ಲೇಖಕ: admin

ಮಡಿಕೇರಿ NEWS DESK ಆ.8 : ಚೇರಂಬಾಣೆ ಬೇಂಗ್ ನಾಡ್ ಕೊಡವ ಸಮಾಜಕ್ಕೆ 2025 ರಿಂದ 2030 ರವರೆಗಿನ ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಬಾಚರಣಿಯಂಡ ದಿನೇಶ್ ಗಣಪತಿ, ಕಾರ್ಯದರ್ಶಿಯಾಗಿ ಕೇಕಡ ರೋಮಿ ಮೊಣ್ಣಪ್ಪ, ಉಪಾಧ್ಯಕ್ಷರಾಗಿ ಖಾಯಂ ನಿರ್ದೇಶಕರಾದ ಪಟ್ಟಮಾಡ ಮಂಜು ಪೊನ್ನಪ್ಪ, ನಿರ್ದೇಶಕರುಗಳಾಗಿ ನಾಪಂಡ ದೇವಯ್ಯ, ಬೊಳಂದಂಡ ಮುತ್ತಪ್ಪ, ಕುಂಚೆಟ್ಟಿರ ಪೆಮ್ಮಯ್ಯ, ಕಲ್ಲುಮಾಡಂಡ ಕಾರ್ಯಪ್ಪ, ಪೊಡನೋಳಂಡ ರೇಷ್ಮ ತೇಜ, ನಾಟೋಳಂಡ ಕುಶಾಲಪ್ಪ, ಅಜ್ಜಿನಂಡ ಚೀಯಣ್ಣ, ಅಯ್ಯಂಡ ಅಯ್ಯಪ್ಪ, ಬೊಪ್ಪಡತಂಡ ಕಿಶೋರ್, ಕೇಕಡ ಸುಗುಣ, ಚಡಿಯಂಡ ಬೋಪಯ್ಯ, ತೇಲಪಂಡ ಲಕ್ಷಿö್ಮ ಪೆಮ್ಮಯ್ಯ, ತೇಲಪಂಡ ಬೋಪಯ್ಯ, ಕೊಟ್ಟುಕತ್ತೀರ ಪೊನ್ನಣ್ಣ, ಮಂಗೇರಿರ ಸುಮಿತ ಗಂಗಮ್ಮ, ಮಹಿಳಾ ನಿರ್ದೇಶಕರಾಗಿ ಬಡ್ಡಿರ ನಳಿನಿ ಪೂವಯ್ಯ ಹಾಗೂ ಚಿಯೇಬೇರ ರೇಖಾ ಮುದ್ದಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದು, ಖಾಯಂ ನಿರ್ದೇಶಕರಾಗಿ ಪಟ್ಟಮಾಡ ಅಶೋಕ ತಿಮ್ಮಣ್ಣ ಮುಂದುವರೆಯಲಿದ್ದಾರೆ.

Read More

ಮಡಿಕೇರಿ ಆ.8 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮವು ಆಗಸ್ಟ್, 09 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕುಳುವ ಸಮಾಜದ ಜಿಲ್ಲಾಧ್ಯಕ್ಷರಾದ ಎಚ್.ಪಿ.ಮಹೇಶ್, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಬಿ.ಎಂ.ಬೆಳ್ಳಿಯಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್,…

Read More

ಮೈಸೂರು NEWS DESK ಆ. 7: ಆಂಧ್ರಪ್ರದೇಶದ ಖ್ಯಾತ ಧಾರ್ಮಿಕ ಕ್ಷೇತ್ರವಾದ ತಿರುಪತಿಗೆ ಸಾಂಸ್ಕೃತಿಕ ರಾಜಧಾನಿ ಮೈಸೂರು, ಮಂಡ್ಯ, ಚಾಮರಾಜನಗರದಿಂದ ಅತಿ ಹೆಚ್ಚು ಭಕ್ತರು ಪ್ರಯಾಣಿಸುತ್ತಿರುವುದರಿಂದ ಹೆಚ್ಚುವರಿ ರೈಲ್ವೆ ಸೇವೆ ಒದಗಿಸಬೇಕು ಎಂದು ಕೇಂದ್ರ ರೈಲ್ವೆ, ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವರಾದ ಅಶ್ವಿನ್‌ ವೈಷ್ಣವ್‌ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು *ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್* ತಿಳಿಸಿದ್ದಾರೆ. ನವದೆಹಲಿಯಲ್ಲಿ ರೈಲ್ವೆ ಸಚಿವರನ್ನು ಭೇಟಿ ಮಾಡಿ ತಿರುಪತಿ-ಬೆಂಗಳೂರು ನಡುವಿನ ವಂದೇಭಾರತ್‌ ರೈಲನ್ನು ಮೈಸೂರಿನವರೆಗೆ ವಿಸ್ತರಣೆ ಮಾಡಬೇಕು ಎಂದು ಮನವಿ ಸಲ್ಲಿಸಿದ ಬಳಿಕೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಆಂಧ್ರಪ್ರದೇಶದ ತಿರುಪತಿಯ ಧಾರ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರವಾಗಿದೆ. ಮೈಸೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರು ತಿರುಪತಿಗೆ ನಿರಂತರವಾಗಿ ಭೇಟಿ ನೀಡುತ್ತಿರುತ್ತಾರೆ. ಭಕ್ತರ ದೀರ್ಘಕಾಲದ ಬೇಡಿಕೆಯಂತೆ ತಿರುಪತಿ-ಬೆಂಗಳೂರು ವಂದೇ ಭಾರತ್‌ ರೈಲು ಸಂಚಾರವನ್ನು ಮೈಸೂರಿನವರೆಗೆ ವಿಸ್ತರಿಸಬೇಕು ಎಂದು ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಪ್ರಸ್ತುತ, ಅಸ್ತಿತ್ವದಲ್ಲಿರುವ ರೈಲು ಸೇವೆಗಳು ವಿರಳವಾಗಿವೆ. ಕೆಲವು ದೀರ್ಘ…

Read More

ಮಡಿಕೇರಿ NEWS DESK ಆ.7 : ರಾಜಾಸೀಟ್‌ನಲ್ಲಿ ‘ಗ್ಲಾಸ್ ಬ್ರಿಡ್ಜ್’ ನಿರ್ಮಾಣಕ್ಕೆ ನಮ್ಮ ತೀವ್ರ ವಿರೋಧವಿದ್ದು, ಉದ್ದೇಶಿತ ಯೋಜನೆ ಜಾರಿಗೆ ಮುಂದಾದಲ್ಲಿ ನಗರದ ನಿವಾಸಿಗಳ ಸಹಕಾರದೊಂದಿಗೆ ಬೃಹತ್ ಹೋರಾಟ ರೂಪಿಸುವುದಲ್ಲದೆ, ನ್ಯಾಯಾಲಯದ ಮೊರೆ ಹೋಗುವುದಾಗಿ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಾಸೀಟ್ ನಡುವಿನ ಸ್ಮಾರಕ ಪುರಾತತ್ವ ಇಲಾಖೆಗೆ ಒಳಪಡುತ್ತ್ತದೆ. ಯಾವುದೇ ಪುರಾತನ ಸ್ಮಾರಕಗಳ ವ್ಯಾಪ್ತಿಯಲ್ಲಿ ಯಾವುದೇ ನಿರ್ಮಾಣ ಕಾರ್ಯಗಳು ನಡೆಯಕೂಡದೆನ್ನುವ ನಿಯಮಗಳಿದೆ. ಹೀಗಿದ್ದೂ ಕಾಂಗ್ರೆಸ್ ಆಡಳಿತ ವ್ಯವಸ್ಥೆ ಜನರಿಗೆ ಸಂಕಷ್ಟವನ್ನು ತಂದೊಡ್ಡುವ ‘ಗ್ಲಾಸ್ ಬ್ರಿಡ್ಜ್’ನ್ನು ಅಭಿವೃದ್ಧಿಯ ಹೆಸರಿನಲ್ಲಿ ನಿರ್ಮಿಸಲು ಮುಂದಾಗಿರುವುದು ಸರಿಯಾದ ಕ್ರಮವಲ್ಲವೆಂದು ಅಸಮಾಧಾ ವ್ಯಕ್ತಪಡಿಸಿದರು. ರಾಜಾಸೀಟ್ ಬಳಿಯಲ್ಲೆ ಇರುವ ಚಾಮುಂಡೇಶ್ವರಿ, ಇಂದಿರಾ ನಗರ ಬಡಾವಣೆ ವ್ಯಾಪ್ತಿಯಲ್ಲಿ ಕೆಲ ವರ್ಷಗಳ ಹಿಂದಿನ ಭಾರೀ ಮಳೆೆಯ ಸಂದರ್ಭ ಬಿರುಕು ಕಾಣಿಸಿಕೊಂಡಿತ್ತು. ಪಕ್ಕದಲ್ಲೇ್ಲ ಇರುವ ರಾಜಾಸೀಟ್‌ನಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಾಣವಾದರೆ ಭವಿಷ್ಯದಲ್ಲಿ ಅವಘಡಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. *ಬಾಂಗ್ಲಾ ದೇಶಿಗರನ್ನು ಪತ್ತೆ ಹಚ್ಚಿ*…

Read More

ಮಡಿಕೇರಿ NEWS DESK ಆ.7 : ಚೆಂಬು ಗ್ರಾಮ ವ್ಯಾಪ್ತಿಯ ದಬ್ಬಡ್ಕ-ಚೆಂಬು ಮತ್ತು ಊರುಬೈಲು ಚೆಂಬು ಪ್ರದೇಶಗಳಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು, ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದಾರೆ. ಕ್ಷೇತ್ರದ ಶಾಸಕರು ತಕ್ಷಣ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಸಂಪಾಜೆ ವಲಯ ಅರಣ್ಯಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಚೆಂಬು ಸಾರ್ವಜನಿಕ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಸಚಿನ್ ಕೆದಂಬಾಡಿ ಹಾಗೂ ಕಾರ್ಯದರ್ಶಿ ಪುಂಡರೀಕ ಅರಂಬೂರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರತಿದಿನ ಕೃಷಿಕರ ತೋಟಗಳಿಗೆ ಕಾಡಾನೆಗಳು ನುಗ್ಗಿ ಅಡಿಕೆ, ತೆಂಗು, ಬಾಳೆ ಮತ್ತಿತರ ಕೃಷಿ ಫಸಲನ್ನು ತಿಂದು ಅಪಾರ ನಷ್ಟ ಉಂಟು ಮಾಡುತ್ತಿದ್ದು, ಕೃಷಿಕರ ಬದುಕೇ ದುಸ್ತರವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಒಂಟಿಸಲಗವೊAದು ಗ್ರಾಮದಲ್ಲೇ ಬೀಡುಬಿಟ್ಟಿದ್ದು, ಜನ ಆತಂಕದಲ್ಲೇ ದಿನದೂಡುವಂತಾಗಿದೆ. ವಿದ್ಯಾರ್ಥಿಗಳು ಶಾಲೆಗೆ ತೆರಳಲು ಭಯ ಪಡುವಂತ್ತಾಗಿದೆ. ಈ ಬಗ್ಗೆ ಅರಣ್ಯ ಇಲಾಖೆಯ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದಾರೆ. ಈಗಾಗಲೇ ಗ್ರಾಮಸ್ಥರು ಸಮಿತಿಯೊಂದನ್ನು…

Read More

ಮಡಿಕೇರಿ ಆ.7 NEWS DESK : ಮಾಸಿಕ ಕನಿಷ್ಟ 10 ಸಾವಿರ ರೂ. ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಆಶಾ ಕಾರ್ಯಕರ್ತೆಯರಿಂದ ಆ.12 ರಿಂದ 14ರ ವರೆಗೆ ರಾಜ್ಯಾದ್ಯಂತ ಅಹೋರಾತ್ರಿ ಪ್ರತಿಭಟನೆ ನಡೆಯಲಿದೆ. ಇದರ ಭಾಗವಾಗಿ ಮಡಿಕೇರಿಯಲ್ಲಿ ಕೂಡ ಮೂರು ದಿನಗಳ ಕಾಲ ಸಮಾವೇಶ ಮತ್ತು ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಉಪಾಧ್ಯಕ್ಷೆ ಎಂ.ಉಮಾದೇವಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆಯ ಕಾರಣದಿಂದ ಮಡಿಕೇರಿಯಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲು ಸಾಧ್ಯವಾಗದಿರುವುದರಿಂದ ಆ.12, 13 ಹಾಗೂ 14 ರಂದು ಕೆಲಸ ಸ್ಥಗಿತಗೊಳಿಸಲಾಗುವುದು. ಆ.12 ರಂದು ನಗರದ ಬಾಲಭವನದಿಂದ ಜನರಲ್ ತಿಮ್ಮಯ್ಯ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದರು. ಕಳೆದ ಜನವರಿಯಲ್ಲಿ ನಡೆದ ಹೋರಾಟದ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ 10 ಸಾವಿರ ರೂ. ಗೌರವಧನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಏಳು ತಿಂಗಳು ಕಳೆದರೂ…

Read More

ಮಡಿಕೇರಿ ಆ.7 NEWS DESK : ಬ್ರೈನೋಬ್ರೈನ್ ಇಂಟರ್ ನ್ಯಾಷನಲ್ ದುಬೈ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಬೆಂಗಳೂರಿನ ನಿಮ್ಹಾನ್ಸ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 166ನೇ ರಾಜ್ಯ ಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ-2025 ರಲ್ಲಿ ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ 67 ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಶೇ.100ರಷ್ಟು ಫಲಿತಾಂಶದೊಂದಿಗೆ 36 ಚಾಂಪಿಯನ್ ಟ್ರೋಫಿ, 22 ಚಿನ್ನದ ಪದಕ ಮತ್ತು 9 ಬೆಳ್ಳಿಯ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಸ್ಪರ್ಧೆಯಲ್ಲಿ ಕರ್ನಾಟಕದ ಒಟ್ಟು 80 ಬ್ರೈನೋಬ್ರೈನ್ ಕೇಂದ್ರಗಳಿಂದ ಸುಮಾರು 2100 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಡಿಕೇರಿ ಬ್ರೈನೋಬ್ರೈನ್ ಕೇಂದ್ರದ 67 ವಿದ್ಯಾರ್ಥಿಗಳು ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರ ನೇತೃತ್ವದಲ್ಲಿ ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿದರು. ಕೇವಲ 3 ನಿಮಿಷಗಳಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತೀ ಚುರುಕಾಗಿ ಮಾಡುವ ಮೂಲಕ ಮಡಿಕೇರಿ ‘ಬ್ರೈನೋಬ್ರೈನ್’ ಕೇಂದ್ರಕ್ಕೆ “ಬೆಸ್ಟ್ ಪ್ರಾಂಚೈಸಿ” ಮತ್ತು “ಬೆಸ್ಟ್ ಫ್ಯಾಕಲ್ಟಿ” ಪ್ರಶಸ್ತಿ ಲಭಿಸಿದೆ. ವಿದ್ಯಾರ್ಥಿಗಳ ಕಠಿಣ ಪರಿಶ್ರಮದ ಸಾಧನೆಯ ಹೆಗ್ಗಳಿಕೆಯು ತಮ್ಮ ತರಗತಿಯ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಸಲ್ಲಬೇಕು,…

Read More

ಮಡಿಕೇರಿ ಆ.7 NEWS DESK : ವಿಶ್ವ ರಾಷ್ಟ್ರ ಸಂಸ್ಥೆಯ ಜಾಗತಿಕ ಆದಿಮ ಸಂಜಾತ ಜನಾಂಗಗಳ ಹಕ್ಕುಗಳ ದಿನಾಚರಣೆಯ ಅಂಗವಾಗಿ ಆ.9 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೆಳಿಗ್ಗೆ 10.30 ಗೆ ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿ ಕೊಡವರ ಪರವಾದ ವಿವಿಧ ಹಕ್ಕುಗಳನ್ನು ಮಂಡಿಸಲಾಗುವುದು ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಸಾಂವಿಧಾನಿಕ ಹಕ್ಕುಗಳಿಂದ ವಂಚಿತವಾಗಿರುವ ಆದಿಮಸಂಜಾತ ಕೊಡವ ಬುಡಕಟ್ಟು ಜನರ ಬೇಡಿಕೆಗಳ ಬಗ್ಗೆ ದೇಶದ ಆಡಳಿತ ವ್ಯವಸ್ಥೆ ಮತ್ತು ವಿಶ್ವದ ಗಮನ ಸೆಳೆಯವ ಸಲುವಾಗಿ ಧರಣಿ ನಡೆಸಲಾಗುತ್ತಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕೊಡವರು ಈ ಪವಿತ್ರ ಕೊಡವ ನೆಲದ ಮೂಲನಿವಾಸಿ ಆದಿಮಸಂಜಾತ ಬುಡಕಟ್ಟು ಸಮುದಾಯದವರಾಗಿದ್ದಾರೆ. ಕೊಡವರಿಗಿರುವ ಏಕೈಕ ನೆಲೆ ಕೊಡವ ಲ್ಯಾಂಡ್ ಕೊಡವರ ಸಾಂಪ್ರದಾಯಿಕ ಹಾಗೂ ಅವಿಭಾಜ್ಯ ಮಾತೃಭೂಮಿಯಾಗಿದೆ. ಕೊಡವರ ಜನ್ಮಭೂಮಿ ಈ ಭೂಮಂಡಲದಷ್ಟೇ ಪ್ರಾಚೀನವಾಗಿದೆ. ಕೊಡವ ಬುಡಕಟ್ಟು ಜನಾಂಗವು ಮಾನವ ಜನಾಂಗದಷ್ಟೇ ಹಳೆಯದಾಗಿದೆ. ಈ ಕೊಡವ ಮಣ್ಣಿನಲ್ಲಿ ನಮ್ಮ…

Read More

ಪುತ್ತೂರು ಆ.7 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರದಾನ ಕಾರ್ಯಕ್ರಮ ಸಮಾವರ್ತನ ಸಮಾರಂಭವು ಆ.9 ರಂದು ಕಾಲೇಜಿನ ಸಾವರ್ಕರ್ ಸಭಾಭವನದಲ್ಲಿ ನಡೆಯಲಿದೆ. 2024-25ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದವೀದರರಾದ ಅರ್ಹ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ರ್ಯಾಂಕ್ ಗಳಿಸಿಕೊಂಡಿರುವ ಸುಚಿತಾ, ಪ್ರಜ್ಞಾಶಂಕರಿ, ಸಿಂಚನಲಕ್ಷ್ಮಿ, ಶ್ರೀಲಕ್ಷ್ಮಿ.ವಿ, ರÀವಿನಾರಾಯಣ.ಕೆ.ಎಸ್, ರಾಹುಲ್.ಕೆ, ಲಿಖಿತ.ಕೆ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. ಪ್ರತಿ ವಿಭಾಗದಲ್ಲಿ ಶೈಕ್ಷಣಿಕವಾಗಿ ಉನ್ನತ ಸಾಧನೆಯನ್ನು ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ ಕಾರ್ಯಕ್ರಮವೂ ನಡೆಯುತ್ತದೆ. ಅಂದು ಬೆಳಿಗ್ಗೆ 10 ಗಂಟೆಗೆ ಈ ಸಮಾರಂಭ ನಡೆಯಲಿದ್ದು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ಹಾಗೂ ನಿರ್ದೇಶಕ ಬಲರಾಮ ಆಚಾರ್ಯ.ಜಿ ವಿಶೇಷ ಆಹ್ವಾನಿತರಾಗಿ ಆಗಮಿಸುತ್ತಾರೆ. ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು,…

Read More

ಮಡಿಕೇರಿ ಆ.7 NEWS DESK : ಕೊಡಗು ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯ ಹೆಡ್ ಕಾನ್ಸಟೇಬಲ್ ಮೂಲತ: ಚಾಮರಾಜನಗರ ಜಿಲ್ಲೆಯ ಎಂ.ಎನ್.ವಿಜಯ (47) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.  ಪೊಲೀಸ್ ಹೆಡ್ ಕಾನ್ಸಟೇಬಲ್ ಎಂ.ಎನ್.ವಿಜಯ ಅವರು ಕೊಡಗು ಜಿಲ್ಲಾ ಸಶಸ್ತ್ರ ಪಡೆಯಲ್ಲಿ 1997ರ ಆಗಸ್ಟ್ 1 ರಂದು ಕರ್ತವ್ಯಕ್ಕೆ ನೇಮಕಗೊಂಡು ಸುಮಾರು 28 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಮಡಿಕೇರಿಯ ಪೊಲೀಸ್ ಮೈತ್ರಿ ಭವನದ ಉಸ್ತುವಾರಿಯಾಗಿದ್ದ ಇವರು ಪೊಲೀಸ್ ಬ್ಯಾಂಡ್ ಮಾಸ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆ.6 ರಂದು ರಾತ್ರಿ ಎದೆನೋವು ಕಾಣಿಸಿಕೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತ್ತಾದರು ಚಿಕಿತ್ಸೆ ಫಲಿಸದೆ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಎಂ.ಎನ್.ವಿಜಯ ಅವರ ನಿಧನಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಸಂತಾಪ ಸೂಚಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು. ಗುರುವಾರ ಬೆಳಿಗ್ಗೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ವಿಜಯ ಅವರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.…

Read More