ಬೆಂಗಳೂರು ಸೆ.19 NEWS DESK : ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಬೆಂಗಳೂರಿನ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2024 ನೇ ಕ್ಯಾಲೆಂಡರ್ ವರ್ಷದ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ 2017 ರಿಂದ 2023 ನೇ ಕ್ಯಾಲೆಂಡರ್ ವರ್ಷದ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ಭಾಗವಹಿಸಿ ಮಾತನಾಡಿದರು. :: ಮಾಧ್ಯಮಗಳು ಸತ್ಯ ಅಸತ್ಯದ ಶೋಧನೆ ನಡೆಸಬೇಕು :: ಅಭಿಪ್ರಾಯಗಳು ವಸ್ತುಸ್ಥಿತಿಯಿಂದ ಕೂಡಿರಬೇಕು. ಅನೇಕ ಬಾರಿ ಊಹಾ ಪತ್ರಿಕೋದ್ಯಮ ಆಗಿರುತ್ತದೆ , ಅದು ಆಗಬಾರದು. ಸತ್ಯ ಅಸತ್ಯಗಳನ್ನು ಪತ್ತೆ ಹಚ್ಚಿ, ಸತ್ಯವನ್ನು ಶೋಧನೆ ಮಾಡುವ ಕಾರ್ಯವನ್ನು ಪತ್ರಿಕೋದ್ಯಮ ಮಾಡಬೇಕು. ಯಾವುದೇ ಕಾರಣಕ್ಕೂ ಒಬ್ಬ ವ್ಯಕ್ತಿಯು ತಪ್ಪು ಮಾಡದಿದ್ದರೂ, ಸುಮ್ಮನೆ ಆರೋಪಗಳನ್ನು ಮಾಡಬಾರದು. ಸರ್ಕಾರದಲ್ಲಿ ಎಲ್ಲವೂ ಸರಿಯಾಗಿರುವುದಿಲ್ಲ ನಿಜ, ಆದರೆ ಸರ್ಕಾರದ ಜನಪರ ವಿಚಾರಗಳನ್ನು…
ಲೇಖಕ: admin
ಸುಂಟಿಕೊಪ್ಪ ಸೆ.19 NEWS DESK : ನಾಕೂರು ಶಿರಂಗಾಲ ಪಂಚಾಯಿತಿ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಬಿ.ಎಸ್.ಶಿವಮ್ಮ ಅವರನ್ನು ನಾಕೂರು ಗ್ರಾಮದ ಲಕ್ಷ್ಮಿ ಮಹಿಳಾ ಒಕ್ಕಲಿಗ ಗೌಡ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಕಳೆದ 16 ವರ್ಷಗಳ ಕಾಲ ನಾಕೂರು-ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತೆಯಾಗಿ ಅತ್ಯುತ್ತಮ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿದ ಬಿ.ಎಸ್.ಶಿವಮ್ಮ ಅವರನ್ನು ಸಂಘದ ಅಧ್ಯಕ್ಷೆ ಜಾಜಿ ಪುಟ್ಟರಾಜು, ಕಾರ್ಯದರ್ಶಿ ಶಿಲ್ಪ ಗಿರೀಶ್ ಹಾಗೂ ಸಂಘ ಪದಾಧಿಕಾರಿಗಳು ಸೇವೆಯನ್ನು ಪರಿಗಣಿಸಿ ಗ್ರಾಮದಲ್ಲಿ ಶಾಲು ಹೊದಿಸಿ ಫಲ ತಾಂಬೂಲ ನೀಡಿ ಸನ್ಮಾನಿಸಿ ಗೌರವಿಸಿದರು.
ಸುಂಟಿಕೊಪ್ಪ ಸೆ.19 NEWS DESK : ಮಾದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 42,36,318 ರೂ ಗಳ ಲಾಭಗಳಿಸಿದ್ದು ‘ಎ’ ತರಗತಿಯನ್ನು ಹೊಂದಿದೆ. ಸದಸ್ಯರಿಗೆ ಶೇ.18 ರಷ್ಟು ಡಿವಿಡೆಂಡ್ ನೀಡಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಎನ್.ಎಂ.ಉತ್ತಪ್ಪ ಹೇಳಿದರು. ಸಂಘದ ಸಭಾಂಗಣದಲ್ಲಿ ನಡೆದ ಮಾದಾಪುರ ಪ್ರಾಥಮಿಕ ಕೃಷಿ ಪತ್ತಿನ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘದಲ್ಲಿ 1,670 ಮಂದಿ ಸದಸ್ಯರುಗಳಿದ್ದು, ಒಟ್ಟು ಪಾಲು ಬಂಡವಾಳ ರೂ.1,29,40,235 ಆಗಿರುತ್ತದೆ. 31-03-2025 ಸಂಘವು 10,80,76,290 ರೂಗಳ ಠೇವಣಿ ಸಂಗ್ರಹಿಸಲಾಗಿದೆ. ಕಳೆದ ಬಾರಿಗಿಂತ 1,28,43,961 ಹೆಚ್ಚಿಗೆ ಠೇವಣಿ ಸಂಗ್ರವಾಗಿದೆ. ಕೆಸಿಸಿ ಸಾಲ 380 ಸದಸ್ಯರಿಗೆ 9,8341,500 ರೂ. ನೀಡಲಾಗಿದೆ. ಈ ಪೈಕಿ ರೂ.9,55,18,500 ಡಿಸಿಸಿ ಬ್ಯಾಂಕ್‍ನಿಂದ ಹಾಗೂ ಸ್ವಂತ ಬಂಡವಾಳದಿಂದ 28,23000 ರೂ. ಸಾಲ ನೀಡಲಾಗಿದೆ. ಜಾಮೀನು ಸಾಲ 31.03.2025 ರವರೆಗೆ 91,95,000 ರೂ.ವಿತರಿಸಲಾಗಿದೆ. ಈ ಪೈಕಿ ರೂ81,399 ವಾಯಿದೆ ಮೀರಿದ ಸಾಲವಿದೆ ವಾಹನ ಸಾಲ ಆಭರಣ ಸಾಲ, ಗೊಬ್ಬರ ಸಾಲ,…
ವಿರಾಜಪೇಟೆ ಸೆ.19 NEWS DESK : ಮಗ್ಗುಲದ ಲಿಟಲ್ ಸ್ಕಾಲರ್ಸ್ ಅಕಾಡೆಮಿ ವಿದ್ಯಾ ಸಂಸ್ಥೆಯ ವತಿಯಿಂದ ನಾಂಗಲದಲ್ಲಿ ಪುನರ್ ನವೀಕರಿಸಲಾದ ನೂತನ ಬಸ್ ತಂಗುದಾಣವನ್ನು ಉದ್ಘಾಟಿಸಿದರು. ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಆಡಳಿತ ಮಂಡಳಿಯು ತನ್ನ ಸ್ವಂತ ಖರ್ಚಿನಿಂದಲೇ ಬಸ್ ತಂಗುದಾಣವನ್ನು ಪುನರ್ ನವೀಕರಿಸಿ ಸಾರ್ವಜನಿಕ ಸೇವೆಗೆ ಒದಗಿಸಿತು. ಈ ಸಂದರ್ಭ ಮಾತನಾಡಿದ ಶ್ರವಣ ಹೀನರ ಸಂಘದ ಅಧ್ಯಕ್ಷ ಜಿ.ವಿಲಿಯಮ್, ಪರಸ್ಪರ ಸಹಕಾರ ಮನೋಭಾವನೆಯು ಪ್ರತಿಯೊಬ್ಬರಲ್ಲಿಯೂ ಮೂಡಬೇಕು. ಗೌರವಯುತ ಬಾಳ್ವೆ, ಸೇವಾ ಮನೋಭಾವನೆಯಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದರು. ನಾವು ಸೇವೆಗಳನ್ನು ಮಾಡುವುದರಿಂದ ಸಮಾಜದಲ್ಲಿ ನಮ್ಮ ಪಾಲ್ಗೊಳ್ಳುವಿಕೆಯನ್ನು ವ್ಯಕ್ತಪಡಿಸಲು ಸಾಧ್ಯ ಎಂದರು. ಬಿಟ್ಟಂಗಾಲ ಗ್ರಾ.ಪಂ ಅಧ್ಯಕ್ಷರಾದ ಪ್ರಸನ್ನ ಸುಬ್ಬಯ್ಯ ಮಾತನಾಡಿ, ನಮ್ಮ ಪಂಚಾಯತ್ ವ್ಯಾಪ್ತಿಯಲ್ಲಿ ಬಸ್ ತಂಗುದಾಣವನ್ನು ಲಿಟಲ್ ಸ್ಕಾಲರ್ಸ್ ಅಕಾಡೆಮಿ ವಿದ್ಯಾ ಸಂಸ್ಥೆಯು ಸುಸಜ್ಜಿತವಾಗಿ ನವೀಕರಣಗೊಳಿಸಿದೆ. ವಿದ್ಯಾ ಸಂಸ್ಥೆಯ ಸಾಮಾಜಿಕ ಕಳಕಳಿ ಮಾದರಿಯಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಹಂತದಿಂದಲೇ ವೈವಿಧ್ಯತೆಯಲ್ಲಿ ಏಕತೆ ಎನ್ನುವ ದ್ಯೇಯ ವಾಕ್ಯದೊಂದಿಗೆ ವಿದ್ಯಾಭ್ಯಾಸವನ್ನು…
ಕುಶಾಲನಗರ ಸೆ.19 NEWS DESK : ಕೊಡಗಿನ ಬಡವರ ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಗತಿಕರು ಹಾಗೂ ವಿಕಲಚೇತನ ಕುಟುಂಬವೊಂದಕ್ಕೆ ನಿರ್ಮಿಸಿಕೊಡಲು ಉದ್ದೇಶಿಸಿರುವ ನೂತನ ಮನೆ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಕುಶಾಲನಗರ ಜನತಾ ಕಾಲೊನಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ವಿಕಲಚೇತನ ಕುಟುಂಬ ನಾದ್ಯ ಎಂಬುವವರಿಗೆ ಟ್ರಸ್ಟ್ ವತಿಯಿಂದ ಸುಂದರನಗರ ಗ್ರಾಮದಲ್ಲಿ 3 ಸೆಂಟ್ ಜಾಗ ಖರೀದಿ ಮಾಡಿ ಅಂದಾಜು ರೂ.8.5 ಲಕ್ಷ ವೆಚ್ಚದಲ್ಲಿ ವಸತಿ ಭಾಗ್ಯ ಕಲ್ಪಿಸಲು ಉದ್ದೇಶಿಸಲಾಗಿದೆ. ಕೂಡಿಗೆ ಜುಮ್ಮಾ ಮಸೀದಿ ಧರ್ಮಗುರು ಹೈದರಾಲಿ ಶಾಹದಿ ಖತ್ತಿಬ್ ಹಾಗೂ ಟ್ರಸ್ಟ್ ಅಧ್ಯಕ್ಷ ಎಂ.ಹೆಚ್.ಮಹಮ್ಮದ್ ಹಾಗೂ ಪದಾಧಿಕಾರಿಗಳು ಮನೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಚಾಲನೆ ನೀಡಿದರು. ಅಧ್ಯಕ್ಷ ಎಂ.ಹೆಚ್.ಮಹಮ್ಮದ್ ಮಾತನಾಡಿ ಕೊಡಗಿನ ಬಡವರ ಬೆಳಕು ಚಾರಿಟೇಬಲ್ ಟ್ರಸ್ಟ್ ಕಳೆದ ಅನೇಕ ವರ್ಷಗಳಿಂದ ಸಾಮಾಜಿಕ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಜಾತಿ, ಭೇದ, ಧರ್ಮ ಮರೆತು ಸಮಾಜದಲ್ಲಿ ಬಡವರ ಹಾಗೂ ನಿರ್ಗತಿಕರ ಏಳಿಗೆಗೆ ಶ್ರಮಿಸುತ್ತಿದೆ. ಬಡ ಹೆಣ್ಣು ಮಕ್ಕಳಿಗೆ ಕಲ್ಯಾಣ ಭಾಗ್ಯ, ವಸತಿ…
ಮಡಿಕೇರಿ ಸೆ.19 NEWS DESK : ಕೊಡಗು ವಿಷ್ಣು ಸೇನಾ ಸಮಿತಿ ವತಿಯಿಂದ ಸೆ.20 ರಂದು ನಟ ಡಾ.ವಿಷ್ಣುವರ್ಧನ್ ಅವರ 75ನೇ ಜನ್ಮದಿನಾಚರಣೆಯನ್ನು ಆಚರಿಸಲಾಗುವುದೆಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ನಾಗರಾಜ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಅಬ್ದುಲ್ ಕಲಾಂ ಲೇಜೌಟ್‍ನಲ್ಲಿರುವ ಜನ ವಿಕಾಸ್ ಸೇವಾ ಟ್ರಸ್ಟ್ ವೃದ್ಧಾಶ್ರಮದಲ್ಲಿ ಮಧ್ಯಾಹ್ನ 2 ಗಂಟೆಗೆ ಕಾರ್ಯಕ್ರಮ ನಡೆಯಲಿದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬ್ರಹ್ಮಗಿರಿ ವಾರಪತ್ರಿಕೆ ಸಂಪಾದಕರಾದ ಉಳ್ಳಿಯಡ ಪೂವಯ್ಯ, ಡಾಟಿ ಪೂವಯ್ಯ, ಪ್ರಮುಖರಾದ ಪಿ.ಜಿ.ಮಂಜುನಾಥ್, ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ರಫೀಕ್ (ದಾದಾ) ಪಾಲ್ಗೊಳ್ಳಲಿದ್ದಾರೆ. 5 ಸ್ಟಾರ್ ಸಿಂಗರ್ಸ್ ತಂಡದ ವತಿಯಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಆಶ್ರಮದ ವಾಸಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ವಿಷ್ಣು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ನಾಗರಾಜ್ ಮನವಿ ಮಾಡಿದರು. ಸಮಿತಿ ಅಧ್ಯಕ್ಷ ರಫೀಕ್ (ದಾದಾ) ಮಾತನಾಡಿ, ಡಾ.ವಿಷ್ಣುವರ್ಧನ್ ಅಭಿಮಾನಿಗಳ ಕಣ್ಣೊರೆಸುವ ತಂತ್ರಕ್ಕೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಲಾಗಿದೆ ಎಂದು…
ಮಡಿಕೇರಿ ಸೆ.19 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯದಲ್ಲಿ ದಸರಾ ಹಬ್ಬದ ಪ್ರಯುಕ್ತ ಸೆ.22 ರಿಂದ ಅ.2ರ ವರೆಗೆ ದೇವಿಗೆ ವಿಶೇಷ ಅಲಂಕಾರ ಪೂಜೆ ನಡೆಯಲಿದೆ ಎಂದು ದೇವಾಲಯದ ಟ್ರಸ್ಟಿ ಹಾಗೂ ಶತಮಾನೋತ್ಸವ ಕಾರ್ಯಾಧ್ಯಕ್ಷ ಸಿ.ಎಸ್.ರಂಜಿತ್ ಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ದಂಡಿನ ಮಾರಿಯಮ್ಮ ದೇವಾಲಯವು 95ನೇ ವರ್ಷದ ಅದ್ದೂರಿ ದಸರಾ ಉತ್ಸವವನ್ನು ಆಚರಿಸುತ್ತಿದ್ದು, ಹನ್ನೊಂದು ದಿನಗಳ ಕಾಲ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿದೆ ಎಂದರು. ಸೆ.22 ರಂದು ಬೆಳ್ಳಿಯ ಅಲಂಕಾರ, ಸೆ.23 ರಂದು ಪಂಚಪುಷ್ಪ ಅಂಲಕಾರ ನಡೆಯಲಿದ್ದು, ಸಂಜೆ 6 ಗಂಟೆಗೆ ದುರ್ಗಾಪೂಜೆ ಜರುಗಲಿದೆ. ಸೆ.24 ರಂದು ವಿಳ್ಯೆದೆಲೆ ಅಲಂಕಾರ, ಸೆ.25 ರಂದು ಕೊಲ್ಲೂರು ಮೂಕಾಂಬಿಕೆ ಅಲಂಕಾರ, ಸೆ.26 ರಂದು ಮಹಾಲಕ್ಷ್ಮಿ ಅಲಂಕಾರ ನಡೆಯಲಿದ್ದು, ಸಂಜೆ 6 ಗಂಟೆಗೆ ಕಲ್ಪೋಕ್ಷ ಪೂಜೆ ನೆರವೇರಲಿದೆ. ಸೆ.27 ರಂದು ಚಾಮುಂಡೇಶ್ವರಿ ಅಲಂಕಾರ ಪೂಜೆ, ಸೆ.28 ರಂದು ಗುಲಾಬಿ…
ಪುತ್ತೂರು ಸೆ.19 NEWS DESK : ಸ್ಪೋರ್ಟ್ಸ್ ಕೋಟಾದಲ್ಲಿ ಭಾರತೀಯ ರೈಲ್ವೇಯಲ್ಲಿ ಉದ್ಯೋಗವನ್ನು ಗಳಿಸಿಕೊಂಡಿರುವ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಹಿರಿಯ ವಿದ್ಯಾರ್ಥಿನಿ ಪವಿತ್ರಾ.ಜಿ ಇವರನ್ನು ಕಾಲೇಜಿನಲ್ಲಿ ಸನ್ಮಾನಿಸಲಾಯಿತು. ಟ್ರಿಪಲ್ ಜಂಪ್ ಮತ್ತು ಲಾಂಗ್ ಜಂಪ್‍ನಲ್ಲಿ ರಾಷ್ಟ್ರ ಮಟ್ಟದ ಸಾಧನೆಯನ್ನು ಮಾಡಿರುವ ಇವರು ಕಾಲೇಜಿನ ಎಂಬಿಎ ವಿಭಾಗದ ಹಿರಿಯ ವಿದ್ಯಾರ್ಥಿನಿಯಾಗಿದ್ದು, ಬೆಂಗಳೂರಿನ ನೈರುತ್ಯ ರೈಲ್ವೇ ಕೇಂದ್ರ ಕಛೇರಿಯಲ್ಲಿ ನೇಮಕಾತಿಯನ್ನು ಹೊಂದಿದ್ದಾರೆ. ಉಡುಪಿಯ ಆರ್ಯಬೆಟ್ಟುವಿನ ಗೋಪಾಲ ಕುಲಾಲ್ ಮತ್ತು ಸುನಂದ ದಂಪತಿಯ ಪುತ್ರಿಯಾಗಿರುವ ಈಕೆ ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣವನ್ನು ಪೆರ್ಡೂರಿನಲ್ಲಿ, ಪಿಯುಸಿ ಮತ್ತು ಪದವಿ ಶಿಕ್ಷಣವನ್ನು ನಿಟ್ಟೆಯಲ್ಲಿ ಪೂರೈಸಿದ್ದು, ಎಂಬಿಎ ಶಿಕ್ಷಣವನ್ನು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆಸಿದ್ದಾರೆ. ಎಂಬಿಎ ಪದವಿಯನ್ನು ಪಡೆಯುವ ಸಂದರ್ಭದಲ್ಲಿ ಕಾಲೇಜಿನಿಂದ ದೊರೆತ ಪೂರಕ ಬೆಂಬಲವನ್ನು ಸಂಪೂರ್ಣವಾಗಿ ಬಳಸಿಕೊಂಡ ಇವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಅಂತರ್ಕಾಲೇಜು ಕ್ರೀಡಾಕೂಟದಲ್ಲಿ ಹೊಸ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ, ರಾಜ್ಯಮಟ್ಟದ ದಸರಾ…
ಕುಶಾಲನಗರ ಸೆ.19 NEWS DESK : ಕುಶಾಲನಗರ ವ್ಯಾಪ್ತಿಯಲ್ಲಿ 15, 20 ವರ್ಷಗಳ ಹಳೆಯ ವಾಣಿಜ್ಯ ಕಟ್ಟಡಗಳಿಗೆ ಕಾರ್ಮಿಕ ಇಲಾಖೆಯಿಂದ ನೋಟಿಸ್ ನೀಡುತ್ತಿರುವುದು ತಪ್ಪು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ನ ಅಧ್ಯಕ್ಷ ಕೆ.ಎಸ್.ನಾಗೇಶ್ ನೇತೃತ್ವದಲ್ಲಿ ಮನವಿ ನೀಡಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರೆದಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದ ಚೇಂಬರ್ ಪ್ರತಿನಿಧಿಗಳು, ಸ್ಥಳೀಯ ಪಂಚಾಯಿತಿ ಕಟ್ಟಡ ನಿರ್ಮಾಣ ಪರವಾನಗಿ ನೀಡುವಾಗ ಕಾರ್ಮಿಕ ಸೆಸ್ ಪಡೆದಿರುತ್ತಾರೆ. ಕಾರ್ಮಿಕ ಇಲಾಖೆ ಪಂಚಾಯಿತಿಯಿಂದ ಸಂಗ್ರಹಿಸಲಾದ ಸೆಸ್ ಹಣವನ್ನು ಪಡೆಯಬೇಕು. ಅದು ಬಿಟ್ಟು ಮಾಲೀಕರಿಗೆ ನೋಟಿಸ್ ನೀಡಿ ಆತಂಕದ ವಾತಾವರಣ ಸೃಷ್ಟಿಯಾಗುತ್ತಿದೆ. ಇದನ್ನು ತಪ್ಪಿಸಲು ರಾಜ್ಯದ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ, ಜನರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಇರಲು ಸೂಚಿಸಿದರು. ಪ್ರತಿ 45 ದಿನಗಳಿಗೆ ಒಮ್ಮೆ ಸಂಘ, ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಆಗಬೇಕಿರುವ ಕೆಲಸ ಕಾರ್ಯಗಳ ಚರ್ಚಿಸಿ…
ಮಡಿಕೇರಿ NEWS DESK ಸೆ.19 : ಮಡಿಕೇರಿ ನಗರಸಭೆಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಕಡತಗಳ ವಿಲೇವಾರಿ ವಿಳಂಬವಾಗುತ್ತಿರುವ ಕುರಿತು ನಗರಸಭೆ ವಿರುದ್ಧ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿ ಬಂದಿರುವ ಹಿನ್ನೆಲೆ ಲೋಕಾಯುಕ್ತ ಡಿವೈಎಸ್ಪಿ ದಿನಕರ್ ಶೆಟ್ಟಿ ಅವರ ನೇತೃತ್ವದ ತಂಡ ಇಂದು ಬೆಳಿಗ್ಗೆ ಭೇಟಿ ನೀಡಿತು. ಕಡತಗಳ ಪರಿಶೀಲನೆಯೊಂದಿಗೆ ನಗರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿಚಾರಣೆಯನ್ನು ಕೂಡ ಮಾಡಲಾಗುತ್ತಿದೆ. ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.






