ಮಡಿಕೇರಿ ಆ.12 NEWS DESK : ಕೊಡಗು ಗೌಡ ಮಹಿಳಾ ಒಕ್ಕೂಟದ 4ನೇ ವರ್ಷದ ಆಟಿ ಹಬ್ಬವು ಮಡಿಕೇರಿ ಗೌಡ ಸಮಾಜದ ಸಭಾಂಗಣದಲ್ಲಿ ನಡೆಯಿತು. ಕೋಳುಮುಡಿಯನ ಪ್ರೇಮ, ಡಾ. ಕೋರನ ಸರಸ್ವತಿ, ತೋಟoಬೈಲು ಪಾರ್ವತಿ, ಕುಲ್ಲಚನ ಜ್ಯೋತಿ ಇವರುಗಳು ಆಟಿ ಪಾಯಸ ತಿನ್ನುವುದರ ಮೂಲಕ ಸಾಂಪ್ರದಾಯಕ ಅಡುಗೆಗಳ ಪ್ರದರ್ಶನ ವಿಭಾಗಕ್ಕೆ ಚಾಲನೆ ನೀಡಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಅಮೆ ದಮಯಂತಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಮಡಿಕೇರಿ ಗೌಡ ಸಮಾಜದ ಉಪಾಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಸಾಹಿತಿ ಬಾರಿಯಂಡ ಜೋಯಪ್ಪ, ಗೌಡ ವಿದ್ಯಾ ಸಂಘದ ಉಪಾಧ್ಯಕ್ಷರಾದ ನಿವೃತ್ತ ಡಿ.ಐ.ಜಿ.ಅಮೆ ಸೀತಾರಾಮ್ , ನಿವೃತ್ತ ಶಿಕ್ಷಕಿ ಶಿವದೇವಿ ಅವನಿಶ್ಚಂದ್ರ, ಕಾಫಿ ಬೆಳೆಗಾರರಾದ ತೋಟoಬೈಲು ಪಾರ್ವತಿ, ಕೂಡಕಂಡಿ ಓಂಶ್ರೀ ದಯಾನಂದ ಉಪಸ್ಥಿತರಿದ್ದರು. ಸಭೆಯಲ್ಲಿ ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ರಾದ ಬಾರಿಯಂಡ ಜೋಯಪ್ಪ,…
ಲೇಖಕ: admin
ಮಡಿಕೇರಿ NEWS DESK ಆ.12 : ಸಿ ಮತ್ತು ಡಿ ಕೃಷಿ ಭೂಮಿ ಹಕ್ಕಿಗಾಗಿ ಒತ್ತಾಯಿಸಿ ರೈತ ಹೋರಾಟ ಸಮಿತಿ ಕರೆ ನೀಡಿರುವ ಸೋಮವಾರಪೇಟೆ ತಾಲ್ಲೂಕು ಬಂದ್ ಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕೊಡಗು ಜಿಲ್ಲಾ ಘಟಕ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಅವರು ರೈತರ ಕೃಷಿ ಭೂಮಿಯನ್ನು ಸಿ ಮತ್ತು ಡಿ ಭೂಮಿ ಹೆಸರಿನಲ್ಲಿ ಅರಣ್ಯ ಇಲಾಖೆಗೆ ಸೇರ್ಪಡೆಗೊಳಿಸಲು ಸರಕಾರ ಸೆಕ್ಷನ್-4 ರಡಿ ಸರ್ವೆಗೆ ಮುಂದಾಗಿರುವುದು ಸರಿಯಾದ ಕ್ರಮವಲ್ಲ, ಇದೊಂದು ರೈತ ವಿರೋಧಿ ನೀತಿಯಾಗಿದೆ ಎಂದು ಟೀಕಿಸಿದ್ದಾರೆ. ರೈತರ ಹಿತ ಕಾಪಾಡಲು ನಡೆಸುತ್ತಿರುವ ಸೋಮವಾರಪೇಟೆ ತಾಲ್ಲೂಕು ಬಂದ್ ಗೆ ಮತ್ತು ಮುಂದೆ ನಡೆಯುವ ರೈತಪರ ಹೋರಾಟಕ್ಕೆ ಎಸ್‌ಡಿಪಿಐ ಸಂಪೂರ್ಣ ಬೆಂಬಲವನ್ನು ಸೂಚಿಸುತ್ತದೆ. ಸಿ ಮತ್ತು ಡಿ ಭೂಮಿಯ ಸಮಸ್ಯೆ ಕಳೆದ ಅನೇಕ ವರ್ಷಗಳಿಂದ ಇತ್ಯರ್ಥವಾಗದೆ ಉಳಿದಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ಎದುರಾಗಿದೆ. ಸರಕಾರ ಯಾವುದೇ ಕಾನೂನು…
ಮಡಿಕೇರಿ NEWS DESK ಆ.11 : ಮೂವರು ಆರೋಪಿಗಳ ಸಹಿತ 12 ಕೆ.ಜಿ ಗೂ ಅಧಿಕ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರು ಪಟ್ಟಣದ ವಿಜಯನಗರ ನಿವಾಸಿಗಳಾದ ಅನೀಸ್ ಅಹಮ್ಮದ್(45), ಪಿ.ಚೇತನ್(40) ಹಾಗೂ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಅಂತರಂಸಂತೆ ದೊಡ್ಡಬೈರನಕುಟ್ಟೆ ಗ್ರಾಮದ ನಿವಾಸಿ ಜಿ.ಅಕ್ರಂ(48) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತ ಆರೋಪಿಗಳಾದ ಅನೀಸ್ ಅಹಮ್ಮದ್ ಹಾಗೂ ಪಿ.ಚೇತನ್ ಅವರ ಬಳಿಯಿಂದ 7 ಕೆ.ಜಿ 872 ಗ್ರಾಂ ಗಾಂಜಾ, ಒಂದು ಕಾರು, 1 ಮೊಬೈಲ್ ಮತ್ತು ಗಾಂಜಾ ಸಾಗಿಸಲು ಬಳಸಿದ್ದ ಪ್ಲಾಸ್ಟಿಕ್ ಚೀಲವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಣಸೂರು ಕಡೆಯಿಂದ ವಿರಾಜಪೇಟೆ ಮಾರ್ಗವಾಗಿ ಕೇರಳಕ್ಕೆ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಿಸುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಪೊಲೀಸರು ಪತ್ತೆ ಹಚ್ಚಿದರು. ಕೇರಳದಲ್ಲಿ ಮಾರಾಟ ಮಾಡಲು ಗಾಂಜಾ ಸಾಗಾಟವಾಗುತ್ತಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆ ವಿರಾಜಪೇಟೆ ಪೊಲೀಸರು ಆರ್ಜಿ ಪೆರುಂಬಾಡಿ ಬಳಿ ಬಂದ ಕಾರನ್ನು ಪರಿಶೀಲನೆಗೆ ಒಳಪಡಿಸಿದರು. ಈ ಸಂದರ್ಭ ಕಾರಿನಲ್ಲಿ 4…
ಮಡಿಕೇರಿ ಆ.11 NEWS DESK : ಇಂದಿನ ಆಧುನಿಕ ಯುಗದಲ್ಲಿ ಶಿಕ್ಷಣವೊಂದಿದ್ದರೆ ಸಾಕು ಎನ್ನುವ ಮನೋಭಾವ ಬೆಳೆಯುತ್ತಿದೆ. ಇದು ಸರಿಯಲ್ಲ, ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಮತ್ತು ಪರಿಸರವನ್ನು ಉಳಿಸಿ ಬೆಳೆಸಿದರೆ ಮಾತ್ರ ನಮಗೆ ಭವಿಷ್ಯವಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್ ಅಭಿಪ್ರಾಯಪಟ್ಟಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆ ವತಿಯಿಂದ ಪಾಲೇಮಾಡು ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಬುಡಕಟ್ಟು ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರತಿಯೊಬ್ಬರಿಗೆ ಶಿಕ್ಷಣದ ಅಗತ್ಯವಿದೆ, ಆದರೆ ಶಿಕ್ಷಣದ ಜೊತೆ ಜೊತೆಯಲ್ಲಿ ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗಾಗಿ ಬೆಳೆಸಿಕೊಂಡು ಹೋಗಬೇಕು ಎಂದರು. ಬುಡಕಟ್ಟು ಜನರು ಈ ಪರಿಸರದ ಅವಿಭಾಜ್ಯ ಅಂಗವಾಗಿದ್ದಾರೆ, ಅವರಿದ್ದರೆ ಪರಿಸರ ಉಳಿಯುತ್ತದೆ. ನಾವು ಕೂಡ ಪರಿಸರದ ಬಗ್ಗೆ ಕಾಳಜಿ ವಹಿಸಬೇಕಾಗಿದೆ. ಕೊಡಗಿನ ಗದ್ದೆ ಮತ್ತು ತೋಟಗಳು ಇಂದು ಮರೆಯಾಗುತ್ತಿದ್ದು, ಕಾಂಕ್ರೀಟ್ ಕಟ್ಟಡಗಳು ತಲೆ ಎತ್ತುತ್ತಿವೆ. ಸುತ್ತಮುತ್ತಲ…
ಮಡಿಕೇರಿ ಆ.11 NEWS DESK : ಸಮಾತ್ರಾ ಉತಾರಾ, ಇಂಡೋನೇಷ್ಯಾ – ಎಫ್‌ಐಎ ಏಷ್ಯಾ–ಪೆಸಿಫಿಕ್ ರ‍್ಯಾಲಿ ಚಾಂಪಿಯನ್‌ಶಿಪ್ (ಎಪಿಆರ್ಸಿ) ಮೂರನೇ ಸುತ್ತು, ಸಮಾತ್ರಾ ಉತಾರಾದ ಕಠಿಣ ಹಂತಗಳಲ್ಲಿ ಜರುಗಿದ ಸ್ಪರ್ಧೆಯಲ್ಲಿ ಭಾರತೀಯ ರ‍್ಯಾಲಿ ತಂಡಗಳು ಅದ್ಭುತ ಪ್ರದರ್ಶನ ತೋರಿದ್ದು, ದೇಶದ ಮೋಟರ್‌ಸ್ಪೋರ್ಟ್ ಇತಿಹಾಸದಲ್ಲಿ ಹೆಮ್ಮೆ ತರುವ ಹೊಸ ಇತಿಹಾಸ ಸೃಷ್ಟಿಸಿದೆ. ವ್ಯಾಮ್‌ಸಿ ಮೆರ್ಲಾ ಪ್ರಾಯೋಜಿತ ವಿಎಂ ಮೋಟರ್‌ಸ್ಪೋರ್ಟ್‌ನ ಪರವಾಗಿ, ಚಾಲಕ ಕೊಡಗು ಜಿಲ್ಲೆಯ ಮೇಕೇರಿಯ ಅಬ್ಬಿನ್ ರೈ ಹಾಗೂ ಸಹ ಚಾಲಕ ಶ್ರೀಕಾಂತ್ ಗೌಡ ತಮ್ಮ ಅಂತರರಾಷ್ಟ್ರೀಯ ಮೋಟಾರ್ ರ್ಯಾಲಿಯ ಪ್ರವೇಶದಲ್ಲೇ ಶ್ರೇಷ್ಠ ಸಾಧನೆ ತೋರಿದರು. ಅವರು ಎನ್‌ವಿಎ ವರ್ಗದಲ್ಲಿ ದ್ವಿತೀಯ ಸ್ಥಾನ, ಜೂನಿಯರ್ ಎಪಿಆರ್ಸಿ 2ನೇ ಸ್ಥಾನ, ಎಂ1 ವರ್ಗದಲ್ಲಿ ಮೂರನೇ ರನ್ನರ್-ಅಪ್ ಹಾಗೂ ಎಪಿಆರ್ಸಿ ಒಟ್ಟು ಅಂಕಪಟ್ಟಿಯಲ್ಲಿ 8 ನೇ ಸ್ಥಾನ ಪಡೆದರು. ರ‍್ಯಾಲಿಯಲ್ಲಿನ ಸವಾಲಿನ ಕಲ್ಲುಮಣ್ಣು ಹಂತಗಳಲ್ಲಿ ಅವರ ಸ್ಥಿರ ಚಾಲನೆ ಮತ್ತು ವೇಗವು ಸ್ಪರ್ಧಿಗಳು ಹಾಗೂ ಅಭಿಮಾನಿಗಳ ಶ್ಲಾಘನೆಗೆ ಪಾತ್ರವಾಯಿತು. ಮತ್ತೊಂದು ಗಮನಾರ್ಹ ಫಲಿತಾಂಶದಲ್ಲಿ,…
ಮಡಿಕೇರಿ ಆ.11 NEWS DESK : ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿಯಿಂದ ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 2ರ ವರೆಗೆ ನಗರದಲ್ಲಿ ಆಯೋಜಿತ ಮಡಿಕೇರಿ ದಸರಾ ಜನೋತ್ಸವ ಸಾಂಸ್ಕೃತಿಕ ಕಾಯ೯ಕ್ರಮಗಳಿಗೆ ಕಲಾವಿದರು, ಕಲಾತಂಡಗಳಿಂದ ಅಜಿ೯ ಆಹ್ವಾನಿಸಲಾಗಿದ ಎಂದು ಸಮಿತಿಯ ಅಧ್ಯಕ್ಷ ಕುಡೆಕಲ್ ಸಂತೋಷ್ ತಿಳಿಸಿದ್ದಾರೆ. ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಸೆ.23 ರಿಂದ ಅ2 ರವರೆಗೆ ದಸರಾ ಸಾಂಸ್ಕೃತಿಕ ಸಮಿತಿಯಿಂದ ವೈವಿಧ್ಯಮಯ ಕಾಯ೯ಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ಸಾಂಸ್ಕೖತಿಕ ಕಾಯ೯ಕ್ರಮಗಳಲ್ಲಿ ಪಾಲ್ಗೊಳ್ಳುವ ಕಲಾವಿದರು, ಕಲಾತಂಡಗಳು ತಾವು ಪ್ರದಶಿ೯ಸುವ ಕಲಾ ಪ್ರಕಾರ, ಪಾಲ್ಗೊಳ್ಳುವ ಕಲಾವಿದರ ಸಂಖ್ಯೆ, ಅಪೇಕ್ಷಿತ ದಿನಾಂಕ, ಮೊಬೈಲ್ ಸಂಖ್ಯೆಯೊಂದಿಗಿನ ವಿಳಾಸವನ್ನು ಆಗಸ್ಟ್ 25 ರೊಳಗಾಗಿ ಅಧ್ಯಕ್ಷರು ಮಡಿಕೇರಿ ನಗರ ದಸರಾ ಸಾಂಸ್ಕೖತಿಕ ಸಮಿತಿ, ಮಡಿಕೇರಿ ನಗರ ದಸರಾ ಸಮಿತಿ ಕಛೇರಿ, ನಗರಸಭಾ ಸಂಕೀಣ೯, ಮುಖ್ಯರಸ್ತೆ, ಮಡಿಕೇರಿ – 571201 ಈ ವಿಳಾಸಕ್ಕೆ ತಲುಪಿಸಬೇಕು. ಅಥವಾ madikeridasara @ gmail.com ಇಮೇಲ್ ಮೂಲಕ ಕಳುಹಿಸಬಹುದು. ಅಜಿ೯ ಸಲ್ಲಿಸುವ ಕೊನೇ ದಿನಾಂಕದ ಬಳಿಕ…
ಮಡಿಕೇರಿ ಆ.11 NEWS DESK : ಕೊಡಗು ವಿಶ್ವವಿದ್ಯಾಲಯದ ಎನ್.ಎಸ್.ಎಸ್ ಜಿಲ್ಲಾ ನೋಡಲ್ ಅಧಿಕಾರಿಯಾಗಿ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ದಯಾನಂದ.ಕೆ.ಸಿ ಅವರನ್ನು ನೇಮಿಸಲಾಗಿದೆ.
ಕುಶಾಲನಗರ ಆ.11 NEWS DESK : ಕೊಡಗು ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸದಸ್ಯರಾಗಿ ಕುಶಾಲನಗರ ಎಂ.ಜಿ.ಎಂ ಪದವಿ ಕಾಲೇಜಿನ ಪ್ರಾಂಶುಪಾಲರಾದ ಅಯ್ಯಂಡ್ರ ಲಿಖಿತ ಟಿ.ಎ ಅವರು ನೇಮಕಗೊಂಡಿದ್ದಾರೆ. 2025- 2026ನೇ ಸಾಲಿನ ಶೈಕ್ಷಣಿಕ ವರ್ಷದ ಒಂದು ವರ್ಷದ ಅವಧಿಗೆ ಮುಂದಿನ ಆದೇಶದ ವರೆಗೆ ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ನಾಮ ನಿರ್ದೇಶನ ಮಾಡಲಾಗಿದೆ. ಇವರು 13 ವರ್ಷಗಳ ಬೋಧನಾ ಅನುಭವ ಹೊಂದಿದ್ದಾರೆ. ಸಿಂಡಿಕೇಟ್ ಸದಸ್ಯರಾಗಿ ಆಯ್ಕೆಯಾಗಿರುವ ಅಯ್ಯಂಡ್ರ ಲಿಖಿತ ಅವರನ್ನು ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಶಂಭುಲಿಂಗಪ್ಪ ಎನ್.ಎನ್ ಹಾಗೂ ಪದವಿ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದರು.
ಮಡಿಕೇರಿ ಆ.11 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಮತಗಳ್ಳತನದ ಕುರಿತು ಆಧಾರ ರಹಿತ ಸುಳ್ಳು ಆರೋಪಗಳನ್ನು ಮಾಡುತ್ತಿರುವುದರಿಂದ ಇವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕೆಂದು ವಿರಾಜಪೇಟೆ ಮಂಡಲ ಬಿಜೆಪಿಯ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕೂಡ ಮತಗಳ್ಳತನದ ಮೂಲಕ ಬಿಜೆಪಿ ಗೆಲುವು ಸಾಧಿಸಿದೆ ಎಂದು ಎಂ.ಲಕ್ಷ್ಮಣ್ ಅವರು ಮಾಡಿರುವ ಆರೋಪವನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ. ಸೋಲಿನ ಹತಾಶೆಯಿಂದ ಹೊರ ಬರಲಾಗದೆ ಪರಿತಪಿಸುತ್ತಿರುವ ಲಕ್ಷ್ಮಣ್ ಅವರು ತಮ್ಮ ನಾಯಕ ರಾಹುಲ್ ಗಾಂಧಿ ಅವರಂತೆ ಯಾವುದೇ ದಾಖಲೆ ಇಲ್ಲದ ಆಧಾರ ರಹಿತ ಆರೋಪಗಳನ್ನು ಮಾಡುತ್ತಾ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಸುಳ್ಳು ಹೇಳಿಕೆಗಳನ್ನು ನೀಡಿ ಅಪಪ್ರಚಾರ ಮಾಡುವವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವ ಕಾನೂನನ್ನು ಕಾಂಗ್ರೆಸ್ ಸರಕಾರವೇ ಜಾರಿಗೆ ತಂದಿದೆ. ಈ ಕಾನೂನಿನನ್ವಯ ಲಕ್ಷ್ಮಣ್ ಅವರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು…
ಮಡಿಕೇರಿ ಆ.11 NEWS DESK : ಸೋಮವಾರಪೇಟೆ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಸೇವೆ ಸಲ್ಲಿಸಿ ನಿರ್ಗಮಿತಗೊಂಡ ಬಿಇಓ ಎಸ್ ಭಾಗ್ಯಮ್ಮ ಅವರು ಸುಳ್ಯ ತಾಲ್ಲೂಕಿನಿಂದ ಆಗಮಿಸಿದ ನೂತನ ಬಿಇಓ ಎಂ.ಕೃಷ್ಣಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಬಿಇಓ ಎಂ.ಕೃಷ್ಣಪ್ಪ ತಾಲ್ಲೂಕಿನಲ್ಲಿ ಉತ್ತಮ ಶೈಕ್ಷಣಿಕ ಚಟುವಟಿಕೆಗಳ ಮೂಲಕ ಶಾಲೆಗಳಿ ಅಭಿವೃದ್ಧಿಗೆ ವಿಶೇಷ ಗಮನ ಹರಿಸಲಾಗುವುದು. ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಈ ಹಿಂದೆ ತಾಲ್ಲೂಕಿನಲ್ಲಿ ಕೈಗೊಂಡ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಯೋಜನೆಯಂತೆ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ವಿಶೇಷ ಗಮನಹರಿಸಲಾಗುವುದು ಎಂದರು. ಬಿಇಓ ಭಾಗ್ಯಮ್ಮ ಅವರು ತಾಲ್ಲೂಕಿನಲ್ಲಿ ಈ ಹಿಂದೆ ಕೈಗೊಂಡ ಶೈಕ್ಷಣಿಕ ಕಾರ್ಯಕ್ರಮಗಳಂತೆ ಮುಂದೆ ಕೂಡ ಎಲ್ಲರ ಸಹಕಾರದಿಂದ ಉತ್ತಮ ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಶಾಲೆಗಳ ಅಭಿವೃದ್ಧಿಗೆ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಇನ್ನಷ್ಟು ಸುಧಾರಿಸಲು ಪ್ರಯತ್ನಿಸಲಾಗುವುದು ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಿರ್ಗಮಿತ ಬಿಇಓ ಭಾಗ್ಯಮ್ಮ, ಸೋಮವಾರಪೇಟೆ ತಾಲೂಕಿನಲ್ಲಿ ಉತ್ತಮ ಶೈಕ್ಷಣಿಕ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಪ್ರಗತಿ ಸಾಧಿಸಲಾಗಿದೆ.…






