ಮಡಿಕೇರಿ NEWS DESK ಸೆ.22 : ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಅವರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿರುವ ಕುರಿತು, ಕಾಂಗ್ರೆಸ್ಸಿಗರಲ್ಲೇ ವಿರೋಧ ವ್ಯಕ್ತವಾಗಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಪ್ರಧಾನ ಕಾರ್ಯದರ್ಶಿ ಎಂ.ಎನ್.ರವೂಫ್ ಅವರು ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಬಿಜೆಪಿ ಮೂಲಕ ತಂತ್ರಗಾರಿಕೆ ಹೂಡಿದ್ದ ಅಪ್ರು ರವೀಂದ್ರ ಅವರ ಸೇರ್ಪಡೆಯನ್ನು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿದ್ದಾರೆ. ಮೊದಲು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ನಂತರ ಬಿಜೆಪಿಗೆ ಸೇರ್ಪಡೆಯಾಗಿ ಕಾಂಗ್ರೆಸ್ ವಿರುದ್ಧ ರಾಜಕೀಯ ಮಾಡಿದ ವ್ಯಕ್ತಿ ಇಂದು ಪಕ್ಷ ಅಧಿಕಾರದಲ್ಲಿದೆ ಎನ್ನುವ ಕಾರಣಕ್ಕೆ ಮತ್ತೆ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಈ ಬೆಳವಣಿಗೆ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ನೋವುಂಟು ಮಾಡಿದೆ. ಕಾಂಗ್ರೆಸ್ ಸೋಲಿಗೆ ಪ್ರಯತ್ನಿಸಿದವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿರುವ ನಾಯಕರ ನಿಲುವು ಕಾರ್ಯಕರ್ತರ ಭಾವನೆಗೆ ವಿರುದ್ಧವಾಗಿದೆ. ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಇಂದು…
ಲೇಖಕ: admin
ಮಡಿಕೇರಿ ಸೆ.22 : ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವದ ಮೂಲಕ ಐತಿಹಾಸಿಕ ಮಡಿಕೇರಿ ದಸರಾ ಸಂಭ್ರಮ ಇಂದು ಆರಂಭಗೊಂಡಿತು. ಇತಿಹಾಸ ಪ್ರಸಿದ್ಧ ನಾಲ್ಕು ಶಕ್ತಿ ದೇವತೆಗಳ ಕರಗಗಳಿಗೆ ನಗರದ ಪಂಪಿನ ಕೆರೆಯ ಬನ್ನಿ ಮಂಟಪದಲ್ಲಿ ಸಾಂಪ್ರದಾಯಿಕವಾಗಿ ವಿಶೇಷ ಪೂಜೆಯನ್ನು ಸಲ್ಲಿಸಿ ಕರಗೋತ್ಸವದ ನಗರ ಸಂಚಾರಕ್ಕೆ ಚಾಲನೆ ನೀಡಲಾಯಿತು. ಹಾಲೇರಿ ರಾಜವಂಶಸ್ಥರ ಆಳ್ವಿಕೆಯ ಕಾಲದಿಂದ ನಡೆದುಕೊಂಡು ಬಂದಿರುವ ಮಡಿಕೇರಿಯ ದಸರಾ ಉತ್ಸವಕ್ಕೆ ಒಂದೂವರೆ ಶತಮಾನದ ಭವ್ಯ ಇತಿಹಾಸವಿದೆ. ನಗರದ ನಾಲ್ಕು ಶಕ್ತಿ ದೇವತೆಗಳ ಕರಗಗಳಿಗೆ ದಸರಾ ಉತ್ಸವದಲ್ಲಿ ಅಗ್ರ ಸ್ಥಾನವನ್ನು ನೀಡಲಾಗಿದೆ. ನವರಾತ್ರಿಯ ವಿಶೇಷವಾಗಿ ಕರಗಗಳ ನಗರ ಪ್ರದಕ್ಷಿಣೆ ನಡೆಯಲಿದೆ. ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ನಗರದ ರಾಜಾಸೀಟು ಬಳಿಯ ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಕರಗವನ್ನು ಪಿ.ಪಿ.ಚಾಮಿ, ಗೌಳಿಬೀದಿಯ ಶ್ರೀಕಂಚಿಕಾಮಾಕ್ಷಿಯಮ್ಮ ದೇವಾಲಯದ ಕರಗವನ್ನು ಪಿ.ಸಿ.ಉಮೇಶ್, ಶ್ರೀದಂಡಿನ ಮಾರಿಯಮ್ಮ ದೇವಾಲಯದ ಕರಗವನ್ನು ಜಿ.ಎ.ಉಮೇಶ್ ಹಾಗೂ ಶ್ರೀಕೋಟೆ ಮಾರಿಯಮ್ಮ ದೇವಾಲಯದ ಕರಗವನ್ನು ಪಿ.ಬಿ.ಅನೀಶ್ ಕುಮಾರ್ ಹೊರುವ ಮೂಲಕ ನಗರ ಪ್ರದಕ್ಷಿಣೆಯನ್ನು ಆರಂಭಿಸಿದರು. ನವರಾತ್ರಿ ಉತ್ಸವದ ಆರಂಭದ…
ಮಡಿಕೇರಿ ಸೆ.22 NEWS DESK : ರಸ್ತೆ ಅವ್ಯವಸ್ಥೆಯನ್ನು ಖಂಡಿಸಿ ಸೆ.24 ರಂದು ಜಿಲ್ಲೆಯ ಪ್ರಮುಖ ಪಟ್ಟಣ ಪ್ರದೇಶಗಳಲ್ಲಿ ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಏಕ ಕಾಲಕ್ಕೆ ರಸ್ತೆ ತಡೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಹೋರಾಟ ರಾಜ್ಯವ್ಯಾಪಿ ನಡೆಯಲಿದೆ ಎಂದು ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆಯಿಂದಷ್ಟೆ ರಸ್ತೆಗಳು ಹದಗೆಟ್ಟಿದೆ ಎಂದರೆ ಅದು ಸಮರ್ಥನೀಯವಲ್ಲ. ಜಿಲ್ಲೆಯಲ್ಲಿ 2018ರಿಂದ ನಿರಂತರವಾಗಿ ಪ್ರತಿ ವರ್ಷ ಅಧಿಕ ಮಳೆಯಾಗುತ್ತಿದೆ. ಹೀಗಿದ್ದೂ ಹಿಂದಿನ ಬಿಜೆಪಿ ಅವಧಿಯಲ್ಲಿ ಆಯಾ ಸಂದರ್ಭಗಳಲ್ಲಿ ದುರಸ್ತಿ ಕಾರ್ಯಗಳೊಂದಿಗೆ ರಸ್ತೆಗಳನ್ನು ವ್ಯವಸ್ಥಿತವಾಗಿ ಇಡುವ ಪ್ರಯತ್ನ ನಡೆಯುತಿತ್ತು. ಆದರೆ, 2023 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಇಲ್ಲಿಯವರೆಗು ರಸ್ತೆಗಳ ಕನಿಷ್ಟ ನಿರ್ವಹಣಾ ಕಾರ್ಯವೂ ಇಲ್ಲದೆ, ಬಹುತೇಕ ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿ ಪರಿಣಮಿಸಿರುವುದಾಗಿ ಆರೋಪಿಸಿದರು. *ಮೋದಿ ಕೊಡುಗೆ* ನವರಾತ್ರಿ ಉತ್ಸವದ ಆರಂಭದಲ್ಲೆ ಪ್ರಧಾನಿ ನರೇಂದ್ರ ಮೊದಿ ಅವರು ಬಡವರ್ಗ ಮತ್ತು ಮಧ್ಯಮ ವರ್ಗವನ್ನು ಕೇಂದ್ರೀಕರಿಸಿ ಜಿಎಸ್‍ಟಿ…
ಮಡಿಕೇರಿ ಸೆ.22 NEWS DESK : ಕೊಡವರು ಕೊಡವ ಧರ್ಮಕ್ಕೆ ಸೇರಿದವರಾಗಿರುವುದರಿಂದ ಸರಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಸಂದರ್ಭ ಕೊಡವರು ತಮ್ಮ ಜಾತಿ, ಧರ್ಮವನ್ನು ‘ಕೊಡವ’ ಎಂದೇ ನಮೂದಿಸಬೇಕೆಂದು ಹಿರಿಯ ಕೊಡವ ಅಭಿಮಾನಿಗಳ ಸಂಘದ ಪ್ರಮುಖ ಉಳ್ಳಿಯಡ ಎಂ.ಪೂವಯ್ಯ ಅವರು ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೊಡವ ಧರ್ಮ’ ವಿಚಾರಕ್ಕೆ ಸಂಬಂಧಿಸಿದಂತೆ ಅಖಿಲ ಕೊಡವ ಸಮಾಜದಿಂದ ಕರೆಯಲಾಗಿದ್ದ ಸಭೆಯಲ್ಲಿ, ಒಂದು ಗುಂಪಿನ ಕೆಲವರು ವಿನಾಕಾರಣ ಗದ್ದಲವೆಬ್ಬಿಸಿ ಸಭೆಯನ್ನೇ ನಡೆಯದಂತೆ ಮಾಡಿರುವುದು ಖಂಡನೀಯವೆಂದು ತಿಳಿಸಿದರು. ಕೊಡವರು ಮೂಲದಲ್ಲಿ ‘ಕೊಡವ ಧರ್ಮ’ದವರೇ ಆಗಿದ್ದಾರೆ. 15ನೇ ಶತಮಾನದವರೆಗೂ ಇತರೆ ಯಾವುದೇ ಧರ್ಮಗಳ ಚೌಕಟ್ಟಿಗೆ ಒಳಪಡದೆ ತಮ್ಮದೇ ಆದ ಬದುಕಿನ ಪದ್ಧತಿ, ರೀತಿ ರಿವಾಜುಗಳೊಂದಿಗೆ ಬದುಕುತ್ತಿದ್ದರು. 16ನೇ ಶತಮಾನದ ಮಧ್ಯಭಾಗ 1540ರಿಂದ ಇಕ್ಕೇರಿ ರಾಜವಂಶಸ್ಥ ಲಿಂಗಾಯಿತ ರಾಜರು 1834ರವರೆಗೆ ಕೊಡಗನ್ನಾಳಿದರು. ಈ ಹಂತದಲ್ಲಿ ಕೊಡಗಿನ ಕೊಡವರ ಕೊಡವ ಧರ್ಮದಲ್ಲಿ ಸಾಕಷ್ಟು ಬದಲಾವಣೆಗಳು ಕಂಡು ಬಂದವು, ನಮ್ಮಲ್ಲಿ ಇಲ್ಲದ ಹಬ್ಬಗಳ ಆಚರಣೆಗಳನ್ನು ಅನುಸರಿಸಲಾರಂಭಿಸಿದರು ಎಂದು…
ಮಡಿಕೇರಿ ಸೆ.22 NEWS DESK : ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕಟ್ಟಡವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಉದ್ಘಾಟಿಸಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಪಪ್ಪ, ನಗರಸಭೆ ಸದಸ್ಯರಾದ ಸತೀಶ್ ಎಸ್.ಸಿ., ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕರಾದ ಡಾ.ಕವಿತಾ ಕೆ.ಆರ್. ಇತರರು ಇದ್ದರು. ಶಾಸಕರಾದ ಡಾ,ಮಂತರ್ ಗೌಡ ಅವರು ಮಾತನಾಡಿ ಸರ್ಕಾರ ಹೆಣ್ಣು ಮಕ್ಕಳಿಗೆ ಪ್ರತ್ಯೇಕವಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಿದ್ದು, ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿದೆ ಎಂದರು. ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾಲೇಜಿಗೆ ಸೇರುವಂತಾಗಬೇಕು. ಪ್ರಾಧ್ಯಾಪಕರು ಸಹ ಹೆಚ್ಚಿನ ಶ್ರಮವಹಿಸಿ ಪಾಠ ಪ್ರವಚನ ಮಾಡಬೇಕು ಎಂದು ಸಲಹೆ ನೀಡಿದರು. ಸರ್ಕಾರ ಈಗಾಗಲೇ…
ಮಡಿಕೇರಿ ಸೆ.22 NEWS DESK : ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಸಿದ್ಧತೆ ಬಗ್ಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಬೆಂಗಳೂರಿನಲ್ಲಿ ನಡೆದ ಆರ್‍ಸಿಬಿ ತಂಡದ ವಿಜಯೋತ್ಸವ ಸಂದರ್ಭದಲ್ಲಿ ಆದ ಘಟನೆ, ಹಾಗೆಯೇ ಇತ್ತೀಚೆಗೆ ಗಣಪತಿ ಉತ್ಸವದಲ್ಲಿ ಹಾಸನದಲ್ಲಿ ನಡೆದ ಅವಘಡದಿಂದ ತುಂಬಾ ಎಚ್ಚರ ವಹಿಸಬೇಕಿದ್ದು, ಆ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಜೊತೆ ನಗರಸಭೆ, ಸೆಸ್ಕ್, ಆರ್‍ಟಿಒ, ಇತರೆ ಇಲಾಖೆ ಅಧಿಕಾರಿಗಳು ಕೈಜೋಡಿಸುವಂತೆ ನಿರ್ದೇಶನ ನೀಡಿದರು. ಮಂಟಪಗಳ ಮೆರವಣಿಗೆ ಮಾರ್ಗದಲ್ಲಿ ವಿದ್ಯುತ್ ಮಾರ್ಗ ಬಗ್ಗೆ ಇನ್ನಷ್ಟು ಎಚ್ಚರವಹಿಸುವುದು, ನಗರಸಭೆಯವರು ಸ್ವಚ್ಛತೆ ಜೊತೆಗೆ ಪೊಲೀಸ್ ಇಲಾಖೆ ಜೊತೆ ಕೈಜೋಡಿಸಿ ಹಲವು ಸಮನ್ವಯತೆ ಕಾಯ್ದುಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಮಂಟಪಗಳ ಎತ್ತರ, ವಿದ್ಯುತ್ ಮಾರ್ಗ ಮತ್ತಿತರ ಬಗ್ಗೆ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಆರಂಭದಲ್ಲಿ ಮಾತನಾಡಿದ ನಗರಸಭೆ…
ಕಾರ್ಕಳ ಸೆ.22 NEWS DESK : ಉಡುಪಿಯ ರಾಷ್ಟ್ರೋತ್ಥಾನ ಪಿಯು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಚದುರಂಗ (ಚೆಸ್) ಸ್ಪರ್ಧೆ ಜರುಗಿತು. ಕಾರ್ಕಳದ ಕ್ರಿಯೇಟಿವ್ ಪಿ.ಯು.ಕಾಲೇಜಿನ ವಿದ್ಯಾರ್ಥಿ ತೇಜಸ್ ಎಂ.ಶೆಣೈ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದು, ಮುಂಬರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ಆಡಲಿದ್ದಾರೆ. ವಿದ್ಯಾರ್ಥಿಯ ಸಾಧನೆಯನ್ನು ಆಡಳಿತ ಮಂಡಳಿ, ಬೋಧಕ – ಬೋಧಕೇತರ ವೃಂದದವರು ಅಭಿನಂದಿಸಿ, ಶುಭಹಾರೈಸಿದ್ದಾರೆ.
ಮಡಿಕೇರಿ ಸೆ.22 NEWS DESK : ಛಾಯಾಚಿತ್ರ ಎನ್ನುವುದು ಅದ್ಭುತ ಕಲೆ. ಇಂದೊಂದು ಭಾಷೆಯಾಗಿದ್ದು, ಸಾವಿರ ಪದಗಳಿಗೆ ಸಮಾನವಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ದಿನ ಪತ್ರಿಕೆಯ ಮಂಗಳೂರು ಆವೃತ್ತಿಯ ಖ್ಯಾತ ಛಾಯಾಚಿತ್ರ ಪತ್ರಕರ್ತ ರವಿ ಪೊಸವಣಿಕೆ ಹೇಳಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಪತ್ರಿಕೋದ್ಯಮ ವಿಭಾಗ, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ಸಹಯೋಗದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವಿಚಾರ ಸಂಕಿರಣ ಕೊಠಡಿಯಲ್ಲಿ ನಡೆದ ಛಾಯಾಚಿತ್ರ ಪತ್ರಿಕೋದ್ಯಮದ ವ್ಯಾಪ್ತಿ ಮತ್ತು ಉದ್ಯೋಗಾವಕಾಶ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ, ಉಪನ್ಯಾಸ ನೀಡಿದರು. ಒಂದು ಛಾಯಾಚಿತ್ರದ ಮೂಲಕ ಸಾವಿರ ಕಥೆಯನ್ನು ಹೇಳಬಹುದು. ಇದು ಒಂದು ಕ್ಷಣದಲ್ಲಿ ಭಾವನೆಗಳು, ನೆನಪುಗಳು ಮತ್ತು ಸಂದೇಶಗಳನ್ನು ದೃಶ್ಯ ರೂಪದಲ್ಲಿ ಸೆರೆಹಿಡಿಯುತ್ತದೆ. ಇದು ವಿಜ್ಞಾನ ಮತ್ತು ಸೃಜನಾತ್ಮಕತೆಯನ್ನು ಒಳಗೊಂಡಿದ್ದು, ಪ್ರಕೃತಿ, ಜನರು ಮತ್ತು ಘಟನೆಗಳ ಸೌಂದರ್ಯವನ್ನು ಸೆರೆಹಿಡಿದು ನೋಡುಗರ ಹೃದಯವನ್ನು ಸ್ಪರ್ಶಿಸುತ್ತದೆ ಎಂದು ಹೇಳಿದರು. ಛಾಯಾಗ್ರಹಣವು ಕೇವಲ ಚಿತ್ರಗಳನ್ನು ಸೆರೆಹಿಡಿಯುವುದಲ್ಲ, ಅದು…
ಕೊಡ್ಲಿಪೇಟೆ ಸೆ.22 NEWS DESK : ವಿಶ್ವ ಗುರು ಬಸವಣ್ಣನವರ ಆದರ್ಶ ಹಾಗೂ ತತ್ವಗಳನ್ನು ನಾಡಿನ ಜನಮಾನಸಕ್ಕೆ ತಲುಪಿಸುವ ಮಹತ್ಕಾರ್ಯವನ್ನು ಮಠಾಧಿಪತಿಗಳ ಒಕ್ಕೂಟ ಮಾಡಿತ್ತಿದ್ದು, ಎಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದೆ ಎಂದು ಗದಗ ಜಿಲ್ಲೆಯ ಡಂಬಳದ ಎಡೆಯೂರು ತೋಂಟದಾರ್ಯ ಸಂಸ್ಥಾನ ಮಠದ ಜಗದ್ಗುರು ಡಾ.ತೋಂಟದ ಸಿದ್ದರಾಮ ಮಹಾಸ್ವಾಮಿ ಹೇಳಿದರು. ಮಠಾಧಿಪತಿಗಳ ಒಕ್ಕೂಟದ ವತಿಯಿಂದ ರಾಜ್ಯವ್ಯಾಪಿ ಹಮ್ಮಿಕೊಂಡಿರುವ ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮದ ಧಾರ್ಮಿಕ ಸಭೆಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕನಾಗಿ ಘೋಷಿಸಿದರೆ ಸಾಲದು. ನಾಡಿನಾದ್ಯಂತ ಬಸವಣ್ಣನ ಆಶಯಗಳನ್ನು ಪ್ರಚಾರ ಪಡಿಸುವ ಕೆಲಸ ವಾಗಬೇಕಿದೆ. ಹೆಣ್ಣುಮಕ್ಕಳಿಗೆ ಪ್ರಜಾಸತ್ತಾತ್ಮಕ ಧಾರ್ಮಿಕ ಸ್ವಾತಂತ್ರ್ಯ ತಂದುಕೊಟ್ಟ ಪರಿಣಾಮ ಹೆಣ್ಣುಮಕ್ಕಳು ಇಂದು ವಿಶ್ವವ್ಯಾಪಿ ಸಾಧನೆಯ ಶಿಖರವೇರಲು ಸಾಧ್ಯ ವಾಗಿದೆ. ಹೆಣ್ಣು ಮಕ್ಕಳಿಗೆ ಸಂಸ್ಕಾರಗಳನ್ನು ತಂದುಕೊಟ್ಟು, ಅವರಲ್ಲಿ ಸರ್ವ ಸಮಾನತೆಯ ಮೌಲ್ಯಗಳನ್ನು ತಂದು ಕೊಟ್ಟ ವಿಶ್ವಗುರು ಬಸವಣ್ಣ ಸಮಾಜದಲ್ಲಿ ಮೇಲು ಕೀಳು ಬೇಧಗಳನ್ನು ದೂರ ಮಾಡಿದ ಸತ್ಪುರುಷ ಎಂದರು. ಬಸವೇಶ್ವರರ ಆದರ್ಶಗಳನ್ನು ಶಾಲಾ…
ಪುತ್ತೂರು ಸೆ.22 NEWS DESK : ಮಕ್ಕಳು ಕಿಶೋರಾವಸ್ಥೆಯಿಂದ ತಾರುಣ್ಯಾವಸ್ಥೆಗೆ ಬರುವ ಸಂದರ್ಭದಲ್ಲಿ ಆಗುವ ದೈಹಿಕ ಬದಲಾವಣೆ ಮತ್ತು ಮಾನಸಿಕ ಬದಲಾವಣೆಗಳನ್ನು ಸರಿಯಾಗಿ ತಿಳಿಹೇಳದಿದ್ದರೆ ಅವರು ಒತ್ತಡಕ್ಕೆ ಒಳಗಾಗುತ್ತಾರೆ ಎಂದು ಪುತ್ತೂರಿನ ಪ್ರಜ್ಞಾ ಮಾನಸಿಕ ಆರೋಗ್ಯ ಕೇಂದ್ರದ ತಜ್ಞ ಡಾ.ಗಣೇಶ್ ಪ್ರಸಾದ್ ಮುದ್ರಜೆ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಡಾಟಾ ಸೈನ್ಸ್ ವಿಭಾಗ, ಕಾಲೇಜು ಆಂತರಿಕ ದೂರು ಸಮಿತಿ ಮತ್ತು ಪೇರೆಂಟ್ ರಿಲೇಶನ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀರಾಮ ಸಬಾಭವನದಲ್ಲಿ ನಡೆದ ತಾರುಣ್ಯಾವಸ್ಥೆಯಲ್ಲಿ ಎದುರಿಸುವ ಮಾನಸಿಕ ತುಮುಲಗಳು ಮತ್ತು ಪರಿಹಾರ ಎನ್ನುವ ಜಾಗೃತಿ ಕಾರ್ಯಕ್ರಮದಲ್ಲಿ ಮಾತಾಡಿದರು. ಈ ವಯಸ್ಸಿನಲ್ಲಿ ಉಂಟಾಗುವ ಶಾರೀರಿಕ ಬದಲಾವಣೆ ಇದರಿಂದಾಗುವ ಮನೋಕಾಮನೆಗಳು ಇದನ್ನು ಪರಿಹರಿಸುವ ರೀತಿ ಇವುಗಳ ಬಗ್ಗೆ ಹೆಚ್ಚು ಯೋಚಿಸುವುದರ ಜತೆಯಲ್ಲಿ ಸಾಮಾಜಿಕ ಜವಾಬ್ಧಾರಿಗಳಿಂದ ಉಂಟಾಗುವ ತುಮುಲಗಳು ಅವರನ್ನು ಒತ್ತಡಕ್ಕೆ ಸಿಲುಕಿಸುತ್ತದೆ. ಇದನ್ನು ನಿವಾರಿಸುವುದಕ್ಕೆ ಇದರ ಬಗ್ಗೆ ಸೂಕ್ತ ತಿಳುವಳಿಕೆಯನ್ನು ಪಡೆದುಕೊಳ್ಳುವುದು, ಸರಿಯಾದ ನಿದ್ರೆ, ಉತ್ತಮ ಆಹಾರಾಭ್ಯಾಸಗಳು, ಲಘು…






