ಮಡಿಕೇರಿ ಸೆ.27 NEWS DESK : ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಕೈಜೋಡಿಸುವ ಮೂಲಕ ಪಶ್ಚಿಮಘಟ್ಟದ ಜೀವವೈವಿಧ್ಯತೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಕರ್ನಾಟಕ ಪರಿಸರ ನಿರ್ವಹಣೆ ಹಾಗೂ ನೀತಿಶಾಸ್ತ್ರ ಸಂಶೋಧನಾ ಸಂಸ್ಥೆಯ ಮಾಹಿತಿ ಅಧಿಕಾರಿ ರೆನಿಟ ಮೆಥೈಯಿಸ್ ಅವರು ಕರೆ ನೀಡಿದ್ದಾರೆ. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಪ್ರಾಣಿಶಾಸ್ತ್ರ ವಿಭಾಗ ಮತ್ತು ಕರ್ನಾಟಕ ಪರಿಸರ ನಿರ್ವಹಣೆ ಹಾಗೂ ನೀತಿ ಶಾಸ್ತ್ರ ಸಂಶೋಧನಾ ಸಂಸ್ಥೆಯ ಸಹಯೋಗದಲ್ಲಿ ‘ಹವಮಾನ ಬದಲಾವಣೆ ಮತ್ತು ಪಶ್ಚಿಮ ಘಟ್ಟದ ಜೀವವೈವಿಧ್ಯತೆ’ ಕುರಿತು ಕಾರ್ಯಾಗಾರ ನಡೆಯಿತು. ಕಾಲೇಜ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಮತ್ತು ಜಾಗೃತಿ ಮೂಡಿಸಬೇಕು. ಪರಿಸರದ ಕುರಿತು ಹೆಚ್ಚು ಅರಿವು ಮೂಡಿಸಿ ಪರಿಸರ ರಾಯಭಾರಿಗಳನ್ನಾಗಿ ಮಾಡಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜ್ ನ ಪ್ರಾಂಶುಪಾಲ ಡಾ.ಮೇಜರ್ ಬಿ.ರಾಘವ ಅವರು, ಮಾನವನು ಆಧುನಿಕತೆಯ ಹೆಸರಿನಲ್ಲಿ ಹಲವು ಕಾರಣಗಳನ್ನು ನೀಡಿ ನಿಸರ್ಗವನ್ನು ಅತಿಕ್ರಮಣ…
ಲೇಖಕ: admin
ನಾಪೋಕ್ಲು ಸೆ.27 NEWS DESK : ನಾಪೋಕ್ಲು ಸಹಕಾರ ಮಹಿಳಾ ಸಮಾಜದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಸಮಾಜದ ಸಭಾಂಗಣದಲ್ಲಿ ನಡೆಯಿತು. ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಿಳಾ ಸಮಾಜದ ಅಧ್ಯಕ್ಷರಾದ ಕುಂಚೆಟ್ಟಿರ ರೇಷ್ಮಾ ಉತ್ತಪ್ಪ, ಕಟ್ಟಡದ ಮೇಲ್ಚಾವಣಿ ದುರಸ್ತಿ ಸೇರಿದಂತೆ ಇನ್ನಿತರ ಕೆಲಸಗಳನ್ನು ಮಾಡಿಸಲಾಗಿದೆ. ನಮ್ಮಲ್ಲಿ ಒಟ್ಟು 350 ಸದಸ್ಯರಿದ್ದು, ಸಂಬಂಧಿಸಿದ ಇಲಾಖೆಗಳ ನಿರ್ದೇಶನಗಳನ್ನು ಪಾಲಿಸಿಕೊಂಡು ನೂತನ ಸದಸ್ಯರನ್ನು ಸೇರ್ಪಡೆಗೊಳ್ಳಲಾಗುತ್ತಿದೆ ಎಂದರು. ಸದಸ್ಯರಲ್ಲದವರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರಾಗುವಂತೆ ಮನವಿ ಮಾಡಿಕೊಂಡರು. ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರ ಸಲಹೆ ಸಹಕಾರ ಅವಶ್ಯ. ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿ ಸಭೆಯಲ್ಲಿ ಸದಸ್ಯರ ಪ್ರಶ್ನೆ, ಸಲಹೆ, ಸೂಚನೆಗಳಿಗೆ ಉತ್ತರಿಸಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಸಹಕಾರ ಮಹಿಳಾ ಸಮಾಜ ಉಪಾಧ್ಯಕ್ಷೆ ಬೊಪ್ಪಂಡ ಶೈಲಾ ಬೋಪಯ್ಯ, ನಿರ್ದೇಶಕರಾದ ಬಿದ್ದಾಟಂಡ ಗಿರಿಜಾ ಬೋಪಣ್ಣ, ಕೇಟೋಳಿರ ಶಾರದಾ ಪಳಂಗಪ್ಪ, ಬೊಪ್ಪಂಡ ಬೊಳ್ಳಮ್ಮ ನಾಣಯ್ಯ, ಕುಂಡ್ಯೋಳಂಡ ಕವಿತಾ ಮುತ್ತಣ್ಣ, ಅಪ್ಪಾರಂಡ ಡೇಸಿ ತಿಮ್ಮಯ್ಯ, ಪುಲ್ಲೆರ ಪದ್ಮಿನಿ ಭೀಮಯ್ಯ, ಕಾರ್ಯದರ್ಶಿ…
ಮಡಿಕೇರಿ NEWS DESK ಸೆ.27 : ಪ್ರಸ್ತುತ ನಡೆಯುತ್ತಿರುವ ಕರ್ನಾಟಕ ರಾಜ್ಯ ಸರಕಾರದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಗಣತಿಯಲ್ಲಿ ಹಾಗೂ ಮುಂದೆ ನಡೆಯಲಿರುವ ಕೇಂದ್ರ ಸರಕಾರದ ಜಾತಿ ಗಣತಿಯ ಸಂದರ್ಭ ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು, ಉಪಜಾತಿ ಕಾಲಂನಲ್ಲಿ ಅರೆಭಾಷೆ ಗೌಡ, ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ಸರ್ವ ಅರೆಭಾಷೆ ಗೌಡರು ನಮೂದಿಸಬೇಕೆಂದು ಕೊಡಗು ಗೌಡ ಯುವ ವೇದಿಕೆ ಮನವಿ ಮಾಡಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ ಅವರು ಉಪಜಾತಿಯಲ್ಲಿ ಅರೆಭಾಷೆ ಗೌಡ ಎಂಬುವುದನ್ನು ಪ್ರತ್ಯೇಕ ಕಾಲಂನಲ್ಲಿ ಸೇರಿಸಬೇಕೆಂದು ಕೊಡಗು ಗೌಡ ಸಮಾಜಗಳ ಒಕ್ಕೂಟ ಸಲ್ಲಿಸಿದ ಮನವಿಗೆ ಸರಕಾರ ಸ್ಪಂದಿಸಿದೆ. ಉಪಜಾತಿ ಎನ್ನುವ ಕಾಲಂನಲ್ಲಿ ಅರೆಭಾಷೆ ಗೌಡ ಎಂದು ಸೂಚಿಸಬೇಕು. ಅರೆಭಾಷೆ ಗೌಡ ಸಮುದಾಯ ಬಾಂಧವರು ಈ ಎಲ್ಲಾ ವಿವರಗಳನ್ನು ಗಮನದಲ್ಲಿರಿಸಿಕೊಂಡು ಕಡ್ಡಾಯವಾಗಿ ರಾಜ್ಯ ಮತ್ತು ಕೇಂದ್ರದ ಗಣತಿಯಲ್ಲಿ ಪಾಲ್ಗೊಳ್ಳಬೇಕೆಂದು ಕೋರಿದ್ದಾರೆ. ಮೂಲತಃ ಗೌಡರು ಒಕ್ಕಲಿಗ…
ನಾಪೋಕ್ಲು ಸೆ.27 NEWS DESK : ನಾಲ್ಕುನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘ ಹಾಗೂ ವಾಹನ ಚಾಲಕರ ಸಂಘದ ವತಿಯಿಂದ 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಸಮಾರಂಭವನ್ನು ಅ.1 ರಂದು ನಾಪೋಕ್ಲು ಮಾರುಕಟ್ಟೆ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ನಾಲ್ಕುನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಟಿ.ಪಿ.ಸುಕುಮಾರ್ ಹೇಳಿದರು. ನಾಪೋಕ್ಲು ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯುಧಾ ಪೂಜೆ ಅಂಗವಾಗಿ ಬುಧವಾರ ಮಧ್ಯಾಹ್ನ 2 ಗಂಟೆಗೆ ಹಳೆ ತಾಲೂಕಿನಿಂದ ಅಲಂಕೃತ ವಾಹನಗಳ ಮೆರವಣಿಗೆ ನಡೆಯಲಿದೆ. 4 ಗಂಟೆಗೆ ಮಾರುಕಟ್ಟೆ ಆವರಣದಲ್ಲಿ ವಾಹನಗಳ ಸಾಮೂಹಿಕ ಆಯುಧ ಪೂಜೆ ನಡೆಯಲಿದೆ ಎಂದರು. ಸೈಕಲ್, ದ್ವಿಚಕ್ರ, ತ್ರಿಚಕ್ರ, ನಾಲ್ಕು ಚಕ್ರ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಲಾಗಿದ್ದು, ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ಸಂಘದ ವತಿಯಿಂದ ವಿತರಿಸಲಾಗುವುದು ಎಂದರು. ಸಂಜೆ 6 ಗಂಟೆಗೆ ನಾಲ್ಕು ನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಟಿ.ಪಿ.ಸುಕುಮಾರ್ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ…
ಮಡಿಕೇರಿ ಸೆ.28 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀದಂಡಿನ ಮಾರಿಯಮ್ಮ ದೇವಿಗೆ ದಸರಾದ ಆರನೇ ದಿನವಾದ ಇಂದು ಶ್ರೀ ದಂಡಿನ ಮಾರಿಯಮ್ಮ ಅಲಂಕಾರದಲ್ಲಿ ಗಮನ ಸೆಳೆಯುತ್ತಿದೆ. ನೂರಾರು ಭಕ್ತರು ಪೂಜೆ ಸಲ್ಲಿಸಿ ವಿಶೇಷ ಅಲಂಕಾರವನ್ನು ವೀಕ್ಷಿಸಿದರು. ನವರಾತ್ರಿಯ ಪ್ರಯುಕ್ತ ಶ್ರೀ ದಂಡಿನ ಮಾರಿಯಮ್ಮ ದೇವಾಲಯದಲ್ಲಿ ಪ್ರತಿದಿನ ವಿಶೇಷ ಅಲಂಕಾರ ಸೇವೆ ಮತ್ತು ವಿಶೇಷ ಪೂಜೆ ನಡೆಯುತ್ತಿದೆ. ಸೆ.28 ರಂದು ಗುಲಾಬಿ ಹೂವಿನ ಅಲಂಕಾರ ಪೂಜೆ ನಡೆಯಲಿದೆ.
ಮಡಿಕೇರಿ ಸೆ.27 NEWS DESK : ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ವೇದಿಕೆಯಲ್ಲಿ ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆಯಿಂದ ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸಲಾಯಿತು. ಸಾಂಸ್ಕೃತಿಕ ವೈವಿಧ್ಯದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮ, ಬಾಲ್ಯ ವಿವಾಹ ತಡೆಗಟ್ಟುವಿಕೆ, ಮಹಿಳಾ ಪೊಲೀಸರು ನವಶಕ್ತಿ ವೈಭವ ನೃತ್ಯ, ಸಮೂಹ ಗೀತೆ ಮುಂತಾದ ಕಾರ್ಯಕ್ರಮಗಳು ಕಿಕ್ಕಿರಿದ ಜನರನ್ನು ಮುದಗೊಳಿಸುವಲ್ಲಿ ಯಶಸ್ವಿಯಾಯಿತು.
ವಿರಾಜಪೇಟೆ ಸೆ.27 NEWS DESK : ಸಮಾಜದಲ್ಲಿ ಆರೋಗ್ಯ ಹಾಗೂ ಸ್ವಚ್ಛತಾ ಜಾಗೃತಿಯನ್ನು ಮೂಡಿಸುವುದರಲ್ಲಿ ಎನ್ ಎಸ್ ಎಸ್ ನ ಪಾತ್ರ ಹಿರಿದಾಗಿದೆ ಎಂದು ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ಮಾಳೇಟಿರ ತೃಪ್ತಿ ಬೋಪಣ್ಣ ಅಭಿಪ್ರಾಯಪಟ್ಟರು. ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಎನ್.ಎಸ್.ಎಸ್ ದಿನಾಚರಣೆಯ ಪ್ರಯುಕ್ತ ಸ್ವಚ್ಛತಾ ಜಾಗೃತಿ ಕಾರ್ಯಕ್ರಮ ಹಾಗೂ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡುತ್ತಾ ಮಾತನಾಡಿದರು. ಸ್ವಚ್ಛತೆ ಎಂಬುವುದು ನಮ್ಮ ಮನೆಗಳಿಂದಲೇ ಆರಂಭವಾಗಬೇಕು. ಸಮಾಜದಲ್ಲಿ ಪ್ರತಿಯೊಬ್ಬರು ಸ್ವಚ್ಛ ಪರಿಸರ ನಿರ್ಮಾಣಕ್ಕೆ ಪಣ ತೊಡಬೇಕು. ರಾಷ್ಟ್ರಾದ್ಯಂತ ಎನ್ ಎಸ್ ಎಸ್ ಘಟಕವು ಸ್ವಯಂ ಸೇವಕರನ್ನು ಹೊಂದಿದ್ದು, ಆರೋಗ್ಯವಂತ ಸಮಾಜದ ನಿರ್ಮಾಣದಲ್ಲಿ ಎನ್.ಎಸ್.ಎಸ್ ಸ್ವಯಂ ಸೇವಕರ ಪಾತ್ರ ಅಪಾರವಾಗಿದೆ ಎಂದರು. ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಬಿ.ಡಿ.ಹೇಮ ಆರೋಗ್ಯ ಜಾಗೃತಿ ಹಾಗೂ ಸ್ವಚ್ಛತಾ ಕ್ರಮಗಳ ಕುರಿತು ಮಾತನಾಡಿದರು. ಪರಿಸರ ಮಾಲಿನ್ಯವನ್ನು ತಡೆಗಟ್ಟಲು ಶ್ರಮಿಸಿ ಎಂದು ಕರೆ ನೀಡಿದರು. ಎನ್.ಎಸ್.ಎಸ್ ಘಟಕದ ಸ್ವಯಂ ಸೇವಾ ವಿದ್ಯಾರ್ಥಿಗಳು ಕಾಲೇಜಿನ ಎಲ್ಲಾ ತರಗತಿಗಳಿಗೆ…
ವಿರಾಜಪೇಟೆ ಸೆ.27 NEWS DESK : ಆಧಿಶಕ್ತಿ ಟ್ಯುಟೋರಿಯಲ್ಸ್ ನಲ್ಲಿ ಎತ್ನಿಕ್ ಡೇ ಹಾಗೂ ಪ್ರತಿಭಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಮುಖ್ಯಸ್ಥರಾದ ಕರಣ್ ಕುಮಾರ್, ವಿದ್ಯಾರ್ಥಿಗಳು ಪ್ರತಿನಿತ್ಯ ತರಗತಿಗೆ ಹಾಜರಾಗುವ ಮೂಲಕ ಶ್ರದ್ಧೆಯಿಂದ ಓದಬೇಕು. ಸಂಸ್ಥೆಯಲ್ಲಿ ಮೌಲ್ಯಯುತ ಶಿಕ್ಷಣವನ್ನು ನೀಡುತ್ತಿದ್ದು, ವಿದ್ಯಾರ್ಥಿಗಳು ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರ ತರಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯನ್ನು ಕಲ್ಪಿಸಲಾಗಿದೆ ಎಂದರು. ವಿದ್ಯಾರ್ಥಿಗಳು ಉತ್ತಮವಾಗಿ ಓದಿ ಸಂಸ್ಥೆಗೆ ಉತ್ತಮ ಫಲಿತಾಂಶವನ್ನು ನೀಡಿ ಎಂದು ಕರೆ ನೀಡಿದರು. ಈ ಸಂದರ್ಭ ಎಂ.ಎಚ್.ಸಮಿನ, ಜೀಸ್ಮ ಎಂ.ಎಸ್., ಗಗನ್, ಗೀತಾ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಮಡಿಕೇರಿ ಸೆ.27 NEWS DESK : ಕೆ.ವಿ.ವಿ ಎಜುಕೇಶನಲ್ ಟ್ರಸ್ಟ್ ವತಿಯಿಂದ ವಿರಾಜಪೇಟೆ ಕಾವೇರಿ ಕಾಲೇಜಿನ ಆವರಣದಲ್ಲಿ ನೂತನವಾಗಿ ಪ್ರಾರಂಭವಾದ ಕಾವೇರಿ ಇನ್ಸ್ಟಿಟ್ಯೂಟ್ ಆಫ್ ಲಾ ಕಾಲೇಜಿನ ಪ್ರಥಮ ವರ್ಷದ ಮೊದಲ ಬ್ಯಾಚ್ ನ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಹಾಗೂ ಓರಿಯಂಟೇಷನ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೆ.ವಿ.ವಿ ಎಜುಕೇಶನ್ ಟ್ರಸ್ಟ್ ನ ಮುಖ್ಯಸ್ಥರಾದ ಜಿ.ಎನ್.ನಾಗೇಂದ್ರ ಮಾತನಾಡಿ, ಕಾವೇರಿ ಕಾನೂನು ಕಾಲೇಜಿನ ಧ್ಯೇಯೊದ್ದೇಶಗಳನ್ನು ತಿಳಿಸಿ ತಮ್ಮ ಟ್ರಸ್ಟ್ ಭಾರತದಾತ್ಯಂತ ವಿದ್ಯಾರ್ಥಿಗಳಿಗಾಗಿ ಕಾನೂನು ಶಿಕ್ಷಣವನ್ನು ನೀಡಲು ವಿವಿಧ ಶಾಖೆಗಳನ್ನು ಆರಂಭಿಸಿದ್ದು, ಗುಣಾತ್ಮಕ ಶಿಕ್ಷಣ ಮತ್ತು ಕಾನೂನು ಸೇವೆಗಳನ್ನು ಉತ್ತಮ ರೀತಿಯಲ್ಲಿ ಒದಗಿಸುತ್ತ ಬರುವುದರೊಂದಿಗೆ ವಿದ್ಯಾರ್ಥಿಗಳಿಗೆ ಆರಂಭಿಕ ಹಂತದಲ್ಲಿ ನ್ಯಾಯಾಧೀಶರ ಪರೀಕ್ಷೆಗೆ ಸಿದ್ದಪಡಿಸಲಾಗುವುದು ಹಾಗೂ ನ್ಯಾಯಾಲಯಗಳಲ್ಲಿ ನಡೆಯುವ ಪ್ರಕ್ರಿಯೆಗಳ ತರಬೇತಿಯನ್ನು ಮೊದಲ ಸೆಮಿಸ್ಟರ್ ಹಂತದಲ್ಲಿಯೇ ಆರಂಭಿಸಲಾಗುತ್ತದೆ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ವಿನೀತಾ ಮಾತನಾಡಿ, ಕಾನೂನು ಶಿಕ್ಷಣದ ಇತಿಹಾಸ ಮತ್ತು ಕಾನೂನು ಶಿಕ್ಷಣದ ಪ್ರಾಮುಖ್ಯತೆಯನ್ನು ವಿವರಿಸಿದರು. ಕಾನೂನು ಶಿಕ್ಷಣವನ್ನು ಪಡೆದಂತವರು ಉತ್ತಮ ಸಮಾಜ ನಿರ್ಮಾಣಕ್ಕೆ ತಮ್ಮ ಕೊಡುಗೆಯನ್ನು…
ವಿರಾಜಪೇಟೆ ಸೆ.27 NEWS DESK : ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ದೇವಾಲಯದ ಒಳ ಆವರಣದಲ್ಲಿರುವ ವನದುರ್ಗೆ ಗುಡಿಯಲ್ಲಿ ವಿಶೇಷ ಪೂಜೆ ನಡೆಯಿತು. ದೇವಾಲಯದ ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್ ಹಾಗೂ ವಾಮನ ಮೂರ್ತಿ ಭಟ್ ಅವರ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ಜರುಗಿತು. ಅರ್ಚಕರು ನವರಾತ್ರಿ ಉತ್ಸವದ ಪ್ರಯುಕ್ತ ಮುಂಜಾನೆಯಿಂದಲೇ ಪ್ರಾರ್ಥನೆ, ಸಂಕಲ್ಪ ಪೂಜೆ, ದೇವಿಗೆ ಅಲಂಕಾರ, ಪುಷ್ಪಾರ್ಚನೆ, ಕುಂಕುಮಾರ್ಚನೆ ಸೇರಿದಂತೆ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿದರು. ನಂತರ ದೇವಿ ಅಷ್ಟೋತ್ತರವನ್ನು ಪಾರಾಯಣ ಮಾಡಿದರು. ನೈವೇದ್ಯವನ್ನು ಅರ್ಪಿಸಿ ವಿಶೇಷ ಪ್ರಾರ್ಥನೆಯನ್ನು ಮಾಡಿದರು. ದೇವಸ್ಥಾನದ ಆವರಣದಲ್ಲಿರುವ ಶ್ರೀ ಮಹಾಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ, ಶ್ರೀ ನಾಗಗುಡಿಗಳಲ್ಲೂ ಪೂಜೆಯನ್ನು ನೆರವೇರಿಸಲಾಯಿತು. ವನದುರ್ಗೆಗೆ ಮಹಾ ಮಂಗಳಾರತಿ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಹಾಜರಿದ್ದರು.






