ಮಡಿಕೇರಿ ಸೆ.26 NEWS DESK : ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ ಮುಖಂಡರ ಸಭೆ ನಡೆಯಿತು. ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೊಯ್ಲಿ, ವಿಧಾನಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್, ಸಚಿವರುಗಳಾದ ಸಂತೋಷ್ ಲಾಡ್, ಎನ್.ಎಸ್ ಭೋಸರಾಜು, ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ವಿ.ಆರ್.ಸುದರ್ಶನ್, ಸೀತಾರಾಮ್, ವಿಧಾನ ಪರಿಷತ್ ಸದಸ್ಯರಾದ ರಮೇಶ್ ಬಾಬು ಸೇರಿದಂತೆ ಮುಖಂಡರು ಸಭೆಯಲ್ಲಿ ಭಾಗವಹಿಸಿದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಮುಖರು ‘ಜನಸಂಖ್ಯೆಗೆ ತಕ್ಕ ಪಾಲು ನಮ್ಮ ಹಕ್ಕು’ ಸಮೀಕ್ಷೆಯಲ್ಲಿ ಪತ್ತೆಯಾಗುವ ಅಂಕಿ ಅಂಶದ ಕುರಿತು ಸುಧೀರ್ಘವಾಗಿ ಚರ್ಚಿಸಲಾಯಿತು ಎಂದು ತಿಳಿಸಿದರು.
ಲೇಖಕ: admin
ಮಡಿಕೇರಿ ಸೆ.26 NEWS DESK : ಮಡಿಕೇರಿ ದಸರಾ ಸಮಿತಿ ಮತ್ತು ಯುವ ದಸರಾ ಸಮಿತಿ ವತಿಯಿಂದ ಸೆ.26 ಮತ್ತು 27ರಂದು ಯುವ ದಸರಾ ಪ್ರಯುಕ್ತ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಕವನ್ ಕೊತ್ತೋಳಿ ತಿಳಿಸಿದರು. ನಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಯುವ ದಸರಾವನ್ನು ವಿಜೃಂಭಣೆಯಿಂದ ನಡೆಸಲು ಯುವಕರ ತಂಡ ಸಜ್ಜಾಗಿದ್ದು, ವಿಶೇಷ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು. ಸೆ.26 ರಂದು ನಗರದ ಬಾಲಭವನದಲ್ಲಿ ಉದ್ಯೋಗ ವಿನಿಮಯ ಕಚೇರಿ ಸಹಭಾಗಿತ್ವದಲ್ಲಿ ಮೊದಲ ಬಾರಿಗೆ ಯುವದಸರಾದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಹಲವು ಪ್ರತಿಷ್ಠಿತ ಕಂಪೆನಿಗಳು ಭಾಗವಹಿಸುತ್ತಿದ್ದು, ಯುವಜನತೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಕವನ್ ಕೊತ್ತೋಳಿ ಮನವಿ ಮಾಡಿದರು. ಅಂದು ಬೆಳಗ್ಗೆ 10 ಗಂಟೆಗೆ ನಗರಸಭೆ ಅಧ್ಯಕ್ಷೆ ಹಾಗೂ ದಸರಾ ಸಮಿತಿ ಅಧ್ಯಕ್ಷೆ ಪಿ.ಕಲಾವತಿ ಅವರು ಅಧ್ಯಕ್ಷತೆ ವಹಿಸಲಿದ್ದು, ಪ್ರಮುಖರಾದ ಪ್ರಕಾಶ್ ಆಚಾರ್ಯ, ಹರಿಪ್ರಸಾದ್ ಕೋಚನ, ಹಬೀಬ್ ಅಹ್ಮದ್, ಶರಣ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಅಲ್ಲದೆ ಬೆಳಗ್ಗೆ 10.30…
ಗೋಣಿಕೊಪ್ಪ ಸೆ.26 NEWS DESK : ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹೆಚ್.ಕೆ.ಕುಮಾರ್ ಅವರನ್ನು ಶಾಲೆ ಅಭಿವೃದ್ಧಿ ಮತ್ತು ಮೇಲುಸ್ತುವರಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಶಾಲೆ ಅಭಿವೃದ್ಧಿ ಸಮಿತಿ ಸಭೆಯ ನಂತರ ಸನ್ಮಾನ ಕಾರ್ಯಕ್ರಮ ಸಹ ಶಿಕ್ಷರ ಉಪಸ್ಥಿತಿಯಲ್ಲಿ ನಡೆಯಿತು. ಶಾಲೆಯ ಅಭಿವೃದ್ಧಿಗೆ ಪೂರಕವಾದ ಮನಸ್ಥಿತಿಯ ನಡೆಯಿಂದ ಮುಖ್ಯ ಶಿಕ್ಷಕರಿಗೆ ಪ್ರಶಸ್ತಿ ಬರಲು ಸಾಧ್ಯವಾಗಿದೆ ಇದು ಶಾಲೆಗೆ ಹೆಮ್ಮೆಪಡುವ ವಿಚಾರವಾಗಿದೆ. ಈ ಪ್ರಶಸ್ತಿಯಿಂದ ಶಾಲೆಯು ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಿದೆ ಮತ್ತಷ್ಟು ಕೆಲಸ ಕಾರ್ಯಗಳನ್ನು ಮಾಡುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ಉನ್ನತಿಕರಣ ಗೊಳ್ಳುವ ಮೂಲಕ ಪ್ರತಿಯೊಬ್ಬ ಶಿಕ್ಷಕನು ಗೌರವಕ್ಕೆ ಪಾತ್ರರಾಗಬೇಕು ಎಂದು ಶಾಲೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಗದೀಶ್ ಜೋಡುಬೀಟಿ ತಿಳಿಸಿದರು. ಸನ್ಮಾನಕ್ಕೂ ಮೊದಲು ನಡೆದ ಸಮಿತಿ ಸಭೆಯಲ್ಲಿ ಶಾಲೆಯ ಅಭಿವೃದ್ಧಿಗೆ ಸಮಿತಿಯ ಸದಸ್ಯರು ತೊಡಗಿಸಿಕೊಳ್ಳುವ ಹಾಗೂ ಮಕ್ಕಳ ಪಠ್ಯ ಪ್ರವಚನ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಮಧ್ಯಾಹ್ನದ ಬಿಸಿ ಊಟ…
ಮಡಿಕೇರಿ NEWS DESK ಸೆ.25 : ಜಾತಿ ಜನಗಣತಿಯ ಸಂದರ್ಭ ಕೊಡಗಿನ ಸರ್ವ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿ ಕಾಲಂನಲ್ಲಿ ಅರೆಭಾಷೆ ಗೌಡ ಮತ್ತು ಮಾತೃ ಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಕರಿಕೆ ಗೌಡ ಸಮಾಜ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕರಿಕೆ ಗೌಡ ಸಮಾಜದ ಅಧ್ಯಕ್ಷ ಕೋಡಿ ಪೊನ್ನಪ್ಪ ಅವರು ಮೂಲತಃ ಅರೆಭಾಷೆ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿದ್ದಾರೆ, ಆದರೆ ಅರೆಭಾಷೆ ಗೌಡರ ಶೈಕ್ಷಣಿಕ, ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ ‘ಗೌಡ’ ಎಂದೇ ನಮೂದಿಸಲಾಗಿದೆ. ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗು ಗೌಡ ಸಮಾಜಗಳ ಒಕ್ಕೂಟ ಅರೆಭಾಷೆ ಗೌಡ ಸಮುದಾಯದ ಸಭೆಗಳನ್ನು ನಡೆಸಿ, ಕೊಡಗಿನ ಎಲ್ಲಾ ಗೌಡ ಸಮಾಜಗಳೊಂದಿಗೆ ಸಮಾಲೋಚಿಸಿ GOWDA (ಗೌಡ) ಎಂದು ನಮೂದಿಸಲು ನಿರ್ಣಯ ಕೈಗೊಂಡಿದ್ದು, ಇದಕ್ಕೆ ಕರಿಕೆ ಗೌಡ ಸಮಾಜದ ಬೆಂಬಲವಿದೆ ಎಂದು ತಿಳಿಸಿದ್ದಾರೆ. ಪ್ರಸ್ತುತ…
ಸಿದ್ದಾಪುರ NEWS DESK ಸೆ.25 : ಶ್ರೀ ಸಿದ್ದಿ ವಿನಾಯಕ ಮಿತ್ರ ಮಂಡಳಿ ವತಿಯಿಂದ 16 ನೇ ವರ್ಷದ ಗೌರಿ ಗಣೇಶೋತ್ಸವ ಅಂಗವಾಗಿ ಇಲ್ಲಿನ ಅಂಬೇಡ್ಕರ್ ನಗರದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ ವಿಜೃಂಭಣೆಯಿಂದ ನಡೆಯಿತು. ಅರ್ಚಕರಾದ ರಘು ಭಟ್ಟರ ನೇತೃತ್ವದಲ್ಲಿ ಗಣಪನಿಗೆ ಹೋಮ ಮಂಗಳಾರತಿ ವಿಶೇಷ ಪೂಜಾ ಕೈಂಕರ್ಯ ನಡೆಯಿತು. ಸಿದ್ದಾಪುರ ನೆಲ್ಯಹುದಿಕೇರಿ ಅಮ್ಮತ್ತಿ ವಿರಾಜಪೇಟೆ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ವಿಶೇಷ ಪೂಜೆ ಬಳಿಕ ಪುಷ್ಪಾಲಂಕೃತ ಭವ್ಯ ಮಂಟಪದಲ್ಲಿ ಮೂರ್ತಿಗಳನ್ನು ಕುಳ್ಳಿರಿಸಿ ಸಿದ್ದಾಪುರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ವಿಧಿವಿಧಾನಗಳನ್ನು ನೆರವೇರಿಸುವ ಮೂಲಕ ಕಾವೇರಿ ನದಿಗೆ ವಿಸರ್ಜಿಸಲಾಯಿತು. ಶ್ರೀ ಸಿದ್ದಿ ವಿನಾಯಕ ಮಿತ್ರ ಮಂಡಳಿ ವತಿಯಿಂದ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಸೇರಿದಂತೆ ಹಲವು ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಗ್ರಾಮ ಪಂಚಾಯತಿ ಸದಸ್ಯ ಜಾಫರ್ ಅಲಿ ಮಾತನಾಡಿ ಹಬ್ಬಗಳ ಆಚರಣೆ ಮೂಲಕ ಸುಂದರ…
ಮಡಿಕೇರಿ NEWS DESK ಸೆ.25 : ಪ್ರಸ್ತುತ ನಡೆಯುತ್ತಿರುವ ಕರ್ನಾಟಕ ರಾಜ್ಯ ಸರಕಾರದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಗಣತಿಯಲ್ಲಿ ಹಾಗೂ ಮುಂದೆ ನಡೆಯಲಿರುವ ಕೇಂದ್ರ ಸರಕಾರದ ಜಾತಿ ಗಣತಿಯ ಸಂದರ್ಭ ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು, ಉಪಜಾತಿ ಕಾಲಂನಲ್ಲಿ ಅರೆಭಾಷೆ ಗೌಡ, ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ಸರ್ವ ಅರೆಭಾಷೆ ಗೌಡರು ನಮೂದಿಸಬೇಕೆಂದು ಯಲಹಂಕ ಗೌಡ ಸಮಾಜದ ಅಧ್ಯಕ್ಷ ಕುಂಞಳಿಯನ ಅಜಿತ್ ಕುಮಾರ್ ಅವರು ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಉಪಜಾತಿಯಲ್ಲಿ ಅರೆಭಾಷೆ ಗೌಡ ಎಂಬುವುದನ್ನು ಪ್ರತ್ಯೇಕ ಕಾಲಂನಲ್ಲಿ ಸೇರಿಸಬೇಕೆಂದು ಕೊಡಗು ಗೌಡ ಸಮಾಜಗಳ ಒಕ್ಕೂಟ ಸಲ್ಲಿಸಿದ ಮನವಿಗೆ ಸರಕಾರ ಸ್ಪಂದಿಸಿದೆ. ಉಪಜಾತಿ ಎನ್ನುವ ಕಾಲಂನಲ್ಲಿ ಅರೆಭಾಷೆ ಗೌಡ ಎಂದು ಸೂಚಿಸಬೇಕು. ಅರೆಭಾಷೆ ಗೌಡ ಸಮುದಾಯ ಬಾಂಧವರು ಈ ಎಲ್ಲಾ ವಿವರಗಳನ್ನು ಗಮನದಲ್ಲಿರಿಸಿಕೊಂಡು ಕಡ್ಡಾಯವಾಗಿ ರಾಜ್ಯ ಮತ್ತು ಕೇಂದ್ರದ ಗಣತಿಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಮೂಲತಃ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿದ್ದಾರೆ. ಆದರೆ…
ಮಡಿಕೇರಿ NEWS DESK ಸೆ.25 : ಕೊಡವರು ದೊಡ್ಡ ಧಾರ್ಮಿಕ ಗುಂಪಿನೊಂದಿಗೆ ವಿಲೀನಗೊಂಡು ಗುರುತಿಸಿಕೊಳ್ಳುವ ಮೂಲಕ ಎಲ್ಲಾ ಸರಕಾರಿ ದಾಖಲೆಗಳಲ್ಲಿ ‘ಕೊಡವ’ ಎಂಬ ಹೆಗ್ಗುರುತನ್ನು ಉಳಿಸಿಕೊಳ್ಳಲು ವಿಫಲವಾದರೆ ಅದು ಕೊಡವರ ಪವಿತ್ರ, ಧಾರ್ಮಿಕ ಸಂಸ್ಕಾರ ಬಂದೂಕು ಹಕ್ಕುಗಳ ಮುಂದುವರಿಕೆಗೆ ಹಾನಿಯಾಗುವ ಸಾಧ್ಯತೆಗಳಿರುವುದರಿಂದ ಶಸ್ತ್ರಾಸ್ತ್ರ (ತಿದ್ದುಪಡಿ) ಕಾಯ್ದೆಯಲ್ಲಿನ ಸಂಭಾವ್ಯ ಬದಲಾವಣೆಯ ಪರಿಣಾಮಗಳನ್ನು ಕೊಡವರು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೇಂದ್ರ ಸರಕಾರವು ಜಾರಿಗೆ ತಂದ ಶಸ್ತ್ರಾಸ್ತ್ರ (ತಿದ್ದುಪಡಿ) ಕಾಯ್ದೆ, 2019, ಕೊಡವ ಶಸ್ತ್ರಾಸ್ತ್ರ ವಿನಾಯಿತಿ 2029 ರವರೆಗೆ ಮಾತ್ರ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸುತ್ತದೆ. ಈ ಪರಿಸ್ಥಿತಿಯಲ್ಲಿ ಕೊಡವರು ತಮ್ಮ ಹಕ್ಕುಗಳ ಕುರಿತು ಆಳವಾಗಿ ಚಿಂತಿಸಿ ಜನಗಣತಿಯಲ್ಲಿ ಎಚ್ಚರದಿಂದಿರುವ ಅಗತ್ಯವಿದೆ ಎಂದು ಸಲಹೆ ನೀಡಿದ್ದಾರೆ. ಕೊಡವ ಸಮುದಾಯವು ಬಂದೂಕು ಮಾಲೀಕತ್ವದ ವಿಶಿಷ್ಟ ಸಾಂಸ್ಕೃತಿಕ ಸಂಪ್ರದಾಯವನ್ನು ಹೊಂದಿದೆ ಮತ್ತು ಶಸ್ತಾçಸ್ತçಗಳನ್ನು ಹೊಂದುವ ಅವರ ಹಕ್ಕು ಅವರ ಗುರುತಿನ ಅವಿಭಾಜ್ಯ ಅಂಗವಾಗಿದೆ. ವಿನಾಯಿತಿ…
ಮಡಿಕೇರಿ NEWS DESK ಸೆ.25 : ಮಂಡ್ಯದಲ್ಲಿ 3 ದಿನಗಳ ಕಾಲ ನಡೆದ 42ನೇ ಓಟೋರಿನೋಲಾರಿಂಗೋಲಜಿಸ್ಟ್ ಆಫ್ ಇಂಡಿಯಾ ರಾಜ್ಯ ಸಮ್ಮೇಳನದಲ್ಲಿ ಕೊಡಗಿನ ಸಂಸ್ಕೃತಿ ಸಿರಿ ಟ್ರಸ್ಟ್ ನಿಂದ ನಡೆದ ಕೊಡವ ಸಂಸ್ಕೃತಿಯ ನೃತ್ಯ ಆಕರ್ಷಿಸಿತು. ಮಂಡ್ಯದ ಅಮರಾವತಿ ಹೋಟೆಲ್ ಸಭಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನರಿ ಮಂಗಲ, ಉಮ್ಮತ್ತಾಟ್, ಗೆಜ್ಜೆ ತಂಡ್, ಪುತ್ತರಿ, ಉರ್ ಟಿ ಕೊಟ್ಟ್ ಆಟ್ ಹಾಗೂ ಕೊಡವ ವಾಲಗ ಕಾರ್ಯಕ್ರಮ ಅಗತ್ಯ ಮಾಹಿತಿಯೊಂದಿಗೆ ನಡೆಯಿತು. ಕೊಡವ ಸಾಂಪ್ರದಾಯಿಕ ಸೀರೆ, ಬಿಳಿ ಮತ್ತು ಕಪ್ಪು ಕುಪ್ಯಾಧಾರಿಗಳು ಉತ್ತಮ ನೃತ್ಯ ಪ್ರದರ್ಶನ ನೀಡಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ವೈದ್ಯರುಗಳ ಪ್ರಸಂಸೆಗೆ ಪಾತ್ರರಾದರು. ಕೊಡಗಿನ ನಟಿ, ನಿರ್ಮಾಪಕಿ, ಕವಿಯತ್ರಿ ಹಾಗೂ ಸಂಸ್ಕೃತಿ ಸಿರಿ ಟ್ರಸ್ಟ್ ನ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್ ಅವರು ನೃತ್ಯರೂಪಕದ ನೇತೃತ್ವ ವಹಿಸಿ ಕೊಡವ ಸಂಸ್ಕೃತಿ ಮತ್ತು ನೃತ್ಯಬಗೆಯ ವಿವರ ನೀಡಿದರು. ನಡೆದ ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಉಪಾಧ್ಯಕ್ಷೆ ಕೋಲೆಯಂಡ ನಿಶಾ ಮೋಹನ್, ಗೌರವ ಕಾರ್ಯದರ್ಶಿ…
ಮಡಿಕೇರಿ ಸೆ.25 NEWS DESK : 66/11ಕೆ.ವಿ ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಶನಿವಾರಸಂತೆ ಶಾಖಾ ವ್ಯಾಪ್ತಿಯ ಗುಡುಗಳಲೆ ಮತ್ತು ಮಧ್ಯಪೇಟೆಯಲ್ಲಿ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಸೆಪ್ಟೆಂಬರ್, 26 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ಗುಡುಗಳಲೆ ಹಾಗೂ ಮಧ್ಯಪೇಟೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಸೆ.25 NEWS DESK : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸಲು ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗಾಗಿ ಸೇವಾ ಮನೋಭಾವನೆಯಿಂದ ಕೆಲಸ ನಿರ್ವಹಿಸಲು ಹಾಗೂ ಕಾನೂನು ಸೇವಾ ಕೇಂದ್ರ ಮತ್ತು ಸಾಮಾನ್ಯ ಜನರ ನಡುವೆ ಸೇತುವೆಯಾಗಿ ಕೆಲಸ ನಿರ್ವಹಿಸಲು ಅರ್ಜಿ ಸಲ್ಲಿಸಬಹುದು. ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗಾಗಿ ಶಿಕ್ಷಕರು, ನಿವೃತ್ತ ಶಿಕ್ಷಕರು, ಮಾಜಿ ಗ್ರಾಮ ಪಂಚಾಯಿತಿ ಸದಸ್ಯರು, ನಿವೃತ್ತ ಸರ್ಕಾರಿ ನೌಕರರು, ಹಿರಿಯ ನಾಗರಿಕರು, ಕಾನೂನು ಕ್ಷೇತ್ರದಲ್ಲಿ ತೊಡಗಿಸಿಕೊಂಡ ಸಾಮಾಜಿಕ ಕಾರ್ಯಕರ್ತರು, ಎಂಎಸ್‍ಡಬ್ಲ್ಯೂ ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆಯರು, ಕಾನೂನು ವಿದ್ಯಾರ್ಥಿಗಳು, ರಾಜಕೀಯ ಪಕ್ಷಕ್ಕೆ ಸೇರದ ಸಂಘದವರು, ಸ್ವ ಸಹಾಯ ಮಹಿಳಾ ಗುಂಪಿನವರು, ಮಾಜಿ ಸೈನಿಕರು ಹಾಗೂ ಸೈನಿಕರ ಪತ್ನಿಯರು ಅಥವಾ ವಯಸ್ಕ ಮಕ್ಕಳು ಅರ್ಜಿ ಸಲ್ಲಿಸಬಹುದು. ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗಾಗಿ ಸಮಿತಿ…






