ಮಡಿಕೇರಿ ಸೆ.23 NEWS DESK : ಪೊನ್ನಂಪೇಟೆ ತಾಲ್ಲೂಕಿನ ಹುದಿಕೇರಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಆಸ್ಪತ್ರೆಯ ಸ್ಥಳವನ್ನು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು, ಪರಿಶೀಲಿಸಿದರು. ನಂತರ ಸಚಿವರು ಹಾಗೂ ಶಾಸಕರು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಶಾಸಕರು ಸಚಿವರಿಗೆ ಅಗತ್ಯ ಮಾಹಿತಿಗಳನ್ನು ಒದಗಿಸಿ, ಆಸ್ಪತ್ರೆಯ ಶೀಘ್ರ ಕಾಮಗಾರಿಗೆ ಅನುವು ಮಾಡಿಕೊಡುವಂತೆ ಮನವಿ ಮಾಡಿದರು. ಈ ಸಂದರ್ಭ ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಸತೀಶ್, ತಾಲೂಕು ಆರೋಗ್ಯ ಅಧಿಕಾರಿಗಳಾದ ಯತೀರಾಜ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ತಹಶೀಲ್ದಾರ್ ಮೋಹನ್, ಕಂದಾಯ ಅಧಿಕಾರಿ ಸುದಿಂದ್ರ, ಡಿಸಿಸಿ ಸದಸ್ಯರು ಮುಕಟ್ಟೀರ ಸಂದೀಪ್, ತಾಲೂಕು ಬಗರ್ ಹುಕುಂ ಅಧ್ಯಕ್ಷರು ಲಾಲಾ ಅಪ್ಪಣ್ಣ, ಹಿರಿಯರಾದ ಮುಕಳೇರ ಕುಶಾಲಪ್ಪ, ಜಿಮಿ ಅಣ್ಣಯ್ಯ, ಎರ್ಮು ಹಾಜಿ, ಚೆಕ್ಕೇರ ವಾಸು ಕುಟ್ಟಪ್ಪ, ಸುಧೀರ್, ಪೆಮ್ಮಂಡ ಪೊನ್ನಪ್ಪ, ಅಜ್ಜಿಕುಟ್ಟಿರ ಗಿರೀಶ್, ಪ್ರಶಾಂತ್, ದಿಲ್ಲು, ಹುದಿಕೇರಿ ವಲಯ ಅಧ್ಯಕ್ಷರು ಸೂರಜ್, ಭವಿನ್ ಕುಶಾಲಪ್ಪ,…
ಲೇಖಕ: admin
ಮಡಿಕೇರಿ ಸೆ.23 NEWS DESK : ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಭೇಟಿ ನೀಡಿದರು. ಕಳೆದ ಅಧಿವೇಶನದಲ್ಲಿ ವಿರಾಜಪೇಟೆ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರ ಅನುದಾನವನ್ನು ಒದಗಿಸಿತ್ತು. ಆ ನಿಟ್ಟಿನಲ್ಲಿ ಈಗಾಗಲೇ ಮೇಲು ದರ್ಜೆಗೇರಿಸುವ ಕಾರ್ಯ ಪ್ರಗತಿಯಲ್ಲಿದ್ದು, ಶಾಸಕರು ಹಾಗೂ ಸಚಿವರು ಭೇಟಿ ಸಂದರ್ಭದಲ್ಲಿ ಪರಿಶೀಲಿಸಿದರು. ಆಸ್ಪತ್ರೆ ಬಗೆಗಿನ ಎಲ್ಲಾ ಮಾಹಿತಿಯನ್ನು ಶಾಸಕರು, ಸಚಿವರಿಗೆ ಒದಗಿಸಿದರು. ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಸತೀಶ್, ತಾಲೂಕು ಆರೋಗ್ಯ ಅಧಿಕಾರಿಗಳಾದ ಯತೀರಾಜ್, ಬಗರ್ ಹುಕುಂ ತಾಲೂಕು ಅಧ್ಯಕ್ಷರು ಸಲಾಂ, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಸದಸ್ಯರು ಮತೀನ್, ಪೃಥ್ವಿನಾಥ್, ರಜಿನಿಕಾಂತ್, ಹಮೀದ್, ಸಾಯಿ ಸಮಿತಿ ಅಧ್ಯಕ್ಷರು ಜಲೀಲ್, ಅರೋಗ್ಯ ರಕ್ಷಾ ಸಮಿತಿ ಸದಸ್ಯರು ಕುಂಡಚೀರ ಮಂಜು ದೇವಯ್ಯ,ಕಿಶೋರ್,ಸಿಬಾ ಪೃಥ್ವಿನಾಥ್, ಅನಿತಾ, ಮಂಡೆಟೀರ ಅನಿಲ್, ಶಬೀರ್, ವಿರಾಜಪೇಟೆ ವಿಧಾನ ಸಭಾ ಕ್ಷೆತ್ರದ ಅಧ್ಯಕ್ಷರು…
ಮಡಿಕೇರಿ NEWS DESK ಸೆ.23 : ಕೊಡಗು ಜಿಲ್ಲೆಯ ಅರೆಭಾಷೆ ಗೌಡರು ಜಾತಿ ಜನಗಣತಿ ಸಂದರ್ಭ ಗೌಡ ಎಂದು ನಮೂದಿಸುವಂತೆ ಮಡಿಕೇರಿ GOWDA (ಗೌಡ) ಸಮಾಜ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮಡಿಕೇರಿ ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ಅವರು ಪ್ರಸ್ತುತ ನಡೆಯಲಿರುವ ಕರ್ನಾಟಕ ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಗಣತಿಯಲ್ಲಿ ಹಾಗೂ ಮುಂದೆ ನಡೆಯಲಿರುವ ಕೇಂದ್ರ ಸರ್ಕಾರದ ಜಾತಿ ಗಣತಿಯ ಸಂದರ್ಭ ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿ ಅರೆಭಾಷೆ ಗೌಡ ಮತ್ತು ಮಾತೃ ಭಾಷೆ ಅರೆಭಾಷೆ ಎಂದು ನಮೂದಿಸಲು ಮನವಿ ಮಾಡಿದ್ದಾರೆ. ಮೂಲತಃ ಅರೆಭಾಷೆ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿರುವುದು ನಿಜ. ಆದರೆ ಅರೆಭಾಷೆ ಗೌಡರ ಶೈಕ್ಷಣಿಕ ಮತ್ತು ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ ಗೌಡ ಎಂದೇ ನಮೂದಾಗಿರುವುದರಿಂದ ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಕಾರಣದಿಂದ ಅರೆಭಾಷೆ ಗೌಡ ಸಮುದಾಯದ ಸಭೆಗಳನ್ನು…
ಮಡಿಕೇರಿ ಸೆ.23 NEWS DESK : ಆರು ದಶಕಗಳ ಕಾಲ ಉಳ್ಳಾಲವನ್ನು ಕೇಂದ್ರೀಕರಿಸಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಪ್ರಗತಿಗೆ ನಾಯಕತ್ವ ನೀಡಿದ್ದ ಅಧ್ಯಾತ್ಮ ಗುರು ತಾಜುಲ್ ಉಲಮಾ ಸೈಯದ್ ಅಬ್ದುಲ್ ರಹ್ಮಾನ್ ಅಲ್ ಬುಖಾರಿ ಉಳ್ಳಾಳ್ ತಙಳ್ ಅವರ 12ನೇ ಉರೂಸ್ ಕಾರ್ಯಕ್ರಮ ಸೆ.23 ರಿಂದ 25 ವರೆಗೆ ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂ ದರ್ಗಾ ಶರೀಫಿನಲ್ಲಿ ಹಲವಾರು ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಹಲವಾರು ಉಲಮಾ, ಉಮರಾ ನೇತಾರರು ಭಾಗವಹಿಸುವ ಈ ಉರೂಸ್ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಲು ಕೊಡಗು ಜಿಲ್ಲಾ ಮದನೀಸ್ ಅಸೋಸಿಯೇಷನ್ ಕರೆ ನೀಡಿದೆ.
ನಾಪೋಕ್ಲು ಸೆ.23 NEWS DESK : ಬಲಮುರಿ ಶ್ರೀ ಮಹಾದೇವ ಸ್ಪೋರ್ಟ್ಸ್ ಕ್ಲಬ್‍ನ 73ನೇ ವಾರ್ಷಿಕ ಮಹಾಸಭೆಯು ಕ್ಲಬ್ ನ ಕಚೇರಿಯಲ್ಲಿ ನಡೆಯಿತು. ಕ್ಲಬ್ ನ ಅಧ್ಯಕ್ಷರಾದ ತೊತ್ತಿಯಂಡ ಬನ್ಸಿ ಚಿಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕ್ಲಬ್ ನ ವತಿಯಿಂದ ಆಯೋಜಿಸಲ್ಪಟ್ಟ ಹಾಗೂ ಇತರಡೆ ನಡೆಸಿದ ಕಾರ್ಯಕ್ರಮಗಳು, ಕ್ರೀಡಾಕೂಟಗಳ ಬಗ್ಗೆ ಹಾಗೂ ಸಾಧಕ ಬಾಧಕಗಳ ಬಗ್ಗೆ ಚರ್ಚೆಗಳು ನಡೆದು ಅನುಮೋದನೆಗೊಂಡವು. ಮಹಾದೇವ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇತರ ಕ್ರೀಡಾಕೂಟಗಳಲ್ಲಿ ಜಯಶೀಲರಾದ ತಂಡಗಳನ್ನು ಹಾಗೂ ವೈಯಕ್ತಿಕ ವಿಜೇತರನ್ನು ಅಭಿನಂದಿಸಲಾಯಿತು. ಬರುವ ನವೆಂಬರ್ ತಿಂಗಳಿನಲ್ಲಿ ಕ್ಲಬ್ ವತಿಯಿಂದ ಜಿಲ್ಲಾಮಟ್ಟದಲ್ಲಿ ಮಹಿಳೆಯರಿಗೆ ಥ್ರೋಬಾಲ್, ಪುರುಷರಿಗೆ ವಾಲಿಬಾಲ್ ಹಾಗೂ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯನ್ನು ಏರ್ಪಡಿಸುಲು ತೀರ್ಮಾನಿಸಲಾಯಿತು. ನಿವೃತ್ತ ದೈಹಿಕ ಶಿಕ್ಷಕರಾದ ಚೈಯ್ಯಂಡ ರಘು ತಿಮ್ಮಯ್ಯ ಹಾಗೂ ಹಿರಿಯರಾದ ಬೊಳ್ಳಚೆಟ್ಟಿರ ಚೆಟ್ಟಿಚ್ಚ ಅವರು ಇದರ ಬಗ್ಗೆ ಸೂಕ್ತ ಮಾಹಿತಿ ಸಲಹೆ ಸೂಚನೆಯನ್ನು ನೀಡಿ ಮತ್ತೊಂದು ಸಭೆ ನಡೆಸಿ ಕ್ರೀಡಾಕೂಟ ನಡೆಸುವ ದಿನಾಂಕ ನಿಗದಿಪಡಿಸುವುದಾಗಿ ತಿಳಿಸಿದರು. ಈ…
ಮಡಿಕೇರಿ ಸೆ.23 NEWS DESK : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ನಗರದ ಗೌಳಿ ಬೀದಿಯಲ್ಲಿ ಚಾಲನೆ ನೀಡಿದರು. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಜಿಲ್ಲೆಯ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಆರಂಭವಾಗಿದ್ದು, ಆ ನಿಟ್ಟಿನಲ್ಲಿ ಸಮೀಕ್ಷೆಗೆ ಚಾಲನೆ ನೀಡಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ದೀಪಕ್, ತಹಶೀಲ್ದಾರ್ ಶ್ರೀಧರ, ಸಮೀಕ್ಷೆದಾರರು ಇತರರು ಇದ್ದರು.ನಾಡಿನ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ಉದ್ದೇಶವನ್ನು ಈಡೇರಿಸಲು, ಅರ್ಹ ಹಿಂದುಳಿದ ವರ್ಗಗಳನ್ನು ನಿಖರವಾಗಿ ಗುರುತಿಸಿ, ಸರ್ಕಾರದ ಸೌಲಭ್ಯವನ್ನು ಸಮಪರ್ಕವಾಗಿ ತಲುಪಿಸಲು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿ ನಿಖರವಾದ ಮಾಹಿತಿ ಸಂಗ್ರಹಿಸುವುದು ಬಹಳ ಮುಖ್ಯ. ಆ…
ಮಡಿಕೇರಿ ಸೆ.23 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀದಂಡಿನ ಮಾರಿಯಮ್ಮ ದೇವಿಗೆ ದಸರಾದ ಎರಡನೇ ದಿನವಾದ ಇಂದು ಪಂಚ ಪುಷ್ಪ ಅಲಂಕಾರದಲ್ಲಿ ಗಮನ ಸೆಳೆಯುತ್ತಿದೆ. ನೂರಾರು ಭಕ್ತರು ಪೂಜೆ ಸಲ್ಲಿಸಿ ವಿಶೇಷ ಅಲಂಕಾರವನ್ನು ವೀಕ್ಷಿಸಿದರು. ನವರಾತ್ರಿಯ ಪ್ರಯುಕ್ತ ಶ್ರೀ ದಂಡಿನ ಮಾರಿಯಮ್ಮ ದೇವಾಲಯದಲ್ಲಿ ಪ್ರತಿದಿನ ವಿಶೇಷ ಅಲಂಕಾರ ಸೇವೆ ಮತ್ತು ವಿಶೇಷ ಪೂಜೆ ನಡೆಯುತ್ತಿದೆ. ಸೆ.24 ರಂದು ವಿಳ್ಯೆದೆಲೆ ಅಲಂಕಾರ ನಡೆಯಲಿದೆ.
Grand Opening Invitation! >>> Dear Food Lovers, We are thrilled to welcome you to the Grand Opening of Bandhiraaa, a one-of-its-kind Kodava cuisine restaurant in the heart of Madikeri! Janatha Bazar Building, Opposite Madikeri Fort Tuesday, 23rd September 2025 ..Come experience the authentic taste of Kodava tradition served with love and warmth. Let’s celebrate flavors, culture, and togetherness at Bandhiraaa, where every dish tells a story of Kodagu! Join us and be part of this delicious beginning!
ಮಡಿಕೇರಿ ಸೆ.23 NEWS DESK : ದಿನನಿತ್ಯ ಆಯುರ್ವೇದ ಆಚರಣೆ ಮಾಡುವುದು ನಮ್ಮೆಲ್ಲರ ಆಶಯ ಎಂದು ಕೊಡಗು ಜಿಲ್ಲಾ ನೀಮಾ ಅಧ್ಯಕ್ಷರಾದ ಡಾ.ರಾಜಾರಾಮ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಆವರಣದಲ್ಲಿ ‘ಜನರಿಗಾಗಿ ಮತ್ತು ಜಗತ್ತಿಗಾಗಿ ಆಯುರ್ವೇದ ಎಂಬ ಘೋಷವಾಕ್ಯದೊಂದಿಗೆ ನಡೆದ 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಆಯುರ್ವೇದವನ್ನು ದಿನನಿತ್ಯ ಪಾಲಿಸುವಂತಾಗಬೇಕು ಮತ್ತು ಸಮಯಕ್ಕೆ ಸರಿಯಾಗಿ ಆಹಾರವನ್ನು ಸೇವಿಸಿದರೆ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಆ ನಿಟ್ಟಿನಲ್ಲಿ ಯೋಗ ಮತ್ತು ಪ್ರಾಣಾಯಾಮ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳ ಬಹುದಾಗಿದೆ ಎಂದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೈಲಜಾ ಜಿ. ಮಾತನಾಡಿ ಇತ್ತೀಚಿನ ದಿನಗಳಲ್ಲಿ ಆಯುರ್ವೇದಕ್ಕೆ ಮಾನ್ಯತೆ ದೊರೆತಿರುವುದು ವಿಶೇಷವಾಗಿದೆ. ನಮ್ಮ ಶರೀರ ಮತ್ತು ಮನಸ್ಸು ಒಂದೇ ಸಮತೋಲನವಾಗಿದ್ದರೆ ಆರೋಗ್ಯಕರವಾಗಿರಲು ಸಾಧ್ಯ ಎಂದು ಹೇಳಿದರು. ಜನರಿಗಾಗಿ ಮತ್ತು ಜಗತ್ತಿಗಾಗಿ ಆಯುರ್ವೇದ ಎಂದರು. ತಾಲೂಕು ಆಸ್ಪತ್ರೆಗಳಲ್ಲಿ 8 ಸರ್ಕಾರಿ…
ಕುಶಾಲನಗರ, ಸೆ.23 NEWS DESK : ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಬಾಲಕರ ಥ್ರೋಬಾಲ್ ಪಂದ್ಯಾವಳಿಯಲ್ಲಿ ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬಾಲಕರು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿರಂಗಾಲ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲ್ಲೂಕು ಮಟ್ಟದ ಬಾಲಕರು ಮತ್ತು ಬಾಲಕಿಯರ ಖೋ- ಖೋ ಪಂದ್ಯಾವಳಿ ನಡೆಯಿತು. ಈ ಪಂದ್ಯಾವಳಿಯಲ್ಲಿ ಕೂಡ ಕೂಡಿಗೆ ಸರ್ಕಾರಿ ಪಿಯೂ ಕಾಲೇಜಿನ ಬಾಲಕರು ಮತ್ತು ಬಾಲಕಿಯರು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಹಂಡ್ರಂಗಿ ನಾಗರಾಜ್ ತಿಳಿಸಿದ್ದಾರೆ. ಎಲ್ಲಾ ಪಂದ್ಯಾವಳಿಗಳಲ್ಲಿ ಈ ತಂಡಗಳು ಇದೇ ಮೊದಲ ಬಾರಿಗೆ ಜಿಲ್ಲಾಮಟ್ಟದ ಪಂದ್ಯಾವಳಿಗೆ ಆಯ್ಕೆಗೊಂಡಿರುವುದು ಕಾಲೇಜಿಗೆ ಕೀರ್ತಿ ತಂದಿದೆ ಎಂದು ತಿಳಿಸಿದ್ದಾರೆ. ಈ ಪಂದ್ಯಾವಳಿಗಳ ತಂಡದ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸಿದ ಉಪನ್ಯಾಸಕರಾದ ಎಂ.ಟಿ.ರಮೇಶ್ ಮತ್ತು ನಂದಿನಿ ಅವರಿಗೆ ಹಾಗೂ ಕ್ರೀಡಾಪಟುಗಳಿಗೆ…






