ಸೋಮವಾರಪೇಟೆ ಸೆ.10 NEWS DESK : ಹಕ್ಕುಪತ್ರ ಪಡೆದುಕೊಂಡವರು ಜಾಗವನ್ನು ಮಾರಾಟ ಮಾಡದೆ ಕಾಪಾಡಿಕೊಳ್ಳಬೇಕು ಎಂದು ಶಾಸಕ ಡಾ.ಮಂತರ್ ಗೌಡ ಸಲಹೆ ನೀಡಿದರು. ಕಂದಾಯ ಇಲಾಖೆಯ ವತಿಯಿಂದ ಶಾಸಕರ ಕಚೇರಿ ಎದುರು ನಡೆದ ಹಕ್ಕಪತ್ರ ವಿತರಣಾ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಿ ಮಾತನಾಡಿದರು. ತಿರಸ್ಕೃತಗೊಂಡಿರುವ ಹಕ್ಕುಪತ್ರ ಅರ್ಜಿಗಳ ಪುನರ್ ಪರಿಶೀಲನೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಬಾಕಿಯಿರುವ ಹಕ್ಕುಪತ್ರಗಳನ್ನು ವಿತರಿಸಲಾಗುವುದು ಎಂದು ಭರವಸೆ ನೀಡಿದರು. ಈ ಹಿಂದೆ ಕಂದಾಯ ಇಲಾಖೆ ಮಾಡಿದ ತಪ್ಪುಗಳಿಂದ ಈಗ ಬಡವರು ಹಕ್ಕಪತ್ರಗಳಿಂದ ವಂಚಿತರಾಗಬೇಕಾದ ಸಂಕಷ್ಟ ಬಂದಿದೆ. ಪ್ರಸಕ್ತ ಕಂದಾಯ ಅಧಿಕಾರಿಗಳು ಪ್ರತಿ ಗ್ರಾಮಗಳಿಗೆ ವಾಹನಗಳಲ್ಲಿ ತೆರಳುವ ಸೌಲಭ್ಯವಿದೆ. ಕಂದಾಯ ಇಲಾಖೆಗೆ ಸೇರಬೇಕಾದ ಜಾಗವನ್ನು ಇನ್ನಾದರೂ ಕಾಪಾಡಿಕೊಳ್ಳಬೇಕು. ಬಡವರಿಗೆ ಹಕ್ಕುಪತ್ರ ನೀಡುವ ಎಲ್ಲಾ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಹಕ್ಕುಪತ್ರ ನೀಡಬೇಕು ಎಂದು ಹೇಳಿದರು. ಕಂದಾಯ ಇಲಾಖೆಗೆ ಸಲ್ಲಿಕೆಯಾಗಿರುವ, ಸದ್ಯದ ನಿಯಮದಂತೆ ಹಕ್ಕುಪತ್ರಗಳನ್ನು ನೀಡಲು ಸಾಧ್ಯವಾಗದ ಯಾವುದೇ ಅರ್ಜಿಗಳನ್ನು ತಹಸೀಲ್ದಾರ್ ಅವರು ವಜಾ ಮಾಡಬಾರದು. ಪೂರಕವಾದ ನಿಯಮಗಳನ್ನು ಸರ್ಕಾರ ತಂದಾಗ ಕಾನೂನಿನ…
ಲೇಖಕ: admin
ವಿರಾಜಪೇಟೆ ಸೆ.10 NEWS DESK : ವಿರಾಜಪೇಟೆಯ ಮದರ್ ತೆರೇಸಾ ಸೇವಾ ಕೇಂದ್ರದ ವತಿಯಿಂದ ಮದರ್ ತೆರೇಸಾ ಅವರ ಜನ್ಮ ದಿನಾಚರಣೆ ಪ್ರಯುಕ್ತ ಸಂತ ಅನ್ನಮ್ಮ ದ್ವಿ ಶತಮಾನೋತ್ಸವ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಹಿರಿಯ ನಾಗರಿಕರು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸಾಹಿತಿಗಳಾದ ರಜಿತ ಕಾರ್ಯಪ್ಪ ಅವರನ್ನು ಸನ್ಮಾನಿಸಲಾಯಿತು. ವಿರಾಜಪೇಟೆಯ ಸಂತ ಅನ್ನಮ್ಮ ದೇವಾಲಯದ ಪ್ರಧಾನ ಗುರುಗಳು ಹಾಗೂ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಜೇಮ್ಸ್ ಡೊಮಿನಿಕ್ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ವೇದಿಕೆಯಲ್ಲಿ ಮದರ್ ತೆರೇಸಾ ಸೇವಾ ಕೇಂದ್ರದ ಅಧ್ಯಕ್ಷರು ಹಾಗೂ ಶಿಕ್ಷಣ ಇಲಾಖೆಯ ನಿವೃತ್ತ ಡಿಡಿಪಿಐ ಪೆರಿಗ್ರೀನ್ ಎಸ್ ಮಚ್ಚಾಡೋ, ಉಪಾಧ್ಯಕ್ಷರಾದ ಮಾರ್ಟಿನ್ ಬರ್ನಾಡ್, ಸಂತ ಅನ್ನಮ್ಮ ಪಾಲಕ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಜೋಕಿಂ ರಾಡ್ರಿಗೀಸ್, ಉದ್ಯಮಿ ಚೋಪಿ ಜೋಸೆಫ್, ಜೇಮ್ಸ್ ಮೆನೇಜಸ್, ನಿವೃತ್ತ ಪ್ರಾಂಶುಪಾಲರಾದ ಚಾಲ್ರ್ಸ್ ಡಿಸೋಜಾ ಸಂಘದ ಸದಸ್ಯರಾದ ಕೆ.ಟಿ. ಥೋಮಸ್, ಅರುಣ ಆನ್ಸಿ ಡಿಸೋಜಾ, ಅನಿತಾ ನರೋನ, ಮದರ್ ತೆರೆಸಾ ಸೇವಾ ಕೇಂದ್ರದ…
ಮಡಿಕೇರಿ ಸೆ.10 NEWS DESK : ಪ್ರಸಕ್ತ(2025-26) ಸಾಲಿನ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರನ್ನು ಒಳಗೊಂಡಂತೆ ಸಹ ಶಿಕ್ಷಕರು, ತತ್ಸಮಾನ ವೃಂದದ ಶಿಕ್ಷಕರು ಮತ್ತು ಪ್ರೌಢಶಾಲಾ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ವಿಶೇಷ ಶಿಕ್ಷಕರುಗಳಿಗೆ ಸೆಪ್ಟೆಂಬರ್, 11 ಮತ್ತು 12 ರಂದು ಬೆಳಗ್ಗೆ 10 ಗಂಟೆಗೆ ಹೆಚ್ಚುವರಿ ಶಿಕ್ಷಕರ ಮರು ಹೊಂದಾಣಿಕೆ ಬ್ಲಾಕ್ ಮತ್ತು ಜಿಲ್ಲಾ ಹಂತದ ಗಣಕೀಕೃತ ಕೌನ್ಸೆಲಿಂಗ್ ನಗರದ ಶಾಲ ಶಿಕ್ಷಣ ಇಲಾಖೆ ಉಪ ನಿರ್ದೇಶಕರು(ಆಡಳಿತ) ಇಲ್ಲಿ ನಡೆಯಲಿದೆ. ವೇಳಾಪಟ್ಟಿಯನುಸಾರ ಸಂಬಂಧಿಸಿದ ಶಿಕ್ಷಕರು ನಿಗಧಿತ ದಿನಾಂಕದಂದು ಕೌನ್ಸೆಲಿಂಗ್‍ಗೆ ಸಮಯಕ್ಕೆ ಸರಿಯಾಗಿ ಸೂಕ್ತ ದಾಖಲಾತಿಗಳೊಂದಿಗೆ ತಪ್ಪದೇ ಹಾಜರಾಗುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜು ಅವರು ಕೋರಿದ್ದಾರೆ.
ಮಡಿಕೇರಿ ಸೆ.10 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಶ್ರೀ ಭಗವಾನ್ ವಿಶ್ವಕರ್ಮ ಜಯಂತಿ ಆಚರಣೆಯು ಸೆಪ್ಟೆಂಬರ್, 17 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ಕೊಡಗು ಜಿಲ್ಲಾ ನಿರ್ದೇಶಕರಾದ ಕೆ.ಎಸ್.ಚಂದ್ರಶೇಖರ, ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ನಾಮ ನಿರ್ದೇಶಕರಾದ ಎಚ್.ಎನ್.ಸುಬ್ರಮಣ್ಯ, ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷರಾದ ಎಸ್.ಜೆ.ದೇವದಾಸ್, ವಿಶ್ವಕರ್ಮ ಸಮಾಜ…
ಮಡಿಕೇರಿ ಸೆ.10 NEWS DESK : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಡಾ|| ಬಿ.ಆರ್‍ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಯಾತ್ರೆಗೆ ತೆರಳುವ ಅರ್ಹ ಯಾತ್ರಾರ್ಥಿಗಳು ಇಲಾಖಾ ವೆಬ್‍ಸೈಟ್ www.swd.karnataka.gov.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 15 ರವರೆಗೆ ವಿಸ್ತರಿಸಲಾಗಿದೆ. ಅರ್ಹ ಯಾತ್ರಾರ್ಥಿಗಳು ಅರ್ಜಿ ಸಲ್ಲಿಸಿ ದಾಖಲಾತಿಗಳನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿಗೆ ಸೆ.15 ರ ಸಂಜೆ 5.30 ರೊಳಗೆ ತಪ್ಪದೆ ಸಲ್ಲಿಸುವುದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ದೀಕ್ಷಾ ಭೂಮಿ ನಾಗಪುರಕ್ಕೆ ಹೋಗ ಬಯಸುವ ಯಾತ್ರಾರ್ಥಿಗಳು ಜಂಟಿ/ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ ಇವರಿಗೆ ಸೆಪ್ಟೆಂಬರ್ 15 ರೊಳಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದು. ಜಿಲ್ಲಾವಾರು ನಿಗದಿತ ಗುರಿಗಿಂತ ಹೆಚ್ಚು ಅರ್ಜಿಗಳು ಸ್ವೀಕೃತಗೊಂಡಲ್ಲಿ ವಯಸ್ಸಿನ ಶ್ರೇಷ್ಠತೆ ಆಧಾರದ ಮೇಲೆ ಆಯ್ಕೆ ಮಾಡುವುದು. ಯಾತ್ರಾರ್ಥಿಗಳು ಕನಿಷ್ಠ 18 ವರ್ಷ ಮೇಲ್ಪಟ್ಟವರಾಗಿಬೇಕು. ಬಿ.ಪಿ.ಎಲ್‍ಕಾರ್ಡ್ ಹೊಂದಿರಬೇಕು. ಸಮಾಜ ಕಲ್ಯಾಣ…
ಮಡಿಕೇರಿ ಸೆ.10 NEWS DESK : ಚೇರಂಬಾಣೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಅವರು ಭೇಟಿ ನೀಡಿ ಆಡಳಿತ್ಮಾಕ ಕುಂದುಕೊರತೆಗಳ ಕುರಿತು ಮಾಹಿತಿ ಪಡೆದು ಸಲಹೆ ನೀಡಿದರು. ಇಲಾಖಾ ನಿಯಮಗಳನ್ನು ಅನುಸರಿಸುವ ಮೂಲಕ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಸಾಧಿಸುವ ಬಗ್ಗೆ ಸೂಚನೆ ನೀಡಿದರು. ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಪ್ರತಿ ತಿಂಗಳು ವೈದ್ಯರು ಮತ್ತು ಸಿಬ್ಬಂದಿಯವರ ಸಭೆ ನಡೆಸಿ ಉತ್ತಮ ಸೇವೆ ಕಲ್ಪಿಸುವಂತೆ ನಿರ್ದೇಶನ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪಾರ್ವತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕೃತಾಂಭ, ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿಯ ಡಾ.ಜಿ.ವಿ.ಶ್ರೀನಾಥ್ ಹಾಗೂ ಡಾ.ರಾಜೀವ್, ಡಾ.ಕಿಶೋರ್ ಅವರು ಇದ್ದರು. ಪಿಎಚ್‍ಸಿಒ, ಸಿಎಚ್‍ಒ ಶುಶ್ರೂಷಣಾಧಿಕಾರಿಗಳು ಮತ್ತು ಆಶಾ ಕಾರ್ಯಕರ್ತರು ಹಾಗೂ ಸಿಬ್ಬಂದಿಗಳು ಇದ್ದರು.
ಮಡಿಕೇರಿ ಸೆ.10 NEWS DESK : ಕರ್ನಾಟಕ ಅರಣ್ಯ ಇಲಾಖೆ ಕೊಡಗು ವೃತ್ತ ವತಿಯಿಂದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯು ಸೆ.11 ರಂದು ಬೆಳಗ್ಗೆ 9 ಗಂಟೆಗೆ ನಗರದ ಅರಣ್ಯ ಭವನದ ಆವರಣದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಕೊಡಗು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವೃಷ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ, ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಅಭಿಷೇಕ್, ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಎಚ್.ಜಗನ್ನಾಥ, ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ನೆಹರು ಕೆ.ಎ., ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಪಿ.ಅಭಯಂಕರ್, ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೈಯದ್ ಅಹಮದ್ ಷಾ ಹುಸೈನಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿ.ಸೆಂದಿಲ್ ಕುಮಾರ್, ತಹಶೀನ್ ಬಾನು ದವಡಿ ಇತರರು ಪಾಲ್ಗೊಳ್ಳಲಿದ್ದಾರೆ.
ಸೋಮವಾರಪೇಟೆ ಸೆ.10 NEWS DESK : ದುಷ್ಟರ ಸಂಹಾರಕ್ಕಾಗಿ ಅವತರಿಸಿದ ವೀರಭದ್ರ ಸ್ವಾಮಿಯಿಂದ ಲೋಕ ಕಲ್ಯಾಣವಾಯಿತೆಂದು ತಪೋಕ್ಷೇತ್ರ ಮನೆಹಳ್ಳಿ ಮಠದ ಶ್ರೀ ಮಹಾಂತಶಿವಲಿಂಗ ಸ್ವಾಮೀಜಿ ಹೇಳಿದರು. ತಾಲೂಕಿನ ತಪೋಕ್ಷೇತ್ರ ಮನೆಹಳ್ಳಿ ಮಠ ಹಾಗೂ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ವತಿಯಿಂದ ಮಠದ ಆವರಣದಲ್ಲಿ ಆಯೋಜಿಸಲಾಗಿದ್ದ ವೀರಭದ್ರ ಸ್ವಾಮಿ ವರ್ಧಂತಿ ಮಹೋತ್ಸವದ ಅಂಗವಾಗಿ ನಡೆದ ಲಕ್ಷ ಬಿಲ್ವ ಹಾಗೂ ಪುಷ್ಪಾರ್ಚನೆ ಧಾರ್ಮಿಕ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು. ವರ್ಷದ ಮೊದಲಹಬ್ಬವಾದ ಗೌರಿ, ಗಣೇಶ ಚತುರ್ಥಿಗೂ ಮುನ್ನ ಶ್ರಾವಣ ಮಾಸದ ಬಳಿಕ ಬರುವ ಭಾದ್ರಪದ ಮಾಸದ ಮೊದಲ ಮಂಗಳವಾರ ವೀರಭದ್ರಸ್ವಾಮಿ ಅವತರಿಸಿದರೆದು ಪ್ರತೀತಿ ಇದೆ. ತನ್ನ ಸತಿಗೆ ಆದ ನೋವಿಗೆ ಪ್ರತಿಕಾರವಾಗಿ ಶಿವನು ವೀರಭದ್ರನ ಅವತರಿಸಲು ಕಾರಣೀಕರ್ತನಾದನು, ಉಗ್ರ ಸ್ವರೂಪಿಯಾದ ವೀರಭದ್ರನು ಅಂದಿನಿಂದ ಶಿಷ್ಟರ ರಕ್ಷಣೆ ಮಾಡುತ್ತಿದ್ದಾರೆ ಎಂದರು. ಕಳೆದ 7 ವರ್ಷಗಳಿಂದ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯೊಂದಿಗೆ ಕ್ಷೇತ್ರದಲ್ಲಿ ಸ್ವಾಮಿಯ ವರ್ಧಂತಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದ ಅವರು ಈ ಭಾರಿ ವಿಶೇಷವಾಗಿ ಲಕ್ಷ…
ಬೆಂಗಳೂರು ಸೆ.10 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. :: ಸಭೆಯ ಮುಖ್ಯಾಂಶಗಳು :: • ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. • ಈಗಾಗಲೇ ಗುರುತಿಸಲಾಗಿರುವ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಪೈಕಿ 3,65,614 ಪಡಿತರ ಚೀಟಿಗಳನ್ನು ರದ್ದು/ವರ್ಗ ಬದಲಾವಣೆ ಮಾಡಲಾಗಿದೆ. • ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯ, ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಕುರಿತು ಪರಿಶೀಲನೆ. ಈ ಕುರಿತು ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ. • ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಹೊಸ ನ್ಯಾಯ…
ವಿರಾಜಪೇಟೆ ಸೆ.10 NEWS DESK : ಕೊಡಗು ಜಿಲ್ಲಾ ಕರಾಟೆ ಅಸೋಸಿಯೇಷನ್‍ನ ಸಹಯೋಗದಲ್ಲಿ ಗೋಣಿಕೊಪ್ಪದ ಲಯನ್ಸ್ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ಅಮ್ಮತ್ತಿಯ ನೇತಾಜಿ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿ ವಿ.ಆರ್.ಆಯುಷ್ 40 ಕೆ.ಜಿ. ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾನೆ. ಸೆನ್ಸಾಯಿ ಕಿಶೋರ್ ಅವರ ಬಳಿ ತರಬೇತಿ ಪಡೆಯುತ್ತಿರುವ ಆಯುಷ್, ಹೊಸಕೋಟೆಯ ವಿ.ಬಿ.ರವಿ ಹಾಗೂ ಸುಮಾ ದಂಪತಿಗಳ ಪುತ್ರ.






