ನಾಪೋಕ್ಲು ಸೆ.29 NEWS DESK : ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಹಮ್ಮಿಕೊಂಡಿರುವ ವಿಶೇಷ ವಾರ್ಷಿಕ ಶಿಬಿರದಲ್ಲಿ ಪಕ್ಷಿ ವೈವಿಧ್ಯತೆ ಮತ್ತು ಪ್ರಕೃತಿ ಎಂಬ ವಿಷಯದ ಕುರಿತು ವಿರಾಜಪೇಟೆಯ ವೈದ್ಯರು ಹಾಗೂ ಪಕ್ಷಿ ತಜ್ಞರಾದ ಡಾ. ಎಸ್.ವಿ .ನರಸಿಂಹನ್ ಅವರು ಶಿಬಿರಾರ್ಥಿಗಳಿಗೆ ಉಪನ್ಯಾಸ ನೀಡಿದರು. ಪಕ್ಷಿಗಳಿಗೂ ಪ್ರಕೃತಿಗೂ ಇರುವ ಸಂಬಂಧ ಈ ವಿಚಾರಗಳನ್ನು ಸ್ಲೈಡ್ ಶೋ ಮುಖಾಂತರ ವಿದ್ಯಾರ್ಥಿಗಳಿಗೆ ವಿವರಿಸಿದರು. ಕುಟ್ರ ಹಕ್ಕಿ, ಸೂರಕ್ಕಿ, ಕಾಜಾಣ ಮಂಗಟ್ಟೆ ಹಕ್ಕಿ, ರಣಹದ್ದುಗಳು ಇವುಗಳ ಕಾರ್ಯವೈಕರಿ ಮರದ ಆರೋಗ್ಯ, ಪ್ರಕೃತಿ ಮಾನವ ಜೀವಿಗಳ ಉಳಿವಿಗೆ ಕೀಟಗಳ ಅಗತ್ಯತೆ, ಹಕ್ಕಿಗಳಿಂದ ಕೀಟ ನಿಯಂತ್ರಣ, ಪರಾಗಸ್ಪರ್ಶ, ಬೀಜ ಪ್ರಸರಣ, ಹಕ್ಕಿಗಳಿಂದ ಪರಿಸರ ನೈರ್ಮಲ್ಯ, ಹಕ್ಕಿಗಳನ್ನು ನೋಡಿ ವಿಜ್ಞಾನ ಬೆಳೆದದ್ದು ಈ ಮೊದಲಾದ ವಿಚಾರಗಳ ಬಗ್ಗೆ ಚಿತ್ರಗಳನ್ನು ತೋರಿಸಿ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೂರ್ನಾಡು ವಿದ್ಯಾ ಸಂಸ್ಥೆಯ ಉಪಾಧ್ಯಕ್ಷರಾದ ನಂದೇಟಿರ ರಾಜ ಮಾದಪ್ಪ ಸ್ವಚ್ಛತೆ ಎನ್ನುವುದು…
ಲೇಖಕ: admin
ನಾಪೋಕ್ಲು ಸೆ.29 NEWS DESK : ಹಿಂದೂ ಧರ್ಮದ ಪ್ರತಿಯೊಂದು ಮಂತ್ರದ ಸಾರ ಸರ್ವರ ಒಳಿತನ್ನು ಸಾಧಿಸುವುದೇ ಆಗಿದೆ ಎಂದು ಉಪನ್ಯಾಸಕ ಪಟ್ಟಡ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಮದೆ ಗ್ರಾಮದ ದೇವರಕೊಲ್ಲಿಯ ಶ್ರೀ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಡೆದ ನವರಾತ್ರಿ ಉತ್ಸವದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಹಿಂದೂ ಧರ್ಮ ಪ್ರತಿಯೊಬ್ಬರ ಭಾವನೆಗಳಿಗೆ ಬೆಲೆ ನೀಡಿ, ಅವರಿಗಿಷ್ಟ ಬಂದ ರೀತಿಯಲ್ಲಿ ಧಾರ್ಮಿಕ ಆಚರಣೆಗಳನ್ನು ನಡೆಸಲು ಅವಕಾಶ ನೀಡಿದೆ. ಆದ್ದುದರಿಂದ ಇಲ್ಲಿ ಭಗವಂತನನ್ನು ಹಲವು ರೂಪದಲ್ಲಿ ಹಾಗೂ ಹಲವು ವಿಧಾನಗಳಲ್ಲಿ ಪೂಜಿಸುವ ಅವಕಾಶ ದೊರೆತಿದೆ ಎಂದರು. ಪ್ರಸ್ತುತ ಜಗತ್ತಿನ ಸಮಸ್ಯೆಗಳನ್ನು ಬಗೆಹರಿಸಲು ಹಿಂದೂ ಸಂಸ್ಕೃತಿಗೆ ಮಾತ್ರ ಸಾಧ್ಯವಿದೆ, ಏಕೆಂದರೆ ಹಿಂದೂ ಸಂಸ್ಕೃತಿ ಜಗತ್ತಿನ ಸರ್ವರ ಕಲ್ಯಾಣವನ್ನು ಬಯಸುತ್ತದೆ, ವಸುದೈವ ಕುಟುಂಬಕಂ, ಅಂದರೆ ಇಡೀ ಜಗತ್ತು ಒಂದೇ ಕುಟುಂಬಕ್ಕೆ ಸೇರಿದ್ದು ಎಂಬ ಭಾವನೆಯನ್ನು ಹೊಂದಿರುವ ಹಿಂದೂ ಸಂಸ್ಕೃತಿ ಅತ್ಯಂತ ಶ್ರೇಷ್ಠ ಸಂಸ್ಕೃತಿ ಎಂದು ಬಣ್ಣಿಸಿದರು. ಹಿಂದೂ ದೇವಾಲಯಗಳು ಹಾಗೂ ಮಠ ಮಂದಿರಗಳು ನಿತ್ಯ ನಿರಂತರವಾಗಿ ಅನ್ನದಾಸೋಹ,…
ನಾಪೋಕ್ಲು ಸೆ.29 NEWS DESK : ನಾಪೋಕ್ಲು ದವಸ ಭಂಡಾರದ 2024-25ನೇ ಸಾಲಿನ 90ನೇ ವಾರ್ಷಿಕ ಮಹಾಸಭೆಯು ಭಗವತಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ದವಸ ಭಂಡಾರದ ಅಧ್ಯಕ್ಷರಾದ ಕಂಗಾಂಡ ಜಾಲಿ ಪೂವಪ್ಪ ಅವರ ಅಧಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದವಸ ಬಂಡಾರ ಅಭಿವೃದ್ಧಿ ಬಗ್ಗೆ ಚರ್ಚಿಸಿ ಒಮ್ಮತದ ನಿರ್ಧಾರಗಳನ್ನು ಕೈಗೊಳ್ಳಲಾಯಿತು ಹಾಗೂ ಲೆಕ್ಕಪತ್ರಗಳನ್ನು ಸಭೆಗೆ ಮಂಡಿಸಿ ಅನುಮೋದನೆ ಪಡೆದುಕೊಳ್ಳಲಾಯಿತು. ಸಭೆಯಲ್ಲಿ ಉಪಸ್ಥಿತರಿದ್ದ ಉದಯಶಂಕರ್, ಅಶೋಕ. ಅಂಬಿ ಕಾರ್ಯಪ್ಪ, ರಘು ಕರುಂಬಯ್ಯ, ಹಿರಿಯರಾದ ಕಾವೇರಪ್ಪ ಸಂಸ್ಥೆಯ ಶ್ರೇಯೋಭಿವೃದ್ಧಿಯ ಬಗ್ಗೆ ಚರ್ಚಿಸಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಸಭೆಯಲ್ಲಿ ದವಸ ಭಂಡಾರದ ಉಪಾಧ್ಯಕ್ಷ ಶಿವಚಳಿಯಂಡ ಕಿಶೋರ್ ಬೋಪಣ್ಣ, ನಿರ್ದೇಶಕರುಗಳಾದ ಶಿವಚಳಿಯಂಡ ಸುಭಾಷ್ ಸೋಮಯ್ಯ, ರಾಜೇಶ್ ತಮ್ಮಯ್ಯ, ಪಡಿಯಮ್ಮಂಡ ಮನು ಮಹೇಶ್, ಅರೆಯಡ ವಿನೋದ್, ಅಶೋಕ, ಬೊಪ್ಪಂಡ ಕಾಳಪ್ಪ, ಅಜ್ಜೇಟ್ಟೀರ ರಾಣಿ, ಕುಂಬಂಡ ಚಿತ್ರಾ, ಕಾರ್ಯದರ್ಶಿ ಕುಂಬಂಡ ಕೇಶವ ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಸೆ.29 NEWS DESK : ಗೋಣಿಕೊಪ್ಪ ಕಾವೇರಿ ಕಾಲೇಜಿನಲ್ಲಿ 1982ನೇ ಶೈಕ್ಷಣಿಕ ವರ್ಷದ ವಿಜ್ಞಾನ, ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪುನರ್ಮಿಲನ ಮತ್ತು ಸಂತೋಷ ಕೂಟ ಸಂಭ್ರಮದಿಂದ ನಡೆಯಿತು. ವಿರಾಜಪೇಟೆಯ ಕೊಡವ ಸಮಾಜ ಸಭಾಂಗಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸಂಭ್ರಮ ಮನೆ ಮಾಡಿತ್ತು. ಸೇರಿದವರು ಹಳೆಯ ನೆನಪುಗಳನ್ನು ಮೆಲಕು ಹಾಕಿದರು. 2021ರಲ್ಲಿ ಪ್ರಾರಂಭಗೊಂಡ ಹಳೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಭ್ರಮಿಸಿದ್ದು, ಆ ಅಭೂತಪೂರ್ವ ಪುನರ್ಮಿಲನಕ್ಕೆ ಒಂದು ವಿಶೇಷ ಮೆರುಗನ್ನು ನೀಡಿತ್ತು. ಈ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ವಿವಿಧ ಆಟೋಟ, ಮನೋರಂಜನಾ ಚಟುವಟಿಕೆ ಮತ್ತು ಸ್ಪರ್ಧೆಗಳಲ್ಲಿ ತಮ್ಮ ದಿನದ ಜಂಜಾಟವನ್ನು ಮರೆತು ಕುಣಿದು ಕೊಪ್ಪಲಿಸಿ ಸಂಭ್ರಮಿಸಿದರು. ಪ್ರಾಸ್ತಾವಿಕ ಭಾಷಣ ಮಾಡಿದ ಹಳೆಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಮುಂಡಂಡ ಸಿ.ನಾಣಯ್ಯ ತಮ್ಮ ಕಾಲೇಜು ದಿವಸಗಳ ಗತವೈಭವವನ್ನು ಮೆಲುಕು ಹಾಕುತ್ತಾ, ತಮ್ಮ ಸಹಪಾಠಿಗಳ ಸಾಮಾಜಿಕ ಕಳಕಳಿ ಮತ್ತು ಬದ್ಧತೆಯನ್ನು ಶ್ಲಾಘಿಸಿದರು. ಮುಂದಿನ ದಿನಗಳಲ್ಲಿ ಬಲಿಷ್ಠ ಹಾಗೂ ಸಮೃದ್ಧ ಸಮಾಜವನ್ನು ಕಟ್ಟುವ ಪರಿಕಲ್ಪನೆಯಡಿಯಲ್ಲಿ ಸಂಕಲ್ಪವನ್ನು ಮಾಡಬೇಕು ಎಂದರು.…
ನಾಪೋಕ್ಲು ಸೆ.29 NEWS DESK : ಸದಸ್ಯರ ಸಹಕಾರದಿಂದ ಸಂಘದ ಬಲವರ್ಧನೆ ಸಾಧ್ಯ ಎಂದು ಕೊಡಗು ಹವ್ಯಕ ಬ್ರಾಹ್ಮಣರ ಉತ್ತಮ ಜೀವನ ಸಹಕಾರ ಸಂಘದ ಅಧ್ಯಕ್ಷ ಪಿ.ಎನ್.ಹರಿಶಂಕರ್ ಪ್ರಸಾದ್ ಹೇಳಿದರು. ವಿರಾಜಪೇಟೆಯ ಚಿಕ್ಕಪೇಟೆಯಲ್ಲಿರುವ ಆಂಜನೇಯ ದೇವಸ್ಥಾನದ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಕೊಡಗು ಹವ್ಯಕ ಬ್ರಾಹ್ಮಣರ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. 1948ರಲ್ಲಿ ಸ್ಥಾಪನೆಯಾದ ಕೊಡಗು ಹವ್ಯಕ ಬ್ರಾಹ್ಮಣರ ಉತ್ತಮ ಜೀವನ ಸಹಕಾರ ಸಂಘ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಗುತ್ತಿದೆ ಎಂದರು. ಉಪಾಧ್ಯಕ್ಷ ಎಂ.ಎಸ್.ಸುಧೀರ್ ಕುಮಾರ್ ಮಾತನಾಡಿ, ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಕೊಡಗು ಹಾಗೂ ಸಂಘದ ಆಶ್ರಯದಲ್ಲಿ ವಿಪ್ರ ಕ್ರಿಕೆಟ್ ಟೂರ್ನಿಯನ್ನು ವಿರಾಜಪೇಟೆಯಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ ಎಂದರು. ಸಂಘದ ನಿರ್ದೇಶಕರಾದ ಪಿ.ಎಸ್ ನರೇಂದ್ರನಾಥ್, ಕೆ.ಆರ್.ರಂಜಿತ್, ಪಿ.ಎ.ನಾಗರಾಜ್, ಎನ್.ಎಸ್.ಉದಯಶಂಕರ್, ಸಿ.ಎಸ್.ಸುರೇಶ್, ಕೆ.ಎಸ್. ಮಂಜುನಾಥ್ ಉಪಸ್ಥಿತರಿದ್ದರು. ಶ್ರೀನಿವಾಸ್ ಮೂರ್ತಿ ಪ್ರಾರ್ಥಿಸಿದರು. ಗೌರವ ಕಾರ್ಯದರ್ಶಿ ಕೆ.ಆರ್.ನಾರಾಯಣ ಮೂರ್ತಿ ವಾರ್ಷಿಕ ವರದಿ ವಾಚಿಸಿ ವಂದಿಸಿದರು. ನಿರ್ದೇಶಕಿ ಮೀನಾಕ್ಷಿ ಅವರ…
ಮಡಿಕೇರಿ ಸೆ.29 NEWS DESK : ಮಡಿಕೇರಿ ದಸರಾಗೆ ತನ್ನದೇ ಆದ ಇತಿಹಾಸವಿದ್ದು, ಆ ನಿಟ್ಟಿನಲ್ಲಿ ದಸರಾ ಸಂಸ್ಕೃತಿ ಮತ್ತು ಜಾನಪದವನ್ನು ಉಳಿಸಿ ಬೆಳೆಸಿಕೊಂಡು ಹೋಗುವಂತಾಗಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ..ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ಮಳೆಯ ನಡುವೆಯೂ ದಸರಾಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದೇ ಸಾಕ್ಷಿಯಾಗಿದೆ ಎಂದು ನುಡಿದರು. ನಾಡಹಬ್ಬ ಮಡಿಕೇರಿ ಮತ್ತು ಗೋಣಿಕೊಪ್ಪದಲ್ಲಿ ದಸರಾಗೆ ಹೆಚ್ಚಿನ ಸ್ಪಂದನೆ ದೊರೆತಿರುವುದು ಮೆಚ್ಚುವಂತದ್ದು ಎಂದು ಎ.ಎಸ್.ಪೊನ್ನಣ್ಣ ಅವರು ಹೇಳಿದರು. ಸಾಂಸ್ಕೃತಿಕ ಹಿನ್ನೆಲೆ ಇರುವ ತಮ್ಮದೇ ಆಚರಣೆ ಸಂಸ್ಕೃತಿ, ಕಲೆಗಳ ಪ್ರದರ್ಶನಕ್ಕೆ ಜಾನಪದ ದಸರಾ ಉತ್ತಮ ವೇದಿಕೆಯಾಗಿದೆ ಎಂದು ಎ.ಎಸ್.ಪೊನ್ನಣ್ಣ ಅವರು ಹೇಳಿದರು. ಕೃಷಿಕ ಮಹಿಳೆ ಭಾಗೀರಥಿ ಹುಲಿತಾಳ ಅವರು ಮಾತನಾಡಿ ಜಾನಪದ ಹಾಡು, ಕತೆಗಳು ಎಂದೆಂದಿಗೂ ಸಾರ್ವಕಾಲೀಕವಾಗಿವೆ ಎಂದರು. ಜಾನಪದ ಹಾಡು ಕತೆಗಳು ಪ್ರತಿಯೊಬ್ಬರ ಮನಸ್ಸಿಗೆ ಮುದ ನೀಡುತ್ತವೆ. ಜೊತೆಗೆ ಮನಸ್ಸಿನ ಮೇಲೆ ಹೆಚ್ಚಿನ ಪ್ರಭಾವ ಬೀರುತ್ತವೆ ಎಂದು ಹುಲಿತಾಳ ಅವರು ಹೇಳಿದರು. ಭಾವಪೂರ್ಣವಾಗಿ…
ವಿರಾಜಪೇಟೆ ಸೆ.29 NEWS DESK : ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಬಿ.ಎನ್.ಲಾವಣ್ಯ ಬೋರ್ಕಾರ್ ಗೆ ಕಲಾನಿಧಿ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಲಾವಣ್ಯ ಅವರ ಭರತನಾಟ್ಯದಲ್ಲಿನ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭ ಕರ್ನಾಟಕ ಸಾವಿತ್ರಿ ಬಾಯಿ ಪುಲೆ ಶಿಕ್ಷಕಿಯರ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಲತಾ ಎಸ್.ಮುಳ್ಳೂರ, ಲೇಖಕರು ನಟ ನಿರ್ದೇಶಕರಾದ ಡಾ.ಕೆಂಚನೂರು ಶಂಕರ ಮೊದಲಾದವರು ಉಪಸ್ಥಿತರಿದ್ದರು. ಲಾವಣ್ಯ ಬೋರ್ಕಾರ್ ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ನ ಗುರುಗಳಾದ ವಿದುಷಿ ಪ್ರೇಮಾಂಜಲಿ ಆಚಾರ್ಯ ಅವರ ಶಿಷ್ಯೆಯಾಗಿದ್ದಾಳೆ ಹಾಗೂ ವಿರಾಜಪೇಟೆ ಬೇಟೋಳಿ ರಾಮನಗರದ ನಾಟಿ ವೈದ್ಯರು ಮತ್ತು ಕೊಡಗು ಬಾಲವಲೀಕಾರ್ ಉತ್ತಮ ಜೀವನ ಸಹಕಾರ ಸಂಘದ ಅಧ್ಯಕ್ಷರಾದ ಬಿ.ಜಿ.ನಟರಾಜ್ ಬೋರ್ಕಾರ್ ಹಾಗೂ ಸುನಂದ ಬೋರ್ಕಾರ್ ದಂಪತಿಗಳ…
ಸೋಮವಾರಪೇಟೆ ಸೆ.29 NEWS DESK : ರಕ್ತದಾನ ಮಾಡುವ ಮೂಲಕ ಮತ್ತೊಂದು ಜೀವವನ್ನು ಉಳಿಸಿ ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ವತಿಯಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಹಾಗೂ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ರಕ್ತದಾನ ಮಹಾದಾನವಾಗಿದೆ ನೀವು ನೀಡುವ ರಕ್ತ ಒಂದು ಜೀವವನ್ನು ಉಳಿಸಬಲ್ಲದು ಎಂದರು. ರಕ್ತದಾನದ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆ ಇದೆ ಸರಿಯಲ್ಲಾ. ಮೂರು ತಿಂಗಳಿಗೊಮ್ಮೆ ನೀವು ರಕ್ತ ನೀಡುವ ಮೂಲಕ ದೇಹದಲ್ಲಿ ಹೊಸ ರಕ್ತ ಉತ್ಪತಿಗೆ ಅವಕಾಶ ನೀಡಿದಂತಾಗುತ್ತದೆ. ಈ ದೇಶದ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಒಳಿತಿಗಾಗಿ, ಅಭಿವೃದ್ಧಿಗಾಗಿ ದಿನದ 16 ಗಂಟೆಗಳ ಕಾಲ ದುಡಿಯುತ್ತಿದ್ದಾರೆ ಅಂತವರ ಶ್ರೇಯಸಿಗಾಗಿ ಅವರ ನೆನಪಿನಲ್ಲಿ ಇಂತಹ ಆರೋಗ್ಯ ಶಿಬಿರ ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿವಿಧ ವೈದ್ಯರು ಆಗಮಿಸಿದ್ದು ಜನತೆ ಇದರ ಸದುಪಯೋಗ…
ವಿರಾಜಪೇಟೆ ಸೆ.29 NEWS DESK : ಜಿಲ್ಲೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ವಿರಾಜಪೇಟೆಯ ಸೆಂಟ್ ಆನ್ಸ್ ಕಾಲೇಜಿನಲ್ಲಿ ಸ್ನಾತಕೋತ್ತರ ವಿಭಾಗಕ್ಕೆ 2025 -26ನೇ ಸಾಲಿಗೆ ಪ್ರವೇಶಾತಿ ಆರಂಭವಾಗಿದೆ. ನುರಿತ ಉಪನ್ಯಾಸಕರು, ಸುಸಜ್ಜಿತ ಕೊಠಡಿ, ಐಸಿಟಿ ತರಗತಿ, ಗ್ರಂಥಾಲಯ ವ್ಯವಸ್ಥೆ, ವೈಫೈ ವ್ಯವಸ್ಥೆ, ಕೆ ಸೆಟ್ ಹಾಗೂ ನೆಟ್ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಜೊತೆಗೆ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ವಿಚಾರ ಮಂಡನೆ, ಇಂಡಸ್ಟ್ರಿಯಲ್ ವಿಸಿಟ್ ಹಾಗೂ ಇಂಟರ್ನ್ ಷಿಪ್, ಬೋಧನಾ ಕೌಶಲ್ಯ ತರಬೇತಿ, ಸೆಮಿನಾರ್, ಫೆಸ್ಟ್ ಗಳಲ್ಲಿ ಪಾಲ್ಗೊಳ್ಳುವಿಕೆ ಹಾಗೂ ಪ್ರಾಯೋಗಿಕ ತರಬೇತಿಗಳಿಗೆ ಹೆಚ್ಚಿನ ಒತ್ತನ್ನು ನೀಡಲಾಗುತ್ತಿದೆ. ಈ ಹಿಂದಿನ ಸಾಲಿನ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳಲ್ಲಿ ಅತ್ಯುನ್ನತ ಶ್ರೇಣಿಯನ್ನು ಪಡೆಯುವುದರ ಜೊತೆಗೆ ಪ್ರತಿ ಸೆಮಿಸ್ಟರ್ ಗಳಲ್ಲೂ ಶೇ.100 ಫಲಿತಾಂಶ ದಾಖಲಾಗಿರುತ್ತದೆ. ಶಿಕ್ಷಣ ಮಾತ್ರವಲ್ಲದೆ ಉದ್ಯೋಗ ಘಟಕದ ಮೂಲಕ ಕ್ಯಾಂಪಸ್ ಸೆಲೆಕ್ಷನ್, ಸಾಂಸ್ಕೃತಿಕ ಚಟುವಟಿಕೆ, ಶೈಕ್ಷಣಿಕ ಪ್ರವಾಸ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತಿದೆ. ಜೊತೆಗೆ ಗ್ರಾಮೀಣ ಭಾಗದ…
ಮಡಿಕೇರಿ ಸೆ.29 NEWS DESK : ವಿಶ್ವ ಹಿಂದೂ ಪರಿಷತ್, ಭಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ಮೂರ್ನಾಡು ಘಟಕ ಹಾಗೂ ಕೊಡಗು ಆಯುರ್ವೇದ ಕೇರ್ ನ ಸಹಯೋಗದಲ್ಲಿ ಕಾಂತೂರು-ಮೂರ್ನಾಡು ಸಮುದಾಯ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಘಟಕದ ಅಧ್ಯಕ್ಷ ಚಾರಿಮಂಡ ಚಂಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಶಿಬಿರದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ವಿಶ್ವ ಹಿಂದೂ ಪರಿಷತ್ ನ ಜಿಲ್ಲಾ ಕಾರ್ಯಾಧ್ಯಕ್ಷ ಸುರೇಶ್ ಮುತ್ತಪ್ಪ, ಕಾರ್ಯದರ್ಶಿ ಪುದಿಯೊಕ್ಕಡ ರಮೇಶ್, ತಾಲ್ಲೂಕು ಪ್ರಮುಖ್ ಸಜೀವ, ಭಜರಂಗದಳದ ಪ್ರಮುಖ್ ಮಂಜುನಾಥ್, ಸಹ ಕಾರ್ಯದರ್ಶಿ ಪ್ರದೀಪ್, ಪ್ರಮುಖರಾದ ಪಂದ್ಯಂಡ ರಮೇಶ್, ಆಯುರ್ವೇದ ಕೇರ್ ನ ವೈದ್ಯರುಗಳು ಹಾಗೂ ಸಹಾಯಕಿಯರು ಪಾಲ್ಗೊಂಡಿದ್ದರು.






