ಲೇಖಕ: admin

ಫಿಲಡೆಲ್ಫಿಯಾ, ಅಮೆರಿಕ / ಮೈಸೂರು, NEWS DESK ಸೆ. 4, 2026: ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಮೆರಿಕದ ಫಿಲಡೆಲ್ಫಿಯಾದಲ್ಲಿ ನಡೆಯುತ್ತಿರುವ AKKA Silver Jubilee World Kannada Conference 2026ರಲ್ಲಿ ಅಧಿಕೃತವಾಗಿ ಭಾಗವಹಿಸಿ, ವಿವಿಧ ಕಾರ್ಯಕ್ರಮಗಳ ಉದ್ಘಾಟನೆಯಲ್ಲಿ ತೊಡಗಿಸಿಕೊಂಡಿರುವ ನಡುವೆಯೂ, ಕಸ್ತೂರಿರಂಗನ್ ವರದಿ ಹಾಗೂ ಪಶ್ಚಿಮ ಘಟ್ಟಗಳ ಭವಿಷ್ಯಕ್ಕೆ ಸಂಬಂಧಿಸಿದ ಮಹತ್ವದ ಸಭೆಯಲ್ಲಿ ವರ್ಚುವಲ್ ಮೂಲಕ ಭಾಗವಹಿಸಲಿದ್ದಾರೆ. ಸೆಪ್ಟೆಂಬರ್ 4ರಂದು ಭಾರತದಲ್ಲಿ ನಡೆಯಲಿರುವ ಈ ಸಭೆಯು ಅಮೆರಿಕದ ಸಮಯದ ಪ್ರಕಾರ ಮುಂಜಾನೆ ಸುಮಾರು 4 ಗಂಟೆಗೆ ನಡೆಯಲಿದೆ. ಅಮೆರಿಕದಲ್ಲಿನ ತಮ್ಮ ಅಧಿಕೃತ ಕಾರ್ಯಕ್ರಮಗಳು ಹಾಗೂ ಅತ್ಯಂತ ಮುಂಜಾನೆಯ ಸಮಯದ ನಡುವೆಯೂ ಸಭೆಯಲ್ಲಿ ಭಾಗವಹಿಸಲು ಯದುವೀರ್ ಅವರು ಅಗತ್ಯ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಇದು ಕೊಡಗು ಹಾಗೂ ಪಶ್ಚಿಮ ಘಟ್ಟ ಪ್ರದೇಶಗಳ ಜನರ ಸಮಸ್ಯೆಗಳಿಗೆ ಅವರು ನೀಡುತ್ತಿರುವ ಮಹತ್ವವನ್ನು ಮತ್ತೊಮ್ಮೆ ತೋರಿಸುತ್ತದೆ. ಪಶ್ಚಿಮ ಘಟ್ಟಗಳಲ್ಲಿ ಪರಿಸರ ಸೂಕ್ಷ್ಮ ಪ್ರದೇಶಗಳ ಘೋಷಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಏಳನೇ…

Read More

ಕುಶಾಲನಗರ, NEWS DESK ಸೆ.4: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು (ಕ.ಸಾ.ಪ.), ಕುಶಾಲನಗರ ತಾಲ್ಲೂಕು ಕ.ಸಾ.ಪ. ಘಟಕ ಹಾಗೂ ಕುಶಾಲನಗರ ಕನ್ನಡ ಭಾರತಿ ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಸೆ.8ರಂದು (ಮಂಗಳವಾರ) ಬೆಳಿಗ್ಗೆ 10.45 ಗಂಟೆಗೆ ಇಲ್ಲಿನ ಕನ್ನಡ ಭಾರತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೊಡಗಿನ ತ್ರಿಭಾಷಾ ಸಾಹಿತಿ ದಿವಂಗತ ವಿ.ಎಸ್. ರಾಮಕೃಷ್ಣ ಅವರ ದತ್ತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ನಾಗೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕನ್ನಡ ಭಾರತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕೆ.ಎಸ್. ರುದ್ರಪ್ಪ ಉದ್ಘಾಟಿಸಲಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವಕಾಮತ್ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ಕೊಡಗು ಜಿಲ್ಲಾ ಲೇಖಕರ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಟಿ.ಜಿ. ಪ್ರೇಮಕುಮಾರ್ ಅವರು “ಕೊಡಗಿನ ತ್ರಿಭಾಷಾ ಸಾಹಿತಿ ದಿವಂಗತ ವಿ.ಎಸ್. ರಾಮಕೃಷ್ಣ ಅವರ ಕೃತಿಗಳು” ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ತಾಲ್ಲೂಕು ಕಸಾಪ ಕೋಶಾಧಿಕಾರಿ…

Read More

ಸುಂಟಿಕೊಪ್ಪ, NEWS DESK ಸೆ. 4: ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಜಾರಿಯಾಗಿದ್ದು, ಅದನ್ನು ತಡೆಹಿಡಿದಿರುವ ಹಾಗೂ ಪುನರ್‌ಪರಿಶೀಲನೆಗಾಗಿ ಉಪಸಮಿತಿ ರಚಿಸಿರುವುದನ್ನು ವಿರೋಧಿಸಿ ಸೆ. 8ರಂದು ‘ಬೆಂಗಳೂರು ಚಲೋ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್. ಭರತ್ ಹೇಳಿದರು. ಶುಕ್ರವಾರ ಬೆಳಿಗ್ಗೆ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ವಿವಿಧ ಪಂಚಾಯಿತಿ ನೌಕರರು ನಡೆಸಿದ ಸಾಂಕೇತಿಕ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಅವರು, “ನಮ್ಮ ಬೇಡಿಕೆಯನ್ನು ಮನಗಂಡ ರಾಜ್ಯ ಸರ್ಕಾರವು ದಿನಾಂಕ 22-05-2026ರ ಅಧಿಸೂಚನೆಯಂತೆ ರೂ. 21,600 ಕನಿಷ್ಠ ವೇತನ ನಿಗದಿಪಡಿಸಿ ಆದೇಶ ಹೊರಡಿಸಿದೆ. ಆದರೆ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಈ ವೇತನವನ್ನು ತಡೆಹಿಡಿದು, ಪುನರ್‌ಪರಿಶೀಲನೆಗಾಗಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಉಪಸಮಿತಿಯನ್ನು ರಚಿಸಿದೆ. ಈ ಉಪಸಮಿತಿಯನ್ನು ಕೂಡಲೇ ವಿಸರ್ಜಿಸಬೇಕು. ವೇತನ ಸೇರಿದಂತೆ ಇತರ ಬೇಡಿಕೆಗಳನ್ನು ತಕ್ಷಣ ಈಡೇರಿಸುವ ನಿಟ್ಟಿನಲ್ಲಿ ಸೆ. 8ರಂದು ವಿಧಾನಸೌಧ ಚಲೋ ಕಾರ್ಯಕ್ರಮ…

Read More

ಸುಂಟಿಕೊಪ್ಪ, NEWS DESK ಸೆ. 4: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 7ನೇ ಹೊಸಕೋಟೆ ಶ್ರೀ ಮಹಾಗಣಪತಿ ಮತ್ತು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 7ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ 3ನೇ ವರ್ಷದ ಶ್ರೀಕೃಷ್ಣ ಮತ್ತು ರಾಧಾ ಛದ್ಮವೇಷ ಸ್ಪರ್ಧೆಯನ್ನು ಶುಕ್ರವಾರ ದೇವಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ಶ್ರೀ ಗಣಪತಿ ಮತ್ತು ಗೋಪಾಲಕೃಷ್ಣ ದೇವರಿಗೆ ಹೋಮ ಸಹಿತ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ದೇವಾಲಯದ ಪ್ರಧಾನ ಅರ್ಚಕರಾದ ನರಸಿಂಹ ಉಪಾಧ್ಯಾಯ ಅವರೊಂದಿಗೆ ಪ್ರಸನ್ನ ಭಟ್ ಹಾಗೂ ಸಂತೋಷ್ ಹೆಬ್ಬಾರ್ ಅವರು ವಿಶೇಷ ಪೂಜೆ, ಬೆಣ್ಣೆ ಅಲಂಕಾರ, ಗಣಪತಿ ಹೋಮ, ಶ್ರೀಕೃಷ್ಣ ಮಂತ್ರ ಹೋಮ ನೆರವೇರಿಸಿದರು. ಬಳಿಕ ಹಾಲಿನ ಅಭಿಷೇಕ ಹಾಗೂ ಹೂವಿನ ಅಲಂಕಾರದೊಂದಿಗೆ ಮಹಾಪೂಜೆ ನೆರವೇರಿಸಲಾಯಿತು. ಕೃಷ್ಣಾಷ್ಟಮಿ ಅಂಗವಾಗಿ 5 ವರ್ಷದೊಳಗಿನ ಹಾಗೂ 5 ವರ್ಷ ಮೇಲ್ಪಟ್ಟ ಮಕ್ಕಳಿಗೆ ಶ್ರೀಕೃಷ್ಣ ಮತ್ತು ರಾಧಾ ಛದ್ಮವೇಷ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. 5 ವರ್ಷದೊಳಗಿನ ಮಕ್ಕಳ ವಿಭಾಗದಲ್ಲಿ ನಿಧಿ ಸಂದೀಪ್, ಈತಿಕ್ಷ ಹಾಗೂ…

Read More

ಸೋಮವಾರಪೇಟೆ  NEWS DESK ಸೆ.4 : ಈ ವರ್ಷ ಮಳೆಯ ಪ್ರಮಾಣದಲ್ಲಿ ಏರುಪೇರಾಗಿರುವ ಪರಿಣಾಮ ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಕಾಫಿ ಕಾಯಿಗಳಲ್ಲಿ ಕಪ್ಪು ಕೊಳೆ (ಬ್ಲ್ಯಾಕ್ ರಾಟ್) ರೋಗ ಕಾಣಿಸಿಕೊಂಡು ಉದುರುವಿಕೆ ಹೆಚ್ಚಾಗಿದೆ. ಕೂಡಲೇ ಕ್ರಮ ಕೈಗೊಂಡು ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಸೋಮವಾರಪೇಟೆ ತಾಲೂಕು ಕಾಫಿ ಬೆಳೆಗಾರರ ಸಂಘ ಸರ್ಕಾರವನ್ನು ಪತ್ರಿಕಾ ಪ್ರಕಟಣೆಯ ಮೂಲಕ ಒತ್ತಾಯಿಸಿದೆ. ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ, ಕಾಫಿ ಗಿಡಗಳಲ್ಲಿ ಹೂ ಅರಳುವಿಕೆ ವಿಳಂಬವಾಗಿದೆ. ಬಳಿಕ ಆಗಾಗ್ಗೆ ಸಣ್ಣ ಪ್ರಮಾಣದ ಮಳೆಯಾದ ಕಾರಣ ಹಲವು ಹಂತಗಳಲ್ಲಿ ಕಾಫಿ ಗಿಡಗಳು ಹೂ ಬಿಟ್ಟಿವೆ. ಇದರಿಂದ ಕಾಫಿ ಕಾಯಿಗಳ ಬೆಳವಣಿಗೆಯ ಮೇಲೂ ಪರಿಣಾಮ ಬೀರಿದೆ ಎಂದು ಸಂಘದ ಅಧ್ಯಕ್ಷ ಬಿ.ಎಂ. ಸರ್ಕಾರಕ್ಕೆ ಮನವಿ ಪತ್ರದ ಮೂಲಕ ಸರ್ಕಾರಕ್ಕೆ ತಿಳಿಸಿದ್ದಾರೆ. ಜುಲೈ ತಿಂಗಳ ಕೊನೆಯ ವಾರದಿಂದ ಆರಂಭವಾದ ಹೆಚ್ಚಿನ ಮಳೆಯ ಪರಿಣಾಮ ಕಾಫಿ ತೋಟಗಳಲ್ಲಿ ತೇವಾಂಶ ಹೆಚ್ಚಾಗಿ, ಕಾಫಿ ಕಾಯಿಗಳಲ್ಲಿ ಬ್ಲ್ಯಾಕ್ ರಾಟ್ ರೋಗ ಕಾಣಿಸಿಕೊಂಡಿದೆ.…

Read More

ಮಡಿಕೇರಿ NEWS DESK ಸೆ.4 : ಶ್ರೀಕೃಷ್ಣನನ್ನು ಶ್ರದ್ಧಾಭಕ್ತಿಯಿಂದ ಪೂಜಿಸುವುದರ ಜೊತೆಗೆ ಜ್ಞಾನ, ಸತ್ಯ ಹಾಗೂ ಪ್ರೀತಿಯ ಸಂಕೇತದಿಂದ ನೋಡುತ್ತೇವೆ. ಆ ನಿಟ್ಟಿನಲ್ಲಿ ಶ್ರೀಕೃಷ್ಣನ ಆದರ್ಶವನ್ನು ತಿಳಿದುಕೊಳ್ಳುವಂತಾಗಬೇಕು ಎಂದು ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯ ಸಮಿತಿ ಗೌರವಾಧ್ಯಕ್ಷ ಜಿ.ವಿ.ರವಿಕುಮಾರ್ ಅವರು ತಿಳಿಸಿದರು.  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಶುಕ್ರವಾರ ನಡೆದ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.  ಶ್ರಾವಣ ಮಾಸದಲ್ಲಿ  ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಅತ್ಯಂತ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತಿದೆ ಎಂದರು. ಶ್ರೀಕೃಷ್ಣನಿಗೆ ಪುಷ್ಪಾಲಂಕಾರ,  ಪುಷ್ಪಾರ್ಚನೆ     ಹಾಗೂ ವಿಶೇಷ ಪೂಜೆಗಳನ್ನು ಮಾಡುವುದರ ಹಿಂದಿನ ಉದ್ದೇಶ ಕೇವಲ ಆಚರಣೆಗೆ ಸೀಮಿತವಾಗಬಾರದು. ಅವರ ಆದರ್ಶ ಗುಣಗಳು, ಶಿಸ್ತು, ಪ್ರೀತಿ, ಒಗ್ಗಟ್ಟು ಮತ್ತು ಸಹಬಾಳ್ವೆಯ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕೃಷ್ಣನ ಸಂದೇಶಗಳು ಇನ್ನಷ್ಟು ಪ್ರಸ್ತುತವಾಗಿವೆ. ಆಡಂಬರದ ಆಚರಣೆಗಿಂತ ಕೃಷ್ಣನ ಜೀವನ ಮೌಲ್ಯಗಳನ್ನು ಪಾಲಿಸುವುದು ಮುಖ್ಯ ಎಂದು ಹೇಳಿದರು. ಮಹಾಭಾರತ ಯುದ್ಧದ ಸಂದರ್ಭದಲ್ಲಿ ಅರ್ಜುನನಿಗೆ ಶ್ರೀಕೃಷ್ಣ ನೀಡಿದ ಭಗವದ್ಗೀತೆಯ ಉಪದೇಶ ಇಂದಿಗೂ ಮಾನವಕುಲಕ್ಕೆ ದಾರಿದೀಪವಾಗಿದೆ. ಮಾನವನ ಬದುಕು,…

Read More

ಮಡಿಕೇರಿ NEWS DESK ಸೆ.4 : 2026-27ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮಡಿಕೇರಿ ತಾಲ್ಲೂಕಿಗೆ ಸಂಬಂಧಿಸಿದಂತೆ ಕೆ.ಬಾಡಗ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸರಸ್ವತಿ ಬಿ.ಕೆ, ಅಯ್ಯಂಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಚ್.ಎಸ್.ಶಾಂತಿ ಮತ್ತು ಮೂರ್ನಾಡು ಪ್ರೌಢ ಶಾಲೆಯ ಪ್ರಶಾಂತ್ ಎಸ್.ಡಿ. ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.  ಸೋಮವಾರಪೇಟೆ ತಾಲ್ಲೂಕಿಗೆ ಸಂಬಂಧಿಸಿದಂತೆ ಕಲ್ಕಂದೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಉಮೇಶ್ ಕುಮಾರ್ ಕೆ.ಪಿ., ನೆಲ್ಲಿಹುದಿಕೇರಿ ಕೆಪಿಎಸ್ ಪ್ರಾಥಮಿಕ ಶಾಲೆಯ ರೆಮ್ಮಿ ಪಿ.ಸಿ., ನೇರುಗಳಲೆ ಸರ್ಕಾರಿ ಪ್ರೌಢಶಾಲೆಯ ರತ್ನ ಕುಮಾರ್ ಕೆ.ಆರ್. ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಹಾಗೆಯೇ ವಿರಾಜಪೇಟೆ ತಾಲ್ಲೂಕಿಗೆ ಸಂಬಂಧಿಸಿದಂತೆ ಬಾಳುಗೋಡು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೇರಿ ಲೋಬೋ, ಕುಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಲಿಮ ಪಿ.ಹೆಚ್. ಹಾಗೂ ಪೊನ್ನಂಪೇಟೆ ಕೆಪಿಎಸ್ ಪ್ರೌಢಶಾಲೆಯ ಅನ್ರಿತಾ ಫುಟಾರ್ಡೊ ಅವರು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ…

Read More

ಸೋಮವಾರಪೇಟೆ NEWS DESK ಸೆ.4 : ಕಸ್ತೂರಿ ರಂಗನ್ ವರದಿ ಅನುಷ್ಠಾನ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಹೊರಡಿಸಿರುವ 7ನೇ ಕರಡು ಅಧಿಸೂಚನೆಯನ್ನು ವಿರೋಧಿಸಿ ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ರೈತ ಹೋರಾಟ ಸಮಿತಿ ಅಧ್ಯಕ್ಷ ಸುರೇಶ್ ಚಕ್ರವರ್ತಿ ತಿಳಿಸಿದ್ದಾರೆ. ಕೊಡಗಿನ ರೈತರು ಹಾಗು ವಿವಿಧ ಸಂಘಸoಸ್ಥೆಗಳ ಸಹಕಾರದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಅಂದು ಬೆಳಿಗ್ಗೆ 10.30 ಗಂಟೆಗೆ ಸುದರ್ಶನ ಸರ್ಕಲ್‌ನಲ್ಲಿ ರೈತರು ಸಮಾವೇಶಗೊಂಡು ನಂತರ ಮೆರವಣಿಗೆಯಲ್ಲಿ ಗಾಂಧಿ ಮೈದಾನಕ್ಕೆ ತೆರಳಿ, ಧರಣಿ ನಡೆಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಕಸ್ತೂರಿ ರಂಗನ್ ವರದಿ ಅನುಷ್ಠಾನಗೊಂಡರೆ, ಕೊಡಗಿನ 55 ಗ್ರಾಮಗಳ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ. ಮೂಲ ನಿವಾಸಿಗಳ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಸೂಕ್ಷö್ಮ ಪರಿಸರ ವಲಯದ ವ್ಯಾಪ್ತಿ 10 ರಿಂದ 15 ಕಿ.ಮೀ ಇರಲಿದೆ. ಜಿಲ್ಲೆಯಲ್ಲಿರುವ ಮೀಸಲೂ ಅರಣ್ಯ ಪ್ರದೇಶದಿಂದ 15 ಕಿ.ಮೀ ವ್ಯಾಪ್ತಿಯಾದರೆ, ಬಹುತೇಕ ಗ್ರಾಮಗಳು ಸೂಕ್ಷ್ಮ ಪರಿಸರ ವಲಯಕ್ಕೆ ಸೇರಲಿದೆ. ನಂತರ ರೈತರು ಬದುಕುವ ಹಕ್ಕನ್ನೇ ಕಳೆದುಕೊಳ್ಳಬೇಕಾಗುತ್ತದೆ ಎಂದು…

Read More

ಚೆಟ್ಟಳ್ಳಿ NEWS DESK ಸೆ.3 : ಕೊಡವ ಸಂಪ್ರದಾಯ, ಕುಟುಂಬದ ಒಗ್ಗಟ್ಟು ಹಾಗೂ ಶೌರ್ಯದ ಪ್ರತೀಕವಾಗಿರುವ ಕೈಲ್ ಪೊಳ್ದ್ ಹಬ್ಬವನ್ನು ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಸಂಪ್ರದಾಯಬದ್ಧವಾಗಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಬೆಳಿಗ್ಗೆ ಕುಟುಂಬಸ್ಥರು ಐನ್ ಮನೆಯಲ್ಲಿ ಸೇರಿ ಹಿರಿಯರ ಆಶೀರ್ವಾದ ಪಡೆದರು. ಬಳಿಕ ಹಿರಿಯರಾದ ಪುತ್ತರಿರ ಗಣೇಶ್ ಭೀಮಯ್ಯ ಅವರು ನೆಲ್ಲಕ್ಕಿ ನಡುಬಾಡೆಯಲ್ಲಿ ಕೋವಿ ಹಾಗೂ ಕತ್ತಿಯನ್ನು ಇಟ್ಟು, ಗುರುಕಾರೋಣನಿಗೆ ಮೀದಿ ನೀರಿಟ್ಟು ವಿಶೇಷ ಪೂಜೆ ಸಲ್ಲಿಸಿದರು. ಕುಲದೇವರಾದ ಇಗ್ಗುತಪ್ಪ, ಕಾವೇರಮ್ಮ ಹಾಗೂ ಕುಟುಂಬದ ಗುರುಕಾರೋಣರು ಕುಟುಂಬದ ಎಲ್ಲರಿಗೂ ಒಳಿತನ್ನು ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು. ನಂತರ ಅಡುಗೆಕೋಣೆಯಲ್ಲಿ ಮಹಿಳೆಯರು ಗುರುಕಾರೋಣನಿಗೆ ಮೀದಿ ನೀರಿಟ್ಟು ಪೂಜೆ ಸಲ್ಲಿಸಿದರು. ಹಿರಿಯರಾದ ಪುತ್ತರಿರ ಕಾಶಿ ಸುಬ್ಬಯ್ಯ ಅವರು ಕುಟುಂಬದ ಸದಸ್ಯರಿಗೆ ಆರೋಗ್ಯ, ಐಶ್ವರ್ಯ ಹಾಗೂ ನೆಮ್ಮದಿ ದೊರೆಯಲಿ ಎಂದು ಪ್ರಾರ್ಥಿಸಿದರು. ಕೈಲ್ ಪೊಳ್ದ್ ಹಬ್ಬದ ವಿಶೇಷತೆಯಂತೆ ಸಾಂಪ್ರದಾಯಿಕ ಭೋಜನವನ್ನು ಕುಟುಂಬಸ್ಥರು ಸವಿದರು. ಬಳಿಕ ಹಿರಿಯರು, ಕಿರಿಯರು ಹಾಗೂ ಮಕ್ಕಳು ತೆಂಗಿನಕಾಯಿಗೆ ಗುಂಡು ಹೊಡೆಯುವ ಮೂಲಕ ಕೊಡವ ಸಂಸ್ಕೃತಿಯಲ್ಲಿನ ಶೌರ್ಯ…

Read More

ಮಡಿಕೇರಿ, NEWS DESK ಸೆ. 3: ವಲಯ ಮಟ್ಟದ ಕ್ರೀಡಾಕೂಟಗಳಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಆ.27ರಂದು ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಯ ವತಿಯಿಂದ 14 ವರ್ಷದೊಳಗಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ವಲಯ ಮಟ್ಟದ ಕ್ರೀಡಾಕೂಟ ನಡೆಯಿತು. ಒಟ್ಟು ಒಂಬತ್ತು ಶಾಲೆಗಳ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲೆಯ ಉಪಾಧ್ಯಕ್ಷ ಡಿ.ಎಸ್. ವಿಶ್ವನಾಥ್, ಕಾರ್ಯದರ್ಶಿ ದಿವಾಕರ್ ಎಚ್.ಎಂ., ಕೊಡ್ಲಿಪೇಟೆ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ರವೀಶ್, ಬೆಸೂರು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಮುರಳೀಧರ್, ಮುಖ್ಯ ಶಿಕ್ಷಕ ಅಭಿಲಾಷ್ ಎಚ್.ಎಂ., ದೈಹಿಕ ಶಿಕ್ಷಕ ಪುನೀತ್ ಸೇರಿದಂತೆ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಕ್ರೀಡಾ ಕಾರ್ಯದರ್ಶಿಗಳು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿ ಸಂಘದ ಕ್ರೀಡಾ ಸಚಿವ ಮಿಥುನ್ ಕ್ರೀಡಾ ಜ್ಯೋತಿಯನ್ನು ಓಟದ ಮೂಲಕ ತಂದು…

Read More