ಲೇಖಕ: admin

ವಿರಾಜಪೇಟೆ, NEWS DESK ಸೆ.05:ಪ್ಲಾಸ್ಟಿಕ್ ಹಾಗೂ ಇನ್ನಿತರ ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ಸಮರ್ಪಕವಾಗಿ ಕಸ ವಿಲೇವಾರಿ ಮಾಡಿ ಪರಿಸರ ಮಾಲಿನ್ಯವಾಗದಂತೆ ನೋಡಿಕೊಳ್ಳುವ ಜವಬ್ದಾರಿ ಎಲ್ಲರ ಮೇಲಿದೆ ಎಂದು ಬೇಟೋಳಿ ಗ್ರಾಮ ಪಂಚಾಯತಿ ಸಿಬ್ಬಂದಿ ಬಿ.ಎಸ್. ದಿನೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಕಾರ್ಯಾನುಭವ ಶಿಬಿರದ ಪ್ರಯುಕ್ತ ಶಿಬಿರಾರ್ಥಿಗಳು, ಬೇಟೋಳಿ ರಾಮನಗರದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ, ಬೇಟೋಳಿ ಗ್ರಾಮ ಪಂಚಾಯಿತಿಯ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ಗ್ರಾಮ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸ್ವಚ್ಛತೆಯೆಂಬುದು ಇತರರಿಂದ ಹೇಳಿಸಿ ಕೊಂಡು ಕಲಿಯುವಂತಹದಲ್ಲ . ಮನೆಯಿಂದಲೆ ಕಸವನ್ನು ಹೇಗೆ ವಿಲೇವಾರಿ ಮಾಡಬೇಕೆಂಬುದನ್ನು ತಿಳಿದವರು ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಎಸೆದು ಪ್ರಕೃತಿಯನ್ನು ಹಾಳು ಮಾಡುವ ಕೆಲಸ ಎಂದಿಗೂ ಮಾಡುವುದಿಲ್ಲ ಆದಷ್ಟು ರಸ್ತೆಯ ಬದಿಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಹಾಗೂ ಇನ್ನಿತರ ಕಸವನ್ನು ಎಸೆಯದೆ ಕಸದ ಬುಟ್ಟಿಯಲ್ಲಿ ಹಾಕುವ ಮನಸ್ಥಿತಿ ರೂಢಿಸಿಕೊಳ್ಳಿ. ನಿಮ್ಮಿಂದ ಸಾಧ್ಯವಾದಷ್ಟು ಸ್ವಚ್ಚತೆ ವಿಚಾರವನ್ನು, ಸ್ವಚ್ಚತೆಯ…

Read More

ಕುಶಾಲನಗರ NEWS DESK ಸೆ.05: ರಾಜ್ಯ ಹೆದ್ದಾರಿಗಳಲ್ಲಿ ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ಹಂಪ್‌ಗಳು ವಾಹನ ಚಾಲಕರಿಗೆ ಸರಿಯಾಗಿ ಗೋಚರಿಸದೆ ಸರಣಿ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಕೊಡಗು ಜಿಲ್ಲಾ ಘಟಕ ರಸ್ತೆ ಸುರಕ್ಷತಾ ಕಾರ್ಯಕ್ಕೆ ಮುಂದಾಗಿದೆ. ಸಾರ್ವಜನಿಕರಿಂದ ನಿರಂತರವಾಗಿ ಬರುತ್ತಿದ್ದ ಅಪಘಾತಗಳ ದೂರುಗಳಿಗೆ ಸ್ಪಂದಿಸಿದ ಸಂಘಟನೆಯ ಪದಾಧಿಕಾರಿಗಳು ಸ್ವತಃ ರಸ್ತೆಗಿಳಿದು ಕುಶಾಲನಗರ ತಾಲೂಕಿನ ವಿವಿಧ ಪ್ರಮುಖ ರಸ್ತೆಗಳಲ್ಲಿರುವ ಹಂಪ್‌ಗಳಿಗೆ ಬಿಳಿ ಬಣ್ಣ ಬಳಿಯುವ ಮೂಲಕ ಗಮನ ಸೆಳೆದರು. ಮೈಸೂರಿನಿಂದ ಕುಶಾಲನಗರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಾಜ್ಯ ಹೆದ್ದಾರಿಯಲ್ಲಿ ಬೈಲಕುಪ್ಪೆಯ ಗೋಲ್ಡನ್ ಟೆಂಪಲ್‌ಗೆ ತೆರಳುವ ರಸ್ತೆಯ ಸಮೀಪದಲ್ಲಿದ್ದ ಹಂಪ್‌ಗೆ ಮೊದಲಿಗೆ ಬಣ್ಣ ಬಳಿಯಲಾಯಿತು. ವಾಹನಗಳು ವೇಗವಾಗಿ ಸಂಚರಿಸುವ ಈ ರಸ್ತೆಯಲ್ಲಿ ಹಂಪ್‌ಗಳು ಸರಿಯಾಗಿ ಕಾಣಿಸದೆ ಅಪಘಾತಗಳು ಸಂಭವಿಸುತ್ತಿದ್ದ ಹಿನ್ನೆಲೆಯಲ್ಲಿ, ಬಣ್ಣ ಬಳಿದ ಬಳಿಕ ದೂರದಿಂದಲೇ ಹಂಪ್‌ಗಳು ವಾಹನ ಚಾಲಕರಿಗೆ ಸ್ಪಷ್ಟವಾಗಿ ಗೋಚರಿಸುವಂತಾಗಿದೆ. ಇದೇ ರೀತಿಯಲ್ಲಿ ಕುಶಾಲನಗರ ಹಳೆ ಮಾರ್ಕೆಟ್ ರಸ್ತೆಯ ಎರಡು ಹಂಪ್‌ಗಳು, ಐಬಿ ರಸ್ತೆಯ ಎರಡು…

Read More

ಮೈಸೂರು, NEWS DESK ಸೆ.05: ಅಂಬಾರಿ ಆನೆ ಅಭಿಮನ್ಯುವಿಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಆತನಿಗೆ ಅಕ್ಷರ ತೇರಿನಲ್ಲಿ ಭಾವ ಪೂರ್ಣವಾಗಿ ಬೀಳ್ಕೊಡುವ ಹಾಗೂ ಹಿರಿಯ ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ಅಭಿನ್ಯುವಿನ ಕುರಿತು ಭಾವನಾತ್ಮಕವಾಗಿ ಬರೆದ ಎರಡು ಕೃತಿಗಳ ಬಿಡುಗಡೆ ಕಾರ್ಯಕ್ರಮ ಸೆಪ್ಟಂಬರ್ 9ನೇ ತಾರೀಕು ಬುಧವಾರ ಮೈಸೂರಿನಲ್ಲಿ ಆಯೋಜಿಸಲಾಗಿದೆ. ಮೈಸೂರು ಕಲ್ಚರಲ್ ಅಸೋಸಿಯೇಷನ್, ಅರಣ್ಯ ಇಲಾಖೆಯ ಮೈಸೂರು ವನ್ಯಜೀವಿ ವಿಭಾಗ ಹಾಗೂ ನಗರ ಕೇಂದ್ರ ಗ್ರಂಥಾಲಯ ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಾಗೂ ಅಕ್ಷಿ ಪ್ರಕಾಶನಗಳ ಸಹಯೋಗದಲ್ಲಿ ಕಾರ್ಯಕ್ರಮವನ್ನು ನಗರದ ಪೀಪಲ್ಸ್ ಪಾರ್ಕ್ನಲ್ಲಿರುವ ನಗರ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಐತಿಚಂಡ ರಮೇಶ್ ಉತ್ತಪ್ಪ ಅವರು ಕಳೆದ ಒಂದು ವರ್ಷದಿಂದ ಅಭಿಮನ್ಯುವಿನ ಕುರಿತು ಎರಡು ವಿಭಿನ್ನ ಕೃತಿಗಳನ್ನು ಬರೆದಿದ್ದಾರೆ. `ಮೌನದ ಮಹಾಪಯಣ, ಅಭಿಮನ್ಯುವಿಗೆ ಒಲವಿನ ಓಲೆ’ ಕೃತಿಯಲ್ಲಿ ಭಾವನಾತ್ಮವಾದ ಪತ್ರಗಳಿವೆ. ಅಭಿಮನ್ಯುವಿಗೆ ಪತ್ರಗಳ ಮೂಲಕ ಬೀಳ್ಕೊಡುವ ವಿಭಿನ್ನ ಪ್ರಯತ್ನವಾಗಿದೆ. ಲೇಖಕರ ಕಲ್ಪನೆಯಲ್ಲಿ ಅಭಿಮನ್ಯುವಿನೊಂದಿಗೆ ಒಡನಾಡಿದ ಆನೆಗಳು, ಮಾವುತರು, ಅಧಿಕಾರಿಗಳು,…

Read More

ಮಡಿಕೇರಿ ಸೆ.4 NEWS DESK : ಹೆರವಾನಾಡು ಗ್ರಾಮದ ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಹಗ್ಗ ಜಗ್ಗಾಟ, ಓಟ, ಸಂಗೀತ ಕುರ್ಚಿ, ಮಡಿಕೆ ಒಡೆಯುವುದು ಸೇರಿದಂತೆ ಸಾಂಪ್ರದಾಯಿಕ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದ್ದು, ಮಕ್ಕಳು, ಮಹಿಳೆಯರು, ಯುವಕರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹಾಗೂ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕ್ರೀಡಾಕೂಟಕ್ಕೆ ಮೆರುಗು ತಂದರು. ಸಾಂಪ್ರದಾಯಿಕ ಆಚರಣೆಗಳೊಂದಿಗೆ ಕ್ರೀಡಾ ಚಟುವಟಿಕೆಗಳನ್ನು ಸಂಯೋಜಿಸುವ ಮೂಲಕ ಯುವ ಪೀಳಿಗೆಗೆ ಕೊಡವ ಸಂಸ್ಕೃತಿ ಮತ್ತು ಪರಂಪರೆಯನ್ನು ಪರಿಚಯಿಸುವ ಪ್ರಯತ್ನ ಮಾಡಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಆದಿಶಕ್ತಿ ವಿನಾಯಕ ಸೇವಾ ಸಮಿತಿಯ ಅಧ್ಯಕ್ಷರಾದ ಚಂದ್ರ ಉಡೋತ್, ಕಾರ್ಯದರ್ಶಿ ನವೀನ್, ಖಜಾಂಚಿ ಶಬರಿ, ಸಹ ಖಜಾಂಚಿ ದಿನೇಶ್, ಪದಾಧಿಕಾರಿಗಳಾದ ರಘು, ಜಗನ್ನಾಥ್, ರಾಜು, ಕಿಶು, ಮಾಜಿ ಕಾರ್ಯದರ್ಶಿ ಕೇಶಿನಿ ಹಾಗೂ ಊರಿನ ಹಿರಿಯರು, ಯುವಕರು ಹಾಗೂ ಮಕ್ಕಳು ಭಾಗವಹಿಸಿ ಕೈಲ್ ಪೊಳ್ದ್ ಆಚರಣೆಯನ್ನು ಯಶಸ್ವಿಗೊಳಿಸಿದರು.

Read More

ಮಡಿಕೇರಿ, ಸೆ.4 NEWS DESK : ಕಸ್ತೂರಿ ರಂಗನ್ ಹೋರಾಟ ಸಮಿತಿ-ಕೊಡಗು ಜಿಲ್ಲೆ ವತಿಯಿಂದ ಮಡಿಕೇರಿಯಲ್ಲಿ ಕಸ್ತೂರಿರಂಗನ್ ವರದಿ ಕುರಿತು ವಿಶೇಷ ಸಭೆ ನಡೆಯಿತು. ಸಭೆಯಲ್ಲಿ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ, ಮಾಜಿ ಶಾಸಕಿ ವೀಣಾ ಅಚ್ಚಯ್ಯ, ಮಾಜಿ ಶಾಸಕರಾದ ಅಪ್ಪಚ್ಚು ರಂಜನ್ ಹಾಗೂ ಕೆ.ಜಿ. ಬೋಪಯ್ಯ, ಮಾಜಿ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣ್ಯ ಸೇರಿದಂತೆ ಕಸ್ತೂರಿರಂಗನ್ ಹೋರಾಟ ಸಮಿತಿಯ ಸದಸ್ಯರು, ನಾಡಿನ ಪ್ರಮುಖರು ಹಾಗೂ ಹೋರಾಟಗಾರರು ಉಪಸ್ಥಿತರಿದ್ದರು. ಸಭೆಯಲ್ಲಿ ಸಾರ್ವಜನಿಕರು ತಮ್ಮ ಆತಂಕ, ಅಭಿಪ್ರಾಯ ಹಾಗೂ ಸಲಹೆಗಳನ್ನು ವ್ಯಕ್ತಪಡಿಸಿದರು. ಕಸ್ತೂರಿರಂಗನ್ ವರದಿ ಜಾರಿಯಿಂದ ಕೊಡಗು ಜಿಲ್ಲೆಯ ಜನಸಾಮಾನ್ಯರು ಹಾಗೂ ರೈತರಿಗೆ ಉಂಟಾಗಬಹುದಾದ ಸಮಸ್ಯೆಗಳ ಕುರಿತು  ಚರ್ಚೆ ನಡೆಯಿತು. ಎಲ್ಲರ ಅಭಿಪ್ರಾಯಗಳನ್ನು ಆಲಿಸಿದ ಬಳಿಕ ಮಾತನಾಡಿದ ಶಾಸಕರು, ಕಸ್ತೂರಿರಂಗನ್ ವರದಿಯನ್ನು ವಿರೋಧಿಸಬೇಕೆಂಬ ಅಭಿಪ್ರಾಯವನ್ನು ಸಭೆಯಲ್ಲಿ ಬಹುತೇಕರು ವ್ಯಕ್ತಪಡಿಸಿದ್ದು,…

Read More

ಬೆಂಗಳೂರು, ಸೆ.4 NEWS DESK : ರಾಜ್ಯದ ಯುವಶಕ್ತಿಯನ್ನು ಪ್ರೋತ್ಸಾಹಿಸಲು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ​‘ಭಾರತ್ ಜೋಡೋ’ ಕುರಿತು ಕಲಾವಿದರಿಂದ ರೂಪಗೊಂಡ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಪ್ಪಿರುವ ಲೋಗೊವನ್ನು ಉಪ ಮುಖ್ಯಮಂತ್ರಿ ಡಾ ಜಿ. ಪರಮೇಶ್ವರ್ ಅವರು ಇಂದು ಬಿಡುಗಡೆ ಮಾಡಿದರು. ರಾಜ್ಯದ ಯುವಜನರನ್ನು ಒಂದೆಡೆ ಸೇರಿಸಿ, ಒಗ್ಗಟ್ಟು, ಸಾಮಾಜಿಕ ಸೌಹಾರ್ದತೆ, ಜವಾಬ್ದಾರಿಯುತ ಪೌರತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ರೂಪುಗೊಂಡ ಒಂದು ಪ್ರಮುಖ ಯೋಜನೆ ಇದಾಗಿದೆ. ​ಈ ಪ್ರಮುಖ ಯೋಜನೆಗೆ ಒಂದು ವಿಶಿಷ್ಟ ಗುರುತನ್ನು ನೀಡುವ ನಿಟ್ಟಿನಲ್ಲಿ, ‘ಭಾರತ್ ಜೋಡೋ’ ಲಾಂಛನವನ್ನು (Logo) ವಿನ್ಯಾಸಗೊಳಿಸಲು ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕರ್ನಾಟಕದಾದ್ಯಂತ ಒಟ್ಟು 255 ಲಾಂಛನ ವಿನ್ಯಾಸಗಳು ಸ್ವೀಕೃತವಾಗಿದ್ದವು. ​ಸಲ್ಲಿಕೆಯಾದ ವಿನ್ಯಾಸಗಳನ್ನು ಪರಿಶೀಲಿಸಿ, ಆಯ್ಕೆ ಪ್ರಕ್ರಿಯೆಯು ನಿಷ್ಪಕ್ಷಪಾತವಾಗಿ ಹಾಗೂ ವೃತ್ತಿಪರವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ‘ಕರ್ನಾಟಕ ಚಿತ್ರಕಲಾ ಪರಿಷತ್’ಗೆ ಈ ಜವಾಬ್ದಾರಿಯನ್ನು ವಹಿಸಲಾಗಿತ್ತು. ವಿವರವಾದ ಮೌಲ್ಯಮಾಪನದ ನಂತರ, ಎರಡು ಲಾಂಛನಗಳನ್ನು…

Read More

ಮಡಿಕೇರಿ ಸೆ.4 NEWS DESK : 2026-27ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮಡಿಕೇರಿ ತಾಲ್ಲೂಕಿಗೆ ಸಂಬಂಧಿಸಿದಂತೆ ಕೆ.ಬಾಡಗ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸರಸ್ವತಿ ಬಿ.ಕೆ, ಅಯ್ಯಂಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಚ್.ಎಸ್.ಶಾಂತಿ ಮತ್ತು ಮೂರ್ನಾಡು ಪ್ರೌಢ ಶಾಲೆಯ ಪ್ರಶಾಂತ್ ಎಸ್.ಡಿ. ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸೋಮವಾರಪೇಟೆ ತಾಲ್ಲೂಕಿಗೆ ಸಂಬಂಧಿಸಿದಂತೆ ಕಲ್ಕಂದೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಉಮೇಶ್ ಕುಮಾರ್ ಕೆ.ಪಿ., ನೆಲ್ಲಿಹುದಿಕೇರಿ ಕೆಪಿಎಸ್ ಪ್ರಾಥಮಿಕ ಶಾಲೆಯ ರೆಮ್ಮಿ ಪಿ.ಸಿ., ನೇರುಗಳಲೆ ಸರ್ಕಾರಿ ಪ್ರೌಢಶಾಲೆಯ ರತ್ನ ಕುಮಾರ್ ಕೆ.ಆರ್. ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಹಾಗೆಯೇ ವಿರಾಜಪೇಟೆ ತಾಲ್ಲೂಕಿಗೆ ಸಂಬಂಧಿಸಿದಂತೆ ಬಾಳುಗೋಡು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೇರಿ ಲೋಬೋ, ಕುಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಲಿಮ ಪಿ.ಹೆಚ್. ಹಾಗೂ ಪೊನ್ನಂಪೇಟೆ ಕೆಪಿಎಸ್ ಪ್ರೌಢಶಾಲೆಯ ಅನ್ರಿತಾ ಫುಟಾರ್ಡೊ ಅವರು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ…

Read More

ಮಡಿಕೇರಿ ಸೆ.5 NEWS DESK : ಉತ್ತರ ಪ್ರದೇಶದ ಅಯೋಧ್ಯ ಸಮೀಪದ ಡಾ. ಬಿ.ಆರ್.ಅಂಬೇಡ್ಕರ್ ಇಂಟರ್‌ನ್ಯಾಷನಲ್ ಹಾಕಿ ಟರ್ಫ್ ಮೈದಾನದಲ್ಲಿ ನಡೆದ ಪಿಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯಗಳ 19 ವರ್ಷದೊಳಗಿನ ಬಾಲಕಿಯರ ರಾಷ್ಟ್ರೀಯ ಜೂನಿಯರ್ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಆಟಗಾರ್ತಿಯರನ್ನು ಒಳಗೊಂಡ ಹೈದರಾಬಾದ್ ವಲಯ ತಂಡವು ರನ್ನರ್ ಅಪ್ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.  ದೇಶದ ಒಂಬತ್ತು ವಲಯಗಳ ತಂಡಗಳ ನಡುವೆ ರಾಷ್ಟ್ರೀಯ ಪ್ರಶಸ್ತಿಗಾಗಿ ನಡೆದ ಈ ಪಂದ್ಯಾವಳಿಯಲ್ಲಿ ಕೊಡಗಿನ ಗಾಳಿಬೀಡು ನವೋದಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತೃಪ್ತ ಅವರ ನಾಯಕತ್ವದಲ್ಲಿ ಹೈದರಾಬಾದ್ ವಲಯ ತಂಡವು ಅತ್ಯುತ್ತಮ ಪ್ರದರ್ಶನ ನೀಡಿತು. ಲೀಗ್ ಹಂತದಲ್ಲಿ ತಾನಾಡಿದ ಎಲ್ಲಾ ಪಂದ್ಯಗಳಲ್ಲಿ ಅಮೋಘ ಆಟವಾಡಿದ ಹೈದರಾಬಾದ್ ವಲಯ ತಂಡವು ಸೆಮಿಫೈನಲ್‌ನಲ್ಲಿ ಚಂಡೀಗಢ ವಲಯ ತಂಡವನ್ನು 3-0 ಗೋಲುಗಳಿಂದ ಮಣಿಸುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿತು. ಫೈನಲ್ ಪಂದ್ಯದಲ್ಲಿಯೂ ಹೈದರಾಬಾದ್ ವಲಯ ತಂಡವು ಕರಾರುವಕ್ಕಾದ ಆಟ ಪ್ರದರ್ಶಿಸಿತು. ಆರಂಭದಲ್ಲಿ ಮುನ್ನಡೆ…

Read More

ಕುಶಾಲನಗರ, NEWS DESK ಸೆ. 4: ಮಹಿಳೆಯರು ಸರ್ಕಾರದ ಹಾಗೂ ಸಂಘ-ಸಂಸ್ಥೆಗಳ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವ ಮೂಲಕ ಆರ್ಥಿಕವಾಗಿ ಸಬಲೀಕರಣ ಹೊಂದಬೇಕು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಕರೆ ನೀಡಿದರು. ಅವರು ಕುಶಾಲನಗರ ಸಮೀಪದ ಗೊಂದಿ ಬಸವನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ಹಾಗೂ ಶನೈಶ್ವರ ದೇವಸ್ಥಾನ ಟ್ರಸ್ಟ್ ಆಶ್ರಯದಲ್ಲಿ ನಡೆದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಪೋಷಕರ ಆದ್ಯ ಕರ್ತವ್ಯ. ಶಿಕ್ಷಣ ಶಾಶ್ವತ ಆಸ್ತಿಯಾಗಿದ್ದು, ಅದರ ಮೂಲಕ ಜೀವನದ ಗುರಿಯನ್ನು ತಲುಪಲು ಸಾಧ್ಯ ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಮಾಜದ ತಳಮಟ್ಟದ ಜನರಿಗೆ ಅಗತ್ಯವಿರುವ ಆರ್ಥಿಕ ಹಾಗೂ ಸಾಮಾಜಿಕ ಯೋಜನೆಗಳನ್ನು ತಲುಪಿಸುತ್ತಿರುವ ಬಗ್ಗೆ ಶಾಸಕರು ಹೆಮ್ಮೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಮಾಜಿ ಸಚಿವ ಎಂ.ಪಿ. ಅಪ್ಪಚ್ಚು…

Read More

ಮಡಿಕೇರಿ, NEWS DESK ಸೆ. 4: ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಸಮೀಪದ ಒಂಟಿ ಅಂಗಡಿ ಚಾಮುಂಡಿ ಪೈಸಾರಿ ಬಳಿ ಒಂಟಿ ಸಲಗ ದಾಳಿ ನಡೆಸಿದ ಪರಿಣಾಮ ಕೂಲಿ ಕಾರ್ಮಿಕರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ಗಾಯಾಳುವನ್ನು ಅಭಿ (35) ಎಂದು ಗುರುತಿಸಲಾಗಿದ್ದು, ಮೂಲತಃ ನಾಪೋಕ್ಲು ಸಮೀಪದ ಗ್ರಾಮದವರಾಗಿದ್ದಾರೆ. ತಮ್ಮ ಅಣ್ಣನನ್ನು ನೋಡಲು ಒಂಟಿ ಅಂಗಡಿ ಗ್ರಾಮಕ್ಕೆ ಬಂದಿದ್ದ ಸಂದರ್ಭದಲ್ಲಿ ಕಾಫಿ ತೋಟದ ಮಾರ್ಗವಾಗಿ ಬಂದ ಕಾಡಾನೆ ಏಕಾಏಕಿ ದಾಳಿ ನಡೆಸಿದೆ ಎನ್ನಲಾಗಿದೆ. ಆನೆ ದಾಳಿಯ ಪರಿಣಾಮ ಅಭಿ ಅವರ ಸೊಂಟದ ಭಾಗಕ್ಕೆ ತೀವ್ರ ಗಾಯವಾಗಿದೆ. ಇದೇ ವೇಳೆ ರಸ್ತೆಯ ಮಾರ್ಗವಾಗಿ ಬರುತ್ತಿದ್ದ ಆಟೋದಲ್ಲಿದ್ದವರು ಘಟನೆಯನ್ನು ಗಮನಿಸಿ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಗಾಯಾಳುವನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಶಿವರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಆಸ್ಪತ್ರೆಗೆ ತೆರಳಿ ಗಾಯಾಳುವಿನ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.…

Read More