ಲೇಖಕ: admin

ನಾಪೋಕ್ಲು ಸೆ.11 NEWS DESK : ಚೆರಿಯಪರಂಬು ಆಟದ ಮೈದಾನದಲ್ಲಿ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂದಲ್ಲಿ ನಾಪೋಕ್ಲುವಿನ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡಾಕೂಟದಲ್ಲಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಡಿಕೇರಿ, ಕೊಡಗು ಜಿಲ್ಲೆ ಹಾಗೂ ನಾಪೋಕ್ಲು ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಸಂಯುಕ್ತಾಶ್ರಯದಲ್ಲಿ ನಡೆದ ಕ್ರೀಡಾಕೂಟದಲ್ಲಿ ಪ್ರಾಥಮಿಕ ವಿಭಾಗದ ಬಾಲಕರ ಖೋಖೋ ಪ್ರಥಮ ಸ್ಥಾನ, ಕಬಡ್ಡಿ ದ್ವಿತೀಯ ಸ್ಥಾನ, ಪ್ರಾಥಮಿಕ ವಿಭಾಗದ ಬಾಲಕಿಯರ ವಿಭಾಗದ ಖೋಖೋ ಪ್ರಥಮ ಸ್ಥಾನ, ಪ್ರೌಢ ಬಾಲಕರ ವಿಭಾಗದ ಖೋಖೋ ಪ್ರಥಮ ಸ್ಥಾನ, ಪ್ರೌಢ ವಿಭಾಗದ ಬಾಲಕಿಯರ ಖೋಖೋ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಪ್ರಾಂಶುಪಾಲರಾದ ಕೆ.ಡಿ.ನೀತಾ ಅವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿ ಶ್ಯಾಮಿಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು. ವರದಿ : ದುಗ್ಗಳ ಸದಾನಂದ.

Read More

ವಿರಾಜಪೇಟೆ ಸೆ.11 NEWS DESK : ವಿರಾಜಪೇಟೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮೂರ್ನಾಡು ವಲಯದ ಮರಗೊಡು ಕಾರ್ಯಕ್ಷೇತ್ರದ ಅರೆಕಾಡು ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕಿ ಲತಾ ಮಾತನಾಡಿ, ಹದಿಹರೆಯದ ಮಕ್ಕಳು ದುಶ್ಚಟಕ್ಕೆ ಬಲಿಯಾಗುತ್ತಿದ್ದು, ಮಾದಕ ವಸ್ತುಗಳ ಸೇವನೆಯಿಂದ ಕಾಯಿಲೆಗೆ ಒಳಗಾಗುತ್ತಿದ್ದಾರೆ ಹಾಗೂ ತಮ್ಮ ಓದಿನ ಗುಣಮಟ್ಟವನ್ನು ಕಳೆದುಕೊಳ್ಳುತ್ತಿದ್ದಾರೆ. ಮಾದಕ ವಸ್ತುಗಳಾದ ಗುಟ್ಕಾ ಸೇವನೆ ಮಧ್ಯಪಾನ, ಅಮಲು ಪದಾರ್ಥಗಳ ಸೇವನೆಯಿಂದ ಆರೋಗ್ಯಕ್ಕೆ ಮಾತ್ರ ಹಾನಿಕಾರವಲ್ಲದೆ ನಮ್ಮ ಪರಿವಾರಕ್ಕೂ ಹಾನಿಯನ್ನು ಉಂಟುಮಾಡುತ್ತದೆ. ಈ ರೀತಿಯ ಮಾದಕ ವಸ್ತುಗಳ ಸೇವನೆಯಿಂದ ಕ್ಯಾನ್ಸರ್ ಕಾಯಿಲೆಗಳು ಬರಬಹುದು. ಒಂದು ವೇಳೆ ಯಾರಾದರೂ ವ್ಯಸನಕ್ಕೆ ಒಳಗಾದಲ್ಲಿ ಅಥವಾ ಈ ರೀತಿಯ ಅಮಲು ಪದಾರ್ಥಗಳ ಸೇವನೆಯನ್ನು ಕಂಡಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮಕ್ಕಳಿಗೆ ಮನವರಿಕೆ ಮಾಡಿದರು. ವಲಯ ಮೇಲ್ವಿಚಾರಕರಾದ ಪ್ರತಾಪ್ ದೇವಾಡಿಗ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆಯಿಂದ ವಿದ್ಯಾರ್ಥಿಗಳು ಆಗುತ್ತಿರುವ ಆರೋಗ್ಯ ಸಮಸ್ಯೆ…

Read More

ಮಡಿಕೇರಿ ಸೆ.11 NEWS DESK : ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ಬಾಳೆಲೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು  “ಜೈವಿಕ ಗೊಬ್ಬರ – ರೈತರ ಚಿನ್ನ” ಎಂಬ ಶೀರ್ಷಿಕೆಯಲ್ಲಿ ನೈಸರ್ಗಿಕ ಕೃಷಿಯ ಪ್ರಮುಖ ತಯಾರಿಕೆಯಾದ “ನೀಮಾಸ್ತ್ರ” ಕುರಿತು ಪ್ರದರ್ಶನವನ್ನು ಯಶಸ್ವಿಯಾಗಿ ಆಯೋಜಿಸಿದರು.  ಈ ಸಂದರ್ಭದಲ್ಲಿ ರೈತರಿಗೆ ನೀಮಾಸ್ತ್ರದ ತಯಾರಿಕಾ ವಿಧಾನವನ್ನು ಹಂತ ಹಂತವಾಗಿ ವಿವರಿಸಿ, ಪ್ರಾಯೋಗಿಕವಾಗಿ ತೋರಿಸಲಾಯಿತು. ಪ್ರದರ್ಶನವನ್ನು ಬಾಳೆಲೆ ಕೃಷಿ ಅಧಿಕಾರಿ ಮೀರಾ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ನಡೆಸಿದರು. ವಿದ್ಯಾರ್ಥಿಗಳು ನೀಮಾಸ್ತ್ರ ತಯಾರಿಕೆಯ ಕ್ರಮ, ಅದರ ಪ್ರಯೋಜನಗಳು ಹಾಗೂ ಕೀಟ ನಿರ್ವಹಣೆಯಲ್ಲಿ ಇದರ ಪರಿಣಾಮಕಾರಿತ್ವವನ್ನು ರೈತರಿಗೆ ವಿವರಿಸಿದರು. ಕಾರ್ಯಾಗಾರದ ಪ್ರಮುಖ ಲಾಭಾಳುಗಳು ಸಣ್ಣ ಮತ್ತು ಮಧ್ಯಮ ರೈತರು ಆಗಿದ್ದು, ಜೈವಿಕ ಗೊಬ್ಬರವನ್ನು ಅಳವಡಿಸಿಕೊಳ್ಳುವ ಮೂಲಕ ರಾಸಾಯನಿಕ ಅವಲಂಬನೆಯನ್ನು ಕಡಿಮೆ ಮಾಡಿ, ಶಾಶ್ವತ ಕೃಷಿ ಸಾಧಿಸಬಹುದೆಂಬ ಸಂದೇಶವನ್ನು ವಿದ್ಯಾರ್ಥಿಗಳು ನೀಡಿದರು.

Read More

ಸುಂಟಿಕೊಪ್ಪ ಸೆ.11 NEWS DESK : ಕಾನ್‍ಬೈಲ್ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಥ್ರೋಬಾಲ್ ವಿಭಾಗದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಕುಶಾಲನಗರದ ಬಾಲಕಿಯರ ಪ್ರೌಢಶಾಲೆಯಲ್ಲಿ ಅಯೋಜನೆಗೊಂಡಿದ್ದ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಶಾಲೆಯ ವಿದ್ಯಾರ್ಥಿ ಜೀವಿತ್ ವಲಯಮಟ್ಟದ ಕ್ರೀಡಾಕೂಟದ ಉದ್ದಜಿಗಿತ (ಲಾಂಗ್ ಜಂಪ್), ಎತ್ತರ ಜಿಗಿತ (ಹೈಜಂಪ್), ಭಾರದ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾನೆ. ದೀಕ್ಷಿತ್ ಹೈ ಜಂಪ್ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದುಕೊಳ್ಳುವ ಮೂಲಕ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದ್ದಾನೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಮುಖ್ಯೋಪಾದ್ಯಾಯರಾದ ಕೆ.ಮೂರ್ತಿ, ದೈಹಿಕ ಶಿಕ್ಷಣ ಶಿಕ್ಷಕಿ ಜಿ.ಕೆ.ಪಾರ್ವತಿ, ಸಹಶಿಕ್ಷಕರಾದ ಎನ್.ಕೆ.ಮಾಲಾದೇವಿ, ಕೆ.ಜೆ.ಮಹೇಶ್, ಸುಮಿತ್ರ, ಸುಜಾತ ಹಾಗೂ ಫಾತೀಮಾ ಅಭಿನಂದಿಸಿದ್ದಾರೆ.

Read More

ಬೆಂಗಳೂರು ಸೆ.11 NEWS DESK : ವಿಧಾನಸೌಧದಲ್ಲಿಂದು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್‌ ನಿರ್ಮಾಣ, ಭೂಪರಿಹಾರ ಹಾಗೂ ವಿವಿಧ ಕೋರ್ಟ್‌ಗಳಲ್ಲಿ ಹೆಚ್ಚುವರಿ ಭೂಪರಿಹಾರ ಕೋರಿ ಸಲ್ಲಿಸಿರುವ ಪ್ರಕರಣಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ  ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ  ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹಾಗೂ ಅಧಿಕಾರಿಗಳ ಜೊತೆಗಿನ ಭಾಗವಹಿಸಿದರು.

Read More

ಸುಂಟಿಕೊಪ್ಪ ಸೆ.11 NEWS DESK : ಸುಂಟಿಕೊಪ್ಪ ಪೌರಕಾರ್ಮಿಕರ 3 ಪ್ರಮುಖ ಸಮಸ್ಯೆಗಳನ್ನು ಈಡೇರಿಸಲು ಸೆ.22 ರ ಗಡುವು ನೀಡಲಾಗಿದೆ ಎಂದು ಗ್ರಾಮ ಪಂಚಾಯಿತಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ (ಸಿಐಟಿಯು) ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಎಚ್ಚರಿಕೆ ನೀಡಿದ್ದಾರೆ. ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಸಾಂಕೇತಿಕವಾಗಿ ಧರಣಿ ನಡೆಸಿ ಪೌರ ಕಾರ್ಮಿಕರ ಅನುಮೋದನೆಗಾಗಿ ಹಾಗೂ ಕನಿಷ್ಠ ವೇತನಕ್ಕಾಗಿ ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ (ಸಿಐಟಿಯು) ಜಿಲ್ಲಾಧ್ಯಕ್ಷ ಪಿ.ಆರ್.ಭರತ್, ಪೌರಕಾರ್ಮಿಕರ ಸೇವೆಯನ್ನು ಖಾಯಂಗೊಳಿಸುವ ಅಧಿಕಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಇದೆ. ಆದರೆ ಅವರು ಸಬೂಬುಗಳನ್ನು ಹೇಳುತ್ತ ಕಾಲ ವಿಳಂಬ ಧೋರಣೆಯನ್ನು ಅನುಸರಿಸುತ್ತಿದ್ದಾರೆ. ಖಾಯಂಗೊಳಿಸುವ ಆದೇಶಕ್ಕೆ ಸೆ.21 ರೊಳಗೆ ಅನುಮೋದನೆ ನೀಡದಿದ್ದಲ್ಲಿ ಸೆ.22 ರಂದು ಪೌರಕಾರ್ಮಿಕರೆಲ್ಲಾರೂ ಸ್ವಚ್ಛಾತಗಾರರು ಹಾಗೂ ನೀರುಗಂಟಿ ಕೆಲಸ ನಿರ್ವಹಿಸುವವರು ಒಂದು ದಿನದ ಸಾಂಕೇತಿಕ ಮುಷ್ಕರವನ್ನು ಮಾಡಲಿದ್ದೇವೆ. ಒಂದು ವೇಳೆ ಅನುಮೋದನೆ ದೊರೆಯದಿದ್ದಲ್ಲಿ ಅನಿರ್ಧಿಷ್ಟವಾಧಿ ಮುಷ್ಕರಕ್ಕೆ ಮುಂದಾಗಲಿದ್ದೇವೆ ಎಂದು ಭರತ್…

Read More

ಮಡಿಕೇರಿ ಸೆ.11 NEWS DESK :  ತಾಲ್ಲೂಕು ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಚೆಟ್ಟಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ದೈಹಿಕ ಶಿಕ್ಷಕಿ ಗೀತಾ ಅಯ್ಯಪ್ಪ ಹಾಗೂ ಮನೋಜ್  ತಂಡದ ಉಸ್ತುವಾರಿಗಳಾಗಿ ತಂಡವನ್ನು ಮುನ್ನಡೆಸಿದರು.

Read More

ಮಡಿಕೇರಿ NEWS DESK ಸೆ.10 : ಒಗ್ಗಟ್ಟಿನಿಂದ ಪಕ್ಷ ಬಲಪಡಿಸುವ ಮೂಲಕ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆ ಬಹುಮತ ತಂದು ಕೊಡಲು ಶ್ರಮಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಕರೆ ನೀಡಿದ್ದಾರೆ. ಚೆಂಬು ಗ್ರಾಮದ ಆನ್ಯಾಳದಲ್ಲಿ ಇಂದು ನಡೆದ ಚೆಂಬು ವಲಯ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕಾಂಗ್ರೆಸ್ ಸರಕಾರದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಜನ ಬೆಂಬಲವನ್ನು ಹೆಚ್ಚಿಸಿಕೊಳ್ಳಬೇಕು. ವಿವಿಧ ಪ್ರದೇಶಗಳಲ್ಲಿ ಆಗಬೇಕಾಗಿರುವ ಕಾಮಗಾರಿಗಳು ಮತ್ತು ಕಾರ್ಯಕರ್ತರ ಅಹವಾಲುಗಳನ್ನು ಶಾಸಕರು ಹಾಗೂ ಪಕ್ಷದ ಜಿಲ್ಲಾಧ್ಯಕ್ಷರ ಗಮನಕ್ಕೆ ತರುವುದಾಗಿ ತಿಳಿಸಿದರು. ವಲಯ ಕಾಂಗ್ರೆಸ್ ಅಧ್ಯಕ್ಷ ರವಿರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್ ಹೊಸೂರು, ಪ್ರಮುಖರಾದ ವಾಸು ರೈ, ಶ್ರೀಧರ್, ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ ಸದಸ್ಯರುಗಳಾದ ಗಿರೀಶ್ ಹೊಸೂರು, ಕುಸುಮ ಯೋಗೀಶ್ವರ್, ಶಶಿಕಲ ಕಟ್ಟಪ್ಪಾರೆ, ಬೂತ್ ಅಧ್ಯಕ್ಷರುಗಳಾದ ಪಕೀರ ಮಂಗಳಪಾರೆ, ಚೆನ್ನಪ್ಪ ನಡುಬೆಟ್ಟು, ರಘುನಾಥ್ ಬಾಲಂಬಿ, ಪ್ರಧಾನ ಕಾರ್ಯದರ್ಶಿ…

Read More

ಮಡಿಕೇರಿ ಸೆ.10 NEWS DESK : ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ 2024-25ನೇ ಸಾಲಿನಲ್ಲಿ 41.33 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸಂಘದ ಮಹಾಸಭೆ ಸೆ.13 ರಂದು ನಗರದ ಕೊಡವ ಸಮಾಜದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಜಿ.ಎಂ.ಸತೀಶ್ ಪೈ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕು ಪ್ರಸ್ತುತ 2496 ಮಂದಿ ಸದಸ್ಯರುಗಳನ್ನು ಹೊಂದಿದ್ದು, ಬ್ಯಾಂಕಿನ ಅಧಿಕೃತ ಪಾಲು ಬಂಡವಾಳ ರೂ.180.74 ಲಕ್ಷ ಸಂಗ್ರಹಗೊಂಡಿದೆ. ಬ್ಯಾಂಕಿನ ದುಡಿಯುವ ಬಂಡವಾಳ ರೂ.5441.00 ಲಕ್ಷ ಆಗಿದ್ದು, ಕಳೆದ ಸಾಲಿಗಿಂತ ರೂ.126.23 ಲಕ್ಷದಷ್ಟು ಅಧಿಕಗೊಂಡಿದೆ ಎಂದರು. ಪ್ರಸ್ತುತ ರೂ.4867.68 ಲಕ್ಷದಷ್ಟು ವಿವಿಧ ಠೇವಣಾತಿಗಳನ್ನು ಹೊಂದಿದ್ದು, ಕಳೆದ ಸಾಲಿಗಿಂತ ರೂ.39.25 ಲಕ್ಷದಷ್ಟು ಏರಿಕೆ ಉಂಟಾಗಿದೆ. ಅಲ್ಲದೆ ತಾನು ಹೊಂದಿರುವ ಠೇವಣಾತಿಗಳ ಮೇಲೆ ಪೂರ್ಣ ಪ್ರಮಾಣದಲ್ಲಿ ಡಿಪಾಜಿಟ್ ಇನ್ಸೂರೆನ್ಸ್ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೋರೇಷನ್‍ನಲ್ಲಿ ವಿಮೆ ಇಳಿಸಲಾಗಿದೆ. ಬ್ಯಾಂಕು ತನ್ನ ದ್ರವ್ಯಾಸ್ಥೆಯನ್ನು ನಿಗಧಿತ ಮಿತಿಯೊಳಗೆ ಕಾಯ್ದುಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು. ಸುಮಾರು ರೂ.674.91 ಲಕ್ಷದಷ್ಟು ಹಣವನ್ನು ವಿವಿಧ…

Read More

ಮಡಿಕೇರಿ ಸೆ.10 NEWS DESK : ಮಡಿಕೇರಿ ತಾಲ್ಲೂಕಿನ ಮುಕ್ಕೋಡ್ಲು ಗ್ರಾಮದ ನಿವಾಸಿಯೊಬ್ಬರ ಎರಡು ಏಕರೆ ಕಾಫಿ ಮತ್ತು ಏಲಕ್ಕಿ ತೋಟವನ್ನು ಅರಣ್ಯ ಇಲಾಖಾ ಸಿಬ್ಬಂದಿಗಳು ನಾಶಗೊಳಿಸಿರುವ ಅಮಾನವೀಯ ಘಟನೆಯನ್ನು ಬೆಳಕಿಗೆ ತಂದಿರುವ ಕೊಡಗು ಜಿಲ್ಲಾ ರೈತ ಹೋರಾಟ ಸಮಿತಿ ಹೋರಾಟದ ಎಚ್ಚರಿಕೆಯನ್ನು ನೀಡಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ರೈತ ಹೋರಾಟ ಸಮಿತಿಯ ಅಧ್ಯಕ್ಷ ಸುರೇಶ್ ಚಕ್ರವರ್ತಿ, ಮುಕ್ಕೋಡ್ಲುವಿನ ಹಿರಿಯ ಕೃಷಿಕ ಕಾಳಚಂಡ ನಾಣಿಯಪ್ಪ ಅವರ ತೋಟವನ್ನು ನಾಶಪಡಿಸಲು ಕಾರಣಕರ್ತರಾಗಿರುವ ಅರಣ್ಯ ಅಧಿಕಾರಿಗಳನ್ನು ಸೆ.26ರ ಒಳಗಾಗಿ ಹುದ್ದೆಯಿಂದ ವಜಾಗೊಳಿಸಬೇಕು ಮತ್ತು ನೊಂದ ಬೆಳೆಗಾರನಿಗೆ 30 ಲಕ್ಷ ರೂ. ಪರಿಹಾರವನ್ನು ನೀಡಬೇಕೆಂದು ಆಗ್ರಹಿಸಿದರು. ನಿಗದಿತ ಗಡುವಿನ ಒಳಗೆ ನಮ್ಮ ಈ ಬೇಡಿಕೆಯನ್ನು ಈಡೇರಿಸಲು ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ಮಡಿಕೇರಿಯ ‘ಅರಣ್ಯ ಭವನ’ಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು. ನಾಣಿಯಪ್ಪ ಅವರು ಮುಕ್ಕೋಡ್ಲುವಿನ ಸಕಾರ್ಸರಿ ಪೈಸಾರಿ ಜಾಗದಲ್ಲಿ ಏಲಕ್ಕಿ, ಕಾಫಿ ತೋಟವನ್ನು ಮಾಡಿಕೊಂಡು ಬದುಕು ಕಟ್ಟಿ ಕೊಂಡಿದ್ದಾರೆ. ತಮ್ಮ ತೋಟ…

Read More