ಲೇಖಕ: admin

ಮಡಿಕೇರಿ ಆ.8 NEWS DESK : 66/11ಕೆ.ವಿ ಕುಶಾಲನಗರ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಸುಂಟಿಕೊಪ್ಪ, ಪನ್ಯ, ಹೊಸಕೋಟೆ, ನಾಕೂರು, ಗದ್ದೆಹಳ್ಳ ಫೀಡರ್‍ಗಳಲ್ಲಿ ಆಗಸ್ಟ್, 11 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಾಹಕ ಬದಲಾವಣೆ ಕಾಮಗಾರಿ ಇರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಸುಂಟಿಕೊಪ್ಪ ಟೌನ್, ಪನ್ಯ ಹರದೂರು, ಉಲುಗುಲಿ, ನಾರ್ಗಾಣೆ, ಬೆಟ್ಟಗೇರಿ, ನಾಕೂರು, ಹೆರೂರು, ಅಂದಗೋವೆ, ಕೊಡಗರಹಳ್ಳಿ, ಹೊಸಕೋಟೆ, ಕಂಬಿಬಾಣೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಬೆಂಗಳೂರು ಆ.9 NEWS DESK : ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ ಪ್ರತಿಭಟನೆಗಾಗಿ ಬೆಂಗಳೂರಿಗೆ ಆಗಮಿಸಿದ ಸಂಸದರು ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಪಕ್ಷದ ನಾಯಕರು ಸ್ವಾಗತಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಸಚಿವರು ಸೇರಿದಂತೆ ಕಾಂಗ್ರೆಸ್ ಪಕ್ಷದ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.

Read More

ಮಡಿಕೇರಿ NEWS DESK ಆ.8 : ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರ ಹೆಸರಿಗೆ ಕಳಂಕ ತರುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿದೆ. ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆ ಮಡಿಕೇರಿಯಲ್ಲಿ ಪ್ರತಿಭಟನಾ ಜಾಥಾ ನಡೆಸಿತು. ನಗರದ ಗಾಂಧಿ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿ ಭವನದ ವರೆಗೆ ಜಾಥಾ ನಡೆಸಿದ ಪ್ರತಿಭಟನಾಕಾರರು ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿದರು. ಕಳೆದ ಕೆಲವು ತಿಂಗಳುಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳದ ಬಗ್ಗೆ ಆಧಾರ ರಹಿತ ಆರೋಪ ಮಾಡಲಾಗುತ್ತಿದ್ದು, ಇದರಿಂದ ಭಕ್ತರಿಗೆ ನೋವುಂಟಾಗಿದೆ. ಯುವ ಜನಾಂಗದಲ್ಲಿ ಕೋಮು ಭಾವನೆ ಮೂಡುತ್ತಿದ್ದು, ಸಮಾಜದಲ್ಲಿ ಅಶಾಂತಿಯ ವಾತವರಣ ನಿರ್ಮಾಣವಾಗುತ್ತಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಗಾಂಧಿ ಮೈದಾನದಲ್ಲಿ ನಡೆದ ಜನಾಗ್ರಹ ಸಭೆಯಲ್ಲಿ ಮಾತನಾಡಿದ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆಯ ಮಡಿಕೇರಿ ಸಂಚಾಲಕ ಅಗೋಳಿಕಜೆ ಧನಂಜಯ…

Read More

ಮಡಿಕೇರಿ ಆ.8 NEWS DESK : ಕುಂಜಿಲ ಆಕ್ಸ್ಫರ್ಡ್ ಆಂಗ್ಲ ಮಾಧ್ಯಮ ಶಾಲೆಯ 2025-26ನೇ ಶೈಕ್ಷಣಿಕ ಸಾಲಿನ ಇಂಟರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ರೋಟರಿ ಮಡಿಕೇರಿ ವುಡ್ಸ್‌ನ ರೋಟೆರಿಯನ್ ಬಿ.ಜಿ.ಅನಂತಶಯನ, ಕಿರಣ್ ಕುಂದರ್, ವಸಂತ್ ಕುಮಾರ್ ಮತ್ತು ಕೆ.ಜಿ.ಹರೀಶ್ ಉದ್ಘಾಟಿಸಿದರು. ಜಿಲ್ಲಾ ರೋಟರಿ ಚೇರ್ ಮ್ಯಾನ್ ಬಿ.ಜಿ.ಅನಂತಶಯನ ಮಾತನಾಡಿ ಸಮುದಾಯ ಸೇವೆ ಮತ್ತು ನಾಯಕತ್ವದ ಮಹತ್ವವನ್ನು ವಿವರಿಸಿದರು. ರೋಟರಿ ಮಡಿಕೇರಿ ವುಡ್ಸ್ ಅಧ್ಯಕ್ಷ ಕಿರಣ್ ಕುಂದೆರ್ ಮಾತನಾಡಿ, ಇಂಟರಾಕ್ಟ್ ಕ್ಲಬ್  ರೋಟರಿ ಇಂಟರ್ನ್ಯಾಷನಲ್‌ನ ತತ್ವಗಳಿಂದ ಮಾರ್ಗದರ್ಶನ ಪಡೆದು ಅರ್ಥಪೂರ್ಣ ಸೇವೆ, ನಾಯಕತ್ವ ಅಭಿವೃದ್ಧಿಯೊಂದಿಗೆ ಉತ್ತಮ ಕಾರ್ಯಕ್ರಮ ಹಮ್ಮಿಕೊಳ್ಳುವಂತಾಗಲಿ ಎಂದರು. ವೇದಿಕೆಯಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಶಾಹಿದ್ ಆಲಿ, ಪ್ರಾಂಶುಪಾಲರಾದ ಎಂ.ಎಂ.ಕವಿತಾ ಹಾಗೂ ಎಂ.ಜಿ.ಗಗನ್  ಉಪಸ್ಥಿತರಿದ್ದರು. ಪ್ರಸಕ್ತ ಶೈಕ್ಷಣಿಕ ಸಾಲಿನ ಪದಾಧಿಕಾರಿಗಳನ್ನು ಇಂಟರಾಕ್ಟ್ ಕ್ಲಬ್ ಅಧ್ಯಕ್ಷೆ 10ನೇ ತರಗತಿ ವಿದ್ಯಾರ್ಥಿನಿ ಆಯಿಷ ಪರಿಚಯಿಸಿದಳು. ನೂತನ ಪದಾಧಿಕಾರಿಗಳಿಂದ ಪ್ರಮಾಣ ವಚನ ಸ್ವೀಕರಿಸಲಾಯಿತು.

Read More

ವಿರಾಜಪೇಟೆ ಆ.8 NEWS DESK :  ಆಧುನಿಕ ಜೀವನ ಶೈಲಿಯಿಂದ ಕೃಷಿ ಭೂಮಿಯಿಂದ ದೂರ ಉಳಿದ ಯುವ ಜನತೆ ಒಂದು ದಿನವಾದರೂ ಕೃಷಿ ಭೂಮಿಯ ಸಂಪರ್ಕಕ್ಕೆ ಬಂದು ರೈತಾಪಿ ಬದುಕಿನ ಅನುಭವ ಪಡೆಯಬೇಕು ಎಂದು ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಾಲ್ಡಾನಾ ಅಭಿಪ್ರಾಯಪಟ್ಟರು. ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ವತಿಯಿಂದ ಕಾಲೇಜಿನ ವಿದ್ಯಾರ್ಥಿಗಳಿಗೆ ಬಿಟ್ಟಂಗಾಲದ ನಿವೃತ್ತ ಪೊಲೀಸ್ ಬಿ.ಡಿ.ಮಂದಪ್ಪ ಅವರ ಗದ್ದೆಯಲ್ಲಿ ಆಯೋಜಿಸಲಾಗಿದ್ದ ಕ್ರೀಡಾಕೂಟವನ್ನು ಉದ್ದೇಶಿಸಿ ಮಾತನಾಡಿದರು. ಇತ್ತೀಚಿನ ವರ್ಷದಲ್ಲಿ ಯುವಜನತೆ ಕೃಷಿ ಭೂಮಿಯಿಂದ ದೂರ ಸರಿಯುತ್ತಿದ್ದಾರೆ. ಅಲ್ಲದೆ ಹಿಂದಿನ ಕಾಲದಲ್ಲಿ ಕೃಷಿ ಭೂಮಿಯ ಜೊತೆಗೆ ಹೊಂದಿದ್ದ ಅವಿನಾಭಾವ ಸಂಬಂಧ ಕಡಿಮೆಯಾಗುತ್ತಿದೆ. ವರ್ಷದಲ್ಲಿ ಒಂದು ಬಾರಿಯಾದರೂ ವಿದ್ಯಾರ್ಥಿಗಳು ಕೃಷಿ ಭೂಮಿಯ ಅನುಭವ ಪಡೆಯಬೇಕು. ವಿದ್ಯಾರ್ಥಿಗಳು ತಮ್ಮ ಪ್ರತಿನಿತ್ಯದ ಮನೆ ಹಾಗೂ ಶಿಕ್ಷಣದ ಜಂಜಾಟವನ್ನು ಮರೆತು ಪ್ರಕೃತಿಯ ಮಧ್ಯೆ ಕೃಷಿಭೂಮಿ, ನೀರು, ಕೆಸರು, ಮಳೆ ಮುಂತಾದವುಗಳ ಅನುಭವವನ್ನು ಪಡೆದು ಸಂಭ್ರಮಿಸಿ ದೈಹಿಕ ಹಾಗೂ ಮಾನಸಿಕವಾಗಿ ಪುನಶ್ಚೇತನಗೊಳಿಸಲು ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ…

Read More

ಮಡಿಕೇರಿ ಆ.8 NEWS DESK : ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮಡಿಕೇರಿಯ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಭಕ್ತರಿಗೆ ಅರಿಶಿನ, ಕುಂಕುಮ, ಬಳೆ ವಿತರಿಸಲಾಯಿತು. ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ  ಚುಮ್ಮಿ ದೇವಯ್ಯ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

Read More

ಪುತ್ತೂರು ಆ.8 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಐಇಇಇ ವಿದ್ಯಾರ್ಥಿ ವಿಭಾಗ, ಗ್ಲೋಬಲ್ ಡಿಗ್ರೀಸ್ ಮಣಿಪಾಲ್, ಇನ್ಸ್ಟಿಟ್ಯೂಶನ್ಸ್ ಇನ್ನೋವೇಶನ್ ಸೆಲ್ ಮತ್ತು ಕೆನರಾ ಬ್ಯಾಂಕ್ ಇದರ ಸಂಯುಕ್ತ ಆಶ್ರಯದಲ್ಲಿ ನಿರ್ವಹಣೆ ಮತ್ತು ತಂತ್ರಜ್ಞಾನದಲ್ಲಿ ಹೊಸಯುಗ ಎನ್ನುವ ಕುರಿತು 3 ನೇ ಅಂತಾರಾಷ್ಟ್ರೀಯ ಸಮ್ಮೇಳನ ದೃಷ್ಟಿ-2025 ಆ.9 ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ನಡೆಯಲಿದೆ. ಪ್ರಪಂಚದಾದ್ಯಂತ ಶಿಕ್ಷಣ ತಜ್ಞರು, ಸಂಶೋಧಕರು ವಿದ್ಯಾರ್ಥಿಗಳು ಮತ್ತು ಉದ್ಯಮ ಕ್ಷೇತ್ರದ ತಜ್ಞರನ್ನು ಒಟ್ಟುಗೂಡಿಸಿ, ನಿರ್ವಹಣೆ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಬಗ್ಗೆ ಬೆಳಕುಚೆಲ್ಲುವ, ಚರ್ಚೆ ಹಾಗೂ ವಿಚಾರ ವಿನಿಮಯವನ್ನು ನಡೆಸುವ ಉದ್ದೇಶದಿಂದ ಇದನ್ನು ಸಂಘಟಿಸಲಾಗಿದ್ದು ಇದಕ್ಕೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸುಮಾರು 280ಕ್ಕೂ ಮಿಕ್ಕಿ ಸಂಶೋಧನಾ ಪ್ರಬಂಧಗಳನ್ನು ಪ್ರಸ್ತುತಿಗಾಗಿ ಸ್ವೀಕರಿಸಲಾಗಿದೆ. ಅಂದು ಬೆಳಿಗ್ಗೆ 9.15ಕ್ಕೆ ಉದ್ಘಾಟನಾ ಸಮಾರಂಭವು ನಡೆಯಲಿದ್ದು ಕೆನರಾ ಬ್ಯಾಂಕಿನ ಪುತ್ತೂರು ವಿಭಾಗದ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ರಂಜನ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಗ್ಲೋಬಲ್ ಡಿಗ್ರೀಸ್ ಮಣಿಪಾಲ್…

Read More

ಸುಂಟಿಕೊಪ್ಪ ಆ.8 NEWS DESK : ಚೆಟ್ಟಳ್ಳಿಯಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ. ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಮನೆ ಪೂವಯ್ಯ ಎಂಬವರ ತೋಟಕ್ಕೆ ನಿರಂತರ ದಾಳಿ ಮಾಡುತ್ತಿರುವ ಕಾಡಾನೆಗಳು ಕಾಫಿ, ಕರಿಮೆಣಸು, ಬಾಳೆಗಿಡಗಳನ್ನು ನಾಶ ಪಡಿಸಿದೆ. ನಷ್ಟ ಪರಿಹಾರಕ್ಕಾಗಿ ಹಲವು ಅರಣ್ಯ ಇಲಾಖೆಗೆ ಮನವಿ ಸಲ್ಲಿಸಲದರೂ ಯಾವುದೇ ಪ್ರಯೋಜವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಪೂವಯ್ಯ, ಕಾಡಾನೆ ತಡೆಗೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಆಹಾರ ಅರಸಿ ಬರುವ ಕಾಡಾನೆಗಳು ಮರಳಿ ಕಾಡಿಗೆ ಹಿಂತೆರಳದೆ ಸುತ್ತಮುತ್ತಲಿನ ತೋಟಗಳಲ್ಲಿ ಸಂಚರಿಸುತ್ತಿದ್ದು, ಕೂಲಿ ಕಾರ್ಮಿಕರು ತೋಟಗಳಲ್ಲಿ ಕೆಲಸ ಮಾಡಲು ಆತಂಕ ಪಡುವಂತಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಓಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Read More

ಸುಂಟಿಕೊಪ್ಪ ಆ.8 NEWS DESK : ಸಂತ ಮೇರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಸಂಘ ಉದ್ಘಾಟನೆಗೊಂಡಿತು. ಸಂತ ಮೇರಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಟ್ಟಗೇರಿ ಸಮೂಹ ಕಾಫಿ ತೋಟಗಳ ಮಾಲೀಕರು ಮತ್ತು ಉದ್ಯಮಿಗಳಾದ ದೊಡ್ಡಮನೆ ವಿಶಾಲ್ ಶಿವಪ್ಪ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ ಮತ್ತು ಬದುಕಿಗೆ ವಿದ್ಯಾಭ್ಯಾಸ ಮೂಲ ಆಧಾರ. ವಿದ್ಯಾಭ್ಯಾಸವು ಪಠ್ಯವನ್ನು ಮಾತ್ರವಲ್ಲದೆ ಕ್ರೀಡೆಯನ್ನು ಒಳಗೊಂಡಿದೆ. ಸಾಧನೆ ಮತ್ತು ಒಳ್ಳೆಯ ಬದುಕಿಗೆ ಏಕಾಗ್ರತೆ, ಕಠಿಣ ಪರಿಶ್ರಮ ಅಗತ್ಯ ಎಂದರು. ಯಾವುದೇ ಸಂದರ್ಭದಲ್ಲೂ ಆಸೆ ಆಮೀಷಗಳಿಗೆ ಬಲಿಯಾಗದಂತೆ ಸಲಹೆ ನೀಡಿದರು. ಜೊತೆಗೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅಗತ್ಯ ಸುಪುಷ್ಠದೇಹದಲ್ಲಿ ಸುಪುಷ್ಠ ಮನಸ್ಸು ಎಂಬ ಗ್ರೀಕ್ ನಾಣ್ಣುಡಿಯಂತೆ ಸದಾ ಎಚ್ಚರವಹಿಸಲು ಅವರು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ಮೇರಿ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕರಾದ ರೇ.ಪಾ.ವಿಜಯಕುಮಾರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯನಿ ಸಿಸ್ಟರ್ ಜೋವಿಟಾವಾಸ್ ಮತ್ತು ಸಂತ ಮೇರಿ ಶಿಕ್ಷಣ ಸಂಸ್ಥೆಯ ಮುಖ್ಯೋಪಾದ್ಯಾಯರಾದ ಸೆಲ್ವರಾಜ್…

Read More

ಸುಂಟಿಕೊಪ್ಪ ಆ.8 NEWS DESK : ಸಾಲವನ್ನು ನಾವುಗಳು ಯಾವ ಉದ್ದೇಶಕ್ಕೆ ಪಡೆಯುತ್ತೇವೆ ಅದನ್ನು ಅದೇ ಉದ್ದೇಶಕ್ಕೆ ವಿನಿಯೋಗಿಸಿದಲ್ಲಿ ಮಾತ್ರ ವೈಯಕ್ತಿಕ ಅಭಿವೃದ್ಧಿಯನ್ನು ಕಂಡುಕೊಂಡಿದ್ದೇವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅನ್ನಪೂರ್ಣ ಸ್ವಸಹಾಯ ಸಂಘದ 17ನೇ ವಾರ್ಷಿಕೋತ್ಸವದಲ್ಲಿ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ನಾಕೂರು-ಶಿರಂಗಾಲ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‍ಬೈಲ್ ಕಾರ್ಯಕ್ಷೇತ್ರದ ಅನ್ನಪೂರ್ಣ ಸ್ವ ಸಹಾಯ ಸಂಘದ 17ನೇ ವಾರ್ಷಿಕೋತ್ಸವ ಸಮಾರಂಭವು ಕಾನ್‍ಬೈಲ್‍ನಲ್ಲಿ ಆಯೋಜಿಸಲಾಗಿದ್ದು, ಸಮಾರಂಭದಲ್ಲಿ ಶ್ರೀ.ಕ್ಷೆ.ಧ.ಗ್ರಾ.ಯೋ ವತಿಯಿಂದ ಸಂಘದ ಸದಸ್ಯರಿಗೆ ವಿದ್ಯಾ ನಿಧಿಯಿಂದ ಮಕ್ಕಳ ಉನ್ನತ ಶಿಕ್ಷಣ, ಸ್ವಂತಸೂರು, ವ್ಯಾಪಾರಕ್ಕೆ, ವಾಹನಗಳಿಗೆ ಸಾಲ ಸೌಲಭ್ಯ ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ನೀಡುತ್ತಿದೆ. ನಾವು ಸಾಲ ಪಡೆದುಕೊಳ್ಳುವ ಮೊದಲು ಅದರ ಸಾಧಕ ಬಾಧಕಗಳ ಅರಿತುಕೊಂಡು ಅದರಂತೆ ಯೋಜನೆಗಳನ್ನು ರೂಪಿಸಿಕೊಂಡು ಸಾಲವನ್ನು ಪಡೆದುಕೊಂಡಿದ್ದೇವೆ. ಸಾಲ ಪಡೆದ ಮೊಬಲಗನ್ನು ನಾವು ಮುಂದೆಯೇ ನಿರ್ಧರಿಸಿದ ಯೋಜನೆಗೆ ವಿನಿಯೋಗಿಸಿರುವುದರಿಂದ ನಾವುಗಳು ವೈಯಕ್ತಿಕ ಅಭಿವೃದ್ಧಿಯನ್ನು ಹೊಂದಲು ಸಾಧ್ಯ ಎಂದು ಸಂಘದ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.…

Read More