ಲೇಖಕ: admin

ನಾಪೋಕ್ಲು ಸೆ.27 NEWS DESK : ಸ್ಕ್ಯಾಡ್ಸ್ ಮಂಗಳೂರು (SKADS) ವತಿಯಿಂದ ನೀಡಲಾಗುವ ಪ್ರಥಮ ಪ್ರಶಸ್ತಿ ಗೆ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಭಾಜನವಾಗಿದೆ. ಸ್ಕ್ಯಾಡ್ಸ್ ಮಂಗಳೂರು (SKADS) ಸಂಸ್ಥೆಯೊಂದಿಗೆ ಕೊಡಗು ಜಿಲ್ಲೆಯಲ್ಲಿ ಅತಿ ಹೆಚ್ಚು ವ್ಯವಹಾರ ನಡೆಸಿದ ಸಹಕಾರ ಸಂಘಕ್ಕೆ ಕೊಡ ಮಾಡುವ  ಪ್ರಶಸ್ತಿಯನ್ನು ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಂಸ್ಥೆಯ ಅಧ್ಯಕ್ಷರಾದ ರವೀಂದ್ರ ಕಂಬಳಿಯವರು ಹಾಗೂ ಸಂಸ್ಥೆಯ ನಿರ್ದೇಶಕರುಗಳು ಪ್ರಶಸ್ತಿ ನೀಡಿ ಗೌರವಿಸಿದರು. ಸಂಸ್ಥೆಯ ಅಧ್ಯಕ್ಷರಾದ  ನಾಗೇಶ್ ಕುಂದಲ್ಪಾಡಿ ಅವರ ಪರವಾಗಿ ನಿರ್ದೇಶಕರಾದ ಪ್ರಮೀಳಾ ಬಂಗಾರಕೋಡಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ ಪ್ರಶಸ್ತಿ ಸ್ವೀಕರಿಸಿದರು. ವರದಿ : ದುಗ್ಗಳ ಸದಾನಂದ.

Read More

ವಿರಾಜಪೇಟೆ ಸೆ.27 NEWS DESK : ಪ್ರತಿಯೊಬ್ಬರೂ ಕೂಡ ಪ್ರಕೃತಿಯ ಜೊತೆಗೆ ಭಾವನಾತ್ಮಕ ಸಂಬಂಧವನ್ನು ಹೊಂದಿರಬೇಕು ಎಂದು ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರಾದ ಮೇರಿಯಂಡ ಸಂಕೇತ್ ಪೂವಯ್ಯ ಅಭಿಪ್ರಾಯಪಟ್ಟರು. ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ನೇಚರ್ ಕ್ಲಬ್ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಕೃತಿಯು ಮಾನವನಿಗೆ ಒಂದು ವರವಾಗಿದ್ದು ಭಾವನಾತ್ಮಕವಾಗಿಯೂ, ಆರೋಗ್ಯದ ದೃಷ್ಟಿಯಿಂದಲೂ ತನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ. ಪರಿಸರ ಅಧ್ಯಯನವನ್ನು ನಾವು ಪ್ರಾಯೋಗಿಕವಾಗಿ ಅಧ್ಯಯನ ಮಾಡಬೇಕು. ಪರಿಸರದಲ್ಲಿ ನಾವು ಕಲಿಯುವ ಪಾಠವು ಆರೋಗ್ಯವನ್ನು ಉತ್ತಮಪಡಿಸುವುದಲ್ಲದೆ ಸುಂದರ ಸಮಾಜದ ಸೃಷ್ಟಿಗೂ ಕಾರಣವಾಗುತ್ತದೆ. ಆದುದರಿಂದ ವಿದ್ಯಾರ್ಥಿಗಳು ಪರಿಸರದ ಸಂರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮೌಲ್ಯಯುತವಾದ ಶಿಕ್ಷಣವನ್ನು ಪಡೆಯಿರಿ ಎಂದು ಕಿವಿಮಾತು ಹೇಳಿದರು. ಸತ್ಯ, ಪ್ರಾಮಾಣಿಕತೆ, ನ್ಯಾಯಪರವಾದ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿ ಉಪನ್ಯಾಸವನ್ನು ನೀಡಿದ ಪತ್ರಕರ್ತರು ಹಾಗೂ ಬರಹಗಾರರಾದ ಉಷಾ ಪ್ರೀತಂ ಮಾತನಾಡಿ, ಕೊಡಗು ಪ್ರಕೃತಿ ಸೌಂದರ್ಯದ ನಾಡು.…

Read More

ಕುಶಾಲನಗರ ಸೆ.27 NEWS DESK : ಖ್ಯಾತ ಕಾದಂಬರಿಕಾರರೂ ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತರೂ ಆದ ಎಸ್.ಎಲ್.ಭೈರಪ್ಪ ಅವರ ಅಗಲುವಿಕೆಯ ಕುರಿತು ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಸಿರಿ ಬಳಗದ ವತಿಯಿಂದ ಕುಶಾಲನಗರ ಪಟ್ಟಣದಲ್ಲಿ ಜಂಟಿಯಾಗಿ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಸಾಹಿತ್ಯಾಭಿಮಾನಿಗಳು ಕಂಬನಿ ಮಿಡಿದರು. ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಏರ್ಪಡಿಸಿದ್ದ ಕಾದಂಬರಿಕಾರ ಭೈರಪ್ಪ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಒಂದು ನಿಮಿಷ ಕಾಲ ಮೌನಾಚರಣೆ ನಡೆಸಿ ನುಡಿನಮನ ಸಲ್ಲಿಸಲಾಯಿತು. ಜಾಗತಿಕ ಮಟ್ಟದಲ್ಲಿ ಮನ್ನಣೆ ಗಳಿಸಿದ್ದ ಎಸ್.ಎಲ್.ಭೈರಪ್ಪ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಮಾತನಾಡಿ, ತಮ್ಮ ಕಾದಂಬರಿ ಮೂಲಕ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದ ಎಸ್.ಎಲ್.ಭೈರಪ್ಪ ಅವರ ಕೃತಿಗಳು ಹಲವಾರು ಭಾಷೆಗಳಿಗೆಅನುವಾದವಾಗಿರುವುದು ಅವರ ಸಾಹಿತ್ಯ ಶಕ್ತಿಗೆ ಸಾಕ್ಷಿಯಾಗಿದೆ ಎಂದರು. ಜಿಲ್ಲಾ ಕಸಾಪ ಸಮಿತಿಯ ಸದಸ್ಯ ಎಂ.ಎನ್.ವೆಂಕಟನಾಯಕ್ ಮಾತನಾಡಿ, ವಂಶವೃಕ್ಷ, ದಾಟು, ತಂತು ಮುಂತಾದ ಪ್ರಮುಖ ಕಾದಂಬರಿಗಳ ಮೂಲಕ ಕನ್ನಡ…

Read More

ಮಡಿಕೇರಿ ಸೆ.27 NEWS DESK  : ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವಂತೆ ವಿದ್ಯಾರ್ಥಿಗಳಾಗಿರುವಾಗಲೇ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದು ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ.ಜೆ ಸೋಮಣ್ಣ ಹೇಳಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ 2025-26ನೇ ಸಾಲಿನ ಕಾಲೇಜಿನ ಪಠ್ಯ ಮತ್ತು ಪಠ್ಯೇತರ ಚಟುವಟಿಕೆ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾಯಕರಾಗಬೇಕಾದರೆ ವಿನಯ ಬೆಳೆಸಿಕೊಳ್ಳಬೇಕು. ವಿಚಾರ ವಿನಿಮಯ ತಿಳಿದುಕೊಳ್ಳಬೇಕು. ಯುವ ಪೀಳಿಗೆಯ ಮೇಲೆ ಪ್ರಜಾಪ್ರಭುತ್ವ ಉಳಿಸಿಕೊಳ್ಳುವ ಜವಾಬ್ದಾರಿ ಇದೆ. ಅದನ್ನು ಅರಿತುಕೊಂಡು ಮುನ್ನಡೆಯಬೇಕು ಎಂದರು. ಮಾನವೀಯತೆಯ ಭದ್ರ ಬುನಾದಿ ಮೇಲೆ ನಮ್ಮ ಸಮಾಜ ಕಟ್ಟಲಾಗಿದೆ. ಅಂತಹ ಸಮಾಜ ಉಳಿಸಿಕೊಳ್ಳಬೇಕು. ಭಾರತ ಸಮಾಜವಾದಿ ರಾಷ್ಟ್ರವಾಗಿದೆ. ಭಾರತದ ಹೆಸರು ದೇಶ ವಿದೇಶದಲ್ಲಿ ಮೊಳಗುವಂತೆ ಯುವ ಪೀಳಿಗೆಯು ಸಾಧಿಸಬೇಕೆಂದು ತಿಳಿಸಿದರು. ಪಂಪ ಹೇಳಿದಂತೆ ಮಾನವ ಕುಲ ಒಂದೇ, ಭಾರತವು ಸಮಾಜವಾದಿ, ಸರ್ವಧರ್ಮ ರಾಷ್ಟ್ರ ವಿದ್ಯಾರ್ಥಿಗಳು ಇದನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು. ಸಂವಿಧಾನ ಉಳಿಯಬೇಕೆಂದರೆ ಯುವ ಪೀಳಿಗೆಯೂ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ರಾಜಕೀಯ,…

Read More

ಮಡಿಕೇರಿ NEWS DESK ಸೆ.26 : ಪ್ರಸ್ತುತ ನಡೆಯುತ್ತಿರುವ ಕರ್ನಾಟಕ ರಾಜ್ಯ ಸರಕಾರದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮತ್ತು ಮುಂದೆ ನಡೆಯಲಿರುವ ಕೇಂದ್ರ ಸರಕಾರದ ಜಾತಿ ಜನಗಣತಿಯ ಸಂದರ್ಭ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು, ಉಪಜಾತಿ ಕಾಲಂನಲ್ಲಿ ಅರೆಭಾಷೆ ಗೌಡ, ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಭಾಗಮಂಡಲ ಗೌಡ ಸಮಾಜದ ಅಧ್ಯಕ್ಷ ಕುದುಪಜೆ ಪಳಂಗಪ್ಪ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯ ಸರಕಾರವು ಈಗಾಗಲೇ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯ ಸಮೀಕ್ಷೆಯನ್ನು ಆರಂಭಿಸಿದೆ. ಮುಂದಿನ ವರ್ಷ ಕೇಂದ್ರ ಸರಕಾರ ಕೂಡ ಗಣತಿ ಆರಂಭಿಸಲಿದ್ದು, ಎರಡೂ ಪ್ರಕ್ರಿಯೆಯ ಸಂದರ್ಭ ಕೊಡಗಿನ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿ ಅರೆಭಾಷೆ ಗೌಡ ಮತ್ತು ಮಾತೃ ಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಕೋರಿದ್ದಾರೆ. ಉಪಜಾತಿಯಲ್ಲಿ ಅರೆಭಾಷೆ ಗೌಡ ಎಂಬುವುದನ್ನು ಪ್ರತ್ಯೇಕ ಕಾಲಂನಲ್ಲಿ ಸೇರಿಸಬೇಕೆಂದು ಕೊಡಗು ಗೌಡ…

Read More

ಮಡಿಕೇರಿ NEWS DESK ಸೆ.26 : ಜಾತಿ ಜನಗಣತಿಯ ಸಂದರ್ಭ ಕೊಡಗಿನ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿಯ ಕಾಲಂನಲ್ಲಿ ಅರೆಭಾಷೆ ಗೌಡ ಮತ್ತು ಮಾತೃಭಾಷೆಯ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಕೊಡಗು ಗೌಡ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಚೊಕ್ಕಾಡಿ ಅಪ್ಪಯ್ಯ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಸ್ತುತ ರಾಜ್ಯ ಸರಕಾರ ನಡೆಸುತ್ತಿರುವ ಮತ್ತು ಮುಂದೆ ಕೇಂದ್ರ ಸರಕಾರ ನಡೆಸಲಿರುವ ಜಾತಿ ಜನಗಣತಿಯಲ್ಲಿ ಕೊಡಗಿನ ಅರೆಭಾಷೆ ಗೌಡರು ಕಡ್ಡಾಯವಾಗಿ ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸಬೇಕು. ಗಣತಿಯಲ್ಲಿ ತಮ್ಮ ಜಾತಿಗೆ ಇರುವ ಇನ್ನೊಂದು ಹೆಸರು ಎಂಬ ಕಾಲಂ ಕೂಡ ಇದ್ದು, ಇದರಲ್ಲಿ ಒಕ್ಕಲಿಗ, ಕೊಡಗು ಗೌಡ, ಅರೆಭಾಷೆ ಒಕ್ಕಲಿಗ ಎಂದು ನಮೂದಿಸಲು ಸಲಹೆ ನೀಡಿದ್ದಾರೆ. ರಾಜ್ಯ ಸರಕಾರ ಈಗಾಗಲೇ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯ ಸಮೀಕ್ಷೆಯನ್ನು ಆರಂಭಿಸಿದೆ. ಮುಂದಿನ ವರ್ಷ ಕೇಂದ್ರ ಸರಕಾರ ಕೂಡ ಗಣತಿ ನಡೆಸಲಿದೆ. ಉಪಜಾತಿಯಲ್ಲಿ…

Read More

ಮಡಿಕೇರಿ NEWS DESK ಸೆ.26 : ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾಗಿ ಸಾಮಾಜಿಕ, ರಾಜಕೀಯ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿರುವ ಟಿ.ಎಂ.ಶಾಹೀದ್ ಅವರು ನೇಮಕಗೊಂಡಿದ್ದಾರೆ.

Read More

ಮಡಿಕೇರಿ NEWS DESK ಸೆ.26 : ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಅಂತರಾಷ್ಟ್ರೀಯ ಕರಾಟೆ ಪಟು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ ಅವರು ನೇಮಕಗೊಂಡಿದ್ದಾರೆ.

Read More

ಸೋಮವಾರಪೇಟೆ NEWS DESK ಸೆ.26 : ಕರ್ನಾಟಕ ರಕ್ಷಣಾ ವೇದಿಕೆಯ ಹಾಲಿ ಕೊಡಗು ಜಿಲ್ಲಾದ್ಯಕ್ಷ ಸೇರಿದಂತೆ ಹಲವರು ಪ್ರವೀಣ್ ಶೆಟ್ಟಿ ಬಣಕ್ಕೆ ಸೇರ್ಪಡೆಯಾಗಿದ್ದಾರೆ. ರಕ್ಷಣಾ ವೇದಿಕೆಯ ನಾರಾಯಣ ಗೌಡ ಬಣದ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷ  ಸೇರಿದಂತೆ ಹಲವು ಮಂದಿ ಪ್ರವೀಣ್ ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆ ಸೇರುವ ಮೂಲಕ ನಾರಾಯಣ ಗೌಡ ಬಣಕ್ಕೆ ಸಡ್ಡು ಹೊಡೆದಿದ್ದಾರೆ. ಇದೀಗ ಪ್ರವೀಣ್ ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆಯ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾಗಿ ದೀಪಕ್ ನೇಮಕಗೊಂಡಿದ್ದಾರೆ. ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ಸಂಧ್ಯಾ ಗಣೇಶ ನೇಮಕಗೊಂಡಿದ್ದಾರೆ.

Read More

ಮಡಿಕೇರಿ NEWS DESK ಸೆ.26 : ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವ ಸಂಘ ಸಂಸ್ಥೆಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಸಮಾಜ ಸೇವೆಯಲ್ಲಿ ಸಾರ್ವಜನಿಕರ ಸಹಭಾಗಿತ್ವ ಬಹಳ ಮುಖ್ಯ ಎಂದು ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ತಿಳಿಸಿದ್ದಾರೆ. ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆಯ ಅನುದಾನ ಮತ್ತು ಲಯನ್ಸ್ ಜಿಲ್ಲೆ 317-ಆ ಇದರ ಸಹಯೋಗದೊಂದಿಗೆ ಮಡಿಕೇರಿ ಲಯನ್ಸ್ ಸಂಸ್ಥೆ ಸಮಾಜಮುಖಿ ಸೇವಾ ಕಾರ್ಯಕ್ರಮದ ಭಾಗವಾಗಿ ಬಡವರಿಗೆ ದಿನಸಿ ಕಿಟ್ ಮತ್ತು ಕಂಬಳಿಗಳನ್ನು ವಿತರಿಸಿತು. ನಗರದ ಲಯನ್ಸ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಉಪ ವಿಭಾಗಾಧಿಕಾರಿಗಳು ಲಯನ್ಸ್ ಸಂಸ್ಥೆಯ ಸಮಾಜಮುಖಿ ಕಾರ್ಯಗಳ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು. ಕೆಲವು ವರ್ಷಗಳ ಹಿಂದೆ ಕೊಡಗಿನಲ್ಲಿ ಅತಿವೃಷ್ಟಿಯಿಂದ ಅನಾಹುತಗಳು ಸಂಭವಿಸಿದಾಗ ಸಂಘ ಸಂಸ್ಥೆಗಳು ಸ್ವಯಂ ಪ್ರೇರಿತರಾಗಿ ನೀಡಿದ ಸೇವೆ ಶ್ಲಾಘನೀಯ. ಸಮಾಜದಲ್ಲಿ ಯಾವುದೇ ರೀತಿಯ ಸಮಸ್ಯೆ ಮತ್ತು ಸಂಕಷ್ಟ ಎದುರಾದಾಗ ಸರಕಾರದೊಂದಿಗೆ ಸೇವಾಸಂಸ್ಥೆಗಳು ಕೈಜೋಡಿಸಿದಾಗ ಮಾತ್ರ ಪರಿಹಾರೋಪಾಯಗಳು ಯಶಸ್ವಿಯಾಗಲು ಸಾಧ್ಯ ಎಂದರು. ಲಯನ್ಸ್ ಪ್ರಾಂತೀಯ ಅಧ್ಯಕ್ಷ ಲಯನ್ ಡಾ.ಪಂಚಮ್ ತಿಮ್ಮಯ್ಯ ಅವರು…

Read More