ಮಡಿಕೇರಿ ಆ.7 NEWS DESK : ಕೊಡಗಿನ ಪೂರ್ವಜರು ಉಳಿಸಿ ಬೆಳೆಸಿಕೊಂಡು ಬಂದಿರುವ ಕೃಷಿ ಪದ್ಧತಿ, ಸಂಸ್ಕೃತಿ, ಕಲೆ, ಪರಂಪರೆಗಳನ್ನು ಇಂದಿನ ಯುವಜನರು ಮರೆಯದೆ ಮುಂದುವರಿಸಿಕೊಂಡು ಹೋಗುವಂತಾಗಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಬಿದ್ದಾಟಂಡ ಕುಟುಂಬ, ನಾಲ್ಕುನಾಡು ಪ್ಲಾಂಟರ್ಸ್ ಕ್ಲಬ್ ಅಸೋಸಿಯೇಷನ್ ಮತ್ತು ಕೊಡವ ಸಮಾಜ ಸಂಸ್ಕೃತಿ ಮತ್ತು ಕ್ರೀಡಾ ಅಸೋಷಿಯೇಷನ್ ವತಿಯಿಂದ ನಾಪೋಕ್ಲುವಿನ ಬಿದ್ದಾಟಂಡ ಕುಟುಂಬಸ್ಥರ ಗದ್ದೆಯಲ್ಲಿ ನಡೆದ “ಐಪಣಿರ ಆಯಿಮೆ ಪಿಞ್ಞ ಕಳಿ ಪೈಪೋಟಿ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗಿನ ಜನರು ಹಿಂದಿನಿಂದಲೂ ಕೃಷಿಯನ್ನು ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಕೃಷಿ ಜೊತೆಗೆ ಕಲೆ, ಸಂಸ್ಕೃತಿ, ಭಾಷೆ ಉಳಿಸಿ ಬೆಳೆಸಿಕೊಂಡು ಬಂದಿದ್ದು, ಅದನ್ನು ಮುಂದಿನ ಪೀಳಿಗೆಗೂ ತಿಳಿಸುವಂತಾಗಬೇಕು ಎಂದು ಸಲಹೆ ನೀಡಿದರು. ಆಟ್‍ಪಾಟ್ ಜೊತೆಗೆ ಸಂಸ್ಕೃತಿ, ಆಚಾರ-ವಿಚಾರ ಕಲೆಗಳನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ಆದ್ಯ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ…
ಲೇಖಕ: admin
ಮಡಿಕೇರಿ ಆ.7 NEWS DESK : ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿನ ಖಾಲಿ ಇರುವ 11 ನೇ ತರಗತಿಯ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಸಿಬಿಎಸ್‍ಇ ಅಥವಾ ಮಾನ್ಯತೆ ಪಡೆದ ರಾಜ್ಯ ಮಂಡಳಿಯಿಂದ ಹತ್ತನೇ ತರಗತಿ ಪಾಸಾಗಿದ್ದು, ಕನಿಷ್ಠ ಶೇ.60 ಅಂಕಗಳನ್ನು ಪಡೆದಿರಬೇಕು. ವಿಜ್ಞಾನ ಮತ್ತು ವಾಣಿಜ್ಯ ವಿಷಯದಲ್ಲಿ ಕನಿಷ್ಠ 60 ಅಂಕಗಳನ್ನು ಕಡ್ಡಾಯವಾಗಿ ಪಡೆದಿರಬೇಕು. ಅರ್ಜಿ ಸಲ್ಲಿಸಲು ಆನ್‍ಲೈನ್ ಮತ್ತು ಆಪ್‍ಲೈನ್ ಎರಡು ಮಾರ್ಗಗಳಲ್ಲಿ ಅವಕಾಶವಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್, 10 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ನವೋದಯ ಶಾಲೆಯ ದೂ.ಸಂ.9481426184,9380802179 https://drive.google.com/file/d/1YPFdXUV8r17nZk499A9JHyMWrN4VQzv9. view?usp=sharing ನ್ನು ಸಂಪರ್ಕಿಸಬಹುದು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.
ಕುಶಾಲನಗರ ಆ.7 NEWS DESK : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು ಜಿಲ್ಲಾ ಘಟಕದ ಸರ್ವ ಸದಸ್ಯರ ಸಭೆ ಕುಶಾಲನಗರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯಲ್ಲಿ ನಡೆಯಿತು. ವೇದಿಕೆಯ ಜಿಲ್ಲಾ ಅಧ್ಯಕ್ಷ ಎ.ಟಿ ರಂಗಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಪ್ರತಿ ಶಾಲೆಯಲ್ಲಿ ಮಾದಕ ವಸ್ತು ತಡೆ ಸಮಿತಿ ರಚನೆ ಬಗ್ಗೆ ಚರ್ಚೆ ನಡೆಯಿತು. ತಾಲೂಕು ಯೋಜನಾಧಿಕಾರಿಗಳಿಂದ ಪ್ರಥಮ ತ್ರೈಮಾಸಿಕ ಸಾಧನ ವರದಿ ಮಂಡಿಸಲಾಯಿತು. ವೇದಿಕೆಯ ಪ್ರಾದೇಶಿಕ ವಿಭಾಗದ ನಿರ್ದೇಶಕರಾದ ವಿವೇಕ್ ವಿ ಪಾಯಸ್ ಅವರು 2025 26ನೇ ಸಾಲಿನ ಕ್ರಿಯಾ ಯೋಜನೆಯ ಅನುಷ್ಠಾನದ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ಬಗ್ಗೆ ಅಪಪ್ರಚಾರ ನಡೆಯುತ್ತಿರುವ ಬಗ್ಗೆ ಸಭೆಯಲ್ಲಿ ಜನಜಾಗೃತಿ ವೇದಿಕೆಯ ಸದಸ್ಯರು ಚರ್ಚೆ ನಡೆಸಿ, ಪ್ರಕರಣ ಸಂಬಂಧ ಸರ್ಕಾರದ ಎಸ್ಐಟಿ ರಚನೆ ಸ್ವಾಗತಿಸುವುದರೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ಅನಾವಶ್ಯಕ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವ…
ಮಡಿಕೇರಿ ಆ.7 NEWS DESK : ವಿರಾಜಪೇಟೆ ತಾಲ್ಲೂಕಿನ ಕಾಕೋಟುಪರಂಬು ಗ್ರಾಮ ಪಂಚಾಯಿತಿಯ ಕಡಂಗಮರೂರು ಭಾಗದ ಕಾಲೋನಿ ನಿವಾಸಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಟಾರ್ಪಲ್ ವಿತರಿಸಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಕಡಂಗಮರೂರು ಬೂತ್ ಅಧ್ಯಕ್ಷ ಮಂಡೆಪಂಡ ರೋಷನ್, ಬಾಲಟಿಲಂಡ ರಂಜಿ, ಮಂಡೆಟೀರ ಅನಿಲ್, ಮಹಿಳಾ ಘಟಕದ ಅಧ್ಯಕ್ಷ ಕಾವೇರಮ್ಮ, ಕಾಂಗಿರ ಸತೀಶ್, ಕಾಂಗಿರ ರವಿ ಮಾಚಯ್ಯ, ಮಲಂಡ ಜಗದೀಶ್, ಕೆದಮುಳ್ಳೂರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ನಡಿಕೇರಿಯಂಡ ಮಹೇಶ್, ಪಂಚಾಯಿತಿ ಅಧ್ಯಕ್ಷರಾದ ಜೇಫ್ರಿ ಉತ್ತಪ್ಪ, ಕೆಡಿಪಿ ಸದಸ್ಯರಾದ ಮಾಳೆಟೀರ ಪ್ರಶಾಂತ್, ಬಟಾಕಳಂಡ ರಾಜ, ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕುಶಾಲನಗರ, ಆ.7 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ವಿಶ್ವದ ಬುಡಕಟ್ಟು (ಆದಿವಾಸಿ) ಜನರ ಹಕ್ಕುಗಳ ರಕ್ಷಣೆ ಮತ್ತು ಮಕ್ಕಳ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುವ ದಿಸೆಯಲ್ಲಿ ಆ.9 ರಂದು ಕುಶಾಲನಗರ ತಾಲ್ಲೂಕಿನ ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದ ಗಿರಿಜನರ ಪುನರ್ವಸತಿ ಕೇಂದ್ರದಲ್ಲಿ ವಿಶ್ವ ಬುಡಕಟ್ಟು ಜನರ ದಿನಾಚರಣೆ: 2025 ರ ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ತಿಳಿಸಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆ, ಕುಶಾಲನಗರ ಸ್ಥಳೀಯ ಸಂಸ್ಥೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲ್ಲೂಕು ಗಿರಿಜನ ಸಮಗ್ರ ಅಭಿವೃದ್ಧಿ ಯೋಜನೆ ವತಿಯಿಂದ ಕೂಡಿಗೆ ಗ್ರಾಮ ಪಂಚಾಯತಿ ಹಾಗೂ ಬಸವನಹಳ್ಳಿಯಲ್ಲಿರುವ ತಾಲ್ಲೂಕು ಗಿರಿಜನ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ (ಲ್ಯಾಂಪ್ಸ್ ಸೊಸೈಟಿ) ದ ಸಹಯೋಗದೊಂದಿಗೆ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಕೂಡಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಟಿ.ಗಿರೀಶ್…
ಮಡಿಕೇರಿ ಆ.7 NEWS DESK : ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು. ಉಚಿತ ಚಿಕಿತ್ಸೆ ಇರುವುದರಿಂದ ಒತ್ತಡವೂ ಹೆಚ್ಚಿರುತ್ತದೆ. ವೈದ್ಯರು ಸಹನೆಯಿಂದ ಕೆಲಸ ಮಾಡಬೇಕು. ಯಾರ ಬಳಿಯೂ ಹಣ ಪಡೆಯಬಾರದು ಎಂದು ವೈದ್ಯರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು.ಇಂದು ಮಳೆ ಕಾರಣದಿಂದ ಕೊಪ್ಪಳದ ಕಾರ್ಯಕ್ರಮಕ್ಕೆ ಹೋಗಿಲ್ಲ. ಆದ್ದರಿಂದ ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ, ಇಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ ಎಂದು ಹೇಳಿದರು. ಆಸ್ಪತ್ರೆಯಲ್ಲಿ ವಾಹನ ನಿಲುಗಡೆಗೆ ಹಣ ಪಡೆಯುತ್ತಿರುವ ಬಗ್ಗೆ ಪರಿಶೀಲಿಸಲಾಗುವುದು. ವಾಣಿ ವಿಲಾಸ ಆಸ್ಪತ್ರೆ ಹಾಗೂ ಟ್ರಾಮಾ ಸೆಂಟರ್ ಗೆ ಸಹ ಭೇಟಿ ನೀಡಿದ್ದು, ವಾಣಿ ವಿಳಾಸದಲ್ಲಿ ಒಂದು ದಿನಕ್ಕೆ 40 ಕ್ಕೂ ಹೆಚ್ಚು ಹೆರಿಗೆಗಳಾಗುತ್ತವೆ. ಬೇರೆ ಬೇರೆ ರಾಜ್ಯದ ಜನರು ಇಲ್ಲಿ ಚಿಕಿತ್ಸೆಗಾಗಿ ಬರುತ್ತಾರೆ. ಜನ ದಟ್ಟಣೆ ಹೆಚ್ಚಿರುವುದರಿಂದ ಆಸ್ಪತ್ರೆಯ ಹಾಸಿಗೆಗಳನ್ನು ಹೆಚ್ಚು ಮಾಡಬೇಕಿದೆ. ವೈದ್ಯರ ಹುದ್ದೆಗಳನ್ನು ಸಹ ಭರ್ತಿ ಮಾಡಲಾಗುವುದು. ವಿಕ್ಟೋರಿಯಾ…
ಬೆಂಗಳೂರು ಆ.7 NEWS DESK : ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಆಯೋಜಿಸಿದ್ದ “ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ವಿಷಯಾಧಾರಿತ ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನ”ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಸ್ವಾತಂತ್ರ್ಯ ಸೇನಾನಿಗಳಿಗೆ ನಮಿಸಿದರು. ತೋಟಗಾರಿಕೆ ಇಲಾಖೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಶ್ರೀ ವಚನಾನಂದ ಸ್ವಾಮಿಗಳು, ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ಕಿತ್ತೂರು ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
ಕುಶಾಲನಗರ ಆ.7 NEWS DESK : ಸಮಾಜ ಸೇವೆಯ ಹೆಸರಿನಲ್ಲಿ ಪ್ರಾರಂಭವಾದ ಸಂಸ್ಥೆಗಳು ಮೂಲ ಉದ್ದೇಶದ ಗುರಿಯನ್ನು ತಲುಪಬೇಕು ಎಂದು ಮದರ್ ರೂಟ್ ಸಂಸ್ಥೆಯ ಅಧ್ಯಕ್ಷೆ ಟಿ.ಬಿ.ಅನಿತಾ ತಿಳಿಸಿದರು. ಕುಶಾಲನಗರ ತಾಲೂಕಿನ ನಲವತ್ತೆಕರೆ ಬರಡಿಗ್ರಾಮದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಸಮಾಜ ಸೇವೆಯ ಉದ್ದೇಶವನ್ನು ಹೊಂದಿದ ಮದರ್ ರೂಟ್ ಫೌಂಡೇಶನ್ ಸೇವಾ ಸಂಸ್ಥೆಯೊಂದು ಅಸ್ಥಿತ್ವಕ್ಕೆ ಬಂದಿದೆ. ಸಂಸ್ಥೆ ವೃದ್ಧಾಶ್ರಮ, ಅನಾಥಾಶ್ರಮ, ಬಾಲಕಾರ್ಮಿಕರ ಪುನರ್ವಸತಿ ಕೇಂದ್ರ ಮತ್ತು ಮಹಿಳೆಯರ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸುವುದರ ಜೊತೆಗೆ ವಿವಿಧ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಸದುದ್ದೇಶಗಳನ್ನು ಹೊಂದಿರುವ ಸಂಸ್ಥೆಯಾಗಿದೆ ಎಂದು ಹೇಳಿದರು. ಸಂಸ್ಥೆಯ ಬೆಳವಣಿಗೆಗೆ ಕೃಷಿ ಉತ್ಪನ್ನಗಳು ಮತ್ತು ಮಾರಾಟ ಸೇರಿದಂತೆ ವಿವಿಧ ವಸ್ತುಗಳ ತಯಾರಿಸಿ ಮಾರ್ಕೆಟಿಂಗ್ ಮಾಡಲಾಗುವುದು, ಬಂದ ಲಾಭದಲ್ಲಿ ಒಂದು ಭಾಗವನ್ನು ಸಂಸ್ಥೆಯ ಬೆಳವಣಿಗೆಗೆ ವಿನಿಯೋಗ ಮಾಡಲಾಗುವುದು ಎಂದು ತಿಳಿಸಿದರು. ನಮ್ಮ ಸಂಸ್ಥೆ ಜಾತ್ಯಾತೀತ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದರು. ಈಗಾಗಲೆ ಸಂಸ್ಥೆಗೆ ಪದಾಧಿಕಾರಿಗಳ ನೇಮಕಮಾಡಲಾಗಿದ್ದು, ಪದಾಧಿಕಾರಿಗಳು…
ನಾಪೋಕ್ಲು ಆ.7 NEWS DESK : ದೆಹಲಿಯಲ್ಲಿ ಆ.15 ರಂದು ನಡೆಯುವ ಸ್ವಾತಂತ್ರೋತ್ಸವಕ್ಕೆ ರಾಯಭಾರಿಯಾಗಿ ಆಯ್ಕೆಯಾಗಿರುವ ಯಶಸ್ವಿ ರೈ ಅವರನ್ನು ಕಾಂತೂರು ಗ್ರಾಮ ಪಂಚಾಯತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪಂಚಾಯತಿ ಅಧ್ಯಕ್ಷ ಕುಶನ್ ರೈ, ಉಪಾಧ್ಯಕ್ಷರಾದ ಬಿ.ಎಸ್.ರೇಖಾ, ಪಿ.ಡಿ.ಓ ಚಂದ್ರಮೌಳಿ, ಸದಸ್ಯರಾದ ವಿಜು ತಿಮ್ಮಯ, ಸೌಮ್ಯ ಸತೀಶ್, ರೀತಾ ಸುದರ್ಶನ್, ಸುಮಾ ಸುಂದರಿ, ಪುಷ್ಪ, ದಿವ್ಯ ಮಿತ್ತೂರ್, ಯಶ್ವಿನ್, ರಘು, ಹೀರ ಸುಬ್ಬಯ್ಯ, ಶೃತಿ, ಲತ, ಶರ್ಮಿಳಾ, ಮೀನಾಕ್ಷಿ ದೇವಯ್ಯ ಮತ್ತು ಸಿಬ್ಬಂದಿಗಳಾದ ನಿರೂಪ, ಶಶಿ, ಲಿಖಿತ, ಕೋಮಲ, ದಿನೇಶ ಮತ್ತು ತಾಯಿ ಜಯಂತಿ ರೈ ಹಾಜರಿದ್ದರು. ಯಶಸ್ವಿ ರೈ ಕಾಂತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಾಡಗ ಗ್ರಾಮದ ನಿವಾಸಿ ಬಿ.ಬಿ.ಜಯಂತಿ ಮತ್ತು ಲವಕುಮಾರ್ ದಂಪತಿಗಳ ದ್ವಿತೀಯ ಪುತ್ರ ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಆ.7 NEWS DESK : ನಾಪೋಕ್ಲು ಹಿಂದೂ ಮಲಯಾಳಿ ಸಂಘದ ವತಿಯಿಂದ ಸಮಸ್ತ ಹಿಂದು ಬಾಂಧವರಿಗಾಗಿ ಜಿಲ್ಲಾಮಟ್ಟದ ಹಗ್ಗ ಜಗ್ಗಾಟ ಸ್ಪರ್ಧೆಯನ್ನು ಆ.17ರಂದು ಸಮೀಪದ ಹಳೆ ತಾಲೂಕಿನ ಜಿಎಂಪಿ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ನಾಪೋಕ್ಲು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ಕೆ.ಅನಿಲ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ಹಗ್ಗಜಗ್ಗಾಟ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ ಸ್ಪರ್ಧೆಯನ್ನು ಉದ್ಘಾಟಿಸಲಾಗುವುದು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ನಾಪೋಕ್ಲು ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಘವೇಂದ್ರ ,ಶ್ರೀ ಪೊನ್ನು ಮುತ್ತಪ್ಪ ದೇವಾಲಯದ ಅಧ್ಯಕ್ಷ ಎ.ಕೆ.ಚಂದ್ರ, ಕಾಫಿ ಬೆಳೆಗಾರರಾದ ಅಪ್ಪಚೆಟ್ಟೋಳಂಡ ನವೀನ್ ಅಪ್ಪಯ್ಯ, ಚೀಯಕಪೂವಂಡ ಎಸ್. ಮಂಜುನಾಥ್ (ಕಟ್ಟಿ)ಹಾಗೂ ವಕೀಲ ಕೋಡಿಮಣಿಯಂಡ ಕುಟ್ಟಪ್ಪ ಉಪಸ್ಥಿತರಿರುವರು ಎಂದರು. ಸಮಾರೋಪ ಸಮಾರಂಭ ಕಾರ್ಯಕ್ರಮವು ಸಂಜೆ 4 ಗಂಟೆಗೆ ಜರುಗಲಿದ್ದು, ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಕೆ.ಕೆ.ಅನಿಲ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಹಾಗೂ ಶಾಸಕರಾದ ಎ ಎಸ್ ಪೊನ್ನಣ್ಣ…






