ಲೇಖಕ: admin

ಸುಂಟಿಕೊಪ್ಪ, NEWS DESK ಅ.2: ಕೊಡಗು ಮಹಿಳಾ ಕಾಫಿ ಜಾಗೃತಿ ಸಂಘದ ವತಿಯಿಂದ ಸುಂಟಿಕೊಪ್ಪದ ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದಲ್ಲಿ ಅಂತರರಾಷ್ಟ್ರೀಯ ಕಾಫಿ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಸ್ವಸ್ಥ ಸಂಸ್ಥೆಯ ವಿಶೇಷ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಬಳಿಕ ಅತಿಥಿಗಳ ವತಿಯಿಂದ ಮಕ್ಕಳಿಗೆ ವಿಶೇಷ ಔತಣದ ವ್ಯವಸ್ಥೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕೊಡಗು ಮಹಿಳಾ ಕಾಫಿ ಜಾಗೃತಿ ಸಂಘದ ಅಧ್ಯಕ್ಷೆ ಜುಥಿಕ ಬೋಪಣ್ಣ, ಸುಂಟಿಕೊಪ್ಪ ಪ್ರಾಂತ್ಯದ ಮುಖ್ಯಸ್ಥೆ ಸುಮಾ ತಿಮ್ಮಯ್ಯ, ಕಾನೂರು ಪ್ರಾಂತ್ಯದ ಮುಖ್ಯಸ್ಥೆ ರಮ್ಯಾ ನರೇನ್ ಸೇರಿದಂತೆ ಸಂಘದ ಸದಸ್ಯರು ಭಾಗವಹಿಸಿದ್ದರು. ಸ್ವಸ್ಥ ಸಂಸ್ಥೆಯ ನಿರ್ದೇಶಕಿ ಆರತಿ ಸೋಮಯ್ಯ, ಶಿಕ್ಷಕರು ಹಾಗೂ ಸಂಸ್ಥೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಬಾಳೆಲೆ, NEWS DESK ಅ.2: ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಕಾಲೇಜು ಆವರಣವನ್ನು ಸ್ವಚ್ಛಗೊಳಿಸಲಾಯಿತು. ಬಳಿಕ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಅಧ್ಯಾಪಕ ರಾಘವೇಂದ್ರ ಅವರು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜೀವನ ಚರಿತ್ರೆ, ದೇಶಕ್ಕಾಗಿ ಅವರು ನೀಡಿದ ಕೊಡುಗೆಗಳ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಪ್ರತಿಭಾ ಉತ್ತಪ್ಪ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಗೋಣಿಕೊಪ್ಪ, NEWS DESK ಅ.2: ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಗೋಣಿಕೊಪ್ಪಲು ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಿ, ಇಬ್ಬರು ಮಹನೀಯರ ಹೋರಾಟದ ಬದುಕು, ಸರಳತೆ ಹಾಗೂ ದೇಶ ಸೇವೆಯ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜಗದೀಶ್ ಜೋಡುಬೀಟಿ ಮಾತನಾಡಿ, ಗಾಂಧೀಜಿ ಹಾಗೂ ಶಾಸ್ತ್ರಿಯವರ ಸರಳ ಬದುಕು, ಹೋರಾಟದ ಹಾದಿ ಮತ್ತು ದೇಶದ ಬಗೆಗಿನ ಬದ್ಧತೆಯನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಅವರ ಆದರ್ಶಗಳು ನಮ್ಮ ಬದುಕಿಗೆ ಬೆಳಕಾಗಲಿವೆ. ಮಹನೀಯರ ಜೀವನಚರಿತ್ರೆ ತಿಳಿದುಕೊಳ್ಳುವುದು ವಿದ್ಯಾರ್ಥಿಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಮಹಾತ್ಮ ಗಾಂಧೀಜಿ ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿ ನಿಂತು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡುವುದರ ಜತೆಗೆ ಸ್ವಚ್ಛತೆ, ಬಡತನ ನಿರ್ಮೂಲನೆ ಹಾಗೂ ಸಾಮಾಜಿಕ ಸಮಾನತೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು. ಅವರ ಸರಳತೆ, ಸತ್ಯ ಮತ್ತು ಅಹಿಂಸೆಯ ತತ್ವಗಳು…

Read More

ಮಡಿಕೇರಿ, NEWS DESK ಅ.2: ಮಡಿಕೇರಿ ದಸರಾ ಜನೋತ್ಸವದ ಅಂಗವಾಗಿ ಮೂರನೇ ವರ್ಷದ ಕಾಫಿ ದಸರಾ ಆಯೋಜಿಸಲಾಗುತ್ತಿದ್ದು, ಇದರ ಅಂಗವಾಗಿ ಕಾಫಿಯಿಂದ ತಯಾರಿಸಲಾದ ವೈವಿಧ್ಯಮಯ ಖಾದ್ಯಗಳ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಕಾಫಿ ದಸರಾ ಸಂಚಾಲಕ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ. ಅಕ್ಟೋಬರ್ 14ರಂದು ಮಡಿಕೇರಿಯ ಗಾಂಧಿ ಮೈದಾನದ ಕಲಾಸಂಭ್ರಮ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ‘ಫ್ಲೇವರ್ಸ್ ಆಫ್ ಕಾಫಿ’ ಹೆಸರಿನಲ್ಲಿ ಖಾದ್ಯ ಸ್ಪರ್ಧೆಗಳು ನಡೆಯಲಿವೆ. ಸ್ಪರ್ಧೆಯಲ್ಲಿ ಕಾಫಿ ಫ್ಲೇವರ್ ಕೇಕ್, ಕಾಫಿ ಫ್ಲೇವರ್ ಕಪ್ ಕೇಕ್, ಕಾಫಿ ಫ್ಲೇವರ್ ಬ್ರೌನಿ, ಕಾಫಿ ಫ್ಲೇವರ್ ಚಾಕೊಲೇಟ್, ಪುಡ್ಡಿಂಗ್, ಕಾಫಿ ಫ್ಲೇವರ್ ಪಾನೀಯ ಹಾಗೂ ಕಾಫಿ ಫ್ಲೇವರ್‌ನಲ್ಲಿ ಹೊಸ ಪ್ರಯತ್ನ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ. ಆಸಕ್ತ ಸ್ಪರ್ಧಿಗಳು ಅಕ್ಟೋಬರ್ 10ರೊಳಗಾಗಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೇಪಾಡಂಡ ಸವಿತಾ ಕೀರ್ತನ್ – 6366 462413 ಅವರನ್ನು ಸಂಪರ್ಕಿಸಬಹುದು.

Read More

ಮಡಿಕೇರಿ, NEWS DESK ಅ.2 : ಉದಿಯನ ಅನಿಲ್ ಉಲ್ಲಾಸ್ ನಿರ್ದೇಶನದ ‘ಮುತ್ತು ನಾಡ್’ ಕಿರುಚಿತ್ರವು ಚಿಕಾಗೋ ಸ್ಕ್ರಿಪ್ಟ್ ಅವಾರ್ಡ್‌ನ ‘ಬೆಸ್ಟ್ ಒರಿಜಿನಲ್ ಸ್ಕ್ರೀನ್‌ಪ್ಲೇ’ ಪ್ರಶಸ್ತಿಗೆ ಭಾಜನವಾಗಿದೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಿತ್ರದ ನಿರ್ದೇಶಕ ಉದಿಯನ ಅನಿಲ್ ಉಲ್ಲಾಸ್, 2018ರ ಮುಂಗಾರು ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಗುಡ್ಡ ಕುಸಿತದಿಂದ ಮನೆ-ಮಠ ಹಾಗೂ ಬಂಧು-ಬಾಂಧವರನ್ನು ಕಳೆದುಕೊಂಡ ಕುಟುಂಬಗಳ ಅಂತರಾಳದ ನೋವು ಮತ್ತು ಅನುಭವಗಳನ್ನು ‘ಮುತ್ತು ನಾಡ್’ ಕಿರುಚಿತ್ರದ ಮೂಲಕ ಕಟ್ಟಿಕೊಡಲಾಗಿದೆ ಎಂದು ತಿಳಿಸಿದರು. ವಿಕೋಪದ ನಂತರದ ಬದುಕನ್ನು ಅತ್ಯಂತ ಪರಿಣಾಮಕಾರಿಯಾಗಿ ಚಿತ್ರಿಸುವ ಈ ಸಿನಿಮಾ, ಮೌನದ ಮೂಲಕ ನೋವು-ನಲಿವುಗಳನ್ನು ಪ್ರೇಕ್ಷಕರಿಗೆ ತಲುಪಿಸುವ ಸೂಕ್ಷ್ಮ ಸಂವೇದನೆಯೊಂದಿಗೆ ರೂಪಿಸಲಾಗಿದೆ. ಚಿತ್ರವು ಪ್ರೇಕ್ಷಕರ ವೀಕ್ಷಣೆಗೆ ಸಜ್ಜಾಗಿದೆ ಎಂದರು. ಮಡಿಕೇರಿ ಹಾಗೂ ಕಾಲೂರು ಭಾಗದಲ್ಲಿ ಪ್ರಸಕ್ತ ಸಾಲಿನ ಮೇ ಮತ್ತು ಜೂನ್ ತಿಂಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಸುಮಾರು 1 ಗಂಟೆ 30 ನಿಮಿಷಗಳ ಅವಧಿಯ ಈ ಚಿತ್ರದಲ್ಲಿ ಆರಂಭದಲ್ಲಿ ಅರೆಭಾಷೆಯ ಕೆಲವು…

Read More

ಮಡಿಕೇರಿ ಅ.2 NEWS DESK : ನಗರದ ಗಾಂಧಿ ಮಂಟಪದ ಬಳಿ ನಿರ್ಮಾಣವಾಗುತ್ತಿರುವ ಗಾಂಧಿ ಸ್ಮಾರಕ ಉದ್ಯಾನವನಕ್ಕೆ ಶಾಸಕರ ನಿಧಿಯಿಂದ 20 ಲಕ್ಷ ರೂ. ಬಿಡುಗಡೆ ಮಾಡಲಾಗಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರಸಭೆ, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ, ಕನ್ನಡ ಸಾಹಿತ್ಯ ಪರಿಷತ್ತು, ಸರ್ವೋದಯ ಸಮಿತಿ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜಾನಪದ ಪರಿಷತ್ತು ಇವರ ಸಹಕಾರದಲ್ಲಿ ನಗರದ ಗಾಂಧಿ ಭವನದಲ್ಲಿ ಶುಕ್ರವಾರ ನಡೆದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 157 ನೇ ಜನ್ಮ ವರ್ಷಾಚರಣೆ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ 122 ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಕರ್ನಾಟಕ ಸರ್ಕಾರ 100 ದಿನ ಪೂರೈಸಿದ ಹಿನ್ನೆಲೆ ‘ದೃಢ ಕರ್ನಾಟಕದ ಸಂಕಲ್ಪ’ ಶತಕದ ಪಥ ಪ್ರಗತಿಯ ರಥ…

Read More

ಮಡಿಕೇರಿ, NEWS DESK ಅ.2 : ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸಿ ಚುನಾವಣಾ ಅಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂತ್ ನಂಬರ್ 20ರ ಹಳೆಯ ಬೂತ್ ಹಾಗೂ 21ರ ಹೊಸ ಬೂತ್‌ನಲ್ಲಿ ಸುಮಾರು 60–65 ಫಾರಂ ನಂಬರ್ 7ಗಳಿಗೆ ಒಬ್ಬರೇ ವ್ಯಕ್ತಿ ಹತ್ತಾರು ಫಾರಂಗಳಿಗೆ ಸಹಿ ಹಾಕಿರುವುದು ಕಂಡುಬಂದಿದೆ ಎಂದು ಆರೋಪಿಸಿದರು. ಈ ಕುರಿತು ತಮ್ಮ ಪಕ್ಷದ ಬೂತ್ ಮಟ್ಟದ ಅಧಿಕಾರಿ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಡಿಯೋದಲ್ಲಿ ಮಹಿಳೆಯೊಬ್ಬರು, “ಫಾರಂ ನಂಬರ್ 7 ಅನ್ನು ಪಕ್ಷದ ಕಚೇರಿಯಲ್ಲೇ ನೀಡಲಾಗಿದೆ” ಎಂದು ಹೇಳಿರುವುದು ಕೇಳಿಬರುತ್ತಿದೆ. ಇದೇ ರೀತಿಯ ಘಟನೆಗಳು ಬೇರೆ ಪ್ರದೇಶಗಳಲ್ಲಿಯೂ ನಡೆಯುತ್ತಿರುವುದು ಕಂಡುಬಂದಿದೆ ಎಂದು…

Read More

ಮಡಿಕೇರಿ, NEWS DESK ಅ.2: ಕೊಡ್ಲಿಪೇಟೆ ಸಮೀಪದ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 64 ಅಲ್ಪಸಂಖ್ಯಾತ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಪ್ರಯತ್ನಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಮತದಾರರು ಹಾಗೂ ಕಾಂಗ್ರೆಸ್ ಮುಖಂಡರು ಕಂದಾಯ ಇಲಾಖೆ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ, ಸಮಗ್ರ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ ಉದ್ದೇಶದಿಂದ ಫಾರಂ-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸಲ್ಲಿಕೆಯಾಗಿರುವ ಎಲ್ಲಾ ಅರ್ಜಿಗಳನ್ನು ಚುನಾವಣಾ ಅಧಿಕಾರಿಗಳು ಪರಿಶೀಲಿಸಿ, ಅರ್ಜಿಗಳನ್ನು ಯಾರು ಸಲ್ಲಿಸಿದ್ದಾರೆ, ಯಾವ ಕಾರಣಗಳನ್ನು ನಮೂದಿಸಲಾಗಿದೆ ಹಾಗೂ ಹೆಸರುಗಳನ್ನು ಅಳಿಸಲು ಕಾನೂನುಬದ್ಧ ಕಾರಣಗಳಿವೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದರು. ರಾಜಕೀಯ ಉದ್ದೇಶದಿಂದ ಅರ್ಹ ಮತದಾರರ ಹಕ್ಕಿಗೆ ಧಕ್ಕೆ ತರುವ ಪ್ರಯತ್ನ ನಡೆದಿದ್ದರೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ತನಿಖೆಯಲ್ಲಿ ಆರೋಪಗಳು ಸತ್ಯವೆಂದು ದೃಢಪಟ್ಟರೆ ಸಂಬಂಧಪಟ್ಟವರ ವಿರುದ್ಧ ಪ್ರಕರಣ…

Read More

ಸುಂಟಿಕೊಪ್ಪ, NEWS DESK ಅ.2: ಇಂದಿನ ಸಮಾಜಕ್ಕೆ ಮಹಾತ್ಮ ಗಾಂಧೀಜಿಯವರ ಆದರ್ಶ ತತ್ವಗಳು ಅತ್ಯಂತ ಅಗತ್ಯವಾಗಿವೆ. ಇಂದಿನ ಯುವ ಪೀಳಿಗೆಯ ಬದುಕಿನ ಹಾದಿಯನ್ನು ಗಮನಿಸಿದರೆ, ಗಾಂಧೀಜಿಯವರ ತತ್ವಗಳನ್ನು ಮೈಗೂಡಿಸಿಕೊಂಡರೆ ಮಾತ್ರ ಉಜ್ವಲ ಭಾರತವನ್ನು ನಿರ್ಮಿಸಲು ಸಾಧ್ಯ ಎಂದು ಮಹಾತ್ಮ ಗಾಂಧಿ ಮೆಮೋರಿಯಲ್ ಟ್ರಸ್ಟ್‌ನ ಕಾರ್ಯದರ್ಶಿ ಡೆನಿಸ್ ಡಿ’ಸೋಜ ಅಭಿಪ್ರಾಯಪಟ್ಟರು. ಎಸ್.ಎಂ.ಜಿ.ಎಂ. ಟ್ರಸ್ಟ್ ವತಿಯಿಂದ ಹರದೂರಿನಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಗಾಂಧೀಜಿಯವರ ಬದುಕು ಮತ್ತು ಆದರ್ಶಗಳ ಕುರಿತು ಯುವಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಎಲ್ಲಾ ವಿದ್ಯಾಸಂಸ್ಥೆಗಳು ಹಾಗೂ ಸರ್ಕಾರ ಕಾರ್ಯೋನ್ಮುಖವಾಗುವ ಅಗತ್ಯವಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದ ಸ್ವಾಗತವನ್ನು ಟ್ರಸ್ಟ್‌ನ ಸಂಚಾಲಕ ಎಂ.ಇ. ಮೊಹಿದ್ದೀನ್ ನೆರವೇರಿಸಿದರು. ಕೊನೆಯಲ್ಲಿ ಟ್ರಸ್ಟಿ ಕರ್ನಲ್ ಬಿ.ಜಿ.ವಿ. ಕುಮಾರ್ ವಂದನಾರ್ಪಣೆ ಮಾಡಿದರು.

Read More

ಮಡಿಕೇರಿ, NEWS DESK ಅ.02: ಶ್ರೀ ಸಾಯಿ ಈವೆಂಟ್ಸ್ ವತಿಯಿಂದ ಮಡಿಕೇರಿಯಲ್ಲಿ ಮೂರು ದಿನಗಳ “ನಮ್ಮ ಮಡಿಕೇರಿ ಫುಡ್ ಫೆಸ್ಟಿವಲ್ ಹಾಗೂ ಬೃಹತ್ ಲೈಫ್‌ಸ್ಟೈಲ್ ಎಕ್ಸಿಬಿಷನ್” ಆಯೋಜಿಸಲಾಗಿದೆ. ಅಕ್ಟೋಬರ್ 2, 3 ಮತ್ತು 4ರಂದು ಶುಕ್ರವಾರ, ಶನಿವಾರ ಹಾಗೂ ಭಾನುವಾರ ಮೂರು ದಿನಗಳ ಕಾಲ ಬೆಳಿಗ್ಗೆ 10ರಿಂದ ರಾತ್ರಿ 10ರವರೆಗೆ ಮೇಳ ನಡೆಯಲಿದೆ. ಮೇಳದಲ್ಲಿ ಮಹಿಳಾ ಉದ್ಯಮಿಗಳಿಂದ ವಿವಿಧ ರೀತಿಯ ಮಾರಾಟ ಮಳಿಗೆಗಳನ್ನು ತೆರೆಯಲಾಗಿದ್ದು, ಸೀರೆಗಳು, ಕುರ್ತಾಗಳು, ಜ್ಯುವೆಲ್ಸ್, ಬೆಡ್‌ಶೀಟ್‌ಗಳು, ಹ್ಯಾಂಡ್‌ಬ್ಯಾಗ್‌ಗಳು, ರೆಡಿಮೇಡ್ ಬ್ಲೌಸ್‌ಗಳು, ಗೃಹೋಪಯೋಗಿ ವಸ್ತುಗಳು, ಅಲಂಕಾರಿಕ ಸಸ್ಯಗಳು, ಮೆಹಂದಿ, ವಿಶೇಷ ತಿಂಡಿ-ತಿನಿಸುಗಳು ಸೇರಿದಂತೆ ವಿವಿಧ ವಸ್ತುಗಳ ಮಾರಾಟ ಮತ್ತು ಪ್ರದರ್ಶನ ನಡೆಯಲಿದೆ. ಮಡಿಕೇರಿಯ ರೇಸ್‌ಕೋರ್ಸ್ ರಸ್ತೆಯ ಟಾಟಾ ಕಾರ್ ಶೋರೂಮ್ ಎದುರಿನ ಕಾವೇರಿ ಮ್ಯಾರೇಜ್ ಹಾಲ್ನಲ್ಲಿ ಮೇಳ ನಡೆಯುತ್ತಿದ್ದು, ಸಾರ್ವಜನಿಕರಿಗೆ ಪ್ರವೇಶ ಉಚಿತವಾಗಿದೆ. ಮೂರು ದಿನಗಳ ಕಾಲ ನಡೆಯಲಿರುವ ಈ ಬೃಹತ್ ಮಾರಾಟ ಮತ್ತು ಪ್ರದರ್ಶನ ಮೇಳದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿವಿಧ ಉತ್ಪನ್ನಗಳು ಹಾಗೂ ವಿಶೇಷ…

Read More