ಮಡಿಕೇರಿ ನ.5 NEWS DESK : ಕೊಡಗು ಜಿಲ್ಲೆಯ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಲಾಪ್ರತಿಭೋತ್ಸವದಂತಹ ಕಾರ್ಯಕ್ರಮಗಳು ಸಹಕಾರಿಯಾಗಿದ್ದು, ಜಿಲ್ಲೆಯ ಪ್ರತಿಭಾವಂತ ಕಲಾವಿದರೂ ಸೇರಿದಂತೆ ಕಲಾಪ್ರದರ್ಶನಗಳಿಗೆ ಸೂಕ್ತ ಕಲಾಭವನದ ಕನಸು ಶೀಘ್ರ ಸಾಕಾರಗೊಳ್ಳಬೇಕು ಎಂದು ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಹೆಚ್.ಟಿ. ಅವರು ಕರೆ ನೀಡಿದ್ದಾರೆ. ನಗರದ ಗಾಂಧಿ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿತ ಕಲಾಪ್ರತಿಭೋತ್ಸವದ ಎರಡನೇ ದಿನದ ಸ್ಪರ್ಧೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೊಡಗಿನಲ್ಲಿ ವರ್ಷದ 5-6 ತಿಂಗಳು ಧಾರಾಕಾರ ಮಳೆಯಿಂದಾಗಿ ಯಾವುದೇ ಸಾಂಸ್ಕೃತಿಕ ಚಟುವಟಿಕೆ ಕೈಗೊಳ್ಳಲು ಕಷ್ಟಸಾಧ್ಯವಾಗಿತ್ತು, ಹೀಗಿದ್ದರೂ ಜಿಲ್ಲೆಯಲ್ಲಿನ ಅನೇಕ ಉದಯೋನ್ಮುಖ ಕಲಾಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 8 ವರ್ಷಗಳ ಬಳಿಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕಲಾಪ್ರತಿಭೋತ್ಸವದಂತಹ ಕಾರ್ಯಕ್ರಮ ಮರು ಚಾಲನೆಗೊಂಡಿರುವುದು ಶ್ಲಾಘನೀಯ ಎಂದರು. ನೈಜ ಪ್ರತಿಭೆಗಳಿಗೆ ಕೊಡಗು ಎಂದೂ ನಿರಾಶೆ ಉಂಟು ಮಾಡುವುದಿಲ್ಲ. ಕಲಾಸಕ್ತ ಯುವಪೀಳಿಗೆ ಕಲಾಪ್ರತಿಭೋತ್ಸವದಂತಹ ಮತ್ತಷ್ಟು ಕಾರ್ಯಕ್ರಮಗಳನ್ನು ಸದುಪಯೋಗಪಡಿಸಿಕೊಂಡು ತಮ್ಮೊಳಗಿನ ಕಲಾ ಪ್ರತಿಭೆಗೆ…
ಲೇಖಕ: admin
ಮಡಿಕೇರಿ ನ.5 NEWS DESK : ಮಡಿಕೇರಿ ನಗರದ ಎಎಲ್ಜಿ ಕ್ರೆಸೆಂಟ್ ಶಾಲೆಯಲ್ಲಿ ಪುಟಾಣಿ ‘ಮಾಸ್ಟರ್ ಶೆಫ್’ಗಳಿಂದ ರುಚಿಕರ ತಿಂಡಿಗಳು ಘಮಘಮಿಸಿತು. ಪೋಷಕರ ಮಮತೆ ಹಾಗೂ ಪ್ರೋತ್ಸಾಹದ ನಡುವೆ ಶಾಲಾ ಆವರಣದಲ್ಲಿ ನಡೆದ ಆಹಾರ ಉತ್ಸವವು ಗಮನ ಸೆಳೆಯಿತು. ಪುಟ್ಟ ತಾರೆಯರು ತೋರಿಸಿದ ಸೃಜನಶೀಲತೆ, ತಂಡದ ಮನೋಭಾವ ಮತ್ತು ಆಹಾರ ಪ್ರದರ್ಶನದ ನವೀನ ವಿಧಾನಗಳು ನೋಡುಗರ ಮನ ಗೆದ್ದವು. ಕಾರ್ಯಕ್ರಮವನ್ನು ಶಾಲೆಯ ಪ್ರಾಂಶುಪಾಲರಾದ ಜಾಯಿಸಿ ವಿನಯ್ ಅವರು ಉದ್ಘಾಟಿಸಿ ಮಾತನಾಡಿ, ಎಎಲ್ಜಿ ಕ್ರೆಸೆಂಟ್ ಶಾಲೆ ಕೇವಲ ಪಾಠಪುಸ್ತಕಗಳ ಪಾಠವನ್ನಷ್ಟೇ ಅಲ್ಲ, ಬದಲಾಗಿ ಪಠ್ಯೇತರ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಆತ್ಮವಿಶ್ವಾಸ ಮತ್ತು ಜೀವನ ಕೌಶಲ್ಯಗಳನ್ನು ಬೆಳೆಸುವಲ್ಲಿ ಮುಂದಾಗಿದೆ. ಪುಟಾಣಿಗಳ ಹಾಗೂ ಪೋಷಕರ ಯಶಸ್ವಿ ಪ್ರಯತ್ನಕ್ಕೆ ಅಭಿನಂದನೆ ಸಲ್ಲಿಸಿದರು. ಶಿಕ್ಷಕರ ಅವಿರತ ಶ್ರಮಕ್ಕೂ ಮೆಚ್ಚುಗೆ ವ್ಯಕ್ತಪಡಿಸಿದರು.
ಮಡಿಕೇರಿ ನ.5 NEWS DESK : ಕನ್ನಡ ಭವನ ಕೊಡಗು ಜಿಲ್ಲಾ ಘಟಕದ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನ.9ರಂದು ಲೇಖಕಿ ರುಬೀನಾ ಎಂ.ಎ ಅವರ ಚೊಚ್ಚಲ ಕೃತಿ “ಕಣ್ಣಾ ಮುಚ್ಚಾಲೆ” ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ನಗರದ ಪತ್ರಿಕಾ ಭವನದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟಿಸಲಿದ್ದು, ಕೊಡಗು ಕನ್ನಡ ಭವನದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷ ಬಿ.ಜಿ.ಅನಂತಶಯನ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷೆ ಬಿ.ಆರ್.ಸವಿತಾ ರೈ, ಕನ್ನಡ ಭವನ ಕೇಂದ್ರ ಸಮಿತಿ ಸ್ಥಾಪಕ ಸಂಚಾಲಕ ಡಾ.ವಾಮನ್ ರಾವ್ ಬೇಕಲ್, ಹಿರಿಯ ಸಾಹಿತಿ ಭಾರದ್ವಾಜ್ ಕೆ.ಆನಂದ ತೀರ್ಥ, ಕಣ್ಣಾ ಮುಚ್ಚಾಲೆ ಪುಸ್ತಕದ ಬರಹಗಾರ್ತಿ ಎಂ.ಎ.ರುಬೀನಾ ಹಾಗೂ ಮರ್ಕರ ಪೋಸ್ಟ್ ಪತ್ರಿಕೆ ಸಂಪಾದಕ ಜೈರೋಸ್ ಥೋಮಸ್ ಅಲೆಕ್ಸಾಂಡರ್ ಪಾಲ್ಗೊಳ್ಳಲಿದ್ದಾರೆ ಎಂದು ಕೊಡಗು ಕನ್ನಡ ಭವನದ ಪ್ರಧಾನ…
ಮಡಿಕೇರಿ ನ.5 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ 6 ಬ್ಲಾಕ್ ಗಳಿಗೆ ನೂತನ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ತಿಳಿಸಿದ್ದಾರೆ. ಮಡಿಕೇರಿ ಬ್ಲಾಕ್ ಅಧ್ಯಕ್ಷರಾಗಿ ವಿ.ಜಿ.ಮೋಹನ್, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷರಾಗಿ ವಿ.ಎ.ಲಾರೆನ್ಸ್, ಕುಶಾಲನಗರ ಬ್ಲಾಕ್ ಅಧ್ಯಕ್ಷರಾಗಿ ಎ.ಕೆ.ಹಕೀಂ, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರಾಗಿ ಆಪಟ್ಟೀರ ಟಾಟು ಮೊಣ್ಣಪ್ಪ, ವಿರಾಜಪೇಟೆ ಬ್ಲಾಕ್ ಅಧ್ಯಕ್ಷರಾಗಿ ಮತೀನ್ ಹಾಗೂ ನಾಪೋಕ್ಲು ಬ್ಲಾಕ್ ಅಧ್ಯಕ್ಷರಾಗಿ ಪೆರುಮುಂಡ ಮನು ಅವರನ್ನು ನೇಮಕ ಮಾಡಲಾಗಿದೆ. ಜಿಲ್ಲೆಯ ಶಾಸಕರುಗಳಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರುಗಳ ಶಿಫಾರಸ್ಸಿನಂತೆ ಮಾಜಿ ಸಚಿವ ಮತ್ತು ಕಾಂಗ್ರೆಸ್ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ಸೊರಕೆ ಅವರು ಇವರುಗಳನ್ನು ನೇಮಕ ಮಾಡಿ ಆದೇಶ ಪತ್ರ ನೀಡಿದ್ದಾರೆ. 6 ಬ್ಲಾಕ್ ಅಧ್ಯಕ್ಷರೊಂದಿಗೆ ತಲಾ 22 ಪದಾಧಿಕಾರಿ ಹಾಗೂ ಸದಸ್ಯರನ್ನು ಕೂಡ ನೇಮಕ ಮಾಡಿ ಅನುಮೋದನೆಗಾಗಿ ಕೆಪಿಸಿಸಿ ಪ್ರಚಾರ ಸಮಿತಿಗೆ…
ಸೋಮವಾರಪೇಟೆ ನ.5 NEWS DESK : ಶ್ರೀ ಹೊನ್ನಮ್ಮ ವಿಶೇಷ ಚೇತನ ಸ್ವಸಹಾಯ ಸಂಘದ ವತಿಯಿಂದ ‘ಸಾಮರ್ಥ್ಯ ಬಲವರ್ಧನ ತರಬೇತಿ’ ಶಿಬಿರ ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಎಂ.ಗೋಪಾಲಕೃಷ್ಣ ಉದ್ಘಾಟಿಸಿದರು. ಉಪಾಧ್ಯಕ್ಷೆ ರಸೀದಾ, ಪಿಡಿಒ ಮೋಹನ್, ಹೆಚ್.ಆರ್.ಮೋಹನ್, ವಿವೇಕಾನಂದ ಯೂತ್ ಮೂವ್ಮೆಂಟ್ ಸಂಸ್ಥೆಯ ಸುನೀತಾ ತರಬೇತಿ ನೀಡಿದರು. ಸಂಘವನ್ನು ಮುನ್ನೆಡೆಸುವ ಬಗ್ಗೆ, ಸಂಘದ ಪುಸ್ತಕ ಬರೆಯುವುದು ಅಂತರೀಕ ಸಾಲ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು. ಸಂಘದ ಪ್ರತಿನಿಧಿ ನಾರಾಯಣ, ಮಧುಸೂದನ್ ಇದ್ದರು. 25 ಮಂದಿ ತರಬೇತಿ ಪಡೆದುಕೊಂಡರು.
ಮಡಿಕೇರಿ ನ.5 NEWS DESK : ಮಡಿಕೇರಿಯ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜ್ ನಲ್ಲಿ ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ರೋಟರಾಕ್ಟ್ ಕ್ಲಬ್ ನ್ನು ಸ್ಥಾಪಿಸಲಾಯಿತು. ರೋಟರಿ ವುಡ್ಸ್ ಅಧ್ಯಕ್ಷ ಕಿರಣ್ ಕುಂದರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಪದಗ್ರಹಣ ಅಧಿಕಾರಿ ರೋಟರಿ ಕುಶಾಲನಗರ ಕ್ಲಬ್ ನ ಸುನಿತಾ ಮಹೇಶ್ ನೂತನವಾಗಿ ಅಸ್ತಿತ್ವಕ್ಕೆ ಬಂದ ರೋಟರ್ಯಾಕ್ಟ್ ಕ್ಲಬ್ ನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಶಾಲಾ ದಿನಗಳಿಂದಲೇ ಸೇವಾ ಮನೋಭಾವ ಬೆಳೆಸಿಕೊಳ್ಳುವಂತೆ ಕರೆ ನೀಡಿದರು. ಓದಿನ ಜೊತೆಗೆ ರೋಟರಿ ಬಗ್ಗೆ ಹೆಚ್ಚಿನ ವಿಚಾರಗಳನ್ನು ಅರಿತುಕೊಂಡು ಜನ ಸಾಮಾನ್ಯರ ಕಷ್ಟಗಳನ್ನು ಅರಿತು ಅಗತ್ಯಕ್ಕೆ ಅನುಗುಣವಾಗಿ ಅವರಿಗೆ ನೆರವು ನೀಡುವ ಪ್ರಯತ್ನ ಮಾಡಬೇಕು ಎಂದು ಅವರು ಹೇಳಿದರು. ಕೇವಲ ಒಬ್ಬನಿಂದ ಆಗದ ಕೆಲಸವನ್ನು ಹಲವು ಕೈಗಳನ್ನು ಸೇರಿಸಿಕೊಂಡು ಜನರ ನೋವಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ನಿಮ್ಮದಾಗಿರಲಿ ಎಂದು ಸುನೀತಾ ಹೇಳಿದರು. ಕಾಲೇಜು ಪ್ರಾಂಶುಪಾಲೆ ನಿರ್ಮಲಾ ಮಾತನಾಡಿ , ರೋಟರಿ ವುಡ್ಸ್ ನ ಪ್ರತಿಯೊಂದು ಚಟುವಟಿಕೆಗಳ ಬಗ್ಗೆ…
ಕಾರ್ಕಳ ನ.5 NEWS DESK : ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಫೂರ್ತಿ ಮಾತು ಸರಣಿ ಕಾರ್ಯಕ್ರಮ – 12ನ್ನು 3 ನವೆಂಬರ್ 2025 ರಂದು ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಖ್ಯಾತ ವಾಗ್ಮಿಗಳಾದ ಎನ್.ಆರ್. ದಾಮೋದರ ಶರ್ಮ ರವರು ‘ಬೆಳಕಾಗಲಿ ಬಾಳು’ ಶೀರ್ಷಿಕೆಯಡಿಯಲ್ಲಿ ಪ್ರೇರಣೆಯ ಮಾತುಗಳನ್ನಾಡುತ್ತಾ, “ಜೀವನವನ್ನು ಬೆಳಗಿಸಬೇಕೆಂದರೆ ಆತ್ಮವಿಶ್ವಾಸ ಮತ್ತು ದೃಢ ನಿಶ್ಚಯ ಮುಖ್ಯ. ಪ್ರತಿದಿನ ಹೊಸದಾಗಿ ಕಲಿಯುವ ಮನಸ್ಸು ಬೆಳೆಸಿಕೊಳ್ಳಿ. ಜೀವನದಲ್ಲಿ ಸಣ್ಣ ಪ್ರಯತ್ನವೂ ದೊಡ್ಡ ಬದಲಾವಣೆಗೆ ಕಾರಣವಾಗಬಹುದು. ಕ್ಷಣಿಕ ಸಂತೋಷಕ್ಕೆ ಹಾತೊರೆಯುವ ಮನಸ್ಸನ್ನು ನಿಯಂತ್ರಿಸಿ, ಜೀವನವನ್ನು ಯಶಸ್ಸಿನ ದಡಕ್ಕೆ ಕರೆದೊಯ್ಯಬೇಕು. ಇತರರ ಮಾತಿಗೆ ಕಿವಿಯಾಗುವ ಮೊದಲು ಆತ್ಮದ ಮಾತನ್ನು ಆಲಿಸೋಣ. ತಾಯಿಯ ತ್ಯಾಗಕ್ಕೆ ಸಮನಾದ ತ್ಯಾಗ, ಪ್ರೀತಿ ಬೇರೊಂದಿಲ್ಲ. ತಂದೆಯ ಪರಿಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನಮ್ಮ ಭಾರತದ ಜ್ಞಾನ ಪರಂಪರೆ ನಮಗೆ ಹೇಳಿರುವ ಉಪದೇಶಗಳನ್ನು ಅರಿತುಕೊಳ್ಳೋಣ. ಮಾತೃಭೂಮಿಯ ಬಗೆಗಿನ ಪ್ರೀತಿ ಗೌರವ ನಮ್ಮ ವ್ಯಕ್ತಿತ್ವವನ್ನು ನಿರ್ಮಾಣ ಮಾಡುತ್ತವೆ ” ಎಂದು ಹೇಳಿದರು. ಕಾರ್ಯಕ್ರಮದಲ್ಲಿ…
ಪುತ್ತೂರು ನ.5 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಥಮ ವರ್ಷದ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿ ನಿಕ್ಷೇಪ್ ಕೃಷ್ಣ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಅಂತರ್ ಕಾಲೇಜು ಕರಾಟೆ ಸ್ಪರ್ಧೆಯಲ್ಲ್ಲಿ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಬೆಂಗಳೂರಿನ ಆರ್.ವಿ.ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಡ್ ಮೆನೇಜ್ಮೆಂಟ್ ಇದರ ಆಶ್ರಯದಲ್ಲಿ ನಡೆದ ಈ ಸ್ಪರ್ಧಾ ಕೂಟದಲ್ಲಿ 75 ಕೆಜಿ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದ ಇವರು ಚಿನ್ನದ ಪದಕದ ಸಾಧನೆಯನ್ನು ಮಾಡಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರು ಮಾರ್ಗದರ್ಶನದಲ್ಲಿ ಮಾಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.
ವಿರಾಜಪೇಟೆ ನ.5 NEWS DESK : ಕರ್ನಾಟಕ ಏಕೀಕರಣ ಚಳವಳಿ ಕನ್ನಡ ಭಾಷೆಯನ್ನು ಮಾತನಾಡುವ ಪ್ರದೇಶಗಳನ್ನು ಒಂದೇ ರಾಜ್ಯವನ್ನಾಗಿ ಒಗ್ಗೂಡಿಸಲು ನಡೆದ ಚಳವಳಿಯಾಗಿದೆ. ವಿದ್ಯಾರ್ಥಿಗಳಾದ ನೀವು ಕನ್ನಡ ಭಾಷೆ, ನೆಲ ಜಲದ ಬಗ್ಗೆ ಅಭಿಮಾನ ಹೊಂದಿರಬೇಕು ಎಂದು ನಿವೃತ್ತ ಶಿಕ್ಷಕರಾದ ಹೆಚ್.ಜಿ. ಸಾವಿತ್ರಿ ಹೇಳಿದರು. ಬಾಳುಗೋಡುವಿನ ಏಕಲವ್ಯ ಮಾದರಿ ವಸತಿ ಶಾಲೆಯ ಪ್ರಾರ್ಥನಾ ಮಂದಿರದಲ್ಲಿ ನಡೆದ 70ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ನಡೆದ ನುಡಿ ಮೃದಂಗ ಸಮಾರಂಭದಲ್ಲಿ ಭುವನೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡಿ, ಜ್ಯೋತಿ ಬೆಳಗಿಸುವ ಮೂಲಕ ಕನ್ನಡ ರಾಜ್ಯೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ, ಕನ್ನಡವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರದ್ದು, ಪ್ರತಿಯೊಂದು ರಾಜ್ಯಕ್ಕೂ ಅದರದ್ದೆ ಆದ ವೈಶಿಷ್ಟ್ಯಪೂರ್ಣ ಭಾಷೆ, ಸಂಸ್ಕೃತಿ ಮತ್ತು ಪರಂಪರೆ ಇದ್ದೆ ಇರುತ್ತದೆ. ಕರ್ನಾಟಕಕ್ಕೂ ಅಂತಹ ಸುವರ್ಣ ಐತಿಹ್ಯ, ಸಂಸ್ಕೃತಿಯ ಸೊಗಡಿದೆ. ಕನ್ನಡ ರಾಜ್ಯೋತ್ಸವವನ್ನು ನಮ್ಮ ರಾಜ್ಯದ ಐಕ್ಯತೆಯ, ಭಾಷಾ ಹೆಮ್ಮೆ ಮತ್ತು ಸಂಸ್ಕೃತಿಯ ಸ್ಮರಣೆಗಾಗಿ ಪ್ರತಿವರ್ಷ ನ.1 ರಂದು ಆಚರಿಸಲಾಗುತ್ತದೆ. ಈ ದಿನವು ಪ್ರತಿಯೊಬ್ಬ…
ವಿರಾಜಪೇಟೆ ನ.5 NEWS DESK : ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಮಂಡೇಪಂಡ ಸುಜಾ ಕುಶಾಲಪ್ಪ ಹೇಳಿದರು. ವಿರಾಜಪೇಟೆಯ ಕರ್ನಾಟಕ ಸಂಘದ ವತಿಯಿಂದ ಮಹಿಳಾ ಸಮಾಜ ಸಭಾಂಗಣದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಸೋಮವಾರ ನಡೆದ ರಾಜ್ಯೋತ್ಸವ ಆಚರಣೆ ಹಾಗೂ ವಿವಿಧ ತಾಲೂಕು ಮಟ್ಟದ ಸ್ವರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ಮಂಡೇಪಂಡ ಸುಜಾ ಕುಶಾಲಪ್ಪ ಅವರು, ನಾವು ಕನ್ನಡ ಬಳಕೆ ಮಾಡುವ ಮೂಲಕ ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ವಿಸ್ತರಿಸಬೇಕು. ಕನ್ನಡ ನುಡಿ, ಸಂಸ್ಕೃತಿ, ಪರಂಪರೆ ಉಳಿಸಲು ಸದಾ ಕಟಿಬದ್ಧರಾಗಿರುತ್ತೇವೆ ಎಂದು ನಿಶ್ಚಯಿಸಬೇಕು ಎಂದರಲ್ಲದೆ ಗಡಿ ಭಾಗವಾದ ವಿರಾಜಪೇಟೆ ವ್ಯಾಪ್ತಿಯಲ್ಲಿ ಕನ್ನಡ ನಾಡು ನುಡಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕನ್ನಡದ ನಾಮಫಲಕ ಕಡ್ಡಾಯವಾಗಿ ಎಲ್ಲ ಅಂಗಡಿಗಳಲ್ಲಿ ಅಳವಡಿಸಲು ಕ್ರಮ ತೆಗೆದುಕೊಳ್ಳಬೇಕು ಎಂದರು.…






