ಲೇಖಕ: admin

ಮಡಿಕೇರಿ ಸೆ.2 NEWS DESK : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಗಳು ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದ್ದು, ಯಶಸ್ವಿಯಾಗಿ ಮೂರು ವರ್ಷಗಳ ಪಯಣವನ್ನು ಪೂರೈಸಿವೆ. ಆರ್ಥಿಕ ಸ್ವಾವಲಂಬನೆ ಹಾಗೂ ಸುರಕ್ಷಿತ ಮತ್ತು ಉಚಿತ ಸಂಚಾರಕ್ಕೆ ಅವಕಾಶ ಕಲ್ಪಿಸಿರುವ ಈ ಯೋಜನೆಗಳು ಮಹಿಳೆಯರ ಬದುಕಿನಲ್ಲಿ ಆಶಾಕಿರಣವಾಗಿವೆ. ಗೃಹಲಕ್ಷ್ಮಿ ಯೋಜನೆ: ಕುಟುಂಬದ ಯಜಮಾನಿಯಾಗಿರುವ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಜಾರಿಗೊಳಿಸಲಾದ ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಮಹಿಳೆಯರ ಸ್ವಾವಲಂಬನೆಗೆ ಉತ್ತೇಜನ ನೀಡುತ್ತಿದೆ. ಯೋಜನೆಯಿಂದ ದೊರೆಯುತ್ತಿರುವ ಆರ್ಥಿಕ ನೆರವನ್ನು ಫಲಾನುಭವಿ ಮಹಿಳೆಯರು ಮಕ್ಕಳ ಶಿಕ್ಷಣ, ಆರೋಗ್ಯ, ದಿನನಿತ್ಯದ ಕುಟುಂಬ ನಿರ್ವಹಣೆ ಸೇರಿದಂತೆ ವಿವಿಧ ಅಗತ್ಯ ವೆಚ್ಚಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯು ಕೊಡಗು ಜಿಲ್ಲೆಯಲ್ಲಿಯೂ ಉತ್ತಮ ಸ್ಪಂದನೆ ಪಡೆದಿದ್ದು, ಜಿಲ್ಲೆಯ ಐದು ತಾಲೂಕುಗಳಲ್ಲಿ ಒಟ್ಟು 1,20,872 ಮಹಿಳೆಯರು ಯೋಜನೆಗೆ ಹೆಸರು ನೋಂದಾಯಿಸಿಕೊಂಡಿದ್ದು, ಮಡಿಕೇರಿ 31,549, ಸೋಮವಾರಪೇಟೆ 25,286, ಕುಶಾಲನಗರ 23,179, ವಿರಾಜಪೇಟೆ 21,691 ಮತ್ತು ಪೊನ್ನಂಪೇಟೆ ತಾಲ್ಲೂಕಿನಲ್ಲಿ…

Read More

ಮಡಿಕೇರಿ, NEWS DESK ಸೆ. 2: ಬ್ರೈನೋಬ್ರೈನ್ ಇಂಟರ್‌ನ್ಯಾಷನಲ್ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಚೆನ್ನೈನ ಚೆನ್ನೈ ಟ್ರೇಡ್ ಸೆಂಟರ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 48ನೇ ರಾಷ್ಟ್ರ ಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ–2026ರಲ್ಲಿ ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ 34 ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ. ಸ್ಪರ್ಧೆಯಲ್ಲಿ ಮಡಿಕೇರಿ ಕೇಂದ್ರದ ವಿದ್ಯಾರ್ಥಿಗಳು ಒಟ್ಟು 21 ಚಾಂಪಿಯನ್ ಟ್ರೋಫಿ, 9 ಚಿನ್ನದ ಪದಕ ಹಾಗೂ 4 ಬೆಳ್ಳಿಯ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಮತ್ತು ಸಾಧನೆಯ ಹೆಗ್ಗಳಿಕೆ ವಿದ್ಯಾರ್ಥಿಗಳು, ಪೋಷಕರು ಹಾಗೂ ತರಬೇತುದಾರರಿಗೆ ಸಲ್ಲಬೇಕು ಎಂದು ತಿಳಿಸಲಾಗಿದೆ. ಕೇವಲ ಮೂರು ನಿಮಿಷಗಳಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತ್ಯಂತ ಚುರುಕಾಗಿ ಮಾಡುವ ಮೂಲಕ ಈ ಅದ್ಭುತ ಯಶಸ್ಸು ಸಾಧಿಸಿದ ಮಕ್ಕಳನ್ನು ಹಾಗೂ ಅವರನ್ನು ಸ್ಪರ್ಧೆಗಾಗಿ ಚೆನ್ನೈಗೆ ಕರೆತಂದ ಪೋಷಕರನ್ನು ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರು ಅಭಿನಂದಿಸಿದರು. ಬ್ರೈನೋಬ್ರೈನ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀ ಆನಂದ್ ಸುಬ್ರಮಣ್ಯಂ ಹಾಗೂ ತಾಂತ್ರಿಕ ನಿರ್ದೇಶಕ ಅರುಲ್ ಸುಬ್ರಮಣ್ಯಂ ಅವರು ಉಪಸ್ಥಿತರಿದ್ದು, ಮಡಿಕೇರಿ ಬ್ರೈನೋಬ್ರೈನ್ ಕೇಂದ್ರದ ಮಕ್ಕಳ…

Read More

ಮಡಿಕೇರಿ, NEWS DESK ಸೆ. 2: 2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಕೊಡಗು ಜಿಲ್ಲೆಯಲ್ಲಿ ಆರಂಭಗೊಂಡಿದ್ದು, ಜಿಲ್ಲೆಯ 525 ಹಳ್ಳಿಗಳ ವ್ಯಾಪ್ತಿಯ ಒಟ್ಟು 2,60,798 ತಾಕುಗಳಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಈ ಬಾರಿ ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ವಿವರಗಳನ್ನು ಸ್ವತಃ ದಾಖಲಿಸಲು ಸರ್ಕಾರ ಅವಕಾಶ ಕಲ್ಪಿಸಿದ್ದು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್ ಅವರು ರೈತರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ವಿವರ ದಾಖಲಿಸಲು ಅಗತ್ಯವಿರುವ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಅನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಆ್ಯಪ್ ಬಳಕೆಗೆ ಸಂಬಂಧಿಸಿದಂತೆ ರೈತರಿಗೆ ಮಾರ್ಗದರ್ಶನ ನೀಡಲು ಪ್ರತಿ ಗ್ರಾಮದಲ್ಲಿ ನುರಿತ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿದೆ. ತಮ್ಮ ಗ್ರಾಮದ ನಿಯೋಜಿತ ಖಾಸಗಿ ನಿವಾಸಿಗಳ ವಿವರಗಳನ್ನು ಸಂಬಂಧಪಟ್ಟ ಕೃಷಿ ಅಥವಾ ಕಂದಾಯ ಇಲಾಖೆಯ ಕಚೇರಿಗಳಿಂದ ಪಡೆಯಬಹುದು ಎಂದು ತಿಳಿಸಿದ್ದಾರೆ. ಎಫ್‌ಐಡಿ ಸಂಖ್ಯೆ ಕಡ್ಡಾಯ ಬೆಳೆ…

Read More

ಮಡಿಕೇರಿ, NEWS DESK ಸೆ. 02- ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿನ  ಕೌಶಲ್ ಬೋಧ್ ಕಲಿಕೆಯ ಅಂಗವಾಗಿ  ನಗರದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳಿಗೆ ಹೊಲಗದ್ದೆಯ ನಾಟಿ ಕಾರ್ಯದ ಅನುಭವವನ್ನು ಕಲ್ಪಿಸಿಕೊಡಲಾಯಿತು. ಕಗ್ಗೋಡ್ಲು ಗ್ರಾಮದ ನಿಯತಾ ದೇವಯ್ಯ ಸೋಮಣ್ಣ ಅವರ ಗದ್ದೆಯಲ್ಲಿ 7ನೇ ತರಗತಿಯ 70 ವಿದ್ಯಾರ್ಥಿಗಳು ,ಶಿಕ್ಷಕರ ತಂಡವು ಭಾಗವಹಿಸಿತ್ತು. ಮಕ್ಕಳು ರೈತರೊಂದಿಗೆ ಗದ್ದೆಗಿಳಿದು ಭತ್ತದ ಸಸಿಗಳನ್ನು ಅಗೆ ತೆಗೆದು ನಾಟಿ ಮಾಡುವುದರ ಮೂಲಕ ಕೃಷಿ ಚಟುವಟಿಕೆಯನ್ನು  ಸ್ವಯಂ  ಅನುಭವಿಸಿದರು. ಶಿಕ್ಷಕರು ಮಕ್ಕಳಿಗೆ ಭತ್ತದ ಬೆಳೆ, ನಾಟಿ ವಿಧಾನ, ಗದ್ದೆಯ ಮಹತ್ವ ಮತ್ತು ರೈತರ ಶ್ರಮದ ಬಗ್ಗೆ ಮಾಹಿತಿ ನೀಡಿದರು. ಕೆಸರುಮಯವಾದ ಗದ್ದೆಯಲ್ಲಿ ಮಕ್ಕಳು   ಉತ್ಸಾಹದಿಂದ ನಾಟಿ ಮಾಡಿದರು.  . ಪುಸ್ತಕದ ಕಲಿಕೆಯ ಜೊತೆಗೆ ಇಂತಹ ಕೌಶಲ್ಯಾಧಾರಿತ ಕಲಿಕೆಯು ಮಕ್ಕಳಲ್ಲಿ ಶ್ರಮದ ಮೌಲ್ಯ, ಆಹಾರದ ಮಹತ್ವ ಮತ್ತು ಕೃಷಿಯ ಬಗ್ಗೆ ಗೌರವ ಮೂಡಿಸುತ್ತದೆ. ಈ ಚಟುವಟಿಕೆಯು ಮಕ್ಕಳಿಗೆ ಅವಿಸ್ಮರಣೀಯ ಅನುಭವವನ್ನು ನೀಡಿತು

Read More

ಮಡಿಕೇರಿ, NEWS DESK ಸೆ.2: ಯುವ ಸಬಲೀಕರಣದ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಜಿಲ್ಲೆಯ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ನಾಯಕತ್ವ ಗುಣಗಳನ್ನು ಉತ್ತೇಜಿಸುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿದೆ ಎಂದರು. ಗ್ರಾಮ ಪಂಚಾಯಿತಿ ಹಾಗೂ ನಗರ ಪ್ರದೇಶಗಳಲ್ಲಿ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ನಾಗರಿಕ ಸೇವಾ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೋಂದಣಿಗೆ ಆಧಾರ್ ಕಡ್ಡಾಯವಾಗಿದ್ದು, 16ರಿಂದ 35 ವರ್ಷದೊಳಗಿನ ಯುವಕ-ಯುವತಿಯರು ಸಂಘದ ಸದಸ್ಯತ್ವ ಪಡೆಯಲು ಅರ್ಹರಾಗಿದ್ದಾರೆ. ಒಂದು ಸಂಘದ ಘಟಕ ರಚನೆಗೆ ಕನಿಷ್ಠ 100ರಿಂದ 200 ಯುವಜನರು ಸದಸ್ಯರಾಗಿರಬೇಕು. ಪ್ರತಿ ಸದಸ್ಯರು ಗುರುತಿನ ಚೀಟಿಗಾಗಿ  ರೂ.10 ನೋಂದಣಿ ಶುಲ್ಕ ಪಾವತಿಸಬೇಕು. ಅರ್ಜಿದಾರರು ಸಂಬಂಧಪಟ್ಟ ಗ್ರಾಮ ಪಂಚಾಯಿತಿ…

Read More

ಸುಂಟಿಕೊಪ್ಪ, NEWS DESK ಸೆ.2: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜನತಾ ಕಾಲೋನಿ ನಿವಾಸಿ ಎಲ್.ಸಿ. ಅವರ ಕುಟುಂಬಕ್ಕೆ ನೆರವಿನ ಹಸ್ತ ನೀಡಲಾಯಿತು. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಎಲ್.ಸಿ. ಅವರ ಮನೆಯ ಗೋಡೆ ಕುಸಿತಗೊಂಡ ಹಿನ್ನೆಲೆಯಲ್ಲಿ, ಕುಟುಂಬಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ.10,000 ಸಹಾಯಧನ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು. ಸುಂಟಿಕೊಪ್ಪ ವಲಯದ ಮೇಲ್ವಿಚಾರಕರಾದ ಸಂತೋಷ್ ನಾಯಕ್, ಒಕ್ಕೂಟದ ಅಧ್ಯಕ್ಷೆ ಆರ್. ಶುಭ ಹಾಗೂ ಸೇವಾ ಪ್ರತಿನಿಧಿ ಎಂ.ಸಿ. ನಂದಿನಿ ಅವರು ಎಲ್.ಸಿ. ಅವರ ಮನೆಗೆ ಭೇಟಿ ನೀಡಿ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದರು.

Read More

ಸುಂಟಿಕೊಪ್ಪ, NEWS DESK ಸೆ.2: ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಸುಂಟಿಕೊಪ್ಪ ಲಯನ್ಸ್ ಸಂಸ್ಥೆಯ ವತಿಯಿಂದ ಇತ್ತೀಚೆಗೆ ವನಮಹೋತ್ಸವ ಹಾಗೂ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸಲಾಯಿತು. ಗುಡ್ಡೆಹೊಸೂರಿನ ಖಾಸಗಿ ರೇಸಾರ್ಟ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಲಯನ್ಸ್ ಅಧ್ಯಕ್ಷ ಎಸ್.ಜಿ. ಶ್ರೀನಿವಾಸ್ ಅವರು ಹಣ್ಣಿನ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸುತ್ತಮುತ್ತಲಿನ ರೈತರಿಗೆ 200ಕ್ಕೂ ಮಿಕ್ಕಿ ಗಿಡಗಳನ್ನು ವಿತರಿಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ 60 ವರ್ಷ ಪೂರೈಸಿದ ಎಲ್ಲಾ ಸದಸ್ಯರನ್ನು ಸನ್ಮಾನಿಸಿ, ಅವರ ಸಾಧನೆಯನ್ನು ಪ್ರಸ್ತುತಪಡಿಸಲಾಯಿತು. ಸದಸ್ಯರಿಗೆ ವಿವಿಧ ರೀತಿಯ ಆಟೋಟಗಳನ್ನು ಸಹ ಏರ್ಪಡಿಸಲಾಗಿತ್ತು. ಹಿರಿಯ ಸದಸ್ಯರಾದ ಕೋಟೇರ ಶಂಭುಚಂಗಪ್ಪ ಹಾಗೂ ರಮ್ಯ ಅವರ ಸೇವೆಯನ್ನು ಸ್ಮರಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಂಟಿಕೊಪ್ಪ ಲಯನ್ಸ್ ಅಧ್ಯಕ್ಷ ಎಸ್.ಜಿ. ಶ್ರೀನಿವಾಸ್ ವಹಿಸಿ, 50ನೇ ವರ್ಷದಲ್ಲಿರುವ ಸಂಸ್ಥೆಯ ಮುಂದಿನ ಕಾರ್ಯಯೋಜನೆಗಳ ಕುರಿತು ವಿವರಿಸಿದರು. ವೇದಿಕೆಯಲ್ಲಿ ಲಯನ್ಸ್ ಕಾರ್ಯದರ್ಶಿ ಗ್ಲೇನ್ ಮೇನೇಜೆಸ್, ಹಿರಿಯ ಸದಸ್ಯರಾದ ಡಾ. ಯಶೋಧರ ಪೂಜಾರಿ, ಕೆ.ಡಿ. ರಾಮಯ್ಯ,…

Read More

ಮಡಿಕೇರಿ, NEWS DESK ಸೆ.2 – ಮದೆನಾಡಿನ ಯುವ ಯೋಗಸಾಧಕಿ ಸಿಂಚನಾಳಿಗೆ ಯೋಗ ಕ್ಷೇತ್ರದಲ್ಲಿ ಲಭಿಸಿರುವ ಏಷ್ಯಾ ಮತ್ತು ಇಂಡಿಯಾ ಬುಕ್ ಆಫ್ ರೆಕಾಡ್ಸ್೯ನ ದಾಖಲೆಯನ್ನು ನಗರದ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿತ ಕಾಯ೯ಕ್ರಮದಲ್ಲಿ ಹಸ್ತಾಂತರಿಸಲಾಯಿತು ನಗರದ ರೋಟರಿ ಸ ಆಯೋಜಿತ ಕಾಯ೯ಕ್ರಮದಲ್ಲಿ ಮದೆನಾಡಿನ ಬಿಜಿಎಸ್ ಶಾಲೆಯ 7 ನೇ ತರಗತಿ ವಿದ್ಯಾಥಿ೯ನಿ ಸಿಂಚನಾಳಿಗೆ ದೊರೆತ ಪ್ರತಿಷ್ಟಿತ ಪ್ರಶಸ್ತಿಗಳನ್ನು ಗಣ್ಯರು ಹಸ್ತಾಂತರಿಸಿದರು. ಕಳೆದ 3 ತಿಂಗಳಿನಲ್ಲಿ ತನ್ನ ಯೋಗಾಸನಕ್ಕಾಗಿ ಮದೆನಾಡಿನ ವಿದ್ಯಾಥಿ೯ನಿ ಸಿಂಚನಾಳಿಗೆ ಏಷ್ಯಾ ಬುಕ್ ಆಫ್ ರೆಕಾಡ್ಸ್ ಮತ್ತು ಇಂಡಿಯಾ ಬುಕ್ ಆಫ್ ರೆಕಾಡ್ಸ್೯ ಪ್ರಶಸ್ತಿಗಳು ಲಭಿಸಿದ್ದವು. ಈ ಪ್ರಶಸ್ತಿಗಳನ್ನ ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿತ ಕಾಯ೯ಕ್ರಮದಲ್ಲಿ ಸಿಂಚನಾಳಿಗೆ ಪ್ರದಾನ ಮಾಡಲಾಯಿತು. ಕಾಯ೯ಕ್ರಮ ಉದ್ಘಾಟಿಸಿ ಮಾತನಾಡಿದ ಯೋಗಭ್ಯಾಸಿ , ವಕೀಲ ಜಿ.ಆರ್.ರವಿಶಂಕರ್, ಯೋಗ ಎಂದರೆ ಕೇವಲ ದೇಹವನ್ನು ಬಗ್ಗಿಸುವುದ ಅಥವಾ ಕಷ್ಟಕರವಾದ ಆಸನಗಳನ್ನು ಮಾಡುವುದೋ ಅಲ್ಲ, ಯೋಗ ಎಂದರೆ ಒಗ್ಗೂಡುವಿಕೆಯಾಗಿದೆ. ನಮ್ಮ ಶರೀರ, ಮನಸ್ಸು ಮತ್ತು ಆತ್ಮವನ್ನು ಒಂದೇ…

Read More

ಬೆಂಗಳೂರು, NEWS DESK ಸೆ.02: ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಇಲಾಖೆಗಳ ವತಿಯಿಂದ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತು ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಇಂದು ಬೆಂಗಳೂರಿನ ವಿಕಾಸಸೌಧದ ಕೊಠಡಿ ಸಂಖ್ಯೆ 222ರಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಕೈಗೊಂಡಿರುವ ರಸ್ತೆ ಹಾಗೂ ಸೇತುವೆ ಅಭಿವೃದ್ಧಿ ಕಾಮಗಾರಿಗಳ ವಿಳಂಬ ಮತ್ತು ಕೆಲವು ಕಾಮಗಾರಿಗಳ ಗುಣಮಟ್ಟದ ಬಗ್ಗೆ ಶಾಸಕ ಪೊನ್ನಣ್ಣ ಅವರು ಅಸಮಾಧಾನ ವ್ಯಕ್ತಪಡಿಸಿದರು. ಈ ಕುರಿತು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡು, ನಿಗದಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಕೈಗೊಂಡಿರುವ ಕಾವೇರಿ ನದಿ ಸ್ವಚ್ಛತೆ ಹಾಗೂ ಪುನರ್ವಸತಿ ಕಾಮಗಾರಿಗಳ ಪ್ರಗತಿಯನ್ನೂ ಪರಿಶೀಲಿಸಲಾಯಿತು. ಬಾಕಿ ಇರುವ ಎಲ್ಲಾ ಕಾಮಗಾರಿಗಳನ್ನು ಯಾವುದೇ ವಿಳಂಬವಿಲ್ಲದೆ ಶೀಘ್ರವಾಗಿ…

Read More

ಮಡಿಕೇರಿ NEWS DESK ಸೆ.2: ಕೊಡವ ಪ್ರಾಂತ್ಯದಾದ್ಯಂತ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ವತಿಯಿಂದ ಹಮ್ಮಿಕೊಂಡಿರುವ ಶಾಂತಿಯುತ ಮಾನವ ಸರಪಳಿ ಹಾಗೂ ಜನಸಂಪರ್ಕ ಅಭಿಯಾನದ ಅಂಗವಾಗಿ ಸೆಪ್ಟೆಂಬರ್ 5ರಂದು ಬೆಳಿಗ್ಗೆ 10.30ಕ್ಕೆ ಸೂರ್ಲಬ್ಬಿನಾಡ್ ಹಾಗೂ ಗಡಿನಾಡಿನ ಮಾದಾಪುರದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಕೊಡವ ತಿಳಿಸಿದ್ದಾರೆ. ಕೊಡವಲ್ಯಾಂಡ್‌ಗೆ ಭೂ-ರಾಜಕೀಯ ಸ್ವಾಯತ್ತತೆ, ಸಂವಿಧಾನದ ವಿಧಿ 371ರ ಅಡಿಯಲ್ಲಿ ಸ್ವಯಂ ಆಡಳಿತ, ವಿಶ್ವಸಂಸ್ಥೆಯ ಸನ್ನದು ಹಾಗೂ ಭಾರತೀಯ ಸಂವಿಧಾನದ ಅಡಿಯಲ್ಲಿ ಕೊಡವರನ್ನು ಆದಿಮಸಂಜಾತ ಸಮುದಾಯವಾಗಿ ಗುರುತಿಸಿ ಸಾಂವಿಧಾನಿಕ ರಕ್ಷಣೆ ಮತ್ತು ವಿಶೇಷ ಮಾನ್ಯತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಜನಸಂಪರ್ಕ ಅಭಿಯಾನದಲ್ಲಿ ಪ್ರಸ್ತಾಪಿಸಲಾಗುವುದು ಎಂದು ಅವರು  ಹೇಳಿದ್ದಾರೆ. ಕೊಡವರ ಧಾರ್ಮಿಕ ಸಂಸ್ಕಾರವಾದ ‘ಕೋವಿ-ತೋಕ್’ (ಬಂದೂಕು) ಸಂಪ್ರದಾಯವನ್ನು ಸಂವಿಧಾನದ ವಿಧಿ 25, 26 ಮತ್ತು 28ರ ಅಡಿಯಲ್ಲಿ ಮುಂದುವರಿಸಲು ಅವಕಾಶ ನೀಡಬೇಕು. ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯಕ್ಕೆ ನೀಡಲಾಗಿರುವ ‘ಸಂಘ’ ಕ್ಷೇತ್ರದ ಮಾದರಿಯಲ್ಲಿ, ಆದಿಮಸಂಜಾತ ಅನಿಮಿಸ್ಟಿಕ್ (ಪ್ರಕೃತಿ ಆರಾಧಕ) ಕೊಡವ ಸಮುದಾಯಕ್ಕೆ ಸಂಸತ್ತು ಮತ್ತು…

Read More