ಮಡಿಕೇರಿ ಸೆ.16 NEWS DESK : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರಿಗೆ ಪ್ರಥಮ ಬಾರಿ ರಾಜ್ಯಾಂದ್ಯಂತ ಸರ್ಕಾರದ ಆದೇಶನ್ವಯ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ಸಮೀಕ್ಷೆಯನ್ನು ಏರ್ಪಡಿಸಲಾಗಿದೆ. ಸಮೀಕ್ಷೆ ಕಾರ್ಯವು ಸುಲಲಿತವಾಗಿ ನಡೆಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿ ಈಗಾಗಲೇ ರಚನೆಯಾಗಿರುತ್ತದೆ. ಲಿಂಗತ್ವ ಅಲ್ಪಸಂಖ್ಯಾತ ಅವರನ್ನು ಮುಖ್ಯವಾಹಿನಿಗೆ ತರಲು, ಉದ್ಯೋಗ, ಶಿಕ್ಷಣ, ಮೀಸಲಾತಿ ಒದಗಿಸುವುದು, ಸಮುದಾಯದ ಜನಸಂಖ್ಯೆ, ಶೈಕ್ಷಣಿಕ ಮಟ್ಟ, ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿಗಳ ಮಾಹಿತಿಯನ್ನು ಕ್ರೋಢಿಕರಿಸಿ ಸಮುದಾಯದವರೆಗೆ ಅಗತ್ಯ ಸೌಲಭ್ಯಗಳನ್ನು ನೀಡುವುದು ಸಮೀಕ್ಷೆಯ ಮುಖ್ಯ ಉದ್ದೇಶವಾಗಿದೆ. 15 ಸೆಪ್ಟಂಬರ್ 2025 ರಿಂದ 45 ದಿನಗಳ ಕಾಲ ಲಿಂಗತ್ವ ಅಲ್ಪಸಂಖ್ಯಾತ ಸಮೀಕ್ಷೆ ನಡೆಸಲು ದಿನಾಂಕ ನಿಗಧಿಯಾಗಿ ಡಿಎಫ್‍ಡಿಯು ಸಮೀಕ್ಷೆ ನಡೆಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಥಳ ನಿಗಧಿಯಾಗಿರುತ್ತದೆ. ಸಮುದಾಯ ಆಧಾರಿತ 5 ಸಮೀಕ್ಷೆದಾರರಿಗೆ ಸಮೀಕ್ಷೆ ನಡೆಸಲು ತರಬೇತಿ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಲಿಂಗತ್ವ…
ಲೇಖಕ: admin
ನಾಪೋಕ್ಲು ಸೆ.16 NEWS DESK : ಎಲ್ಲಾ ಜಾತಿ ಧರ್ಮದವರು ಒಗ್ಗೂಡಿದರೆ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮುಖ್ಯಮಂತ್ರಿಗಳ ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಸುನ್ನೀ ಮುಹಿಯದ್ದೀನ್ ಜುಮಾ ಮಸೀದಿ ವತಿಯಿಂದ ಆಯೋಜಿಸಲಾಗಿದ್ದ ಮದದೇ ಮದೀನ ಮಿಲಾದ್ ಬೃಹತ್ ಸಮಾವೇಶ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸರ್ವಧರ್ಮ ಸಂಗಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯದಲ್ಲಿ ಎಲ್ಲಾ ವರ್ಗದ ಜನರು ಶಾಂತಿಯುತ ಬದುಕನ್ನು ನಡೆಸುತ್ತಾ ಬಂದಿದ್ದಾರೆ. ಆಚರಣೆಗಳಲ್ಲಿ ಭಿನ್ನತೆ ಇದ್ದರೂ ಎಲ್ಲ ಧರ್ಮದವರು ಶಾಂತಿಯನ್ನು ಕಾಪಾಡಬೇಕಾದದ್ದು ಅತ್ಯಗತ್ಯ. ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಶ್ರಮವಹಿಸಿ ಇಂತಹ ಒಂದು ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು. ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ತಾವು ಬಾಹ್ಯವನ್ನು ಉದ್ದರಿಸುವುದಕ್ಕಿಂತ ನಮ್ಮನ್ನು ನಾವು ಉದ್ದರಿಸಿಕೊಂಡು ಜೀವನ ಸಾಗಿಸಬೇಕು. ಸಾಮಾಜಿಕವಾಗಿರುವ ಎಲ್ಲ ಚೌಕಟ್ಟುಗಳನ್ನು ಕಳಿಸಿಕೊಂಡು ಇಡೀ ಮನುಕುಲವನ್ನು ಪ್ರೀತಿಸುವುದು ಸಹಜವಾದ ಧರ್ಮ ಎಂದರು. ನಾಪೆÇೀಕ್ಲುವಿನ ಸಂತಮೇರಿ ಚರ್ಚ್ ನ ಜ್ಞಾನಪ್ರಕಾಶ್…
ಮಡಿಕೇರಿ ಸೆ.16 NEWS DESK : ಕೃಷಿ ಇಲಾಖೆಯ ಕೃಷೋನ್ನತಿ ಕೃಷಿ ವಿಸ್ತರಣೆ ಉಪ ಅಭಿಯಾನ(ಆತ್ಮ) ಯೋಜನೆಯಡಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ 1 ಹುದ್ದೆಯನ್ನು ಒಪ್ಪಂದದ ಆಧಾರದ ಮೇಲೆ 2025-26ನೇ ಸಾಲಿನ ಸೀಮಿತ ಅವಧಿಗೆ ವಿರಾಜಪೇಟೆ ತಾಲ್ಲೂಕಿನಲ್ಲಿ ಖಾಲಿ ಇರುವ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಬಿ ಎಸ್ಸಿ, ಎಂಎಸ್ಸಿ (ಕೃಷಿ /ತೋಟಗಾರಿಕೆ/ ಮೀನುಗಾರಿಗೆ/ಅರಣ್ಯ ರೇಷ್ಮೆ) ಹೊಂದಿರಬೇಕು. 1 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಆಫಿಸ್‍ನಲ್ಲಿ ಪರಿಣತಿ ಹೊಂದಿರತಕ್ಕದ್ದು. 45 ವರ್ಷದೊಳಗಿರಬೇಕು. ಮಾಸಿಕ ಗೌರವ ಧನ ರೂ.25 ಸಾವಿರ ಆಗಿದೆ. ಈ ಹುದ್ದೆಗೆ ಅರ್ಹರಿರುವ ಆಭ್ಯರ್ಥಿಗಳು ಸೆಪ್ಟೆಂಬರ್, 30 ರೊಳಗೆ ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ತಿಳಿಸಿದೆ, ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಆತ್ಮ ವಿಭಾಗ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು…
ಬೆಂಗಳೂರು NEWS DESK ಸೆ.15 : ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ? ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ. ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ದೊಡ್ಡ ವಿಷಯದಂತೆ ಮಾಧ್ಯಮಗಳಲ್ಲಿ ಚರ್ಚೆ ನಡೆಯಿತು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ಮಾಧ್ಯಮದಲ್ಲಿ ಹೀಗೆಲ್ಲಾ ತೋರಿಸಿದರೆ ಜನ ಒಪ್ಪುತ್ತಾರಾ ಎಂದು ಯೋಚನೆ ಮಾಡಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯ ಎತ್ತಿಹಿಡಿಯಲು ನಮ್ಮ ಸರ್ಕಾರ ಸದಾ ಸಿದ್ಧ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ. ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಯು ಟ್ಯೂಬ್ ಚಾನಲ್ ಗಳ…
ಮಡಿಕೇರಿ NEWS DESK ಸೆ.15 : ವಿರಾಜಪೇಟೆ ತಾಲ್ಲೂಕಿನ ಮೈತಾಡಿ ಗ್ರಾಮದ ನಿವಾಸಿ ಬೊಳ್ಳಪಂಡ ಎಂ.ಭೀಮಯ್ಯ ಎಂಬುವವರಿಗೆ ಸೇರಿದ ಹಸುವನ್ನು ಕಳ್ಳತನ ಮಾಡಿದ ಆರೋಪದಡಿ ಮೂವರು ಆರೋಪಿಗಳನ್ನು ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆ ತಾಲ್ಲೂಕು ಕೊಂಡಂಗೇರಿ ಗ್ರಾಮದ ನಿವಾಸಿಗಳಾದ ಮೊಹಮ್ಮದ್ ಆಶಿಕ್(22), ಶಾಹಿದ್(25) ಹಾಗೂ ಹ್ಯಾರೀಸ್(34) ಬಂಧಿತ ಆರೋಪಿಗಳಾಗಿದ್ದಾರೆ. ಸೆ.5ರಂದು ಬೊಳ್ಳಪಂಡ ಎಂ.ಭೀಮಯ್ಯ ಅವರ ಹಸು ಕಾಣೆಯಾಗಿರುವ ಕುರಿತು ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಶೇಷ ತಂಡ ರಚಿಸಿ ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದರು. ಹ್ಯಾರೀಸ್ ಎಂಬಾತ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2024ರಲ್ಲಿ ನಡೆದ ಗೋವು ಕಳವು ಪ್ರಕರಣದಲ್ಲೂ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿವೈಎಸ್‌ಪಿ ಮಹೇಶ್ ಕುಮಾರ್.ಎಸ್, ವಿರಾಜಪೇಟೆ ವೃತ್ತ ನಿರೀಕ್ಷಕ ಪಿ.ಅನೂಪ್ ಮಾದಪ್ಪ, ಗ್ರಾಮಾಂತರ ಠಾಣಾಧಿಕಾರಿ ಲತಾ.ಎನ್.ಜೆ, ಸಿಬ್ಬಂದಿಗಳಾದ ಸಾಜನ್, ಜೋಸ್ ನಿಶಾಂತ್, ಸಂತೋಷ್ ಚೌಹನ್, ಅಬ್ದುಲ್ ಮಜೀದ್, ಬೋಪಣ್ಣ ಅವರುಗಳು ಕಾರ್ಯಾಚರಣೆ ನಡೆಸಿದರು.
ಮಡಿಕೇರಿ NEWS DESK ಸೆ.15 : ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಗ ಬಾಣಂಗಾಲ ಗ್ರಾಮದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಪಶ್ಚಿಮ ಬಂಗಾಳ ರಾಜ್ಯದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ದಾಪುರದ ಕಾಫಿ ಎಸ್ಟೇಟ್ ಲೈನ್‌ಮನೆಯ ನಿವಾಸಿಗಳಾದ ಪಶ್ಚಿಮ ಬಂಗಾಳ ರಾಜ್ಯ ನಾದಿಯ ಜಿಲ್ಲೆ ಮೂಲದ ಅರ್ಚನಾ ಸರ್ದಾರ್(30) ಹಾಗೂ ತಪಾನ್ ಸರ್ದಾರ್(38) ಬಂಧಿತ ಆರೋಪಿಗಳಾಗಿದ್ದಾರೆ.ಬಂಧಿತರ ಬಳಿಯಿಂದ 1 ಕೆ.ಜಿ 166 ಗ್ರಾಂ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ. ಬಾಡಗ ಬಾಣಂಗಾಲ ಗ್ರಾಮದ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿರಾಜಪೇಟೆ ಡಿವೈಎಸ್‌ಪಿ ಸೂರಜ್.ಪಿ.ಎ, ಮಡಿಕೇರಿ ನಗರ ವೃತ್ತ ನಿರೀಕ್ಷಕ ರಾಜು.ಪಿ.ಕೆ, ಸಿದ್ದಾಪುರ ಪೊಲೀಸ್ ಠಾಣೆ ಪಿಎಸ್‌ಐ ಮಂಜುನಾಥ್ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.
ಮಡಿಕೇರಿ ಸೆ.15 NEWS DESK : ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘಕ್ಕೆ ರೂ.11,86,453 ನಿವ್ವಳ ಲಾಭ ದೊರೆತ್ತಿದ್ದು, ಸದಸ್ಯರಿಗೆ ಶೇ.15ರಷ್ಟು ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಸೂದನ ಎಸ್.ಈರಪ್ಪ ತಿಳಿಸಿದ್ದಾರೆ. ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.17 ರಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿಯ ಕೆಳಗಿನ ಕೊಡವ ಸಮಾಜದಲ್ಲಿ ನಡೆಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಸಂಘದಲ್ಲಿ ಒಟ್ಟು 3168 ಸದಸ್ಯರಿದ್ದಾರೆ, ಅವರಲ್ಲಿ ಇಂದಿನವರೆಗೆ ಸುಮಾರು 1020 ಸದಸ್ಯರು ಪೂರ್ಣ ಪಾಲುಹಣ ಹೊಂದಿದ್ದು 534 ಮಂದಿ ಮರಣನಿಧಿಯ ಅವಕಾಶವನ್ನು ಪಡೆದುಕೊಂಡಿದ್ದಾರೆ. ಏಲಕ್ಕಿ ಬೆಳೆ ಜಿಲ್ಲೆಯಲ್ಲಿ ಕಳೆದ ಮೂವತೈದು ವರ್ಷಗಳಿಂದ ಕಟ್ಟೆರೋಗ ಮತ್ತಿತರ ಕಾರಣಗಳಿಂದ ಕುಂಠಿತವಾದ ಹಿನ್ನಲೆ ಮಡಿಕೇರಿ ಕೇಂದ್ರ ಕಛೇರಿ ಮತ್ತು ಸೋಮವಾರಪೇಟೆ ಶಾಖೆಯಲ್ಲಿ ಹತ್ಯಾರು ಮಳಿಗೆಯನ್ನು ಸ್ಥಾಪಿಸಿ ಸದಸ್ಯರಿಗೆ ಬೇಕಾದ ಉಪಕರಣ, ಗೊಬ್ಬರ, ಔಷಧಿ ಮುಂತಾದವುಗಳನ್ನು ಮಾರಾಟ ಮಾಡುವ ಮೂಲಕ ಸಂಘವನ್ನು ಮುನ್ನಡೆಸಿಕೊಂಡು ಬರಲಾಗುತ್ತಿದೆ. ಕಳೆದ 3 ವರ್ಷಗಳಿಂದ ಕೇಂದ್ರ ಕಛೇರಿಯ ಕಟ್ಟಡದಲ್ಲಿ…
ಮಡಿಕೇರಿ ಸೆ.15 NEWS DESK : ಪ್ರಜಾಪ್ರಭುತ್ವ ಇತಿಹಾಸವನ್ನು ಹೊಂದಿದಂತಹ ಭಾರತದಲ್ಲಿ ಜನಿಸಲು ನಾವೇ ಪುಣ್ಯವಂತರು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೇಶ ಅಭಿವೃದ್ಧಿಯಾಗುತ್ತದೆ, ಜನಸಂಖ್ಯೆಯಲ್ಲಿ ವ್ಯತ್ಯಾಸ ಕಾಣುತ್ತಿದೆ. ದೇಶವು ಸುಸ್ಥಿರವಾಗಿದೆ. ಜಾತಿ ಧರ್ಮ ಭೇದಭಾವ ಇಲ್ಲದೆ ಹೀಗೆ ಸಾಗಬೇಕೆಂದರೆ ನಮ್ಮ ಮತ-ನಮ್ಮ ಹಕ್ಕು ಎನ್ನುವ ಘೋಷ ವಾಕ್ಯವನ್ನು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಪ್ರಜೆಯೂ ಮತ ಚಲಾಯಿಸುವ ಮುಖಾಂತರ ಪಾಲಿಸಬೇಕು ಎಂದರು. ಪ್ರಜಾಪ್ರಭುತ್ವ ಆಡಳಿತದ ಮೇಲೆ ಯುವ ಪೀಳಿಗೆ ಒಲವು ಮೂಡಿಸುವ ಕಾರ್ಯಕ್ರಮ ಹೆಚ್ಚಿಸಬೇಕು. ರಾಜಕೀಯದ ಆಡಳಿತ ಕುರಿತು ಶಿಕ್ಷಣವನ್ನು ನೀಡಬೇಕು. ಯುವ ಪೀಳಿಗೆಯನ್ನು ಸೇರಿಸಿಕೊಂಡು ರಾಜಕೀಯ ಕಾರ್ಯಕ್ರಮಗಳನ್ನು ನಡೆಸುವಂತಾಗಬೇಕು. ಆಗಲೇ ರಾಜ್ಯವು ಸುಸ್ಥಿರವಾಗಿರುವುದು ಎಂದು ನುಡಿದರು. ಅಕ್ಕ-ಪಕ್ಕದ ರಾಷ್ಟ್ರದಲ್ಲಿ…
ಕೊಡಗು ಸೆ.15 NEWS DESK : ಪಿರಿಯಾಪಟ್ಟಣದ ಮಲಬಾರ್ ಜುಮಾ ಮಸೀದಿ ಕಮಿಟಿ ವತಿಯಿಂದ ಎರಡು ದಿನಗಳ ಕಾಲ ನಡೆದ ಮಜ್‌ದೇ ಮದೀನ ಮಿಲಾದ್ ಫೆಸ್ಟ್ ಸಮ್ಮೇಳನ ಸಂಭ್ರಮದಿಂದ ನಡೆಯಿತು.ಸಮಾರೋಪ ಸಮಾರಂಭದಲ್ಲಿ ಅಂತರಾಷ್ಟ್ರೀಯ ವಾಗ್ಮಿ ಉಸ್ತಾದ್ ನೌಶಾದ್ ಬಾಖವಿ ಮಾತನಾಡಿ, ಗ್ರಾಮಗಳಲ್ಲಿ ನಡೆಯುವ ಹಬ್ಬ ಆಚರಣೆಗಳ ಮೂಲಕ ಶಾಂತಿ ಸಹ ಬಾಳ್ವೆಯ ಸಂದೇಶದೊಂದಿಗೆ ಸೌಹಾರ್ದತೆ ನೆಲಸುವಂತಾಗಲಿ. ಮಿಲಾದ್ ಆಚರಣೆ ಸಂದರ್ಭದಲ್ಲಿ ಎಲ್ಲಾ ಬಾಂಧವರು ಪಾಲ್ಗೊಳ್ಳುವಿಕೆಯೊಂದಿಗೆ ಪಿರಿಯಾಪಟ್ಟಣ ಗ್ರಾಮ ಮಾದರಿಯಾಗಿದೆ. ಪ್ರತಿಯೊಬ್ಬರು ಶಾಂತಿ ಸಹ ಬಾಳ್ವೆಯೊಂದಿಗೆ ನೆಮ್ಮದಿಯ ಜೀವನ ನಡೆಸಿದ್ದಲ್ಲಿ ಸೌಹಾರ್ದತ್ತ ಸುಂದರ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದು ಹೇಳಿದ ಅವರು ಮಾದಕ ವ್ಯಸನ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಜಾಗೃತಿ ಮೂಡಿಸಬೇಕಾಗಿದೆ. ಯುವ ಸಮೂಹ ದುಶ್ಚಟಗಳಿಂದ ದೂರವಾಗಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕೆಂದರು. ಸಮಸ್ತ ಕೇಂದ್ರ ಮುಸಾವರ ಸದಸ್ಯ ಹಾಗೂ ಕೊಡಗು ಉಪ ಖಾಝಿ ಎಂ.ಎಂ.ಅಬ್ದುಲ್ಲಾ ಫೈಝಿ ಕಾರ್ಯಕ್ರಮ ಉದ್ಘಾಟಿಸಿ ದುವಾ ನೇತೃತ್ವ ವಹಿಸಿದ್ದರು. ಮಲಬಾರ್ ಮಸೀದಿ ಕಮಿಟಿ ಅಧ್ಯಕ್ಷ…
ಮಡಿಕೇರಿ ಸೆ.15 NEWS DESK : ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್(ನೀಮಾ)ನ ಕೊಡಗು ಘಟಕವು ಇಪ್ಪತ್ತೈದನೇ ವರ್ಷಾಚರಣೆಯ ಸಂಭ್ರಮದಲ್ಲಿದ್ದು, ಮುಂದಿನ ಅ.18ರ ಧನ್ವಂತರಿ ಜಯಂತಿಯಂದು ಸಂಸ್ಥೆಯ ‘ಬೆಳ್ಳಿ ಹಬ್ಬ’ವನ್ನು ಆಚರಿಸಿಕೊಳ್ಳಲಿದೆಯೆಂದು ನೀಮಾ ಅಧ್ಯಕ್ಷ ಡಾ. ರಾಜಾರಾಮ ಎ.ಆರ್. ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕಳೆದ ಸಾಲಿನ ಧನ್ವಂತರಿ ಜಯಂತಿಯ ಬಳಿಕ ನೀಮಾ ಕೊಡಗು ಘಟಕದ ಬೆಳ್ಳಿ ಹಬ್ಬದ ಹಿನ್ನೆಲೆಯಲ್ಲಿ ವೈವಿಧ್ಯಮಯವಾದ ಇಪ್ಪತ್ತೈದು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇದೀಗ ಬೆಳ್ಳಿ ಹಬ್ಬದ ಸಮಾರಂಭವನ್ನು ನಗರದ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಆಯೋಜಿಸಿರುವುದಾಗಿ ತಿಳಿಸಿದರು. :: 25 ಮಂದಿ ಸಾಧಕರಿಗೆ ಸನ್ಮಾನ :: ಬೆಳ್ಳಿ ಹಬ್ಬದ ಸಂಭ್ರಮಾಚರಣೆಯಲ್ಲಿರುವ ನೀಮಾ ಪ್ರಕೃತಿಗಾಗಿ, ನೈಸರ್ಗಿಕ ಚಿಕಿತ್ಸೆಗಾಗಿ ಅಥವಾ ಜನರ ಆರೋಗ್ಯಕ್ಕಾಗಿ ಕಾರ್ಯ ನಿರ್ವಹಿಸುತ್ತಿರುವ 25 ಸಾಧಕರನ್ನು ಗುರುತಿಸಿ ಬೆಳ್ಳಿ ಹಬ್ಬದ ಸಮಾರಂಭದಲ್ಲಿ ಸನ್ಮಾನಿಸುವ ಯೋಜನೆಯನ್ನು ಹಮ್ಮಿಕೊಂಡಿದೆ. ಸಾರ್ವಜನಿಕರು ಸೂಕ್ತ ಹೆಸರನ್ನು ಸೂಚಿಸುವಂತೆ ಕೊಡಗು ನೀಮಾ ಅಧ್ಯಕ್ಷ ಡಾ. ರಾಜಾರಾಮ ಅವರು…






