ಲೇಖಕ: admin

ನಾಪೋಕ್ಲು ಸೆ.22 NEWS DESK : ಮೂರ್ನಾಡು ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕವನ್ನು ಉದ್ಘಾಟಿಸಲಾಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮೂರ್ನಾಡು ಮಾರುತಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಎಂ.ಡಿ.ಹೇಮಾವತಿ ಅವರು ಮಾತನಾಡಿ ವಿದ್ಯಾರ್ಥಿಗಳು ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು. ಪೋಷಕರು ಹಾಗೂ ಶಿಕ್ಷಕರಿಗೆ ವಿಧೇಯರಾಗಿ ಸಮಾಜಕ್ಕೆ ಆಸ್ತಿ ಆಗಬೇಕು ಎಂದು ಕರೆ ನೀಡಿದರು. ಕಾಲೇಜಿನ ನಿರ್ದೇಶಕರಾದ ಎಂ.ಕೆ.ಚಂಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಿಲ್ಮಾ, ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಎನ್‍ಎಸ್‍ಎಸ್ ಘಟಕದ ಯೋಜನಾಧಿಕಾರಿಗಳಾದ ಕಲ್ಪನಾ ಪ್ರತಿಜ್ಞಾವಿಧಿ ಬೋಧಿಸಿದರು. ವರದಿ : ದುಗ್ಗಳ ಸದಾನಂದ 

Read More

ಮಡಿಕೇರಿ ಸೆ.20 NEWS DESK : ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದಲ್ಲಿ ಶರನ್ನವರಾತ್ರಿ ಅಂಗವಾಗಿ ಸೆ.22 ರಿಂದ ಅ.2ರ ವರೆಗೆ ವಿಶೇಷ ಅಲಂಕಾರ ಪೂಜೆ ನಡೆಯಲಿದೆ.  ಪ್ರತೀ ದಿನ ಬೆಳಿಗ್ಗೆ 9.30 ಗಂಟೆಗೆ ಅಲಂಕಾರ ಪೂಜೆ ಜರುಗಲಿದೆ. ಸೆ.30 ರಂದು ದುರ್ಗಾಷ್ಟಮಿಯ ಅಂಗವಾಗಿ ಬೆಳಿಗ್ಗೆ 9.30 ಗಂಟೆಗೆ  ಗಣಪತಿ ಹೋಮ, ಶ್ರೀ ದುರ್ಗಾ ಹವನ ನಡೆಯಲಿದೆ. ಮಧ್ಯಾಹ್ನ ಅನ್ನ ಸಂಪರ್ತಣೆ ನೆರವೇರಲಿದ್ದು, ಸಂಜೆ 7 ಗಂಟೆಗೆ ವಿಶೇಷ ದುರ್ಗಾ ಪೂಜೆ ಜರುಗಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ.

Read More

ವಿರಾಜಪೇಟೆ ಸೆ.20 NEWS DESK : ಜಿಲ್ಲೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ವಿರಾಜಪೇಟೆಯ ಸೆಂಟ್ ಆನ್ಸ್ ಕಾಲೇಜಿನಲ್ಲಿ  ಸ್ನಾತಕೋತ್ತರ ವಿಭಾಗಕ್ಕೆ 2025 -26ನೇ ಸಾಲಿಗೆ ಪ್ರವೇಶಾತಿ ಆರಂಭವಾಗಿದೆ. ನುರಿತ ಉಪನ್ಯಾಸಕರು, ಸುಸಜ್ಜಿತ ಕೊಠಡಿ, ಐಸಿಟಿ ತರಗತಿ, ಗ್ರಂಥಾಲಯ ವ್ಯವಸ್ಥೆ, ವೈಫೈ ವ್ಯವಸ್ಥೆ, ಕೆ ಸೆಟ್ ಹಾಗೂ ನೆಟ್ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಜೊತೆಗೆ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ವಿಚಾರ ಮಂಡನೆ, ಇಂಡಸ್ಟ್ರಿಯಲ್ ವಿಸಿಟ್ ಹಾಗೂ ಇಂಟರ್ನ್ ಷಿಪ್, ಬೋಧನಾ ಕೌಶಲ್ಯ ತರಬೇತಿ, ಸೆಮಿನಾರ್, ಫೆಸ್ಟ್ ಗಳಲ್ಲಿ ಪಾಲ್ಗೊಳ್ಳುವಿಕೆ ಹಾಗೂ ಪ್ರಾಯೋಗಿಕ ತರಬೇತಿಗಳಿಗೆ ಹೆಚ್ಚಿನ ಒತ್ತನ್ನು ನೀಡಲಾಗುತ್ತಿದೆ. ಈ ಹಿಂದಿನ ಸಾಲಿನ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳಲ್ಲಿ ಅತ್ಯುನ್ನತ ಶ್ರೇಣಿಯನ್ನು ಪಡೆಯುವುದರ ಜೊತೆಗೆ ಪ್ರತಿ ಸೆಮಿಸ್ಟರ್ ಗಳಲ್ಲೂ ಶೇ.100 ಫಲಿತಾಂಶ ದಾಖಲಾಗಿರುತ್ತದೆ. ಶಿಕ್ಷಣ ಮಾತ್ರವಲ್ಲದೆ ಉದ್ಯೋಗ ಘಟಕದ ಮೂಲಕ ಕ್ಯಾಂಪಸ್ ಸೆಲೆಕ್ಷನ್, ಸಾಂಸ್ಕೃತಿಕ ಚಟುವಟಿಕೆ, ಶೈಕ್ಷಣಿಕ ಪ್ರವಾಸ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತಿದೆ. ಜೊತೆಗೆ ಗ್ರಾಮೀಣ ಭಾಗದ…

Read More

ಸೋಮವಾರಪೇಟೆ, ಸೆ.19 NEWS DESK : ಕೊಡಗು ವಿಶ್ವವಿದ್ಯಾಲಯದ ಕಬಡ್ಡಿ ತಂಡಕ್ಕೆ ಸೋಮವಾರಪೇಟೆಯ ಸೇಂಟ್ ಜೋಸೆಫ್ ಪದವಿ ಕಾಲೇಜಿನಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಬೆಳಿಗ್ಗೆ ಆರಂಭವಾದ ಟ್ರಯಲ್ಸ್‌ನಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳಿಂದ ಬಂದ ವಿದ್ಯಾರ್ಥಿಗಳು ತಮ್ಮ ಕ್ರೀಡಾ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಈ ಸಂದರ್ಭ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ರಾಷ್ಟ್ರೀಯ ಕಬಡ್ಡಿ ಆಟಗಾರ ಹಾಗೂ ಅಂತರರಾಷ್ಟ್ರೀಯ ಹ್ಯಾಂಡ್‌ಬಾಲ್ ಆಟಗಾರ  ಗ್ರೀನಿಡ್ಜ್ ಡಿ.ಕುನ್ಹಾ ಟ್ರಯಲ್ಸ್ ಉದ್ಘಾಟಿಸಿ, ಆಟಗಾರರಿಗೆ ಪ್ರೇರಣಾದಾಯಕ ಸಂದೇಶ ನೀಡಿದರು.  ಸೋಮವಾರಪೇಟೆಯ ಸೇಂಟ್ ಜೋಸೆಫ್ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕರಾದ ರೆವರೆಂಡ್ ಫಾದರ್ ಅವಿನಾಶ್ ಹಾಜರಿದ್ದರು. ಆಯ್ಕೆ ಪ್ರಕ್ರಿಯೆಯ ಮೇಲ್ವಿಚಾರಣೆಗೆ, ಗ್ರೀನಿಡ್ಜ್ ಡಿ . ಕುನ್ಹಾ, ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್, ಸೋಮವಾರಪೇಟೆಯ BTCG ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಗುರು ಪ್ರಸಾದ್, ಹಾಗೂ ಆತಿಥೇಯ ಸೇಂಟ್ ಜೋಸೆಫ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶಿವಕುಮಾರ್ ಕೆ.ಆರ್ ಅವರನ್ನೊಳಗೊಂಡ ಸಮಿತಿಯು ನೇತೃತ್ವ ವಹಿಸಿತು. ಸುಮಾರು…

Read More

ಸೋಮವಾರಪೇಟೆ ಸೆ.19 NEWS DESK : ಕಾಗಡಿಕಟ್ಟೆ ಆರೋಗ್ಯ ಉಪಕೇಂದ್ರದಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು. ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಸರ್ಕಾರ ಗರ್ಭಿಣಿಯರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಅವುಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು. ಅಪೌಷ್ಟಿಕತೆ ತಡೆಗಟ್ಟುವುದು, ರಕ್ತಹೀನತೆ ನಿವಾರಣೆ, ಸೀಮಂತ, ಅನ್ನಪ್ರಾಶನ ಮತ್ತು ಪೋಷಣಾ ಅಭಿಯಾನದ ಬಗ್ಗೆ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ದಿವ್ಯ ತಿಳಿಸಿದರು. ಪಂಚಾಯಿತಿ ಉಪಾಧ್ಯಕ್ಷೆ ರಶೀದ, ಪಿಡಿಓ ಸ್ಮಿತಾ, ಅಂಗನವಾಡಿ ಕಾರ್ಯಕರ್ತೆಯರಾದ ಸವಿತಾ, ಪೂರ್ಣಿಮ, ಸಿಬ್ಬಂದಿಗಳಾದ ಮಧುಸೂದನ್, ವಿಶ್ವರೂಪಚಾರ್ಯ ಇದ್ದರು.

Read More

ವಿರಾಜಪೇಟೆ ಸೆ.20 NEWS DESK : ವಿರಾಜಪೇಟೆ ಕೊಡಗು ಮಾಜಿ ಸೈನಿಕರ ಸಹಕಾರ ಸಂಘದ ವತಿಯಿಂದ ಸೆ.24 ರಂದು ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಲಿದೆ ಎಂದು ಸಹಕಾರ ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್ ಉತ್ತಯ್ಯ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10.30 ಗಂಟೆಗೆ ವಿರಾಜಪೇಟೆ ಭಾರತೀಯ ಸ್ಟೇಟ್ ಬ್ಯಾಂಕ್ ಮುಂಭಾಗದಲ್ಲಿರುವ ಅಮರ್ ಜವಾನ್ ಸ್ಮಾರಕದಲ್ಲಿ ಜಿಲ್ಲಾ ಪೋಲಿಸ್ ತುಕಡಿಯ ಗೌರವದೊಂದಿಗೆ ಸ್ಮಾರಕಕ್ಕೆ ಪುಷ್ಪಗುಚ್ಚ ಅರ್ಪಿಸಿ ದೇಶ ರಕ್ಷಣೆಗಾಗಿ ಹುತಾತ್ಮರಾದ ಯೋಧರಿಗೆ ಶ್ರದ್ದಾಂಜಲಿಯನ್ನು ಅರ್ಪಿಸಲಾಗುವುದು ಎಂದು ಹೇಳಿದರು. ಕಾರ್ಯದರ್ಶಿ ಪುಗ್ಗೆರ ನಂದಾ ಮಾತನಾಡಿ, ಹುತಾತ್ಮರ ದಿನಾಚರಣೆಯಲ್ಲಿ ಅತಿಥಿಗಳಾಗಿ ಮುಖ್ಯಮಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಒಲಂಪಿಯನ್ ಲೆಪ್ಟಿನೆಂಟ್ ಕರ್ನಲ್ ಬಾಳೆಯಡ ಕೆ.ಸುಬ್ರಮಣಿ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ವಿರಾಜಪೇಟೆ ತಹಶೀಲ್ದಾರ್ ಪ್ರವೀಣ್ ಕುಮಾರ್, ಡಿ.ವೈ.ಎಸ್.ಪಿ ಮೋಹನ್ ಕುಮಾರ್, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಮುಖ್ಯಾಧಿಕಾರಿ ಪಟ್ಟಚೆರವಂಡ ನಾಚಪ್ಪ ಪಾಲ್ಗೊಳ್ಳಲಿದ್ದಾರೆ…

Read More

ಸೋಮವಾರಪೇಟೆ ಸೆ.20 NEWS DESK : ಮಾದಾಪುರ ಬಿ.ಚನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪಿಯು ಕಾಲೇಜಿನ ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯ ಬಾಲಕಿಯರ ವಿಭಾಗದಲ್ಲಿ ಸೋಮವಾರಪೇಟೆ ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಪಿಯು ಕಾಲೇಜು ತಂಡ ಮತ್ತು ಬಾಲಕರ ವಿಭಾಗದಲ್ಲಿ ಕುಶಾಲನಗರ ವಿವೇಕಾನಂದ ಪಿಯು ಕಾಲೇಜು ಪ್ರಥಮ ಸ್ಥಾನದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಬಿಟಿಸಿಜಿ ಬಾಲಕಿಯರ ತಂಡ ಫೈನಲ್‍ನಲ್ಲಿ ಕೊಡ್ಲಿಪೇಟೆ ಪಿಯು ಕಾಲೇಜು ತಂಡದ ವಿರುದ್ಧ ಜಯಗಳಿಸಿತು. ವಿಜೇತ ತಂಡದ ಪರವಾಗಿ ಹೆಚ್.ಆರ್.ಜೀವಿತ, ಹೆಚ್.ಆರ್.ದಿಶಿತಾ, ಧನಲಕ್ಷ್ಮಿ, ವೈಭವಿ ಹಾಗೂ ಕೊಡ್ಲಿಪೇಟೆ ತಂಡದ ಪರವಾಗಿ ಯಮುನಾ, ಪುಷ್ಪಲತ ಆದಿಡದರು. ಬಾಲಕರ ವಿಭಾಗದಲ್ಲಿ ವಿವೇಕಾನಂದ ಕಾಲೇಜು ತಂಡ, ಕುಶಾಲನಗರ ಜ್ಞಾನಭಾರತಿ ಪಿಯು ಕಾಲೇಜು ತಂಡವನ್ನು ಮಣಿಸಿತು. ವಿಜೇತ ತಂಡದ ಪರವಾಗಿ ಹೇಮಂತ್, ಅರುನ್ ಇಬ್ರಾಹಿಂ, ಧಿರೇಂದ್ರಮೋದಿ, ಹರ್ಷ, ಉಮರ್‍ಸಾದ್, ಜ್ಞಾನಭಾರತಿ ತಂಡದ ಪರವಾಗಿ ಮಹಮ್ಮದ್ ಅನ್ವರ್, ರಾಕೇಶ್, ಅಕ್ಷಯ್, ಮೋಹಿತ್ ಆಟವಾಡಿದರು. ಮಾದಪುರ ಪ್ಲಾಂಟರ್ಸ್ ಕ್ಲಬ್ ಹಾಗೂ ಚನ್ನಮ್ಮ ಕಾಲೇಜಿನ ಒಳಂಗಣ ಕ್ರೀಡಾಂಗಣದಲ್ಲಿ ಪಂದ್ಯಾಟಗಳು…

Read More

ಮಡಿಕೇರಿ ಸೆ.20 NEWS DESK : ಉತ್ತರ ಪ್ರದೇಶದ ಲಕ್ನೋದ ಬಿಬಿಡಿ ಯು.ಪಿ. ಬ್ಯಾಡ್ಮಿಂಟನ್ ಅಕಾಡೆಮಿ ವತಿಯಿಂದ ನಡೆದ ಯೋನೆಕ್ಸ್ ಸನ್ ರೈಸ್ ಡಾ.ಅಕಿಲೇಶ್ ದಾಸ್ ಗುಪ್ತ ಮೆಮೋರಿಯಲ್ ಆಲ್ ಇಂಡಿಯಾ ಸೀನಿಯರ್ ರಾಂಕಿಂಗ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕೊಡಗಿನ ದಿಯಾ ಭೀಮಯ್ಯ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ದಿಯಾ ಭೀಮಯ್ಯ ಕೇರಳದ ಜೊರ್ನ್ ಜೇಸನ್ ಜೊತೆಯಾಟ (ಮಿಶ್ರ ಡಬಲ್ಸ್ ) ನಲ್ಲಿ ಪ್ರಥಮ ಹಾಗೂ ಮಹಿಳೆಯರ ಡಬಲ್ಸ್ ನಲ್ಲಿ ಹರಿಯಾಣದ ಬಾರುನಿ ಪರುಸ್ವಾಲ್ ಜೊತೆಗೂಡಿ ತೃತೀಯ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ಕೊಡಗಿಗೆ ಕೀರ್ತಿ ತಂದಿದ್ದಾರೆ.

Read More

ಮಡಿಕೇರಿ ಸೆ.20 NEWS DESK : ಮಡಿಕೇರಿ ನಗರ ದಸರಾ ಅಲಂಕಾರ ಸಮಿತಿಗೆ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ. ನಗರದ ದಸರಾ ಸಮಿತಿ ಕಚೇರಿಯಲ್ಲಿ ಅಲಂಕಾರ ಸಮಿತಿಯ ಅಧ್ಯಕ್ಷರಾದ ಎಂ.ಎ.ಮುನೀರ್ ಮಾಚರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವ ಸಲಹೆಗಾರರಾಗಿ ಪಿ.ಜಿ.ಮಂಜುನಾಥ್, ಉಪಾಧ್ಯಕ್ಷರಾಗಿ ರವಿಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಕೋಚನ ಎಂ.ಚೇತನ್, ಕಾರ್ಯದರ್ಶಿಯಾಗಿ ಜಿ.ಎನ್.ಭಾರತ್, ಸಹ ಕಾರ್ಯದರ್ಶಿಯಾಗಿ ಜಿ.ಎನ್.ಪುನೀತ್, ಖಜಾಂಚಿಯಾಗಿ ರಫೀಕ್ (ದಾದಾ), ಸಹ ಖಜಾಂಚಿಯಾಗಿ ಲಿಲ್ಲಿ ಗೌಡ, ಸಂಘಟನಾ ಕಾರ್ಯದರ್ಶಿ ಹರ್ಷಿತ್ ಕುಮಾರ್, ಸಂಚಾಲಕರುಗಳಾಗಿ ಬಿ.ಕೆ.ನವೀನ್ ಹಾಗೂ ಕಲಿಲ್ ಭಾಷಾ ಆಯ್ಕೆಯಾಗಿದ್ದಾರೆ.

Read More

ಮಡಿಕೇರಿ ಸೆ.19 NEWS DESK : ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ನಗರದ ಜನರಲ್ ಜಿಲ್ಲಾ ತಿಮ್ಮಯ್ಯ ಕ್ರೀಡಾಂಗಣದ ಬಳಿ ಹಿರಿಯ ನಾಗರಿಕರಿಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ  ಅವರು ಉದ್ಘಾಟಿಸಿದರು.    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನಕುಮಾರ್ ಅಧ್ಯಕ್ಷತೆ ವಹಿಸಿದ್ದರು.  ಕ್ರೀಡೆಯಲ್ಲಿ 60 ರಿಂದ 69 ವಯೋಮಿತಿಯ ಪುರುಷ ಹಾಗೂ ಮಹಿಳೆಯರಿಗೆ ಬಿರುಸಿನ ನಡಿಗೆ, ಮ್ಯೂಸಿಕಲ್ ಚೇರ್ ಹಾಗೆಯೇ ಬಕೆಟಿಗೆ ಬಾಲ್ ಎಸೆಯುವ 70 ರಿಂದ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರಿಕರಿಗೆ ಪುರುಷ ಹಾಗೂ ಮಹಿಳೆಯರಿಗೆ ಮ್ಯೂಸಿಕಲ್ ಚೇರ್ ಬಕೇಟಿಗೆ ಬಾಲ್ ಹಾಕುವ ಕ್ರೀಡೆ ನಡೆಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಏಕಪಾತ್ರ ಅಭಿನಯ ಗಾಯನ ಸ್ಪರ್ಧೆ ನಡೆಯಿತು. 60 ರಿಂದ 69 ವಯಸ್ಸು ಮತ್ತು 70 ರ ಮೇಲ್ಪಟ್ಟ ವಯಸ್ಸಿನ ವಿಭಾಗವಾರು ಪುರುಷ ಹಾಗೂ ಮಹಿಳೆಯರಿಗೆ…

Read More