ಮಡಿಕೇರಿ ಆ.12 NEWS DESK : ಮಾಸಿಕ ಕನಿಷ್ಟ 10 ಸಾವಿರ ರೂ. ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಆ.12 ರಿಂದ 14ರ ವರೆಗೆ ರಾಜ್ಯಾದ್ಯಂತ ಅಹೋರಾತ್ರಿ ಪ್ರತಿಭಟನೆಯ ಭಾಗವಾಗಿ ನಗರದ ಗಾಂಧಿ ಮೈದಾನದಿಂದ ಬಾಲಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಆಶಾ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿ, ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿದರು. ಕಳೆದ ಜನವರಿಯಲ್ಲಿ ನಡೆದ ಹೋರಾಟದ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ 10 ಸಾವಿರ ರೂ. ಗೌರವಧನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಏಳು ತಿಂಗಳು ಕಳೆದರೂ ಯಾವುದೇ ಆದೇಶವಾಗಿಲ್ಲ ಎಂದು ಆಶಾ ಕಾರ್ಯಕರ್ತರು ದೂರಿದರು. ಸರ್ಕಾರವು ತನ್ನ ಭರವಸೆಗಳನ್ನು ಈಡೇರಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಹೆಚ್ಚಳ ಮಾಡಬೇಕು, ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು, ಅವೈಜ್ಞಾನಿಕವಾಗಿರುವ…
ಲೇಖಕ: admin
ನಾಪೋಕ್ಲು ಆ.12 NEWS DESK : ಮೂರ್ನಾಡು ವಿದ್ಯಾ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ದೈನಂದಿನ ಚಟುವಟಿಕೆಗೆ ಚಾಲನೆ ದೊರೆಯಿತು. ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕುಶನ್ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆ ಮುಖಾಂತರ ಸಮಾಜ ಸೇವೆಯನ್ನು ಮಾಡಿ ದೇಶದ ಅಭಿವೃದ್ಧಿಗೆ ಸಹಾಯಕವಾಗಬೇಕು. ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸುತ್ತದೆ ಎಂದು ಹೇಳಿದರು. ಪಾರಾಣೆ ಗ್ರಾಮದ ಪ್ರಗತಿಪರ ರೈತ ಬಲ್ಯಾಟಂಡ ಕೌಶಿಕ್ ಕುಟ್ಟಯ್ಯ ಮಾತನಾಡಿ, ತಾವು ಮಾಡುತ್ತಿರುವ ಪ್ರಗತಿಪರ ಕೃಷಿ ಚಟುವಟಿಕೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ರಾಷ್ಟ್ರೀಯ ಸೇವಾ ಯೋಜನೆ ಮುಖಾಂತರ ವಿದ್ಯಾರ್ಥಿಗಳು ತಮ್ಮ ನೆಲ ಜಲದ ಸಂರಕ್ಷಣೆಗೆ ಬದ್ಧರಾಗಿರಬೇಕೆಂದು ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೂರ್ನಾಡು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಕಿ, ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮ…
ನಾಪೋಕ್ಲು ಆ.12 NEWS DESK : ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ವತಿಯಿಂದ ನರ್ಸಿಂಗ್ ಸೂಪರಿಟೆಂಡೆಂಟ್ ಗ್ರೇಡ್ 2. ಬಾಳೆಯಡ ರತಿ ಪೆಮ್ಮಯ್ಯ ಹಾಗೂ ಗೋಣಿಕೊಪ್ಪದ ಕಾವೇರಿ ಕಾಲೇಜಿನ ಉಪನ್ಯಾಸಕಿ ಡಾ.ಚೀಯಕಪೂವಂಡ ಸವಿತ ಅಪ್ಪಚ್ಚು ಅವರನ್ನು ಸನ್ಮಾನಿಸಲಾಯಿತು. ನಾಪೋಕ್ಲುಕೊಡವ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ ಸಮಾಜದ ಪ್ರಮುಖರು ಹಾಗೂ ಪದಾಧಿಕಾರಿಗಳು ಸಾಧಕರನ್ನು ಸನ್ಮಾನಿಸಿ, ಗೌರವಿಸಿದರು. ಕೊಡವ ಸಮಾಜ ಮೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಳೆಯಡ ನಿಷಾ ಮೇದಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ, ಕಾಫಿ ಬೆಳೆಗಾರರಾದ ಬಿದ್ದಾಟಂಡ ಸುಮನ್ ಪ್ರದೀಪ್, ಬ್ಯಾಂಕ್ ಆಫ್ ಮಹಾರಾಷ್ಟ್ರದ ನಿವೃತ್ತ ವ್ಯವಸ್ಥಾಪಕಿ ಕೋಡಿಮಣಿಯಂಡ ರಚನ ಕುಟ್ಟಪ್ಪ ಇನ್ನಿತರ ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಆ.12 NEWS DESK : ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಭಾಗವಹಿಸಿರುವ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಸಿ ಅಂಡ್ ಡಿ ಜಾಗದ ಸಮಸ್ಯೆ, ಕೃಷಿಕ ವರ್ಗದ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದರು.
ನಾಪೋಕ್ಲು ಆ.12 NEWS DESK : ಆಚಾರ, ವಿಚಾರ, ಸಂಸ್ಕೃತಿಯನ್ನು ಮುಂದಿನ ಜನಾಂಗಕ್ಕೆ ತಿಳಿಸುವ ಜವಾಬ್ದಾರಿ ಹಿರಿಯರ ಮೇಲಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಹೇಳಿದರು. ನಾಪೋಕ್ಲು ಕೊಡವ ಸಮಾಜದಲ್ಲಿ ಬಿಲ್ಲವ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ಆಟಿಡೊಂಜಿ ದಿನ -2025 ಕಾರ್ಯಕ್ರಮ ಹಾಗೂ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಿಲ್ಲವ ಸಮಾಜದವರು ಅವರದೇ ಆದ ವಿಶಿಷ್ಟ ರೀತಿಯಲ್ಲಿ ಸಮಾಜದ ಅಭಿವೃದ್ಧಿಗೆ ಕೊಡುಗೆಯನ್ನು ನೀಡುತ್ತಾ ಬಂದಿದ್ದಾರೆ. ಎಲ್ಲರಿಗೂ ಆದರ್ಶ ಪ್ರಾಯರಾದ ಸಮಾಜ ಸುಧಾರಕ ಶ್ರೀ ನಾರಾಯಣ ಗುರು ಅವರ ಹಿಂಬಾಲಕರಾದ ಬಿಲ್ಲವ ಸಮಾಜದವರು, ಸಮಾಜದ ಎಲ್ಲಾ ಆಯಾಮಗಳಲ್ಲಿ ಮುನ್ನಲೆಗೆ ಬರಬೇಕೆಂದು ಕರೆ ನೀಡಿದರು. ಅತ್ಯಂತ ಶ್ರಮಜೀವಿಗಳು ಹಾಗೂ ಸ್ವಾಭಿಮಾನಿಗಳಾದ ಬಿಲ್ಲವ ಸಮಾಜದವರು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುತ್ತಾ ಬಂದಿದ್ದಾರೆ. ಜನಾಂಗದ ಯಾವುದೇ ಬೇಡಿಕೆ ಇದ್ದರೂ ತಾನು ಅದಕ್ಕೆ ಸ್ಪಂದಿಸುವುದಾಗಿ ಹೇಳಿದರು. ಬಿಲ್ಲವ ಸಮಾಜದ ಅಭಿವೃದ್ದಿಗಾಗಿ ಮಡಿಕೇರಿಯಲ್ಲಿ 26 ಸೆಂಟ್ಸ್ ಜಾಗವನ್ನು…
ವಿರಾಜಪೇಟೆ ಆ.12 NEWS DESK : ವಿರಾಜಪೇಟೆ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಕೃಷಿ ಕಾರ್ಯಕ್ರಮದಡಿಯಲ್ಲಿ ಅಮ್ಮತ್ತಿ ವಲಯದ ಬಿಳುಗುಂದ ಕಾರ್ಯಕ್ಷೇತ್ರದ ಡಾ.ಬೋಪಣ್ಣ ಅವರ ಗದ್ದೆಯಲ್ಲಿ ಯಾಂತ್ರಿಕೃತ ಭತ್ತ ಬೇಸಾಯ ವಿಧಾನಗಳ ಬಗ್ಗೆ ಮಾಹಿತಿ ಮತ್ತು ನಾಟಿ ಯಂತ್ರ ಪ್ರಾತ್ಯಕ್ಷಿತೆ ನಡೆಯಿತು. ಕಾರ್ಯಕ್ರಮವನ್ನು ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪಿ.ಹರೀಶ್ ಉದ್ಘಾಟಿಸಿದರು. ಸಿಹೆಚ್‍ಎಸ್‍ಸಿ ಮೇಲ್ವಿಚಾರಕರಾದ ಪ್ರದೀಪ್, ಯಾಂತ್ರಿಕೃತ ಭತ್ತ ಬೇಸಾಯ ಯಂತ್ರಗಳ ಮೂಲಕ ನಾಟಿ ಮಾಡಿದರೆ ಕಡಿಮೆ ಖರ್ಚಿನಲ್ಲಿ ಭತ್ತ ಕೃಷಿ ಮಾಡಲು ಸಾಧ್ಯ. ಇದರೊಂದಿಗೆ ಕಾರ್ಮಿಕರ ಸಮಸ್ಯೆ ನಿವಾರಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಕೃಷಿ ಇಲಾಖೆಯ ತಾಂತ್ರಿಕ ಸಹಾಯಕ ಅಧಿಕಾರಿ ಮೇಘನ ಮಾತನಾಡಿ, ಕೃಷಿ ಇಲಾಖೆಯಿಂದ ಭತ್ತ ಬೇಸಾಯಕ್ಕೆ ಸಿಗುವ ಸಹಾಯಧನ ಮತ್ತು ರೈತರು ಕೃಷಿ ಇಲಾಖೆಗೆ ಯಾವ ರೀತಿಯ ದಾಖಲೆಗಳನ್ನು ನೀಡಬೇಕು ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕೃಷಿ ಮೇಲ್ವಿಚಾರಕರಾದ ವಸಂತ್, ವಲಯ ಮೇಲ್ವಿಚಾರಕರಾದ ದಿನೇಶ್, ಒಕ್ಕೂಟದ…
ವಿರಾಜಪೇಟೆ ಆ.12 NEWS DESK : ವಿರಾಜಪೇಟೆ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಕೃಷಿ ಕಾರ್ಯಕ್ರಮದಡಿಯಲ್ಲಿ ಗೋಣಿಕೊಪ್ಪ ವಲಯದ ಮಾಯಮುಡಿ ಕಾರ್ಯಕ್ಷೇತ್ರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಲಯ ಅರಣ್ಯ ಅಧಿಕಾರಿ ಸಚಿನ್ ಮಾತನಾಡಿ, ಗಿಡಮರಗಳನ್ನು ಬೆಳೆಸಬೇಕು, ನೆಟ್ಟ ಗಿಡಗಳನ್ನು ಪೋಷಣೆ ಮಾಡಬೇಕು, ಪರಿಸರ ಸಂರಕ್ಷಣೆಯಿಂದ ಶುದ್ಧವಾದ ಗಾಳಿ, ನೀರು ಸಿಗುತ್ತದೆ. ಹಣ್ಣಿನ ಗಿಡಗಳನ್ನು ಬೆಳೆಸಬೇಕು ನಮ್ಮ ಮನೆಯ ಸುತ್ತಮುತ್ತಲು ಗಿಡಮರಗಳನ್ನು ಬೆಳೆಸಬೇಕು ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ಕುರಿತು ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಉಮೇಶ್, ಕೃಷಿ ಮೇಲ್ವಿಚಾರಕ ವಸಂತ್, ಶಾಲಾ ಮುಖ್ಯ ಶಿಕ್ಷಕಿ ಜಯಮ್ಮ, ಮೀನಾಕ್ಷಿ ವೇದಿಕೆಯಲ್ಲಿದ್ದರು. ಶಾಲೆಯ ಸಹ ಶಿಕ್ಷಕಿ ಸಹನ ಪರಿಸರದ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಪದಾಧಿಕಾರಿಗಳಾದ ಬಿಂದು, ಮೇರಿ, ಶಶಿ, ಸೇವಾ ಪ್ರತಿನಿಧಿ…
ವಿರಾಜಪೇಟೆ ಆ.12 NEWS DESK : ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ರಕ್ಷಾಬಂಧನವನ್ನು ಆಚರಿಸಿದರು. ರಾಷ್ಟ್ರೀಯ ಬುಡಕಟ್ಟು ವಿದ್ಯಾರ್ಥಿಗಳ ಶೈಕ್ಷಣಿಕ ಸಿಂಧು ಸಂಸ್ಥೆಯಿಂದ ನವದೆಹಲಿಯಲ್ಲಿ ಆಯೋಜಿಸಿದ್ದ ರಾಷ್ಟ್ರ ಅಧ್ಯಕ್ಷರ ರಕ್ಷಾಬಂಧನ ಕಾರ್ಯಕ್ರಮಕ್ಕೆ ರಾಜ್ಯದಿಂದ ರಾಯಚೂರು, ಬೆಳಗಾವಿ, ಕೋಲಾರ ಹಾಗೂ ಕೊಡಗು ಜಿಲ್ಲೆಗಳ ಬುಡಕಟ್ಟು ಸಮುದಾಯದ ವಸತಿ ಶಾಲೆಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ರಾಷ್ಟ್ರ ಅಧ್ಯಕ್ಷರಾದ ದ್ರೌಪದಿ ಮುರ್ಮು ಅವರು ಪ್ರತಿ ವರ್ಷ ವಿವಿಧ ವಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವವರೊಂದಿಗೆ ರಕ್ಷಾಬಂಧನ ಕಾರ್ಯಕ್ರಮವನ್ನು ಆಚರಿಸುವುದು ವೈಶಿಷ್ಟ್ಯವಾಗಿದ್ದು, ಅದರಂತೆ ಈ ವರ್ಷ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳೊಂದಿಗೆ ರಕ್ಷಾಬಂಧನ ಕಾರ್ಯಕ್ರಮ ಆಚರಿಸುವ ಆಶಯ ಹೊಂದಿದ್ದರಿಂದ ಅವರ ಕರೆಯ ಮೇರೆಗೆ ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆಯ ಸಂಗೀತ ಶಿಕ್ಷಕಿ ಕುಮಾರಿ ಕೋಮಲ್ ಗುಪ್ತ ನೇತೃತ್ವದಲ್ಲಿ ವಿದ್ಯಾರ್ಥಿಗಳಾದ ಆರನೇ ತರಗತಿಯ ಎಲ್.ಎಂ.ಪ್ರತಿಕ್ಷ, 7ನೇ ತರಗತಿಯ ಸಿ.ಎಲ್.ಕನ್ನಿಕಾ, 8ನೇ ತರಗತಿಯ ತನ್ವಿ ತಂಗಮ್ಮ, 9ನೇ ತರಗತಿಯ ಹೆಚ್.ಕೆ.ನೇಹಾ ಮತ್ತು 10ನೇ…
ವಿರಾಜಪೇಟೆ ಆ.12 NEWS DESK : ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದ ಕಲ್ಲುಬಾಣೆಯಲ್ಲಿರುವ ರಹ್‍ಮ ಚಾರಿಟೇಬಲ್ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ಪಿ.ಸಂಶುದ್ದೀನ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕೆ.ಪಿ.ಫಾರೂಕ್, ಕಾರ್ಯದರ್ಶಿಗಳಾಗಿ ಎಂ.ಎಂ.ನೌಫಲ್, ಜಂಟಿ ಕಾರ್ಯದರ್ಶಿಯಾಗಿ ಕೆ.ಕೆ.ರಹಿಮ್, ಖಜಾಂಚಿಯಾಗಿ ಪಿ.ಆಲಿ ಮತ್ತು ನಿರ್ದೇಶಕರುಗಳಾಗಿ ಕೆ.ಪಿ.ರಫೀಕ್, ಇ.ಕೆ.ಫನ್ಸಿರ್, ಪಿ.ಬಿ.ಫೈಸಲ್, ಕೆ.ಐ.ಅಶ್ರಫ್ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷರಾಗಿ ಪಿ.ಶಾಪಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಮಡಿಕೇರಿ ಆ.12 NEWS DESK : ಪರಿಸರ ಸ್ನೇಹಿಯಾಗಿ ಗೌರಿ-ಗಣೇಶ ಹಬ್ಬ ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ ನೀಡಿದ್ದಾರೆ. ಪ್ರಸಕ್ತ ಸಾಲಿನ ಗೌರಿ-ಗಣೇಶ ಹಬ್ಬವನ್ನು ರಾಜ್ಯದಲ್ಲಿ ಗೌರಿ ಹಾಗು ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ಬಾವಿ ಹಾಗು ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದೆ. ಇದರಿಂದ ಜಲಮೂಲಗಳು ಕಲುಷಿತಗೊಂಡು ಪರಿಸರಕ್ಕೆ ಹಾಗು ಸಾರ್ವಜನಿಕರ ಆರೋಗ್ಯಕ್ಕೆ ತೊಂದರೆ ಉಂಟಾಗುವುದರಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನೈಸರ್ಗಿಕ ಜಲಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ದಿನಾಂಕ 20-07-2016 ರಂದು ಅಧಿಸೂಚನೆಯನ್ನು ಹೊರಡಿಸಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ರಾಜ್ಯದ ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಈ ವರ್ಷದ ಗೌರಿ-ಗಣೇಶ ಚರ್ತುರ್ಥಿ ಆಚರಣೆಯನ್ನು ಪರಿಸರಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಕ್ರಮಗಳನ್ನು ಸಾರ್ವಜನಿಕರು ಅನುಸರಿಸಲು ತಿಳಿಸಲಾಗಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ…






