ಮಡಿಕೇರಿ ಸೆ.23 NEWS DESK : ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ / ಸೇವಾ ಸಂಸ್ಥೆಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಕಡ್ಡಾಯವಾಗಿ ಬರೆಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ. ಮಕ್ಕಳ ಹಕ್ಕುಗಳ ರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅನುಷ್ಠಾನಗೊಂಡಿರುವ ಮಿಷನ್ ವಾತ್ಸಲ್ಯ ಯೋಜನೆಯು ಮಕ್ಕಳ ಅಭಿವೃದ್ಧಿ ಮತ್ತು ರಕ್ಷಣೆಯ ಆದ್ಯತೆಯನ್ನು ಸಾಧಿಸುವ ಒಂದು ಮಾರ್ಗವಾಗಿದೆ. ಸಂಕಷ್ಟದಲ್ಲಿನ ಹಾಗೂ ಸವಾಲಿನಲ್ಲಿರುವ ಮಕ್ಕಳ ಹಿತರಕ್ಷಣೆಗೆ ಹೆಚ್ಚು ಒತ್ತು ನೀಡುತ್ತಿದೆ. ಇಂತಹ ಮಕ್ಕಳ ಗುರುತಿಸುವಿಕೆ, ಸಂಕಷ್ಟ ಸ್ಥಿತಿಯಲ್ಲಿ ಮಾಹಿತಿ ಹಂಚಿಕೊಳ್ಳಲು ಹಾಗೂ ಪುನರ್ ವಸತಿ ಸೇವೆ ಕಲ್ಪಿಸುವಲ್ಲಿ ಮಕ್ಕಳ ಸಹಾಯವಾಣಿ 1098 ಮಹತ್ವದ ಪಾತ್ರ ವಹಿಸುತ್ತದೆ. ಬಾಲ್ಯವಿವಾಹ, ಬಾಲಕಾರ್ಮಿಕತೆ ಸಂಕಷ್ಟದಲ್ಲಿನ ಮಕ್ಕಳ ರಕ್ಷಣೆ ಸೇರಿದಂತೆ ವಿವಿಧ ರೀತಿಯ ಮಕ್ಕಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸಾಧ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಶೈಕ್ಷಣಿಕ ಸಂಸ್ಥೆಗಳು, ಖಾಸಗಿ ಸೇವಾ ಸಂಸ್ಥೆಗಳು ಸೇರಿದಂತೆ ಎಲ್ಲಾ…
ಲೇಖಕ: admin
ಮಡಿಕೇರಿ ಸೆ.24 NEWS DESK : ನಾಡಹಬ್ಬ ದಸರಾ ಮಹೋತ್ಸವದ ಹಿನ್ನಲೆಯಲ್ಲಿ ನಗರದೆಲ್ಲೆಡೆ ಅಳವಡಿಸಿರುವ ವಿದ್ಯುತ್ ದೀಪಾಲಂಕಾರಗಳನ್ನು ಕಣ್ತುಂಬಿಕೊಳ್ಳುವ ಜತೆಗೆ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಸಾರ್ವಜನಿಕರಲ್ಲಿ ಮನವಿ ಮಾಡಿದೆ. ದಸರಾ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯೂ ನಗರದ ಪ್ರಮುಖ ರಸ್ತೆಗಳು, ವೃತ್ತಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅತ್ಯಾಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತಿದೆ. ನಗರದ ಸೌಂದರ್ಯ ಹೆಚ್ಚಿಸುವ ದಸರೆಯ ಸಂಭ್ರಮ, ಸಡಗರವನ್ನು ಇಮ್ಮಡಿಗೊಳಿಸಲು ವಿದ್ಯುತ್ ದೀಪಾಲಂಕಾರ ವೀಕ್ಷಿಸಲು ಲಕ್ಷಾಂತರ ಜನ ಆಗಮಿಸುತ್ತಾರೆ. ಆದ್ದರಿಂದ ದೀಪಾಲಂಕಾರದ ಅಂದ ಕಣ್ತುಂಬಿಕೊಳ್ಳುವ ಸಂದರ್ಭದಲ್ಲಿ ಸುರಕ್ಷತೆಗೂ ಆದ್ಯತೆ ನೀಡುವುದು ಅತ್ಯಂತ ಅವಶ್ಯಕವಾಗಿದೆ ಎಂದು ಹೇಳಿದೆ. ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರ ಸುರಕ್ಷತೆಗೆ ಸೆಸ್ಕ್ ಆದ್ಯತೆ ನೀಡುತ್ತಿದೆ. ಆದರೂ ಸುರಕ್ಷತೆಯ ಬಗ್ಗೆ ಹೆಚ್ಚಿನ ನಿಗಾವಹಿಸುವುದು ಸಾರ್ವಜನಿಕರ ಕರ್ತವ್ಯವಾಗಿದೆ. ಇದಕ್ಕಾಗಿ ನಿಗಮದ ವತಿಯಿಂದ ಸಾರ್ವಜನಿಕರ ಸುರಕ್ಷತೆಗೆ ಕೆಲವು ಸಲಹೆಗಳನ್ನು ನೀಡಲಾಗಿದ್ದು, ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ದೀಪಾಲಂಕಾರದ ಸಂಭ್ರಮವನ್ನು ನಿರಾತಂಕವಾಗಿ…
ಮಡಿಕೇರಿ ಸೆ.24 NEWS DESK : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷಾ ಕಾರ್ಯವು ಅಕ್ಟೋಬರ್, 07 ರವರೆಗೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಸಮೀಕ್ಷೆ ಕಾರ್ಯವನ್ನು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸುಗಮವಾಗಿ ನಿರ್ವಹಣೆ ಮಾಡುವ ಹಾಗೂ ಸಾರ್ವಜನಿಕರಿಂದ ಬರುವ ಮಾಹಿತಿ/ದೂರು/ ಆಕ್ಷೇಪಣೆ/ಸಲಹೆ ಇತ್ಯಾದಿ ಬಗ್ಗೆ ಸ್ವೀಕರಿಸಲಾಗುತ್ತಿರುವ ಕರೆಗಳಿಗೆ ಸೂಕ್ತ ಉತ್ತರವನ್ನು ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳನ್ನೊಳಗೊಂಡಂತೆ ಸಹಾಯವಾಣಿ ತಂಡವನ್ನು ರಚಿಸಿ ಆದೇಶಿಸಿದೆ. ಈ ತಂಡವು ಕಚೇರಿಯ ಅವಧಿಯಲ್ಲಿ ಕಚೇರಿಯ ಕೆಲಸದೊಂದಿಗೆ ಸಹಾಯವಾಣಿಯ ಕರ್ತವ್ಯ ನಿರ್ವಹಿಸುವಂತೆ ಆದೇಶಿಸಿದೆ. :: ಕೊಡಗು ಜಿಲ್ಲಾ ಮಟ್ಟದ ಸಹಾಯವಾಣಿ ಕೇಂದ್ರ :: ಶಿವಶಂಕರ, ಕಚೇರಿ ವ್ಯವಸ್ಥಾಪಕರು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆ ಮಡಿಕೇರಿ. ದೂ.ಸಂ. 9845041338, ಕುಮಾರಿ.ಅಮೃತ ಡೇಟಾ ಎಂಟ್ರಿ ಆಪರೇಟರ್ (ಹೊ.ಸಂ) ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆ ಮಡಿಕೇರಿ ದೂ.ಸಂ. 7483864190. ::…
ಮಡಿಕೇರಿ NEWS DESK ಸೆ.23 : ಗೋಣಿಕೊಪ್ಪದ ಶ್ರೀ ಕಾವೇರಿ ದಸರಾ ಸಮಿತಿ ವತಿಯಿಂದ ನಡೆದ ಮಕ್ಕಳ ದಸರಾ ಸಂಭ್ರಮದಲ್ಲಿ ಶ್ರೀ ಕೃಷ್ಣ ಛದ್ಮವೇಷ ಸ್ಪರ್ಧೆಯಲ್ಲಿ ಸ್ಮೃತಿ ಎಸ್.ಭಾರಧ್ವಜ್ ದ್ವಿತೀಯ ಬಹುಮಾನ ಗೆದ್ದಿದ್ದಾಳೆ. 3 ರಿಂದ 5 ವರ್ಷದೊಳಗಿನ ಸ್ಪರ್ಧಾ ವಿಭಾಗದಲ್ಲಿ ಸ್ಮೃತಿ ಎಸ್.ಭಾರಧ್ವಜ್ ಆದಿಶೇಷನ ಮೇಲೆ ವಿಹರಿಸುತ್ತಿರುವ ಶ್ರೀಕೃಷ್ಣನಾಗಿ ಮಿಂಚಿದಳು. ತೀರ್ಪುಗಾರರ ಮೆಚ್ಚುಗೆಗೆ ಪಾತ್ರಳಾಗಿ ದ್ವಿತೀಯ ಬಹುಮಾನ ಪಡೆದಳು. 5 ವರ್ಷದ ಸ್ಮೃತಿ ಪೊನ್ನಂಪೇಟೆ ಸಮೀಪದ ಬೇಗೂರು ಶ್ರೀ ಪೂಳೆಮಾಡು ಈಶ್ವರ ದೇವಸ್ಥಾನದ ಅರ್ಚಕರಾದ ಸುಂದರೇಶ ಭಾರಧ್ವ್ವಜ್ ಹಾಗೂ ಆಶಿಕಾ ದಂಪತಿಯ ಪುತ್ರಿ.
ಮಡಿಕೇರಿ NEWS DESK ಸೆ.23 : ಸರಕಾರದ ವತಿಯಿಂದ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಧರ್ಮದ ಕಾಲಂನಲ್ಲಿ ಇಸ್ಲಾಂ, ಜಾತಿಯ ಕಾಲಂನಲ್ಲಿ ಮುಸ್ಲಿಂ, ಉಪಜಾತಿ ಹಾಗೂ ಭಾಷೆಯ ಕಾಲಂನಲ್ಲಿ ತಮ್ಮ ತಮ್ಮ ಉಪಜಾತಿ ಮತ್ತು ಮಾತೃಭಾಷೆಯನ್ನು ನಮೂದಿಸಬೇಕೆಂದು ಮಡಿಕೇರಿ ಮುಸ್ಲಿಂ ಜಮಾಅತ್ ಗಳ ಒಕ್ಕೂಟ ಒಮ್ಮತದ ನಿರ್ಧಾರ ಕೈಗೊಂಡಿದೆ. ಮಡಿಕೇರಿಯ ಬದ್ರಿಯಾ ಜಮಾಅತ್ ನ ಸಭಾಂಗಣದಲ್ಲಿ ನಡೆದ ಮುಸ್ಲಿಂ ಜಮಾಅತ್ ಗಳ ಒಕ್ಕೂಟದ ಸಭೆಯಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಕುರಿತು ಸಮಾಲೋಚನೆ ನಡೆಸಲಾಯಿತು. ಸಮೀಕ್ಷೆ ಕುರಿತು ಮಾಹಿತಿ ನೀಡಿದ ಜಮಾಅತ್ ಗಳ ಒಕ್ಕೂಟದ ಕಾರ್ಯದರ್ಶಿ ಅಮೀನ್ ಮೊಹಿಸಿನ್ ಅವರು ಮುಂದಿನ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಈ ಸಮೀಕ್ಷೆ ಹೆಚ್ಚು ಮಹತ್ವವನ್ನು ಪಡೆದುಕೊಂಡಿದ್ದು, ಸ್ಪಷ್ಟವಾದ ಮಾಹಿತಿಯನ್ನು ನೀಡಿ ಸಹಕರಿಸಬೇಕೆಂದು ಮನವಿ ಮಾಡಿದರು. ಪ್ರಸ್ತುತ ನಡೆಯುತ್ತಿರುವ ಜಾತಿ ಜನಗಣತಿ ಮತ್ತು ಸಮೀಕ್ಷೆಯಲ್ಲಿ ಪ್ರತಿಯೊಬ್ಬರು ಪಾಲ್ಗೊಂಡು ನಮ್ಮ ಜನಾಂಗದ ನೈಜ ಸ್ಥಿತಿಗತಿಗಳನ್ನು ನಮೂದಿಸಿಕೊಳ್ಳಬೇಕು. ಕುಲಶಾಸ್ತ್ರ ಅಧ್ಯಯನದ ವರದಿ ಹಿನ್ನೆಲೆಯಲ್ಲಿ ಜಾತಿ…
ಮಡಿಕೇರಿ NEWS DESK ಸೆ.23 : ಸ್ವಸ್ತಿಕ್ ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ನಿರ್ಮಾಣಗೊಂಡಿರುವ ‘ಕಂದೀಲು’ ಕನ್ನಡ ಚಲನಚಿತ್ರಕ್ಕೆ ಚಿತ್ರದ ನಿರ್ದೇಶಕಿ ಕೊಡಗಿನ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಹಾಗೂ ನಿರ್ಮಾಪಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ರಾಷ್ಟ್ರಪತಿಗಳಿಂದ ಇಂದು ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದರು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಪ್ರಾದೇಶಿಕ ಚಿತ್ರ ವಿಭಾಗಗಳಲ್ಲಿ ಕನ್ನಡ ಸೇರಿದಂತೆ ಒಟ್ಟು 13 ಪ್ರಾದೇಶಿಕ ಭಾಷೆಗಳ 13 ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಯಿತು. ಕೊಡಗು ಜಿಲ್ಲೆಯ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು ನಿರ್ಮಿಸಿ, ನಿರ್ದೇಶಿಸಿರುವ ‘ಕಂದೀಲು’ ಚಿತ್ರ ಫೀಚರ್ ಫಿಲ್ಮ್ ವಿಭಾಗದಲ್ಲಿ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ‘ಕಂದೀಲು’ ಗ್ರಾಮವೊಂದರ ಕಥೆಯಾಗಿದ್ದು, ರೈತ ಹಾಗೂ ಆತನ ಕುಟುಂಬದ ಸುತ್ತ ಬೆಳಕು ಚೆಲ್ಲಲಾಗಿದೆ. ‘ಕಂದೀಲು’ ಚಿತ್ರದ ಮೂಲಕ ರಾಷ್ಟ್ರೀಯ ಪ್ರಶಸ್ತಿಯನ್ನು ಗಳಿಸಿರುವ ಕೊಟ್ಟುಕತ್ತೀರ…
ಮಡಿಕೇರಿ ಸೆ.23 NEWS DESK : ಅರೆಭಾಷಿಕರ ಹಿಡುವಳಿ, ಸಂಸ್ಕೃತಿ, ಪರಂಪರೆ, ಭಾಷೆ ಮತ್ತು ಸಾಹಿತ್ಯವನ್ನು ಉಳಿಸಿಕೊಳ್ಳಲು ಅರೆಭಾಷಿಕ ಗೌಡರು ತಪ್ಪದೆ ರಾಜ್ಯ ಹಾಗೂ ಕೇಂದ್ರ ಸರಕಾರದ ಜಾತಿ ಜನಗಣತಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಗಣತಿದಾರರಿಗೆ ನಿಖರ ಮಾಹಿತಿಯನ್ನು ನೀಡಬೇಕೆಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸದಸ್ಯ ಸೂದನ ಎಸ್.ಈರಪ್ಪ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರಕಾರದ ವತಿಯಿಂದ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಜನಗಣತಿಯಲ್ಲಿ ಅರೆಭಾಷೆ ಗೌಡರು ಯಾವುದೇ ಗೊಂದಲಗಳಿಗೆ ಒಳಗಾಗದೆ ಸ್ಪಷ್ಟ ಮಾಹಿತಿಯನ್ನು ನೀಡಬೇಕು. ಶೈಕ್ಷಣಿಕ ಮತ್ತು ಕಂದಾಯ ದಾಖಲೆಗಳಲ್ಲಿ ಅರೆಭಾಷಿಕರ ಜಾತಿ ‘ಗೌಡ’ ಎಂದೇ ದಾಖಲಾಗಿರುವುದರಿಂದ ಗಣತಿ ಸಂದರ್ಭ ಜಾತಿಯ ಕಾಲಂನಲ್ಲಿ ಗೌಡ ಎಂದೂ, ಧರ್ಮದ ಕಾಲಂನಲ್ಲಿ ಹಿಂದೂ ಎಂದು ನಮೂದಿಸುವಂತೆ ಕೋರಿದ್ದಾರೆ. ಉಪಜಾತಿ ಕಾಲಂನಲ್ಲಿ ಅರೆಭಾಷೆ ಗೌಡ ಮತ್ತು ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ತಿಳಿಸಿದ್ದಾರೆ.
ಮಡಿಕೇರಿ ಸೆ.23 NEWS DESK : ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆ ಜಿಲ್ಲಾಸ್ಪತ್ರೆಯಾಗಿ, ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಹಾಗೂ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರ ತಾಲ್ಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆ ಹಾಗೂ ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರ ವೀಕ್ಷಣೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಈ ಬಾರಿ ಬಜೆಟ್ ಸಂದರ್ಭದಲ್ಲಿ ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು ಎಂದು ಪ್ರಕಟಿಸಲಾಗಿತ್ತು. ಹಾಗೆಯೇ ಪೊನ್ನಂಪೇಟೆ ಮತ್ತು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲ್ಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಉದ್ದೇಶವಾಗಿತ್ತು. ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲ್ಲೂಕು ಆಸ್ಪತ್ರೆಯನ್ನಾಗಿ ಹಾಗೂ ಹುದಿಕೇರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಸಚಿವರು ಹೇಳಿದರು. ‘ವಿರಾಜಪೇಟೆಯಲ್ಲಿ 400 ಹಾಸಿಗೆ ಆಸ್ಪತ್ರೆ ನಿರ್ಮಿಸುವ ಉದ್ದೇಶವಾಗಿತ್ತು. ಸದ್ಯ 250 ಹಾಸಿಗೆಯ ಆಸ್ಪತ್ರೆ ನಿರ್ಮಿಸಲಾಗುತ್ತಿದ್ದು, ವೈದ್ಯರು ಹಾಗೂ…
ಮಡಿಕೇರಿ ಸೆ.23 NEWS DESK : ಲೇಖಕ ಬಾಳೆಯಡ ಕಿಶನ್ ಪೂವಯ್ಯ ಅವರು ರಚಿಸಿರುವ ಕೊಡವ ಮಕ್ಕಡ ಕೂಟದ 118ನೇ ಪುಸ್ತಕ ‘ಎತ್ತ ಸಾಗುತ್ತಿದೆ ನಮ್ಮ ಹೆಜ್ಜೆ’ ಬಿಡುಗಡೆಗೊಂಡಿತು. ನಗರದ ಕರ್ಣಂಗೇರಿಯ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ದೇವಾಲಯದ ಧರ್ಮದರ್ಶಿ ಗೋವಿಂದಸ್ವಾಮಿ ಅವರು ಪುಸ್ತಕವನ್ನು ಬಿಡುಗಡೆಗೊಳಿಸಿ, ಪುಸ್ತಕಕ್ಕೆ ಹೆಚ್ಚು ಜನಮನ್ನಣೆ ದೊರಕಲಿ ಎಂದು ಶುಭ ಹಾರೈಸಿದರು. ನಂತರ ಮಾತನಾಡಿದ ಲೇಖಕ ಬಾಳೆಯಡ ಕಿಶನ್ ಪೂವಯ್ಯ ಅವರು ಸಮಾಜದಲ್ಲಿನ ಭ್ರಷ್ಟಾಚಾರ, ಆಡಳಿತಗಳ ನ್ಯೂನತೆ, ಪ್ರಕೃತಿ ನಾಶ, ಪ್ರವಾಸೋದ್ಯಮದ ಅನಾಹುತಗಳು, ಮೂಢನಂಬಿಕೆಗಳು ಸೇರಿದಂತೆ ವಿಭಿನ್ನ ವಿಚಾರಧಾರೆಗಳನ್ನು ಪುಸ್ತಕದ ರೂಪದಲ್ಲಿ ಹೊರ ತರಲಾಗಿದೆ ಎಂದರು. ಜನರು ನನ್ನ ಬರವಣಿಗೆಯನ್ನು ಮೆಚ್ಚಿಕೊಂಡಿದ್ದಾರೆ, ಆದರೆ ಜೀವನದಲ್ಲಿ ಅಳವಡಿಕೊಂಡಿಲ್ಲ. ಪ್ರತಿಯೊಬ್ಬರು ಪುಸ್ತಕಗಳನ್ನು ಓದಬೇಕು ಮತ್ತು ಅದರಲ್ಲಿರುವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಸಿರ ಕೊಡಗನ್ನು ಕೊಡಗಾಗಿ ಉಳಿಸಿಕೊಳ್ಳಲು ಪಣತೊಡಬೇಕು ಎಂದು ಕರೆ ನೀಡಿದರು. ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲರು ಹಾಗೂ ಕಿಶನ್ ಪೂವಯ್ಯ ಅವರ ಪತ್ನಿ ಬಾಳೆಯಡ ಸವಿತಾ ಪೂವಯ್ಯ ಅವರು…
ಕುಶಾಲನಗರ ಸೆ.23 NEWS DESK : ಭೂಮಿಯ ಮೇಲೆ ದುಷ್ಟ ಶಕ್ತಿಗಳ ಸಂಹಾರಕ್ಕಾಗಿ ಭೂಮಿಗೆ ದೇವಿ ಆಗಮಿಸಿದ್ದು ಎಂದು ಶ್ರೀಮದ್ ಕನ್ನಿಕಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಗಿರೀಶ್ ಭಟ್ ಹೇಳಿದರು. ಇಡೀ ನಾಡಿನಲ್ಲಿ ನವರಾತ್ರಿ ಹಬ್ಬದ ವಿಶೇಷವಾಗಿ ಕುಶಾಲನಗರದ ಶ್ರೀಮದ್ ಕನ್ನಿಕಾಪರಮೇಶ್ವರಿ ದೇವಸ್ಥಾದಲ್ಲಿ ಮುಂದಿನ 11 ದಿನಗಳ ಕಾಲ ವಿಶೇಷ ಪೂಜೆಯ ಮೊದಲ ದಿನವನ್ನು ಆರಂಭಿಸಿ ಮಾತನಾಡಿದ ಅವರು, ವಿಶ್ವದ ನಾನಾ ಭಾಗಗಳಲ್ಲಿ ಯುದ್ಧ ಭೀತಿ ಆವರಿಸಿಕೊಂಡಿದೆ. ಪುರಾತನ ಕಾಲದಲ್ಲಿ ಇಂತಹವುದೇ ಸಂದರ್ಭ ನಿರ್ಮಾಣವಾದಾಗ ದೇವಾನು ದೇವತೆಗಳು ರಾಕ್ಷಸರ ಸಂಹಾರಕ್ಕೆ ಮುಂದಾಗಿದ್ದು. ಈಗ ಅಂತಹುದೇ ಸ್ಥಿತಿ ಇರುವುದರಿಂದ ಮತ್ತೊಮ್ಮೆ ದೇವಾನು ದೇವತೆಗಳು ಇಲ್ಲಿಗೆ ಆಗಮಿಸಬೇಕಾಗಿದೆ. ದೇವರುಗಳು ಮತ್ತೊಮ್ಮೆ ಭುವಿಗೆ ಆಗಮಿಸಿ ಎಲ್ಲ ತರಹದ ದುಷ್ಟ ಶಕ್ತಿಗಳ ಸಂಹಾರ ಮಾಡಬೇಕಾಗಿದೆ. ಅದಕ್ಕಾಗಿ ಎಲ್ಲರೂ ದೃಢ ಸಂಕಲ್ಪ ಮಾಡಬೇಕು. ಈ ನವರಾತ್ರಿ ಮೂಲಕ ಸರ್ವೇ ಜನಾಃ ಸುಖಿನೋ ಭವಂತು ಎನ್ನುವುದನ್ನು ರೂಢಿ ಮಾಡಿಕೊಳ್ಳಬೇಕು ಎಂದರು. ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಮಾತನಾಡಿ, ನಮ್ಮ…






