ಮಡಿಕೇರಿ ಅ.6 NEWS DESK : ರಾಜ್ಯ ಸರ್ಕಾರದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭಾಗವಹಿಸಿ, ತಮ್ಮ ವಿವರಗಳನ್ನು ದಾಖಲೀಕರಣಗೊಳಿಸಿದರು.
ಲೇಖಕ: admin
ವಿರಾಜಪೇಟೆ ಅ.6 : NEWS DESK : ಜಿಲ್ಲೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ವಿರಾಜಪೇಟೆಯ ಸೆಂಟ್ ಆನ್ಸ್ ಕಾಲೇಜಿನಲ್ಲಿ ಸ್ನಾತಕೋತ್ತರ ವಿಭಾಗಕ್ಕೆ 2025 -26ನೇ ಸಾಲಿಗೆ ಪ್ರವೇಶಾತಿ ಆರಂಭವಾಗಿದೆ. ನುರಿತ ಉಪನ್ಯಾಸಕರು, ಸುಸಜ್ಜಿತ ಕೊಠಡಿ, ಐಸಿಟಿ ತರಗತಿ, ಗ್ರಂಥಾಲಯ ವ್ಯವಸ್ಥೆ, ವೈಫೈ ವ್ಯವಸ್ಥೆ, ಕೆ ಸೆಟ್ ಹಾಗೂ ನೆಟ್ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಜೊತೆಗೆ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ವಿಚಾರ ಮಂಡನೆ, ಇಂಡಸ್ಟ್ರಿಯಲ್ ವಿಸಿಟ್ ಹಾಗೂ ಇಂಟರ್ನ್ ಷಿಪ್, ಬೋಧನಾ ಕೌಶಲ್ಯ ತರಬೇತಿ, ಸೆಮಿನಾರ್, ಫೆಸ್ಟ್ ಗಳಲ್ಲಿ ಪಾಲ್ಗೊಳ್ಳುವಿಕೆ ಹಾಗೂ ಪ್ರಾಯೋಗಿಕ ತರಬೇತಿಗಳಿಗೆ ಹೆಚ್ಚಿನ ಒತ್ತನ್ನು ನೀಡಲಾಗುತ್ತಿದೆ. ಈ ಹಿಂದಿನ ಸಾಲಿನ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳಲ್ಲಿ ಅತ್ಯುನ್ನತ ಶ್ರೇಣಿಯನ್ನು ಪಡೆಯುವುದರ ಜೊತೆಗೆ ಪ್ರತಿ ಸೆಮಿಸ್ಟರ್ ಗಳಲ್ಲೂ ಶೇ.100 ಫಲಿತಾಂಶ ದಾಖಲಾಗಿರುತ್ತದೆ. ಶಿಕ್ಷಣ ಮಾತ್ರವಲ್ಲದೆ ಉದ್ಯೋಗ ಘಟಕದ ಮೂಲಕ ಕ್ಯಾಂಪಸ್ ಸೆಲೆಕ್ಷನ್, ಸಾಂಸ್ಕೃತಿಕ ಚಟುವಟಿಕೆ, ಶೈಕ್ಷಣಿಕ ಪ್ರವಾಸ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತಿದೆ. ಜೊತೆಗೆ ಗ್ರಾಮೀಣ…
ಮೂರ್ನಾಡು ಅ.6 NEWS DESK : ಮೂರ್ನಾಡುವಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಆಯುಧ ಪೂಜಾ ಕಾರ್ಯಕ್ರಮವು ಅತಿ ವಿಜೃಂಭಣೆಯಿಂದ ಜರುಗಿತು. ಮೂರ್ನಾಡು ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ನಿರ್ಮಿಸಲಾದ ಭವ್ಯ ಅಲಂಕೃತ ವೇದಿಕೆಯಲ್ಲಿ 32ನೇ ವರ್ಷದ ಆಯುಧ ಪೂಜೆಯ ಕಾರ್ಯಕ್ರಮಗಳಲ್ಲಿ ಅಲಂಕೃತ ವಾಹನಗಳಿಗೆ ಸಾಮೂಹಿಕ ಪೂಜೆಯನ್ನು ನೆರವೇರಿತು. ನಂತರ ಮುಖ್ಯ ರಸ್ತೆಯಲ್ಲಿ ಸಾಗಿದ ಮೆರವಣಿಗೆಯಲ್ಲಿ ವಿಶೇಷವಾಗಿ ಅಲಂಕೃತಗೊಂಡ ವಾಹನಗಳಲ್ಲಿ ಏಳುಮಲೆ ಮುದ್ದು ಮಾದಪ್ಪ, ಬಡವರ ಗುಡಿಸಲು ಮನೆ, ಕೊಡಗಿನ ಕಾವೇರಿ ಮಾತೆ, ಪರಿಶುದ್ದ ಗಾಳಿಗೆ ಅಗ್ರಸ್ಥಾನ ಪಡೆದ ಮಡಿಕೇರಿ, ಶಬರಿಮಲೆ ಅಯ್ಯಪ್ಪ, ಈಸಲ ಕಪ್ ನಮ್ದೆ ಚಿನ್ನಸ್ವಾಮಿ ಕ್ರೀಡಾಂಗಣ, ವಿಷ್ಣುವಿನ ವರಾಹರೂಪಂ, ಜಸ್ಟೀಸ್ ಫಾರ್ ಸೌಜನ್ಯ, ದೇವಿ ಮಹಾತ್ಮೆ, ಪಿಲಿ ನಲಿಕೆ, ಭೂಲೋಕಕ್ಕೆ ಭೂದೇವಿಯ ಆಗಮನ, ಹೆಂಡತಿಯಿಂದ ವಿಚ್ಛೇದನ ಪಡೆದ ಖುಷಿಗೆ 40 ಲೀಟರ್ ಹಾಲಿನಿಂದ ಸ್ನಾನ ಮಾಡಿದ ಭೂಪ ಹೀಗೆ ಇನ್ನು ಹಲವಾರು ಸ್ತಬ್ದ ಚಿತ್ರಗಳು, ಕಲಾಕೃತಿಗಳು ಮತ್ತು ಕ್ಯಾಲಿಕಟ್‍ನ ಶ್ರೀಹರಿ ಕಲಾ ಸಮಿತಿಯ ಗೊಂಬೆ…
ಬೆಂಗಳೂರು NEWS DESK ಅ.6 : ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ “ಬಸವ ಮೆಟ್ರೋ” ಎಂದು ಘೋಷಿಸಿ ಬಿಡುತ್ತಿದ್ದೆ. ವಿಶ್ವಗುರು ಬಸವಣ್ಣ ಅವರನ್ನು “ಕರ್ನಾಟಕ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ‘ಬಸವ ಸಂಸ್ಕೃತಿ ಅಭಿಯಾನ-2025’ ರ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು ಮಾತನಾಡಿದರು. ನಮ್ಮಲ್ಲಿ ಅನೇಕ ಜಾತಿ, ಅನೇಕ ಧರ್ಮಗಳಿವೆ. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು ನಾವು. ಶೂದ್ರರು ಜಾತಿ ಯಾವುದೇ ಆದರೂ ನಾವೆಲ್ಲರೂ ಒಂದೇ ಎನ್ನುವುದನ್ನು ಅರಿಯಬೇಕು. ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ ನಂಬಿಕೆ – ಬದ್ಧತೆ ಇಟ್ಟುಕೊಂಡಿದ್ದೇನೆ. ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ. ಬಸವ ಜಯಂತಿಯ ದಿನವೇ…
ಮಡಿಕೇರಿ ಅ.6 NEWS DESK : ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್‍ನ ವತಿಯಿಂದ ಬೆಳ್ತಂಗಡಿ ತಾಲ್ಲೂಕಿನ ತುರ್ಕಳಿಕೆ ಎಂಬಲ್ಲಿ ನಡೆದ ರಾಜ್ಯ ಮಟ್ಟದ ಸಾಹಿತ್ಯೋತ್ಸವ ಕಾರ್ಯಕ್ರಮದ ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಕೊಡಗಿನ ಬಿ.ಎ.ಆದಿಲ್ ಪ್ರಥಮ ಸ್ಥಾನಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಗೋಣಿಕೊಪ್ಪಲಿನ ಅತ್ತೂರು ನ್ಯಾಷನಲ್ ಅಕಾಡೆಮಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಯಾಗಿರುವ ಆದಿಲ್, ಅತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಲೀನ ಅಶ್ರಫ್ ಹಾಗೂ ಪಾಲಿಬೆಟ್ಟ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅಶ್ರಫ್ ಮಾಸ್ಟರ್ ದಂಪತಿಯ ಪುತ್ರ.
ಮಡಿಕೇರಿ ಅ.6 NEWS DESK : ಕಳೆದ 12 ವರ್ಷಗಳಿಂದ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ಮೀಸಲಾಗಿದ್ದ ಕೊಡಗು ಜಿಲ್ಲಾ ಯುವ ಭವನ ಇದೀಗ ಜಿಲ್ಲಾ ಯುವ ಒಕ್ಕೂಟಕ್ಕೆ ಮರಳಿ ದೊರಕಿದೆ. ಹಿಂದಿನ ಸಾಲಿನಲ್ಲಿ ಮಂಜೂರಾಗಿ ಸುದರ್ಶನ ವೃತದಲ್ಲಿ ನಿರ್ಮಾಣಗೊಂಡಿದ್ದ ಜಿಲ್ಲಾ ಯುವ ಒಕೂಟದ ಜಿಲ್ಲಾ ಯುವ ಭವನವನ್ನು ಬಿಜೆಪಿ ಸರ್ಕಾರ ಜಿಲ್ಲೆಯ ಮೊದಲ ಮಹಿಳಾ ಕಾಲೇಜಿಗೆ ಸೂಕ್ತ ಕಟ್ಟಡ ಇಲ್ಲದ ಕಾರಣ 6 ತಿಂಗಳ ಮಟ್ಟಿಗೆ ಬಿಟ್ಟುಕೊಡಲಾಗಿತ್ತು. ಪ್ರಸಕ್ತ ಸಾಲಿನಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಪ್ರಯತ್ನದ ಫಲವಾಗಿ ಮಹಿಳಾ ಕಾಲೇಜನ್ನು ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಮಹಿಳಾ ಕಾಲೇಜಿನ ಕಟ್ಟಕ್ಕೆ ಸ್ಥಳಾಂತರಿಸಲಾಗಿದೆ. ಮಹಿಳಾ ಕಾಲೇಜು ಪಾಂಶುಪಾಲರಾದ ನಿರ್ಮಲ ಅವರು ಯುವ ಭವನದ ಕೀ ಗೊಂಚಲನ್ನು ಜಿಲ್ಲಾ ಯುವ ಒಕ್ಕೂಟ ಅಧ್ಯಕ್ಷರಾದ ಪಿ.ಪಿ.ಸುಕುಮಾರ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಜಿಲ್ಲಾ ಯುವ ಒಕ್ಕೂಟದ ಕಾರ್ಯಧ್ಯಕ್ಷ ಕೂಡ0ಡ ಸಭಾ ಸುಬ್ರಮಣಿ, ಖಜಾಂಚಿ ಕುಂಜಿಲನ…
ಸಿದ್ದಾಪುರ ಅ.6 NEWS DESK : ಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಯೋಗಂ (ಎಸ್.ಎನ್.ಡಿ.ಪಿ) ಹೆಗ್ಗಳ ಶಾಖೆಯ ವತಿಯಿಂದ ಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಎಸ್.ಎನ್.ಡಿ.ಪಿ ಕೊಡಗು ಯೂನಿಯನ್ ಅಧ್ಯಕ್ಷರಾದ ವಿ.ಕೆ.ಲೊಕೇಶ್ ಉದ್ಘಾಟಿಸಿ ಮಾತನಾಡಿ ಸಂಘಟನೆಯಿಂದ ಶಕ್ತರಾಗಲು ಹಾಗೂ ವಿಧ್ಯೆಯಿಂದ ಸ್ವತಂತ್ರ್ಯರಾಗುವಂತೆ ಗುರುಗಳು ಕರೆ ನೀಡಿದ್ದರು. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಬೇಕು. ಗುರುಗಳ ತತ್ವ ಸಿದ್ಧಾಂತವನ್ನು ಜೀವನದಲ್ಲಿ ಅಳವಡಿಸುವಂತೆ ಸಲಹೆ ನೀಡಿದರು. ಜಿಲ್ಲೆಯಲ್ಲಿ ಸುಮಾರು 50ಕ್ಕೂ ಹೆಚ್ಚು ಎಸ್.ಎನ್.ಡಿ.ಪಿ ಶಾಖೆಗಳಿದ್ದು, ಸಂಘಟನೆಯು ಜಿಲ್ಲಾಧ್ಯಂತ ಉತ್ತಮ ಕೆಲಸಗಳನ್ನು ಮಾಡುತ್ತಿದೆ ಎಂದರು. ಜಿ.ಪಂ ಮಾಜಿ ಸದಸ್ಯರಾದ ಮಹೇಶ್ ಗಣಪತಿ ಮಾತನಾಡಿ, ಕೇರಳದ ಜಾತಿ ವ್ಯವಸ್ಥೆಯ ವಿರುದ್ಧ ನಿಂತು, ಕೆಳ ವರ್ಗದ ಜನರಿಗೆ ದೇವಾಲಯವನ್ನು ನಿರ್ಮಿಸಿ, ಪೂಜೆಗೆ ಅನುವು ಮಾಡಿಕೊಟ್ಟಿದ್ದರು. ಗುರುಗಳ ಆದರ್ಶ ಅನುಕರಣೀಯ ಎಂದರು. ಎಸ್.ಎನ್.ಡಿ.ಪಿ ಹೆಗ್ಗಳ ಶಾಖೆಯ ಅಧ್ಯಕ್ಷರಾದ ರಮೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್.ಎನ್.ಡಿ.ಪಿ ಯೂನಿಯನ್ ಕೌನ್ಸಿಲರ್ ಪಾಪಾಯ್ಯ ಹಾಜರಿದ್ದರು. ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ…
ಮಡಿಕೇರಿ ಅ.6 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಅ.7 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಚಿಕ್ಕಳುವಾರ ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಡಾ.ಜಮೀರ್ ಅಹಮದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ…
ಬೆಂಗಳೂರು ಅ.6 NEWS DESK : ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಅಂತ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯರವನ್ನು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ಅಭಿಮಾನ ಪೂರ್ವಕವಾಗಿ ಗೌರವಿಸಲಾಯಿತು.
ಮಡಿಕೇರಿ ಅ.6 NEWS DESK : ಕುಶಾಲನಗರ ತಾಲ್ಲೂಕು ಕೊಡವ ಸಮಾಜದ ವತಿಯಿಂದ ಆಯೋಜಿಸಲಾದ ಕೈಲ್ ಪೋಳ್ದ್ ಸಂತೋಷ ಕೂಟ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಕೊಡಗಿನ ಹಾಗೂ ವಿಶೇಷವಾಗಿ ಕೊಡವರ ಐತಿಹಾಸಿಕ ಪರಂಪರೆ, ಸಂಸ್ಕೃತಿ ಹಾಗೂ ಆಚರಣೆಗಳನ್ನು ಜೀವಂತವಾಗಿರಿಸುವಲ್ಲಿ ಕೊಡವ ಸಮಾಜಗಳು ವಿಶೇಷ ಪಾತ್ರ ನಿಭಾಯಿಸುತ್ತಾ ಬಂದಿವೆ. ಸಮಾಜದ ಬಾಂಧವರಲ್ಲಿ, ಯುವ ಪೀಳಿಗೆಯಲ್ಲಿ ನಮ್ಮ ಸಂಸ್ಕೃತಿ ಹಾಗೂ ಆಚರಣೆಗಳನ್ನು ಅನುಸರಿಸುತ್ತಾ ಬೆಳೆಸುವ ಗುರುತರ ಜವಾಬ್ದಾರಿಯನ್ನು ಕೊಡವ ಸಮಾಜದವರು ವಹಿಸಿಕೊಳ್ಳಬೇಕು. ಒಂದು ಸಮಾಜ ಇತಿಹಾಸದಲ್ಲಿ ಅಚ್ಚಳಿಯದೆ ಉಳಿಯಲು ಅದರ ಸಂಸ್ಕೃತಿ, ಭಾಷೆ ಹಾಗೂ ಆಚರಣೆಗಳನ್ನು ಪೋಷಿಸಿ ಬೆಳೆಸುವುದು ಅತ್ಯಂತ ಅವಶ್ಯಕವಾಗಿದೆ. ಆಧುನಿಕ ಜಗತ್ತಿಗೆ ಹೊಂದಿಕೊಳ್ಳುತ್ತಾ ನಮ್ಮ ಆಚರಣೆಗಳನ್ನು ಜಗತ್ತಿಗೆ ಪರಿಚಯಿಸುವುದರಲ್ಲಿ ನಾವು ಇಂದಿಗೂ ಹಿಂದೆ ಬೀಳಬಾರದು ಎಂದು ಕರೆ ನೀಡಿದರು. ತಾನು ಹಾಗೂ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ‘ಕೊಡಗರು’ ಎಂದು ಸಂಬೋಧಿಸಲ್ಪಡುತ್ತಿದ್ದ ಶಬ್ದವನ್ನು “ಕೊಡವ”…






