ಮಡಿಕೇರಿ ಸೆ.19 NEWS DESK : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ ಸಹಯೋಗದೊಂದಿಗೆ ಕುಶಾಲನಗರ ತಾಲೂಕಿನ ಚೆಟ್ಟಳ್ಳಿ ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆನರಾ ಬ್ಯಾಂಕ್ ವ್ಯವಸ್ಥಾಪಕ ವಿಷ್ಣು ಅವರು, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು. ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು ವಾರ್ಷಿಕ 20ರೂ ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 200000ರೂ ಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ವಾರ್ಷಿಕವಾಗಿ 436 ರೂ.ಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ 200000 ರೂ.ಗಳ ವಿಮಾಮೊತ್ತ ಸಿಗುವುದಾಗಿ ತಿಳಿಸಿದರು. ಎರಡನ್ನೂ ಮಾಡಿಸಿಕೊಂಡಲ್ಲಿ 400000 ರೂ.ಗಳ ವರೆಗಿನ ವಿಮಾಮೊತ್ತ ಸಿಗುವುದಾಗಿ ಮಾಹಿತಿ ನೀಡಿದರು.…
ಲೇಖಕ: admin
ವಿರಾಜಪೇಟೆ ಸೆ.19 NEWS DESK : ಜಿಲ್ಲೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ವಿರಾಜಪೇಟೆಯ ಸೆಂಟ್ ಆನ್ಸ್ ಕಾಲೇಜಿನಲ್ಲಿ ಎಂ. ಕಾಂ. ಸ್ನಾತಕೋತ್ತರ ವಿಭಾಗಕ್ಕೆ 2025 -26ನೇ ಸಾಲಿಗೆ ಪ್ರವೇಶಾತಿ ಆರಂಭವಾಗಿದೆ. ನುರಿತ ಉಪನ್ಯಾಸಕರು, ಸುಸಜ್ಜಿತ ಕೊಠಡಿ, ಐಸಿಟಿ ತರಗತಿ, ಗ್ರಂಥಾಲಯ ವ್ಯವಸ್ಥೆ, ವೈಫೈ ವ್ಯವಸ್ಥೆ, ಕೆ ಸೆಟ್ ಹಾಗೂ ನೆಟ್ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಜೊತೆಗೆ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ವಿಚಾರ ಮಂಡನೆ, ಇಂಡಸ್ಟ್ರಿಯಲ್ ವಿಸಿಟ್ ಹಾಗೂ ಇಂಟರ್ನ್ ಷಿಪ್, ಬೋಧನಾ ಕೌಶಲ್ಯ ತರಬೇತಿ, ಸೆಮಿನಾರ್, ಫೆಸ್ಟ್ ಗಳಲ್ಲಿ ಪಾಲ್ಗೊಳ್ಳುವಿಕೆ ಹಾಗೂ ಪ್ರಾಯೋಗಿಕ ತರಬೇತಿಗಳಿಗೆ ಹೆಚ್ಚಿನ ಒತ್ತನ್ನು ನೀಡಲಾಗುತ್ತಿದೆ. ಈ ಹಿಂದಿನ ಸಾಲಿನ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳಲ್ಲಿ ಅತ್ಯುನ್ನತ ಶ್ರೇಣಿಯನ್ನು ಪಡೆಯುವುದರ ಜೊತೆಗೆ ಪ್ರತಿ ಸೆಮಿಸ್ಟರ್ ಗಳಲ್ಲೂ ಶೇ.100 ಫಲಿತಾಂಶ ದಾಖಲಾಗಿರುತ್ತದೆ. ಶಿಕ್ಷಣ ಮಾತ್ರವಲ್ಲದೆ ಉದ್ಯೋಗ ಘಟಕದ ಮೂಲಕ ಕ್ಯಾಂಪಸ್ ಸೆಲೆಕ್ಷನ್, ಸಾಂಸ್ಕೃತಿಕ ಚಟುವಟಿಕೆ, ಶೈಕ್ಷಣಿಕ ಪ್ರವಾಸ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತಿದೆ.…
ಮಡಿಕೇರಿ ಸೆ.18 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಕ್ಕಳು ಮತ್ತು ಯುವಜನರ ಕಲಾಪ್ರತಿಭೆ ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾ ನೈಪುಣ್ಯ ವೃದ್ಧಿಗೊಳಿಸುವಂತೆ ಪ್ರೋತ್ಸಾಹಿಸಲು ಕಲಾ ಪ್ರತಿಭೋತ್ಸವ ರೂಪಿಸಿದೆ. ಈ ಉತ್ಸವವನ್ನು ದಿನಾಂಕ: 09-10-2025 ಹಾಗೂ 10-10-2025 ರಂದು ಮಡಿಕೇರಿಯ ಗಾಂಧಿ ಭವನದಲ್ಲಿ ನಡೆಸಲಾಗುವುದು. ಬಾಲಪ್ರತಿಭೆ/ಕಿಶೋರ ಪ್ರತಿಭೆ/ಯುವಪ್ರತಿಭೆ ಎಂಬ ಶೀರ್ಷಿಕೆಯಡಿ ಮೂರು ವಿಭಾಗಗಳಲ್ಲಿ ಸ್ಪರ್ಧಾ ರೂಪದಲ್ಲಿ ಏರ್ಪಡಿಸಲಾಗುವುದು. ಈ ಸ್ಪರ್ಧೆಗಳನ್ನು ದಿನಾಂಕ: 09-10-2025ರಂದು ಬಾಲಪ್ರತಿಭೆ/ ಕಿಶೋರ ಪ್ರತಿಭೆ ಹಾಗೂ ದಿನಾಂಕ: 10-10-2025 ರಂದು ಯುವ ಪ್ರತಿಭೆ/ ಸಮೂಹ ಸ್ಪರ್ಧೆಗಳಿಗೆ ಸ್ಪರ್ಧಾರೂಪದಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದವರಲ್ಲಿ ಪ್ರಥಮ ಸ್ಥಾನ ಪಡೆದವರನ್ನು ವಲಯ ಮಟ್ಟದ ಸ್ಪರ್ಧೆ ಆಯ್ಕೆ ಮಾಡಿ ಕಳುಹಿಸಿಕೊಡಲಾಗುವುದು. :: ಅರ್ಹತೆ :: ಬಾಲ ಪ್ರತಿಭೆ :: ಬಾಲ ಪ್ರತಿಭೆಯ ವಿಭಾಗದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಕನಿಷ್ಠ 8 ವರ್ಷ ತುಂಬಿರಬೇಕು. ಹಾಗೂ 14…
ವಿರಾಜಪೇಟೆ ಸೆ.19 NEWS DESK : ವಿರಾಜಪೇಟೆ ತಾಲ್ಲೂಕು ವಿಶ್ವಕರ್ಮ ಸೇವಾ ಸಂಘದ ವತಿಯಿಂದ ವಿಶ್ವಕರ್ಮ ಜಯಂತಿ ಹಾಗೂ ಸಂಘದ 24ನೇ ವರ್ಷದ ಅಂಗವಾಗಿ ವಿಶ್ವಕರ್ಮ ಪೂಜೆಯನ್ನು ನಡೆಸಲಾಯಿತು. ವಿರಾಜಪೇಟೆ ನಗರದ ರಾಜ ರಾಜೇಶ್ವರಿ ಮಿನಿ ಫಂಕ್ಷನ್ ಹಾಲ್‍ನಲ್ಲಿ ಪೂಜಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಎಲಿಜಾಕ್ಷಿ, ಪ್ರಸಾದ್ ಆಚಾರ್ಯ, ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷರಾದ ದಿವಾಕರ ಆಚಾರ್ಯ, ಉಪಾಧ್ಯಕ್ಷರು, ಕಾರ್ಯದರ್ಶಿ, ಖಜಾಂಚಿ ಮತ್ತು ಸಂಘದ ಸದಸ್ಯರು, ವಿರಾಜಪೇಟೆ ತಾಲೂಕು ವಿಶ್ವಕರ್ಮ ಮಹಿಳಾ ಸ್ವ ಸಹಾಯ ಸಂಘದ ಅಧ್ಯಕ್ಷರಾದ ರಶ್ಮಿ ಭವಾನಿ ಶಂಕರ್ ಆಚಾರ್ಯ, ಮತ್ತು ಸಂಘದ ಸರ್ವ ಸದಸ್ಯರು ಹಾಜರಿದ್ದರು.
ಮಡಿಕೇರಿ ಸೆ.18 NEWS DESK : ಐತಿಹಾಸಿಕ ದಸರಾ ಉತ್ಸವಕ್ಕೆ ಪೂರಕವಾಗಿ ನಡೆಯಬೇಕಾದ ನಗರದ ರಸ್ತೆಗಳ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಳ್ಳುವಂತೆ ಮಾಡುವ ಮೂಲಕ ನಗರಸಭೆಯಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಅಭಿವೃದ್ಧಿಗೆ ಅಡ್ಡಿಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಅವರು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಗರದಲ್ಲಿ ದಸರಾ ಉತ್ಸವದ ಹಿನ್ನಲೆ ತುರ್ತಾಗಿ ರಸ್ತೆ ಕಾಮಗಾರಿಗಳು ನಡೆಯಬೇಕಿದೆ. ಈ ಹಿನ್ನೆಲೆ ಎನ್‍ಡಿಆರ್‍ಫ್ ನಿಯಮಗಳಂತೆ ಜಿಲ್ಲಾಧಿಕಾರಿಗಳು ರೂ.38 ಲಕ್ಷ ಅನುದಾನದ ಕಾಮಗಾರಿಗಳಿಗೆ ಅವಕಾಶ ಒದಗಿಸಿದ್ದರು. ಆದರೆ, ಈ ಕಾಮಗಾರಿಗಳ ಗುತ್ತಿಗೆಯನ್ನು ತಾವು ಬಯಸಿದವರಿಗೆ ನೀಡಿಲ್ಲವೆನ್ನುವ ಕಾರಣಗಳ ಹಿನ್ನೆಲೆಯಲ್ಲಿ ನಗರಸಭೆಯ ಬಿಜೆಪಿ ಸದಸ್ಯರು, ಆರಂಭಗೊಂಡಿದ್ದ ರಸ್ತೆ ದುರಸ್ತಿ ಕಾರ್ಯ ಸ್ಥಗಿತಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿದರು. ನಗರದ ಕೆಎಸ್‍ಆರ್‍ಟಿಸಿ ಡಿಪೋ ಬಳಿ, ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೆ ಕಾನೂನು ಉಲ್ಲಂಘಿಸಿ ಮಳಿಗೆಗಳನ್ನು ನಿರ್ಮಿಸಲಾಗಿದ್ದು, ಮಳಿಗೆ ನಿರ್ಮಾಣಕ್ಕೆ ಅವಕಾಶ ಮಾಡಿಕೊಟ್ಟವರ ವಿರುದ್ಧ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ದೂರು ಸಲ್ಲಿಸುವುದಾಗಿ ತಿಳಿಸಿದರು. ಮಡಿಕೇರಿ ನಗರಸಭೆಯ ಅಧ್ಯಕ್ಷರು ತಮ್ಮ ಸ್ವಂತ ಅಭಿಪ್ರಾಯ…
ಮಡಿಕೇರಿ ಸೆ.18 NEWS DESK : ಅಲ್ಲಾರಂಡ ರಂಗಚಾವಡಿ ಮತ್ತು ಮಡಿಕೇರಿ ಕೊಡವ ಸಮಾಜದ ವತಿಯಿಂದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿಯ 158ನೇ ಜನ್ಮ ದಿನವನ್ನು ನಗರದಲ್ಲಿ ಸೆ.21 ರಂದು ಆಚರಿಸಲಾಗುತ್ತದೆಂದು ಚಾವಡಿಯ ಅಧ್ಯಕ್ಷ ಅಲ್ಲಾರಂಡ ವಿಠಲ ನಂಜಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕೊಡವ ಸಮಾಜದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಅಪ್ಪಚ್ಚಕವಿ ಕಲಾ ಭವನ ನಿರ್ಮಾಣ ಸಮಿತಿ ಅಧ್ಯಕ್ಷ ಅಪ್ಪನೆರವಂಡ ಮನೋಜ್ ಮಂದಪ್ಪ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಅಲ್ಲಾರಂಡ ರಂಗಚಾವಡಿ ಅಧ್ಯಕ್ಷ ಅಲ್ಲಾರಂಡ ವಿಠಲ ನಂಜಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ ಪಾಲ್ಗೊಳ್ಳಲಿದ್ದಾರೆಂದರು. :: ಸಾಕ್ಷ್ಯ ಚಿತ್ರ ಪ್ರದರ್ಶನ :: ಕಾರ್ಯಕ್ರಮದಲ್ಲಿ ತನ್ನ ನಿರ್ದೇಶನ ಮತ್ತು ನಿರ್ಮಾಣದ ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿಗೆ ಸಂಬಂಧಿಸಿದ ಸಾಕ್ಷ್ಯ ಚಿತ್ರದ ಪ್ರದರ್ಶನವನ್ನು ಏರ್ಪಡಿಸಲಾಗಿದೆಯೆಂದು ಅಲ್ಲಾರಂಡ ವಿಠಲ ನಂಜಪ್ಪ ತಿಳಿಸಿದರು. ಸಾಕ್ಷ್ಯ ಚಿತ್ರ 30 ನಿಮಿಷದ್ದಾಗಿದ್ದು, ಪ್ರದರ್ಶನವನ್ನು ಕೊಡವ ಸಿನಿಮಾ…
ಮಡಿಕೇರಿ ಸೆ.18 NEWS DESK : ಬಾಂಗ್ಲಾದೇಶಿಗರು, ರೋಹಿಂಗ್ಯಗಳು, ಜಾರ್ಖಂಡ್, ಅಸ್ಸಾಂ ಮತ್ತು ಮಧ್ಯಪ್ರದೇಶದ ಅಕ್ರಮ ವಲಸಿಗರು ಕೊಡಗು ಜಿಲ್ಲೆಯಲ್ಲಿ ಕಾರ್ಮಿಕರ ರೂಪದಲ್ಲಿ ಆಶ್ರಯ ಪಡೆದಿದ್ದಾರೆ. ಜಾತಿ ಜನಗಣತಿಯ ಸಂದರ್ಭ ಇವರುಗಳನ್ನು ಸಕ್ರಮಗೊಳಿಸಿದರೆ ಮತ್ತು ಇವರುಗಳಿಂದ ಕಾನೂನು ಉಲ್ಲಂಘನೆಯಾದರೆ ಅದಕ್ಕೆ ಜಿಲ್ಲಾಡಳಿತವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಎಚ್ಚರಿಕೆ ನೀಡಿದ್ದಾರೆ. ಜಾತಿ ಜನಗಣತಿಯ ಸಂದರ್ಭ ಕೊಡವರು ಜಾತಿ-ಭಾಷೆ-ಧರ್ಮದ ಕಾಲಂನಲ್ಲಿ “ಕೊಡವ” ಎಂದೇ ಬರೆಸಬೇಕೆನ್ನುವ ಕುರಿತು ಮತ್ತು ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮೂರ್ನಾಡಿನಲ್ಲಿ ನಡೆಸಿದ 13ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯ ಸರಕಾರದ ವತಿಯಿಂದ ಇದೇ ಸೆ.22 ರಿಂದ ಅ.7ರ ವರೆಗೆ ನಡೆಯಲಿರುವ ಜಾತಿವಾರು ಗಣತಿಯ ಸಂದರ್ಭ ಜಾತಿ-ಭಾಷೆ-ಧರ್ಮದ ಕಾಲಂನಲ್ಲಿ “ಕೊಡವ” ಎಂದೇ ಬರೆಸುವ ಮೂಲಕ ಆ್ಯನಿಮಿಸ್ಟಿಕ್ ಏಕ-ಜನಾಂಗೀಯ ಆದಿಮಸಂಜಾತ ಕೊಡವರ ಸಮಗ್ರ…
ಮಡಿಕೇರಿ ಸೆ.18 NEWS DESK : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ- 2025 ರಲ್ಲಿ ಎಐಯುಟಿಯುಸಿ ಸಂಯೋಜಿತ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಕೊಡಗು ಜಿಲ್ಲಾ ಸಮಿತಿ ಭಾಗವಹಿಸದಿರಲು ನಿರ್ಧಾರ ಕೈಗೊಂಡಿದೆ. ಕೊಡಗು ಜಿಲ್ಲಾಧಿಕಾರಿ ವೆಂಕಟ್‍ರಾಜಾ ಅವರಿಗೆ ಮನವಿ ಸಲ್ಲಿಸಿದ ಸಂಘದ ಪ್ರಮುಖರು, ಗ್ಯಾರಂಟಿ ಯೋಜನೆ ಸೇರಿದಂತೆ ಈ ಹಿಂದೆ ನಡೆಸಿದ ಸಮೀಕ್ಷೆಗಳ ಹಣವನ್ನು ರಾಜ್ಯ ಸರ್ಕಾರ ಇನ್ನೂ ಪಾವತಿ ಮಾಡಿಲ್ಲ. ಹೀಗಾಗಿ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದರು. ಈ ಸಂದರ್ಭ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷೆ ತೆಕ್ಕಡೆ ಪೂರ್ಣಿಮಾ ಬಸಪ್ಪ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಕೈಗೊಳ್ಳಲು ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ಅನುಮೋದನೆ ನೀಡಿ ಆದೇಶಿಸಿದೆ. ಅಲ್ಲದೇ ಇದಕ್ಕಾಗಿ 2000 ರೂ. ಗೌರವಧನ ನಿಗದಿಗೊಳಿಸಲಾಗಿದೆ. ಆದರೆ ಸಮೀಕ್ಷೆ ವೇಳೆ ಆಶಾ ಕಾರ್ಯಕರ್ತೆಯರು ಮನೆ…
ಮಡಿಕೇರಿ ಸೆ.18 NEWS DESK : ಐತಿಹಾಸಿಕ ಮಡಿಕೇರಿ ದಸರಾ ಉತ್ಸವದ ಅಂಗವಾಗಿ ಇದೇ ಸೆ.22ರಿಂದ 30ರವರೆಗೆ ವೈವಿಧ್ಯಮಯ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲಾಗಿದೆ ಎಂದು ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಪ್ರದೀಪ್ ಕರ್ಕೆರ ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಸೆ.22 ರಂದು ಬೆಳಗ್ಗೆ 6 ಗಂಟೆಗೆ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಿಂದ ಕ್ಯಾಪಿಟಲ್ ವಿಲೇಜ್‍ವರೆಗಿನ ರಸ್ತೆಯಲ್ಲಿ ಪುರುಷರು, ಮಹಿಳೆಯರು ಸೇರಿದಂತೆ ವಿದ್ಯಾರ್ಥಿಗಳಿಗಾಗಿ ನಾಲ್ಕು ವಿಭಾಗಗಳಲ್ಲಿ ಮೆರಥಾನ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸೆ.23 ರಂದು ನಗರದ ಜ.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಪುರುಷರಿಗೆ ಬಾಸ್ಕೆಟ್ ಬಾಲ್, ಸಾರ್ವಜನಿಕರಿಗೆ ಮತ್ತು 15 ವರ್ಷದೊಳಗಿನ ಶಾಲಾ ಮಕ್ಕಳಿಗೆ 5+2 ಆಟಗಾರರ ಫುಟ್ಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದರು. ಜಿಲ್ಲಾ ಕ್ರೀಡಾಂಗಣದಲ್ಲಿ ಸೆ.24 ರಂದು ಬೆಳಗ್ಗೆ ದಸರಾ ಕ್ರೀಡಾಕೂಟಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಗುತ್ತದೆ. ಈ ಸಂದರ್ಭ ಬನ್ನಿ ಮಂಟಪದಿಂದ ಶ್ರೀ ರಾಜರಾಜೇಶ್ವರಿ ಶಾಲಾ ವಿದ್ಯಾರ್ಥಿಗಳೊಂದಿಗೆ ಕ್ರೀಡಾಜ್ಯೋತಿಯನ್ನು ಮೈದಾನಕ್ಕೆ ತರಲಾಗುತ್ತದೆ. ಅಂದು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕ…
ಮಡಿಕೇರಿ ಸೆ.18 NEWS DESK : ಹೋಂಸ್ಟೇ, ಹೊಟೇಲ್ ಸೇರಿದಂತೆ ಕಾರ್ಮಿಕರು ಕೆಲಸ ಮಾಡುವ ಸ್ಥಳಗಳಲ್ಲಿ ಸುರಕ್ಷತೆಗೆ ಒತ್ತು ನೀಡಬೇಕು. ಸಿಸಿಟಿವಿ ಅಳವಡಿಸುವುದು, ಸಂಚಾರಿ ದೂರವಾಣಿ ಸಂಖ್ಯೆ ಸೇರಿದಂತೆ ವಾಸ್ತವ್ಯ ಹೂಡುವವರ ಮಾಹಿತಿ ಇರಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಮಿಕ ಸಂಘಟನೆಗಳು, ಹೋಂಸ್ಟೇ ಹಾಗೂ ಹೊಟೇಲ್ ಅಸೋಸಿಯೇಷನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಭೆಯಲ್ಲಿ ಮಾತನಾಡಿದ ಸಚಿವರು ಕಾರ್ಮಿಕರಿಗೆ ಕನಿಷ್ಠ ವೇತನ ಕಲ್ಪಿಸಬೇಕು. ಆರೋಗ್ಯ ವಿಮೆ ಸೇರಿದಂತೆ ಸರ್ಕಾರದ ಯೋಜನೆಗಳನ್ನು ಪಡೆದುಕೊಳ್ಳುವಂತಾಗಲು ಕಾರ್ಮಿಕರಿಗೆ ಮಾಹಿತಿ ನೀಡುವಂತಾಗಬೇಕು ಎಂದು ಸಲಹೆ ನೀಡಿದರು. ಹೋಂ ಸ್ಟೇ ನೋಂದಣಿ, ಪರವಾನಗಿ, ನವೀಕರಣ ಸಂಬಂಧ ಪ್ರವಾಸೋದ್ಯಮ, ಪೌರಾಡಳಿತ ಹಾಗೂ ಪಂಚಾಯತ್ ರಾಜ್ ಸಚಿವರ ಜೊತೆ ಚರ್ಚಿಸಲಾಗುವುದು ಎಂದು ಕಾರ್ಮಿಕ ಸಚಿವರು ತಿಳಿಸಿದರು. ಜೊತೆಗೆ ಶಾಸಕರ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಲು ನಿಯೋಗ ತೆರಳುವಂತೆ ಸಲಹೆ ಮಾಡಿದರು. ಹೋಂ ಸ್ಟೇ ನೋಂದಣಿ, ಪರವಾನಗಿ ನೋಂದಣಿ ಮತ್ತಿತರ…






