ಮಡಿಕೇರಿ NEWS DESK ಸೆ.26 : ರಾಜ್ಯ ಸರಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮತ್ತು ಜಾತಿಜನಗಣತಿಯ ಸಂದರ್ಭ ಕೊಡಗು ಜಿಲ್ಲೆಯಲ್ಲಿ ವಾಸವಿರುವ ಬಲಿಜ ಸಮಾಜದ ಸರ್ವ ಬಂಧುಗಳು ಜಾತಿಯ ಕಾಲಂನಲ್ಲಿ ‘ಬಲಿಜ’ ಎಂದು ನಮೂದಿಸುವಂತೆ ಶ್ರೀ ಯೋಗಿ ನಾರಾಯಣ ಕೊಡಗು ಬಲಿಜ ಸಮಾಜದ ಅಧ್ಯಕ್ಷ ಗಣೇಶ್ ನಾಯ್ಡು ಹಾಗೂ ಕಾರ್ಯದರ್ಶಿ ಸುಬ್ರಮಣಿ ಅವರು ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗಣತಿದಾರರು ಬಂದಾಗ ನಿಖರವಾದ ಮಾಹಿತಿಯನ್ನು ನೀಡಬೇಕು. ಜಾತಿಯ ಕಾಲಂನಲ್ಲಿ ‘ಬಲಿಜ’ ಎಂದು ನಮೂದಿಸುವುದರಿಂದ ಜಿಲ್ಲೆಯಲ್ಲಿರುವ ಬಲಿಜ ಸಮುದಾಯದವರ ಸಂಖ್ಯೆ ಎಷ್ಟು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯಲಿದೆ. ಅಲ್ಲದೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಸಹಕಾರಿಯಾಗುತ್ತದೆ ಎಂದು ತಿಳಿಸಿದ್ದಾರೆ. ಮುಂದೆ ನಡೆಯುವ ಕೇಂದ್ರ ಸರಕಾರದ ಜಾತಿಗಣತಿಯಲ್ಲೂ ಜಾತಿಯ ಕಾಲಂನಲ್ಲಿ ‘ಬಲಿಜ’ ಎಂದು ನಮೂದಿಸುವಂತೆ ಕೋರಿದ್ದಾರೆ.
ಲೇಖಕ: admin
ಮಡಿಕೇರಿ ಸೆ.26 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಭೈರತಿ ಸುರೇಶ್, ಹೆಚ್.ಕೆ.ಪಾಟೀಲ್, ಶಿವರಾಜ ತಂಗಡಗಿ, ಕೃಷ್ಣ ಭೈರೇಗೌಡ, ರಹೀಂ ಖಾನ್, ಮಧು ಬಂಗಾರಪ್ಪ, ಬೋಸರಾಜು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ ನಾಯ್ಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ ಸೆ.26 NEWS DESK : ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಏಕತಾ ರ‍್ಯಾಲಿಯಲ್ಲಿ ಕೊಡಗಿನ ಇಬ್ಬರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ಲಭಿಸಿದೆ. ನಿಫಾ (ನ್ಯಾಶನಲ್ ಇಂಟೆಗ್ರೇಟೆಡ್ ಫಾರಂ ಆಫ್ ಆರ್ಟಿಸ್ಟ್ಸ್ ಮತ್ತು ಆಕ್ಟಿವಿಸ್ಟ್ಸ್) ಸಿಲ್ವರ್ ಜ್ಯೂಬಿಲಿ ಅಂಗವಾಗಿ ನಿಫಾ ಮತ್ತು ವರ್ಲ್ಡ್ ರೆಕಾರ್ಡ್ಸ್ ಆಫ್ ಎಕ್ಸೆಲೆನ್ಸ್ ಇಂಗ್ಲೆಂಡ್ ಭಾರತದಾದ್ಯಂತ ಎಲ್ಲಾ ರಾಜ್ಯ ಹಾಗೂ ಜಿಲ್ಲೆಗಳಿಂದಲೂ ಆಯ್ದ ಸಮಾಜಸೇವಕರಿಗಾಗಿ ನವದೆಹಲಿಯಲ್ಲಿ ಆಯೋಜಿಸಿದ ರಾಷ್ಟ್ರೀಯ ಏಕತಾ ರ‍್ಯಾಲಿಯಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಿ ರಾಷ್ಟ್ರೀಯ ಯುವ ಸಾಮಾಜಿಕ ಕಾರ್ಯಕರ್ತ-ಯಂಗ್ ಕಮ್ಯುನಿಟಿ ಚಾಂಪಿಯನ್ ಪುರುಷ ವಿಭಾಗದಲ್ಲಿ ಪ್ರವೀಣ್ ಸಿದ್ದಾಪುರ ಹಾಗೂ ಮಹಿಳಾ ವಿಭಾಗದಲ್ಲಿ ಬೆಂಗಳೂರಿನಲ್ಲಿ ನೆಲೆಸಿರುವ ಕೊಡಗು ಮೂಲದ ಆರ್.ಗಾಯತ್ರಿ ಅವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಹರಿಯಾಣದ ಕೈಗಾರಿಕಾ ಮತ್ತು ವಾಣಿಜ್ಯ ಸಚಿವ ರಾವ್ ನರ್ಬೀರ್ ಸಿಂಗ್ ಪ್ರಶಸ್ತಿ ಪ್ರದಾನ ಮಾಡಿದರು.
ಮಡಿಕೇರಿ ಸೆ.26 NEWS DESK : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಸಹಯೋಗದೊಂದಿಗೆ ಕೆನರಾ ಬ್ಯಾಂಕ್ ಹಾಗೂ ಕರ್ನಾಟಕ ಬ್ಯಾಂಕ್ ವತಿಯಿಂದ ಕೊಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ದಿಡ್ಡಳ್ಳಿ ಹಾಡಿಯಲ್ಲಿ ಜನ ಸುರಕ್ಷಾ ಆಂದೋಲನ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆರ್ಥಿಕ ಸಮಾಲೋಚಕರಾದ ನಬಿ, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು. ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು, ವಾರ್ಷಿಕ 20 ರೂ.ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 200000ರೂ ಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ವಾರ್ಷಿಕವಾಗಿ 436 ರೂ.ಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ 200000 ರೂ.ಗಳ ವಿಮಾಮೊತ್ತ ಸಿಗುವುದಾಗಿ ತಿಳಿಸಿದರು. ಎರಡನ್ನೂ ಮಾಡಿಸಿಕೊಂಡಲ್ಲಿ 400000 ರೂ.…
ಬೆಂಗಳೂರು ಸೆ.26 NEWS DESK : ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರಕ್ಕೆ ಇಟಲಿ–ಭಾರತ ಬಾಹ್ಯಾಕಾಶ, ಏರೋಸ್ಪೇಸ್ ಮತ್ತು ರಕ್ಷಣಾ ರೋಡ್ ಶೋ ಭಾಗವಾಗಿ ಇಟಾಲಿಯನ್ ಏರೋಸ್ಪೇಸ್ ಮತ್ತು ಬಾಹ್ಯಾಕಾಶ ನಿಯೋಗವು ಭೇಟಿ ನೀಡಿತು. ಈ ಸಂದರ್ಭ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ನಿರ್ದೇಶಕರಾದ ಡಾ.ರಾಜೇಶ್ ಎನ್.ಎಲ್. ಅವರು ಕೇಂದ್ರದ ಧ್ಯೇಯ, ಮುಂದುವರೆದ ಸಾಮಥ್ರ್ಯಗಳು, ಬೆಳೆ ಮೇಲ್ವಿಚಾರಣೆ ಹಾಗೂ ವಿಪತ್ತು ನಿರ್ವಹಣೆಯಿಂದ ನಗರ ಯೋಜನೆ ಮತ್ತು ನೈಸರ್ಗಿಕ ಸಂಪನ್ಮೂಲ ನಿರ್ವಹಣೆವರೆಗೆ ಬಾಹ್ಯಾಕಾಶ ಆಧಾರಿತ ಆಡಳಿತ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ವೈವಿಧ್ಯಮಯ ಅನ್ವಯಿಕೆಗಳನ್ನು ಪ್ರಸ್ತುತಪಡಿಸಿದರು. ಕಿಟ್ಸ್ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾದ ಪ್ರಮೋದ್ ಎಲ್.ಪಾಟೀಲ್ ಅವರು, ಕರಡು ಕರ್ನಾಟಕ ಬಾಹ್ಯಾಕಾಶ ನೀತಿಯ ಪ್ರಮುಖ ಅಂಶಗಳನ್ನು ಹಂಚಿಕೊಂಡು ಜಾಗತಿಕ ಸಾಮಥ್ರ್ಯ ಕೇಂದ್ರಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿರುವುದನ್ನು ತಿಳಿಸಿದರು. ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಗ್ಲೋಬಲ್ ಇನ್ನೋವೇಶನ್ ಅಲೈಯನ್ಸ್ (ಜಿಐಎ) ಅಡಿಯಲ್ಲಿ ಸುಗಮಗೊಳಿಸಲಾದ ಈ…
ಗೋಣಿಕೊಪ್ಪ ಸೆ.26 NEWS DESK : ರಾಜ್ಯ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಗಮನ ಸೆಳೆದ ತಿತಿಮತಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೊನ್ನಂಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಜರ್ಸಿಗಳನ್ನು ವಿತರಿಸಲಾಯಿತು. ಗಿರಿಜನ ಮಕ್ಕಳ ಕ್ರೀಡಾ ಸ್ಫೂರ್ತಿಯನ್ನು ಮನಗಂಡು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಎನ್.ದಿನೇಶ್ ಅವರ ನೇತೃತ್ವದಲ್ಲಿ ಜರ್ಸಿ ವಿತರಿಸಿದರು. ಶಾಲೆಯ ಮುಖ್ಯೋಪಾಧ್ಯಾಯನಿ ಮಂಗಳ ಮಾತನಾಡಿ, ಕ್ರೀಡಾ ಮನೋಭಾವನೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪತ್ರಕರ್ತರು ಮಕ್ಕಳನ್ನು ಗುರುತಿಸಿರುವುದು ವಿದ್ಯಾರ್ಥಿಗಳಿಗೆ ಬಹುದೊಡ್ಡ ಪ್ರೋತ್ಸಾಹವಾಗಿದೆ ಎಂದು ಹೇಳಿದರು. ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಜಗದೀಶ್ ಜೋಡುಬೀಟಿ ಮಾತನಾಡಿ, ಕ್ರೀಡಾ ಮನೋಭಾವನೆ ಹೊಂದುವುದರಿಂದ ಸಕರಾತ್ಮಕ ಚಿಂತನೆಗಳು ಹುಟ್ಟಿಕೊಳ್ಳುತ್ತದೆ. ಈ ಮೂಲಕ ಸಮಾಜದಲ್ಲಿ ಆತ್ಮಸ್ಥೈರ್ಯದಿಂದ ಬದುಕಲು ಸಾಧ್ಯ ಎಂದರು. ಕ್ರೀಡೆಯಲ್ಲಿ ಹೆಚ್ಚು ತೊಡಗಿಸಿಕೊಂಡಾಗ ವ್ಯಸನಗಳಿಗೆ ಬಲಿಯಾಗುವುದನ್ನು ತಪ್ಪಿಸಲು ಸಾಧ್ಯವಿದೆ. ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಜತೆಗೆ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು ಎಂದು ಸಲಹೆ ನೀಡಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ, ಸಹ ಶಿಕ್ಷಕರುಗಳಾದ ಪ್ರೇಮ, ಹರ್ಶಿತಾ,…
ಮಡಿಕೇರಿ ಸೆ.26 NEWS DESK : ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಕೊಡಗು ಜಿಲ್ಲಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆಯ ಸಹಯೋಗದಲ್ಲಿ ಅಪೌಷ್ಟಿಕ ಮಕ್ಕಳ ಪೌಷ್ಠಿಕ ಪುನಃಚೇತನ ಕೇಂದ್ರ ನಡೆಸಲಾಗುತ್ತಿದೆ. ಇದು ಸರ್ಕಾರದ ಯೋಜನೆಯಾಗಿದೆ. ಪೌಷ್ಟಿಕ ವಿಭಾಗವು ರಾಜ್ಯದ ಅನುದಾನದ ಅಡಿಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ನಡೆಸಲಾಗುತ್ತಿದೆ. 0-6 ವರ್ಷದೊಳಗಿನ, ಅಪೌಷ್ಟಿಕತೆ ಮತ್ತು ಸಾಧಾರಣ ಅಪೌಷ್ಟಿಕತೆಯುಳ್ಳ ಅಪೌಷ್ಟಿಕ ಮಕ್ಕಳನ್ನು ಇಲ್ಲಿ ದಾಖಲಿಸಿಕೊಳ್ಳಲಾಗುತ್ತದೆ. :: ಮಾನದಂಡಗಳು :: ವಿಶ್ವ ಆರೋಗ್ಯ ಸಂಸ್ಥೆಯ ಬೆಳವಣಿಗೆ ನಕ್ಷೆಯ ಪ್ರಕಾರ ಎತ್ತರಕ್ಕೆ ತಕ್ಕ ತೂಕ ಕಡಿಮೆ ಇರುವ ಮಕ್ಕಳು ತೋಳಿನ ಸುತ್ತಳತೆ (11.5 ಸೆಂ.ಮೀ.) ಒಳಗೆ (ತೀವ್ರ ಪೌಷ್ಟಿಕತೆ) ತೋಳಿನ ಸುತ್ತಳತೆ 11.5 -12.5 ಸೆಂ.ಮೀ. ಒಳಗೆ (ಸಾಧಾರಣ ಅಪೌಷ್ಟಿಕತೆ) ಮಕ್ಕಳು ಪಾದದಲ್ಲಿ ಊತ (ಪೀಡಲ್ ಎಡಿಮಾ), ಇದ್ದಾಗ, 0-6 ವರ್ಷದೊಳಗಿನ ಅಪೌಷ್ಟಿಕತೆಯೊಂದಿಗೆ ರಕ್ತಹೀನತೆ ಉಳ್ಳ ಮಕ್ಕಳನ್ನು ಮತ್ತು ಸಿವಿಯರ್ ವೇಸ್ಟಿಂಗ್ (ಶರೀರದಲ್ಲಿ ಮೂಳೆಗಳು ಎದ್ದು ಕಾಣುವುದು) ಇಂತಹ…
ಮಡಿಕೇರಿ ಸೆ.25 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀದಂಡಿನ ಮಾರಿಯಮ್ಮ ದೇವಿಗೆ ದಸರಾದ ಐದನೇ ದಿನವಾದ ಇಂದು ಶ್ರೀ ಮಹಾಲಕ್ಷ್ಮಿ ಅಲಂಕಾರದಲ್ಲಿ ಗಮನ ಸೆಳೆಯುತ್ತಿದೆ. ನೂರಾರು ಭಕ್ತರು ಪೂಜೆ ಸಲ್ಲಿಸಿ ವಿಶೇಷ ಅಲಂಕಾರವನ್ನು ವೀಕ್ಷಿಸಿದರು. ನವರಾತ್ರಿಯ ಪ್ರಯುಕ್ತ ಶ್ರೀದಂಡಿನ ಮಾರಿಯಮ್ಮ ದೇವಾಲಯದಲ್ಲಿ ಪ್ರತಿದಿನ ವಿಶೇಷ ಅಲಂಕಾರ ಸೇವೆ ಮತ್ತು ವಿಶೇಷ ಪೂಜೆ ನಡೆಯುತ್ತಿದೆ. ಸೆ.27 ರಂದು ಚಾಮುಂಡೇಶ್ವರಿ ಅಲಂಕಾರ ಪೂಜೆ ನಡೆಯಲಿದೆ.
ಬೆಂಗಳೂರು ಸೆ.26 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ವಿರಾಜಪೇಟೆ ಕ್ಷೇತ್ರದ ಅಲ್ಪಸಂಖ್ಯಾತ ಕ್ರಿಶ್ಚಿಯನ್ ಮುಖಂಡರು ವಸತಿ ಹಾಗೂ ಅಲ್ಪಸಂಖ್ಯಾತರ ಸಚಿವ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ಸಮಾಲೋಚಿಸಿದರು. ಬೆಂಗಳೂರಿನ ವಸಂತನಗರದಲ್ಲಿ ಇರುವ ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಲ್ಲಿ ವಸತಿ ಸಚಿವರ ಅದ್ಯಕ್ಷತೆಯಲ್ಲಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು, ಕ್ರಿಶ್ಚಿಯನ್ ಸಮುದಾಯದ ಮೂಲ ಸೌಲಭ್ಯಗಳು ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಲಾಯಿತಲ್ಲದೆ, ಸಚಿವರು ಮುಖಂಡರುಗಳ ಅಹವಾಲುಗಳನ್ನು ಸ್ವೀಕರಿಸಿ ಶೀಘ್ರ ಪರಿಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ವಿರಾಜಪೇಟೆ ತಾಲೂಕಿನ ಕ್ರಿಶ್ಚಿಯನ್ ಧರ್ಮ ಗುರಗಳು, ಕಾಂಗ್ರೆಸ್ ಮುಖಂಡರುಗಳಾದ ಜೋಕಿಮ್, ಜಾನ್ಸನ್, ಬಾಬು, ರೋಬಿನ್, ಅಂಟೋನಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು. 20 gkl 01
ಮಡಿಕೇರಿ ಸೆ.26 NEWS DESK : ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ ಮುಖಂಡರ ಸಭೆ ನಡೆಯಿತು. ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೊಯ್ಲಿ, ವಿಧಾನಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್, ಸಚಿವರುಗಳಾದ ಸಂತೋಷ್ ಲಾಡ್, ಎನ್.ಎಸ್ ಭೋಸರಾಜು, ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ವಿ.ಆರ್.ಸುದರ್ಶನ್, ಸೀತಾರಾಮ್, ವಿಧಾನ ಪರಿಷತ್ ಸದಸ್ಯರಾದ ರಮೇಶ್ ಬಾಬು ಸೇರಿದಂತೆ ಮುಖಂಡರು ಸಭೆಯಲ್ಲಿ ಭಾಗವಹಿಸಿದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಮುಖರು ‘ಜನಸಂಖ್ಯೆಗೆ ತಕ್ಕ ಪಾಲು ನಮ್ಮ ಹಕ್ಕು’ ಸಮೀಕ್ಷೆಯಲ್ಲಿ ಪತ್ತೆಯಾಗುವ ಅಂಕಿ ಅಂಶದ ಕುರಿತು ಸುಧೀರ್ಘವಾಗಿ ಚರ್ಚಿಸಲಾಯಿತು ಎಂದು ತಿಳಿಸಿದರು.






