ಲೇಖಕ: admin

ಮಡಿಕೇರಿ ಸೆ.23 NEWS DESK : ಕುಶಾಲನಗರದಲ್ಲಿ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್  ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಕುಶಾಲನಗರದಲ್ಲಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ, ಬಾಣಾವಾರದಲ್ಲಿ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಅಭಿಮಾನಿಗಳು ದಿನೇಶ್ ಗುಂಡೂರಾವ್  ಅವರಿಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.

Read More

ಮಡಿಕೇರಿ ಸೆ.23 NEWS DESK : ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿರುವ ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘವು 2024-25ನೇ ಸಾಲಿನಲ್ಲಿ 21.09 ಲಕ್ಷ ನಿವ್ವಳ ಲಾಭವನ್ನು ಹೊಂದಿಕೊಂಡಿರುವುದಾಗಿ ಸಂಘದ ಅಧ್ಯಕ್ಷರಾದ ಕೆ.ಬಿ.ಗಿರೀಶ್ ಗಣಪತಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, 2002ರಲ್ಲಿ ಆರಂಭಗೊಂಡು ಕಳೆದ ಇಪ್ಪತ್ತಮೂರು ವರ್ಷಗಳಿಂದ ತನ್ನ ಸ್ವಂತ ಬಂಡವಾಳದ ಮೂಲಕ ವ್ಯವಹಾರ ನಡೆಸುತ್ತಾ ಪ್ರಗತಿಯ ಪಥದಲ್ಲಿ ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘ ಮುನ್ನಡೆಯುತ್ತಿದೆ. ಸಂಘದ ಮಹಾಸಭೆ ಸೆ.25 ರಂದು ಬೆಳಗ್ಗೆ 11 ಗಂಟೆಗೆ ನಗರದ ಕೊಹಿನೂರು ರಸ್ತೆಯ ಬಳಿಯಲ್ಲಿರುವ ಸಂಘದ ಸ್ವಂತ ಕಟ್ಟಡದಲ್ಲಿ ನಡೆಯಲಿದೆಯೆಂದು ಮಾಹಿತಿ ನೀಡಿದರು. ಸಂಘವು ಒಟ್ಟು 1879 ಸದಸ್ಯರನ್ನು ಹೊಂದಿದ್ದು, 90.20ಲಕ್ಷ ಪಾಲು ಬಂಡವಾಳವನ್ನು ಸಂಗ್ರಹಿಸಿದೆ. ಕಳೆದ ಮಾರ್ಚ್ ಅಂತ್ಯಕ್ಕೆ ಸಂಘವು ಒಟ್ಟು 31.15 ಕೋಟಿ ಠೇವಣಾತಿಗಳನ್ನು ಸಂಗ್ರಹಿಸಿದ್ದು, 10.37 ಕೋಟಿಯನ್ನು ವಿವಿಧ ಸಾಲಗಳ ರೂಪದಲ್ಲ ನೀಡಿದೆ. ಸಾಲ ವಸೂಲಾತಿ ಶೇ.90 ರಷ್ಟು ಇರುವುದಾಗಿ ವಿವರಗಳನ್ನು ನೀಡಿದರು.…

Read More

ಮಡಿಕೇರಿ ಸೆ.23 NEWS DESK : ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕಾಂಗ್ರೆಸ್ ನಿಯಮಕ್ಕೆ ವಿರುದ್ಧವಾಗಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯಶ್ ದೋಲ್ಪಾಡಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸೆ.22 ರಂದು ಮಡಿಕೇರಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಕ್ಷಕ್ಕೆ ಸೇರ್ಪಡೆಯಾದ ಅಪ್ರು ರವೀಂದ್ರ ಅವರು, ಈ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಲ್ಲಿದ್ದುಕೊಂಡು ಕಾಂಗ್ರೆಸ್ ಗೆ ವಿರುದ್ಧವಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಸೇರ್ಪಡೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ನೋವಾಗಿದೆ ಎಂದು ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಘಟಕದಿಂದ ನಡೆದ ಕಾರ್ಯಕ್ರಮ ಕಾಂಗ್ರೆಸ್ ಪಕ್ಷದ ಒಂದು ಭಾಗವಾಗಿದೆ. ಆದರೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ಬ್ಲಾಕ್ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಅಪ್ರು ರವೀಂದ್ರ ಅವರನ್ನು ಪಕ್ಷಕ್ಕೆ ಕರೆ ತರಲಾಗಿದೆ. ಪಕ್ಷ ಸೇರ್ಪಡೆ ಕುರಿತು ಬ್ಲಾಕ್ ಕಾಂಗ್ರೆಸ್ ಸಮಿತಿಗೆ ಮಾತ್ರವಲ್ಲದೆ ಕಾರ್ಯಕರ್ತರಿಗೂ ಮಾಹಿತಿ ನೀಡಿಲ್ಲ. ನಿಯಮ ಬಾಹಿರವಾಗಿರುವ ಈ ಬೆಳವಣಿಗೆ…

Read More

ಮಡಿಕೇರಿ ಸೆ.23 NEWS DESK : ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಜಾತಿ ಜನಗಣತಿ ನಡೆಸಲು ಹೊರಟಿರುವ ರಾಜ್ಯ ಸರಕಾರ ಕ್ರೈಸ್ತರನ್ನು ಹಿಂದೂ ಜಾತಿಗಳ ನಡುವೆ ಎಳೆದು ತರುವುದನ್ನು ತಕ್ಷಣ ನಿಲ್ಲಿಸಬೇಕೆಂದು ಆಗ್ರಹಿಸಿ ಹಿಂದೂ ಹಿತರಕ್ಷಣಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಮಿತಿಯ ಪ್ರಮುಖರು ಹಾಗೂ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಡಿಸಿದರು. ಸರಕಾರ ಜಾತಿ ಸಮೀಕ್ಷೆಯ ಹೆಸರಿನಲ್ಲಿ ಹೊಸ ಕ್ರೈಸ್ತ ಜಾತಿಗಳನ್ನು ಸೃಷ್ಟಿಸಿ ಗೊಂದಲ ಸೃಷ್ಟಿಸುತ್ತಿದೆ. ಕ್ರೈಸ್ತರನ್ನು ಹಿಂದೂ ಜಾತಿಗಳ ನಡುವೆ ಎಳೆದು ತಂದು ಎಲ್ಲಾ ಸಮಾಜಗಳನ್ನು ದಿಕ್ಕು ತಪ್ಪಿಸುತ್ತಿದೆ. ಮತಾಂತರ ನಿರ್ಬಂಧ ಕಾಯ್ದೆಯನ್ನು ಸರಕಾರವೇ ದುರ್ಬಲಗೊಳಿಸುತ್ತಿದೆ ಎಂದು ಎಂದು ಆರೋಪಿಸಿದರು. ಕಾಂತರಾಜು ಆಯೋಗ ಮತ್ತು ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಪರಿಣಾಮಕಾರಿಯಾಗಿ ಬಳಕೆ ಮಾಡುವಲ್ಲಿ ವಿಫಲವಾಗಿರುವ ಸರಕಾರ ಸಾಮಾಜಿಕ ನ್ಯಾಯದ ವಿಚಾರವನ್ನು ಮತಬ್ಯಾಂಕ್ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ ಎಂದು ಟೀಕಿಸಿದರು. ದಲಿತರ ನಡುವೆ ಕ್ರೈಸ್ತ ಜಾತಿಗಳನ್ನು ಸೇರಿಸಿಕೊಂಡು…

Read More

ಮಡಿಕೇರಿ NEWS DESK ಸೆ.23 : ಕರ್ನಾಟಕ ರಾಜ್ಯ ಸರ್ಕಾರದಿಂದ ಪ್ರಸ್ತುತ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮತ್ತು ಜಾತಿ ಜನಗಣತಿಯಲ್ಲಿ ಹಾಗೂ ಮುಂದೆ ಕೇಂದ್ರ ಸರ್ಕಾರ ನಡೆಸುವ ಗಣತಿಯ ಸಂದರ್ಭ ಜಾತಿಯ ಕಾಲಂನಲ್ಲಿ ಸರ್ವ ಅರೆಭಾಷೆ ಗೌಡರು GOWDA (ಗೌಡ) ಎಂದು, ಉಪಜಾತಿ ಅರೆಭಾಷೆ ಗೌಡ, ಮಾತೃ ಭಾಷೆ ಅರೆಭಾಷೆ ಎಂದು ನಮೂದಿಸುವಂತೆ ಮಕ್ಕಂದೂರು ಗೌಡ ಸಮಾಜದ ಅಧ್ಯಕ್ಷ ಲಕ್ಕಪನ ಹರೀಶ್ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಸ್ತುತ ರಾಜ್ಯ ಸರ್ಕಾರ ನಡೆಸುತ್ತಿರುವ ಮತ್ತು ಮುಂದೆ ಕೇಂದ್ರ ಸರಕಾರ ನಡೆಸಲಿರುವ ಜಾತಿ ಜನಗಣತಿಯಲ್ಲಿ ಕೊಡಗಿನ ಅರೆಭಾಷೆ ಗೌಡರು ಕಡ್ಡಾಯವಾಗಿ ಜಾತಿಯ ಕಾಲಂನಲ್ಲಿ ಗೌಡ ಎಂದು ನಮೂದಿಸಬೇಕು. ಗಣತಿಯಲ್ಲಿ ತಮ್ಮ ಜಾತಿಗೆ ಇರುವ ಇನ್ನೊಂದು ಹೆಸರು ಎಂಬ ಕಾಲಂ ಕೂಡ ಇದ್ದು, ಇದರಲ್ಲಿ ಒಕ್ಕಲಿಗ, ಕೊಡಗು ಗೌಡ, ಅರೆಭಾಷೆ ಒಕ್ಕಲಿಗ ಎಂದು ನಮೂದಿಸಲು ಸಲಹೆ ನೀಡಿದ್ದಾರೆ. ರಾಜ್ಯ ಸರಕಾರವು ಈಗಾಗಲೇ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು…

Read More

ಮಡಿಕೇರಿ NEWS DESK ಸೆ.23 : ಜಾತಿ ಜನಗಣತಿಯ ಸಂದರ್ಭ ಕೊಡಗಿನ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿ ಅರೆಭಾಷೆ ಗೌಡ ಮತ್ತು ಮಾತೃ ಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಸೋಮವಾರಪೇಟೆ ಗೌಡ ಸಮಾಜ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸೋಮವಾರಪೇಟೆ ಗೌಡ ಸಮಾಜದ ಅಧ್ಯಕ್ಷ ದಂಡಿನ ಉತ್ತಯ್ಯ ಅವರು ಮೂಲತಃ ಅರೆಭಾಷೆ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿದ್ದಾರೆ, ಆದರೆ ಅರೆಭಾಷೆ ಗೌಡರ ಶೈಕ್ಷಣಿಕ, ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ ‘ಗೌಡ’ ಎಂದೇ ನಮೂದಿಸಲಾಗಿದೆ. ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗು ಗೌಡ ಸಮಾಜಗಳ ಒಕ್ಕೂಟ ಅರೆಭಾಷೆ ಗೌಡ ಸಮುದಾಯದ ಸಭೆಗಳನ್ನು ನಡೆಸಿ, ಕೊಡಗಿನ ಎಲ್ಲಾ ಗೌಡ ಸಮಾಜಗಳೊಂದಿಗೆ ಸಮಾಲೋಚಿಸಿ ಉಔWಆಂ (ಗೌಡ) ಎಂದು ನಮೂದಿಸಲು ನಿರ್ಣಯ ಕೈಗೊಂಡಿದ್ದು, ಇದಕ್ಕೆ ಸೋಮವಾರಪೇಟೆ ಗೌಡ ಸಮಾಜದ ಬೆಂಬಲವಿದೆ ಎಂದು ತಿಳಿಸಿದ್ದಾರೆ. ಪ್ರಸ್ತುತ ರಾಜ್ಯ ಸರಕಾರ…

Read More

ಮಡಿಕೇರಿ ಸೆ.23 NEWS DESK : ಐತಿಹಾಸಿಕ ಹಿನ್ನೆಲೆಯ ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ‘ಬಹುಭಾಷಾ ಕವಿ ಗೋಷ್ಠಿ’ ಸೆ.25 ರಂದು ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ದಿನ ಪೂರ್ತಿ ನಡೆಯುವ ಮೂಲಕ, ಸಾಹಿತ್ಯ ಪ್ರೇಮಿಗಳಿಗೆ ರಸದೌತಣ ಉಣಬಡಿಸಲಿದೆಯೆಂದು ಬಹುಭಾಷಾ ಕವಿಗೋಷ್ಠಿ ಸಮಿತಿ ಅಧ್ಯಕ್ಷರಾದ ಉಜ್ವಲ್ ರಂಜಿತ್ ತಿಳಿಸಿದ್ದಾರೆ. ಬಹುಭಾಷಾ ಕವಿಗೋಷ್ಠಿಯ ಆರಂಭಕ್ಕೂ ಮುನ್ನ ಅಂದು ಬೆಳಗ್ಗೆ 9 ಗಾಂಧಿ ಮೈದಾನ ರಸ್ತೆಯ ಬಳಿಯಲ್ಲಿರುವ, ಡಿಸಿಸಿ ಬ್ಯಾಂಕ್ ಮುಂಭಾಗದ ‘ಕುವೆಂಪು ಪುತ್ತಳಿ’ಗೆ ಪುಷ್ಪನಮನ ಸಲ್ಲಿಸುವ ಮೂಲಕ ಕವಿಗೋಷ್ಠಿಯ ಅಧ್ಯಕ್ಷರಾದ ಸಾಹಿತಿ ಸುನೀತಾ ಲೋಕೇಶ್ ಅವರು, ಬಹುಭಾಷಾ ಕವಿಗೋಷ್ಠಿ ಸಮಿತಿ ಅಧ್ಯಕ್ಷರಾದ ಉಜ್ವಲ್ ರಂಜಿತ್ ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಸಾಹಿತ್ಯಾಸಕ್ತರ ಸಮ್ಮುಖದಲ್ಲಿ ಚಾಲನೆ ನೀಡಲಿದ್ದಾರೆೆ. ಕಲಾ ಸಂಭ್ರಮ ವೇದಿಕೆಯಲ್ಲಿ ಬಳಿಕ ಬೆಳಗ್ಗೆ 10 ಗಂಟೆಗೆ ಆರಂಭಗೊಳ್ಳುವ ಬಹುಭಾಷಾ ಕವಿಗೋಷ್ಠಿಯನ್ನು ಕರ್ನಾಟಕ ಒಕ್ಕಲಿಗರ ಸಂಘದ ಕೊಡಗು ಜಿಲ್ಲಾ ನಿರ್ದೇಶಕರು, ಸಮಾಜಸೇವಕರಾದ ಹರಪಳ್ಳಿ ರವೀಂದ್ರ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು…

Read More

ವಿರಾಜಪೇಟೆ ಸೆ.23 NEWS DESK : ಕಡಂಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ಮಾಜಿ ಸೈನಿಕ ಹಾಗೂ ಉದಯೋನ್ಮುಖ ಉದ್ಯಮಿ ಎಂ.ಕೆ.ಸಲಾಂ ಅವರನ್ನು ಸನ್ಮಾನಿಸಲಾಯಿತು. ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಎಂ.ಕೆ.ಸಲಾಂ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿ, ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಲೆಯ ಹಳೆಯ ವಿದ್ಯಾರ್ಥಿ, ಸೈನಿಕ ಎಂ.ಕೆ.ಸಲಾಂ ಅವರು, ತನ್ನ ಯಶಸ್ವಿಗೆ ಮೂಲ ಕಾರಣಕರ್ತರಾದ ತಂದೆ ಅಬ್ದುಲ್ಲಾ ಹಾಗೂ ತಾಯಿ ರುಕೀಯ ಅವರ ಆಶೀರ್ವಾದ ಎಲ್ಲಾ ವಿದ್ಯಾರ್ಥಿಗಳಿಗೂ ಇರಲಿ ಎಂದು ಅವರ ಹೆಸರಿನಲ್ಲಿ ದತ್ತಿನಿಧಿ ಪ್ರಾರಂಭಿಸಿ ಒಂದನೇ ತರಗತಿಯಿಂದ 7ನೇ ತರಗತಿಯಲ್ಲಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತಲಾ ಒಂದು ಸಾವಿರದಂತೆ ಶೈಕ್ಷಣಿಕ ಪ್ರೋತ್ಸಾಹಕ್ಕಾಗಿ ಧನ ಸಹಾಯವನ್ನು ಶಾಲೆಗೆ ನೀಡಿದರು. ತನ್ನ ಕೈಯಲ್ಲಿ ಸಾಧ್ಯವಾಗವರೆಗೂ ಇದನ್ನು ಮುಂದುವರಿಸಲಿಕ್ಕೆ ಸಾಧ್ಯವಾಗಲಿ ಎಂದು ಆಶಿಸಿ ಶಾಲೆಯ ಪ್ರತಿಯೊಂದು ಏಳಿಗೆ ಕೆಲಸದಲ್ಲಿ ಕೈ ಜೋಡಿಸುತ್ತೆನೆ ಎಂಬ ಭರವಸೆಯನ್ನು ನೀಡಿದರು.  ಬಳಿಕ ಶಾಲೆಯಲ್ಲಿ ಪ್ರಾರಂಭಿಸಿದ ತರಕಾರಿ ಉದ್ಯಾನವನಕ್ಕೆ ಬೇಲಿ ಹಾಕಲು ಬೇಕಾದ…

Read More

ವಿರಾಜಪೇಟೆ ಸೆ.23 NEWS DESK : ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯದ ಹಣ ಬಿಡುಗಡೆ ಮಾಡುವುದು ಸೇರಿದಂತೆ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಎ.ಸಿ.ಸಾಬು ಅವರ ನೇತೃತ್ವದಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಕೊಪ್ಪಳ ನಗರದಲ್ಲಿ ನಡೆದ ಐದನೇ ರಾಜ್ಯ ಸಮ್ಮೇಳನದಲ್ಲಿ ರಾಜ್ಯ ಕಟ್ಟಡ ನಿರ್ಮಾಣ ವಲಯದ ಸ್ಥಿತಿಗತಿ, ಕಾರ್ಮಿಕರ ಪರಿಸ್ಥಿತಿ, ಅಲ್ಲಿ ಸಂಭವಿಸುವ ಅಪಘಾತ ಸಾವು ನೋವು ಕಾರ್ಮಿಕರು ಅನುಭವಿಸುವ ಸಂಕಟಗಳು ಸರಕಾರದ ನೀತಿಗಳು ಅವುಗಳ ಪರಿಣಾಮಗಳ ಬಗ್ಗೆ ಹಾಗೂ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯದಲ್ಲಿ ಏಕಕಾಲದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರ ರಾಜ್ಯ ವ್ಯಾಪ್ತಿ ಪ್ರತಿಭಟನೆ ನಡೆಸುವಂತೆ ತೀರ್ಮಾನವಾದ ಹಿನ್ನಲೆಯಲ್ಲಿ ವಿರಾಜಪೇಟೆಯಲ್ಲಿ ಕಾರ್ಮಿಕ ಅಧಿಕಾರಿಗಳಿಗೆ ವಿವಿಧ ಬೇಡಿಕೆಗಳ ಮನವಿಯನ್ನು ಕಾರ್ಮಿಕ ಸಂಘಟನೆಯವರು ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧ್ಯಕ್ಷ ಎ.ಸಿ ಸಾಬು ಅವರು, ಕಟ್ಟಡ ಕಾರ್ಮಿಕರಿಗೆ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಕಾನೂನು ಬದ್ಧವಾಗಿ ಇದುವರೆಗೂ ಸಿಗುತ್ತಿದ್ದ ಸೌಲಭ್ಯಗಳು ಸಿಗುತ್ತಿಲ್ಲ…

Read More

ಮಡಿಕೇರಿ NEWS DESK ಸೆ.23 : ಪ್ರಸ್ತುತ ರಾಜ್ಯ ಸರಕಾರ ನಡೆಸುತ್ತಿರುವ ಮತ್ತು ಮುಂದೆ ಕೇಂದ್ರ ಸರಕಾರ ನಡೆಸಲಿರುವ ಜಾತಿ ಜನಗಣತಿಯಲ್ಲಿ ಕೊಡಗಿನ ಅರೆಭಾಷೆ ಗೌಡರು ಕಡ್ಡಾಯವಾಗಿ ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸುವಂತೆ ಮರಗೋಡು ಗೌಡ ಸಮಾಜದ ಅಧ್ಯಕ್ಷ ಕಟ್ಟೆಮನೆ ಜನಾರ್ಧನ್ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯ ಸರಕಾರವು ಈಗಾಗಲೇ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯ ಸಮೀಕ್ಷೆಯನ್ನು ಆರಂಭಿಸಿದೆ. ಮುಂದಿನ ವರ್ಷ ಕೇಂದ್ರ ಸರಕಾರ ಕೂಡ ಗಣತಿ ಆರಂಭಿಸಲಿದ್ದು, ಎರಡೂ ಪ್ರಕ್ರಿಯೆಯ ಸಂದರ್ಭ ಕೊಡಗಿನ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ ಗೌಡ, ಉಪಜಾತಿ ಅರೆಭಾಷೆ ಗೌಡ ಮತ್ತು ಮಾತೃ ಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಕೋರಿದ್ದಾರೆ. ಉಪಜಾತಿಯಲ್ಲಿ ಅರೆಭಾಷೆ ಗೌಡ ಎಂಬುವುದನ್ನು ಪ್ರತ್ಯೇಕ ಕಾಲಂನಲ್ಲಿ ಸೇರಿಸಬೇಕೆಂದು ಕೊಡಗು ಗೌಡ ಸಮಾಜಗಳ ಒಕ್ಕೂಟ ಸಲ್ಲಿಸಿದ ಮನವಿಗೆ ಸರಕಾರ ಸ್ಪಂದಿಸಿದೆ. ಸಮುದಾಯ ಬಾಂಧವರು ಎಲ್ಲಾ ವಿವರಗಳನ್ನು ಗಮನದಲ್ಲಿರಿಸಿಕೊಂಡು ಉಪಜಾತಿ ಎನ್ನುವ ಕಾಲಂನಲ್ಲಿ…

Read More