ಮಡಿಕೇರಿ NEWS DESK ಸೆ.2 : ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದ ಸುಪ್ರೀಂ ಕೋರ್ಟ್‌ನ ಶಬ್ದ ಮಾಲಿನ್ಯ (ನಿಯಂತ್ರಣ ಮತ್ತು ನಿಯಮಾವಳಿ), 2000 ನಿಯಮಗಳನ್ನು ಸಾರ್ವಜನಿಕರು ಹಾಗೂ ಕಾರ್ಯಕ್ರಮಗಳ ಆಯೋಜಕರು ಕಡ್ಡಾಯವಾಗಿ ಪಾಲಿಸುವಂತೆ ಕೊಡಗು ಜಿಲ್ಲಾ ಪೊಲೀಸರು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ರೀತಿಯ ಡಿಜೆ ಅಥವಾ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ವಿವಿಧ ಪ್ರದೇಶಗಳಿಗೆ ನಿಗದಿಪಡಿಸಿರುವ ಡೆಸಿಬಲ್ ಮಿತಿಯನ್ನು ಮೀರಿಯೂ ಧ್ವನಿ ಹೊರಸೂಸಬಾರದು ಎಂದು ಸೂಚಿಸಲಾಗಿದೆ. ವಸತಿ ಪ್ರದೇಶಗಳಲ್ಲಿ ಹಗಲು 55 ಡೆಸಿಬಲ್, ರಾತ್ರಿ 45 ಡೆಸಿಬಲ್; ವಾಣಿಜ್ಯ ಪ್ರದೇಶಗಳಲ್ಲಿ ಹಗಲು 65, ರಾತ್ರಿ 55 ಡೆಸಿಬಲ್; ಕೈಗಾರಿಕಾ ಪ್ರದೇಶಗಳಲ್ಲಿ ಹಗಲು 75, ರಾತ್ರಿ 70 ಡೆಸಿಬಲ್ ಹಾಗೂ ಶಾಂತ ಪ್ರದೇಶಗಳಾದ ಆಸ್ಪತ್ರೆ, ಶಾಲೆ ಮತ್ತಿತರ ಸ್ಥಳಗಳ ಸುತ್ತಮುತ್ತ ಹಗಲು 50, ರಾತ್ರಿ 40 ಡೆಸಿಬಲ್ ಮಿತಿ ನಿಗದಿಪಡಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಆಯೋಜಕರು ಹಾಗೂ ಮಾಲೀಕರ ವಿರುದ್ಧ ಪರಿಸರ ಸಂರಕ್ಷಣಾ…
ಲೇಖಕ: admin
ಮೂರ್ನಾಡು ಸೆ.1 NEWS DESK : ಮೂರ್ನಾಡು ಸಹಕಾರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ 102ನೇ ವಾರ್ಷಿಕ ಕೈಲ್ ಪೊಳ್ದ್ ಹಬ್ಬದ ಅಂಗವಾಗಿ ಆಟೋಟಗಳ ಕಾರ್ಯಕ್ರಮವು ಸೆ.3ರಂದು ನಡೆಯಲಿದೆ. ಮೂರ್ನಾಡು ವಿದ್ಯಾಸಂಸ್ಥೆಯ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಆಟೋಟಗಳ ಕಾರ್ಯಕ್ರಮವನ್ನು ಅಪರಾಹ್ನ 1.30 ಗಂಟೆಗೆ ಕೊಡಂಬೂರು ಕಾಫಿ ಬೆಳೆಗಾರ ಬಡುವಂಡ ಬಿ. ಮುತ್ತಪ್ಪ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗಾಗಿ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ, ಮಹನೀಯರು, ಮಹಿಳೆಯರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಓಟದ ಸ್ಪರ್ಧೆಗಳು ನಡೆಯಲಿವೆ. ಅಲ್ಲದೆ, ಬಾಂಬ್ ಇನ್ ದಿ ಸಿಟಿ, ಭಾರದ ಕಲ್ಲು ಎಸೆತ, ನಿಂಬೆಹಣ್ಣು-ಚಮಚ ಓಟ, ವಾದ್ಯದ ಕುಣಿತ ಹಾಗೂ ಹಗ್ಗಜಗ್ಗಾಟ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಅಪರಾಹ್ನ 5.30 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಖ್ಯಾತ ಮಕ್ಕಳ ತಜ್ಞ ಡಾ. ಕೆಂಬಡತಂಡ ಗೌರವ್ ಅಯ್ಯಪ್ಪ ಹಾಗೂ ಮಡಿಕೇರಿ ವೈದ್ಯಕೀಯ ವಿದ್ಯಾಲಯದ ಖ್ಯಾತ ಅರಿವಳಿಕೆ ತಜ್ಞ ಡಾ. ದಂಬೆಕೋಡಿ ಎಸ್. ಅಯ್ಯಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಹಕಾರ…
ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಂಯುಕ್ತಾಶ್ರಯದಲ್ಲಿ ಸೆ.5 ರಂದು ಬೆಳಗ್ಗೆ 10 ಗಂಟೆಗೆ ನಗರದ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ“ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕೃಷಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರಸ್ವಾಮಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್, ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ಮಡಿಕೇರಿ ನಗರಸಭೆ ಅಧ್ಯಕ್ಷರಾದ ಕಲಾವತಿ ಪಿ, ಗ್ಯಾರಂಟಿ ಯೋಜನೆಗಳ…
ಮಡಿಕೇರಿ ಸೆ.1 NEWS DESK : ಕೊಡಗು ಜಿಲ್ಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1421 ಮತ್ತು ಸ್ಥಳೀಯ ವೃಂದದ 179 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗಾಗಿ ಸೆ.6 ರಂದು ಲಿಖಿತ ಪರೀಕ್ಞೆ ನಡೆಯಲಿದೆ. ಕೊಡಗು ಜಿಲ್ಲೆಯಲ್ಲಿ ಸೆ.6 ರಂದು ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ವಿಭಾಗ, ಮಡಿಕೇರಿ ಮತ್ತು ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಡಿಕೇರಿ ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಸಂತ ಜೋಸೇಫರ ಕಾನ್ವೆಂಟ್ ಸಂಯುಕ್ತ ಪದವಿ ಪೂರ್ವ ಕಾಲೇಜು, ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್, ಕೊಡಗು ವಿದ್ಯಾಲಯ ಮತ್ತು ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಈ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದದ 1421 ಮತ್ತು ಸ್ಥಳೀಯ…
ವಿರಾಜಪೇಟೆ ಸೆ.1 NEWS DESK : ವಿರಾಜಪೇಟೆ ತಾಲೂಕು ಕಣ್ಣಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಟೈಲರಿಂಗ್ ವೃತ್ತಿಯನ್ನು ನಿರ್ವಹಿಸುತ್ತಿರುವ ಸುನಂದ ಎ.ಪಿ. ಅವರಿಗೆ ಗ್ರಾಮೀಣ ಕೈಗಾರಿಕಾ ಇಲಾಖೆಯಿಂದ ಟೈಲರಿಂಗ್ ಯಂತ್ರೋಪಕರಣಗಳನ್ನು ವಿತರಿಸಲಾಯಿತು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಯಂತ್ರೋಪಕರಣಗಳನ್ನು ವಿತರಿಸಿ, ಫಲಾನುಭವಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಗ್ರಾಮೀಣ ಕೈಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ರಘು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸೋಮವಾರಪೇಟೆ ಸೆ.1 NEWS DESK : ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐತಿಹಾಸಿಕ ಸ್ಥಳವಾದ ಹೊನ್ನಮ್ಮನ ಕೆರೆ ಸುತ್ತಮುತ್ತ ಸ್ವಚ್ಛತಾ ಶ್ರಮದಾನ ನಡೆಯಿತು. ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ವಿ. ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ, ಸ್ಥಳೀಯ ಗ್ರಾಮಸ್ಥರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ಕೆರೆಯ ಆವರಣ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿದರು. ಈ ಸಂದರ್ಭದಲ್ಲಿ ಸಿದ್ದೇಶ್ವರ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ವೀರೇಶ್, ಕಾರ್ಯದರ್ಶಿ ಪ್ರದೀಪ್ ಕುಮಾರ್, ಗ್ರಾಮ ಸಮಿತಿಯ ಅಧ್ಯಕ್ಷ ವಸಂತ್ ಕುಮಾರ್, ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೋಹನ್, ಗೌಡಳ್ಳಿ, ಗಣಗೂರು, ನೇರುಗಳಲೆ, ಹಾನಗಲ್ಲು ಹಾಗೂ ಚೌಡ್ಲು ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಹಾಗೂ ಸದಸ್ಯರು, ಎನ್‌ಆರ್‌ಎಲ್‌ಎಂ ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಗ್ರಾಮಸ್ಥರು ಸೇರಿದಂತೆ ಹಲವರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಸೆ.1 NEWS DESK : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಇದೇ ಸೆಪ್ಟೆಂಬರ್ 6 ರಂದು ನಡೆಯುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಯನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯ ಪೂರ್ವಸಿದ್ಧತೆಗಳ ಕುರಿತು ಮಂಗಳವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಬೆಳಕು ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲ ಸೌಲಭ್ಯವನ್ನು ಕಲ್ಪಿಸಲು ಕ್ರಮವಹಿಸಬೇಕು, ಭದ್ರತೆ ವ್ಯವಸ್ಥೆ ಬಿಗಿಗೊಳಿಸಬೇಕು, ಹಾಗೆಯೇ ಪರೀಕ್ಷಾ ಪ್ರಕ್ರಿಯೆಯನ್ನು ನಿಯಮಾನುಸಾರ ನಡೆಸುವಂತೆ ತಿಳಿಸಿದರು. ಪರೀಕ್ಷಾ ದಿನದಂದು ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಅಕ್ರಮಗಳಿಗೆ ಅವಕಾಶ ನೀಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವಂತೆ ಅಗತ್ಯ ಮಾಹಿತಿ ನೀಡಬೇಕು ಎಂದು ತಿಳಿಸಿದರು. ಪರೀಕ್ಷಾ…
ಮಡಿಕೇರಿ NEWS DESK ಸೆ.1: ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ವತಿಯಿಂದ 31ನೇ ವಾರ್ಷಿಕ ಸಾರ್ವಜನಿಕ ಕೈಲ್‌ಪೊವ್ದ್ ಆಚರಣೆ ಮಡಿಕೇರಿ ಹೊರವಲಯದ ಕ್ಯಾಪಿಟಲ್ ವಿಲೇಜ್ ಮಂದ್‌ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಸಂವಿಧಾನದ ಅಡಿಯಲ್ಲಿ ವಿಶೇಷ ಸ್ಥಾನಮಾನಕ್ಕಾಗಿ ಕೊಡವರು ಮುಂದಿಟ್ಟಿರುವ ಹಕ್ಕೊತ್ತಾಯವು ಸ್ಥಳೀಯ ಕೊಡವರ ಸ್ವಾಭಾವಿಕ ಹಾಗೂ ನ್ಯಾಯಸಮ್ಮತ ಹಕ್ಕಾಗಿದೆ. ಈ ಗುರಿ ತಾರ್ಕಿಕ ಅಂತ್ಯ ತಲುಪುವವರೆಗೂ ಸಿಎನ್‌ಸಿ ಹೋರಾಟ ಮುಂದುವರಿಸಲಿದೆ ಎಂದು ಹೇಳಿದರು. ಕೊಡವ ಸಂಸ್ಕೃತಿಯಲ್ಲಿ ಬಂದೂಕು, ಭೂತಾಯಿ, ಯೋಧತ್ವ, ಮಂದ್, ದೇವಕಾಡ್, ಪಿತ್ರಾರ್ಜಿತ ಭೂಮಿ ಹಾಗೂ ಕೊಡವ ವಂಶಾವಳಿಗಳು ಅವಿಭಾಜ್ಯ ಅಂಗಗಳಾಗಿವೆ. ಪೂರ್ವಜರ ಪರಂಪರೆ ಹಾಗೂ ಯೋಧ ಸಂಸ್ಕೃತಿಯ ಸಂಕೇತವಾಗಿ ಕೈಲ್‌ಪೊವ್ದ್ ಸಂದರ್ಭದಲ್ಲಿ ಆಯುಧ ಪೂಜೆಯನ್ನು ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದರು. ಸಂವಿಧಾನದ 51A(f) ಅಡಿಯಲ್ಲಿ ಪ್ರಾಚೀನ ಹಾಗೂ ಅತಿ ಸಣ್ಣ ಜನಾಂಗೀಯ ಸಮುದಾಯದ ಸಂಸ್ಕೃತಿ ಮತ್ತು ಪರಂಪರೆಯನ್ನು ರಕ್ಷಿಸುವುದು ರಾಜ್ಯ ಹಾಗೂ ಜನರ ಕರ್ತವ್ಯವಾಗಿದೆ. ಸಂವಿಧಾನದ 32ನೇ ವಿಧಿಯಡಿ ಕೊಡವರ ಕುಂದುಕೊರತೆಗಳಿಗೆ ಸಾಂವಿಧಾನಿಕ…
ಮಡಿಕೇರಿ, NEWS DESK ಸೆ.೦1: ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಬೀದಿನಾಯಿಗಳ ಉಪಟಳವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬೀದಿನಾಯಿಗಳಿಗೆ ರೇಬಿಸ್ ಲಸಿಕೆ ಹಾಕುವ ಹಾಗೂ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ನಗರ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಸಂಖ್ಯೆಯನ್ನು ನಿಯಂತ್ರಿಸುವುದರ ಜೊತೆಗೆ ನಗರವನ್ನು ರೇಬಿಸ್ ಮುಕ್ತವನ್ನಾಗಿಸುವ ಉದ್ದೇಶದಿಂದ ನಗರಸಭೆ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ನಗರದ ವಿವಿಧ ಭಾಗಗಳಿಂದ ಇಂದು 43 ಬೀದಿನಾಯಿಗಳನ್ನು ಸೆರೆಹಿಡಿದು, ರೇಬಿಸ್ ಲಸಿಕೆ ನೀಡುವ ಹಾಗೂ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡುವ ಕಾರ್ಯ ಕೈಗೊಳ್ಳಲಾಯಿತು. ಬೀದಿನಾಯಿಗಳ ಉಪಟಳದಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಯನ್ನು ಕಡಿಮೆ ಮಾಡುವ ಹಾಗೂ ರೇಬಿಸ್ ರೋಗದ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಮಡಿಕೇರಿ, NEWS DESK ಸೆ. 1-.ನಗರದ ಕೊಡಗು ವಿದ್ಯಾಲಯದಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ್ ಜನ್ಮದಿನದ ಸ್ಮರಣಾರ್ಥ ಈದ್ ಮಿಲಾದ್ ಕಾರ್ಯಕ್ರಮ ಆಚರಿಸಲಾಯಿತು. ಈದ್ ಮಿಲಾದ್‌ನ ಮಹತ್ವ ಹಾಗೂ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜೀವನ ಸಂದೇಶಗಳ ಕುರಿತು ಸುದೀಪ್ತ ಬೆಳ್ಳಿಯಪ್ಪ ಕೆ. ಮಾತನಾಡಿದರು. ಶಿಕ್ಷಕಿ ಶಹೀರಾ ಮಾತನಾಡಿ ದಯೆ, ಸಹಾನುಭೂತಿ, ಸೌಹಾರ್ದತೆ, ಪೋಷಕರು ಹಾಗೂ ಶಿಕ್ಷಕರಿಗೆ ಗೌರವ ಮತ್ತು ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದ ಅಂಗವಾಗಿ 6 ನೇ ತರಗತಿಯ ವಿದ್ಯಾರ್ಥಿಗಳು ಗುಂಪು ಗಾಯನ, ದಫ್ ಹಾಗೂ ಕವ್ವಾಲಿ ನೃತ್ಯ-ಸಂಗೀತವನ್ನು ಪ್ರಸ್ತುತಪಡಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಪ್ರಾಂಶುಪಾಲರಾದ ಸುಮಿತ್ರಾ ಕೆ.ಎಸ್. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಎಲ್ಲರಿಗೂ ಗೌರವ ನೀಡುವಂತಹ ಉತ್ತಮ ಮೌಲ್ಯಗಳು ಹಾಗೂ ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳುವಂತೆ ಪ್ರೇರೇಪಿಸಿದರು. ಆಡಳಿತ ಮುಖ್ಯಸ್ಥ ರವಿ ಪಿ. ಉಪಸ್ಥಿತರಿದರು. ಅಮೃತ ನೀಲಮ್ಮ ಹಾಗೂ ಆಂಡ್ರಿಯಾ ಫೆರ್ನಾಂಡಿಸ್ ನಿರೂಪಿಸಿ, ಎಂ. ದಕ್ಷಿಕಾ ಬೋಪಣ್ಣ ಸ್ವಾಗತಿಸಿದರು. ಮೋನಾಲಿ ಪ್ರಸಾದ್ ವಂದಿಸಿದರು.






