ಮಡಿಕೇರಿ ಸೆ.25 NEWS DESK : ಸರ್ಕಾರದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಕೊಡವ ಭಾಷಿಕರು ಜಾತಿಯಲ್ಲಿ ಕೊಡವ ಎಂದು, ಉಪ ಜಾತಿಯಲ್ಲಿ 21 ಸಮಾಜಗಳು ತಮ್ಮ ತಮ್ಮ ಉಪಜಾತಿ, ಧರ್ಮದಲ್ಲಿ ‘ಕೊಡವ’ ಎಂದು ನಮೂದಿಸುವಂತಾಗಬೇಕು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಕರೆ ನೀಡಿದ್ದಾರೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಮೂರ್ನಾಡು ಕೊಡವ ಸಮಾಜ ಇವರ ಸಹಯೋಗದಲ್ಲಿ ಮೂರ್ನಾಡು ಕೊಡವ ಸಮಾಜದಲ್ಲಿ ಗುರುವಾರ ನಡೆದ ‘ಕೊಡವಾಮೆರ ಬಟ್ಟೆ-ಬೊಳಿ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಸ್ಕೃತಿಯು ಧರ್ಮದ ಮೂಲ ಬೇರಾಗಿದೆ. ಧರ್ಮ ಮತ್ತು ಸಂಸ್ಕೃತಿಯನ್ನು ಬೇರೆ ಬೇರೆಯಾಗಿ ವಿಂಗಡಿಸಲು ಅಸಾಧ್ಯ. ಆ ದಿಸೆಯಲ್ಲಿ ಕೊಡವ ಧರ್ಮ ಎಂದು ನಮೂದಿಸುವಂತಾಗಬೇಕು ಎಂದು ಪ್ರತಿಪಾದಿಸಿದರು. ಕೊಡವ ಭಾಷಿಕರ ಅಸ್ಮಿತೆಯನ್ನು ಉಳಿಸುವಲ್ಲಿ ಕೊಡವ ಭಾಷಿಕರು ಮುಂದಾಗಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸುವಂತೆ ಮನವಿ ಮಾಡಿದರು. ಕೊಡವ ಭಾಷಿಕರಲ್ಲಿ 21 ಸಮಾಜಗಳು ಇದ್ದು, ಎಲ್ಲರೂ ಒಟ್ಟುಗೂಡಿ ಕೊಡವ…
ಲೇಖಕ: admin
ಮಡಿಕೇರಿ ಸೆ.25 NEWS DESK : ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ದೇಶಭಕ್ತಿ ಮತ್ತು ದೇಶ ರಕ್ಷಣೆಯ ಕುರಿತು ದೃಢ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲ ಸಚಿವ ಎಂ.ಸುರೇಶ್ ಕರೆ ನೀಡಿದ್ದಾರೆ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಎನ್‍ಸಿಸಿ ಘಟಕದ ವತಿಯಿಂದ ‘ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣಲಕ್ಷಣಗಳು’ ಎಂಬ ವಿಷಯದ ಕುರಿತು ನಡೆದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಎನ್‍ಸಿಸಿಗೆ ಸೇರುವುದರ ಮೂಲಕ ಶಿಸ್ತನ್ನು ಅಳವಡಿಸಿಕೊಂಡು ಸಮಾಜದಲ್ಲಿ ಉತ್ತಮ ನಾಗರೀಕರಾಗಿ ಬದುಕಬೇಕು. ತಮ್ಮ ಭವಿಷ್ಯದ ಗುರಿಯನ್ನು ತಲುಪಬೇಕಾದರೆ ಶ್ರಮ ಮತ್ತು ಹೋರಾಟ ಮನೋಭಾವ ಹೊಂದಿರಬೇಕು ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದ ಐಕ್ಯುಎಸಿ ಹಾಗೂ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಕೆ.ಪಿ.ನಾಗರಾಜು ಅವರು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು, ಸಂಯಮ, ಧೈರ್ಯ, ಕ್ರೀಡಾ ಸ್ಫೂರ್ತಿ, ಛಲ ಮತ್ತು ನಾಯಕತ್ವದ ಗುಣಗಳನ್ನು ಅಳವಡಿಸಿಕೊಂಡರೆ ಸಮರ್ಥ ನಾಯಕನಾಗಬಹುದು ಎಂದು ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ…
ಸೋಮವಾರಪೇಟೆ, ಸೆ.25 NEWS DESK : ಸಮಾಜದಲ್ಲಿ ಮೌಢ್ಯಾಚರಣೆ ಹೆಸರಿನಲ್ಲಿ ಕೆಲವು ದೇವಮಾನವ ರೆಂಬ ಸೋಗಿನಲ್ಲಿ ಜನರಿಗೆ ಮೋಸ, ವಂಚನೆ ಮಾಡುತ್ತಿರುವುದು ಕಂಡುಬರುತ್ತಿದೆ. ಕೆಲವು ಮುಗ್ಧರು ಇದನ್ನು ನಂಬಿ ಶೋಷಣೆಗೆ ಒಳಗಾಗು ತ್ತಿದ್ದಾರೆ. ಇಂತಹ ಶೋಷಣೆಯನ್ನು ತಡೆಗಟ್ಟುವ ದಿಸೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಶಿಕ್ಷಣ ಸಂಸ್ಥೆಗಳು ಮತ್ತು ಪ್ರಗತಿಪರ ಸಂಘಟನೆಗಳು ಮುಂದಾಗಬೇಕಿದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಸದಸ್ಯ ಹಾಗೂ ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಕನ್ನಡ ಭಾಷಾ ಅಧ್ಯಾಪಕ ಎಂ.ಎನ್.ವೆಂಕಟನಾಯಕ್ ಹೇಳಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಮಾದಾಪುರ ಶ್ರೀಮತಿ ಡಿ.ಚನ್ನಮ್ಮ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ( ಎನ್‍ಎಸ್‍ಎಸ್ ) ಘಟಕದ ವತಿಯಿಂದ “ನಶಮುಕ್ತ ಭಾರತ ಅಭಿಯಾನ:2025” ಎಂಬ ಕೇಂದ್ರ ವಿಷಯದಡಿ ಗರಗಂದೂರು ಗ್ರಾಮದಲ್ಲಿ ಎನ್‍ಎಸ್‍ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಏರ್ಪಡಿಸಿದ್ದ ಪವಾಡ ರಹಸ್ಯ ಬಯಲು ಕಾರ್ಯಕ್ರಮ…
ಪುತ್ತೂರು ಸೆ.25 NEWS DESK : ರಾಷ್ಟ್ರೀಯ ಸೇವಾ ಯೋಜನೆಯು ವಿಫುಲ ಅವಕಾಶಗಳ ಆಗರವಾಗಿದೆ, ಇದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ತನ್ನನ್ನು ತಾನು ಎತ್ತರಿಸಿಕೊಳ್ಳುವ ಜತೆಯಲ್ಲಿ ರಾಷ್ಟ್ರ ಸೇವೆಯಲ್ಲಿಯೂ ತೊಡಗಿಸಿಕೊಳ್ಳಬಹುದು ಎಂದು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಹಾಗೂ ರಾಷ್ಟ್ರೀಯ ಸೇವಾಯೋಜನಾಧಿಕಾರಿ ಡಾ.ಕೆ.ಚಂದ್ರಶೇಖರ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಯೂತ್ ರೆಡ್ ಕ್ರಾಸ್ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯ ಪ್ರಯುಕ್ತ ಸಾವರ್ಕರ್ ಸಬಾಭವನದಲ್ಲಿ ನಡೆದ ಸಮಾರಂಭದಲ್ಲಿ ಯುವಜನತೆ ಮತ್ತು ಸಾಮಾಜಿಕ ಸೇವೆ ಎನ್ನುವ ವಿಷಯದ ಬಗ್ಗೆ ಮಾತಾಡಿದರು. ಶೈಕ್ಷಣಿಕ ವ್ಯವಸ್ಥೆಯಲ್ಲಿ ಕುಸಿತಗಳಾದರೆ ರಾಷ್ಟ್ರದ ಬಲವೇ ಕಡಿಮೆಯಾದಂತೆ ಆದುದರಿಂದ ಮಕ್ಕಳಿಗಾಗಲೀ ವಿದ್ಯಾರ್ಥಿಗಳಿಗಾಗಲೀ ಸರಿಯಾದ ನೈತಿಕ ಶಿಕ್ಷಣವನ್ನು ನೀಡಬೇಕು ಎಂದರು. ಯಾವುದೇ ಕೆಲಸವನ್ನು ಪ್ರಾರಂಭಿಸುವ ಮೊದಲು ಪೂರ್ವ ತಯಾರಿ ಅಗತ್ಯ. ಅದರ ಒಳಿತು ಕೆಡುಕುಗಳನ್ನು ತಿಳಿದುಕೊಂಡರೆ ಯಶಸ್ಸು ಗಳಿಸುವುದು ಸಾಧ್ಯ ಎಂದರು.…
ಸೋಮವಾರಪೇಟೆ ಸೆ.25 NEWS DESK : ಪೌರ ಕಾರ್ಮಿಕರ ಸೇವೆ ಅನನ್ಯವಾಗಿದ್ದು, ಅವರ ಸೇವೆಗೆ ಬೆಲೆಕಟ್ಟಲು ಸಾಧ್ಯವಿಲ್ಲ ಎಂದು ಪಟ್ಟಣದ ವಿರಕ್ತ ಮಠದ ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು. ಸೋಮವಾರಪೇಟೆ ಪಟ್ಟಣ ಪಂಚಾಯ್ತಿ ಆವರಣದಲ್ಲಿ ಪೌರಕಾರ್ಮಿಕರನ್ನು ಭೇಟಿ ಮಾಡಿ, ಪೌರಕಾರ್ಮಿಕರ ದಿನಾಚರಣೆಯ ಶುಭಾಶಯ ತಿಳಿಸಿ ಅವರ ಯೋಗಕ್ಷೇಮ ವಿಚಾರಿಸಿದರು. ನಿಮ್ಮ ವೃತ್ತಿಯ ಬಗ್ಗೆ ಹೆಮ್ಮೆ ಇದೆ,ಕೀಳಿರಿಮೆ ಬೇಡ ಯಾಕೆಂದರೆ ಯಾರು ಮಾಡಲು ಮುಂದೆ ಬರದಂತಹ ಸೇವೆಯನ್ನು ನೀವು ಮಾಡುತ್ತಿದ್ದೀರಿ ಎಂದು ಹೆಮ್ಮೆ ವ್ಯಕ್ತಪಡಿಸಿದರು. ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಎಸ್.ಮಹೇಶ್ ಪೌರ ಕಾರ್ಮಿಕರಿಗೆ ಪ್ರತಿವರ್ಷದಂತೆ ಸಿಹಿ ವಿತರಿಸಿ ಶುಭ ಹಾರೈಸಿದರು. ಈ ಸಂದರ್ಭ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್,ಅಭಿಯಂತರ ಹೇಮಂತ್ ಕುಮಾರ್, ಆರೋಗ್ಯ ನಿರೀಕ್ಷಕ ಜಾಸಿಂಖಾನ್, ಸಿಬ್ಬಂದಿ ಜೀವನ್, ಪೌರಕಾರ್ಮಿಕ ಸಂಘದ ಅಧ್ಯಕ್ಷ ಮಂಜುನಾಥ್ ಹಾಗೂ ಮುಂತಾದವರು ಹಾಜರಿದ್ದರು.
ಮಡಿಕೇರಿ ಸೆ.25 NEWS DESK : ಅತ್ಯಂತ ಪ್ರಭಾವಶಾಲಿಯಾದ ಸಾಹಿತ್ಯ ಕ್ಷೇತ್ರ ಸಾಮಾಜಿಕ ಬದಲಾವಣೆಗಳಿಗೂ ಪ್ರೇರಕ ಶಕ್ತಿಯಾಗಿದೆ ಎಂದು ಸಮಾಜ ಸೇವಕ ಹಾಗೂ ಕರ್ನಾಟಕ ರಾಜ್ಯ ಒಕ್ಕಗಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಅವರು ಅಭಿಪ್ರಾಯಪಟ್ಟಿದ್ದಾರೆ. ಮಡಿಕೇರಿ ನಗರ ದಸರಾ ಸಮಿತಿ ಹಾಗೂ ಬಹುಭಾಷಾ ಕವಿಗೋಷ್ಠಿ ಸಮಿತಿ ವತಿಯಿಂದ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ನಡೆದ ‘ಬಹುಭಾಷಾ ಕವಿಗೋಷ್ಠಿ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ನಡೆಯುವ ಬಹು ಅಮೂಲ್ಯವಾದ ನೈಜ ವಿಚಾರಧಾರೆಗಳನ್ನು ಆಧರಿಸಿ ಯಾವುದೇ ಫಲಾಪೇಕ್ಷೆಗಳಿಲ್ಲದೆ ಸಾಹಿತ್ಯ ಸೃಷ್ಟಿಸಿ ಪುಸ್ತಕದ ರೂಪದಲ್ಲಿ ಹೊರತರುವುದು ಶ್ರೇಷ್ಠ ಕಾರ್ಯವಾಗಿದೆ. ಕವಿಗಳು ಸದಾ ಸಮಾಜದ ಭಾಗವಾಗಿದ್ದಾರೆ, ರಾಜಕೀಯ ರಹಿತವಾಗಿ, ಭ್ರಷ್ಟಾಚಾರದ ಸೋಂಕಿಲ್ಲದೆ, ಪ್ರಶಾಂತವಾದ ಮನಸ್ಸು ಮತ್ತು ಆಗಾಧವಾದ ಕಲ್ಪನಾಶೀಲತೆ ಹೊಂದಿದವರಾಗಿದ್ದಾರೆ. ನಮ್ಮ ಸುತ್ತಮುತ್ತಲ ಪ್ರಾಕೃತಿಕ ವೈಭವ ಮತ್ತು ಆಗುಹೋಗುಗಳನ್ನು ಅಕ್ಷರ ರೂಪಕ್ಕಿಳಿಸುವ ಸಾಹಿತ್ಯ ಕಲೆ ಅದ್ಭುತವೆಂದು ಬಣ್ಣಿಸಿದರು. ಸೈನಿಕರು, ಪತ್ರರ್ಕಕರ್ತರು, ಕವಿಗಳು ಹಾಗೂ ಆರಕ್ಷಕರು ತಮ್ಮದೇ ಆದ ಕಾರ್ಯಕ್ಷೇತ್ರದ ಮೂಲಕ ನಾಡಿನ ಅಖಂಡತೆಯನ್ನು ಕಾಯ್ದುಕೊಳ್ಳುತ್ತಿದ್ದಾರೆ.…
ಮಡಿಕೇರಿ ಸೆ.25 NEWS DESK : ಸೆಪ್ಟೆಂಬರ್ 22 ರಿಂದ ಅ.2 ರವರೆಗೆ 2025 ನೇ ಸಾಲಿನ ದಸರಾ ಉತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧ ಕಡೆಗಳಿಂದ ದೇಶಿಯ ಹಾಗೂ ವಿದೇಶಿಯ ಪ್ರವಾಸಿಗರು/ ಸಾರ್ವಜನಿಕರು ಜಿಲ್ಲೆಗೆ ಆಗಮಿಸಲಿದ್ದಾರೆ. ಪ್ರವಾಸಿಗರು ತಂಗುವ ಹೋಂ-ಸ್ಟೇ/ ರೆಸಾರ್ಟ್/ ಹೋಟೆಲ್-ಲಾಡ್ಜ್ ಗಳಲ್ಲಿ ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ರೆಸಾರ್ಟ್/ ಹೋಟೆಲ್/ ಹೊಂ-ಸ್ಟೇ ಮಾಲೀಕರಿಗೆ ಸೂಚಿಸುವಂತೆ ಉಲ್ಲೇಖಿತ ಸಭೆಯಲ್ಲಿ ತಿರ್ಮಾನಿಸಲಾಗಿದೆ. ಅದರಂತೆ ಜಿಲ್ಲೆಯ ಎಲ್ಲ ರೆಸಾರ್ಟ್/ ಹೋಟೆಲ್/ ಹೋಂ-ಸ್ಟೇ ಮಾಲೀಕರು ಕ್ರಮವಹಿಸುವುದು. ಅತಿಥಿಗಳು ಬಂದಾಗ ರಿಜಿಸ್ಟರ್ ಪುಸ್ತಕದಲ್ಲ್ಲಿ ಆಗಮಿಸಿರುವ ಎಲ್ಲ ಪ್ರವಾಸಿಗರ ಹೆಸರು, ಆಧಾರ್ ಕಾರ್ಡ್, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಾಹನ ಸಂಖ್ಯೆ ಪಡೆಯುವುದು ಹಾಗೂ ವಿದೇಶಿಯರು ಬಂದಾಗ ಅವರ ವೀಸಾ ಪಾಸ್ ಪೋರ್ಟ್/ ವಿಮಾನ ಟಿಕೆಟ್ ಪರಿಶೀಲಿಸಿ ರಿಜಿಸ್ಟರ್‍ನಲ್ಲಿ ಕಡ್ಡಾಯವಾಗಿ ನಮೂದಿಸತಕ್ಕದ್ದು. ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಸಂಪೂರ್ಣ ಮಾಹಿತಿ ಹಾಗೂ ಮಾರ್ಗ ನಕ್ಷೆಯನ್ನು ತಿಳಿಸುವುದು ಪ್ರವಾಸಿ ತಾಣಗಳು ತೆರೆಯುವ ಹಾಗೂ ಮುಚ್ಚುವ…
ವಿರಾಜಪೇಟೆ ಸೆ.25 NEWS DESK : ವಿರಾಜಪೇಟೆಯ ಶಿವಕೇರಿಯಲ್ಲಿರುವ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ವಿಶೇಷ ಪೂಜೆ ನಡೆಯಿತು. ಉತ್ಸವದ ಅಂಗವಾಗಿ ರಾತ್ರಿ ದೇವರ ನೃತ್ಯಬಲಿ, ಹಾಗೂ ಪ್ರದಕ್ಷಿಣೆ ನೆರವೇರಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪೂಜೆ, ಪ್ರಾರ್ಥನೆ ಸಲ್ಲಿಸಿದರು. ದೇವಾಲಯದ ವತಿಯಿಂದ ನೆರೆದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು.
ಮಡಿಕೇರಿ NEWS DESK ಸೆ.25 : ಕರ್ನಾಟಕ ರಾಜ್ಯ ಸರಕಾರದಿಂದ ಪ್ರಸ್ತುತ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮತ್ತು ಜಾತಿ ಜನಗಣತಿಯಲ್ಲಿ ಹಾಗೂ ಮುಂದೆ ಕೇಂದ್ರ ಸರಕಾರ ನಡೆಸುವ ಗಣತಿಯ ಸಂದರ್ಭ ಜಾತಿಯ ಕಾಲಂನಲ್ಲಿ ಸರ್ವ ಅರೆಭಾಷೆ ಗೌಡರು GOWDA (ಗೌಡ) ಎಂದು, ಉಪಜಾತಿ ಕಾಲಂನಲ್ಲಿ ಅರೆಭಾಷೆ ಗೌಡ, ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಬೆಂಗಳೂರು ಕೊಡಗು ಗೌಡ ಸಮಾಜದ ಅಧ್ಯಕ್ಷ ಕೇಕಡ ನಾಣಯ್ಯ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಸ್ತುತ ರಾಜ್ಯ ಸರಕಾರ ನಡೆಸುತ್ತಿರುವ ಮತ್ತು ಮುಂದೆ ಕೇಂದ್ರ ಸರಕಾರ ನಡೆಸಲಿರುವ ಜಾತಿ ಜನಗಣತಿಯಲ್ಲಿ ಕೊಡಗಿನ ಅರೆಭಾಷೆ ಗೌಡರು ಕಡ್ಡಾಯವಾಗಿ ಜಾತಿಯ ಕಾಲಂನಲ್ಲಿ ಗೌಡ ಎಂದು ನಮೂದಿಸಬೇಕು ಎಂದು ತಿಳಿಸಿದ್ದಾರೆ. ರಾಜ್ಯ ಸರಕಾರ ಈಗಾಗಲೇ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯ ಸಮೀಕ್ಷೆಯನ್ನು ಆರಂಭಿಸಿದೆ. ಮುಂದಿನ ವರ್ಷ ಕೇಂದ್ರ ಸರಕಾರ ಕೂಡ ಗಣತಿ ಆರಂಭಿಸಲಿದೆ. ಉಪಜಾತಿಯಲ್ಲಿ ಅರೆಭಾಷೆ ಗೌಡ ಎಂಬುವುದನ್ನು ಪ್ರತ್ಯೇಕ…
ಸೋಮವಾರಪೇಟೆ NEWS DESK ಸೆ.25 : ಸೋಮವಾರಪೇಟೆ ತಾಲ್ಲೂಕಿನ ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಹಲವು ಕಲ್ಲುಗಣಿಗಾರಿಕೆ ಅಕ್ರಮವಾಗಿದೆ. ಅವೈಜ್ಞಾನಿಕ ನಿರ್ವಹಣೆಯಿಂದಾಗಿ ವಾತಾವರಣ ಕಲುಷಿತಗೊಂಡು ಗ್ರಾಮದ ಶೇ.90ರಷ್ಟು ಮಂದಿಗೆ ಶ್ವಾಸಕೋಶದ ತೊಂದರೆ ಎದುರಾಗಿದೆ ಎಂದು ಹೊಸಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ. ಕಲ್ಲುಗಣಿಗಾರಿಕೆಯನ್ನು ತಕ್ಷಣ ನಿಲ್ಲಿಸಬೇಕು, ಇಲ್ಲದಿದ್ದಲ್ಲಿ ದಯಾಮರಣ ನೀಡಿ ಎಂದು ಗ್ರಾಮಸ್ಥರು ವಿವಿಧ ಇಲಾಖಾ ಅಧಿಕಾರಿಗಳ ಎದುರು ಅಸಹಾಯಕತೆ ವ್ಯಕ್ತಪಡಿಸಿದರು. ತಾಲ್ಲೂಕು ತಹಶೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ, ವಿವಿಧ ಇಲಾಖಾಧಿಕಾರಿಗಳ ಸಮ್ಮುಖದಲ್ಲಿ ಹೊಸಳ್ಳಿ ಗ್ರಾಮದಲ್ಲಿ ನಡೆದ ಸಭೆಯಲ್ಲಿ, ಕಲ್ಲುಗಣಿಗಾರಿಕೆಯ ವಿರುದ್ಧ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಲ್ಲುಗಣಿಗಾರಿಕೆಯಿಂದ ಜನಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದ್ದು, ಭಾರೀ ಸಮಸ್ಯೆ ಸೃಷ್ಟಿಯಾಗಿದೆ. ಅತೀ ಹೆಚ್ಚು ಭಾರದ ವಾಹನಗಳ ಸಂಚಾರದಿಂದ ರಸ್ತೆಗಳು ಹದಗೆಟ್ಟಿವೆ. ಇಲ್ಲಿನ ಜನರ ಬದುಕು ದುಸ್ತರವಾಗಿದೆ ಎಂದು ಗ್ರಾಮಸ್ಥರು ಅಧಿಕಾರಿಗಳೆದುರು ಅಳಲು ತೋಡಿಕೊಂಡರು. ಅಕ್ರಮ ಕಲ್ಲು ಗಣಿಗಾರಿಕೆ ಬಗ್ಗೆ ಕಳೆದ ಹಲವು ವರ್ಷಗಳಿಂದ ಸಂಬಂಧಪಟ್ಟ ಇಲಾಖೆಗೆ ದೂರು ಸಲ್ಲಿಸಿದ್ದರೂ ಇಲ್ಲಿಯವರೆಗೆ ಯಾವುದೇ ಕ್ರಮ…






