ಮಡಿಕೇರಿ NEWS DESK ಸೆ.22 : ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಟಿಕೊಪ್ಪ ಪಟ್ಟಣದ ಫ್ಯಾಷನ್ ಜ್ಯುವೆಲ್ಲರಿಯಲ್ಲಿ ಇತ್ತೀಚೆಗೆ ನಡೆದಿದ್ದ ಚಿನ್ನದ ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೂಲದ ಮೂವರು ಮಹಿಳಾ ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರ ರಾಜ್ಯದ ಸಾಂಗಲಿ ಜಿಲ್ಲೆಯ ಅಲ್ಪನಾ (37), ಬಬಿತಾ (47) ಹಾಗೂ ಪೂಜಾ (29) ಬಂಧಿತ ಆರೋಪಿಗಳಾಗಿದ್ದು, ಇವರ ಬಳಿಯಿಂದ 22.180 ಗ್ರಾಂ ತೂಕದ 2 ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ಸೆ.14 ರಂದು ಅಪರಿಚಿತ ಮೂವರು ಮಹಿಳೆಯರು ಚಿನ್ನಾಭರಣ ಖರೀದಿಯ ನೆಪದಲ್ಲಿ ಸುಂಟಿಕೊಪ್ಪದ ಫ್ಯಾಷನ್ ಜ್ಯುವೆಲ್ಲರಿಗೆ ಬಂದಿದ್ದರು. ಯಾರ ಗಮನಕ್ಕೂ ಬಾರದ ಹಾಗೆ ಅಂದಾಜು 22 ಗ್ರಾಂ ತೂಕದ 2 ಚಿನ್ನದ ಸರವನ್ನು ಕಳವು ಮಾಡಿರುವ ಕುರಿತು ಅಂಗಡಿ ಮಾಲೀಕರು ಸುಂಟಿಕೊಪ್ಪ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್‌ಪಿ ಚಂದ್ರಶೇಖರ್.ಪಿ, ಕುಶಾಲನಗರ ವೃತ್ತದ ಸಿಪಿಐ ದಿನೇಶ್ ಕುಮಾರ್, ಪಿಎಸ್‌ಐ…
ಲೇಖಕ: admin
ಸೋಮವಾರಪೇಟೆ ಸೆ.22 NEWS DESK : ಮುಕೊಡ್ಲು ಆಸ್ತಿ ಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ವಜಾಗೊಳಿಸಲು ಒತ್ತಾಯಿಸಿ ಸೆ.26 ರಂದು ಮಡಿಕೇರಿಯಲ್ಲಿರುವ ಅರಣ್ಯಭವನಕ್ಕೆ ಮುತ್ತಿಗೆ ಹಾಕುವುದಾಗಿ ರೈತ ಹೋರಾಟ ಸಮಿತಿ ಅಧ್ಯಕ್ಷ ಸುರೇಶ್ ತಿಳಿಸಿದ್ದಾರೆ. ಸೋಮವಾರಪೇಟೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಮುಕೊಡ್ಲು ಗ್ರಾಮದ ಕಾಳಚಂಡ ನಾಣಿಯಪ್ಪ ಎಂಬುವರ ಜಮೀನಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಅಕ್ರಮ ಪ್ರವೇಶ ಮಾಡಿ ಕಾಫಿ, ಎಲಕಿ ಗಿಡಗಳನ್ನು ಕಡಿದು ಸಂಪೂರ್ಣ ತೋಟವನ್ನು ನಾಶಪಡಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಬೇಕು ಹಾಗೂ ಸಂತ್ರಸ್ತರಿಗೆ 30 ಲಕ್ಷ ಪರಿಹಾರ ಕೊಡಬೇಕೆಂದು ಬೇಡಿಕೆ ಇಟ್ಟಿದ್ದೆವು. ಆದರೆ ಇಲಾಖೆ ಇದಕ್ಕೆ ಸ್ಪಂದಿಸಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಅರಣ್ಯ ಇಲಾಖೆಯ ಈ ಧೋರಣೆಯನ್ನು ವಿರೋದಿಸಿ ಸೆ.26 ರಂದು ಮಡಿಕೇರಿಯ ಅರಣ್ಯಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಒಕ್ಕಲಿಗರ ಸಮುದಾಯ ಭವನದಲ್ಲಿ ಪೂರ್ವಭಾವಿ ಸಭೆ ನಡೆಸಲಾಗಿದ್ದು ವಿವಿಧ ಗ್ರಾಮಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡು…
ಮೈಸೂರು NEWS DESK ಸೆ.22 : ನಾಡದೇವತೆ ತಾಯಿ ಶ್ರೀ ಚಾಮುಂಡೇಶ್ವರಿಯ ಅಗ್ರಪೂಜೆಯೊಂದಿಗೆ 2025ರ ಮೈಸೂರು ದಸರಾ ಮಹೋತ್ಸವವನ್ನು ಸಾಹಿತಿ ಬಾನು ಮುಷ್ತಾಕ್ ಅವರು ಉದ್ಘಾಟಿಸಿದರು. ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಯನ್ನು ಆರಾಧಿಸಿ, ಸಂಭ್ರಮಿಸುವ ಈ ಶುಭ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಜರಿದ್ದು, ಸಮಸ್ತ ಕನ್ನಡಿಗರ ಬಾಳು ಹಸನಾಗಲಿ ಎಂದು ತಾಯಿಯಲ್ಲಿ ಪ್ರಾರ್ಥಿಸಿದರು.
ಮೈಸೂರು NEWS DESK ಸೆ.22 : ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾಹಿತಿ ಬಾನು ಮುಷ್ತಾಕ್ ಅವರು ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
ಮಡಿಕೇರಿ. ಸೆ. 22 NEWS DESK : ಮಡಿಕೇರಿ ಜನೋತ್ಸವ ದಸರಾ ಕಾಯ೯ಕ್ರಮಗಳು ಆಯೋಜಿತವಾಗಿರುವ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಸೆ.24 ರಂದು ಬುಧವಾರ ಕಾಫಿ ಕಂಪು ಮೇಳೈಸಲಿದೆ. ಕಾಫಿ ದಸರಾದಲ್ಲಿ ಕಾಫಿ ಕೖಷಿಸಂಬಂಧಿತ ಮತ್ತು ಕೆಫೆ ಸೇರಿದಂತೆ 45 ಮಳಿಗೆಗಳು ಜನರ ಗಮನ ಸೆಳೆಯಲಿವೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಪರಿಕಲ್ಪನೆಯಲ್ಲಿ ಕಳೆದ ವಷ೯ದಿಂದ ಮಡಿಕೇರಿ ದಸರಾಕ್ಕೆ ಪರಿಚಯಿಸಲ್ಪಟ್ಟ ಕಾಫಿ ದಸರಾ ಈ ಬಾರಿಯೂ ಉತ್ತಮ ಸ್ಪಂದನ ದೊರಕುವ ನಿರೀಕ್ಷೆಯಿದೆ. ಕೂಗ್೯ ಪ್ಲಾಂಟಸ್೯ ಅಸೋಸಿಯೇಷನ್ ಸಹಯೋಗ ನೀಡಿರುವ ಕಾಫಿ ದಸರಾವನ್ನು ಭಾರತೀಯ ಕಾಫಿ ಮಂಡಳಿಯ ಅಧ್ಯಕ್ಷ ದಿನೇಶ್ ದೇವವೖಂದ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ವಹಿಸಲಿದ್ದಾರೆ. ಮುಖ್ಮಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರ ಶಾಸಕ ಎ.ಎಸ್ ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟರಾಜಾ,ಮಡಿಕೇರಿ ನಗರಸಭಾ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ದಸರಾ ಸಮಿತಿ ಕಾಯಾ೯ಧ್ಯಕ್ಷ ಬಿ.ಕೆ.ಅರುಣ್ ಕುಮಾರ್, ಪ್ರಧಾನ ಕಾಯ೯ದಶಿ೯…
ಮಡಿಕೇರಿ NEWS DESK ಸೆ.22 : ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರದ ಜಾತಿ ಜನಗಣತಿಯ ಸಂದರ್ಭ ಕೊಡಗು ಜಿಲ್ಲೆಯ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸುವಂತೆ ಮೂರ್ನಾಡು ಗೌಡ ಸಮಾಜ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮೂರ್ನಾಡು ಗೌಡ ಸಮಾಜದ ಅಧ್ಯಕ್ಷ ಪಾಣತ್ತಲೆ ಹರೀಶ್ ಅವರು ಬಹಳ ಹಿಂದಿನಿAದಲೂ ಕೊಡಗಿನ ಅರೆಭಾಷೆ ಗೌಡರ ಕಂದಾಯ, ಶೈಕ್ಷಣಿಕ ಸೇರಿದಂತೆ ಎಲ್ಲಾ ದಾಖಲೆಗಳಲ್ಲಿ ಗೌಡ ಎಂದೇ ನಮೂದಿಸಿರುವುದರಿಂದ ಈಗ ಬದಲಾವಣೆ ಮಾಡಿದರೆ ತೊಂದರೆಯಾಗುವ ಸಾಧ್ಯತೆಗಳಿದೆ. ಆದ್ದರಿಂದ ಗಣತಿದಾರರು ಬಂದಾಗ ಅರೆಭಾಷೆ ಗೌಡ ಸಮುದಾಯ ಬಾಂಧವರು ಜಾತಿ ಕಾಲಂ ನಲ್ಲಿ GOWDA (ಗೌಡ), ಉಪಜಾತಿ ಅರೆಭಾಷೆ ಗೌಡ ಮತ್ತು ಭಾಷೆಯ ಕಾಲಂ ನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಕೋರಿದ್ದಾರೆ. ಎಲ್ಲಾ ಮೂಲ ದಾಖಲೆಗಳನ್ನು ಒಕ್ಕಲಿಗ ಎಂದು ಹೊಂದಿರುವ ಅರೆಭಾಷೆ ಗೌಡ ಸಮುದಾಯದವರು ಇದ್ದರೆ, ಜಾತಿ ಒಕ್ಕಲಿಗ, ಉಪಜಾತಿ ಅರೆಭಾಷೆ ಗೌಡ, ಅರೆಭಾಷೆ ಒಕ್ಕಲಿಗ ಮತ್ತು ಮಾತೃಭಾಷೆ ಅರೆಭಾಷೆ ಎಂದು…
ಮಡಿಕೇರಿ ಸೆ.22 NEWS DESK: ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನೂತನ ಕಟ್ಟಡವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಉದ್ಘಾಟಿಸಿದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಸೋಮವಾರಪೇಟೆ NEWS DESK ಸೆ.22 : ಜಿ.ಎಸ್.ಟಿ. ಕಡಿತ ಜನಸಾಮಾನ್ಯರಿಗೆ ವರದಾನವೆಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು. ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಏರ್ಪಡಿಸಿದ್ದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಎಲ್ಲಾ ಸರ್ಕಾರಗಳು ಒಮ್ಮೆ ತೆರಿಗೆ ಏರಿಸಿದ ನಂತರ ಮುಂದಕ್ಕೆ ಹೆಚ್ಚಿಗೆ ಮಾಡಿಕೊಂಡೇ ಹೋಗುತ್ತಾರೆ, ಆದರೆ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಏರಿಸಿದ್ದ ತೆರಿಗೆಯನ್ನು ಕಡಿಮೆ ಮಾಡುವ ಮೂಲಕ ದಾಖಲೆ ಬರೆದಿದ್ದಾರೆ ಎಂದರು. ಕೇಂದ್ರ ಸರ್ಕಾರ 350 ಕ್ಕೂ ಅಧಿಕ ವಸ್ತುಗಳ ಮೇಲಿನ ಜಿ.ಎಸ್.ಟಿ ಯನ್ನು ಕಡಿತಗೊಳಿಸಿ ಜನ ಸಾಮಾನ್ಯರಿಗೆ ನೆರವಾಗಿದ್ದಾರೆ. ಕ್ಯಾನ್ಸರ್ ರೋಗಿಗಳ ಔಷಧಿಗಳನ್ನ ತೆರಿಗೆ ಇಲ್ಲದೆ ಖರೀದಿಸಬಹು ಹಾಗೆ ಶಿಕ್ಷಣದ ವಸ್ತುಗಳಿಗೂ ರಿಯಾಯಿತಿ ನೀಡಿ ಶೈಕ್ಷಣಿಕ ಬೆಳವಣಿಗೆಗೆ ಆದ್ಯತೆ ನೀಡಿದ್ದಾರೆಂದು ಹೇಳಿದರು. ವರ್ತಕರ ಸಂಘದ ಹಿರಿಯ ಸದಸ್ಯ ತಿಮ್ಮಶೆಟ್ಟಿ ಮಾತನಾಡಿ ಕೇಂದ್ರ ಸರ್ಕಾರ ವರ್ತಕರ ಹಿತಾಸಕ್ತಿಯನ್ನು ಗಮದಲ್ಲಿರಿಸಿಕೊಂಡು ಜಿ.ಎಸ್.ಟಿ. ಖಡಿತ ಗೊಳಿಸಿರುವುದು ಸ್ವಾಗತಾರ್ಹ.ಜನಸಾಮಾನ್ಯರಿಗೆ ಹೊರೆಯಾಗುವುದನ್ನು ತಪ್ಪಿಸಿದ್ದಾರೆಂದರು. ಕಾರ್ಯಕ್ರಮದಲ್ಲಿ ಸ್ಥಳೀಯ ವರ್ತಕರ ಸಂಘದ ಅಧ್ಯಕ್ಷ ಧನಂಜಯ್, ಜಿಲ್ಲಾ ಬಿಜೆಪಿ…
ಸೋಮವಾರಪೇಟೆ ಸೆ.22 NEWS DESK : ಸೋಮವಾರಪೇಟೆ ಪಟ್ಟಣದಲ್ಲಿ ನವರಾತ್ರಿ ಉತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು. ಪಟ್ಟಣದ ಸೋಮೇಶ್ವರ ಹಾಗೂ ಬಸವೇಶ್ವರ ದೇವಾಲಯಗಳಲ್ಲಿ ದೇವಿ ಮೂರ್ತಿಯ ಪ್ರತಿಷ್ಠಾಪನೆಯೊಂದಿಗೆ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿವೆ. ಈ ಭಾರಿ ನವರಾತ್ರಿ ಉತ್ಸವ ಹನ್ನೊಂದು ದಿನ ನಡೆಯಲಿರುವುದು ವಿಶೇಷ. ಸೋಮೇಶ್ವರ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಆನೆಕೆರೆಯಲ್ಲಿ ಗಂಗಾಪೂಜೆ ನೆರವೇರಿಸಿ, ಮಂಗಳ ವಾಧ್ಯಘೋಷಗಳೊಂದಿಗೆ ಮೆರವಣಿಗೆಯ ಮೂಲಕ ದೇವಾಲಯಕ್ಕೆ ತಂದು ಅರ್ಚಕ ಚಿತ್ರಕುಮಾರ ಭಟ್ ಪುರೋಹಿತ್ವದಲ್ಲಿ ಪ್ರತಿಷ್ಠಾಪನೆಯ ವಿಧಿವಿಧಾನಗಳ ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನೆರವೇರಿತು. ಬಸವೇಶ್ವ ದೇವಾಲಯದ ಪ್ರತಿಷ್ಠಾಪನೆಯ ಲೋಹದ ದೇವಿ ಮೂರ್ತಿಯನ್ನು ಆನೆಕೆರೆಯಲ್ಲಿ ಗಂಗೆ ಪೂಜೆಯೊಂದಿಗೆ ದೇವಾಲಯಕ್ಕೆ ತಂದು ಅರ್ಚಕ ಶೇಕಯ್ಯ ಪುರೋಹಿತ್ವದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಇಂದಿನಿಂದ ಅ.2ರ ವರೆಗೆ ಪ್ರತಿನಿತ್ಯ ದೇವಿಗೆ ವಿವಿಧ ಅಲಂಕಾರ, ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಕುಶಾಲನಗರ, ಸೆ.22 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಚ್ಛ ಭಾರತ ಅಭಿಯಾನದಡಿ ಕೊಡಗು ಜಿಲ್ಲಾ ಪಂಚಾಯ್ತಿಯ ಸ್ವಚ್ಛತಾ ಅಭಿಯಾನ ಯೋಜನೆ, ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಶಾಲೆಯ ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕದ ವತಿಯಿಂದ ಸ್ವಚ್ಚತಾ ಹೀ ಸೇವಾ*ಪಾಕ್ಷಿಕ *ಅಭಿಯಾನ 2025 ಕ್ಕೆ ಶ್ರಮದಾನದ ಮೂಲಕ ಚಾಲನೆ ನೀಡಲಾಯಿತು. ಸ್ವಚ್ಛತಾ ಹೀ ಸೇವಾ ಅಭಿಯಾನ ಹಾಗೂ ಶ್ರಮದಾನದ ಮಹತ್ವ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಸಂಚಾಲಕರೂ ಆದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ‘ಸ್ವಚ್ಛ ಭಾರತ್ ಮಿಷನ್ ಮೂಲಕ ದೇಶದ ಜನರಲ್ಲಿ ಸ್ವಚ್ಛತೆ, ಆರೋಗ್ಯ, ನೈರ್ಮಲ್ಯ ಮತ್ತು ನೈರ್ಮಲ್ಯದ ಮಹತ್ವದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ನಾವು ಸ್ವಚ್ಛ , ಸುಂದರ ಮತ್ತು ಹಸಿರು ಪರಿಸರಕ್ಕೆ ಆದ್ಯತೆ ನೀಡುವ ಮೂಲಕ ನಮ್ಮ…






