ಲೇಖಕ: admin

ಮಡಿಕೇರಿ NEWS DESK ಸೆ.25 : ಬ್ರೇಕ್ ವಿಫಲಗೊಂಡ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ವೊಂದು ಓಮ್ನಿ ವಾಹನಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಮಡಿಕೇರಿ ಸಮೀಪ ತಾಳತ್ಮನೆ ತಿರುವಿನಲ್ಲಿ ಬುಧವಾರ ರಾತ್ರಿ ನಡೆದಿದೆ. ಮೈಸೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಇಳಿಜಾರಿನಲ್ಲಿ ಬ್ರೇಕ್ ವಿಫಲಗೊಂಡು ಮಡಿಕೇರಿ ಕಡೆಗೆ ಬರುತ್ತಿದ್ದ ಓಮ್ನಿಗೆ ಡಿಕ್ಕಿಯಾಗಿ ನಂತರ ಮಗುಚಿಕೊಂಡಿದೆ. ಓಮ್ನಿಯಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಂಗಳೂರು ಮೂಲದ ಗಾಯಾಳುಗಳು ದಸರಾ ವ್ಯಾಪಾರಕ್ಕೆಂದು ಮಡಿಕೇರಿಗೆ ಬಂದಿದ್ದರು ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ 17 ಕ್ಕೂ ಹೆಚ್ಚು ಪ್ರಯಾಣಿಕರು ಹಾಗೂ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಮಡಿಕೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಲ್ಟಿಯಾದ ಬಸ್ ನ್ನು ಕ್ರೇನ್ ಮೂಲಕ ಮೇಲೆತ್ತಲಾಗಿದೆ. ಅಪಘಾತದಿಂದ ಓಮ್ನಿ ಜಖಂಗೊಂಡಿದೆ.

Read More

ಮಡಿಕೇರಿ NEWS DESK ಸೆ.25 : ಪ್ರಸ್ತುತ ನಡೆಯುತ್ತಿರುವ ಕರ್ನಾಟಕ ರಾಜ್ಯ ಸರಕಾರದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಗಣತಿಯಲ್ಲಿ ಹಾಗೂ ಮುಂದೆ ನಡೆಯಲಿರುವ ಕೇಂದ್ರ ಸರಕಾರದ ಜಾತಿ ಗಣತಿಯಲ್ಲಿ ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು, ಉಪಜಾತಿ ಕಾಲಂನಲ್ಲಿ ಅರೆಭಾಷೆ ಗೌಡ, ಮಾತೃ ಭಾಷೆ ಅರೆಭಾಷೆ ಎಂದು ಎಲ್ಲಾ ಅರೆಭಾಷೆ ಗೌಡರು ನಮೂದಿಸಬೇಕೆಂದು ಕೊಡಗು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಅಮೆ ದಮಯಂತಿ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮೂಲತಃ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿದ್ದಾರೆ. ಆದರೆ ಅರೆಭಾಷೆ ಗೌಡರ ಶೈಕ್ಷಣಿಕ ಮತ್ತು ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ ಗೌಡ ಎಂದೇ ನಮೂದಾಗಿರುವುದರಿಂದ ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಮುದಾಯದ ಸಭೆಗಳನ್ನು ನಡೆಸಿ, ಕೊಡಗಿನ ಎಲ್ಲಾ ಗೌಡ ಸಮಾಜಗಳೊಂದಿಗೆ ಚರ್ಚಿಸಿ ಗಣತಿ ಸಂದರ್ಭ GOWDA (ಗೌಡ) ಎಂದು ನಮೂದಿಸಲು ಕೊಡಗು ಗೌಡ…

Read More

ಮಡಿಕೇರಿ ಸೆ.25 NEWS DESK  : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀದಂಡಿನ ಮಾರಿಯಮ್ಮ ದೇವಿಗೆ ದಸರಾದ ನಾಲ್ಕನೇ ದಿನವಾದ ಇಂದು ಕೊಲ್ಲೂರು ಶ್ರೀ ಮುಕಾಂಬಿಕೆ ದೇವಿಯ ಅಲಂಕಾರದಲ್ಲಿ ಗಮನ ಸೆಳೆಯುತ್ತಿದೆ. ನೂರಾರು ಭಕ್ತರು ಪೂಜೆ ಸಲ್ಲಿಸಿ ವಿಶೇಷ ಅಲಂಕಾರವನ್ನು ವೀಕ್ಷಿಸಿದರು. ನವರಾತ್ರಿಯ ಪ್ರಯುಕ್ತ ಶ್ರೀದಂಡಿನ ಮಾರಿಯಮ್ಮ ದೇವಾಲಯದಲ್ಲಿ ಪ್ರತಿದಿನ ವಿಶೇಷ ಅಲಂಕಾರ ಸೇವೆ ಮತ್ತು ವಿಶೇಷ ಪೂಜೆ ನಡೆಯುತ್ತಿದೆ.

Read More

ಮಡಿಕೇರಿ ಸೆ.25 NEWS DESK : ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಸೆಪ್ಟೆಂಬರ್ 26 ರಂದು ಸಂಜೆ 6 ಗಂಟೆಯಿಂದ ಸಾರ್ವಜನಿಕ ಭಕ್ತಾಧಿಗಳಿಗೆ ದಸರಾ ವಿಶೇಷ ‘ದುರ್ಗಾ ದೀಪ ನಮಸ್ಕಾರ ಪೂಜೆ’ ಏರ್ಪಡಿಸಲಾಗಿದೆ. ನಂತರ ಪ್ರಸಾದ ವಿತರಣೆ ನಡೆಯಲಿದೆ. ಭಕ್ತಾದಿಗಳು ದೇವಾಲಯದಲ್ಲಿ ನಡೆಯಲಿರುವ ಪೂಜೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗುವಂತೆ ಕೋರಿದೆ. ಪೂಜೆಯನ್ನು ಮಾಡಿಸಲು ಇಚ್ಛಿಸುವ ಭಕ್ತಾದಿಗಳು ದೇವಾಲಯದ ಕೌಂಟರ್‍ನಲ್ಲಿ ವಿಚಾರಿಸಿ, ಪೂಜೆ ರಶೀದಿಯನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಅಧ್ಯಕ್ಷರು(ಎ.ಸಿ.ಚುಮ್ಮಿ ದೇವಯ್ಯ) ಅವರ ದೂರವಾಣಿ ಸಂಖ್ಯೆ-9448899567 ನ್ನು ಸಂಪರ್ಕಿಸಬಹುದು ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

Read More

ಮಡಿಕೇರಿ ಸೆ.25 NEWS DESK : ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿ ಇರುವ ಉಪ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾದ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಿದ ಪ್ರತಿ ಸಮೀಕ್ಷಾದಾರರಿಗೆ ಪ್ಲಾಟ್ ದರವಾಗಿ ರೂ.5000 ಗಳ ಸಂಭಾವನೆ ಹಾಗೂ ಪ್ರತಿ ಪರಿಶಿಷ್ಟ ಜಾತಿಯ ಕುಟುಂಬದ ಸಮೀಕ್ಷೆಗೆ ರೂ.100 ರಂತೆ ಮೊತ್ತವನ್ನು ನಿಗಧಿಪಡಿಸಲಾಗಿತ್ತು. ಅದರಂತೆ ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಅವರು ಪ್ರಥಮ ಹಂತದಲ್ಲಿ ಜಿಲ್ಲೆಗೆ ಬಿಡುಗಡೆಗೊಳಿಸಿದ ರೂ.16,71,000 ಗಳಲ್ಲಿ ಮೊದಲನೇ ಕಂತಿನಲ್ಲಿ ಜಿಲ್ಲೆಯಲ್ಲಿ ಗಣತಿಕಾರ್ಯ ನಿರ್ವಹಿಸಿದ ಸಮೀಕ್ಷಾದಾರರ ಬ್ಯಾಂಕ್ ಖಾತೆಗೆ ತಲಾ ರೂ.3000 ಗಳಂತೆ ಈಗಾಗಲೇ ಪಾವತಿಸಲಾಗಿದೆ.  ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಇವರಿಂದ ಬಾಕಿ ಅನುದಾನ ಬಿಡುಗಡೆಯಾದ ಕೂಡಲೇ ಗಣತಿದಾರರಿಗೆ ಪಾವತಿಸಲು ಬಾಕಿ ಇರುವ ರೂ.2 ಸಾವಿರಗಳನ್ನು ಹಾಗೂ ಪ್ರತಿ ಪರಿಶಿಷ್ಟ ಜಾತಿಯ ಕುಟುಂಬದ ಸಮೀಕ್ಷೆಗೆ ರೂ.100 ಗಳನ್ನು ಪಾವತಿಸಲು ಕ್ರಮವಹಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ತಿಳಿಸಿದ್ದಾರೆ.

Read More

ವಿರಾಜಪೇಟೆ ಸೆ.25 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ವಿರಾಜಪೇಟೆ ತಾಲೂಕಿನ ಕಾನೂರು ವಲಯದ ಪೊನ್ನಪ್ಪಸಂತೆ ಕಾರ್ಯಕ್ಷೇತ್ರದ ಕಲ್ಲುಗುಡ್ಡೇಶ್ವರ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಪೊನ್ನಪ್ಪಸಂತೆ ಎ.ಟಿ.ಶಂಕರ್ ಕಾರ್ಯಕ್ರಮವನ್ನು ಕುರಿತು ಮಾತನಾಡಿ ಕ್ಷೇತ್ರದ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆಯನ್ನ ವ್ಯಕ್ತಪಡಿಸಿ ಮಹಿಳೆಯರ ಅಭಿವೃದ್ಧಿಗೆ ಸ್ವಾವಲಂಬಿ ಬದುಕನ್ನು ನಡೆಸಲು ಉತ್ತಮವಾದ ಕಾರ್ಯಕ್ರಮದ ಆಯೋಜನೆ ಮಾಡುತ್ತಿದ್ದು, ಎಲ್ಲರಿಗೂ ಶುಭ ಹಾರೈಸಿದರು. ಒಕ್ಕೂಟದ ಅಧ್ಯಕ್ಷರು ಹಾಗೂ ಕೇಂದ್ರದ ಸದಸ್ಯರಾದ ಶೀನಾ ಅವರು ಮಾತನಾಡಿ ನಾವು ಜ್ಞಾನ ವಿಕಾಸ ಕಾರ್ಯಕ್ರಮಗಳಿಂದ ಅತ್ಯುತ್ತಮವಾದ ಮಾಹಿತಿಗಳನ್ನು ತಿಳಿದುಕೊಂಡಿದ್ದೇವೆ. ಆರೋಗ್ಯ, ಕಾನೂನಿನ, ಶಿಕ್ಷಣ, ಕುಟುಂಬ ನಿರ್ವಹಣೆ ಸ್ವಉದ್ಯೋಗಗಳು ಇನ್ನೂ ಹಲವಾರು ವಿಷಯಗಳ ಬಗ್ಗೆ ಮಾಹಿತಿಯನ್ನ ತಿಳಿದುಕೊಂಡಿದ್ದೇವೆ. ಜ್ಞಾನ ವಿಕಾಸವು ನಮಗೆ ವೇದಿಕೆಯನ್ನ ಕೊಟ್ಟಿದೆ ವಿಷಯಗಳನ್ನು ತಿಳಿದುಕೊಳ್ಳಲು ಸಹಾಯಕವಾಗಿದೆ ಎಂದರು. ಕೇಂದ್ರದ ಅಧ್ಯಕ್ಷರಾದ ಗೀತಾ ಕೇಂದ್ರದ ಸಾಧನ ವರದಿಯನ್ನು ಮಂಡನೆ ಮಾಡಿದರು. ಕಾರ್ಯಕ್ರಮದಲ್ಲಿ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಣೆ ಮಾಡಲಾಯಿತು.…

Read More

ಮಡಿಕೇರಿ NEWS DESK ಸೆ.24 : ಪ್ರಸ್ತುತ ನಡೆಯುತ್ತಿರುವ ಕರ್ನಾಟಕ ರಾಜ್ಯ ಸರಕಾರದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಗಣತಿಯಲ್ಲಿ ಹಾಗೂ ಮುಂದೆ ನಡೆಯಲಿರುವ ಕೇಂದ್ರ ಸರ್ಕಾರದ ಜಾತಿ ಗಣತಿಯ ಸಂದರ್ಭ ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿ ಕಾಲಂನಲ್ಲಿ ಅರೆಭಾಷೆ ಗೌಡ ಮತ್ತು ಮಾತೃ ಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸಲು ಪಿರಿಯಾಪಟ್ಟಣ ಗೌಡ ಸಮಾಜ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಪಿರಿಯಾಪಟ್ಟಣ ಗೌಡ ಸಮಾಜದ ಅಧ್ಯಕ್ಷ ಕೆಮ್ಮರ ವಸಂತ ಅವರು ಕೊಡಗು ಜಿಲ್ಲೆಯ ಅರೆಭಾಷೆ ಗೌಡರು ಜಾತಿ ಜನಗಣತಿ ಸಂದರ್ಭ GOWDA (ಗೌಡ) ಎಂದು ನಮೂದಿಸುವಂತೆ ಮನವಿ ಮಾಡಿದ್ದಾರೆ. ಮೂಲತಃ ಅರೆಭಾಷೆ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿರುವುದು ನಿಜ. ಆದರೆ ಅರೆಭಾಷೆ ಗೌಡರ ಶೈಕ್ಷಣಿಕ ಮತ್ತು ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ ಗೌಡ ಎಂದೇ ನಮೂದಾಗಿರುವುದರಿಂದ ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಕಾರಣದಿಂದ ಅರೆಭಾಷೆ ಗೌಡ…

Read More

ಮಡಿಕೇರಿ ಸೆ.24 NEWS DESK : ಕಾಫಿಗೆ ಉತ್ತಮ ದರವಿದ್ದರೂ ಸಹ ಕಾಫಿ ಬೆಳೆಗಾರರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಕಾಫಿ ಬೆಳೆಗಾರರ ಸಂಕಷ್ಟವನ್ನು ಪರಿಹರಿಸುವಲ್ಲಿ ಎಲ್ಲರೂ ಕೈಜೋಡಿಸಬೇಕಿದೆ ಎಂದು ಶಾಸಕರಾದ ಡಾ.ಮಂತರ್ ಗೌಡ ತಿಳಿಸಿದ್ದಾರೆ. ಮಡಿಕೇರಿ ನಗರ ದಸರಾ ಸಮಿತಿ, ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ, ಕೂರ್ಗ್ ಪ್ಲಾಂಟಸ್ಸ್ ಅಸೋಸಿಯೇಷನ್ ಸಹಯೋಗದೊಂದಿಗೆ ನಗರದ ಗಾಂಧಿ ಮೈದಾನದ ಕರ್ನಾಟಕದ ಮೊದಲ ಮಹಿಳಾ ಕಾಫಿ ಉದ್ಯಮಿ ದಿ.ಸಾಕಮ್ಮ ಸಭಾಂಗಣದ ಕಲಾಸಂಭ್ರಮ ವೇದಿಕೆಯಲ್ಲಿ ಬುಧವಾರ ನಡೆದ ಕಾಫಿ ದಸರಾದಲ್ಲಿ ಅವರು ಮಾತನಾಡಿದರು. ಕಾಫಿ ಬೆಳೆಗೆ ಒಳ್ಳೆಯ ದರ ಇದ್ದರೂ ಸಹ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕಾಫಿ ಉತ್ಪಾದನೆಯಲ್ಲಿ ಸಣ್ಣ ಬೆಳೆಗಾರರು ಸಹ ಇದ್ದು, ಹಲವು ಸಮಸ್ಯೆ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ ಎಂದರು. ರಾಷ್ಟ್ರದಲ್ಲಿ ಕಾಫಿ ಬೆಳೆಗೆ 250 ರಿಂದ 300 ವರ್ಷಗಳ ಇತಿಹಾಸವಿದ್ದು, ಕಾಫಿ ಬೆಳೆಗೆ ಒಳ್ಳೆಯ ದರವಿದ್ದರೂ ಸಹ ಕಾರ್ಮಿಕರ ಕೊರತೆ, ವಾತಾವರಣದಲ್ಲಿನ ಬದಲಾವಣೆ ಸೇರಿದಂತೆ ಹಲವು ಸಮಸ್ಯೆ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ ಎಂದು ಡಾ.ಮಂತರ್…

Read More

ಮಡಿಕೇರಿ NEWS DESK ಸೆ.24 : ಜಾತಿ ಜನಗಣತಿಯ ಸಂದರ್ಭ ಕೊಡಗಿನ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿ ಅರೆಭಾಷೆ ಗೌಡ ಮತ್ತು ಮಾತೃ ಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ವಿರಾಜಪೇಟೆೆ ಗೌಡ ಸಮಾಜ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ವಿರಾಜಪೇಟೆ ಗೌಡ ಸಮಾಜದ ಅಧ್ಯಕ್ಷ ಮುಕ್ಕಾಟಿ ವಾಸು ಗಣಪತಿ ಅವರು ಪ್ರಸ್ತುತ ರಾಜ್ಯ ಸರಕಾರ ನಡೆಸುತ್ತಿರುವ ಮತ್ತು ಮುಂದೆ ಕೇಂದ್ರ ಸರಕಾರ ನಡೆಸಲಿರುವ ಜಾತಿ ಜನಗಣತಿಯಲ್ಲಿ ಕೊಡಗಿನ ಅರೆಭಾಷೆ ಗೌಡರು ಕಡ್ಡಾಯವಾಗಿ ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸಬೇಕು. ಗಣತಿಯಲ್ಲಿ ತಮ್ಮ ಜಾತಿಗೆ ಇರುವ ಇನ್ನೊಂದು ಹೆಸರು ಎಂಬ ಕಾಲಂ ಕೂಡ ಇದ್ದು, ಇದರಲ್ಲಿ ಒಕ್ಕಲಿಗ, ಕೊಡಗು ಗೌಡ, ಅರೆಭಾಷೆ ಒಕ್ಕಲಿಗ ಎಂದು ನಮೂದಿಸಲು ಸಲಹೆ ನೀಡಿದ್ದಾರೆ. ರಾಜ್ಯ ಸರಕಾರ ಈಗಾಗಲೇ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯ ಸಮೀಕ್ಷೆಯನ್ನು ಆರಂಭಿಸಿದೆ. ಮುಂದಿನ ವರ್ಷ ಕೇಂದ್ರ ಸರಕಾರ ಕೂಡ ಗಣತಿ ನಡೆಸಲಿದೆ.…

Read More

ಸೋಮವಾರಪೇಟೆ ಸೆ.24 NEWS DESK : ಧರ್ಮ ಉಳಿಯಬೇಕು, ಧಾರ್ಮಿಕ ಕ್ಷೇತ್ರಗಳ ರಕ್ಷಣೆಯಾಗಬೇಕು ಎಂದು ಮುಳ್ಳೂರು ಮಠದ ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಹೇಳಿದರು.  ಪಟ್ಟಣಕ್ಕೆ ಸಮೀಪದ ನೇಗಳೆ ಕರ್ಕಳ್ಳಿ ವೀರಭದ್ರ ದೇವಾಲಯ ಹಾಗೂ ಗ್ರಾಮ ಸಮಿತಿ, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ವೀರಭದ್ರೇಶ್ವರ ವರ್ಧಂತಿ ಮಹೋತ್ಸವದ ಅಂಗವಾಗಿ ದೇವಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.  ಈ ಭವ್ಯ ಭಾರತ ಸನಾತನ ಹಿಂದೂ ಧರ್ಮವನ್ನು, ಸಂಸ್ಕೃತಿಯನ್ನು ಹೊಂದಿದೆ. ಬಹಳ ಹಿಂದಿನಿಂದಲೂ ನಮ್ಮ ಧರ್ಮದ ಮೇಲೆ ದಬ್ಬಾಳಿಕೆ ನಡೆಯುತ್ತಲೇ ಬಂದಿದೆ, ಇಂದಿಗೂ ನಡೆಯುತ್ತಿದೆ. ಆದರೆ ನಾವುಗಳು ಜಗ್ಗಿಲ್ಲಾ ನಮ್ಮ ಧರ್ಮವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಹಿಂದೂಗಳೆಲ್ಲಾರಮೇಲು ಇದೆ. ನಮ್ಮ ಧಾರ್ಮಿಕ ಕೇಂದ್ರಗಳನ್ನು ರಕ್ಷಿಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ ಎಂದರು. ಧರ್ಮ ಹಾಗೂ ಧಾರ್ಮಿಕ ಕ್ಷೇತ್ರ ಗಳಿಗೆ ಅಪಚಾರ ವಾದಾಗ, ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ದುಷ್ಟರ ಸಂಹಾರಕ್ಕೆ ಅವತರಿಸಿದ ವೀರಭದ್ರನಂತೆ ಆರ್ಭಟಿಸಬೇಕೆಂದರು.  ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ವೀರಭದ್ರ ಸ್ವಾಮಿ ವರ್ಧಂತಿ ಮಹೋತ್ಸವದ ರಾಷ್ಟ್ರೀಯ…

Read More