ಮಡಿಕೇರಿ NEWS DESK ಅ.3 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ತಾಲ್ಲೂಕಿನ ಕದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಾಮಿಯಾಲ-ಅರಮೇರಿ ರಸ್ತೆ ರೂ.40 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಹೊಂದಿದೆ. ದಶಕಗಳಿಂದ ಅಭಿವೃದ್ಧಿ ಕಾಣದೆ ನೆನೆಗುದಿಗೆ ಬಿದ್ದಿದ್ದ ರಸ್ತೆಯಿಂದ ಸಾರ್ವಜನಿಕರಿಗೆ ಓಡಾಡಲು ತೊಂದರೆಯಾಗುತ್ತಿತ್ತು. ಈ ಹಿಂದೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಈ ಭಾಗಕ್ಕೆ ಭೇಟಿ ನೀಡಿದ ಸಂದರ್ಭ, ಸ್ಥಳೀಯ ನಾಯಕರು ಹಾಗೂ ಸಾರ್ವಜನಿಕರು ಈ ರಸ್ತೆಯ ಅಭಿವೃದ್ಧಿ ಬಗ್ಗೆ ಮನವಿ ಸಲ್ಲಿಸಿದ್ದರು. ರಸ್ತೆಯ ಅಭಿವೃದ್ಧಿಯ ಅವಶ್ಯಕತೆಯನ್ನು ಗಂಭೀರವಾಗಿ ಪರಿಗಣಿಸಿದ ಶಾಸಕರು, ತಮ್ಮ ನಿಧಿಯಿಂದ ರೂ.40 ಲಕ್ಷ ಅನುದಾನ ಒದಗಿಸಿದ್ದರು. ಇದೀಗ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಉದ್ಘಾಟನೆಗಾಗಿ ಶಾಸಕರ ಆಗಮನವನ್ನು ಎದುರು ನೋಡುತ್ತಿದ್ದಾರೆ. ಈ ರಸ್ತೆ ನಿರ್ಮಿಸಲು ಹಾಗೂ ಅನುದಾನ ಒದಗಿಸಲು ಸಹಕರಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರಾ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ವಲಯ ಅಧ್ಯಕ್ಷ ಕಾಳಮಾಂಡ ಬೇಬಿ, ಪ್ರಮುಖರಾದ ಕುಂಡಚ್ಚಿರ ಮಂಜು ದೇವಯ್ಯ, ಪಂಚಾಯಿತಿ…
ಲೇಖಕ: admin
ಮಡಿಕೇರಿ NEWS DESK ಅ.3 ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ದಶಮಂಟಪಗಳ ಶೋಭಾಯಾತ್ರೆಯ ಬಹುಮಾನ ವಿತರಣಾ ಸಮಾರಂಭದಲ್ಲಿ ಗಲಾಟೆ ನಡೆದಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ವೇದಿಕೆಯನ್ನೇರಿದ ಡಿವೈಎಸ್‌ಪಿಯೊಬ್ಬರು ಕೆಳಗೆ ಬಿದ್ದು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ವೈಭವದ ಮಡಿಕೇರಿ ದಸರಾ ಜನೋತ್ಸವದ ಅಂತಿಮ ಹಂತದಲ್ಲಿ ಕಹಿ ಘಟನೆಯೊಂದು ನಡೆದಿದೆ. ರಾತ್ರಿಪೂರ್ತಿ ನಗರದ ಮುಖ್ಯ ರಸ್ತೆಗಳಲ್ಲಿ ಆಕರ್ಷಕ ಶೋಭಾಯಾತ್ರೆ ನಡೆಸಿದ ಮಂಟಪಗಳಿಗೆ ಬಹುಮಾನ ಘೋಷಿಸುವ ಸಂದರ್ಭ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯನ್ನೇರಿದ ಕರವಲೆ ಶ್ರೀ ಭಗವತಿ ದೇವಾಲಯ ಮಂಟಪದ ಸದಸ್ಯರು ತೀರ್ಪು ಸರಿಯಿಲ್ಲವೆಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ‘ಮೋಸ, ಮೋಸ’ ಎಂದು ಘೋಷಣೆಗಳನ್ನು ಕೂಗುತ್ತಾ ವೇದಿಕೆ ಮೇಲೆ ಹೋದ ದೊಡ್ಡ ಸಂಖ್ಯೆಯ ಯುವಕರು ಅಲ್ಲಿದ್ದ ವಸ್ತುಗಳನ್ನು ಎಸೆಯಲು ಆರಂಭಿಸಿದರು. ಈ ಸಂದರ್ಭ ಎಚ್ಚೆತ್ತುಕೊಂಡ ಪೊಲೀಸರು ವೇದಿಕೆಗೆ ಬಂದು ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದರು. ಗಲಾಟೆ ಮಾಡುತ್ತಿದ್ದ ಯುವಕರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ…
ಮಡಿಕೇರಿ NEWS DESK ಅ.3 : ಮಡಿಕೇರಿ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಜಿ.ಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಸಮಿತಿ ಸದಸ್ಯರ ಉಪಸ್ಥಿತಿಯಲ್ಲಿ ಸಭೆ ನಡೆಯಿತು. ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರು ಮಾತನಾಡಿ ಮಡಿಕೇರಿ ತಾಲ್ಲೂಕಿನಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಅನುಷ್ಠಾನ ಇಲಾಖೆಗಳು ಉತ್ತಮ ಪ್ರಗತಿಯನ್ನು ಸಾಧಿಸಿದೆ. ಮುಂದಿನ ದಿನಗಳಲ್ಲಿಯೂ ಸಹ ಸಮಿತಿಯ ಎಲ್ಲಾ ಸದಸ್ಯರು ಹಾಗೂ ಅಧಿಕಾರಿ ವರ್ಗದವರು ಸರ್ಕಾರದ ಮಹಾತ್ವಾಕಾಂಕ್ಷಿ 5 ಗ್ಯಾರಂಟಿ ಯೋಜನೆಯನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ಮಾಡಲು ಶ್ರಮಿಸಬೇಕು ಹಾಗೂ ಗ್ಯಾರಂಟಿ ಯೋಜನೆಗೆ ಸಂಬAಧಿಸಿದAತೆ ಗ್ರಾಮಪಂಚಾಯತಿ ಮಟ್ಟದಲ್ಲಿ ಫಲಾನುಭವಿಗಳ ಕುಂದುಕೊರತೆ ಸಭೆಯನ್ನು ಮಾಡಬೇಕು ಎಂದು ಸಭೆಯಲ್ಲಿ ತಿಳಿಸಿದರು. ಗೃಹಲಕ್ಷ್ಮಿ ಯೋಜನೆ:-ಶಿಶುಅಭಿವೃದ್ದಿ ಅಧಿಕಾರಿ ಅವರು ಮಾತನಾಡಿ ಮಡಿಕೇರಿ ತಾಲ್ಲೂಕಿನಲ್ಲಿ ಜೂನ್ ಮಾಹೆಯ ಅಂತ್ಯಕ್ಕೆ ಹಣ ಮಂಜೂರಾಗಿರುವ ಒಟ್ಟು ಫಲಾನುಭವಿಗಳ ಸಂಖ್ಯೆ 30,307, ಪಾವತಿಯಾದ ಒಟ್ಟು ಮೊತ್ತ ಜೂನ್ ಮಾಹೆಯ ಅಂತ್ಯಕ್ಕೆ 6,06,14,000 ರೂ. NPCI,e-KYC ಮಾಡಿಸಲು ಬಾಕಿ…
ಪುತ್ತೂರು NEWS DESK ಅ.3 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಇಬ್ಬರು ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ದ್ವಿತೀಯ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಎಮ್.ವಿಜೇತ್ ಪೂಜಾರಿ ಹಾಗೂ ಗೌರವ್.ಎಸ್.ಜಿ ಇವರು ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಅಕ್ಟೋಬರ್ 4 ರಿಂದ 7ರ ವರೆಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಕಬಡ್ಡಿ ಕ್ರೀಡಾಕೂಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಇವರು ಪ್ರತಿನಿಧಿಸಲಿದ್ದಾರೆ. ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಗೊಂಡ ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.
ಮಡಿಕೇರಿ NEWS DESK ಅ.3 : ಕರ್ನಾಟಕ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷರಾಗಿ ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿರುವ ಅಧಿಕೃತ ಕಚೇರಿಯಲ್ಲಿ ಚೆಪ್ಪುಡೀರ ಅರುಣ್ ಮಾಚಯ್ಯ ಅವರು ಅಧಿಕಾರ ಸ್ವೀಕರಿಸಿದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್ ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ, ಕಾಂಚನ್ ಪೊನ್ನಣ್ಣ, ಕಾಂಗ್ರೆಸ್ ಮುಖಂಡರು, ಕ್ರೀಡಾ ಇಲಾಖೆಯ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು. ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಕಚೇರಿಗೆ ಪ್ರವೇಶಿಸಿದ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರನ್ನು ಗಣ್ಯರು ಅಭಿನಂದಿಸಿದರು.
ಮಡಿಕೇರಿ NEWS DESK ಅ.3 : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಸತ್ಯ ಹಾಗೂ ಅಹಿಂಸೆಯ ಮೂಲಕ ಇಡೀ ವಿಶ್ವಕ್ಕೆ ಬೆಳಕು ತೊರಿಸಿದ ಮಾಹಾನ್ ಚೇತನ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಪ್ರತಿಪಾದಿಸಿದ್ದಾರೆ. ಸತ್ಯ ಹಾಗೂ ಅಹಿಂಸೆ ಎಂಬ ಅಸ್ತ್ರಗಳಿಂದ ಬ್ರಿಟೀಷರ ವಿರುದ್ದ ಹೋರಾಡಿದ ಮಹಾತ್ಮ ಗಾಂಧೀಜಿ, ಈ ಎರಡೂ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಇವರ ಹಾದಿಯಲ್ಲೇ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಯವರು ನಡೆದರು. ನೈತಿಕತೆಗೆ ಗಾಂಧೀಜಿ ಹಾಗೂ ಶಾಸ್ತ್ರೀಜಿಯವರು ಮಾದರಿಯಾಗಿದ್ದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ನುಡಿದರು. ಜಿಲ್ಲಾಡಳಿತ, ಜಿ.ಪಂ. ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ, ಕನ್ನಡ ಮತ್ತು ಸಂಸ್ಕೃತಿ, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ, ನಗರಸಭೆ, ಕನ್ನಡ ಸಾಹಿತ್ಯ ಪರಿಷತ್ತು, ಸರ್ವೋದಯ ಸಮಿತಿ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜಾನಪದ ಪರಿಷತ್ತು ಇವರ ಸಹಕಾರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156 ನೇ ಮತ್ತು ಮಾಜಿ ಪ್ರಧಾನಿ ಲಾಲ್…
ಮಡಿಕೇರಿ NEWS DESK ಅ.1 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲೊಂದಾಗಿರುವ ಶ್ರೀ ಕಂಚಿಕಾಮಾಕ್ಷಿ ದೇವಾಲಯ ದಸರಾ ಮಂಟಪ ಸಮಿತಿ 62ನೇ ವರ್ಷದ ಉತ್ಸವಕ್ಕೆ ಸಜ್ಜಾಗುತ್ತಿದ್ದು, ಪರಶುರಾಮನಿಂದ ಕಾರ್ತಿಕೆ ವೀರನ ಸಂಹಾರ ಕಥಾ ಸಾರಂಶವನ್ನು ಮಂಟಪದಲ್ಲಿ ಅಳವಡಿಸಲಾಗುತ್ತಿದೆ ಎಂದು ಶ್ರೀ ಕಂಚಿಕಾಮಾಕ್ಷಿ ದೇವಾಲಯ ದಸರಾ ಮಂಟಪ ಸಮಿತಿ ಅಧ್ಯಕ್ಷ ಕೆ.ಬಿ.ಲೋಹಿತ್ ತಿಳಿಸಿದ್ದಾರೆ. ಎರಡು ಟ್ರ್ಯಾಕ್ಟರ್ ಗಳನ್ನು ಬಳಸಲಾಗುತ್ತಿದ್ದು, ದಿಂಡಿಗಲ್‌ನ ಜೇಮ್ಸ್ ಲೈಟಿಂಗ್ ಬೋರ್ಡ್ ಅಳವಡಿಸಲಿದ್ದಾರೆ. 25 ಕಲಾಕೃತಿಗಳನ್ನು ಬಳಸಲಾಗುತ್ತಿದ್ದು, ಮಡಿಕೇರಿಯ ಸುನಿಲ್, ಆದರ್ಶ್, ಪ್ರಜ್ವಲ್, ಕಿರಣ್‌ರಾಜ್ ಮತ್ತು ತಂಡ ಹಾಗೂ ಹುದುಬೂರಿನ ಮಹದೇವಪ್ಪ ಅಂಡ್ ಸನ್ಸ್ ಕಲಾಕೃತಿಗಳನ್ನು ತಯಾರಿಸಲಿದ್ದಾರೆ. ಸೋಮವಾರಪೇಟೆಯ ನಂದಿ ಸೌಂಡ್ಸ್ ಧ್ವನಿವರ್ಧಕ ಒದಗಿಸಲಿದ್ದು, ಮಡಿಕೇರಿಯ ಗೌತಮ ಬುದ್ದ ತಂಡ ಸ್ಟುಡಿಯೋ ಸೆಟ್ಟಿಂಗ್ಸ್ ವ್ಯವಸ್ಥೆ ಮಾಡಲಿದೆ. ಪ್ಲಾಟ್‌ಫಾರಂ ನಿರ್ಮಾಣ ಹಾಗೂ ಟ್ರ್ಯಾಕ್ಟರ್ ಸೆಟ್ಟಿಂಗ್ಸ್ ನ್ನು ರಾಘವೇಂದ್ರ ಹಾಗೂ ಸಮಿತಿ ಸದಸ್ಯರು ಮಾಡಲಿದ್ದಾರೆ. ಕಲಾಕೃತಿಗಳಿಗೆ ಚಲನವಲನವನ್ನು ಸಮಿತಿ ಸದಸ್ಯರೇ ನೀಡಲಿದ್ದು, ರೆಹಮತ್, ಪಾರಿಷ್, ಶಶಿ ಆಚಾರ್ಯ ವೆಲ್ಡಿಂಗ್ ಕಾರ್ಯನಿರ್ವಹಿಸಲಿದ್ದಾರೆ. ಫೈರ್ ವರ್ಕ್ಸ್…
ಮಡಿಕೇರಿ NEWS DESK ಅ.1 : ನಗರದ ಶ್ರೀ ಕರವಲೆ ಭಗವತಿ ಮಹಿಷ ಮರ್ದಿನಿ ದೇವಾಲಯ ದಸರಾ ಮಂಟಪ ಸಮಿತಿ 30ನೇ ವರ್ಷದ ಉತ್ಸವ ಆಚರಣೆಗೆ ಸಜ್ಜಾಗುತ್ತಿದೆ ಎಂದು ಕರವಲೆ ಭಗವತಿ ಮಹಿಷ ಮರ್ದಿನಿ ದೇವಾಲಯ ದಸರಾ ಮಂಟಪ ಸಮಿತಿ ಅಧ್ಯಕ್ಷ ಆಪಾಡಂಡ ವಿನೋದ್ ಕಾರ್ಯಪ್ಪ ತಿಳಿಸಿದ್ದಾರೆ. ಎರಡು ಟ್ರ್ಯಾಕ್ಟರ್ ಗಳನ್ನು ಬಳಸಲಾಗುತ್ತಿದ್ದು, ಸಂಜೀವಿನಿ ಸಸ್ಯಕ್ಕಾಗಿ ದ್ರೋಣಗಿರಿಯನ್ನು ಹೊತ್ತು ತರುವ ಆಂಜನೇಯ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗಿತ್ತಿದೆ. ದಿಂಡ್‌ಗಲ್ ಸೆಲ್ವಂ ಲೈಟಿಂಗ್ ಬೋರ್ಡ್ ಅಳವಡಿಸಲಿದ್ದಾರೆ. ಮಡಿಕೇರಿಯ ಸ್ಕಂದ ಲೈಟಿಂಗ್ಸ್ ಅನಿಲ್ ಧ್ವನಿವರ್ಧಕ ಒದಗಿಸಲಿದ್ದು, ಬೆಂಗಳೂರಿನ ಅನು ಪ್ರೊ ಇವೆಂಟ್‌ನವರು ಸ್ಟುಡಿಯೋ ಸೆಟ್ಟಿಂಗ್ಸ್ ಮಾಡಲಿದ್ದಾರೆ. ಪ್ಲಾಟ್‌ಫಾರಂ ನಿರ್ಮಾಣ, ಟ್ರ್ಯಾಕ್ಟರ್ ಸೆಟ್ಟಿಂಗ್ಸ್, ಕಲಾಕೃತಿಗಳಿಗೆ ಚಲನವಲನ ವ್ಯವಸ್ಥೆಯನ್ನು ಸಮಿತಿ ಸದಸ್ಯರೇ ಮಾಡಲಿದ್ದಾರೆ. 18 ಕಲಾಕೃತಿಗಳನ್ನು ಬಳಸಲಾಗುತ್ತಿದ್ದು, ಮಡಿಕೇರಿ ಶೋಮ್ಯಾನ್ ಕ್ರಿಯೇಷನ್ಸ್ನ ಸಂದೀಪ್, ಹುದುಬೂರಿನ ನಾಗರಾಜು ಕಲಾಕೃತಿಗಳನ್ನು ತಯಾರಿಸಲಿದ್ದಾರೆ. ಫೈರ್ ಎಫೆಕ್ಟ್ ನ್ನು ಬೆಂಗಳೂರಿನ ವೈಎಫ್‌ಎಕ್ಸ್ ಫೈರ್ ವರ್ಕ್ಸ್ನವರು ನೀಡಲಿದ್ದಾರೆ. ರೂ.26 ಲಕ್ಷ ವೆಚ್ಚದಲ್ಲಿ ಮಂಟಪವನ್ನು ಹೊರತರಲಾಗುತ್ತಿದ್ದು,…
ಮಡಿಕೇರಿ NEWS DESK ಅ.1 : ನಗರದ ಶ್ರೀ ಕೋಟೆ ಮಹಾಗಣಪತಿ ದೇವಾಲಯ ದಸರಾ ಮಂಟಪ ಸಮಿತಿ 49ನೇ ವರ್ಷದ ಉತ್ಸವ ಆಚರಣೆಗೆ ಸಜ್ಜಾಗುತ್ತಿದ್ದು, ಈ ಬಾರಿ ಮಂಟಪದಲ್ಲಿ ಶ್ರೀ ವಿಘ್ನರಾಜನಿಂದ ಮಮತಾಸುರನ ಸಂಹಾರ ಕಥಾ ಸಾರಾಂಶವನ್ನು ಅಳವಡಿಸಲಾಗುತ್ತಿದೆ ಎಂದು ಕೋಟೆ ಮಹಾಗಣಪತಿ ದೇವಾಲಯ ದಸರಾ ಮಂಟಪ ಸಮಿತಿ ಅಧ್ಯಕ್ಷ ಸಿ.ಯು.ವಿಘ್ನೇಶ್ ತಿಳಿಸಿದ್ದಾರೆ. ಎರಡು ಟ್ರ್ಯಾಕ್ಟರ್ ಗಳನ್ನು ಬಳಸಲಾಗುತ್ತಿದ್ದು, ಕಥಾ ಸಾರಾಂಶವನ್ನು ವೆಂಕಟೇಶ್ ಕುಡ್ತೆಕರ್, ಧೀರಜ್ ವೆಂಕಟೇಶ್ ಕುಡ್ತೆಕರ್ ಆಯ್ಕೆ ಮಾಡಿದ್ದಾರೆ. ಮಡಿಕೇರಿ ಪೂಜಾ ಲೈಟಿಂಗ್‌ನ ನಜೀರ್ ಲೈಟಿಂಗ್ ಬೋರ್ಡ್ ಅಳವಡಿಸಲಿದ್ದಾರೆ. ಧ್ವನಿವರ್ಧಕ ಹಾಗೂ ಸ್ಟುಡಿಯೋ ವ್ಯವಸ್ಥೆಯನ್ನು ಮಡಿಕೇರಿಯ ಸಂಗೀತ ಇವೆಂಟ್ಸ್ ನ ಎಚ್.ಪಿ. ಲೋಕೇಶ್ ಮಾಡಲಿದ್ದಾರೆ. ಒಟ್ಟು 27 ಕಲಾಕೃತಿಗಳನ್ನು ಬಳಸಲಾಗುತ್ತಿದ್ದು, ಮಂಗಳೂರಿನ ಯತೀಶ್ ಪ್ರಕಾಶ್ ಹಾಗೂ ಹುದುಬೂರಿನ ಮಹದೇವಪ್ಪ ಆಂಡ್ ಸನ್ಸ್ ಕಲಾಕೃತಿಗಳನ್ನು ತಯಾರಿಸಲಿದ್ದಾರೆ. ಮಂಟಪದ ಉಸ್ತುವಾರಿ ಹಾಗೂ ಟ್ರ್ಯಾಕ್ಟರ್ ನೆಟ್ವರ್ಕ್ ಮತ್ತು ಚಲನವಲನ ವ್ಯವಸ್ಥೆಯನ್ನು ಸ್ಟುಡಿಯೋದ ಎಂ.ವಿ. ನವೀನ್, ಸುಲ್ತಾನ್, ದೀಕ್ಷಿತ್, ಜಲೀಲ್, ನವಾಜ್ ಸವಾದ್, ನೌಫಲ್,…
ಮಡಿಕೇರಿ NEWS DESK ಅ.1 : ನಗರದ ನಾಲ್ಕು ಶಕ್ತಿ ದೇವತೆಗಳ ಪೈಕಿ ಹಿರಿಯ ಅಕ್ಕಳೆಂದೆ ಖ್ಯಾತಿಯಾಗಿರುವ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯ ದಸರಾ ಮಂಟಪ ಸಮಿತಿ 52 ನೇ ವರ್ಷದ ಉತ್ಸವ ಆಚರಣೆಗೆ ಸಜ್ಜಾಗುತ್ತಿದೆ ಎಂದು ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ ದೇವಾಲಯ ದಸರಾ ಮಂಟಪ ಸಮಿತಿ ಅಧ್ಯಕ್ಷ ಎ.ಆರ್.ಮಂಜುನಾಥ್ ತಿಳಿಸಿದ್ದಾರೆ. ಎರಡು ಟ್ಯಾಕ್ಟರ್ ಗಳನ್ನು ಬಳಸಲಾಗುತ್ತಿದ್ದು, ಶಿವ ಪುರಾಣದ 11 ರಿಂದ 16 ಅಧ್ಯಾಯದ ಪರಶಿವನಿಂದ ಜಲಾಂಧರನ ವಧೆ ಎಂಬ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗುತ್ತಿದೆ. ಕಥಾ ಸಂಪೂರ್ಣ ಜವಾಬ್ದಾರಿಯನ್ನು ಸಾರಾಂಶದ ಸುಬ್ರಹ್ಮಣ್ಯ ಕುಮಾರ್ ಹಾಗೂ ಹೇಮಂತ್ ಪೂಜಾರಿ ನಿಭಾಯಿಸಲಿದ್ದು, 22 ಕಲಾಕೃತಿಗಳನ್ನು ಬಳಸಲಾಗುತ್ತಿದೆ. ಕಲಾಕೃತಿಗಳನ್ನು ಹುದುಬೂರಿನ ಸ್ಟುಡಿಯೋ ಹಾಗೂ ಕ್ರಾಕರ್ಸ್ ವ್ಯವಸ್ಥೆಯನ್ನು ಮಡಿಕೇರಿಯ ಇವೆಂಟ್ ಟೆಕ್‌ನ ಅವೀನ್ ಕುಮಾರ್ ತಂಡ ಮಾಡಲಿದೆ. ಧ್ವನಿವರ್ಧಕವನ್ನು ಮಡಿಕೇರಿಯ ಸಂದೇಶ್ ಶೆಟ್ಟಿ, ಮದನ್ ಸಂತೋಷ್ ರೈ ಒದಗಿಸಲಿದ್ದು, ಕಲಾಕೃತಿಗಳಿಗೆ ಚಲನವಲನವನ್ನು ನಿಕ್ಕಿಲ್, ಮಿಥುನ್, ಸಂದೇಶ್, ಪವನ್, ಲಾರೆನ್ಸ್, ಮೋಹನ್, ಹೇಮಂತ್, ಹರೀಶ್,…






