ಲೇಖಕ: admin

ಮಡಿಕೇರಿ ಸೆ.27 NEWS DESK : ‘ವಿ’ ಫೈವ್ ಮಹಿಳಾ ಒಕ್ಕೂಟದಿಂದ ಅ.4 ರಂದು “ಬಾಳೆಲೆ ನಮ್ಮೆ” ಕಾರ್ಯಕ್ರಮ ನಡೆಯಲಿದೆ. ಬಾಳೆಲೆ ಕೊಡವ ಸಮಾಜದಲ್ಲಿ ಬೆಳಿಗ್ಗೆ 10ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದಾರೆ. ‘ವಿ ” ಪೖವ್ ಮಹಿಳಾ ಒಕ್ಕೂಟದಿಂದ ಗೃಹಿಣಿಯರು ಮನೆಯಲ್ಲಿ ತಯಾರಿಸಿದ ಉತ್ಪನ್ನಗಳ, ಬೆಳದ ಗಿಡಗಳ, ಗೃಹ ಉಪಯೋಗಿ ವಸ್ತುಗಳ ಕೃಷಿ ಉತ್ಫನ್ನಗಳ, ರೖತಾಪಿ ವರ್ಗಕ್ಕೆ ಬೇಕಾದ ಕೃಷಿ ಯಂತ್ರಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವೇದಿಕೆ ಕಲ್ಪಿಸಲಾಗಿದ್ದು, ಜಿಲ್ಲೆಯ ವಿವಿಧ ಭಾಗಗಳಿಂದ ಮಾರಾಟ ಹಾಗೂ ಪ್ರದರ್ಶನಕ್ಕೆ ನೊಂದಣಿ ಮಾಡಿಕೊಂಡು ಭಾಗವಹಿಸುವವರಿಗೆ ಅಚ್ಚುಕಟ್ಟಾಗಿ ಸ್ಥಳಾವಕಾಶ ಮಾಡಿಕೊಡಲಾಗುವುದು. ಜಿಲ್ಲೆಯ ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮಹಿಳಾ ಒಕ್ಕೂಟದ ಸಂಚಾಲಕರಾದ ಮಲಚೀರ ದೃಷ್ಯ, ಸದಸ್ಯರುಗಳಾದ ಪೊರಂಗಡ ಅರ್ಚನ, ಮಾಪಂಗಡ ಪ್ರೀತ್ನಿ, ಅದೇಂಗಡ ಗ್ರೀಷ್ಮ, ಕೊದಂಡ ರಷ್ಮಿ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 8971653900 ಸಂಪರ್ಕಿಸಬಹುದಾಗಿದೆ.

Read More

ಸುಂಟಿಕೊಪ್ಪ ಸೆ.27 NEWS DESK : ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಹಗಲಿರುಳು ಸೇವೆ ಸಲ್ಲಿಸಿ ನಗರ ಸೌಂದರ್ಯವನ್ನು ಹೆಚ್ಚಿಸಲು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಪೌರ ಕಾರ್ಮಿಕರ ಸೇವೆ ಅನನ್ಯವಾದದ್ದು ಎಂದು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಪಂಚಾಯಿತಿ ಪೌರ ಕಾರ್ಮಿಕರು ಹಾಗೂ ನೀರು ಗಂಟಿಗಳನ್ನು ಸನ್ಮಾನಿಸಿ ಮಾತನಾಡಿದರು. ಪೌರಕಾರ್ಮಿಕರು ಹಾಗೂ ನೀರುಗಂಟಿಗಳು ಕರ್ತವ್ಯ ನಿರ್ವಹಿಸಿದಿದ್ದರೇ ನಗರ, ಗ್ರಾಮಗಳು ಸ್ವಚ್ಛತೆ ಹಾಗೂ ಆರೋಗ್ಯವಂತರಾಗಿರಲು ಸಾಧ್ಯವಿಲ್ಲ ಎಂದು ಹೇಳಿದರು. ಅವರುಗಳು ನಿರ್ವಹಿಸುವ ಕಾರ್ಯವನ್ನು ಸಾಮಾನ್ಯ ನಾಗರೀಕರು ನಿರ್ವಹಿಸಲು ಸಾಧ್ಯವೇ ಇಲ್ಲಾವೆಂದರಲ್ಲದೆ ಅವರ ಸೇವೆಯನ್ನು ಪ್ರಶಂಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಪಟ್ಟಣ ಪ್ರದೇಶಕ್ಕೆ ಹತ್ತಿರವಾಗಿರುವ ದೊಡ್ಡ ಗ್ರಾಮ ಪಂಚಾಯಿಗಳಲ್ಲಿ ಪೌರಕಾರ್ಮಿಕರ ಮತ್ತು ನೀರು ಗಂಟಿಗಳು ಸೇವೆಯಿದ್ದು ಇವರುಗಳು ಅವಿರತ ಪರಿಶ್ರಮದಿಂದ ಪ್ರತಿ ಬಡಾವಣೆಗಳು ನೈರ್ಮಲ್ಯ ಮುಕ್ತ ಪ್ರದೇಶವಾಗಿ ಕಾಣುತ್ತದೆ. ಆದರೆ ಪೌರಕಾರ್ಮಿಕರನ್ನು ಕಡೆಗಣಿಸದೆ ಗೌರವಯುತ್ತವಾಗಿ ನಡೆಸಿಕೊಳ್ಳುವ ಕಾರ್ಯವು ನಡೆಯಬೇಕಿದೆ.…

Read More

ಮೂರ್ನಾಡು ಸೆ.27 NEWS DESK :  ಮೂರ್ನಾಡು ಹಿಂದೂ ಮಲಯಾಳಿ ಸಂಘದ ವತಿಯಿಂದ ಆಯೋಜಿಸಲಾದ 17ನೇ ವರ್ಷದ ಓಣಂ ಹಬ್ಬವು ಸೆ.28 ರಂದು ನಡೆಯಲಿದೆ. ಮೂರ್ನಾಡು ಗೌಡ ಸಮಾಜದಲ್ಲಿ ಆಯೋಜಿಸಲಾದ ಓಣಂ ಹಬ್ಬದ ಪ್ರಯುಕ್ತ ಬೆಳಿಗ್ಗೆ 7.30 ಗಂಟೆಗೆ ಹೂವಿನ ರಂಗೋಲಿ(ಪೂಕಳಂ) ಸ್ಪರ್ಧೆ ನಡೆಯಲಿದೆ. ನಂತರ ಹಿಂದೂ ಮಲಯಾಳಿ ಸಮುದಾಯದವರಿಂದ ಮೂರ್ನಾಡಿನ ಮುಖ್ಯ ಬೀದಿಯಲ್ಲಿ ನಡೆಯುವ ಮೆರವಣಿಗೆಯಲ್ಲಿ ಕೇರಳದ ಸಾಂಪ್ರದಾಯಿಕ ಉಡುಪಿನಲ್ಲಿ ಮಹಿಳೆಯರು, ಮಕ್ಕಳು ಮತ್ತು ಮಹನೀಯರು, ಚೆಂಡೆ ಮೇಳದವರು, ಮಾವೇಲಿ ಪಾತ್ರಧಾರಿಗಳು ಪಾಲ್ಗೊಳ್ಳಲಿದ್ದಾರೆ. ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ಬಾಬು ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಡಿಕೇರಿ ಶಾಸಕ ಡಾ.ಮಂಥರ್‍ಗೌಡ, ಮಾಜಿ ಶಾಸಕ ಅಪ್ಪಚ್ಚುರಂಜನ್, ಮಾಜಿ ವಿಧಾನ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ, ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಅಧ್ಯಕ್ಷ  ವಿ.ಎಂ.ವಿಜಯನ್,  ಜಿಲ್ಲಾ ಪೊಲೀಸ್ ವೃತ್ತ ನೀರಿಕ್ಷಕ ಹೆಚ್.ವಿ.ಚಂದ್ರಶೇಖರ್, ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಮುಖ್ಯ ಕಾರ್ಯದರ್ಶಿ ಎನ್.ವಿ. ಉನ್ನಿಕೃಷ್ಣ, ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಸ್ಥಾಪಕಾಧ್ಯಕ್ಷ…

Read More

ಪುತ್ತೂರು ಸೆ.27 NEWS DESK : ಕಾಲೇಜಿನಿಂದ ಬೀಳ್ಕೊಡುಗೆ ಎನ್ನುವುದು ಅಂತ್ಯವಲ್ಲ ಬದಲಾಗಿ ಜ್ಞಾನ, ಸ್ನೇಹ ಮತ್ತು ಅಪಾರ ಅನುಭವಗಳಿಂದ ಕೂಡಿದ ಜೀವನದ ಆರಂಭ ಎಂದು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಶ್ರೀರಾಮ ಸಭಾಭವನದಲ್ಲಿ ಕಾಲೇಜಿನ ಎಂಬಿಎ ಮತ್ತು ಎಂಸಿಎ ವಿಭಾಗದ ವಿದ್ಯಾರ್ಥಿಗಳನ್ನು ಬೀಳ್ಕೊಡುವ ಸಾಮಾರಂಭದಲ್ಲಿ ಮಾತಾಡಿದರು. ಇದುವರೆಗೆ ನೈತಿಕವಾಗಿ ಮತ್ತು ಸಾಮಾಜಿಕ ಜವಾಬ್ಧಾರಿಯುತವಾಗಿ ನಿಮ್ಮ ಜೀವನವನ್ನು ರೂಪಿಸಲು ಅಗತ್ಯವಾದ ತಿಳುವಳಿಕೆಯನ್ನು ಕಾಲೇಜು ನೀಡಿದೆ. ಇನ್ನು ಮುಂದೆ ಇದನ್ನು ಉಳಿಸಿ ಬೆಳೆಸುವ ಜವಾಬ್ಧಾರಿ ನಿಮ್ಮದು ಎಂದರು. ಜೀವನದ ಹೊಸ ಹಂತವನ್ನು ಆತ್ಮವಿಶ್ವಾಸ ಮತ್ತು ಸಮರ್ಪಣಾ ಮನೋಭಾವದಿಂದ ಪ್ರವೇಶಿಸಬೇಕು ಮತ್ತು ನಮ್ಮ ಏಳಿಗೆಗಾಗಿ ಅಪಾರ ತ್ಯಾಗವನ್ನು ಮಾಡುವ ಹೆತ್ತವರ ಆಶೋತ್ತರಗಳನ್ನು ಗಮನದಲ್ಲಿರಿಸಿಕೊಂಡು ದೇಶದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು. ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಮಾತನಾಡಿ ಕಾಲೇಜಿನಲ್ಲಿ ಕಲಿತ ಪಾಠಗಳನ್ನು ಮತ್ತು ಸವಿನೆನಪುಗಳನ್ನು ಹೊತ್ತುಕೊಂಡು ಮುಂದುವರಿಯಿರಿ, ಏನಾದರೂ…

Read More

ಮಡಿಕೇರಿ ಸೆ.27 NEWS DESK : ಸಮಾಜದ ಏಳಿಗೆಗೆ ಶ್ರಮಿಸಿದವರನ್ನು, ಬಡವರ ಕಷ್ಟಕ್ಕೆ ನೆರವಾದವರನ್ನು, ನೊಂದವರಿಗೆ ನೆರವಾಗಿ ನಿಂತವರನ್ನು ಸದಾ ನೆನಪಿಸಿಕೊಳ್ಳುತ್ತಾ ಬರುತ್ತಿದ್ದಾರೆಯೇ ಹೊರತು ಶ್ರೀಮಂತರನ್ನು ನೆನೆಸಿಕೊಳ್ಳುವುದಿಲ್ಲವೆಂದು ಕಾವೇರಿ ಕಾಲೇಜಿನ ಪ್ರಾಂಶುಪಾಲ ಬೆನೆಡಿಕ್ಟ್ ಆರ್ ಸಲ್ದಾನ ಹೇಳಿದರು.  ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು, ಎನ್.ಎಸ್.ಎಸ್ ಎಂಬುದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಕನಸಿನ ಕೂಸಾಗಿ ಹುಟ್ಟಿತು. ವಿದ್ಯಾರ್ಥಿಗಳನ್ನು ಶಿಕ್ಷಣದ ಹಂತದಲ್ಲಿ ಸಮಾಜ ಮುಖಿಯಾಗಿ ಬೆಳೆಸುವ ಗುರಿಯನ್ನು ಇದು ಹೊಂದಿದೆ. ಇಂದಿನ ಪ್ರಸ್ತುತ ಸಮಾಜವನ್ನು ನೋಡುವುದಾದರೆ ಮದರ್ ತೆರೇಸಾ, ಸರೋಜಿನಿ ನಾಯ್ಡುರಂತಹ ಪ್ರಮುಖ ಸಮಾಜ ಸುಧಾರಕರು ಸಮಾಜ ಸೇವಕರನ್ನು ನಾವು ನೆನಪಿಟ್ಟುಕೊಂಡಿರುವುದು ಅವರ ಶ್ರೀಮಂತಿ ಇಂದಲ್ಲ ಬದಲಾಗಿ ಸಮಾಜಕ್ಕೆ ಅವರು ನೀಡಿದಂತಹ ಸೇವೆಯ ಕಾರಣದಿಂದ. ಆದ್ದರಿಂದ ವಿದ್ಯಾರ್ಥಿಗಳು ಈ ಹಂತದಲ್ಲಿ ಸಮಾಜಕ್ಕೆ ತಮ್ಮಿಂದಾದಂತಹ ಸೇವೆಯನ್ನು ಸಲ್ಲಿಸಲು ಸದಾ ಸಿದ್ಧರಾಗಿರಬೇಕು. ಸೇವಾ ಮನೋಭಾವನೆ ಇದ್ದವರು ಸದಾ ಇತರರ ಹಿತವನ್ನು ಕಾಪಾಡುತ್ತಾ ಶ್ರೇಷ್ಠ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುತ್ತಾರೆ…

Read More

ಮಡಿಕೇರಿ ಸೆ.27 : ಜಾತಿ ಜನಗಣತಿಯ ಸಂದರ್ಭ ಕೊಡಗಿನ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿಯ ಕಾಲಂನಲ್ಲಿ ಅರೆಭಾಷೆ ಗೌಡ ಮತ್ತು ಮಾತೃ ಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಕೊಡಗು ಗೌಡ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಮೈಸೂರು ಅಧ್ಯಕ್ಷ ಚಂಡೀರ ಬಸಪ್ಪ ಅವರು ಪ್ರಸ್ತುತ ರಾಜ್ಯ ಸರಕಾರ ನಡೆಸುತ್ತಿರುವ ಮತ್ತು ಮುಂದೆ ಕೇಂದ್ರ ಸರಕಾರ ನಡೆಸಲಿರುವ ಜಾತಿ ಜನಗಣತಿಯಲ್ಲಿ ಕೊಡಗಿನ ಅರೆಭಾಷೆ ಗೌಡರು ಕಡ್ಡಾಯವಾಗಿ ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸಬೇಕು. ಗಣತಿಯಲ್ಲಿ ತಮ್ಮ ಜಾತಿಗೆ ಇರುವ ಇನ್ನೊಂದು ಹೆಸರು ಎಂಬ ಕಾಲಂ ಕೂಡ ಇದ್ದು, ಇದರಲ್ಲಿ ಒಕ್ಕಲಿಗ, ಕೊಡಗು ಗೌಡ, ಅರೆಭಾಷೆ ಒಕ್ಕಲಿಗ ಎಂದು ನಮೂದಿಸಲು ಸಲಹೆ ನೀಡಿದ್ದಾರೆ. ರಾಜ್ಯ ಸರಕಾರ ಈಗಾಗಲೇ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯ ಸಮೀಕ್ಷೆಯನ್ನು ಆರಂಭಿಸಿದೆ. ಮುಂದಿನ ವರ್ಷ ಕೇಂದ್ರ ಸರಕಾರ…

Read More

ಮಡಿಕೇರಿ NEWS DESK ಸೆ.27 : ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಕೈಜೋಡಿಸುವ ಮೂಲಕ ಪಶ್ಚಿಮಘಟ್ಟದ ಜೀವವೈವಿಧ್ಯತೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಕರ್ನಾಟಕ ಪರಿಸರ ನಿರ್ವಹಣೆ ಹಾಗೂ ನೀತಿಶಾಸ್ತ್ರ ಸಂಶೋಧನಾ ಸಂಸ್ಥೆಯ ಮಾಹಿತಿ ಅಧಿಕಾರಿ ರೆನಿಟ ಮೆಥೈಯಿಸ್ ಅವರು ಕರೆ ನೀಡಿದ್ದಾರೆ. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಪ್ರಾಣಿಶಾಸ್ತ್ರ ವಿಭಾಗ ಮತ್ತು ಕರ್ನಾಟಕ ಪರಿಸರ ನಿರ್ವಹಣೆ ಹಾಗೂ ನೀತಿ ಶಾಸ್ತç ಸಂಶೋಧನಾ ಸಂಸ್ಥೆಯ ಸಹಯೋಗದಲ್ಲಿ ‘ಹವಮಾನ ಬದಲಾವಣೆ ಮತ್ತು ಪಶ್ಚಿಮ ಘಟ್ಟದ ಜೀವವೈವಿಧ್ಯತೆ’ ಕುರಿತು ಕಾರ್ಯಾಗಾರ ನಡೆಯಿತು. ಕಾಲೇಜ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಮತ್ತು ಜಾಗೃತಿ ಮೂಡಿಸಬೇಕು. ಪರಿಸರದ ಕುರಿತು ಹೆಚ್ಚು ಅರಿವು ಮೂಡಿಸಿ ಪರಿಸರ ರಾಯಭಾರಿಗಳನ್ನಾಗಿ ಮಾಡಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜ್ ನ ಪ್ರಾಂಶುಪಾಲ ಡಾ.ಮೇಜರ್ ಬಿ.ರಾಘವ ಅವರು, ಮಾನವನು ಆಧುನಿಕತೆಯ ಹೆಸರಿನಲ್ಲಿ ಹಲವು ಕಾರಣಗಳನ್ನು ನೀಡಿ ನಿಸರ್ಗವನ್ನು ಅತಿಕ್ರಮಣ…

Read More

ಮಡಿಕೇರಿ NEWS DESK ಸೆ.27 : ಪ್ರಸ್ತುತ ರಾಜ್ಯ ಸರಕಾರ ನಡೆಸುತ್ತಿರುವ ಮತ್ತು ಮುಂದೆ ಕೇಂದ್ರ ಸರಕಾರ ನಡೆಸಲಿರುವ ಜಾತಿ ಜನಗಣತಿಯ ಸಂದರ್ಭ ಕೊಡಗಿನ ಸರ್ವ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿ ಕಾಲಂನಲ್ಲಿ ಅರೆಭಾಷೆ ಗೌಡ ಮತ್ತು ಮಾತೃ ಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಕೊಡಗು ಗೌಡ ಮಾಜಿ ಯೋಧರ ಒಕ್ಕೂಟದ ಅಧ್ಯಕ್ಷ ತುಂತಜಿರ ದಯಾನಂದ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮೂಲತಃ ಅರೆಭಾಷೆ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿದ್ದಾರೆ, ಆದರೆ ಅರೆಭಾಷೆ ಗೌಡರ ಶೈಕ್ಷಣಿಕ, ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ ಗೌಡ ಎಂದೇ ನಮೂದಿಸಲಾಗಿದೆ. ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗು ಗೌಡ ಸಮಾಜಗಳ ಒಕ್ಕೂಟ ಅರೆಭಾಷೆ ಗೌಡ ಸಮುದಾಯದ ಸಭೆಗಳನ್ನು ನಡೆಸಿ, ಕೊಡಗಿನ ಎಲ್ಲಾ ಗೌಡ ಸಮಾಜಗಳೊಂದಿಗೆ ಸಮಾಲೋಚಿಸಿ GOWDA (ಗೌಡ) ಎಂದು ನಮೂದಿಸಲು ನಿರ್ಣಯ…

Read More

ಮೂರ್ನಾಡು ಸೆ.27 NEWS DESK : ಯೋಗಿ ನಾರಾಯಣ ಬಲಿಜ ಸಂಘದ ವತಿಯಿಂದ ಮಡಿಕೇರಿ ವಕೀಲರ ಸಂಘದ ಉಪಾಧ್ಯಕ್ಷರಾದ ಸಂಜಯ್ ರಾಜ್ ಹಾಗೂ ಕೊಡಗು ಪತ್ರಕರ್ತರ ಸಂಘದ ಖಜಾಂಚಿ ಟಿ.ಕೆ.ಸಂತೋಷ್ ಅವರನ್ನು ಸನ್ಮಾನಿಸಲಾಯಿತು. ಮೂರ್ನಾಡು ವಿಎಸ್ಎಸ್ ಸಭಾಂಗಣದಲ್ಲಿ ನಡೆದ ಸಂಘದ ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಗಣೇಶ್ ನಾಯ್ಡು ಅವರು ವಹಿಸಿ, ಕೊಡಗು ಬಲಿಜ ಸಂಘದ ಸದಸ್ಯತ್ವ ನೋಂದಾವಣೆ ಹಾಗೂ ಸಂಘದ ಕಾರ್ಯಕ್ರಮದ ಬಗ್ಗೆ ಮಾತನಾಡಿದವರು.  ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿ ಸುಬ್ರಮಣಿ. ಉಪಾಧ್ಯಕ್ಷರಾದ ಶ್ವೇತಾ ನರೇಂದ್ರ. ಮಡಿಕೇರಿ ತಾಲೂಕು ಕಾರ್ಯದರ್ಶಿ ಟಿ.ವಿ .ಲೋಕೇಶ್. ಸಂಘದ ಪದಾಧಿಕಾರಿಗಳಾದ ಬಾಲಕೃಷ್ಣ, ಎಲ್ಐಸಿ ಗಣೇಶ್ ರಮಿತಾ, ಯಶ್ವಂತ್, ನರೇಂದ್ರ, ವಿಜಯಕುಮಾರ್ ಅನಿತಾ ಮೊದಲಾದವರು ಹಾಜರಿದ್ದರು.

Read More

ಮಡಿಕೇರಿ ಸೆ.27 NEWS DESK : ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಕೈಜೋಡಿಸುವ ಮೂಲಕ ಪಶ್ಚಿಮಘಟ್ಟದ ಜೀವವೈವಿಧ್ಯತೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಕರ್ನಾಟಕ ಪರಿಸರ ನಿರ್ವಹಣೆ ಹಾಗೂ ನೀತಿಶಾಸ್ತ್ರ ಸಂಶೋಧನಾ ಸಂಸ್ಥೆಯ ಮಾಹಿತಿ ಅಧಿಕಾರಿ ರೆನಿಟ ಮೆಥೈಯಿಸ್ ಅವರು ಕರೆ ನೀಡಿದ್ದಾರೆ. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಪ್ರಾಣಿಶಾಸ್ತ್ರ ವಿಭಾಗ ಮತ್ತು ಕರ್ನಾಟಕ ಪರಿಸರ ನಿರ್ವಹಣೆ ಹಾಗೂ ನೀತಿ ಶಾಸ್ತ್ರ ಸಂಶೋಧನಾ ಸಂಸ್ಥೆಯ ಸಹಯೋಗದಲ್ಲಿ ‘ಹವಮಾನ ಬದಲಾವಣೆ ಮತ್ತು ಪಶ್ಚಿಮ ಘಟ್ಟದ ಜೀವವೈವಿಧ್ಯತೆ’ ಕುರಿತು ಕಾರ್ಯಾಗಾರ ನಡೆಯಿತು. ಕಾಲೇಜ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಮತ್ತು ಜಾಗೃತಿ ಮೂಡಿಸಬೇಕು. ಪರಿಸರದ ಕುರಿತು ಹೆಚ್ಚು ಅರಿವು ಮೂಡಿಸಿ ಪರಿಸರ ರಾಯಭಾರಿಗಳನ್ನಾಗಿ ಮಾಡಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜ್ ನ ಪ್ರಾಂಶುಪಾಲ ಡಾ.ಮೇಜರ್ ಬಿ.ರಾಘವ ಅವರು, ಮಾನವನು ಆಧುನಿಕತೆಯ ಹೆಸರಿನಲ್ಲಿ ಹಲವು ಕಾರಣಗಳನ್ನು ನೀಡಿ ನಿಸರ್ಗವನ್ನು ಅತಿಕ್ರಮಣ…

Read More