ಮಡಿಕೇರಿ NEWS DESK ಅ.7 : ಸುಪ್ರೀಂಕೋರ್ಟ್ ಆವರಣದಲ್ಲೇ ಹಿರಿಯ ವಕೀಲರೊಬ್ಬರು ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರ ವಿರುದ್ಧ ಪಾದರಕ್ಷೆ ಎಸೆಯಲು ಪ್ರಯತ್ನಿಸಿದ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ಕೊಡಗು ಜಿಲ್ಲಾ ಮಾನವ ಬಂಧುತ್ವ ವೇದಿಕೆ ಹಾಗೂ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕ ತಿಳಿಸಿದೆ. ಜಂಟಿಯಾಗಿ ಪತ್ರಿಕಾ ಪ್ರಕಟಣೆ ನೀಡಿರುವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ಜೆ.ಎಲ್.ಜನಾರ್ಧನ್ ಹಾಗೂ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಎಂ.ಎಸ್.ವೀರೇಂದ್ರ ಅವರು ಮನುವಾದಿ ಮತ್ತು ಪ್ರಜ್ಞಾಹೀನ ಮನೋಸ್ಥಿತಿಯ ವ್ಯಕ್ತಿಯಿಂದ ಈ ಕೃತ್ಯ ನಡೆದಿದೆ ಎಂದು ಆರೋಪಿಸಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರು ಸಾಮಾಜಿಕ ಪ್ರತಿರೋಧ ಎದುರಿಸಿ ಸತತ ಪರಿಶ್ರಮ, ಅರ್ಹತೆ ಮತ್ತು ಸಾಧನೆಯ ಮೂಲಕ ಸಂವಿಧಾನಬದ್ಧವಾದ ಉನ್ನತ ಸ್ಥಾನಕ್ಕೆ ಏರಿದ್ದಾರೆ. ಇದನ್ನು ಸಹಿಸದ ವ್ಯಕ್ತಿ ಪಾದರಕ್ಷೆ ಎಸೆಯುವ ಪ್ರಯತ್ನ ಮಾಡಿದ್ದಾನೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದ್ದರೂ ಅಸಹನೆ ಭದ್ರವಾಗಿ ಉಳಿದಿರುವುದಕ್ಕೆ ಈ ಘಟನೆ…
ಲೇಖಕ: admin
ಮಡಿಕೇರಿ NEWS DESK ಅ.7 : ಚೇರಂಬಾಣೆಯ ಬೇಂಗ್ ನಾಡ್ ಕೊಡವ ಸಮಾಜದ ವತಿಯಿಂದ ಕೈಲ್ ಪೊಳ್ದ್ ಒತ್ತೋರ್ಮೆ ಕೂಟ ಸಂಭ್ರಮದಿಂದ ನಡೆಯಿತು. ಸಮಾಜದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೇಂಗ್ ನಾಡ್ ಕೊಡವ ಸಮಾಜದ ಅಧ್ಯಕ್ಷ ಬಾಚರಣಿಯಂಡ ದಿನೇಶ್ ಗಣಪತಿ ಅವರು ಕೊಡವ ಸಂಸ್ಕೃತಿ, ಹಬ್ಬಗಳು, ಆಚಾರ ವಿಚಾರ, ಪರಂಪರೆ, ಪದ್ಧತಿಯ ಉಳಿವಿಗೆ ಕೈಜೋಡಿಸುವಂತೆ ಕರೆ ನೀಡಿದರು. ಬೆಂಗಳೂರು ಬೇಂಗ್ ನಾಡ್ ಕೊಡವ ಒಕ್ಕೂಟದ ಅಧ್ಯಕ್ಷ ಕೇಕಡ ರವಿ ದೇವಯ್ಯ ಅವರು ಮಾತನಾಡಿದರು. ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯನ್ನು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕರ್ನಾಟಕ ಕೊಡವ ಸಾಹಿತ್ಯ ಅಕಾಡಮಿಯ ನಿರ್ದೇಶಕ ನಾಪಂಡ ಗಣೇಶ್ ಅವರು ತೆಂಗಿನಕಾಯಿಗೆ ಗುಂಡು ಹೊಡೆಯುವ ಮೂಲಕ ಉದ್ಘಾಟಿಸಿದರು. ವಿವಿಧ ಆಟೋಟ ಸ್ಪರ್ಧೆಗಳು ಗಮನ ಸೆಳೆದವು. ಪಟ್ಟಮಾಡ ಕುಟುಂಬದ ಹಿರಿಯರಾದ ಸೀತಮ್ಮ ಗಣಪತಿ ಉಪಸ್ಥಿತರಿದ್ದರು. ಪಟ್ಟಮಾಡ ವರುಣಿಕ ಪೊನ್ನಮ್ಮ ಪ್ರಾರ್ಥಿಸಿ, ಸಮಾಜದ ಕಾರ್ಯದರ್ಶಿ ಕೇಕಡ ರೋಮಿ ಮೊಣ್ಣಪ್ಪ ಸ್ವಾಗತಿಸಿ, ತೇಲಪಂಡ ಲಕ್ಷ್ಮೀ ಪೆಮ್ಮಯ್ಯ ವಂದಿಸಿದರು. ಜಂಟಿ…
ಮಡಿಕೇರಿ ಅ.7 NEWS DESK : ಚಲನಚಿತ್ರ ಕ್ಷೇತ್ರದಲ್ಲಿ ಸ್ಥಳೀಯ ಕಲಾವಿದರು ದೊಡ್ಡ ಮಟ್ಟದ ಸಾಧನೆ ಮಾಡುತ್ತಿದ್ದು, ಇದು ಶ್ಲಾಘನೀಯ. ಕಲಾವಿದರಿಗೆ ಪ್ರೋತ್ಸಾಹ ಮತ್ತು ಉತ್ತೇಜನ ನೀಡುವ ಅಗತ್ಯವಿದೆ ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ತಿಳಿಸಿದ್ದಾರೆ. ಕೊಡಗು ಕಲಾವಿದರ ಸಂಘ ಮತ್ತು ಗೋಣಿಕೊಪ್ಪ ಕಾವೇರಿ ಪೊಮ್ಮಕ್ಕಡ ಕೂಟದ ವತಿಯಿಂದ ರಾಷ್ಟ್ರ ಪ್ರಶಸ್ತಿ ವಿಜೇತ ‘ಕಂದೀಲು’ ಕನ್ನಡ ಸಿನಿಮಾದ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಹಾಗೂ ನಿರ್ಮಾಪಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿರಾಜಪೇಟೆ ಕೊಡವ ಸಮಾಜದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಸದರು ಪ್ರತಿಯೊಬ್ಬರ ಜೀವನಕ್ಕೆ ಅರ್ಥ ಸಿಗುವುದು ಕಲೆಯಿಂದ, ಕಲೆಯ ಬೆಳವಣಿಗೆಗೆ ಶ್ರಮಿಸುವ ಕಲಾವಿದರನ್ನು ಸನ್ಮಾನಿಸಿ ಪ್ರೋತ್ಸಾಹಿಸುವುದು ಅತ್ಯಂತ ಮಹತ್ವದ ಕೆಲಸವಾಗಿದೆ ಎಂದರು. ಚಲನಚಿತ್ರ ಕ್ಷೇತ್ರದಲ್ಲಿ ಭಾರತೀಯರ ಕೊಡುಗೆ ಮಹತ್ವದ್ದಾಗಿದೆ. ಹಿಂದಿನ ಕಾಲದಲ್ಲಿ ಚಲನಚಿತ್ರಗಳಿಗೆ ಅಷ್ಟೊಂದು ಪ್ರೋತ್ಸಾಹ ಇರಲಿಲ್ಲ. ಆದರೆ ಇಂದು ಸ್ಥಳೀಯ ಕಲಾವಿದರು ದೊಡ್ಡಮಟ್ಟದಲ್ಲಿ ಸಾಧನೆ ಮಾಡುತ್ತಿದ್ದಾರೆ. ಸಾಧನೆಗೆ ಹಾಗೂ ಸಾಧಿಸಿದ…
ಬೆಂಗಳೂರು ಅ.7 NEWS DESK : ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನೆ ಸಭೆಯು ವಿಧಾನಸೌಧದ ಸಭಾಂಗಣದಲ್ಲಿ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಸರಕಾರದ ಅಧೀನ ಕಾರ್ಯದರ್ಶಿಗಳು, ಹಿಂದುಳಿದ ವರ್ಗಗಳ ಅಧ್ಯಕ್ಷರು, ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಅ.7 NEWS DESK : ದಿಡ್ಡಳ್ಳಿ ಹೋರಾಟಗಾರ್ತಿ ವಿರಾಜಪೇಟೆ ತಾಲ್ಲೂಕಿನ ಚೆನ್ನಯ್ಯನಕೋಟೆ ಬಳಿಯ ದಿಡ್ಡಳ್ಳಿ ಗ್ರಾಮದ ಜೆ.ಕೆ.ಮುತ್ತಮ್ಮ ಅವರಿಗೆ ರಾಜ್ಯ ಮಟ್ಟದ ವಾಲ್ಮೀಕಿ ಪ್ರಶಸ್ತಿ ಲಭಿಸಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಕ್ವಿಂಟ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜೆ.ಕೆ.ಮುತ್ತಮ್ಮ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅಭಿನಂದಿಸಿದರು.
ವಿರಾಜಪೇಟೆ ಅ.7 NEWS DESK : 2025-26 ನೇ ಸಾಲಿನ ಪಿಯು ಕಾಲೇಜ್ ವಿಭಾಗದ ಬಾಲಕರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಪಾಲಿಬೆಟ್ಟ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಆಯ್ಕೆಯಾಗಿದೆ. ತಾಲ್ಲೂಕು ಮಟ್ಟದ ಪಂದ್ಯಾವಳಿಯಲ್ಲಿ ಲಯನ್ಸ್ ಪಿಯು ಕಾಲೇಜ್ ಕಳತ್ಮಾಡ್, ಸೆಂಟೆನ್ಸ್ ಪಿಯು ಕಾಲೇಜ್ ವಿರಾಜಪೇಟೆ, ಸಿಐಟಿ ಪಿಯು ಕಾಲೇಜ್ ಹಳ್ಳಿಗಟ್ಟು ಹಾಗೂ ಕಾವೇರಿ ಕಾಲೇಜ್ ಗೋಣಿಕೊಪ್ಪಲನ್ನ ಮಣಿಸಿ ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ಸೋಮವಾರಪೇಟೆ ತಾಲ್ಲೂಕಿನ ಹೆಬ್ಬಾಲೆ ಪಿಯು ಕಾಲೇಜಿನ ಪರಾಬಾಹುಗೊಳಿಸಿ ಈ ತಿಂಗಳ ಕೊನೆಯಲ್ಲಿ ರಾಮನಗರ ಜಿಲ್ಲೆಯಲ್ಲಿ ನಡೆಯುವ ರಾಜ್ಯ ಮಟ್ಟದ ಪಂದ್ಯಾವಳಿಗೆ ಪಾಲಿಬೆಟ್ಟ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಕೆ.ಕೆ.ಶೈನ ತಿಳಿಸಿದರು. ತಂಡದಲ್ಲಿ ವಿದ್ಯಾರ್ಥಿಗಳಾದ ರೋಶನ್, ಜಾಕ್ ಕುಮಾರ್ ಬೆಕ್, ಚಿರಂಜೀವಿ, ಮನೀಶ್, ಯಶ್ವಂತ್, ಸಜನ್, ಕದಿರ್ವೆಲ್, ರವಿಕುಮಾರ್, ಸಜೀವ, ಪವನ್ ಹಾಗೂ ವಿಷ್ಣು ಟಿ.ವಿ. ಇದ್ದರು.
ಮಡಿಕೇರಿ NEWS DESK ಅ.7 : ಕೇಂದ್ರ ಸರಕಾರದ ಮೂಲಕ 2026 ಅಕ್ಟೋಬರ್ ನಿಂದ ನಡೆಯಲಿರುವ ಭಾರತ ದೇಶದ 16ನೇ ರಾಷ್ಟ್ರೀಯ ಜನಗಣತಿಯ ಸಂದರ್ಭ ಎಲ್ಲಾ ಮೂರು ಕಾಲಂನಲ್ಲಿ “ಕೊಡವ” ಎಂದೇ ಬರೆಸಬೇಕೆಂಬ ಕರೆಯೂ ಸೇರಿದಂತೆ ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಅ.11 ರಂದು ನೂರೊಕ್ಕ ನಾಡಿನ ಚೆಟ್ಟಳ್ಳಿಯಲ್ಲಿ 15ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್‌ಟಿ ವರ್ಗೀಕರಣವು 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು. ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಲಾಗುವುದು ಎಂದು ಹೇಳಿದ್ದಾರೆ. ಶನಿವಾರ ಬೆಳಿಗ್ಗೆ…
ಮಡಿಕೇರಿ NEWS DESK ಅ.7 : ವಿದ್ಯಾರ್ಥಿಗಳು ಗುರು ಸಮಾನರಾದ ಮಹರ್ಷಿ ವಾಲ್ಮೀಕಿ ಅವರ ಮೌಲ್ಯಯುತ ಗುಣಲಕ್ಷಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಪ್ರಗತಿ ಸಾಧಿಸಬೇಕೆಂದು ಅರ್ಥಶಾಸ್ತç ವಿಭಾಗದ ಮುಖ್ಯಸ್ಥ ಪ್ರೊ.ಈ.ತಿಪ್ಪೇಸ್ವಾಮಿ ಕರೆ ನೀಡಿದ್ದಾರೆ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣಕಾರರಾಗಿ ಪಾಲ್ಗೊಂಡು ಮಾತನಾಡಿದ ಅವರು ಮಹರ್ಷಿ ವಾಲ್ಮೀಕಿ ರಾಮಾಯಣದ ಮೂಲಕ ಸತ್ಯ ಧರ್ಮ ಆದರ್ಶ ಜೀವನದ ಪಾಠವನ್ನು ನೀಡಿದರು ಎಂದರು. ಮೌಲ್ಯಯುತ ಗುಣಲಕ್ಷಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದ ವಾಲ್ಮೀಕಿ ಅವರು ಮಹಿಳಾ ಸಬಲೀಕರಣದ ಬಗ್ಗೆ ಆಸಕ್ತಿ ಹೊಂದಿದ್ದರು. ಲವಕುಶರುಗಳಿಗೆ ಮಾದರಿ ಗುರುಗಳಾಗಿದ್ದ ವಾಲ್ಮೀಕಿ ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ವಾಲ್ಮೀಕಿ ಜೀವನ ಚರಿತ್ರೆ ಮತ್ತು ಅವರ ಅನೇಕ ಆಯಾಮಗಳನ್ನು ಪ್ರೊ.ಈ.ತಿಪ್ಪೇಸ್ವಾಮಿ ಅವರು ವಿದ್ಯಾರ್ಥಿಗಳಿಗೆ ಪರಿಚಯಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಫೀ.ಮಾ.ಕಾರ್ಯಪ್ಪ ಕಾಲೇಜ್ ನ ಪ್ರಬಾರ ಪ್ರಾಂಶುಪಾಲ ಪ್ರೊ.ಶ್ರೀಧರ್ ಆರ್.ಹೆಗಡೆ ಅವರು ಮಹರ್ಷಿ ವಾಲ್ಮೀಕಿ ಅವರ ಚಿಂತನೆಗಳು…
ಮಡಿಕೇರಿ ಅ.6 NEWS DESK : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಅ.7 ರಂದು ಸಂಜೆ 4 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸಿ, “ಸಾಮೂಹಿಕ ಸತ್ಯನಾರಾಯಣ” ಪೂಜೆಯನ್ನು ಯಶಸ್ವಿಗೊಳಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಅವರು ಕೋರಿದ್ದಾರೆ.
ಮೈಸೂರು ಅ.6 NEWS DESK : ಇತ್ತೀಚೆಗೆ ನಿಧನರಾದ ಸಾರಸ್ವತ ಲೋಕದ ಧ್ರುವತಾರೆ ಡಾ. ಎಸ್.ಎಲ್. ಭೈರಪ್ಪನವರ ನಿವಾಸಕ್ಕೆ ಮೈಸೂರು-ಕೊಡಗು ಸಂಸದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ, ಪತ್ನಿ, ಪುತ್ರರಿಗೆ ಸಾಂತ್ವನ ಹೇಳಿದರು. ಮೈಸೂರಿನ ಕುವೆಂಪು ನಗರದಲ್ಲಿರುವ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ ಸಂಸದ ಯದುವೀರ್, ಭೈರಪ್ಪ ಅವರ ಪತ್ನಿ ಸರಸ್ವತಮ್ಮ ಹಾಗೂ ಪುತ್ರ ರವಿಶಂಕರ್‌ರೊಂದಿಗೆ ಸಂವಾದ ನಡೆಸಿದರು. ಇದೇ ಸಂದರ್ಭದಲ್ಲಿ ಸಾಂತ್ವನ ಕೂಡ ಹೇಳಿದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್ ಒಡೆಯರ್, ದಸರಾ ಹಾಗೂ ಕೆಲವು ಧಾರ್ಮಿಕ ವಿಧಿ-ವಿಧಾನಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ನಮ್ಮ ಮೈಸೂರಿನ ಸಾಹಿತ್ಯ ರತ್ನ ಡಾ. ಎಸ್.ಎಲ್. ಭೈರಪ್ಪ ಅವರ ನಿವಾಸಕ್ಕೆ ತೆರಳಲು ಸಾಧ್ಯವಾಗಿರಲಿಲ್ಲ. ಈಗ ಎಲ್ಲ ಪ್ರಕ್ರಿಯೆ ಪೂರ್ಣಗೊಂಡ ನಂತರ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ತಿಳಿಸಿದ್ದೇವೆ ಎಂದು ಹೇಳಿದ್ದಾರೆ. ಕರ್ನಾಟಕಕ್ಕೆ ಮತ್ತು ವಿಶೇಷವಾಗಿ ಮೈಸೂರು ಭಾಗಕ್ಕೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರಕಿಸಿಕೊಟ್ಟಿರುವ ಎಸ್.ಎಲ್. ಭೈರಪ್ಪನವರಿಗೆ…






