ಮಡಿಕೇರಿ NEWS DESK ಸೆ.28 : ಪ್ರಸ್ತುತ ರಾಜ್ಯ ಸರಕಾರ ನಡೆಸುತ್ತಿರುವ ಮತ್ತು ಮುಂದೆ ಕೇಂದ್ರ ಸರಕಾರ ನಡೆಸಲಿರುವ ಜಾತಿ ಜನಗಣತಿಯಲ್ಲಿ ಕೊಡಗಿನ ಅರೆಭಾಷೆ ಗೌಡರು ಕಡ್ಡಾಯವಾಗಿ ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸುವಂತೆ ಮರಂದೋಡ ಯವಕಪಾಡಿ ನಾಲಡಿ ಗೌಡ ಸಮಾಜದ ಕಾರ್ಯದರ್ಶಿ ಚಂಡೀರ ರೋಷನ್ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಾತಿ ಜನಗಣತಿಯ ಸಂದರ್ಭ ಕೊಡಗಿನ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿಯ ಕಾಲಂನಲ್ಲಿ ಅರೆಭಾಷೆ ಗೌಡ ಮತ್ತು ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಕೋರಿದ್ದಾರೆ. ರಾಜ್ಯ ಸರಕಾರ ಈಗಾಗಲೇ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯ ಸಮೀಕ್ಷೆಯನ್ನು ಆರಂಭಿಸಿದೆ. ಮುಂದಿನ ವರ್ಷ ಕೇಂದ್ರ ಸರಕಾರ ಕೂಡ ಗಣತಿ ನಡೆಸಲಿದೆ. ಉಪಜಾತಿಯಲ್ಲಿ ಅರೆಭಾಷೆ ಗೌಡ ಎಂಬುವುದನ್ನು ಪ್ರತ್ಯೇಕ ಕಾಲಂನಲ್ಲಿ ಸೇರಿಸಬೇಕೆಂದು ಕೊಡಗು ಗೌಡ ಸಮಾಜಗಳ ಒಕ್ಕೂಟ ಸಲ್ಲಿಸಿದ ಮನವಿಗೆ ಸರಕಾರ ಸ್ಪಂದಿಸಿದೆ. ಸಮುದಾಯ ಬಾಂಧವರು ಎಲ್ಲಾ ವಿವರಗಳನ್ನು ಗಮನದಲ್ಲಿರಿಸಿಕೊಂಡು…
ಲೇಖಕ: admin
ಮಡಿಕೇರಿ NEWS DESK ಸೆ.28 : ಇತರರನ್ನು ಕೊಡವ ಗುಂಪುಗಳನ್ನಾಗಿ ಪರಿವರ್ತಿಸಲು ಅಥವಾ ಮತಾಂತರಿಸಲು ಅಥವಾ ಧರ್ಮದೀಕ್ಷೆ ನೀಡಲು ‘ಕೊಡವಯಿಸಂ’ ಒಂದು ಮಿಷನರಿ ಧರ್ಮವಲ್ಲ. ಈ ವಿಚಾರದಲ್ಲಿ ಯಾರೂ ಮೂರ್ಖತನ ಪ್ರದರ್ಶಿಸಬಾರದು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಾತಿ ಜನಗಣತಿಯ ಸಂದರ್ಭ ಧರ್ಮ, ಜಾತಿ ಮತ್ತು ಭಾಷೆ ಈ ಮೂರೂ ಕಾಲಂಗಳಲ್ಲಿ ‘ಕೊಡವ’ ಎಂದು ಮಾತ್ರ ನಮೂದಿಸುವಂತೆ ಕೊಡವರಿಗೆ ಮತ್ತೊಮ್ಮೆ ಕರೆ ನೀಡುವುದಾಗಿ ತಿಳಿಸಿದ್ದಾರೆ. ಸರಕಾರಿ ಜಾತಿ ಜನಗಣತಿಯಲ್ಲಿ ಮೂರು ನಿಗಧಿತ ಕಾಲಂಗಳಲ್ಲಿ ನಮ್ಮನ್ನು ಕೊಡವ ಎಂದು ನೋಂದಾಯಿಸುವ ಮೂಲಕ ದಾಖಲೀರಣಕ್ಕಾಗಿ ಪ್ರತಿಪಾದಿಸುವುದು ಮತ್ತು ಪ್ರಚಾರ ಮಾಡುವುದು ನಮ್ಮ ಕಾನೂನುಬದ್ಧ ಕಾಳಜಿ ಹಾಗೂ ಹಕ್ಕಾಗಿದೆ. ಆದರೆ ಕೊಡವ ಕಾಲಂಗಳಲ್ಲಿ ಕೊಡವರಲ್ಲದವರ ಪ್ರವೇಶವನ್ನು ಪ್ರತಿಪಾದಿಸುವ ಹಕ್ಕು ನಮಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊಡವರು ಒಂದೇ ಜನಾಂಗೀಯ, ಆದಿಮಸಂಜಾತ ಆನಿಮಿಸ್ಟಿಕ್ ಸಮುದಾಯದವರಾಗಿದ್ದು, ಇವರು ಕೊಡವಲ್ಯಾಂಡ್‌ಗೆ ಮಾತ್ರ ಸೀಮಿತವಾಗಿದ್ದಾರೆ. ಕೊಡವಲ್ಯಾಂಡ್ ಎಂದು ಕರೆಯಲ್ಪಡುವ ಕೊಡವರ…
ಮಡಿಕೇರಿ NEWS DESK ಸೆ.27 : ಶ್ರೀ ಓಂಕಾರೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ನೂತನ ಆಡಳಿತ ಮಂಡಳಿ ಪ್ರಸಕ್ತ ಸಾಲಿನ ಮಾರ್ಚ್ನಲ್ಲಿ ರಚನೆಯಾಯಿತು. ಆ ಬಳಿಕ ದೇವಸ್ಥಾನದ ಸ್ವತ್ತುಗಳ ಬಗ್ಗೆ ಪಾರದರ್ಶಕತೆಯನ್ನು ಕಂಡುಕೊಳ್ಳ್ಳುವ ಸಲುವಾಗಿ ಸಮಿತಿಯ ವ್ಯಾಪ್ತಿಗೆ ಒಳಪಡುವ ಶ್ರೀ ಓಂಕಾರೇಶ್ವರ, ಶ್ರೀ ಆಂಜನೇಯ ಹಾಗೂ ಕೋಟೆ ಶ್ರೀ ಮಹಾಗಣಪತಿ ದೇವಾಲಯಗಳಲ್ಲಿನ ಚಿನ್ನ, ಬೆಳ್ಳಿ ಮತ್ತು ಇತರೆ ಆಭರಣಗಳ ಮೌಲ್ಯಮಾಪನವನ್ನು ಮಾಡಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಎ.ಸಿ.ಚುಮ್ಮಿ ದೇವಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಸಮಿತಿಯ ಸದಸ್ಯರು, ಅರ್ಚಕ ವೃಂದ, ದೇವಾಲಯ ಸಿಬ್ಬಂದಿ, ಆರಕ್ಷಕ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿಗಳ ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ವಿಡಿಯೋ ಚಿತ್ರೀಕರಣದೊಂದಿಗೆ ಇದೇ ಸಾಲಿನ ಜೂ.11 ರಂದು ಮೌಲ್ಯಮಾಪನ ನಡೆಸಲಾಯಿತೆಂದು ವಿವರಿಸಿದರು. ಮೌಲ್ಯಮಾಪನದಂತೆ ಶ್ರೀ ಓಂಕಾರೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದಂತೆ 22 ಗ್ರಾಂ 100 ಮಿಲಿ ಗ್ರಾಂ ಚಿನ್ನ, 83 ಕೆ.ಜಿ 472 ಗ್ರಾಂ ಬೆಳ್ಳಿ ಆಭರಣಗಳು, 40 ಕೆ.ಜಿ. 810 ಗ್ರಾಂ…
ಮಡಿಕೇರಿ NEWS DESK ಸೆ.27 : ಕರ್ನಾಟಕ ರಾಜ್ಯ ಸರಕಾರದಿಂದ ಪ್ರಸ್ತುತ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮತ್ತು ಜಾತಿ ಜನಗಣತಿಯಲ್ಲಿ ಹಾಗೂ ಮುಂದೆ ಕೇಂದ್ರ ಸರಕಾರ ನಡೆಸುವ ಗಣತಿಯ ಸಂದರ್ಭ ಸರ್ವ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು, ಉಪಜಾತಿ ಕಾಲಂನಲ್ಲಿ ಅರೆಭಾಷೆ ಗೌಡ, ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಚೇರಳ ಗೌಡ ಸಮಾಜದ ಅಧ್ಯಕ್ಷ ಐಯಂಡ್ರ ರಾಘವಯ್ಯ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಸ್ತುತ ರಾಜ್ಯ ಸರಕಾರ ನಡೆಸುತ್ತಿರುವ ಮತ್ತು ಮುಂದೆ ಕೇಂದ್ರ ಸರಕಾರ ನಡೆಸಲಿರುವ ಜಾತಿ ಜನಗಣತಿಯಲ್ಲಿ ಕೊಡಗಿನ ಅರೆಭಾಷೆ ಗೌಡರು ಕಡ್ಡಾಯವಾಗಿ ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸಬೇಕು ಎಂದು ತಿಳಿಸಿದ್ದಾರೆ. ರಾಜ್ಯ ಸರಕಾರ ಈಗಾಗಲೇ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯ ಸಮೀಕ್ಷೆಯನ್ನು ಆರಂಭಿಸಿದೆ. ಮುಂದಿನ ವರ್ಷ ಕೇಂದ್ರ ಸರಕಾರ ಕೂಡ ಗಣತಿ ಆರಂಭಿಸಲಿದೆ. ಉಪಜಾತಿಯಲ್ಲಿ ಅರೆಭಾಷೆ ಗೌಡ ಎಂಬುವುದನ್ನು ಪ್ರತ್ಯೇಕ…
ಮಡಿಕೇರಿ ಸೆ.27 : ಪ್ರಸ್ತುತ ನಡೆಯುತ್ತಿರುವ ಮತ್ತು ಮುಂದೆ ನಡೆಯಲಿರುವ ಜಾತಿ ಜನಗಣತಿಯ ಸಂದರ್ಭ ಕೊಡಗಿನ ಸರ್ವ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿ ಕಾಲಂನಲ್ಲಿ ಅರೆಭಾಷೆ ಗೌಡ ಮತ್ತು ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಬೆಂಗಳೂರಿನ ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದ ಬೆಂಗಳೂರು ಅಧ್ಯಕ್ಷ ಪಾಣತ್ತಲೆ ಪಳಂಗಪ್ಪ ಅವರು ಮೂಲತಃ ಅರೆಭಾಷೆ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿದ್ದಾರೆ, ಆದರೆ ಅರೆಭಾಷೆ ಗೌಡರ ಶೈಕ್ಷಣಿಕ, ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ ‘ಗೌಡ’ ಎಂದೇ ನಮೂದಿಸಲಾಗಿದೆ. ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗು ಗೌಡ ಸಮಾಜಗಳ ಒಕ್ಕೂಟ ಅರೆಭಾಷೆ ಗೌಡ ಸಮುದಾಯದ ಸಭೆಗಳನ್ನು ನಡೆಸಿ, ಕೊಡಗಿನ ಎಲ್ಲಾ ಗೌಡ ಸಮಾಜಗಳೊಂದಿಗೆ ಸಮಾಲೋಚಿಸಿ GOWDA (ಗೌಡ) ಎಂದು ನಮೂದಿಸಲು…
ಮಡಿಕೇರಿ NEWS DESK ಸೆ.27 : ರಾಜ್ಯ ಸರಕಾರದ ಮೂಲಕ ಪ್ರಸ್ತುತ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯಲ್ಲಿ ಅರೆಭಾಷೆ ಗೌಡರು ಜಾತಿಯನ್ನು GOWDA (ಗೌಡ) ಎಂದು ನಮೂದಿಸುವಂತೆ ಚೇರಂಬಾಣೆ ಗೌಡ ಸಮಾಜ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಚೇರಂಬಾಣೆ ಗೌಡ ಸಮಾಜದ ಅಧ್ಯಕ್ಷ ಕೊಡಪಾಲ ಗಣಪತಿ ಅವರು ರಾಜ್ಯ ಸರಕಾರ ಮತ್ತು ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರ ನಡೆಸುವ ಗಣತಿಯ ಸಂದರ್ಭ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು, ಉಪಜಾತಿ ‘ಅರೆಭಾಷೆ ಗೌಡ’ ಹಾಗೂ ಮಾತೃಭಾಷೆ ಕಾಲಂನಲ್ಲಿ ‘ಅರೆಭಾಷೆ’ ಎಂದು ನಮೂದಿಸುವಂತೆ ಕೋರಿದ್ದಾರೆ. ಮೂಲತಃ ಅರೆಭಾಷೆ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿದ್ದಾರೆ, ಆದರೆ ಅರೆಭಾಷೆ ಗೌಡರ ಶೈಕ್ಷಣಿಕ, ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ ‘ಗೌಡ’ ಎಂದೇ ನಮೂದಿಸಲಾಗಿದೆ. ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅರೆಭಾಷೆ ಗೌಡ ಸಮುದಾಯದ ಸಭೆಗಳನ್ನು ನಡೆಸಿ…
ಮಡಿಕೇರಿ NEWS DESK ಸೆ.27 : ಗೋಣಿಕೊಪ್ಪದ ಶ್ರೀ ಕಾವೇರಿ ದಸರಾ ಸಮಿತಿ ವತಿಯಿಂದ ಇಂದು ನಡೆದ ಮಹಿಳಾ ದಸರಾ ಕಾರ್ಯಕ್ರಮದ ಛದ್ಮವೇಷ ಸ್ಪರ್ಧೆಯಲ್ಲಿ ಆಶಿಕಾ ಸುಂದರೇಶ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ದೇವಿಯ ವೇಷಧಾರಿಯಾಗಿ ಅವರು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು. ಆಶಿಕಾ ಅವರು ಪೊನ್ನಂಪೇಟೆ ಸಮೀಪದ ಬೇಗೂರು ಶ್ರೀ ಪೂಳೆಮಾಡು ಈಶ್ವರ ದೇವಸ್ಥಾನದ ಅರ್ಚಕರಾದ ಸುಂದರೇಶ ಅವರ ಪತ್ನಿ.
ಮಡಿಕೇರಿ NEWS DESK ಸೆ.27 : ಕರ್ನಾಟಕ ರಾಜ್ಯ ಸರಕಾರದ ಸಮಾಜಿಕ ಮತ್ತು ಅರ್ಥಿಕ ಗಣತಿ ಸಮೀಕ್ಷೆಯಲ್ಲಿ ಕೊಡವ ಭಾಷಿಕ 21 ಸಮುದಾಯದವರು ಧರ್ಮದ ಕಾಲಂನಲ್ಲಿ ಕೊಡವ, ಜಾತಿಯ ಕಾಲಂನಲ್ಲಿ ಕೊಡವ ಮತ್ತು ಉಪಜಾತಿಯ ಕಾಲಂನಲ್ಲಿ ತಮ್ಮ ತಮ್ಮ ಜಾತಿಯ ಹೆಸರನ್ನು ನಮೂದಿಸಬೇಕೆಂದು ಮೂರ್ನಾಡಿನಲ್ಲಿ ನಡೆದ ಕೊಡವ ಸಾಹಿತ್ಯ ಅಕಾಡೆಮಿಯ ಕಾರ್ಯಕ್ರಮದಲ್ಲಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರು ನೀಡಿರುವ ಹೇಳಿಕೆಗೆ ಕೊಡವ ಭಾಷಿಕ ಸಮುದಾಯಗಳ ಕೂಟದ ಸಹಮತವಿಲ್ಲವೆಂದು ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವ ಭಾಷಿಕ ಸಮುದಾಯಗಳ ಕೂಟ ಮತ್ತು ವಿವಿಧ ಕೊಡವ ಭಾಷಿಕ ಸಮಾಜಗಳ ಪ್ರಮುಖರು ಸಾಧಕ ಬಾಧಕಗಳನ್ನು ಚರ್ಚಿಸಿ ಧರ್ಮದ ಕಾಲಂನಲ್ಲಿ ಹಿಂದೂ, ಜಾತಿಯ ಕಾಲಂನಲ್ಲಿ ಭಾರತ ಸರಕಾರ ಮತ್ತು ಕರ್ನಾಟಕ ಸರಕಾರ ಜಾತಿವಾರು ಪಟ್ಟಿಯಲ್ಲಿ ಪ್ರಕಟಿಸಿರುವ ಜಾತಿಯ ಹೆಸರನ್ನು, ಭಾಷೆಯ ಕಾಲಂನಲ್ಲಿ ಕೊಡವ ಭಾಷೆ ಮತ್ತು ಉಪಜಾತಿ ಕಾಲಂನಲ್ಲಿ ಯಾವುದೂ ಅನ್ವಯಿಸುವುದಿಲ್ಲ ಎಂದು ನಮೂದಿಸಲು…
ಮಡಿಕೇರಿ ಸೆ.27 NEWS DESK : ಮಡಿಕೇರಿ ದಸರಾ ಪ್ರಯುಕ್ತ ನಡೆದ ಓಪನ್ ಕೇರಮ್ ಸ್ಪರ್ಧೆಯಲ್ಲಿ ಕಾವೇರಿಮನೆ ಭರತ್ 3ನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಮಡಿಕೇರಿ ಸೆ.27 NEWS DESK : ವಿಶ್ವ ಹಿಂದೂ ಪರಿಷತ್, ಭಜರಂಗದಳ, ಮಾತೃವಾಹಿನಿ ಮರಗೋಡು ಮತ್ತು ಮೂರ್ನಾಡು ಘಟಕದ ಸಹಯೋಗದಲ್ಲಿ ಮರಗೋಡಿನ ಶಿವ ಪಾರ್ವತಿ ದೇವಾಲಯದಲ್ಲಿ ಗೋಪೂಜೆ ಮತ್ತು ದುರ್ಗಾಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಹಿರಿಯರಾದ ಭಾಗೀರಥಿ ಹುಲಿತಾಳ ಅವರು ದೇವರ ಮೇಲಿನ ನಂಬಿಕೆ ಮತ್ತು ಗೋವುಗಳ ಸಾಕಾಣೆಯ ಮಹತ್ವವನ್ನು ತಿಳಿಸಿದರು. ಬೌದ್ಧಿಕ್ ಮಹಾಬಲೇಶ್ವರ್ ಭಟ್ ಮಾತನಾಡಿ ಗೋವುಗಳ ಪೂಜೆಯಿಂದ ಐಶ್ವರ್ಯ, ಆರೋಗ್ಯ ಸಮೃದ್ಧಿಯಾಗುತ್ತದೆ. ಹಾಲು ಮತ್ತು ಗೋಮೂತ್ರ ಸೇವನೆಯಿಂದ ಆರೋಗ್ಯ ವೃದ್ಧಿಸುತ್ತದೆ ಎಂದು ಹೇಳಿದರು. ಅರ್ಚಕರಾದ ಅಮಿತ್ ಕೇದಿರಾಯ್ ಸಂಸ್ಕಾರದ ಬಗ್ಗೆ ವಿವರಿಸಿದರು. ಮರಗೋಡು ಘಟಕದ ಮಾತೃಶಕ್ತಿ ಪ್ರಮುಖ್ ಗುಡ್ಡೆಮನೆ ರೋಹಿಣಿ ಚಂದ್ರಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಯೋಧ್ಯಾ ಕರ ಸೇವಕರನ್ನು ಫಲತಾಂಬೂಲ ನೀಡಿ ಗೌರವಿಸಲಾಯಿತು. ವಿಶ್ವ ಹಿಂದೂ ಪರಿಷತ್ ನ ಜಿಲ್ಲಾ ಕೋಶಾಧ್ಯಕ್ಷ ಸಂಪತ್ ಕುಮಾರ್, ಕಾರ್ಯಾಧ್ಯಕ್ಷ ಸುರೇಶ್ ಮುತ್ತಪ್ಪ, ಕಾರ್ಯದರ್ಶಿ ಪುದಿಯೊಕ್ಕಡ ರಮೇಶ್, ಸಹ ಕಾರ್ಯದರ್ಶಿ ಯತೀಶ್, ಪ್ರಸಾರ ಪ್ರಮುಖ್ ಶಾನ್…






