ಲೇಖಕ: admin

ವಿರಾಜಪೇಟೆ ಸೆ.19 NEWS DESK : ಮಗ್ಗುಲದ ಲಿಟಲ್ ಸ್ಕಾಲರ್ಸ್ ಅಕಾಡೆಮಿ ವಿದ್ಯಾ ಸಂಸ್ಥೆಯ ವತಿಯಿಂದ ನಾಂಗಲದಲ್ಲಿ ಪುನರ್ ನವೀಕರಿಸಲಾದ ನೂತನ ಬಸ್ ತಂಗುದಾಣವನ್ನು ಉದ್ಘಾಟಿಸಿದರು. ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಆಡಳಿತ ಮಂಡಳಿಯು ತನ್ನ ಸ್ವಂತ ಖರ್ಚಿನಿಂದಲೇ ಬಸ್ ತಂಗುದಾಣವನ್ನು ಪುನರ್ ನವೀಕರಿಸಿ ಸಾರ್ವಜನಿಕ ಸೇವೆಗೆ ಒದಗಿಸಿತು. ಈ ಸಂದರ್ಭ ಮಾತನಾಡಿದ ಶ್ರವಣ ಹೀನರ ಸಂಘದ ಅಧ್ಯಕ್ಷ ಜಿ.ವಿಲಿಯಮ್, ಪರಸ್ಪರ ಸಹಕಾರ ಮನೋಭಾವನೆಯು ಪ್ರತಿಯೊಬ್ಬರಲ್ಲಿಯೂ ಮೂಡಬೇಕು. ಗೌರವಯುತ ಬಾಳ್ವೆ, ಸೇವಾ ಮನೋಭಾವನೆಯಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದರು. ನಾವು ಸೇವೆಗಳನ್ನು ಮಾಡುವುದರಿಂದ ಸಮಾಜದಲ್ಲಿ ನಮ್ಮ ಪಾಲ್ಗೊಳ್ಳುವಿಕೆಯನ್ನು ವ್ಯಕ್ತಪಡಿಸಲು ಸಾಧ್ಯ ಎಂದರು. ಬಿಟ್ಟಂಗಾಲ ಗ್ರಾ.ಪಂ ಅಧ್ಯಕ್ಷರಾದ ಪ್ರಸನ್ನ ಸುಬ್ಬಯ್ಯ ಮಾತನಾಡಿ, ನಮ್ಮ ಪಂಚಾಯತ್ ವ್ಯಾಪ್ತಿಯಲ್ಲಿ ಬಸ್ ತಂಗುದಾಣವನ್ನು ಲಿಟಲ್ ಸ್ಕಾಲರ್ಸ್ ಅಕಾಡೆಮಿ ವಿದ್ಯಾ ಸಂಸ್ಥೆಯು ಸುಸಜ್ಜಿತವಾಗಿ ನವೀಕರಣಗೊಳಿಸಿದೆ. ವಿದ್ಯಾ ಸಂಸ್ಥೆಯ ಸಾಮಾಜಿಕ ಕಳಕಳಿ ಮಾದರಿಯಾಗಿದೆ  ಎಂದು ಹೇಳಿದರು. ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಹಂತದಿಂದಲೇ ವೈವಿಧ್ಯತೆಯಲ್ಲಿ ಏಕತೆ ಎನ್ನುವ ದ್ಯೇಯ ವಾಕ್ಯದೊಂದಿಗೆ ವಿದ್ಯಾಭ್ಯಾಸವನ್ನು…

Read More

ಕುಶಾಲನಗರ ಸೆ.19 NEWS DESK : ಕೊಡಗಿನ ಬಡವರ ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಗತಿಕರು ಹಾಗೂ ವಿಕಲಚೇತನ ಕುಟುಂಬವೊಂದಕ್ಕೆ ನಿರ್ಮಿಸಿಕೊಡಲು ಉದ್ದೇಶಿಸಿರುವ ನೂತನ ಮನೆ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು.  ಕುಶಾಲನಗರ ಜನತಾ ಕಾಲೊನಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ವಿಕಲಚೇತನ ಕುಟುಂಬ ನಾದ್ಯ ಎಂಬುವವರಿಗೆ ಟ್ರಸ್ಟ್ ವತಿಯಿಂದ ಸುಂದರನಗರ ಗ್ರಾಮದಲ್ಲಿ 3 ಸೆಂಟ್ ಜಾಗ ಖರೀದಿ ಮಾಡಿ ಅಂದಾಜು ರೂ.8.5 ಲಕ್ಷ ವೆಚ್ಚದಲ್ಲಿ ವಸತಿ ಭಾಗ್ಯ ಕಲ್ಪಿಸಲು ಉದ್ದೇಶಿಸಲಾಗಿದೆ. ಕೂಡಿಗೆ ಜುಮ್ಮಾ ಮಸೀದಿ ಧರ್ಮಗುರು ಹೈದರಾಲಿ ಶಾಹದಿ ಖತ್ತಿಬ್ ಹಾಗೂ ಟ್ರಸ್ಟ್ ಅಧ್ಯಕ್ಷ ಎಂ.ಹೆಚ್.ಮಹಮ್ಮದ್ ಹಾಗೂ ಪದಾಧಿಕಾರಿಗಳು ಮನೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಚಾಲನೆ ನೀಡಿದರು.  ಅಧ್ಯಕ್ಷ ಎಂ.ಹೆಚ್.ಮಹಮ್ಮದ್ ಮಾತನಾಡಿ ಕೊಡಗಿನ ಬಡವರ ಬೆಳಕು ಚಾರಿಟೇಬಲ್ ಟ್ರಸ್ಟ್ ಕಳೆದ ಅನೇಕ ವರ್ಷಗಳಿಂದ ಸಾಮಾಜಿಕ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಜಾತಿ, ಭೇದ, ಧರ್ಮ ಮರೆತು ಸಮಾಜದಲ್ಲಿ ಬಡವರ ಹಾಗೂ ನಿರ್ಗತಿಕರ ಏಳಿಗೆಗೆ ಶ್ರಮಿಸುತ್ತಿದೆ. ಬಡ ಹೆಣ್ಣು ಮಕ್ಕಳಿಗೆ ಕಲ್ಯಾಣ ಭಾಗ್ಯ, ವಸತಿ…

Read More

ಮಡಿಕೇರಿ ಸೆ.19 NEWS DESK : ಕೊಡಗು ವಿಷ್ಣು ಸೇನಾ ಸಮಿತಿ ವತಿಯಿಂದ ಸೆ.20 ರಂದು ನಟ ಡಾ.ವಿಷ್ಣುವರ್ಧನ್ ಅವರ 75ನೇ ಜನ್ಮದಿನಾಚರಣೆಯನ್ನು ಆಚರಿಸಲಾಗುವುದೆಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ನಾಗರಾಜ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಅಬ್ದುಲ್ ಕಲಾಂ ಲೇಜೌಟ್‍ನಲ್ಲಿರುವ ಜನ ವಿಕಾಸ್ ಸೇವಾ ಟ್ರಸ್ಟ್ ವೃದ್ಧಾಶ್ರಮದಲ್ಲಿ ಮಧ್ಯಾಹ್ನ 2 ಗಂಟೆಗೆ ಕಾರ್ಯಕ್ರಮ ನಡೆಯಲಿದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬ್ರಹ್ಮಗಿರಿ ವಾರಪತ್ರಿಕೆ ಸಂಪಾದಕರಾದ ಉಳ್ಳಿಯಡ ಪೂವಯ್ಯ, ಡಾಟಿ ಪೂವಯ್ಯ, ಪ್ರಮುಖರಾದ ಪಿ.ಜಿ.ಮಂಜುನಾಥ್, ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ರಫೀಕ್ (ದಾದಾ) ಪಾಲ್ಗೊಳ್ಳಲಿದ್ದಾರೆ. 5 ಸ್ಟಾರ್ ಸಿಂಗರ್ಸ್ ತಂಡದ ವತಿಯಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಆಶ್ರಮದ ವಾಸಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ವಿಷ್ಣು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ನಾಗರಾಜ್ ಮನವಿ ಮಾಡಿದರು. ಸಮಿತಿ ಅಧ್ಯಕ್ಷ ರಫೀಕ್ (ದಾದಾ) ಮಾತನಾಡಿ, ಡಾ.ವಿಷ್ಣುವರ್ಧನ್ ಅಭಿಮಾನಿಗಳ ಕಣ್ಣೊರೆಸುವ ತಂತ್ರಕ್ಕೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಲಾಗಿದೆ ಎಂದು…

Read More

ಮಡಿಕೇರಿ ಸೆ.19 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯದಲ್ಲಿ ದಸರಾ ಹಬ್ಬದ ಪ್ರಯುಕ್ತ ಸೆ.22 ರಿಂದ ಅ.2ರ ವರೆಗೆ ದೇವಿಗೆ ವಿಶೇಷ ಅಲಂಕಾರ ಪೂಜೆ ನಡೆಯಲಿದೆ ಎಂದು ದೇವಾಲಯದ ಟ್ರಸ್ಟಿ ಹಾಗೂ ಶತಮಾನೋತ್ಸವ ಕಾರ್ಯಾಧ್ಯಕ್ಷ ಸಿ.ಎಸ್.ರಂಜಿತ್ ಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ದಂಡಿನ ಮಾರಿಯಮ್ಮ ದೇವಾಲಯವು 95ನೇ ವರ್ಷದ ಅದ್ದೂರಿ ದಸರಾ ಉತ್ಸವವನ್ನು ಆಚರಿಸುತ್ತಿದ್ದು, ಹನ್ನೊಂದು ದಿನಗಳ ಕಾಲ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿದೆ ಎಂದರು. ಸೆ.22 ರಂದು ಬೆಳ್ಳಿಯ ಅಲಂಕಾರ, ಸೆ.23 ರಂದು ಪಂಚಪುಷ್ಪ ಅಂಲಕಾರ ನಡೆಯಲಿದ್ದು, ಸಂಜೆ 6 ಗಂಟೆಗೆ ದುರ್ಗಾಪೂಜೆ ಜರುಗಲಿದೆ. ಸೆ.24 ರಂದು ವಿಳ್ಯೆದೆಲೆ ಅಲಂಕಾರ, ಸೆ.25 ರಂದು ಕೊಲ್ಲೂರು ಮೂಕಾಂಬಿಕೆ ಅಲಂಕಾರ, ಸೆ.26 ರಂದು ಮಹಾಲಕ್ಷ್ಮಿ ಅಲಂಕಾರ ನಡೆಯಲಿದ್ದು, ಸಂಜೆ 6 ಗಂಟೆಗೆ ಕಲ್ಪೋಕ್ಷ ಪೂಜೆ ನೆರವೇರಲಿದೆ. ಸೆ.27 ರಂದು ಚಾಮುಂಡೇಶ್ವರಿ ಅಲಂಕಾರ ಪೂಜೆ, ಸೆ.28 ರಂದು ಗುಲಾಬಿ…

Read More

ಪುತ್ತೂರು ಸೆ.19 NEWS DESK : ಸ್ಪೋರ್ಟ್ಸ್ ಕೋಟಾದಲ್ಲಿ ಭಾರತೀಯ ರೈಲ್ವೇಯಲ್ಲಿ ಉದ್ಯೋಗವನ್ನು ಗಳಿಸಿಕೊಂಡಿರುವ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಹಿರಿಯ ವಿದ್ಯಾರ್ಥಿನಿ ಪವಿತ್ರಾ.ಜಿ ಇವರನ್ನು ಕಾಲೇಜಿನಲ್ಲಿ ಸನ್ಮಾನಿಸಲಾಯಿತು. ಟ್ರಿಪಲ್ ಜಂಪ್ ಮತ್ತು ಲಾಂಗ್ ಜಂಪ್‍ನಲ್ಲಿ ರಾಷ್ಟ್ರ ಮಟ್ಟದ ಸಾಧನೆಯನ್ನು ಮಾಡಿರುವ ಇವರು ಕಾಲೇಜಿನ ಎಂಬಿಎ ವಿಭಾಗದ ಹಿರಿಯ ವಿದ್ಯಾರ್ಥಿನಿಯಾಗಿದ್ದು, ಬೆಂಗಳೂರಿನ ನೈರುತ್ಯ ರೈಲ್ವೇ ಕೇಂದ್ರ ಕಛೇರಿಯಲ್ಲಿ ನೇಮಕಾತಿಯನ್ನು ಹೊಂದಿದ್ದಾರೆ. ಉಡುಪಿಯ ಆರ್ಯಬೆಟ್ಟುವಿನ ಗೋಪಾಲ ಕುಲಾಲ್ ಮತ್ತು ಸುನಂದ ದಂಪತಿಯ ಪುತ್ರಿಯಾಗಿರುವ ಈಕೆ ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣವನ್ನು ಪೆರ್ಡೂರಿನಲ್ಲಿ, ಪಿಯುಸಿ ಮತ್ತು ಪದವಿ ಶಿಕ್ಷಣವನ್ನು ನಿಟ್ಟೆಯಲ್ಲಿ ಪೂರೈಸಿದ್ದು, ಎಂಬಿಎ ಶಿಕ್ಷಣವನ್ನು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆಸಿದ್ದಾರೆ. ಎಂಬಿಎ ಪದವಿಯನ್ನು ಪಡೆಯುವ ಸಂದರ್ಭದಲ್ಲಿ ಕಾಲೇಜಿನಿಂದ ದೊರೆತ ಪೂರಕ ಬೆಂಬಲವನ್ನು ಸಂಪೂರ್ಣವಾಗಿ ಬಳಸಿಕೊಂಡ ಇವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಅಂತರ್ಕಾಲೇಜು ಕ್ರೀಡಾಕೂಟದಲ್ಲಿ ಹೊಸ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ, ರಾಜ್ಯಮಟ್ಟದ ದಸರಾ…

Read More

ಕುಶಾಲನಗರ ಸೆ.19 NEWS DESK :  ಕುಶಾಲನಗರ ವ್ಯಾಪ್ತಿಯಲ್ಲಿ 15, 20 ವರ್ಷಗಳ ಹಳೆಯ ವಾಣಿಜ್ಯ ಕಟ್ಟಡಗಳಿಗೆ ಕಾರ್ಮಿಕ ಇಲಾಖೆಯಿಂದ ನೋಟಿಸ್ ನೀಡುತ್ತಿರುವುದು ತಪ್ಪು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ನ ಅಧ್ಯಕ್ಷ ಕೆ.ಎಸ್.ನಾಗೇಶ್ ನೇತೃತ್ವದಲ್ಲಿ ಮನವಿ ನೀಡಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರೆದಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದ ಚೇಂಬರ್ ಪ್ರತಿನಿಧಿಗಳು, ಸ್ಥಳೀಯ ಪಂಚಾಯಿತಿ ಕಟ್ಟಡ ನಿರ್ಮಾಣ ಪರವಾನಗಿ ನೀಡುವಾಗ ಕಾರ್ಮಿಕ ಸೆಸ್ ಪಡೆದಿರುತ್ತಾರೆ. ಕಾರ್ಮಿಕ ಇಲಾಖೆ ಪಂಚಾಯಿತಿಯಿಂದ ಸಂಗ್ರಹಿಸಲಾದ ಸೆಸ್ ಹಣವನ್ನು ಪಡೆಯಬೇಕು. ಅದು ಬಿಟ್ಟು ಮಾಲೀಕರಿಗೆ ನೋಟಿಸ್ ನೀಡಿ ಆತಂಕದ ವಾತಾವರಣ ಸೃಷ್ಟಿಯಾಗುತ್ತಿದೆ. ಇದನ್ನು ತಪ್ಪಿಸಲು ರಾಜ್ಯದ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ, ಜನರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಇರಲು ಸೂಚಿಸಿದರು. ಪ್ರತಿ 45 ದಿನಗಳಿಗೆ ಒಮ್ಮೆ ಸಂಘ, ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಆಗಬೇಕಿರುವ ಕೆಲಸ ಕಾರ್ಯಗಳ ಚರ್ಚಿಸಿ…

Read More

ಮಡಿಕೇರಿ NEWS DESK ಸೆ.19 : ಮಡಿಕೇರಿ ನಗರಸಭೆಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಕಡತಗಳ ವಿಲೇವಾರಿ ವಿಳಂಬವಾಗುತ್ತಿರುವ ಕುರಿತು ನಗರಸಭೆ ವಿರುದ್ಧ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿ ಬಂದಿರುವ ಹಿನ್ನೆಲೆ ಲೋಕಾಯುಕ್ತ ಡಿವೈಎಸ್ಪಿ ದಿನಕರ್ ಶೆಟ್ಟಿ ಅವರ ನೇತೃತ್ವದ ತಂಡ ಇಂದು ಬೆಳಿಗ್ಗೆ ಭೇಟಿ ನೀಡಿತು. ಕಡತಗಳ ಪರಿಶೀಲನೆಯೊಂದಿಗೆ ನಗರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿಚಾರಣೆಯನ್ನು ಕೂಡ ಮಾಡಲಾಗುತ್ತಿದೆ. ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

Read More

ಮಡಿಕೇರಿ ಸೆ.19 NEWS DESK : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ ಸಹಯೋಗದೊಂದಿಗೆ ಕುಶಾಲನಗರ ತಾಲೂಕಿನ ಚೆಟ್ಟಳ್ಳಿ ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆನರಾ ಬ್ಯಾಂಕ್ ವ್ಯವಸ್ಥಾಪಕ ವಿಷ್ಣು ಅವರು, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು. ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು ವಾರ್ಷಿಕ 20ರೂ ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 200000ರೂ ಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ವಾರ್ಷಿಕವಾಗಿ 436 ರೂ.ಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ 200000 ರೂ.ಗಳ ವಿಮಾಮೊತ್ತ ಸಿಗುವುದಾಗಿ ತಿಳಿಸಿದರು. ಎರಡನ್ನೂ ಮಾಡಿಸಿಕೊಂಡಲ್ಲಿ 400000 ರೂ.ಗಳ ವರೆಗಿನ ವಿಮಾಮೊತ್ತ ಸಿಗುವುದಾಗಿ ಮಾಹಿತಿ ನೀಡಿದರು.…

Read More

ವಿರಾಜಪೇಟೆ ಸೆ.19 NEWS DESK : ಜಿಲ್ಲೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ವಿರಾಜಪೇಟೆಯ ಸೆಂಟ್ ಆನ್ಸ್ ಕಾಲೇಜಿನಲ್ಲಿ ಎಂ. ಕಾಂ. ಸ್ನಾತಕೋತ್ತರ ವಿಭಾಗಕ್ಕೆ 2025 -26ನೇ ಸಾಲಿಗೆ ಪ್ರವೇಶಾತಿ ಆರಂಭವಾಗಿದೆ. ನುರಿತ ಉಪನ್ಯಾಸಕರು, ಸುಸಜ್ಜಿತ ಕೊಠಡಿ, ಐಸಿಟಿ ತರಗತಿ, ಗ್ರಂಥಾಲಯ ವ್ಯವಸ್ಥೆ, ವೈಫೈ ವ್ಯವಸ್ಥೆ, ಕೆ ಸೆಟ್ ಹಾಗೂ ನೆಟ್ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಜೊತೆಗೆ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ವಿಚಾರ ಮಂಡನೆ, ಇಂಡಸ್ಟ್ರಿಯಲ್ ವಿಸಿಟ್ ಹಾಗೂ ಇಂಟರ್ನ್ ಷಿಪ್, ಬೋಧನಾ ಕೌಶಲ್ಯ ತರಬೇತಿ, ಸೆಮಿನಾರ್, ಫೆಸ್ಟ್ ಗಳಲ್ಲಿ ಪಾಲ್ಗೊಳ್ಳುವಿಕೆ ಹಾಗೂ ಪ್ರಾಯೋಗಿಕ ತರಬೇತಿಗಳಿಗೆ ಹೆಚ್ಚಿನ ಒತ್ತನ್ನು ನೀಡಲಾಗುತ್ತಿದೆ. ಈ ಹಿಂದಿನ ಸಾಲಿನ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳಲ್ಲಿ ಅತ್ಯುನ್ನತ ಶ್ರೇಣಿಯನ್ನು ಪಡೆಯುವುದರ ಜೊತೆಗೆ ಪ್ರತಿ ಸೆಮಿಸ್ಟರ್ ಗಳಲ್ಲೂ ಶೇ.100 ಫಲಿತಾಂಶ ದಾಖಲಾಗಿರುತ್ತದೆ. ಶಿಕ್ಷಣ ಮಾತ್ರವಲ್ಲದೆ ಉದ್ಯೋಗ ಘಟಕದ ಮೂಲಕ ಕ್ಯಾಂಪಸ್ ಸೆಲೆಕ್ಷನ್, ಸಾಂಸ್ಕೃತಿಕ ಚಟುವಟಿಕೆ, ಶೈಕ್ಷಣಿಕ ಪ್ರವಾಸ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತಿದೆ.…

Read More

ಮಡಿಕೇರಿ ಸೆ.18 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಕ್ಕಳು ಮತ್ತು ಯುವಜನರ ಕಲಾಪ್ರತಿಭೆ ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾ ನೈಪುಣ್ಯ ವೃದ್ಧಿಗೊಳಿಸುವಂತೆ ಪ್ರೋತ್ಸಾಹಿಸಲು ಕಲಾ ಪ್ರತಿಭೋತ್ಸವ ರೂಪಿಸಿದೆ. ಈ ಉತ್ಸವವನ್ನು ದಿನಾಂಕ: 09-10-2025 ಹಾಗೂ 10-10-2025 ರಂದು ಮಡಿಕೇರಿಯ ಗಾಂಧಿ ಭವನದಲ್ಲಿ ನಡೆಸಲಾಗುವುದು.   ಬಾಲಪ್ರತಿಭೆ/ಕಿಶೋರ ಪ್ರತಿಭೆ/ಯುವಪ್ರತಿಭೆ ಎಂಬ ಶೀರ್ಷಿಕೆಯಡಿ ಮೂರು ವಿಭಾಗಗಳಲ್ಲಿ ಸ್ಪರ್ಧಾ ರೂಪದಲ್ಲಿ  ಏರ್ಪಡಿಸಲಾಗುವುದು. ಈ ಸ್ಪರ್ಧೆಗಳನ್ನು ದಿನಾಂಕ: 09-10-2025ರಂದು ಬಾಲಪ್ರತಿಭೆ/ ಕಿಶೋರ ಪ್ರತಿಭೆ ಹಾಗೂ ದಿನಾಂಕ: 10-10-2025 ರಂದು ಯುವ ಪ್ರತಿಭೆ/ ಸಮೂಹ ಸ್ಪರ್ಧೆಗಳಿಗೆ ಸ್ಪರ್ಧಾರೂಪದಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದವರಲ್ಲಿ ಪ್ರಥಮ ಸ್ಥಾನ ಪಡೆದವರನ್ನು ವಲಯ ಮಟ್ಟದ ಸ್ಪರ್ಧೆ ಆಯ್ಕೆ ಮಾಡಿ ಕಳುಹಿಸಿಕೊಡಲಾಗುವುದು. :: ಅರ್ಹತೆ ::  ಬಾಲ ಪ್ರತಿಭೆ :: ಬಾಲ ಪ್ರತಿಭೆಯ ವಿಭಾಗದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಕನಿಷ್ಠ 8 ವರ್ಷ ತುಂಬಿರಬೇಕು. ಹಾಗೂ 14…

Read More