ಲೇಖಕ: admin

ಮಡಿಕೇರಿ ಜು.3 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ಕಥೆ ಮತ್ತು ಲಲಿತ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಕಥೆ ಮತ್ತು ಲಲಿತ ಪ್ರಬಂಧ ಸ್ವಂತ ರಚನೆಯಾಗಿರಬೇಕು. ಪ್ರಕಟಿತ ಮತ್ತು ಅನುವಾದಿತ ಬರಹಗಳಿಗೆ ಅವಕಾಶವಿಲ್ಲ. ಕಥೆ, ಲಲಿತ ಪ್ರಬಂಧ ಒಂದು ಸಾವಿರ ಪದಗಳನ್ನು ಮೀರಬಾರದು. ಹೊಸ ಆಲೋಚನೆ, ಹೊಸ ಹೊಳಹುಗಳ ಬರಹವಾಗಿರಬೇಕು. ಕಥಾ ವಿಭಾಗ ಹಾಗೂ ಲಲಿತ ಪ್ರಬಂಧ ವಿಭಾಗಗಳಲ್ಲಿ ಪ್ರಥಮ ಬಹುಮಾನ ರೂ.3 ಸಾವಿರ, ದ್ವಿತೀಯ ಬಹುಮಾನ ರೂ.2 ಸಾವಿರ, ತೃತೀಯ ಬಹುಮಾನ ರೂ.1 ಸಾವಿರ ಒಳಗೊಂಡಿದೆ. ಒಬ್ಬರೇ ಎರಡು ಸ್ಪರ್ಧೆಗಳಲ್ಲಿ ಭಾಗವಹಿಸಬಹುದು. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿದೆ. ಬರಹ ಕಳಿಸಲು ಆಗಸ್ಟ್, 4 ಅಂತಿಮ ದಿನವಾಗಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ತಿಳಿಸಿದ್ದಾರೆ.

Read More

ಮಡಿಕೇರಿ ಜು.3 NEWS DESK : ಕೊಡಗು ಜಿಲ್ಲೆಯಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ದಿನಗಳಲ್ಲಿ ಗಾಳಿ ಮಳೆ ಹೆಚ್ಚಾಗುವ ಸಾಧ್ಯತೆಗಳಿರುವುದರಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಬುಧವಾರ ರಾತ್ರಿಯಿಂದ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಕಳೆದ 24 ಗಂಟೆ ಅವಧಿಯಲ್ಲಿ ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿಯಲ್ಲಿ ದಾಖಲೆಯ 6 ಇಂಚು ಮಳೆಯಾಗಿದೆ. ಜಿಲ್ಲೆಯಲ್ಲಿ ಸರಾಸರಿ 49.44 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 17.55 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1486.74 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 893.60 ಮಿ.ಮೀ ಮಳೆಯಾಗಿತ್ತು. ನದಿ ಹಾಗೂ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಮರಗಳು ಬಿದ್ದು ವಿದ್ಯುತ್ ಮಾರ್ಗಗಳಿಗೆ ಹಾನಿಯಾಗಿದೆ. ರಸ್ತೆಗಳು ಹದಗೆಟ್ಟು ಕೆಸರುಮಯವಾಗಿದ್ದು, ವಾಹನ ಸಂಚಾರ ಕಷ್ಟಸಾಧ್ಯವಾಗಿದೆ. ಮಡಿಕೇರಿ ನಗರದಲ್ಲಿ ಕೊಡವ ಮಂದ್ ನಲ್ಲಿದ್ದ ಸುಮಾರು 200…

Read More

ಮಡಿಕೇರಿ ಜು.3 NEWS DESK : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನವೆಂಬರ್ 4 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾಗಿ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ 5502 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, 5478 ಪ್ರಕರಣಗಳು ಇತ್ಯರ್ಥಗೊಂಡಿರುತ್ತದೆ. 2025-26ನೇ ಆರ್ಥಿಕ ಸಾಲಿನಲ್ಲಿ 83 ಪ್ರಕರಣಗಳು ದಾಖಲಾಗಿ 65 ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ ಉಳಿದ 24 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ. ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ರೂ 50,000 ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ 2025-26 ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ. ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷ ಪ್ರಕಾಶ್…

Read More

ಮಡಿಕೇರಿ ಜು.3 NEWS DESK : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಭವನ ನಿರ್ಮಾಣಕ್ಕೆ 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‍ನ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯ ತಿಳಿಸಿದ್ದಾರೆ. ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪೊನ್ನಮ್ಮ ಕುಶಾಲಪ್ಪ ಭವನದ ಸಭಾಂಗಣದಲ್ಲಿ ನಡೆದ ಪದಾಧಿಕಾರಿಗಳ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರ ಸ್ಕೌಟ್ಸ್ ಮತ್ತು ಗೈಡ್ಸ್ ಅಭಿವೃದ್ಧಿಗಾಗಿ ಅಗತ್ಯ ಸಹಕಾರ ನೀಡುತ್ತಿದ್ದು, ಆ ನಿಟ್ಟಿನಲ್ಲಿ ಇದನ್ನು ಬಳಸಿಕೊಂಡು ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ಸಲಹೆ ನೀಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ಸ್ಥಳೀಯ ಸಂಘಟನೆಗಳಿಗೂ ಒದಗಿಸಲಾಗುವುದು. ಆ ನಿಟ್ಟಿನಲ್ಲಿ ಖರ್ಚು ವೆಚ್ಚದ ಸಮಗ್ರ ದಾಖಲೆ ಒದಗಿಸುವಂತಾಗಬೇಕು ಎಂದು ಪಿಜಿಆರ್ ಸಿಂಧ್ಯ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ಕೊಡಗು ಜಿಲ್ಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು 1918 ರಲ್ಲಿಯೇ ಆರಂಭವಾಗಿದೆ. ಎಲ್ಲರ ಸಹಕಾರದಿಂದ ಕ್ರಿಯಾಶೀಲ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿರುವುದು…

Read More

ಮೈಸೂರು ಜು.3 NEWS DESK  : ನಾಡ ದೇವತೆ ಚಾಮುಂಡೇಶ್ವರಿ ತಾಯಿಯನ್ನು ಆಷಾಢ ಶುಕ್ರವಾರದಂದು ದರ್ಶನ ಮಾಡಲು ಬರುವ ಭಕ್ತರಿಗೆ ಸಕಲ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು. ಯಾವುದೇ ಲೋಪ-ದೋಷಗಳು ಕಂಡುಬರಬಾರದು ಎಂದು ಅಧಿಕಾರಿಗಳಿಗೆ ಹಾಗೂ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಕೈಗೊಂಡಿರುವ ಸಿದ್ಧತೆಗಳ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಸಂಸದ ಯದುವೀರ್‌ ಒಡೆಯರ್‌ ಮಾತನಾಡಿದರು. ಮೊದಲ ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಭಕ್ತರಿಗೆ ಸಾಕಷ್ಟು ಅನನುಕೂಲವಾಗಿರುವ ಬಗ್ಗೆ ನಮ್ಮ ಕಚೇರಿಗೆ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಆಗಮಿಸಿ, ಸಿದ್ಧತೆಗಳು ಹಾಗೂ ಭಕ್ತರಿಗೆ ಮಾಡಲಾಗಿರುವ ವ್ಯವಸ್ಥೆಯನ್ನು ಪರಿಶೀಲಿಸಲಾಯಿತು. ಕೆಲವೊಂದು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು. :: ದರ ಪರಿಷ್ಕರಣೆ ಬಗ್ಗೆ ಸೂಕ್ತ ನಿರ್ಧಾರ ::  ಪ್ರಮುಖವಾಗಿ ವಿಶೇಷ ದರ್ಶನಕ್ಕೆ ಎರಡು ಸಾವಿರ ರೂಪಾಯಿ ನಿಗದಿ ಮಾಡಿರುವ ಬಗ್ಗೆ…

Read More

ಕುಶಾಲನಗರ ಜು.3 NEWS DESK :  ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ 2024-25ನೇ ಸಾಲಿನಲ್ಲಿ 16.70 ಕೋಟಿ ರೂಗಳ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷರಾದ ಕೊಡಂದೇರ ಪಿ ಗಣಪತಿ ತಿಳಿಸಿದ್ದಾರೆ. ಕುಶಾಲನಗರದ ಬ್ಯಾಂಕ್ ಶಾಖೆಯಲ್ಲಿ ನಡೆದ ಗ್ರಾಹಕರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.  ಬ್ಯಾಂಕ್ 24 ಶಾಖೆ ಹಾಗೂ ಒಂದು ಕೇಂದ್ರ ಕಚೇರಿ ಹೊಂದಿದೆ. ಜಿಲ್ಲೆಯ ರೈತರಿಗೆ ಸಹಕಾರ ಸಂಘಗಳಿಗೆ ಹಾಗೂ ಗ್ರಾಹಕರಿಗೆ ಸಕಾಲದಲ್ಲಿ ಕೃಷಿ ಹಾಗೂ ಕೃಷಿಯೇತರ ಸಾಲಗಳನ್ನು ನೀಡುತ್ತಾ ಬಂದಿದೆ ಎಂದು ತಿಳಿಸಿದರು. ರೈತರ ಹಾಗೂ ಗ್ರಾಹಕರ ಅನುಕೂಲಕ್ಕಾಗಿ ಸದ್ಯದಲ್ಲಿಯೇ ಜಿಲ್ಲೆಯಲ್ಲಿ ಮೂರು ನೂತನ ಶಾಖೆಗಳು ಆರಂಭಗೊಳ್ಳಲಿದೆ ಗುಡ್ಡೆ ಹೊಸೂರು, ಕಕ್ಕಬೆ, ತಿತಿಮತಿ ಗ್ರಾಮಗಳಲ್ಲಿ ಶಾಖೆಗಳನ್ನು ತೆರೆಯಲಾಗುವುದು ಎಂದರು. ಕುಶಾಲನಗರ ಶಾಖೆಯ ಗ್ರಾಹಕರ ಅನುಕೂಲಕ್ಕಾಗಿ ಕುಶಾಲನಗರ ಬೈಚನಹಳ್ಳಿ ಬಳಿ ಬ್ಯಾಂಕ್ ಸ್ವಂತ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಎಂದು ತಿಳಿಸಿದರು. ರೈತರು ಇತರೆ ಬ್ಯಾಂಕುಗಳಲ್ಲಿ ಹೆಚ್ಚಿನ ಬಡ್ಡಿ ದರದಲ್ಲಿ ಪಡೆದ ಸಾಲವನ್ನು ಟೇಕ್ ಓವರ್…

Read More

ಮಡಿಕೇರಿ ಜು.3 NEWS DESK : ಭಾರತೀಯ ಸೇನೆಯಲ್ಲಿ ಮೂವತ್ತು ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಸ್ವ ಗ್ರಾಮಕ್ಕೆ ಆಗಮಿಸಿದ ಯೋಧ ಹೆಚ್.ಎಸ್.ಕೃಷ್ಣಪ್ಪ ಅವರಿಗೆ ಹೆಬ್ಬಾಲೆ ಗ್ರಾಮದಲ್ಲಿ ಅದ್ದೂರಿ ಸ್ವಾಗತ ಲೇಡಿ ಬರಮಾಡಿಕೊಳ್ಳಲಾಯಿತು. ಚೆನ್ನೈ ನಿಂದ ಊರಿಗೆ ಬಂದ ಯೋಧ ಕೃಷ್ಣಪ್ಪ ಅವರ ಕುಟುಂಬಸ್ಥರ ಮೇಲೆ ಗ್ರಾಮಸ್ಥರು, ಶಾಲಾ ಮಕ್ಕಳು ಹಾಗೂ ಅಭಿಮಾನಿಗಳು ಪುಷ್ಪಮಳೆಗೆರೆದರು. ಹೆಬ್ಬಾಲೆ ಗ್ರಾಮಸ್ಥರು, ಕೃಷ್ಣಪ್ಪ ಗೆಳೆಯರ ಬಳಗ ಹಾಗೂ ಕೃಷ್ಣಪ್ಪ ಅಭಿಮಾನಿಗಳು ವೀರಯೋಧ ಕೃಷ್ಣಪ್ಪ ಅವರ ಕುಟುಂಬವನ್ನು ಸನ್ಮಾನಿಸಿ ನೆನಪಿನ ಕಾಣಿಕೆ ನೀಡುವ‌ ಮೂಲಕ ಗೌರವಿಸಿದರು. ಅಭಿಮಾನಿಗಳು ಬೃಹತ್ ಹೂವಿನ ಹಾರಗಳನ್ನು ಹಾಕಿ ಗೌರವ ಸಲ್ಲಿಸಿದರು. ಇದೇ ವೇಳೆ ಯೋಧ ಹಾಗೂ ದೇಶದ ಪರವಾಗಿ ಘೋಷಣೆ ಕೂಗುವ ಮೂಲಕ‌ ಯುವಕರ ದೇಶಪ್ರೇಮ ಬಿಂಬಿಸಿದರು. ಅಭಿಮಾನಿಗಳು ಹೆಬ್ಬಾಲೆ ಸರ್ಕಲ್ ನಲ್ಲಿ ಪಟಾಕಿ ಸಿಹಿಸಿ ,ಸಿಹಿ ವಿತರಿಸಿ ಸಂಭ್ರಮಿಸಿದರು.  ಅಲಂಕೃತ ವಾಹನದಲ್ಲಿ ಮೆರವಣಿಗೆ ನಡೆಸಿದರು. ನಂತರ ತಮ್ಮ ಮನೆಗೆ‌ ಆಗಮಿಸಿದಾಗ ಮನೆಯವರು ಆರತಿಯೊಂದಿಗೆ ಯೋಧನ ಕುಟುಂಬವನ್ನು ಬರಮಾಡಿಕೊಂಡರು. ಇದೇ…

Read More

ಮಡಿಕೇರಿ ಜು.3 NEWS DESK : ಜಿಲ್ಲೆಯಲ್ಲಿ ಮುಂಗಾರು ಮಳೆಯ ಸಂದರ್ಭ ಸಂಭವನೀಯ ಪ್ರಾಕೃತಿಕ ವಿಕೋಪವನ್ನು ಎದುರಿಸುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸ್ವಯಂ ಸೇವಕರ ಸಭೆ ನಡೆಯಿತು. ನಗರದ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಪ್ರಕೃತಿ ವಿಕೋಪ ನಿರ್ವಹಣೆ, ಸಂಪನ್ಮೂಲಗಳ ಬಳಕೆ, ಸ್ಥಳೀಯರ ನೆರವು, ಮಾಹಿತಿ ಹಂಚಿಕೆ, ಸಂಪರ್ಕ ಮುಂತಾದ ವಿಚಾರಗಳ ಬಗ್ಗೆ ಪರಸ್ಪರ ಚರ್ಚಿಸಲಾಯಿತು. ಈ ಸಂದರ್ಭ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು, ಜಿಲ್ಲೆಯಲ್ಲಿ ಹಲವು ವರ್ಷಗಳ ನಂತರ ಜೂನ್ ತಿಂಗಳ ಅಂತ್ಯದವರೆಗೆ ಅತೀ ಹೆಚ್ಚು ಮಳೆಯಾಗಿದ್ದು, ನದಿ, ಜಲಾಶಯ, ಕೆರೆ, ತೋಡು, ಹಳ್ಳ ಇತರೆ ನೀರಿನ ಮೂಲಗಳು ಈಗಾಗಲೇ ತುಂಬಿ ಹರಿಯುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಯಾವುದೇ ರೀತಿಯ ಪ್ರಕೃತಿ ವಿಕೋಪ ಉಂಟಾದಲ್ಲಿ ಮುನ್ನೆಚ್ಚಾರಿಕಾ ಕ್ರಮ ಕೈಗೊಳ್ಳುವ ಸಲುವಾಗಿ ಸಭೆ ನಡೆಸಿ ಪ್ರಕೃತಿ ವಿಕೋಪ ಸಂದರ್ಭ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿ ಎಲ್ಲಾ ಅಧಿಕಾರಿಗಳಿಗೆ ಸೂಕ್ತ…

Read More

ಮಡಿಕೇರಿ ಜು.3 NEWS DESK : ಕೊಡಗು ಜಿಲ್ಲೆಯ ವಿವಿಧ ಗ್ರಾ.ಪಂ ವ್ಯಾಪ್ತಿಯ ಸಂತೆಗಳಲ್ಲಿ ಅಸ್ಸಾಂ ನವರು ಹಾಗೂ ಅಸ್ಸಾಂ ಜನರೆಂದು ಹೇಳಿಕೊಳ್ಳುತ್ತಿರುವ ಅಪರಿಚಿತರು ವ್ಯಾಪಾರ ಮಾಡುತ್ತಿದ್ದು, ಈ ಬೆಳವಣಿಗೆ ವಿರುದ್ಧ ಗ್ರಾ.ಪಂ ಗಳು ಹಾಗೂ ಪೊಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಆರಂಭದಲ್ಲಿ ಕಾರ್ಮಿಕರ ಹೆಸರಿನಲ್ಲಿ ಕೊಡಗು ಜಿಲ್ಲೆಯನ್ನು ಪ್ರವೇಶಿಸಿದ ಅಸ್ಸಾಂ ನವರು ಎಂದು ಹೇಳಿಕೊಳ್ಳುತ್ತಿರುವ ಜನರು ಇಂದು ವ್ಯಾಪಾರಿಗಳಾಗಿ ಪರಿವರ್ತನೆಯಾಗುತ್ತಿದ್ದಾರೆ. ಮನೆಗೆ ಅಗತ್ಯವಿರುವ ಸಾಮಾಗ್ರಿಗಳನ್ನು ಸಂತೆಗಳಲ್ಲಿ ಮಾರಾಟ ಮಾಡುತ್ತಿರುವ ಅಪರಿಚಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದು ಕೊಡಗಿನ ವ್ಯಾಪಾರ ಕ್ಷೇತ್ರದಲ್ಲಿ ಆತಂಕವನ್ನು ಮೂಡಿಸಿದ್ದು, ಗ್ರಾಹಕರು ಕೂಡ ಎಚ್ಚೆತ್ತುಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಕಾರ್ಮಿಕರಾಗಿ ಬಂದವರು ವ್ಯಾಪಾರಿಗಳಾಗಿ ಪರಿವರ್ತನೆಯಾದ ಹಿಂದಿನ ಮರ್ಮವೇನು ಮತ್ತು ಇವರಿಗೆ ಹಣ ಹಾಗೂ ಸಾಮಾಗ್ರಿಗಳನ್ನು ನೀಡುತ್ತಿರುವವರು ಯಾರು ಎನ್ನುವ ವಿಚಾರ ಬಹಿರಂಗಗೊಳ್ಳಬೇಕಾಗಿದೆ. ಗ್ರಾ.ಪಂ, ಪೊಲೀಸ್ ಇಲಾಖೆ ಹಾಗೂ ಆಹಾರ ಇಲಾಖೆ ಈ…

Read More

ಮಡಿಕೇರಿ ಜು.3 NEWS DESK : ಕೊಡಗು ಪತ್ರಿಕಾ ಭವನ ಟ್ರಸ್ಟ್(ರಿ)ವತಿಯಿಂದ 2025-26ನೇ ಸಾಲಿಗೆ ಅನ್ವಯವಾಗುವಂತೆ ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಮಕ್ಕಳ ಶಿಕ್ಷಣಕ್ಕಾಗಿ ಆರ್ಥಿಕ ನೆರವನ್ನು ನೀಡಲು ನಿರ್ಧರಿಸಲಾಗಿದ್ದು, ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಶಿಕ್ಷಣಕ್ಕಾಗಿ ನೀಡಲಾಗುವ ಆರ್ಥಿಕ ನೆರವನ್ನು ಪ್ರಾಥಮಿಕ ಶಾಲೆಯಿಂದ ಪದವಿ ತರಗತಿಗಳವರಗೆ ವಿದ್ಯಾಭ್ಯಾಸ ಮಾಡುತ್ತಿರುವ ಪತ್ರಕರ್ತರ ಮಕ್ಕಳು ಪಡೆಯಲು ಅರ್ಹರಾಗಿರುತ್ತಾರೆ. ನೆರವು ಪಡೆಯಲು ಇಚ್ಛಿಸುವವರು ಅಂಕಪಟ್ಟಿ, ಶಾಲೆಗೆ ಪಾವತಿಸಿದ ಶುಲ್ಕದ ನಕಲು ಪ್ರತಿಯೊಂದಿಗೆ ಅರ್ಜಿಯನ್ನು ದಿನಾಂಕ 12-07-2025ರ ಒಳಗಾಗಿ ಸಲ್ಲಿಸಲು ಕೋರಲಾಗಿದೆ. ಅರ್ಜಿಗಳನ್ನು ‘ಮ್ಯಾನೇಜಿಂಗ್ ಟ್ರಸ್ಟಿ, ಕೊಡಗು ಪತ್ರಿಕಾ ಭವನ ಟ್ರಸ್ಟ್(ರಿ), ಪತ್ರಿಕಾ ಭವನ, ಕೈಗಾರಿಕಾ ಬಡಾವಣೆ, ಮಡಿಕೇರಿ-571201’ ಈ ವಿಳಾಸಕ್ಕೆ ಕಳುಹಿಸಿಕೊಡಬೇಕೆಂದು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್ ತಿಳಿಸಿದ್ದಾರೆ.

Read More