ಲೇಖಕ: admin

ಮಡಿಕೇರಿ ಸೆ.17 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಕಾರ್ಮಿಕ ಸಚಿವರಾದ ಸಂತೋಷ್ ಎಸ್.ಲಾಡ್ ಹಾಗೂ  ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಮೆಹರುಜ್ ಖಾನ್ ಅವರು ಭೇಟಿ ನೀಡಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರ ಜೊತೆ ಪಕ್ಷದ ಚಟುವಟಿಕೆಗಳ ಕುರಿತು ಮಾತುಕತೆ ನಡೆಸಿದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಸಭೆಯಲ್ಲಿ  ಹಾಜರಿದ್ದರು.

Read More

ವಿರಾಜಪೇಟೆ ಸೆ.17 NEWS DESK : ವ್ಯಕ್ತಿತ್ವ ವಿಕಸನದೊಂದಿಗೆ ಸಮಾಜದಲ್ಲಿ ವಿಶೇಷವಾದಂತಹ ಸ್ಥಾನಮಾನವನ್ನು ಪಡೆಯುವುದರೊಂದಿಗೆ ಸಹಕಾರ ಮನೋಭಾವನೆಯನ್ನು ಬೆಳೆಸಲು ಎನ್.ಎಸ್.ಎಸ್ ಸಹಕಾರಿಯಾಗಿದೆ ಎಂದು ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಕೊಡಗು ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ನೋಡಲ್ ಅಧಿಕಾರಿ ಡಾ.ಕೆ.ಸಿ.ದಯಾನಂದ ಅಭಿಪ್ರಾಯಪಟ್ಟರು. ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ನಡೆದ ಎನ್.ಎಸ್.ಎಸ್ ಘಟಕ ಉದ್ಘಾಟಿಸಿ, ಕರಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಎನ್.ಎಸ್.ಎಸ್ ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆಯ ಮನೋಭಾವವನ್ನು ಬೆಳೆಸುವುದರೊಂದಿಗೆ ಸಮಸ್ಯೆಯನ್ನು ಬಗೆಹರಿಸಲು ಹೇಗೆ ಒಗ್ಗೂಡಬೇಕು ಹಾಗೂ ಸಮಾಜದ ವಿವಿಧ ಸ್ಥರಗಳ ಬಗ್ಗೆ ಗಮನಹರಿಸುವಂತೆ ಮಾಡಲು ಪ್ರಮುಖವಾದ ವೇದಿಕೆಯಾಗಿದೆ ಎಂದರು.  ಸಮಾಜದ ಅಭಿವೃದ್ಧಿಗೆ ನಿಸ್ವಾರ್ಥ ಸೇವೆಯನ್ನು ಸಲ್ಲಿಸುವುದರೊಂದಿಗೆ ತಮ್ಮಲ್ಲಿರುವ ಪ್ರತಿಭೆ ಅನಾವರಣಕ್ಕೆ ಎನ್ಎಸ್ಎಸ್ ಸಹಕಾರಿಯಾಗಿದೆ. ಇದು ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ರಚನಾತ್ಮಕ ಮತ್ತು ಕ್ರಿಯಾಶೀಲವಾಗಿ ಎಲ್ಲಾ ವಿಚಾರಗಳಲ್ಲು ಭಾಗವಹಿಸುವಂತೆ ಮಾಡುತ್ತದೆ ಎಂದು ಹೇಳಿದರು. ಎನ್ಎಸ್ಎಸ್ ಸ್ವಯಂಸೇವಕರಲ್ಲಿ ನಾಯಕತ್ವ ಗುಣ, ಸರಳತೆ, ಶಿಸ್ತು, ಸಂಯಮ, ಪ್ರಾಮಾಣಿಕತೆ, ಸಹನೆ, ತಾಳ್ಮೆಯಂತಹ ಗುಣಗಳನ್ನು ಮೈಗೂಡಿಸಿಕೊಂಡು ಡೆಡಿಕೇಶನ್, ಡಿಟರ್ಮಿನೇಷನ್,…

Read More

ಬೆಂಗಳೂರು ಸೆ.17 NEWS DESK : ಕರ್ನಾಟಕ ಮಾಧ್ಯಮ ಅಕಾಡೆಮಿಯು Infosys Springboard ಸಿ.ಎಸ್.ಆರ್.‌ ಕಾರ್ಯಕ್ರಮದಡಿ ಪತ್ರಕರ್ತರ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 5 ವರ್ಷ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಗಣಿಸಿರುವ ರಾಜ್ಯಮಟ್ಟದ ಪತ್ರಿಕೆಗಳು ಹಾಗೂ ಇಲಾಖೆಯಡಿ ನೋಂದಾಯಿತ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ಶಿಫಾರಸು ಮಾಡುವ ಪತ್ರಕರ್ತರನ್ನು ತರಬೇತಿಗೆ ಪರಿಗಣಿಸಲಾಗುವುದು. ಈ ಕುರಿತು ಸಂಪಾದಕರನ್ನು ನೇರವಾಗಿ ಸಂಪರ್ಕಿಸಲಾಗುವುದು. ಆಸಕ್ತ ಪತ್ರಕರ್ತರು ಗೂಗಲ್‌ ಫಾರ್ಮ್‌ https://forms.gle/q9NUnsQ7M5xrsruj9 ನಲ್ಲಿ ಮಾಹಿತಿ ಹಾಗೂ ದಾಖಲೆಗಳನ್ನು ಒದಗಿಸುವ ಮೂಲಕ ತರಬೇತಿಗೆ ನೋಂದಾಯಿಸಬಹುದಾಗಿದೆ. ಅರ್ಜಿ ನಮೂನೆಯಲ್ಲಿ ಸೂಚಿಸಿರುವಂತೆ ಪತ್ರಕರ್ತರು ಭಾವಚಿತ್ರ, ವಯಸ್ಸಿನ ದಾಖಲೆ, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ಮುಖ್ಯಸ್ಥರ ದೃಢೀಕರಣ, ಸದರಿ ಮಾಧ್ಯಮ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಕುರಿತ ದಾಖಲೆ ಹಾಗೂ ಕನಿಷ್ಠ…

Read More

ಪುತ್ತೂರು ಸೆ.17 NEWS DESK : ಪ್ರತಿಯೊಬ್ಬ ವಿದ್ಯಾರ್ಥಿಯೂ ಕೂಡಾ ಭಾರತೀಯ ಸಂಸ್ಕೃತಿಯನ್ನು ಗೌರವಿಸುತ್ತಾ ನಮ್ಮ ದೇಶದ ಶ್ರೀಮಂತ ಪರಂಪರೆಯನ್ನು ಅನುಸರಿಸಿದಾಗ ಸಮಾಜದಲ್ಲಿ ಅವನೊಬ್ಬ ಉನ್ನತ ವ್ಯಕ್ತಿಯಾಗಿ ಹೊರಹೊಮ್ಮುವುದಕ್ಕೆ ಸಾಧ್ಯವಿದೆ ಎಂದು ಪುತ್ತೂರು ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಆಂಜನೇಯ ರೆಡ್ಡಿ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ವಿಭಾಗ, ಆ್ಯಂಟಿ ರ್ಯಾಗಿಂಗ್ ಸೆಲ್ ಮತ್ತು ಆ್ಯಂಟಿ ಡ್ರಗ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಪುನಶ್ಚೇತನಾ ಕಾರ್ಯಕ್ರಮದಲ್ಲಿ ರ್ಯಾಗಿಂಗ್ ಮತ್ತು ಮಾದಕ ದ್ರವ್ಯ ಮುಕ್ತ ಜೀವನ ಎನ್ನುವ ವಿಷಯದ ಬಗ್ಗೆ ಮಾತಾಡಿದರು. ಜೀವನದಲ್ಲಿ ಒಮ್ಮೆ ಪೊಲೀಸ್ ಕೇಸುಗಳಾದರೆ ಆತನ ಮುಂದಿನ ಜೀವನ ಕಠಿಣವಾಗುತ್ತದೆ. ಪಾಸ್‍ಪೋರ್ಟ್, ವಿದೇಶ ಪ್ರಯಾಣ, ಉನ್ನತ ಕಂಪೆನಿಗಳಲ್ಲಿ ನೇಮಕಾತಿ, ಸರ್ಕಾರಿ ನೌಕರಿ ಮುಂತಾದವು ಸಾಧ್ಯವಾಗದೆ ಜೀವನ ದುರ್ಲಭವಾಗುತ್ತದೆ. ಇದರಿಂದ ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಇರಬೇಕು ಎಂದರು. ಪ್ರತಿಯೊಂದು ವಿಷಯಗಳಿಗೂ ಶ್ರೇಷ್ಟ ದಾರ್ಶನಿಕರ ಜೀವನವನ್ನು ಉದಾಹರಿಸುತ್ತಾ ಅವರಂತೆ ನೀವಾಗಬೇಕು ಎಂದು…

Read More

ಕಾರ್ಕಳ ಸೆ.17 NEWS DESK : ಉಡುಪಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕ್ರಿಯೇಟಿವ್ ನ ಐದು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಉಡುಪಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಶಿರ್ವ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಕಾರ್ಕಳ ತಾಲ್ಲೂಕು ತಂಡವನ್ನು ಪ್ರತಿನಿಧಿಸಿ, ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿಯಾರಾದ ಮಾನಸ ವಿನಾಯಕ್, ಹರ್ಷಿತ ವಿನಾಯಕ್, ಆದ್ಯ ಎಸ್.ಪಡ್ರೆ, ಆರುಷಿ, ಪೂರ್ವಿ ಎಸ್.ಕಡಕೋಲ್ಮಠ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿಜೇತ ವಿದ್ಯಾರ್ಥಿನಿಯರ ಸಾಧನೆಗೆ ಆಡಳಿತ ಮಂಡಳಿ, ಬೋಧಕ – ಬೋಧಕೇತರ ವರ್ಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

Read More

ಕುಶಾಲನಗರ ಸೆ.17 NEWS DESK : ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ರೈತಾಪಿ ವರ್ಗದ ಅನುಕೂಲತೆಗಾಗಿ ಕೃಷಿ ಪತ್ತಿನ ಸಹಕಾರ ಸಂಘ ಶ್ರಮಿಸುತ್ತಿದೆ ಎಂದು ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ.ಬಿ.ಜಗದೀಶ್ ಹೇಳಿದರು. ತೊರೆನೂರು ಸಮುದಾಯ ಭವನದಲ್ಲಿ ಏರ್ಪಡಿಸಿದ್ದ 2024-25ನೇ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಉತ್ತಮವಾಗಿ ಕಾರ್ಯ ಚಟುವಟಿಕೆಯೊಂದಿಗೆ ರೂ.25 ಕೋಟಿ ವಾರ್ಷಿಕ ವಹಿವಾಟು ನಡೆಸಿದ್ದು, ರೂ.16.10 ಲಕ್ಷ ನಿವ್ವಳ ಲಾಭಗಳಿಸಿದೆ ಎಂದರು. ಸಂಘದ ಸದಸ್ಯರಿಗೆ ಒಟ್ಟು ರೂ.19 ಕೋಟಿ ಸಾಲ ವಿತರಣೆ ಮಾಡಲಾಗಿದ್ದು, ಇದರಲ್ಲಿ ಕೆಸಿಸಿ ಸಾಲ ರೂ.10.5 ಕೋಟಿ ವಿತರಣೆ ಮಾಡಲಾಗಿದೆ. ಸದಸ್ಯರು ಸಕಾಲದಲ್ಲಿ ಸಾಲ ಮರುಪಾವತಿ ಮಾಡುವ‌ ಮೂಲಕ ಸಂಘದ ಬೆಳವಣಿಗೆಗೆ ಒತ್ತು ನೀಡಬೇಕು ಎಂದು ಮನವಿ ಮಾಡಿದರು. ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಸಹಕಾರ ನೀಡಿದರೇ ಇನ್ನಷ್ಟು ಲಾಭದಾಯಕ ಸಂಘವಾಗಿ ಮುಂದುವರೆಸಲು ಸಾದ್ಯ ಎಂದರು.  ಸಹಕಾರಿ ಕಾನೂನು ಪ್ರಕಾರ ಒಂದು…

Read More

ಮಡಿಕೇರಿ ಸೆ.17 NEWS DESK  : ಚಿಲಿಯ ಕೊರಾಲ್ಕೊದಲ್ಲಿ ನಡೆದ ಅಂತಾರಾಷ್ಟ್ರೀಯ ಕ್ರಾಸ್-ಕಂಟ್ರಿ ಸ್ಕೀಯಿಂಗ್ ಎಫ್‌ಐಎಸ್ ಚಾಂಪಿಯನ್‌ಶಿಪ್‌ನಲ್ಲಿ ಕೊಡಗಿನ ತೆಕ್ಕಡ ಭವಾನಿ ಕಂಚಿನ ಪದಕ ಗೆದ್ದು, ಐತಿಹಾಸಿಕ ಸಾಧನೆ ಮಾಡಿದ್ದಾರೆ.  ಸ್ಕೀಯಿಂಗ್ ನಲ್ಲಿ ಈ ಸಾಧನೆ ಮಾಡಿದ ಭಾರತದ ಮೊದಲ ಮಹಿಳೆ ಎಂಬ ಕೀರ್ತಿಗೆ ತೆಕ್ಕಡ ಭವಾನಿ ಪಾತ್ರರಾಗಿದ್ದಾರೆ.

Read More

ಮಡಿಕೇರಿ ಸೆ.17 NEWS DESK : ಕುಶಾಲನಗರದಲ್ಲಿ  ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಹಾಗೂ  ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮೆಹರೋಜ್ ಖಾನ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಪ್ರಮುಖರಾದ ನಂದಕುಮಾರ್, ಆರ್.ಪಿ.ಚಂದ್ರಶೇಖರ್, ಪ್ರಕಾಶ್ ಆಚಾರ್ಯ, ಮುನಿರ್ ಅಹಮದ್, ಕವನ್ ಕೊತ್ತೋಳಿ ಸೇರಿದಂತೆ ಇತರ ಕಾರ್ಯಕರ್ತರು ಸಚಿವ ಸಂತೋಷ್ ಲಾಡ್  ಅವರಿಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.

Read More

ಮಡಿಕೇರಿ ಸೆ.17 NEWS DESK  : ಕೊಡಗು ಜಿಲ್ಲೆಗೆ ಆಗಮಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿದರು.

Read More

ಮಡಿಕೇರಿ NEWS DESK ಸೆ.16 : ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಕಾರ್ಯದರ್ಶಿಯಾಗಿ ಜಿಲ್ಲೆಯ ಕಾರ್ಮಿಕ ಮುಖಂಡ ಪಿ.ಆರ್.ಭರತ್ ಅವರು ಆಯ್ಕೆಯಾಗಿದ್ದಾರೆ. ಯಾದಗಿರಿಯಲ್ಲಿ ನಡೆದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ 9ನೇ ರಾಜ್ಯ ಸಮ್ಮೇಳನದಲ್ಲಿ ಪಿ.ಆರ್.ಭರತ್ ಅವರನ್ನು ರಾಜ್ಯ ಸಮಿತಿಗೆ ಆಯ್ಕೆ ಮಾಡಲಾಯಿತು.

Read More