ಲೇಖಕ: admin

ವಿರಾಜಪೇಟೆ ಅ.9 NEWS DESK : ವಿರಾಜಪೇಟೆಯ ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಿಳಾ ಸಮಾಜದ ಅಧ್ಯಕ್ಷೆ ಪಟ್ರಪಂಡ ಗೀತಾ ಬೆಳ್ಯಪ್ಪ, ಸಮಾಜದ ಏಳಿಗೆಗೆ ಮಹಿಳಾ ಸಹಕಾರ ಸಂಘದ ಎಲ್ಲ ಸದಸ್ಯರ ಸಹಕಾರ ಮುಖ್ಯ. ಮುಂದಿನ ದಿನಗಳಲ್ಲಿ ಸಮಾಜದ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಹಾಕಿಕೊಂಡಿರುವುದಾಗಿ ತಿಳಿಸಿದರು. ಮಹಿಳಾ ಸಮಾಜಕ್ಕೆ ಸುಸಜ್ಜಿತ ಶೌಚಾಲಯದ ಅವಶ್ಯಕತೆ ಇದ್ದು, ಅದನ್ನು ನಿರ್ಮಾಣ ಮಾಡುವ ಯೋಜನೆಯ ರೂಪುರೇಷೆ ಸಿದ್ದಪಡಿಸಲಾಗುತ್ತಿದೆ. ಇದಕ್ಕೆ ದಾನಿಗಳ ಸಹಕಾರವೂ ಅಗತ್ಯವಿದೆ. ಎಲ್ಲರೂ ಸಹಕಾರ ನೀಡಿದ್ದಲ್ಲಿ ಉತ್ತಮ ಸುಸಜ್ಜಿತ ಶೌಚಾಲಯ ನಿರ್ಮಾಣವಾಗುತ್ತದೆ. ಹಂತ ಹಂತವಾಗಿ ಸಮಾಜದ ಅಭಿವೃದ್ಧಿ ಕಾರ್ಯ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು. ಸಭೆಯಲ್ಲಿ ಸದಸ್ಯತ್ವ ನೋಂದಣಿ ಹಣ ಹೆಚ್ಚಿಸುವಂತೆ ಹಾಗೂ ಇತರ ವಿಚಾರಗಳನ್ನು ಚರ್ಚಿಸಲಾಯಿತು. ಸಭೆಯಲ್ಲಿ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರ ಮಂಡನೆ ಮಾಡಿ ಅನುಮೋದಿಸಲಾಯಿತು. ಸಭೆ ಪ್ರಾರಂಭದ ಮೊದಲು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಲಾಯಿತು. ಈ…

Read More

ಪುತ್ತೂರು ಅ.9 NEWS DESK : ಕೃತಕ ಬುದ್ಧಿಮತ್ತೆಯು ದಿನದಿಂದ ದಿನಕ್ಕೆ ಅಗಾಧವಾಗಿ ವ್ಯಾಪಿಸುತ್ತಿದ್ದು, ಮಾನವ ಜೀವನದ ಅವಿಭಾಜ್ಯ ಅಂಗವಾಗುತ್ತಿದೆ ಎಂದು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಶಿನ್ ಲರ್ನಿಂಗ್ (AIML)  ವಿದ್ಯಾರ್ಥಿ ವಿಭಾಗ, IEEE VCET ವಿದ್ಯಾರ್ಥಿ ವಿಭಾಗ ಮತ್ತು IEEE ಕಮ್ಯುನಿಕೇಶನ್ ವಿಭಾಗದ ಸಂಯುಕ್ತ ಆಶ್ರಯದಲ್ಲಿ ನಡೆದ ಹಾಕಥಾನ್ ಸ್ಪರ್ಧೆ ಕೋಡ್ ಮಂಥನ್-25ಕ್ಕೆ ಚಾಲನೆ ನೀಡಿ ಅವರು ಮಾತಾಡಿದರು. ವಿದ್ಯಾರ್ಥಿಗಳು ಕೇವಲ ಪಠ್ಯಕ್ರಮಕ್ಕಷ್ಟೇ ಸೀಮಿತವಾಗಬಾರದು ಬದಲಾಗುತ್ತಿರುವ ತಂತ್ರಜ್ಞಾನಗಳನ್ನು ಸಮಾಜದ ಒಳಿತಿಗೆ ಬಳಸುವ ನಿಟ್ಟಿನಲ್ಲಿ ತೊಡಗಿಸಿಕೊಳ್ಳಬೇಕು ಎಂದರು. IEEE VCET ವಿದ್ಯಾರ್ಥಿ ವಿಭಾಗದ ಸಂಯೋಜಕಿ ಡಾ.ಜೀವಿತಾ.ಬಿ.ಕೆ ಮಾತನಾಡಿ ಕೃತಕ ಬುದ್ಧಿಮತ್ತೆ ಮತ್ತು ಅದಕ್ಕೆ ಸಂಬಂಧಿಸಿದ ತಂತ್ರಜ್ಞಾನಗಳಲ್ಲಿ ತಮ್ಮ ಸಾಮಥ್ರ್ಯವನ್ನು ತೋರಿಸಲು ವಿದ್ಯಾರ್ಥಿಗಳಿಗೆ ಇದೊಂದು ಸದವಕಾಶ ಎಂದರು. ಸಮಾಜದಲ್ಲಿ ಜನಸಾಮಾನ್ಯರು ವಿವಿಧ ಕ್ಷೇತ್ರಗಳಲ್ಲಿ ಎದುರಿಸುವ ಸಮಸ್ಯೆಗಳಿಗೆ…

Read More

ಮಡಿಕೇರಿ ಅ.9 NEWS DESK : ನಗರಸಭೆಯಲ್ಲಿ ಸಿಬ್ಬಂದಿಗಳ ತೀವ್ರ ಕೊರತೆಯ ನಡುವೇ ಪೌರಸಿಬ್ಬಂದಿಗಳ ಮೂಲಕ ನಗರ ಸ್ವಚ್ಚತೆಗೆ ಆದ್ಯತೆ ನೀಡಲಾಗಿದೆ ಎಂದು ಮಡಿಕೇರಿ ನಗರಸಭೆಯ ಪೌರಾಯುಕ್ತ ಹೆಚ್.ಆರ್.ರಮೇಶ್ ಹೇಳಿದ್ದಾರೆ. ಮಡಿಕೇರಿ ರೋಟರಿ ಸಭಾಂಗಣದಲ್ಲಿ ರೋಟರಿ ವುಡ್ಸ್ ವತಿಯಿಂದ ಆಯೋಜಿತ ಕಾಯ೯ಕ್ರಮದಲ್ಲಿ ಪೌರಸಿಬ್ಬಂದಿಗಳಾದ ಅಹಮ್ಮದ್ ಕಬೀರ್, ಎಚ್.ಆರ್.ಶಂಕರ್, ಈರಪ್ಪ ಶೆಟ್ಟಿ, ವಸಂತ ಕುಮಾರ್, ಬಿ.ಟಿ. ಜಗದೀಶ್ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು. ಕಳೆದ ಕೆಲವು ವಷ೯ಗಳಿಗೆ ಹೋಲಿಸಿದರೆ ಮಡಿಕೇರಿಯಲ್ಲಿ ಸ್ವಚ್ಚತೆ ಸಂಬಂಧಿತ ಜನರಲ್ಲಿ ಹೆಚ್ಚು ಅರಿವು ಮೂಡಿದೆ. ಪೌರಸಿಬ್ಬಂದಿಗಳು ನಗರದ ತ್ಯಾಜ್ಯ ವಿಲೇವಾರಿ ಮಾಡುವ ಪೌರಸಿಬ್ಬಂದಿಗಳ ಆರೋಗ್ಯದ ಬಗ್ಗೆಯೂ ನಗರಸಭೆ ಹೆಚ್ಚಿನ ಕಾಳಜಿ ವಹಿಸಿದೆ. ಪ್ರತೀ ವಷ೯ ಅತ್ಯುತ್ತಮ ರೀತಿಯಲ್ಲಿ ಪೌರಸಿಬ್ಬಂದಿಗಳ ಆರೋಗ್ಯ ತಪಾಸಣೆ ಕೈಗೊಳ್ಳಲಾಗುತ್ತಿದೆ. ಅಗತ್ಯವುಳ್ಳವರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನೂ ನೀಡಲಾಗುತ್ತಿದೆ ಎಂದೂ ರಮೇಶ್ ನುಡಿದರು. ಈಗಾಗಲೇ ಮಡಿಕೇರಿಯ ರಾಜರಾಜೇಶ್ವರಿ ಬಡಾವಣೆಯಲ್ಲಿ ಪೌರಸಿಬ್ಬಂದಿಗಳಿಗೆ 12 ಮನೆಗಳನ್ನು ನಿಮಿ೯ಸಿ ಉಚಿತವಾಗಿ ವಿತರಿಸುವ ಕಾಯ೯ವೂ ಪ್ರಗತಿಯಲ್ಲಿದೆ ಎಂದೂ ರಮೇಶ್ ಹೇಳಿದರು.700 ಜನಸಂಖ್ಕೆಗೊಬ್ಬರಂತೆ ಓವ೯…

Read More

ಮಡಿಕೇರಿ ಅ.9 NEWS DESK : ಹೆರವನಾಡು ಗ್ರಾಮದ ಉಡೋತ್ ಮೊಟ್ಟೆ ನಿವಾಸಿ ಕೆ.ಜೆ.ಥೋಮಸ್ (63) ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಅ.10 ರಂದು ಉಡೋತ್ ಮೊಟ್ಟೆ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Read More

ಮೈಸೂರು ಅ.9 NEWS DESK :  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಆಯುಕ್ತ ಪಿ.ಜಿ.ಆರ್.ಸಿಂಧಿಯಾ ಅವರ 77ನೇ ಹುಟ್ಟುಹಬ್ಬದ ಆಚರಣೆಯ ಅಂಗವಾಗಿ ಅ.11 ರಂದು ವಿವಿಧ ಕ್ಷೇತ್ರಗಳ ನಾಲ್ವರು ಸಾಧಕರಿಗೆ ‘ಧ್ವನಿ ಕೊಟ್ಟ ಧಣಿ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಅಂದು ಬೆಳಿಗ್ಗೆ 10.45 ಕ್ಕೆ ನಗರದ ಉರ್ಸು ಜಾಗೃತಿ ಅಕಾಡೆಮಿ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಜೆಎಲ್‌ಬಿ ರಸ್ತೆಯಲ್ಲಿರುವ ಇನ್‌ಸ್ಟಿಟ್ಯೂಷನ್ ಆಫ್ ಎಂಜಿನಿಯರ್ಸ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ  ಹಾಸನದ ಹೆಚ್ಚುವರಿ ಜಿಲ್ಲಾಧಿಕಾರಿ ವಿ.ಮಂಜುನಾಥ್, ಮೈಸೂರು ವಿಜಯ ಕರ್ನಾಟಕ  ಐತಿಚಂಡ  ಸಂಪಾದಕರಾದ ರಮೇಶ್ ಉತ್ತಪ್ಪ,  ವೈದ್ಯವರ್ತ ಪ್ರಕಾಶನದ ನಿರ್ದೇಶಕ ಶ್ರೀನಿವಾಸ ಬಹದ್ದೂರ್, ಮಂಗಳೂರಿನ ಲಿಮೆರಿಕ್ಸ್ ಲೇಖಕಿ ಮತ್ತು ಸಾಹಿತಿ ಜಾಹ್ನವಿ ಸೀತಾಲಕ್ಷ್ಮಿ ವರ್ಮಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಎಂಎಲ್‍ಸಿ ಡಾ.ಡಿ.ತಿಮ್ಮಯ್ಯ ಉದ್ಘಾಟಿಸಲಿದ್ದು, ಶಾಸಕ ತನ್ವೀರ್ ಸೇಠ್ ಹಾಗೂ ಚುಟುಕು ಯುಗಾಚಾರ್ಯ ಡಾ.ಎಂ.ಜಿ.ಆರ್. ಉರ್ಸ್ ಅಭಿನಂದನಾ ಭಾಷಣ ಮಾಡಲಿದ್ದಾರೆ.

Read More

ಮಡಿಕೇರಿ ಅ.9 NEWS DESK : ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಾಷ್ಟ್ರೀಯ ಸೇವಾ ಯೋಜನೆ ಪ್ರಯುಕ್ತ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ನಡೆದ ‘ನಶಾ ಮುಕ್ತ ಭಾರತ ಅಭಿಯಾನ’ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಕಾರ್ಕಳದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಡುಪಿಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಜಿಲ್ಲಾ ಉಪನಿರ್ದೇಶಕರಾದ ಮಾರುತಿ, ವಿದ್ಯಾರ್ಥಿ ಜೀವನದಲ್ಲಿ ಇಂತಹ ಶಿಬಿರಗಳು ನೈಜ ಜೀವನದ ಪಾಠ ಕಲಿಸುವ ಪಾಠ ಶಾಲೆಯಂತಿವೆ. ಸಮಾಜ ಸೇವೆ ಎಂದರೆ ಕೇವಲ ಒಂದು ದಿನದ ಕಾರ್ಯಕ್ರಮವಲ್ಲ. ಅದು ಜೀವನಪೂರ್ತಿ ಅಳವಡಿಸಿಕೊಳ್ಳಬೇಕಾದ ಮನೋಭಾವ’ ಎಂದು ಕರೆ ನೀಡಿದರು. ಸಂಸ್ಥೆಯ ಸಹ ಸಂಸ್ಥಾಪಕರಾದ ಎಸ್.ಎಲ್.ಅಶ್ವತ್ ಪ್ರಾಸ್ತಾವಿಕ ಮಾತನಾಡಿ ‘ಸಮಾಜಕ್ಕೆ ಕೊಡುಗೆ ನೀಡುವ ಮನೋಭಾವ ಬೆಳೆಸಿದರೆ, ಶಿಕ್ಷಣದ ಗುರಿ ಸಾರ್ಥಕವಾಗುತ್ತದೆ’ ಎಂದು ಹೇಳಿದರು. ಮುಖ್ಯ ಅತಿಥಿ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಹಾಗೂ ಬಂಟ್ಸ್ ಕೋ ಆಪರೇಟಿವ್…

Read More

ಕಾರ್ಕಳ ಅ.9 NEWS DESK : ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಹಾಗೂ ಸ್ವಯಂ ಸೇವಕರು ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯ ಸಂದೇಶವನ್ನು ಸಾರುವ ಉದ್ದೇಶದಿಂದ ಕಾರ್ಕಳದ ಆಸುಪಾಸಿನಲ್ಲಿರುವ ಅನೇಕ ಪ್ರೇಕ್ಷಣೀಯ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಿದರು. ಪ್ಲಾಸ್ಟಿಕ್ ಕಸದ ಸಂಗ್ರಹ, ಕಸ ವಿಂಗಡಣೆ ಹಾಗೂ ಪರಿಸರ ಶುದ್ಧೀಕರಣದ ಜೊತೆಗೆ ಸ್ಥಳೀಯ ಜನರಿಗೆ ಸ್ವಚ್ಛತೆಯ ಮಹತ್ವವನ್ನು ಬೋಧಿಸುವ ಜಾಗೃತಿ ಅಭಿಯಾನವೂ ನಡೆಯಿತು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಸ್ವಚ್ಛ ಕಾರ್ಕಳ ನಗರದ ಸ್ವಚ್ಛತಾ ರಾಯಭಾರಿಯಾಗಿರುವ ಫೆಲಿಕ್ಸ್ ಜೋಸೆಫ್ ವಾಜ್ ರವರು ಶುಭ ಹಾರೈಸಿದರು. ಕಾರ್ಕಳ ಪುರಸಭಾ ಅಧ್ಯಕ್ಷರಾದ ಯೋಗೀಶ್ ದೇವಾಡಿಗ ಮಾತನಾಡಿ, ಸ್ವಚ್ಛತೆ ಎನ್ನುವುದು ಕೇವಲ ದೈಹಿಕ ಶುದ್ಧತೆಗೆ ಸೀಮಿತವಲ್ಲ. ನಮ್ಮ ಮನಸ್ಸಿನ, ಸಮಾಜದ ಮತ್ತು ಸಂಸ್ಕೃತಿಯ ಶುದ್ಧತೆಯ ಪ್ರತೀಕವೂ ಹೌದು. ಯುವಕರು ಇಂತಹ ಚಟುವಟಿಕೆಗಳ ಮೂಲಕ ಸಾಮಾಜಿಕ ಬದಲಾವಣೆಗೆ ಪ್ರೇರಣೆಯಾಗುತ್ತಾರೆ ಎಂದು ಹೇಳಿದರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಡಾ. ಬಿ.…

Read More

ನಾಪೋಕ್ಲು ಅ.9 NEWS DESK : ಅಂತರಾಷ್ಟ್ರೀಯ ಮಟ್ಟದ ಮ್ಯಾರಥಾನ್ ನಲ್ಲಿ ಕರವಟ್ಟಿರ ಚೈತ್ರ ಪಳಂಗಪ್ಪ ಸಾಧನೆ ಮಾಡಿದ್ದಾರೆ. ಇವರು 72 ಕಿಲೋಮೀಟರ್ ಅಂತರದ ಖರ್ದುಂಗ್ ಲಾ ಪಾಸ್  ಸವಾಲನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ವಾರ್ಷಿಕ ಲಡಾಕ್ ಮ್ಯಾರಥಾನ್ ಭಾಗವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆಯುವ  ಖರ್ದುಂಗ್ ಲಾ ಪಾಸ್  72 ಕಿ.ಮೀ ಅಂತರದ ಓಟವು 17,600 ಅಡಿಗಳಿಗಿಂತ ಹೆಚ್ಚು ಎತ್ತರದಲ್ಲಿರುವ ಪೌರಾಣಿಕ ಖರ್ದುಂಗ ಲಾ ಪಾಸ್ ಸೇರಿದಂತೆ ಅತ್ಯಂತ ಎತ್ತರದ ಭೂ ಪ್ರದೇಶದ ಮೂಲಕ ಹಾದು ಹೋಗಿದೆ. ಈ ಅದ್ಭುತ ಸಾಧನೆಯನ್ನು ಮಾಡಲು ಧೈರ್ಯ ಮಾಡುವ ಕ್ರೀಡಾಪಟುಗಳನ್ನು ಕರೆದುಕೊಂಡು ಹೋಗುವ ಚಾಲೆಂಜ್ ಸ್ವಯಂ ಶೋಧನೆಯ ಪ್ರಯಾಣ ಮತ್ತು ಅವರ ಅವಿನಾ ಭಾವ ಮನೋಭಾವಕ್ಕೆ ಸಾಕ್ಷಿಯಾಗಿದೆ. ಇಂತಹ ಕಠಿಣ ಆಯ್ಕೆಯನ್ನು ಚೈತ್ರ ಸವಾಲಾಗಿ ಸ್ವೀಕರಿಸಿ ಯಶಸ್ವಿಗೊಳಿಸಿದ್ದಾರೆ. ಇವರು ಕೊಡಗಿನ ಮಡಿಕೇರಿ ತಾಲ್ಲೂಕಿನ ಕಕ್ಕಬೆ ಗ್ರಾಮ ಪಂಚಾಯಿತಿಯ ಯವಕಪಾಡಿ ಗ್ರಾಮದ ನಿವಾಸಿ ನಿವೃತ್ತ ಸೈನಿಕ ಕರವಟ್ಟಿರ ಪಳಂಗಪ್ಪ ಮತ್ತು ಕಾಂತಿ ದಂಪತಿಯ ಪುತ್ರಿ. ವರದಿ :…

Read More

ನಾಪೋಕ್ಲು ಅ.9 NEWS DESK  : ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಲಯ ಹಾಗೂ ಸಂಪಾಜೆ ಪಯಸ್ವಿನಿ ಯುವಕ ಸಂಘದ ಆಶ್ರಯದಲ್ಲಿ ದ್ವಿತೀಯ ವರ್ಷದ (ಕೆಸರ್ದ ಪರ್ಬ) ಕೆಸರು ಗದ್ದೆ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟವನ್ನು ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಎನ್.ಸಿ.ಅನಂತ ಉದ್ಘಾಟಿಸಿದರು. ಪಯಸ್ವಿನಿ ಯುವಕ ಸಂಘದ ಅಧ್ಯಕ್ಷ ದುಗ್ಗಳ ತೀರ್ಥಪ್ರಸಾದ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರು ರಮಾದೇವಿ ಬಾಲಚಂದ್ರ ಕಳಗಿ, ಪಂಚಲಿಗೇಶ್ವರ ದೇವಸ್ಥಾನ ಸಂಪಾಜೆ ಅಧ್ಯಕ್ಷ ಜಯಕುಮಾರ್ ಚಿದ್ಕರ್, ಪಕೀರ ಅಂಬಟೆಕಜೆ ನಿರ್ದೇಶಕರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಂಪಾಜೆ ಹಾಗೂ ಡಾ.ಸುಬ್ರಹ್ಮಣ್ಯ ಭಟ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪಯಸ್ವಿನಿ ಸಂಘದ ಎಲ್ಲಾ ಪದಾಧಿಕಾರಿಗಳು ಅನೇಕ ಕ್ರೀಡಾ ಪ್ರೇಮಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು. ವಿಕ್ರಂತ್ ಸಂಪಾಜೆ ಹಾಗೂ ಸುಂದರ ಸಂಪಾಜೆ ನಿರೂಪಿಸಿದರು. ಪಂದ್ಯಾಟ ಕೂಟದ ವೀಕ್ಷಕ ವಿವರಣೆ ಯನ್ನು ಖ್ಯಾತ ವೀಕ್ಷಕ ವಿವರಣೆಗಾರರಾದ ಸುರೇಶ್ ಪಡೀಪಂಡ ಮಾಡಿದರು. ::…

Read More

ಕುಶಾಲನಗರ ಅ.9 NEWS DESK : ಕುಶಾಲನಗರ-ಕೊಪ್ಪ ಗಡಿಭಾಗದ ಕಾವೇರಿ ದೇಗುಲದಲ್ಲಿ ಬಾರವಿ ಕನ್ನಡ ಅಭಿಮಾನಿ ಸಂಘದ ವತಿಯಿಂದ ಹುಣ್ಣಿಮೆ ಅಂಗವಾಗಿ ಪೂಜಾ ಕಾರ್ಯಕ್ರಮವು ಜರುಗಿತು. ಅರ್ಚಕ ಪುರುಷೋತ್ತಮ್ ಭಟ್ ನೇತೃತ್ವದಲ್ಲಿ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ಆರತಿ ಬೆಳಗಲಾಯಿತು. ಬಾಲಾಜಿ ಕನಷ್ಟ್ರಕ್ಷನ್ ಮಾಲೀಕರಾದ ಸಂದೀಪ್, ಎಂ.ಆರ್.ಬಾಲ ಸೌಮ್ಯ ಮತ್ತು ಕುಟುಂಬಸ್ಥರು ಪೂಜಾ ಸೇವಾರ್ಥ ನೆರವೇರಿಸಿದರು. ಸುನಂದ ಕೌಶಿಕ್ ಹಾಗೂ ಕುಟುಂಬಸ್ಥರು ಕಾವೇರಿ ಮಾತೆಗೆ ವಸ್ತ್ರ ವಿತರಿಸಿದರು. ಈ ವೇಳೆ ಮಾತನಾಡಿದ ಉದ್ಯಮಿ ಕೌಶಿಕ್, ಕಾವೇರಿ ನದಿಗೆ ತನ್ನದೆ ಪಾವಿತ್ರ್ಯತೆ ಇದೆ. ಈ ಬಗ್ಗೆ ಬಾರವಿ ಕನ್ನಡ ಅಭಿಮಾನಿ ಸಂಘದ ವತಿಯಿಂದ ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಜನರಿಗೆ ಕಾವೇರಿ ಬಗ್ಗೆ ಪೂಜ್ಯ ಭಾವನೆ ಬರಬೇಕು. ನದಿಗೆ ಕಲುಷಿತ ನೀರನ್ನು ಹರಿಸಬಾರದು ಎಂಬ ಅರಿವು ಜನರಲ್ಲಿ ಬಂದಲ್ಲಿ ಮಾತ್ರ ಕಾವೇರಿ ಅಪವಿತ್ರವಾಗುವುದನ್ನು ತಪ್ಪಿಸಬಹುದು ಎಂದು ಹೇಳಿದರು. ಬಾಲಾಜಿ ಕನಷ್ಟ್ರಕ್ಷನ್ ಮಾಲೀಕರಾದ ಸಂದೀಪ್ ಮಾತನಾಡಿ, ಜೀವನದಿ ಕಾವೇರಿ ಮತ್ತು ಪರಿಸರದ ಉಳಿವಿಗೆ…

Read More