ಮಡಿಕೇರಿ ಅ.9 NEWS DESK : ಮಡಿಕೇರಿ ಸಮೀಪದ ಕಾಟಕೇರಿ ಹಾರ್ ಮಂದಿರ್ ವಸತಿ ಶಾಲೆಯಲ್ಲಿ ನಡೆದ ಬೆಂಕಿ ಆಕಸ್ಮಿಕದಲ್ಲಿ ಬಾಲಕನೋರ್ವ ಜೀವ ಕಳೆದುಕೊಂಡಿದ್ದಾನೆ. ಎರಡನೇ ತರಗತಿಯ ವಿದ್ಯಾರ್ಥಿ ಕೆ.ಎ.ಪುಷ್ಪಕ್, ಭಾಗಮಂಡಲ ಸಮೀಪದ ಚೆಟ್ಟಿಮಾನಿ ನಿವಾಸಿಯಾಗಿದ್ದಾನೆ. ಬಾಲಕನ ತಾಯಿ ತ್ರಿವೇಣಿ, ಕುಂದಚೇರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತಂದೆ ಅನಿಲ್ ಕುಮಾರ್ ಕೃಷಿಕರಾಗಿದ್ದಾರೆ. ಮಗನ ಸಾವಿನ ಸುದ್ದಿ ಕೇಳಿ ಪೋಷಕರು ಆಘಾತಕ್ಕೆ ಒಳಗಾಗಿದ್ದಾರೆ. ಚೆಟ್ಟಿಮಾನಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಇಂದು ನಸುಕಿನ ನಾಲ್ಕು ಗಂಟೆಗೆ ಈ ಘಟನೆ ನಡೆದಿದ್ದು 50 ಕ್ಕೂ ಹೆಚ್ಚು ಮಕ್ಕಳನ್ನು ರಕ್ಷಿಸಲಾಗಿದೆ.
ಲೇಖಕ: admin
ನಾಪೋಕ್ಲು ಅ.9 NEWS DESK : ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮವು ಏ.17 ರಿಂದ 24ರ ವರೆಗೆ ನಡೆಯಲಿದೆ. ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಯನ್ನು ಮರ್ಕಜ್ ಸಂಸ್ಥೆಯಲ್ಲಿ ಇಂಡಿಯನ್ ಗ್ರಾಂಡ್ ಮುಫ್ತಿ ಹಾಗೂ ಕೊಡಗು ಜಿಲ್ಲಾ ಖಾಜಿಗಳಾದ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯರ್ ನೆರವೇರಿಸಿದರು. ಈ ಸಂದರ್ಭದಲ್ಲಿ ಜಮಾಯತ್ ಅಧ್ಯಕ್ಷರಾದ ಹುಸೇನ್ ಸಖಾಫಿ, ಮಾಜಿ ಅಧ್ಯಕ್ಷರಾದ ಅಬೂಬಕರ್, ಕೆ.ಎಸ್.ಮಜೀದ್, ಹನಿಫಾ, ಸಿ.ಎಂ.ಅಶ್ರಫ್, ಹ್ಯಾರಿಸ್, ಯೂಸುಫ್ ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ NEWS DESK ಅ.8 : ಮಡಿಕೇರಿಯಲ್ಲಿ ನಡೆದ ದಸರಾ ದಶಮಂಟಪಗಳ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಸಿ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂದು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಹಿನ್ನೆಲೆ ಕಾನೂನು ಹೋರಾಟ ನಡೆಸಲು ದಶಮಂಟಪ ಸಮಿತಿಗಳು ನಿರ್ಧರಿಸಿವೆ. ದಸರಾ ಸಂದರ್ಭ ಧ್ವನಿವರ್ಧಕ ಬಳಕೆಗೆ ಅವಕಾಶ ನೀಡಬೇಕೆಂದು ಸಮಿತಿ ವಾದ ಮಂಡಿಸಿದೆ. ರಾತ್ರಿ 10 ಗಂಟೆ ನಂತರ ಸಾರ್ವಜನಿಕ ಸ್ಥಳದಲ್ಲಿ ಹೆಚ್ಚಿನ ಪ್ರಮಾಣದ ಧ್ವನಿವರ್ಧಕವನ್ನು ಬಳಸಬಾರದೆಂಬ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಶೋಭಾಯಾತ್ರೆ ಸಂದರ್ಭ ಧ್ವನಿವರ್ಧಕವನ್ನು ಬಳಸಲಾಗಿದೆ ಎಂದು ಆರೋಪಿಸಿ ನಗರ ಠಾಣೆಯಲ್ಲಿ 10 ಮಂಟಪ ಸಮಿತಿಗಳ ಒಟ್ಟು 62 ಮಂದಿ ವಿರುದ್ಧ ಪ್ರತ್ಯೇಕ 10 ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆ ದಶಮಂಟಪಗಳ ಸಮಿತಿ ನೇತೃತ್ವದಲ್ಲಿ ವಿವಿಧ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು ಠಾಣೆಗೆ ಹಾಜರಾಗಿ ವೃತ್ತ ನಿರೀಕ್ಷಕ ಪಿ.ಕೆ.ರಾಜು ಅವರೊಂದಿಗೆ ಸಮಾಲೋಚನೆ ನಡೆಸಿದರು. ಪೊಲೀಸರ ಸೂಚನೆಯಂತೆ ರಾತ್ರಿ 11 ಗಂಟೆಯ ನಂತರ ಧ್ವನಿವರ್ಧಕಗಳನ್ನು ಸ್ಥಗಿತಗೊಳಿಸಲಾಗಿದೆ. ಹೀಗಿದ್ದರೂ ಪ್ರಕರಣ ದಾಖಲಿಸಲಾಗಿದೆ…
ಮಡಿಕೇರಿ NEWS DESK ಅ.8 : ಮಡಿಕೇರಿ ನಗರದ ಸರಕಾರಿ ಪದವಿ ಪೂರ್ವ ಕಾಲೇಜ್ (ಜೂನಿಯರ್ ಕಾಲೇಜ್) ನ ನಿವೃತ್ತ ಪ್ರಾಂಶುಪಾಲರಾದ ರೇಖಾ ಕಾಳಯ್ಯ (75) (ಕೊಕ್ಕಲೇರ ಬೊಳ್ಳಮ್ಮ) ಅವರು ಇಂದು ನಿಧನ ಹೊಂದಿದರು. ಪ್ರಸ್ತುತ ಜೂನಿಯರ್ ಕಾಲೇಜ್ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಬೃಹತ್ ಸಭಾಂಗಣದ ಪರಿಕಲ್ಪನೆ ಇವರದ್ದೇ ಆಗಿದೆ. ತಮ್ಮ ಅಧಿಕಾರವಧಿಯಲ್ಲಿ ವಿವಿಧೋದ್ದೇಶಕ್ಕಾಗಿ ಈ ಕಟ್ಟಡವನ್ನು ಸರಕಾರ ಮತ್ತು ದಾನಿಗಳ ನಿರ್ಮಿಸಿದರು. ಸರಕಾರಿ ಪದವಿ ಪೂರ್ವ ಕಾಲೇಜ್ ಗೆ ಕಾಯಕಲ್ಪ ನೀಡಿದ್ದ ರೇಖಾ ಕಾಳಯ್ಯ ಅವರು ಉತ್ತಮ ಇಂಗ್ಲೀಷ್ ಜ್ಞಾನದೊಂದಿಗೆ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಗುರುವಾಗಿದ್ದರು. ಮೃತರ ಅಂತ್ಯಕ್ರಿಯೆ ಅ.9ರಂದು ಮಡಿಕೇರಿ ಕೊಡವ ಸಮಾಜದ ರುದ್ರಭೂಮಿಯಲ್ಲಿ ನಡೆಯಲಿದೆ. ರೇಖಾ ಕಾಳಯ್ಯ ಅವರ ನಿಧನಕ್ಕೆ ಹಳೆಯ ವಿದ್ಯಾರ್ಥಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.
ಮಡಿಕೇರಿ NEWS DESK ಅ.8 : ನಗರದ ಕೊಡಗು ಜಿಲ್ಲಾಸ್ಪತ್ರೆಯ ರಕ್ತ ನಿಧಿ ಕೇಂದ್ರದಲ್ಲಿನ ರಕ್ತದ ಕೊರತೆಯನ್ನು ಮನಗಂಡು ಸ್ವತ: ರಕ್ತದಾನ ಮಾಡುವ ಮೂಲಕ ಧರ್ಮಗುರುಗಳು ಮಾದರಿಯಾದರು. ಎಸ್.ಕೆ.ಎಸ್.ಎಸ್.ಎಫ್ ಸಿದ್ದಾಪುರ ಶಾಖೆ ಮತ್ತು ಕೊಡಗು ಬ್ಲಡ್ ಡೋನರ್ಸ್ ಮಡಿಕೇರಿ ಇದರ ಸಂಯುಕ್ತಾಶ್ರಯದಲ್ಲಿ ಸಿದ್ದಾಪುರದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು. 60ಕ್ಕೂ ಹೆಚ್ಚು ರಕ್ತದಾನಿಗಳು ಸೇರಿದಂತೆ ಧರ್ಮಗುರುಗಳು ರಕ್ತದಾನ ಮಾಡಿದರು. ಎಸ್.ಕೆ.ಎಸ್.ಎಸ್.ಎಫ್ ಮತ್ತು ಕೊಡಗು ಬ್ಲಡ್ ಡೋನರ್ಸ್ ನ ಪದಾಧಿಕಾರಿಗಳು ಹಾಗೂ ಧರ್ಮಗುರುಗಳು ರಕ್ತದಾನ ಮಾಡಿ ಸಮಾಜಕ್ಕೆ ಮಾದರಿಯಾದರು.
ಮಡಿಕೇರಿ ಅ.8 NEWS DESK : ತುಂಡು ಕಾಮಗಾರಿ ಗುತ್ತಿಗೆದಾರನ ಬಿಲ್ ಮೊತ್ತ ಪಾವತಿಸಲು ರೂ.25 ಸಾವಿರ ಲಂಚ ಪಡೆದ ಆರೋಪದಡಿ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಸಮೀಪದ ಹಂಡ್ಲಿ ಗ್ರಾ.ಪಂ ಅಧ್ಯಕ್ಷೆ ಸುಧಾ ಹಿರೇಶ್ ಎಂಬುವವರನ್ನು ಕೊಡಗು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶನಿವಾರಸಂತೆ ಹೋಬಳಿ ಒಡೆಯನಪುರ ಗ್ರಾಮ ನಿವಾಸಿ ಡಿ ದರ್ಜೆ ಗುತ್ತಿಗೆದಾರ ಹಮೀದ್ ಎಸ್.ಎ ಎಂಬುವವರು ಹಂಡ್ಲಿ ಗ್ರಾಮ ಪಂಚಾಯಿತಿಯಲ್ಲಿ ಪಡೆದಿರುವ ತುಂಡು ಗುತ್ತಿಗೆ ಕಾಮಗಾರಿಗಳ ಮೇಲುಸ್ತುವಾರಿ ನೋಡಿಕೊಳ್ಳಲು ಹುಲುಸೆ ಗ್ರಾಮದ ಭರತ್ ಎಂಬುವವರನ್ನು ನೇಮಿಸಿಕೊಂಡಿದ್ದರು. 15ನೇ ಹಣಕಾಸು ಅನುದಾನದಡಿ 2 ಕಾಮಗಾರಿಗಳು ಹಾಗೂ ಇತರೆ 6 ಕಾಮಗಾರಿಗಳ ಒಟ್ಟು ಮೊತ್ತ ರೂ.14,79,700 ಮಂಜೂರು ಮಾಡಲು ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಧಾ ಹಿರೇಶ್ ರೂ. 25 ಸಾವಿರ ಬೇಡಿಕೆ ಇಟ್ಟಿದ್ದರು. ಈ ವಿಚಾರವನ್ನು ಗುತ್ತಿಗೆದಾರ ಹಮೀದ್ ಎಸ್.ಎ ಅವರಿಗೆ ಭರತ್ ತಿಳಿಸಿದ ಸಂದರ್ಭ ಅಧ್ಯಕ್ಷರ ಮೇಲೆ ಲೋಕಾಯುಕ್ತಕ್ಕೆ ದೂರು ನೀಡುವಂತೆ ಹೇಳಿದ್ದರು. ಅದರಂತೆ ಭರತ್ ಮಡಿಕೇರಿ ಲೋಕಾಯುಕ್ತ…
ಮಡಿಕೇರಿ ಅ.8 NEWS DESK : ವಿರಾಜಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ಹೆಗ್ಗಳ ಮಾರ್ಗದಲ್ಲಿ ಅ.9 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆ ವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಆರ್ಜಿ, ಬೇಟೋಳಿ, ಹೆಗ್ಗಳ, ರಾಮನಗರ, ಪೆರುಂಬಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಅ.8 NEWS DESK : ಜಿಲ್ಲೆಯ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸುವ ಕಾರ್ಯವು ಜಿಲ್ಲೆಯಾದ್ಯಂತ ನಡೆಯುತ್ತಿದೆ. ಈಗಾಗಲೇ ಗುರುತಿಸಲಾಗಿರುವ ಎಲ್ಲಾ ಮನೆಗಳಿಗೆ ಗಣತಿದಾರರು ಭೇಟಿ ನೀಡಿ, ಗಣತಿ ಕಾರ್ಯ ನಡೆಸುತ್ತಿದ್ದು, ಸಾರ್ವಜನಿಕರು ಕೂಡ ಸ್ವಯಂ ಆಗಿ ತಮ್ಮ ಮನೆಯ ಗಣತಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಸೌಲಭ್ಯ ಸಿದ್ಧಪಡಿಸಲಾಗಿದೆ. ಸಾರ್ವಜನಿಕರು https://kscbcselfdeclaration.karnataka.gov.in/ನಲ್ಲಿ ಸ್ವಯಂ ಮಾಹಿತಿ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಲಿಂಕ್‍ಅನ್ನು ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಪುಟದಲ್ಲಿ ʼನಾಗರಿಕʼ ಎಂಬುದನ್ನು ಆಯ್ಕೆ ಮಾಡಿದ್ದಲ್ಲಿ ಲಾಗಿನ್‍ನಲ್ಲಿ ಮುಂದುವರೆಯಲು ಕೋರಲಾಗುತ್ತದೆ. ನಂತರದಲ್ಲಿ ತಮ್ಮ ಮೊಬೈಲ್ ಸಂಖ್ಯೆ ನೀಡಿದ್ದಲ್ಲಿ, ಒಟಿಪಿ ಬರಲಿದ್ದು, ಅದನ್ನು ದಾಖಲು ಮಾಡಬೇಕಿದೆ. ನಂತರ ತೆರೆಯುವ ಪುಟದಲ್ಲಿ ತಮ್ಮ ಸಮೀಕ್ಷೆಯ ಸ್ಥಿತಿಗತಿ ಕುರಿತಂತೆ ನಿಮ್ಮ ಸಮೀಕ್ಷೆ ಪೂರ್ಣಗೊಂಡಿದೆ ಅಥವಾ ಬಾಕಿ ಎಂದು ಕಾಣಬಹುದಾಗಿದ್ದು, ಇದುವರೆಗೆ ಸಮೀಕ್ಷೆ ನಡೆಯದೇ ಬಾಕಿ ಇದ್ದಲ್ಲಿ, ಇನ್ನೂ ಯಾವುದೇ ಕುಟುಂಬ ಸದಸ್ಯರನ್ನು ಸೇರಿಸಿಲ್ಲ ಫಾರ್ಮ್ ಭರ್ತಿ ಮಾಡಲು ಆರಂಭಿಸಿ ಎಂಬ ಸಂದೇಶ…
ಮಡಿಕೇರಿ ಅ.8 NEWS DESK : ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ರೂಢಿ ಸಂಪ್ರದಾಯದಂತೆ, “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ” ಜಾತ್ರೆಯು ಅ.17 ರಂದು ಮಧ್ಯಾಹ್ನ 1.44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ತೀರ್ಥರೂಪಿಣಿಯಾಗಿ ಆಗಮಿಸುತ್ತಾಳೆ. ಈ ವರ್ಷ ಮಧ್ಯಾಹ್ನ ಸಮಯದಲ್ಲಿ ತೀರ್ಥೋದ್ಭವವು ಜರುಗಲಿರುವುದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾವೇರಿ ಮಾತೆಯ ದರ್ಶನವನ್ನು ಪಡೆಯಲು ಆಗಮಿಸುವ ನಿರೀಕ್ಷೆಯಿರುವುದರಿಂದ, ಜಿಲ್ಲಾಡಳಿತದಿಂದ ಪೂರ್ವ ಸಿದ್ಧತೆ ಕೈಗೊಳ್ಳುತ್ತಿದೆ. ಜಾತ್ರಾ ಮಹೋತ್ಸದ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮ ನಡೆಸಲು ಹಾಗೂ ಇತರೆ ನಿರ್ವಹಣೆಗಾಗಿ ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ರೂ.2 ಕೋಟಿ ಅನುದಾನವನ್ನು ಹಾಗೂ ಜಾತ್ರೆಗೆ ಬರುವ ಭಕ್ತಾಧಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಸರ್ಕಾರದ ವತಿಯಿಂದ ಮುಜರಾಯಿ ಇಲಾಖೆಯ ಮೂಲಕ ರೂ.75 ಲಕ್ಷಗಳ ಅನುದಾನವನ್ನು ಮಂಜೂರು ಮಾಡಿ ಆದೇಶಿಸಿದೆ. ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಿಗೆ ವಿದ್ಯುತ್ ದೀಪಾಲಂಕಾರ, ಬ್ಯಾರಿಕೇಡ್ ಅಳವಡಿಕೆ, ವೇದಿಕೆ ನಿರ್ಮಾಣ, ಮಳೆಯಿಂದ ರಕ್ಷಣೆಗಾಗಿ ಮೆಟಲ್ ಶೀಟ್, ಪೆಂಡಾಲ್‍ಗಳು, ಹೂವಿನ ಅಲಂಕಾರ,…
ಮಡಿಕೇರಿ ಅ.8 NEWS DESK : ಕೊಯವ ಸಮಾಜದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸುವ ಕಾರ್ಯಕ್ರಮ ಮೂರ್ನಾಡಿನ ಪ್ರಗತಿ ಕಟ್ಟಡದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಇಬ್ಬರು ಸಾಧಕರನ್ನು ಸನ್ಮಾನಿಸಿ, ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಸೇನಾಧಿಕಾರಿ ಹಾಗೂ ನಿವೃತ್ತ ಪೊಲೀಸ್ ಉಪಠಾಣಾಧಿಕಾರಿ ಜಿಲ್ಲಂಡ ಸನ್ನು ಚೀಯಣ್ಣ ಅವರು, ಭಾರತೀಯ ಸೇನೆಯಲ್ಲಿ ಸೇವೆ ಮಾಡುವುದು ಮಹಾಭಾಗ್ಯದ ಕೆಲಸ. ಶಿಸ್ತು, ಸಮಯ ಪಾಲನೆ, ನಿಷ್ಠೆ, ಪ್ರಾಮಾಣಿಕತೆ, ದೇಶಾಭಿಮಾನವನ್ನು ಮೈಗೂಡಿಸಿಕೊಂಡು ಸೇವೆ ಮಾಡಿದರೆ ಮಾತ್ರ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದರು. ಯುವ ಪೀಳಿಗೆ ಉನ್ನತ ಶಿಕ್ಷಣ ಪಡೆದು ಸೇನೆಯಲ್ಲಿ ಸೇವೆ ಸಲ್ಲಿಸಿದರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಮತ್ತು ಇರುವ ಅವಕಾಶಗಳನ್ನು ಬಳಸಿಕೊಂಡು ಸೈನಿಕರಿಂದ ಅಧಿಕಾರಿಯವರೆಗೆ ಬಡ್ತಿ ಹೊಂದಲು ಸಾಧ್ಯವಿದೆ ಎಂದು ಸಲಹೆ ನೀಡಿದರು. ನಿವೃತ್ತ ಎಎಸ್‍ಐ ನೇಂದುಮಂಡ ಪ್ರಕಾಶ್ ಮಾತನಾಡಿ, ದೇಶದ ಗಡಿಯ ಭದ್ರತೆ ಎಷ್ಟು ಮುಖ್ಯವೋ, ದೇಶದ ಆಂತರಿಕ ಭದ್ರತೆಯೂ ಅಷ್ಟೇ ಮುಖ್ಯ ಎಂದು…






