ಲೇಖಕ: admin

ಮಡಿಕೇರಿ ಸೆ.20 NEWS DESK : ಪೋಷಣ್ ಮಾಸಾಚರಣೆ ಮತ್ತು ಸ್ವಾಸ್ಥನಾರಿ ಸಶಕ್ತ ಕುಟುಂಬ ಅಭಿಯಾನದಡಿ ಸ್ಟೋನ್ ಹಿಲ್ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿ ಬಾಣಂತಿ, ಮಕ್ಕಳು, ಅಂಗನವಾಡಿ ಕಾರ್ಯಕತೆಯರು ಮತ್ತು ಸಹಾಯಕರಿಗೆ ಆರೋಗ್ಯ ತಪಾಸಣೆ ನಡೆಸಿ ಅನೀಮಿಯ, ಹೆಚ್‍ಬಿ, ಬಿಪಿ, ಶುಗರ್ ತಪಾಸಣೆ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ  ಪ್ರಸನ್ನ ಕುಮಾರ್ ಮಾತನಾಡಿ,  ಶಿಶು ಮತ್ತು ಬಾಲ್ಯ ಪೋಷಣ್ ಅಭ್ಯಾಸಗಳ ಬಗ್ಗೆ ಪ್ರಾಥಮಿಕ ಬಾಲ್ಯ ಆರೈಕೆ ಮತ್ತು ಶಿಕ್ಷಣದ ಬಗ್ಗೆ, ಪೋಷಣ್ ಬಿ ಪಡಾಯಿ ಬಿ ಕುರಿತು ಮಾಹಿತಿ ನೀಡಿದರು. ಅಪೌಷ್ಟಿಕತೆ ಹೋಗಲಾಡಿಸುವಲ್ಲಿ ಕಾರ್ಯಕರ್ತೆಯರು ಹೆಚ್ಚಿನ ಜಾಗೃತಿ ಮೂಡಿಸಬೇಕು. ಕಾರ್ಯಕರ್ತೆಯರು ಮನೆ ಮನೆ ಭೇಟಿ ನೀಡುವ ಮೂಲಕ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.  ಇಲಾಖೆಯ ಮೇಲ್ವಿಚಾರಕರು ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಮೇಪಾಡಂಡ   ಸವಿತಾ ಕೀರ್ತನ್ ಅವರು ನೆರೆದಿದ್ದ ಮಹಿಳೆಯರಿಗೆ ಆರೋಗ್ಯಕರ ಜೀವನ ಶೈಲಿ ಅಭ್ಯಾಸಗಳ ಕುರಿತು ಮಾರ್ಗದರ್ಶನ ನೀಡಿದರು.  ಪ್ರಸವ ಪೂರ್ವ ಆರೈಕೆ,…

Read More

ಬೆಂಗಳೂರು NEWS DESK ಸೆ.19 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದ ವಿದ್ಯಾರ್ಥಿನಿಯರಿಗಾಗಿ (ದೀಪಿಕಾ) ಉನ್ನತ ಶಿಕ್ಷಣ ವಿದ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು >>>  ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಾರ್ಷಿಕ 30,000 ರೂ. ಗಳಂತೆ ಒಟ್ಟು 37,000 ವಿದ್ಯಾರ್ಥಿನಿಯರಿಗೆ “ದೀಪಿಕಾ ವಿದ್ಯಾರ್ಥಿ ವೇತನ” ನೀಡುವ ಈ ಯೋಜನೆಯಿಂದ ಬಡಹೆಣ್ಣುಮಕ್ಕಳಿಗೆ ಹೆಚ್ಚಿನ ಲಾಭವಾಗಲಿದೆ. ನಮ್ಮ ರಾಜ್ಯದ ಪ್ರತಿಷ್ಠಿತ ಐಟಿ ದಿಗ್ಗಜರಾದ ಶ್ರೀ ಅಜೀಂ ಪ್ರೇಂಜಿ ಅವರು ಅಜೀಂ ಪ್ರೇಂಜಿ ಫೌಂಡೇಶನ್ ನ  ಮೂಲಕ ಅನೇಕ ಜನಪರ ಕಾರ್ಯಗಳನ್ನು ಕೈಗೊಂಡಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ಪೂರೈಸುತ್ತಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ  ಉನ್ನತ ಶಿಕ್ಷಣದಲ್ಲಿ ತೊಡಗುವಂತಾಗುವ ದೃಷ್ಠಿಯಿಂದ ‘’ದೀಪಿಕಾ ವಿದ್ಯಾರ್ಥಿ ವೇತನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಈ ಯೋಜನೆಯಡಿ ಪದವಿ ಕೋರ್ಸ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ ರೂ.30,000/- ಗಳನ್ನು ವಿದ್ಯಾರ್ಥಿ ವೇತನವಾಗಿ ನೀಡಲಾಗುತ್ತದೆ. ಈ ವರ್ಷ ಅಜೀಂ ಪ್ರೇಂಜಿ ಫೌಂಡೇಶನ್…

Read More

ಮಡಿಕೇರಿ NEWS DESK ಸೆ.19 : ಮಡಿಕೇರಿ ನಗರದ ಅಶೋಕಪುರ ಬಡಾವಣೆ ನಿವಾಸಿ ಅರ್ಜುನ್ (35) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಮೃತರು ತಾಯಿ ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ.

Read More

ಮಡಿಕೇರಿ ಸೆ.19 NEWS DESK : 66/11ಕೆ.ವಿ ಪೊನ್ನಂಪೇಟೆ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಗೋಣಿಕೊಪ್ಪ ನಗರ ವ್ಯಾಪ್ತಿಯಲ್ಲಿ ಸೆಪ್ಟೆಂಬರ್, 20 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ದಸರಾ ಹಬ್ಬದ ಪ್ರಯುಕ್ತ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಶಾಂತಿನಗರ, ಗಣಪತಿನಗರ, ಜೋಡುಬೀಟೆ, ಕಾಫಿ ಬೋರ್ಡ್, ಅರುವತೋಕ್ಲು, ಗೋಣಿಕೊಪ್ಪಲು ನಗರ, ಕೊಪ್ಪ, ಪಟೇಲನಗರ, ನೇತಾಜಿ ಲೇಔಟ್, ಉಮಾ ಮಹೇಶ್ವರಿ ಲೇಔಟ್, ಗೋಣಿಕೊಪ್ಪಲು ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.

Read More

ಮಡಿಕೇರಿ ಸೆ.19 NEWS DESK :  ಮಡಿಕೇರಿ ನಗರ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ 8 ನೇ ವರ್ಷದ ಮಹಿಳಾ ದಸರಾ ಆಯೋಜಿಸಲಾಗಿದ್ದು, ಸೆಪ್ಟೆಂಬರ್, 28 ರಂದು ನಡೆಯಲಿದೆ. ಈ ಸಂಬಂಧ ವೈವಿಧ್ಯಮಯ ಸ್ಪರ್ಧೆಗಳನ್ನು ಜಿಲ್ಲೆಯ ಮಹಿಳೆಯರಿಗಾಗಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ತಿಳಿಸಿದ್ದಾರೆ. ಮಹಿಳಾ ದಸರಾ ಅಂಗವಾಗಿ ಜಿಲ್ಲೆಯ ಮಹಿಳೆಯರಿಗಾಗಿಯೇ ವೈವಿಧ್ಯಮಯ ಸ್ಪರ್ಧೆಗಳು, ಕಾರ್ಯಕ್ರಮಗಳು ನಗರದ ಗಾಂಧಿ ಮೈದಾನದ ಕಲಾಸಂಭ್ರಮ ಸಭಾಂಗಣದಲ್ಲಿ ಮಡಿಕೇರಿ ದಸರಾ ಸಮಿತಿ, ಮಡಿಕೇರಿ ನಗರಸಭೆ ಅಧ್ಯಕ್ಷರು, ಸದಸ್ಯೆಯರು,  ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದೆ. :: ವಿವಿಧ ಸ್ಪರ್ಧೆಗಳು : : ಮೆಹಂದಿ ಹಾಕುವುದು, ಭಾರತೀಯ ಸಾಂಪ್ರದಾಯಿಕ ಉಡುಗೆ ಸ್ಪರ್ಧೆ, ಕೇಶವಿನ್ಯಾಸ,  ಸೀರೆಗೆ ನಿಖರ ಬೆಲೆ ಹೇಳುವುದು,  ಕಣ್ಣಿಗೆ ಬಟ್ಟೆ ಕಟ್ಟಿ ಮೇಕಪ್ ಮಾಡುವುದು, ಬಲೂನ್ ಗ್ಲಾಸ್ ಸ್ಪರ್ಧೆ, ಬಾಂಬ್ ಇನ್ ದಿ ಸಿಟಿ, ಕೆರೆ ದಡ ಆಟ, ಹಣೆಯಲ್ಲಿ ಬಿಸ್ಕೆಟ್ ಇಟ್ಟು ತಿನ್ನುವುದು, ಬಲೂನ್ ಕಾಲಲ್ಲಿ ಹಿಡಿದು…

Read More

ಮಡಿಕೇರಿ ಸೆ.19 NEWS DESK : 66/11ಕೆ.ವಿ ಮಡಿಕೇರಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್3 ಗದ್ದಿಗೆ ಹಾಗೂ ಎಫ್11 ಗಾಳಿಬೀಡು ಫೀಡರ್‍ನಲ್ಲಿ ಸೆಪ್ಟೆಂಬರ್, 20 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ದಸರಾ ಹಬ್ಬದ ಪ್ರಯುಕ್ತ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಸಂಪಿಗೆ ಕಟ್ಟೆ, ಕನ್ನಂಡಬಾಣೆ, ಎ.ವಿ ಶಾಲೆ, ಗದ್ದಿಗೆ, ಉಕ್ಕುಡ, ಅಜಾದ್ ನಗರ, ತ್ಯಾಗರಾಜ ಕಾಲೋನಿ, ಅಬ್ಬಿಫಾಲ್ಸ್ ರಸ್ತೆ, ಭಗವತಿ ನಗರ, ಮಲ್ಲಿಕಾರ್ಜುನ ನಗರ, ರಾಣಿಪೇಟೆ, ಮಾರ್ಕೇಟ್, ಮಹದೇವಪೇಟೆ, ಕಾನ್ವೆಂಟ್ ಜಂಕ್ಷನ್, ಕೂರ್ಗ್ ಇಂಟರ್ ನ್ಯಾಷನಲ್, ಐ.ಟಿಐ ಹಿಂಭಾಗ, ಕಾವೇರಿ ಬಡಾವಣೆ, ಟಿಜಾನ್ ಬಡಾವಣೆ, ಅಬ್ದುಲ್ ಕಲಾಂ ಬಡಾವಣೆ, ಹೆಬ್ಬೆಟ್ಟಗೇರಿ, ದೇವಸ್ತೂರು, ಕೆ.ಬಾಡಗ, ಗಾಳಿಬೀಡು, ಕಾಲೂರು, ಸಿದ್ದಿಕಾಡು, ವಣಚಲು, ಕೆ.ನಿಡುಗಣೆ, ಕುಂಡಾಮೇಸ್ತ್ರಿ, ಕುಡಿಯುವ ನೀರು, ಕೂಟುಹೊಳೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಸೆ.19 NEWS DESK : ಮಿತವಾದ ಆಹಾರ ಸೇವನೆಯಿಂದ ಆರೋಗ್ಯಕರ ಚಟುವಟಿಕೆಯಿಂದ ಇರಲು ಸಾಧ್ಯವೆಂದು ಆಹಾರ ಸುರಕ್ಷತಾ ಸಹಾಯಕ ಅಧಿಕಾರಿ ಮಂಜುನಾಥ್ ಅಭಿಪ್ರಾಯಿಸಿದರು. ಕೋಪಟ್ಟಿ ಸಮೀಪದ ಚೆರಂಡೇಟಿ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ಪೋಷಣ್ ಅಭಿಯಾನದ ಅಡಿಯಲ್ಲಿ ಅರಿವು ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.  ಸಮತೋಲನ ಆಹಾರದ ಕುರಿತು ಕಾರ್ಯಕ್ರಮಕ್ಕೆ ಸೀಮಿತವಾಗದೆ ಪ್ರತಿದಿನದ ಬದುಕಿನ ಭಾಗವಾಗಬೇಕು ಎಂದು ತಿಳಿಸಿದರು.  ಮಡಿಕೇರಿ ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ.ಶ್ರೀನಾಥ್ ಮಾತನಾಡಿ, ಪ್ರತಿದಿನದ ಆಹಾರದಲ್ಲಿ ಸಮತೋಲನ ಆಹಾರ ಸೇವನೆ ಅಗತ್ಯವಾಗಿದ್ದು, ಸ್ಥಳೀಯ ಮಟ್ಟದಲ್ಲಿ ಸಿಗುವ ಹಸಿರು ಸೊಪ್ಪು, ತರಕಾರಿ, ಕಾಳು, ಹಾಲು, ಮೊಟ್ಟೆ ಹೆಚ್ಚು ಹೆಚ್ಚು ಸೇವಿಸಬೇಕು ಉದಾಸೀನ ಮಾಡಿದರೆ ಹಲವಾರು ಕಾಯಿಲೆಗಳಿಗೆ ನಾವೇ ಆಸ್ಪಾದ ನೀಡಿದಂತಾಗುತ್ತದೆ ಎಂದು ಎಚ್ಚರಿಸಿದರು. ಸರ್ಕಾರ ಹಲವಾರು ಯೋಜನೆಗಳ ಮೂಲಕ ಗರ್ಭಿಣಿಯರು, ಮಕ್ಕಳಿಗೆ ಮತ್ತು ರೋಗಿಗಳಿಗೆ ಸೌಲಭ್ಯ ನೀಡುತ್ತಿದ್ದರೂ ಇನ್ನೂ ರಕ್ತಹೀನತೆ ಯಿಂದ ಸಾವುಗಳು ಸಂಭವಿಸುತ್ತಿರುವುದು ಬೇಸರ ಎಂದರು. ಆಹಾರ ಪದ್ದತಿ, ಜೀವನ ಶೈಲಿಯಲ್ಲಿ ಬದಲಾವಣೆಯಿಂದ ಸ್ವಸ್ಥ ಆರೋಗ್ಯಕರ…

Read More

ಮಡಿಕೇರಿ ಸೆ.19 NEWS DESK : ನಗರದ ತ್ಯಾಗರಾಜ ಕಾಲೋನಿ ಮತ್ತು ಗದ್ದಿಗೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮನೆ ಮನೆಗೆ ತೆರಳಿ ಜ್ವರ ಸಮೀಕ್ಷೆ ನಡೆಸಿ ಜನರಲ್ಲಿ ಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ ಮೂಡಿಸಲಾಯಿತು. ಸಮೀಕ್ಷೆ ಕಾರ್ಯದಲ್ಲಿ ನಗರಸಭೆ ಸದಸ್ಯರಾದ ಮೇರಿ ವೆಜಿಲ್ ಅವರು ಪಾಲ್ಗೊಂಡು ಸಾಂಕ್ರಾಮಿಕ ರೋಗಗಳ ಬಗ್ಗೆ ಎಚ್ಚರ ವಹಿಸುವಂತೆ ಜನರಿಗೆ ಕರೆ ನೀಡಿ ನಗರಸಭೆಯಿಂದ ಎಲ್ಲಾ ರೀತಿಯ ನೆರವು ನೀಡುವುದಾಗಿ ತಿಳಿಸಿದರು. ಜಿಲ್ಲಾ ಎಂಟಮಾಲಿಜಿಸ್ಟ್ ಮಂಜುನಾಥ್ ಮಾತನಾಡಿ ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಗಳ ಸುತ್ತಮುತ್ತಲಿನ ಪರಿಸರ ಸ್ವಚ್ಚವಾಗಿ ಇಟ್ಟುಕೊಂಡರೆ ಡೆಂಗ್ಯೂ, ಇಲಿ ಜ್ವರ ಸೇರಿದಂತೆ ಯಾವುದೇ ಸಾಂಕ್ರಾಮಿಕ ರೋಗಗಳು ಬರುವುದಿಲ. ಯಾವುದೇ ಜ್ವರವಿರಲಿ ಹತ್ತಿರದ ಆಸ್ಪತ್ರೆಯ ವೈದ್ಯರಿಗೆ ತೋರಿಸಿ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದರು. ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಕೃತ ಅವರು ಪ್ರತಿ ಮನೆಯ ಮುಂದಿನ ಚರಂಡಿಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು, ಮನೆಯ ಒಳಗೆ ಮತ್ತು ಹೊರಗೆ ನೀರು ತುಂಬಿಸುವ ತಾಣಗಳನ್ನು…

Read More

ಮಡಿಕೇರಿ ಸೆ.19 NEWS DESK : ಜಿಲ್ಲೆಯ ಜನತೆಯ ಬಹುದಿನಗಳ ನಿರೀಕ್ಷೆಯಂತೆ ಸುಮಾರು 10.50 ಕೋಟಿ ರೂ. ವೆಚ್ಚದ ‘ಹೃದ್ರೋಗ ತಪಾಸಣಾ ಕೇಂದ್ರ’ ಶೀಘ್ರದಲ್ಲೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯಲ್ಲಿ ಆರಂಭಗೊಳ್ಳಲ್ಳಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಹೆಚ್.ಕೆ.ಸೋಮಶೇಖರ್ ಅವರು ತಿಳಿಸಿದ್ದಾರೆ. ಕೊಡಗು ಪತ್ರಕರ್ತರ ಸಂಘ ಮತ್ತು ಕೊಡಗು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ಸಹಕಾರದೊಂದಿಗೆ ನಗರದ ಕಾವೇರಿ ಹಾಲ್‍ನಲ್ಲಿ ಪತ್ರಕರ್ತರು ಹಾಗೂ ಅವರ ಕುಟುಂಬ ವರ್ಗದವರಿಗೆ ಆಯೋಜಿಸಲಾಗಿದ್ದ ‘ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಡಿಕೇರಿ ಕ್ಷೇತ್ರದ ಶಾಸಕರ ಅವಿರತ ಪರಿಶ್ರಮದಿಂದ ಹೃದ್ರೋಗ ತಪಾಸಣಾ ಕೇಂದ್ರದ ಸೌಲಭ್ಯ ಜಿಲ್ಲೆಗೆ ಲಭ್ಯವಾಗುತ್ತಿದೆ. ಉದ್ದೇಶಿತ ಹೃದ್ರೋಗ ತಪಾಸಣಾ ಕೇಂದ್ರವು ‘ಪಿಪಿಪಿ’ ಯೋಜನೆಯಡಿ ಕಾರ್ಯನಿರ್ವಹಿಸಲಿದ್ದು, ಈಗಾಗಲೇ ಉದ್ದೇಶಿತ ಹೃದ್ರೋಗ ತಪಾಸಣಾ ಕೇಂದ್ರ ಸ್ಥಾಪನೆಗೆ ಸ್ಥಳ ಪರಿಶೀಲನಾ ಕಾರ್ಯ ನಡೆದಿದೆ ಎಂದರು. ಇಲ್ಲಿಯವರೆಗು ಗಂಭೀರ ಆರೋಗ್ಯ ಸಮಸ್ಯೆಗಳ ಸಂದರ್ಭ ಸಾರ್ವಜನಿಕರು…

Read More

ಮಡಿಕೇರಿ ಸೆ.19 NEWS DESK : ಮಡಿಕೇರಿ ದಸರಾ ಜನೋತ್ಸವಕ್ಕೆ ವಿಶೇಷ ಮೆರುಗು ನೀಡುವ ಉದ್ದೇಶದಿಂದ ದಸರಾ ದಶಮಮಂಟಪ ಸಮಿತಿ ದೀಪಾಲಂಕಾರ, ರಂಗೋಲಿ ಮತ್ತು ಸೆಲ್ಫಿ ಸ್ಪರ್ಧೆಯನ್ನು ಆಯೋಜಿಸಿದೆ. ಸೆ.22 ರಂದು ಕರಗೋತ್ಸವ ಆರಂಭಗೊಳ್ಳುವ ಸಂಜೆ ಮನೆ ಮತ್ತು ಅಂಗಡಿಗಳನ್ನು ಹಣತೆ, ಕಾಲುದೀಪ, ತೂಗುದೀಪಗಳಿಂದ ಅಲಂಕರಿಸಬೇಕು. ಅಲ್ಲದೆ ಮನೆಗಳ ಮುಂದೆ ಸುಂದರವಾದ ವರ್ಣರಂಜಿತ ಚುಕ್ಕಿ ರಂಗೋಲಿಯನ್ನು ಬಿಡಿಸಬೇಕು. ಈ ಎರಡೂ ಸ್ಪರ್ಧೆಗಳ ವಿಜೇತರಿಗೆ ವಿಶೇಷ ಬಹುಮಾನವನ್ನು ನೀಡಲಾಗುವುದು ಎಂದು ದಸರಾ ದಶಮಮಂಟಪ ಸಮಿತಿಯ ಅಧ್ಯಕ್ಷ ಬಿ.ಎಂ.ಹರೀಶ್ ಅಣ್ವೇಕರ್ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಈ ಬಾರಿ ವಿಶೇಷ ಆಕರ್ಷಣೆಯಾಗಿ ಸೆಲ್ಫಿ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಆಸಕ್ತರು ಸಾಂಪ್ರದಾಯಿಕ ಉಡುಪಿನಲ್ಲಿ ಕುಟುಂಬದ ಸದಸ್ಯರ ಸಹಿತ ಸೆಲ್ಫಿ ತೆಗೆಯಬೇಕು. ವಿಜೇತ ಕುಟುಂಬಕ್ಕೆ ಆಕರ್ಷಕ ಬಹುಮಾನವನ್ನು ನೀಡಲಾಗುವುದು. ಸೆಲ್ಫಿ ಸ್ಪರ್ಧೆಗಾಗಿ ಮೂರು ಸೆಲ್ಫಿ ಪಾಯಿಂಟ್ ಗಳನ್ನು ನಿಗಧಿ ಮಾಡಲಾಗಿದೆ. ಬನ್ನಿ ಮಂಟಪದ ಮುಂಭಾಗದ ಅಕ್ಷಯ ಲಾಡ್ಜ್, ಮಹದೇವಪೇಟೆಯ ಅರವಿಂದ್ ಜ್ಯುವೆಲ್ಲರಿ ಮತ್ತು ಸ್ಕೈಗೋಲ್ಡ್ ಎದುರು ಸೆಲ್ಫಿ ತೆಗೆಯಬೇಕು…

Read More