲದೆ…

Read More

ಕುಶಾಲನಗರ ಆ.4 NEWS DESK : ಕುಶಾಲನಗರ ತಾಲ್ಲೂಕಿನ ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ‌ ನಿರ್ದೇಶಕ (ಅಭಿವೃದ್ಧಿ)ರಾಗಿ ನಿವೃತ್ತಿ ಹೊಂದಿದ ಪ್ರಾಂಶುಪಾಲ ಎಂ.ಚಂದ್ರಕಾಂತ್  ಅವರಿಗೆ  ಡಯಟ್ ಸಂಸ್ಥೆಯ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಡಯಟ್ ಸಂಸ್ಥೆಯ ಅಧಿಕಾರಿಗಳು, ಕಛೇರಿಯ ಸಿಬ್ಬಂದಿ ಹಾಗೂ ಪ್ರಶಿಕ್ಷಣಾರ್ಥಿಗಳ ವತಿಯಿಂದ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ನಿವೃತ್ತಿಗೊಂಡ ಪ್ರಾಂಶುಪಾಲ ಚಂದ್ರಕಾಂತ್ ಅವರನ್ನು ಸನ್ಮಾನಿಸಿ ಗೌರವಿಸಿ ನೆನಪಿನ ಕಾಣಿಕೆ ನೀಡಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದಪ್ರಾಂಶುಪಾಲ ಎಂ.ಚಂದ್ರಕಾಂತ್,  ತಾವುಗಳು ಶಿಕ್ಷಣ ಇಲಾಖೆಯ ವಿವಿಧ ಸ್ತರದ ಹುದ್ದೆಗಳ ಜತೆಗೆ ಈ ಡಯಟ್ ಸಂಸ್ಥೆಯಲ್ಲಿ 2 ವರ್ಷಗಳ ಕಾಲ‌ ಪ್ರಾಂಶುಪಾಲರಾಗಿ ಉತ್ತಮ ಸೇವೆ ಸಲ್ಲಿಸಲು ಹಾಗೂ ಜಿಲ್ಲೆಯಲ್ಲಿ ಉತ್ತಮ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲು ಸಹಕರಿಸಿದ್ದಕ್ಕೆ  ಕೃತಜ್ಞತೆ ಸಲ್ಲಿಸಿದರು. ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ವೃದ್ಧಿಸಲು ಹಾಗೂ 2024 ನೇ ಜನವರಿಯಲ್ಲಿ  ಜಿಲ್ಲೆಯಲ್ಲಿ ನಡೆದ ಶಾಲಾ ಮಕ್ಕಳ ರಾಷ್ಟ್ರೀಯ ಹಾಕಿ ಟೂರ್ನಿಯನ್ನು ಯಶಸ್ವಿಯಾಗಿ ಸಂಘಟಿಸಲು  ಶಿಕ್ಷಣ ಇಲಾಖೆಯ ಅಧಿಕಾರಿಗಳು…

Read More

ಮೂರ್ನಾಡು ಆ.4 NEWS DESK : ಮೂರ್ನಾಡು ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಗೆ ಬಂದು ಐದು ವರ್ಷ ಪೂರೈಸಿದ ಪ್ರಯುಕ್ತ ಅಖಿಲ ಭಾರತೀಯ ಶಿಕ್ಷಾ ಸಮಾಗಮ ಕಾರ್ಯಕ್ರಮ ನಡೆಯಿತು. ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೇಖಾ ಬಾಲು ಉದ್ಘಾಟಿಸಿ ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ನಾವು ವಿದ್ಯೆಕಲಿತ ಶಾಲೆ ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯವಾಗಿದ್ದು, ಇಲ್ಲಿ ದೊರಕುವ ಎಲ್ಲಾ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಜಿಲ್ಲಾ ಉಪ ನಿರ್ದೇಶಕ ರಂಗಧಾಮಪ್ಪ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿಯ ಉದ್ದೇಶಗಳನ್ನು ವಿವರಿಸಿದರು. ವಿದ್ಯಾರ್ಥಿಗಳಿಗೆ ಉತ್ತಮಗುಣಮಟ್ಟದ ಶಿಕ್ಷಣವನ್ನು ಒದಗಿಸುವುದಲ್ಲದೆ, ಈ ನೀತಿಯು ಮಕ್ಕಳ ಸಮಗ್ರ ಅಭಿವೃದ್ಧಿ ಮತ್ತು ಕೌಶಲ್ಯ ಆಧಾರಿತ ಕಲಿಕೆಗೆ ಒತ್ತು ನೀಡುವುದು. ಸರ್ವರಿಗೂ ಗುಣಮಟ್ಟದ ಶಿಕ್ಷಣದೊಂದಿಗೆ ಕೌಶಲ್ಯಾಭಿವೃದ್ಧಿ, ಬಹುಭಾಷಾ ಶಿಕ್ಷಣ, ತಂತ್ರಜ್ಞಾನ ವೃತ್ತಿಪರ ಶಿಕ್ಷಣ ನೀಡುವುದೆ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.  ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ…

Read More

ಮಡಿಕೇರಿ ಆ.4 NEWS DESK  : ಜಾನಪದ ಕಥೆಗಳು ಪ್ರಕೃತಿಯಲ್ಲಿನ ನೈಜ ಪುಪ್ಪಗಳಂತೆ ಸದಾ ಪರಿಮಳ ಬೀರುತ್ತಾ ಕಥಾ ಲೋಕದಲ್ಲಿ ಕಂಗೊಳಿಸುತ್ತದೆ. ಹೀಗಾಗಿ ಜಾನಪದ ಕಥೆಗಳು ಜನರ ಕಥೆಗಳಾಗಿ ಅತ್ಯಂತ ಮಹತ್ವ ಪಡೆಯುತ್ತದೆ. ಜಾನಪದೀಯ ಮೂಲದ ಕಥೆಗಳನ್ನು ಎಂದಿಗೂ ಮರೆಯಬಾರದು ಎಂದು ತ್ರಿಭಾಷಾ ಸಾಹಿತಿ ಬಾಚರಣಿಯಂಡ ಅಪ್ಪಣ್ಣ ಕಥೆಗಾರರಿಗೆ ಕರೆ ನೀಡಿದ್ದಾರೆ. ಕೊಡಗು ಪತ್ರಕತ೯ರ ಸಂಘದ ಆಶ್ರಯದಲ್ಲಿ ವಿರಾಜಪೇಟೆ ತಾಲ್ಲೂಕು ಪತ್ರಕತ೯ರ ಸಂಘ ಮತ್ತು ಕಾಮಧೇನು ಗೋಶಾಲೆ ಟ್ರಸ್ಟ್ ಸಂಯುಕ್ತಾಶ್ರದಲ್ಲಿ ಅಮ್ಮತ್ತಿಯ ಕಾವಾಡಿಯಲ್ಲಿನ ಗೋಶಾಲೆ ಆವರಣದಲ್ಲಿ ಆಯೋಜಿಸಿದ್ದ ಕಥಾ ಸಮಯ – ಕಥೆ ಹೇಳುವ ಸ್ಪಧೆ೯ಯ ತೀಪು೯ಗಾರರಾಗಿ ಪಾಲ್ಗೊಂಡು ಅವರು ಮಾತನಾಡಿದರು. 1940 ರ ದಶಕದಲ್ಲಿ ಖ್ಯಾತ ಕಲಾವಿದ ಕರೀಂಖಾನ್ ಅವರು ಜಾನಪದ ಕಲೆ, ಸಾಹಿತ್ಯಕ್ಕೆ ಹೊಸ ರೂಪು ನೀಡಿದರು. ಅನಂತರವೇ ಕನಾ೯ಟಕದಲ್ಲಿ ಜಾನಪದ ಕಥೆ, ಕವನಗಳಿಗೆ ಆದ್ಯತೆ ದೊರಕಿತ್ತು ಎಂದೂ ಬಾಚರಣಿಯಂಡ ಅಪ್ಪಣ್ಣ ಸ್ಮರಿಸಿದರು. ನಾಡಿನ ಹೆಮ್ಮೆಯ ಕಥೆಗಾರರಾಗಿದ್ದ ಪೂಣ೯ಚಂದ್ರ ತೇಜಸ್ವಿ ನಮ್ಮಿಂದ ಮರೆಯಾಗಿದ್ದರೂ ಅವರ ಸಾಹಿತ್ಯ ಕೖತಿಗಳು ಸದಾ…

Read More

ಸೋಮವಾರಪೇಟೆ ಆ.4 NEWS DESK : ಜಕ್ಕನಳ್ಳಿ ಗ್ರಾಮದಲ್ಲಿ ಸಿ ಆ್ಯಂಡ್ ಡಿ ಭೂಮಿಯ ಸೆಕ್ಷನ್-5 ಸರ್ವೆಗೆ ಕೃಷಿಕರಿಗೆ ನೋಟೀಸ್ ಬಂದಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಜಾಗೃತಿ ಸಭೆ ನಡೆಸಿ ಚರ್ಚೆ ನಡೆಸಿದರು. ತಾಲ್ಲೂಕು ರೈತ ಹೋರಾಟ ಸಮಿತಿಯ ಅಧ್ಯಕ್ಷ ಕೆ.ಬಿ.ಸುರೇಶ್ ಮಾತನಾಡಿ, ಹಲವು ದಶಕಗಳಿಂದ ರೈತರು ವ್ಯವಸಾಯ ಮಾಡುತ್ತಿರುವ ಸಿ ಆ್ಯಂಡ್ ಡಿ ವ್ಯವಸಾಯಕ್ಕೆ ಯೋಗ್ಯವಾದ ಸರ್ಕಾರಿ ಭೂಮಿಯಾಗಿದೆ. ದಾಖಲೆಗಳಲ್ಲಿ ಸಿ ಆ್ಯಂಡ್ ಡಿ ಭೂಮಿ ವ್ಯವಸಾಯಕ್ಕೆ ಯೋಗ್ಯವಲ್ಲ ಎಂಬ ಕಾರಣದಿಂದ ಅರಣ್ಯ ಇಲಾಖೆಗೆ ಸೇರಿಸಲಾಗಿದೆ. ಸಿ ಆ್ಯಂಡ್ ಡಿ ಯನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡರೆ, ಕೊಡಗಿನ ಬಹುತೇಕ ರೈತರು ಆಸ್ತಿ ಕಳೆದುಕೊಂಡು ಗುಳೆ ಹೋಗಬೇಕಾದ ಅನಿವಾರ್ಯತೆ ಒದಗಲಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ರೈತರನ್ನು ರಕ್ಷಣೆ ಮಾಡುವಂತಹ ಎಲ್ಲಾ ಅವಕಾಶಗಳಿವೆ. ಈಗಾಗಲೆ ಸಿ ಆ್ಯಂಡ್ ಡಿ ಭೂಮಿಗೆ ಹಕ್ಕುಪತ್ರ ಪಡೆದುಕೊಳ್ಳಲು ಹೋರಾಟ ನಡೆಯುತ್ತಿದೆ ಎಂದರು. ಸರ್ವೆಗೆ ನೋಟೀಸು ಬಂದರೆ ಪ್ರತಿಯೊಬ್ಬ ರೈತರು ಸಂಬಂಧಿಸಿದ ಸಕ್ಷಮ ಪ್ರಾಧಿಕಾರಕ್ಕೆ ತಕರಾರು ಅರ್ಜಿಗಳನ್ನು ಸಲ್ಲಿಸಬೇಕೆಂದು…

Read More

ಸೋಮವಾರಪೇಟೆ ಆ.4 NEWS DESK : ಸಂತ ಜೋಸೆಫರ ಪಿಯು ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸಂತಜೋಸೆಫರ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಧರ್ಮಗುರು ಅವಿನಾಶ್ ಉದ್ಘಾಟಿಸಿದರು. ಕಾಲೇಜಿನ ಆಧ್ಯಕ್ಷೆಯಾಗಿ ಎಸ್.ಹಿತೈಸಿ, ಉಪಾಧ್ಯಕ್ಷರಾಗಿ ತೀರ್ಥೆಶ್‍ಗೌಡ, ಶಿಸ್ತುಪಾಲಕರಾಗಿ ಕೆ.ನಿತೇಶ್, ಸಾಯಿ ಪ್ರಿಯ, ಸಾಂಸ್ಕøತಿಕ ನಾಯಕರಾಗಿ ಡಿ.ಪಿ.ಮೊನಿಶಾ, ಟಿ.ಎಸ್.ಸೂರ್ಯ, ಕ್ರೀಡಾನಾಯಕರಾಗಿ ಕೆ.ಎಸ್.ತೇಜಸ್, ಎಂ.ಸಿ.ಹಂಸಿನಿ, ವಿವಿಧ ಘಟಕಗಳ ನಾಯಕರುಗಳಾಗಿ ಪಿ.ಸಾತ್ವಿಕ್, ಎಂ.ಪಿ.ಕಾರುಣ್ಯ, ಫಾತಿಮ ಹಮೀದ್, ಎಸ್.ಎಸ್.ಜತೀನ್, ವಯಾಲಿನ್ ಲೋಬೋ, ಜಿ.ಎನ್.ಕೌಸಿಕ್, ಸಿ.ಪಿ.ವರ್ಷಾ, ಎಂ.ಆಕಾಶ್, ಡಿ.ಪಿ.ಮೊನಿಷಾ, ಎಸ್.ಲಕಿನ್, ಎಂ.ನಿಖಿಲೇಶ್, ಹೆಚ್.ಎಂ.ಪೂರ್ವಿಕಾ, ಟಿ.ಎ.ಸಂಜಯ್, ಎಸ್.ಕೆ.ಚಿರಾಗ್, ಕೆ.ಆರ್.ಆಧ್ಯ, ಡಿ.ಎಸ್.ದೀಪಾಲಿ, ಬಿ.ಡಿ.ಪ್ರೀತಮ್, ಪಾರ್ವತಿ, ಸಿ.ಆರ್.ಸುಪ್ರಿತಾ, ಸಿ.ಪಿ.ಶೇಯಾ, ಎಂ.ರಿತೀಶ್, ಕೆ.ಎ.ನೌಫಿಯಾ, ಎಂ.ಎ.ಆಶಿಕ್, ಜಿ.ಆರ್.ಸೋನಿಕಾ, ಎಚ್.ವಿ.ಧನ್ವಂತ್ರಿ, ಎನ್.ಜಿ.ಮೊನಿಕಾ, ಕೆ.ಯು.ಕುವಾಲ್, ಎಸ್.ಮೊನಿಷ, ಕೆ.ಜಿ.ದಿಶಾ, ಕೆ.ಡಿ.ಗುರುಪ್ರಸಾದ್ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಶಶಿಕುಮಾರ್, ಪಟ್ಟಣ ಪಂಚಾಯಿತಿ ಸದಸ್ಯೆ ಶೀಲಾ ಡಿಸೋಜ, ಸರ್ಕಲ್‍ಇನ್ಸ್‍ಪೆಕ್ಟರ್ ಮುದ್ದು ಮಹಾದೇವ, ಆರ್‍ಎಫ್‍ಒ ಶೈಲೆಂದ್ರ ಕುಮಾರ್, ಓಎಲ್‍ವಿ ಚರ್ಚ್ ಸದಸ್ಯ ವಿ.ಎ.ಲಾರೆನ್ಸ್, ಪ್ರಾಂಶುಪಾಲರಾದ…

Read More

ಮಡಿಕೇರಿ ಆ.4 NEWS DESK : ಮರಗೋಡು ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ  ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಭಾರ ಸಾಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಎದೆ ಹಾಲಿನ ಮಹತ್ವವನ್ನು ತಿಳಿಸಿದರು.  :: ಬೀಳ್ಕೊಡುಗೆ :: ಇದೇ ಸಂದರ್ಭ ಕತ್ತಲೆಕಾಡು ಅಂಗನವಾಡಿ ಕೇಂದ್ರದಲ್ಲಿ 31 ವರ್ಷಗಳ ಕಾಲ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಿ.ಕೆ.ಸುಶೀಲಾ  ಅವರನ್ನು ಅಂಗನವಾಡಿ ಕಾರ್ಯಕತೆಯರು ಮತ್ತು ಸಹಾಯಕಿಯರು ಆತ್ಮೀಯವಾಗಿ ಬೀಳ್ಕೊಟ್ಟರು. ಕಡಗದಾಳು ಅಂಗನವಾಡಿ ಕಾರ್ಯಕರ್ತೆ ಕೆ.ಆರ್.ಅನಿಲ ಸ್ವಾಗತಿಸಿದರು. ಮರಗೋಡು ಅಂಗನವಾಡಿ ಕಾರ್ಯಕರ್ತೆ ಅಕ್ಕಮ್ಮ  ವಂದಿಸಿದರು.

Read More

ನಾಪೋಕ್ಲು ಆ.4 NEWS DESK : ಹದಿನೆಂಟು ಬಗೆಯ ಔಷಧೀಯ ಗುಣಗಳು ಹೊಂದಿರುವ ಮದ್ದುಸೊಪ್ಪಿನ ಬಳಕೆಯ ಆಚರಣೆ ಕಕ್ಕಡ-18 ಅನ್ನು ವೈಶಿಷ್ಟಪೂರ್ಣವಾಗಿ ಆಚರಿಸಬೇಕು ಎಂದು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಹೇಳಿದರು. ನಾಪೋಕ್ಲು ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ವತಿಯಿಂದ ಕೊಡವ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ ನಡೆದ ಕಕ್ಕಡ-18 ತೀನಿ ನಮ್ಮೆ ಸ್ಪರ್ಧೆ ಮತ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಹಿಂದೆ ಭತ್ತದ ಕೃಷಿ ಮಾಡುವ ರೈತರಲ್ಲಿ ಸಂತೋಷ, ಸಂಭ್ರಮ ಇತ್ತು. ಇಂದು ಅದೆಲ್ಲವೂ ಮರೆಯಾಗಿದೆ ಮಕ್ಕಳಿಗೆ ಕೃಷಿ ಚಟುವಟಿಕೆಗಳಲ್ಲಿ ಆಸಕ್ತಿ ಇಲ್ಲ. ರೈತರಿಗೆ ಖುಷಿ, ತೃಪ್ತಿ ಇಲ್ಲ. ಗದ್ದೆಗಳೆಲ್ಲ ಪಾಳುಬಿದ್ದಿವೆ. ಒಂದಷ್ಟು ಭಾಗ ಅಡಿಕೆ, ಕಾಫಿ ತೋಟಗಳಾಗಿವೆ. ಗತವೈಭವದ  ಸಂತೋಷ, ಸಂಭ್ರಮವನ್ನು ಕಾಣಬೇಕಿದ್ದರೆ ಇಂದಿನ ಯುವ ಜನರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಭತ್ತದ ಗದ್ದೆಗಳಲ್ಲಿ ಅಗೆ ತೆಗೆಯುವುದು, ನಾಟಿ ಮಾಡುವುದು ಹೇಗೆ ಎಂಬ ಬಗ್ಗೆ ಕರ್ನಾಟಕ ಕೊಡವ ಸಾಹಿತ್ಯ…

Read More