ಮಡಿಕೇರಿ ಸೆ.16 NEWS DESK : ಕಾರ್ಮಿಕ ಸಚಿವರಾದ ಸಂತೋಷ್ ಎಸ್.ಲಾಡ್ ಅವರು ಸೆ.17 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಸೆ.17 ರಂದು ಬೆಳಗ್ಗೆ 9 ಗಂಟೆಗೆ ನಗರದ ಐಬಿಯಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ. ಬಳಿಕ ಬೆಳಗ್ಗೆ 11 ಗಂಟೆಗೆ ನಗರದ ಹಿಲ್‍ಡೇಲ್ ರೆಸಾರ್ಟ್(ಕ್ರಿಸ್ಟಲ್ ಹಾಲ್)ನಲ್ಲಿ ಕೊಡಗು ಜಿಲ್ಲೆಯ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೊಡಗು ಜಿಲ್ಲೆಯ ವಿವಿಧ ಸಂಸ್ಥೆಗಳ ಪ್ರಮುಖರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಕಾರ್ಮಿಕ ಸಚಿವರ ಆಪ್ತ ಕಾರ್ಯದರ್ಶಿ ಪಿ.ಕುಮಾರ್ ಅವರು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಸೆ.16 NEWS DESK : ತಲಕಾವೇರಿಯಲ್ಲಿ ಅ.17 ರಂದು ಜರುಗುವ ಪವಿತ್ರ ಕಾವೇರಿ ತೀರ್ಥೋದ್ಭವ ಸಂಬಂಧ ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಸೂಚಿಸಿದ್ದಾರೆ. ಭಾಗಮಂಡಲ ‘ಶ್ರೀ ಭಗಂಡೇಶ್ವರ ದೇವಾಲಯದ ಹಳೆ ಮುಡಿಶೆಡ್ ಕಟ್ಟಡದ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸಚಿವರು ಮಾತನಾಡಿದರು. ಪವಿತ್ರ ತೀರ್ಥೋದ್ಭವ ಸಂಬಂಧ ತಲಕಾವೇರಿಯಲ್ಲಿ ಭಕ್ತಾಧಿಗಳಿಗೆ ಯಾವುದೇ ರೀತಿ ಕಿರಿಕಿರಿ ಉಂಟಾಗದಂತೆ ಅಧಿಕಾರಿಗಳು ಗಮನಹರಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಅ.17 ರಂದು ಮಧ್ಯಾಹ್ನ 1.44 ಗಂಟೆಗೆ ಸಲ್ಲುವ ಮಕರ ಲಗ್ನದಲ್ಲಿ ಪವಿತ್ರ ತೀರ್ಥೋದ್ಭವ ಸಂಭವಿಸುವುದರಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದೆ. ಆದ್ದರಿಂದ ಅಗತ್ಯ ಕ್ರಮವಹಿಸುವಂತೆ ಸಚಿವರು ಸೂಚಿಸಿದರು. ಪೊಲೀಸ್ ಇಲಾಖೆ ಅಧಿಕಾರಿಗಳು ಪವಿತ್ರ ತೀರ್ಥೋದ್ಭವ ಸಂಬಂಧ ಅಗತ್ಯ ಬಂದೋಬಸ್ತ್ ಮಾಡಬೇಕು. ಸಾರಿಗೆ ಇಲಾಖೆ ಅಧಿಕಾರಿಗಳು ಅಗತ್ಯ ಬಸ್ ಸೌಲಭ್ಯ ಒದಗಿಸುವುದು, ಕಾವೇರಿ ನೀರಾವರಿ ನಿಗಮ, ಸೆಸ್ಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,…
ಮಡಿಕೇರಿ ಸೆ.16 NEWS DESK : ಕಳೆದ ನಾಲ್ಕು ತಿಂಗಳು ಸುರಿದ ಮಳೆಯಿಂದ ಉಂಟಾದ ಹಾನಿ ಬಗ್ಗೆ ಲೋಕೋಪಯೋಗಿ, ಪಂಚಾಯತ್ ರಾಜ್, ಕೃಷಿ, ತೋಟಗಾರಿಕೆ, ಶಾಲಾ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಸ್ಥಳೀಯ ಸಂಸ್ಥೆ ಸೇರಿದಂತೆ ವಿವಿಧ ಇಲಾಖೆಗಳಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಮಾಹಿತಿ ಪಡೆದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಳೆಹಾನಿ ಪರಿಹಾರ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು, ಕಳೆದ ನಾಲ್ಕು ತಿಂಗಳು ಸುರಿದ ಧಾರಾಕಾರ ಮಳೆಯಿಂದ ರಸ್ತೆ, ಸೇತುವೆ, ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳು, ಹಾಗೆಯೇ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿ ಆಗಿದ್ದು, ಈ ಬಗ್ಗೆ ನಿಖರ ಅಂಕಿ ಅಂಶ ನೀಡುವಂತೆ ಸಚಿವರು ನಿರ್ದೇಶನ ನೀಡಿದರು. ಸಭೆಯ ಆರಂಭದಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ಈ ಬಾರಿ ಜೂನ್ ತಿಂಗಳಲ್ಲಿ ಹೆಚ್ಚಿನ ಮಳೆಯಾಗಿದ್ದು, 2025 ರ ಜ.1 ರಿಂದ ಸೆ.14 ರವರೆಗೆ 2,331…
ಮಡಿಕೇರಿ ಸೆ.16 NEWS DESK : ವಿರಾಜಪೇಟೆ ತಾಲ್ಲೂಕು ಪಾಲಿಬೆಟ್ಟ ಗ್ರಾಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಯನ್ನು ಉದ್ಘಾಟಿಸಿದರು. ತಮ್ಮ ಅನುದಾನದ ರೂ.5 ಲಕ್ಷದಲ್ಲಿ ನಿರ್ಮಾಣಗೊಂಡ ಲೂಡ್ಸ್ ಶಾಲೆಗೆ ತೆರಳುವ ರಸ್ತೆಯನ್ನು ಲೋಕಾರ್ಪಣೆ ಮಾಡಿದ ಬಳಿಕ, ರೂ.8 ಲಕ್ಷದಲ್ಲಿ ನಿರ್ಮಾಣವಾದ ಸರಕಾರಿ ಪದವಿಪೂರ್ವ ಕಾಲೇಜಿಗೆ ತೆರಳುವ ನೂತನ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದರು. ಬಳಿಕ ಶಾಸಕರು ಸ್ಥಳೀಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ವಾಲಿಬಾಲ್ ಟೂರ್ನಿಯನ್ನು ಉದ್ಘಾಟಿಸಿ ಶುಭ ಕೋರಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ವಲಯ ಅಧ್ಯಕ್ಷರಾದ ಕಾಳಪ್ಪ, ಪಂಚಾಯಿತಿ ಸದಸ್ಯರು ನಜರ್, ಕೆಡಿಪಿ ಸದಸ್ಯರು ಗಣೇಶ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಮಲ್ದಾರೆ ಪಂಚಾಯಿತಿ ಸದಸ್ಯರಾದ ಲಲಿತಾ, ಪಕ್ಷದ ಪ್ರಮುಖರು ಮಿಲನ್ ಸುಬ್ಬಯ್ಯ, ಕಾಲೇಜು ಪ್ರಾಂಶುಪಾಲರಾದ ಶೈನಿ, ದರ್ಶನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಕುಶಾಲನಗರ ಸೆ.16 NEWS DESK : ಕುಶಾಲನಗರದ ಶ್ರೀ ಅಮರ ನಾರಾಯಣ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸ್ಥಳೀಯ ಟಿಟಿಡಿ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಟಿ.ಬಿ. ಸತೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಳೆದ ಸಾಲಿನ ವಾರ್ಷಿಕ ವಹಿವಾಟಿನ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭ ನೂತನ ನಿರ್ದೇಶಕರಾಗಿ ಟಿ.ಎ ಪ್ರಕಾಶ್, ಸುಬ್ರಮಣಿಯವರನ್ನು ಸೇರ್ಪಡೆಗೊಳಿಸಲಾಯಿತು. ಸಭೆಯಲ್ಲಿ ಕುಶಾಲನಗರ ಕೈವಾರ ತಾತಯ್ಯ ಬಲಿಜ ಸಮಾಜದ ಅಧ್ಯಕ್ಷ ಬಾಬಣ್ಣ, ಕೊಡಗು ಬಲಿಜ ಸಮಾಜದ ಅಧ್ಯಕ್ಷ ಗಣೇಶ್ ನಾಯ್ಡು, ಶ್ರೀ ಅಮರ ನಾರಾಯಣ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಲೋಕೇಶ್, ನಿರ್ದೇಶಕರಾದ ವೆಂಕಟೇಶಲು, ಮದನ್, ರಮ್ಯಾ, ಶ್ವೇತ, ಜಯರಾಮ್ , ಎಂ.ಆರ್.ಗಣೇಶ್, ಟಿ.ಆರ್.ಜಗದೀಶ್, ಕಾರ್ಯನಿರ್ವಹಣಾಧಿಕಾರಿ ಎಸ್.ಎಸ್.ಸುಪ್ರೀತಾ ಹಾಜರಿದ್ದರು.
ಮಡಿಕೇರಿ ಸೆ.16 NEWS DESK : ನಿವೇಶನ ರಹಿತ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ನಿವೇಶನ ನೀಡುವಂತೆ ಆಗ್ರಹಿಸಿ ನಿವೇಶನ ಹೋರಾಟ ಸಮಿತಿ ಚೆಟ್ಟಳ್ಳಿಯಲ್ಲಿ ಪ್ರತಿಭಟನೆ ನಡೆಸಿತು. ಚೆಟ್ಟಳ್ಳಿ ಗ್ರಾ.ಪಂ ಎದುರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದ ಸಮಿತಿಯ ಪ್ರಮುಖರು ಹಾಗೂ ನಿವೇಶನ ರಹಿತರು ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದರು. ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಅವರು, ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತವಾಗಿ ವಾಸಿಸಲು ಮನೆಯಿಲ್ಲದ ಸುಮಾರು 100ಕ್ಕಿಂತಲೂ ಹೆಚ್ಚು ಕುಟುಂಬಗಳು ತೋಟದ ಲೈನ್‍ಮನೆಗಳಲ್ಲಿ, ಅಪಾಯಕಾರಿ ಪ್ರದೇಶಗಳಲ್ಲಿ ಬದುಕು ಸಾಗಿಸುತ್ತಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದು 77 ವರ್ಷಗಳೇ ಕಳೆದಿದ್ದರೂ ಮಹಾತ್ಮ ಗಾಂಧಿ ಅವರ ರಾಮರಾಜ್ಯದ ಕನಸು ನನಸಾಗಲಿಲ್ಲ. ಸಂವಿಧಾನದ ಆಶಯಗಳು ಸಮರ್ಪಕವಾಗಿ ಜಾರಿಯಾಗದೆ ಇರುವುದರಿಂದ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಆದಿವಾಸಿ, ದಲಿತ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಹಾಗೂ ಅನೇಕ ಸಣ್ಣ ಸಮುದಾಯಗಳು ನೈಜ ಸ್ವಾತಂತ್ರ್ಯವನ್ನು ಅನುಭವಿಸಲಾಗದ ಪರಿಸ್ಥಿತಿಯಲ್ಲಿವೆ. ಸರಕಾರಿ ಭೂಮಿ ಒತ್ತುವರಿಯಾಗಿ ಉಳ್ಳವರ…
ಸೋಮವಾರಪೇಟೆ ಸೆ.16 NEWS DESK : ಸೋಮವಾರಪೇಟೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿಗೊಂಡಿರುವ ವಿದ್ಯಾರ್ಥಿಗಳಿಗೆ ಮಂಜೂರಾತಿ ಪತ್ರ ವಿತರಿಸಲಾಯಿತು. ಯೋಜನಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ವಿಧಾನ ಪರಿ಼ಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ ಉದ್ಘಾಟಿಸಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ಶ್ರದ್ಧೆ, ಭಕ್ತಿ, ಹಠ ಛಲದಿಂದ ವಿದ್ಯಾಭ್ಯಾಸವನ್ನು ಮಾಡಬೇಕು, ಇಲ್ಲಿ ಬಂದಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡುವವರಾಗಿದ್ದು, ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಉತ್ತಮ ಹುದ್ದೆಯನ್ನು ಅಲಂಕರಿಸಿ, ಜನರ ಸೇವೆಯನ್ನು ಮಾಡುವಂತಾಗಬೇಕು ಎಂದು ತಿಳಿಸಿದರು. ಪರಮ ಪೂಜ್ಯ ಹೆಗ್ಗಡೆಯವರು ಸಮಾಜದ ಬಡ ವಿದ್ಯಾರ್ಥಿಗಳು ಕೂಡ ಉನ್ನತ ವ್ಯಾಸಂಗ ಮಾಡುವಂತಾಗಬೇಕು ಎಂದು ಈ ಸುಜ್ಞಾನನಿಧಿ ಶಿಷ್ಯವೇತನ ಕಾರ್ಯಕ್ರಮವನ್ನು ರೂಪಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಶ್ರೀಮತಿ ಲೀಲಾವತಿರವರು ಮಾತನಾಡುತ್ತಾ ಬಡವರು ಬಡವರಾಗಿಯೇ ಇರಬಾರದು, ತನ್ನ ಹುಟ್ಟು-ಸಾವಿನ ಮಧ್ಯದಲ್ಲಿ ಇರುವ ಸಮಯದಲ್ಲಿ ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕಬೇಕೆನ್ನುವ ಕನಸನ್ನು ಕಟ್ಟಿಕೊಳ್ಳಬೇಕು.…
ಸೋಮವಾರಪೇಟೆ ಸೆ.16 NEWS DESK : ತೋಳೂರು ಶೆಟ್ಟಳ್ಳಿಯ ಶುಭಾಸ್ ನಗರದಲ್ಲಿ ಶ್ರೀ ವಿನಾಯಕ ಯುವಕ ಸಂಘದ ವತಿಯಿಂದ 9ನೇ ವರ್ಷದ ಗೌರಿ ಗಣೇಶ ಮೂರ್ತಿ ವಿಸರ್ಜನ ಕಾರ್ಯಕ್ರಮ ನಡೆಯಿತು. ಡಿಜೆ ಸೌಂಡ್ ಹಾಗೂ ಗೊಂಬೆ ಕುಣಿತದೊಂದಿಗೆ ವಿದ್ಯುತ್ ದೀಪಾಲಂಕಾರಗೊಂಡ ವಾಹನದಲ್ಲಿ ಗೌರಿ ಗಣೇಶ ಮೂರ್ತಿಯನ್ನು ಗ್ರಾಮದ ಪ್ರಮುಖ ಬೀದಿಗಳ ಮೂಲಕ ಮೆರವಣಿಗೆ ನಡೆಸಿ, ತೋಳೂರು ಶೆಟ್ಟಳ್ಳಿ ಬಸವೇಶ್ವರ ದೇವಸ್ಥಾನದ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು. ಈ ಸಂದರ್ಭ ಯುವಕ ಸಂಘದ ಅಧ್ಯಕ್ಷ ಟಿ.ಎನ್.ಬಸವರಾಜು, ಕಾರ್ಯದರ್ಶಿ ಕೆ.ಎಸ್.ನಂದೀಶ್, ಖಜಾಂಚಿ ಸತೀಶ್ (ದಾಮು), ಟಿ.ವಿ.ಅಭಿಜಿತ್, ಚಂದನ್, ರಾಜೇಶ್, ದರ್ಶನ್ ಮತ್ತು ಅರ್ಚಕ ಸುಧಾಕರ್ ಜೈನ್ ಮುಂತಾದವರು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಸೆ.16 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 2024-25ನೇ ಸಾಲಿನಲ್ಲಿ 78 ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ಮುಂದೆಯೂ ಹಲವು ಕಾರ್ಯಕ್ರಮಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 2024-25ನೇ ಸಾಲಿನಲ್ಲಿ ಎಂಟು ಜಿಲ್ಲಾ ಸಮಿತಿ ಹಾಗೂ ತಾಲ್ಲೂಕು, ಹೋಬಳಿ ಮಟ್ಟದಲ್ಲಿಯೂ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿದೆ ಎಂದರು. ಕೊಡಗಿನ ದಾನಿಗಳು ನೀಡಿದ ದತ್ತಿನಿಧಿಯಿಂದ 51 ಕಾರ್ಯಕ್ರಮಗಳನ್ನು ನಡೆಸಲಾಗಿದ್ದು, ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ.ವಿಶ್ವೇಶ್ವರಯ್ಯ, ಸರ್ ಮಿರ್ಜಾ ಇಸ್ಮಾಯಿಲ್ ದಿನಾಚರಣೆ ಅಲ್ಲದೆ ಜಿಲ್ಲೆಯ ತಾಲ್ಲೂಕು, ಹೋಬಳಿ ಸಮಿತಿಗಳು ಸೇರಿ ಹತ್ತಕ್ಕೂ ಹೆಚ್ಚು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳನ್ನು ನಡೆಸಿದೆ ಎಂದು ತಿಳಿಸಿದರು. ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಬಂದ ಕನ್ನಡ ಜೋತಿಹೊತ್ತ ರಥವನ್ನು ಜಿಲ್ಲೆಯ ಗಡಿಭಾಗ…
ಮಡಿಕೇರಿ NEWS DESK ಸೆ.16 : ರಾಜ್ಯ ಸರ್ಕಾರದ ವತಿಯಿಂದ ಸೆ.22 ರಿಂದ ಅ.12 ರವರೆಗೆ ಹಿಂದುಳಿದ ಆಯೋಗದಿಂದ ನಡೆಯುವ ಜನತೆಯ ಶೈಕ್ಷಣಿಕ ಹಾಗೂ ಸಾಮಾಜಿಕ, ಆರ್ಥಿಕ ಜನಗಣತಿಯಲ್ಲಿ ವೀರಶೈವ ಲಿಂಗಾಯಿತ ಸಮುದಾಯದವರು ತಪ್ಪದೆ “ವೀರಶೈವ ಲಿಂಗಾಯಿತ” ಎಂದು ಬರೆಸುವಂತೆ ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ವಿ.ಶಿವಪ್ಪ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮೀಕ್ಷೆ ಅನುಸೂಚಿಯ 8ರ ಧರ್ಮದ ಕಾಲಂನಲ್ಲಿ ನೀಡಿರುವ 11ನೇ ಕೋಡ್ ನ ‘ಇತರೆ’ ಎಂದಿರುವ ಸ್ಥಳದಲ್ಲಿ ‘ವೀರಶೈವ ಲಿಂಗಾಯಿತ ಎಂದು ಮತ್ತು 9 ರ ಜಾತಿ ಕಾಲಂ ನಲ್ಲಿ ಲಿಂಗಾಯಿತ ಅಥಾವ ವೀರಶೈವ ಎಂದು ನಿಗದಿತ ಸಂಕೇತ ಸಂಖ್ಯೆಯನ್ನು ನೀಡಿ ನಮೂದಿಸಬೇಕು. 10ರ ಉಪಜಾತಿ ಕಾಲಂ ನಲ್ಲಿ ತಮ್ಮ ಉಪಜಾತಿಗಳನ್ನು ಕೋಡ್ ಸಮೇತ ದಾಖಲಿಸಿ ಮಾಹಿತಿಗಳನ್ನು ತಪ್ಪಿಲ್ಲದಂತೆ ನೀಡಲು ಸಲಹೆ ನೀಡಿದರು. ಸಾರ್ಕಾರವು ಮುಂದಿನ ದಿನಗಳಲ್ಲಿ ಆರ್ಥಿಕ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಾಗ ಜಾತಿಗಣತಿಯ ದತ್ತಾಂಶಗಳನ್ನು ಉಪಯೋಗಿಸಿಕೊಳ್ಳುಲು ಅನುಕೂಲವಾಗುತ್ತದೆ. ಆದ…






