ಮಡಿಕೇರಿ ಆ.7 NEWS DESK : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಕೆನರಾ ಬ್ಯಾಂಕ್, ಮೈನ್ ಬ್ರಾಂಚ್, ಮಡಿಕೇರಿ ಶಾಖೆ, ಮದೆ ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಕೇಂದ್ರ ಸರಕಾರದ ಆದೇಶದಂತೆ ಆಯಾಯ ಗ್ರಾಮದ ಬ್ಯಾಂಕ್ ಶಾಖೆ ಮುಖಾಂತರ ಪ್ರತೀ ವರ್ಷವೂ ನಡೆಸುವ ಜನ ಸುರಕ್ಷಾ ಅಭಿಯಾನ ಮದೆ ಗ್ರಾಮದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆನರಾ ಬ್ಯಾಂಕ್ ನ ಎಜಿಎಂ ರಾಜೇಶ್ ಕುಮಾರ್ ವಿ. ಅವರು, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು. ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭೀಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು, ವಾರ್ಷಿಕ 20 ರೂ. ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 2 ಲಕ್ಷಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ವಾರ್ಷಿಕವಾಗಿ 436 ರೂ. ಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ…
ಲೇಖಕ: admin
ಮೈಸೂರು, ಆ.7 NEWS DESK : ಸಾಂಸ್ಕೃತಿಕ ರಾಜಧಾನಿಯಲ್ಲಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸದಾ ಬೆಂಬಲ ನೀಡಲಿದೆ ಎಂಬ ಭರವಸೆಯನ್ನು ಕೇಂದ್ರ ಶಿಕ್ಷಣ ಸಚಿವರಾದ ಡಾ. ಸುಕಾಂತ ಮಜುಂದಾರ್ ನೀಡಿದ್ದಾರೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಈ ಕುರಿತು ಕೇಳಲಾದ ಪ್ರಶ್ನೆಗೆ ಕೇಂದ್ರ ಶಿಕ್ಷಣ ಸಚಿವರು ಸವಿವರವಾದ ಉತ್ತರ ನೀಡಿದ್ದಾರೆ ಎಂದು ಸಂಸದ ಯದುವೀರ್ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದರು ಹಲವಾರು ವಿವರಗಳನ್ನು ಹಂಚಿಕೊಂಡಿದ್ದಾರೆ. ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಪೂರ್ಣ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಸ್ವಾಯತ್ತತೆ ನೀಡಲಾಗಿಲ್ಲ, ಈ ಕೇಂದ್ರದ ಕಾರ್ಯಕ್ಷಮತೆ ಮತ್ತು ಸವಾಲುಗಳ ಹಾಗೂ ಕೇಂದ್ರದ ಸ್ವಾಯತ್ತತೆಗಾಗಿ ರಾಜ್ಯ ಸರ್ಕಾರ ಅಥವಾ ಕನ್ನಡ ಸಾಹಿತ್ಯ ಸಂಸ್ಥೆಗಳಿಂದ ಶಿಫಾರಸುಗಳನ್ನು ಸ್ವೀಕರಿಸಿದೆಯೇ ಮತ್ತು ಇದರ ಸ್ವಾಯತ್ತ ಸ್ಥಾನಮಾನಕ್ಕಾಗಿ ಪ್ರಸ್ತಾಪ ಇದೆಯೇ? ಎಂದು ಕೇಂದ್ರ ಶಿಕ್ಷಣ ಸಚಿವರಿಂದ ಉತ್ತರ…
ಮಡಿಕೇರಿ ಆ.6 NEWS DESK : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಬ್ಯಾಂಕ್ ಆಫ್ ಬರೋಡ ಮರಗೋಡು ಶಾಖೆ ಹಾಗೂ ಹೊಸ್ಕೇರಿ ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಹೊಸ್ಕೇರಿ ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಂಗಾಧರ್ ನಾಯಕ್ ಅವರು ಮಾತನಾಡಿ, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆ ಮಾಡಿಸುವುದರ ಮೂಲಕ ಅದರ ಪ್ರಯೋಜನ ಪಡೆದುಕೊಳ್ಳುವಂತೆ ಸಲಹೆ ನೀಡಿದರು. ಪ್ರಧಾನಮಂತ್ರಿ ಸುರಕ್ಷ ಭೀಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು, ವಾರ್ಷಿಕ 20 ರೂ. ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 2 ಲಕ್ಷ ರೂ. ಗಳ ವರೆಗಿನ ವಿಮಾ ಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ವಾರ್ಷಿಕವಾಗಿ 436 ರೂ.ಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇ ರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ 2 ಲಕ್ಷ ರೂ. ಗಳ…
ಮಡಿಕೇರಿ ಆ.6 NEWS DESK : ಮಕ್ಕಂದರು ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಮಕ್ಕಂದೂರು ಗ್ರಾಮದ ಅಂಗವಾಡಿ ಕೇಂದ್ರದಲ್ಲಿ ಎದೆ ಹಾಲಿನ ಮಹತ್ವ ಕುರಿತು ಅರಿವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಎದೆ ಹಾಲಿನ ಮಹತ್ವದ ಬಗ್ಗೆ ವಿವರಿಸಿದರು. ಪೌಷ್ಟಿಕ ಆಹಾರ ಸೇವನೆ, ವಾಯು ವಿಹಾರ, ಹೆಚ್ಚು ನೀರು ಸೇವನೆ, ಸ್ಥಳೀಯವಾಗಿ ಸಿಗುವ ಹಣ್ಣುಗಳು ಮತ್ತು ಸೊಪ್ಪುಗಳನ್ನು ಪ್ರತಿನಿತ್ಯ ಬಳಸಲು ಪ್ರೋತ್ಸಾಹಿಸಿದರು. ಭಾಗ್ಯಲಕ್ಷ್ಮಿ ಮಾತೃವಂದನ, ಎಫ್‍ಆರ್‍ಎಸ್, ಪೋಷಣ್ ಟ್ರ್ಯಾಕರ್, ಅಂಗನವಾಡಿಯಲ್ಲಿ ಸಿಗುವಂತಹ ಆಹಾರಗಳ ಬಗ್ಗೆ ಮಾಹಿತಿ ನೀಡಿದರು. ಆರೋಗ್ಯ ಇಲಾಖೆಯ ಹಿರಿಯ ಪ್ರಾಥಮಿಕ ಸುರಕ್ಷಾ ಅಧಿಕಾರಿ ದೇವಕಿ ಅವರು ಪ್ರಾತ್ಯಕ್ಷಿಕೆ ಮೂಲಕ ಎದೆ ಹಾಲು ನೀಡುವ ಬಗ್ಗೆ ಮಾಹಿತಿ ನೀಡಿದರು. ಚುಚ್ಚುಮದ್ದು ಕಾರ್ಯಕ್ರಮಗಳ ಬಗ್ಗೆ ಇಲಾಖೆಯ ಸವಲತ್ತುಗಳ ಬಗ್ಗೆ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಸರೋಜಾ ಡಿಎಸ್, ಅಂಗನವಾಡಿ ಸಹಾಯಕಿ ಚಂದ್ರವತಿ,…
ಮಡಿಕೇರಿ ಆ.6 NEWS DESK : ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಆರು ತಿಂಗಳ ವರೆಗೆ ಕಡ್ಡಾಯವಾಗಿ ಎದೆಹಾಲು ಕುಡಿಸಬೇಕು. ಜೊತೆಗೆ 2 ವರ್ಷದವರೆಗೆ ಪೂರಕ ಆಹಾರದ ಜೊತೆಗೆ ಎದೆಹಾಲು ಕುಡಿಸುವಂತಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರ್‌ಸಿಹೆಚ್ ಅಧಿಕಾರಿ ಡಾ.ಮಧುಸೂದನ್ ಅವರು ತಿಳಿಸಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಮಕ್ಕಳ ವಿಭಾಗದಿಂದ ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ಮಕ್ಕಳ ಹೊರ ರೋಗಿ ವಿಭಾಗದಲ್ಲಿ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಎದೆಹಾಲಿನ ಮಹತ್ವ ಕುರಿತು ಆ.1 ರಿಂದ 7 ರವರೆಗೆ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಲಾಗುತ್ತಿದೆ. ಎದೆ ಹಾಲಿನ ಮಹತ್ವ ಬಗ್ಗೆ ಹೆಚ್ಚಿನ ಅರಿವು ಮೂಡಿಸಿದರು ಸಹ ಮೂಡನಂಬಿಕೆಗೆ ಒಳಗಾಗುವುದು ತಪ್ಪುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಮಕ್ಕಳ ಬೆಳವಣಿಗೆಗೆ ಎದೆ ಹಾಲು ಅತ್ಯಮೂಲ್ಯವಾಗಿದೆ. ಎದೆ ಹಾಲಿನ ಮಹತ್ವ ಕುರಿತು ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ ಎಂದು ವಿವರಿಸಿದರು. ಜಿಲ್ಲೆಯಲ್ಲಿ…
ಮಡಿಕೇರಿ ಆ.6 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕೊಟ್ಟೋಳಿ ಗ್ರಾಮದ ಆಶ್ರಯ ಕಾಲೋನಿ ವ್ಯಾಪ್ತಿಯಲ್ಲಿ ರೂ.20 ಲಕ್ಷಗಳ ಅನುದಾನದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಅಂಗನವಾಡಿ ಕಟ್ಟಡ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಚಾಲನೆ ನೀಡಿದರು. ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ಮಕ್ಕಳ ಕಲಿಕೆಗೆ ಅಂಗನವಾಡಿ ಕೇಂದ್ರಗಳು ಬುನಾದಿ ಆಗಿದೆ. ಇಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಅಂಗನವಾಡಿ ಸ್ಥಳೀಯ ಮಕ್ಕಳ ವಿದ್ಯಾರ್ಜನೆಗೆ ಪೂರಕವಾಗುವಂತಾಗಲಿ ಎಂದು ಹಾರೈಸಿದರು. ಶೀಘ್ರದಲ್ಲೇ ಅಂಗನವಾಡಿ ಕಾಮಗಾರಿ ಪೂರ್ಣಗೊಳ್ಳಲಿದ್ದು, ಮುಂದಿನ ಶಾಲೆಯಿಂದ ಈ ಭಾಗದ ಪುಟಾಣಿ ಮಕ್ಕಳ ವಿದ್ಯಾರ್ಜನೆಗೆ ಇದು ಸಹಕಾರಿಯಾಗಲಿದೆ ಎಂದು ಹೇಳಿದರು. ನಿವಾಸಿಗಳು ತಮ್ಮ ಮಕ್ಕಳ ವಿದ್ಯಾಭ್ಯಾಸ ಕಡೆಗೆ ಹೆಚ್ಚಿನ ಗಮನ ನೀಡುವುದು ಇಂದಿನ ಅವಶ್ಯಕತೆಯಾಗಿದ್ದು, ಪುಟಾಣಿ ಮಕ್ಕಳ ವಿದ್ಯಾರ್ಜನೆಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲು ಸರಕಾರ ಹಾಗೂ ತಾನು ಬದ್ಧರಿರುವುದಾಗಿ ಇದೇ ಸಂದರ್ಭದಲ್ಲಿ ಹೇಳಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್…
ವಿರಾಜಪೇಟೆ ಆ.6 NEWS DESK : ವಿರಾಜಪೇಟೆ ತಾಲ್ಲೂಕಿನ ಕದನೂರಿನ ಸುಬೇದಾರ್ ಮೇಜರ್ ಕೈಬುಲಿರ ಡಾಲಿ ಅವರ ಅತ್ಯುತ್ತಮ ಸೇವೆಗಾಗಿ ಭಾರತೀಯ ಸೇನೆ ಜಿಒಸಿ-ಇನ್-ವೆಸ್ಟ್ರನ್ ಕಮಾಂಡ್ ಪುರಸ್ಕಾರ ನೀಡಿ ಗೌರವಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕದನೂರು ಗ್ರಾಮದ ಮಾಜಿ ಸೈನಿಕ, ಹವಲ್ದಾರ್ ಎಂ.ಕೆ.ಸಲಾಂ, ಕೈಬುಲಿರ ಡಾಲಿ ಅವರು ದೇಶದ ವಿವಿಧ ಭಾಗದಲ್ಲಿ ಕರ್ತವ್ಯ ನಿರ್ವಹಿಸಿ ಕಾರ್ಗಿಲ್ ಯುದ್ಧದಲ್ಲಿ ತನ್ನ ಅಮೂಲ್ಯ ಸೇವೆಯನ್ನು ತಾಯಿನಾಡಿಗಾಗಿ ನೀಡಿದ್ದರು. ಈ ಪುರಸ್ಕಾರದಿಂದ ಪ್ರಸಕ್ತ ಸುಬೆದಾರ್ ರ‍್ಯಾಂಕ್ ನಿಂದ ಸುಬೇದಾರ್ ಮೇಜರ್ ರ‍್ಯಾಂಕ್ ಗೆ ಬಡ್ತಿ ಹೊಂದಿದ್ದಾರೆ ಎಂದರು. ಪ್ರಸ್ತುತ ಜಮ್ಮು ಕಾಶ್ಮೀರದ ಉದಂಪುರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಬೇದಾರ್ ಮೇಜರ್ ಡಾಲಿ ಅವರು 10.3.1996 ರಲ್ಲಿ ಭಾರತಿಯ ಸೇನೆಗೆ ಪಾದಾರ್ಪಣೆ ಮಾಡಿ ಎರಡು ವರ್ಷಗಳ ಬಳಿಕ ಮದ್ರಾಸ್ ಎಂಜಿನಿಯರ್ ರೆಜಿಮೆಂಟ್‍ನಲ್ಲಿ ಪೊಸ್ಟಿಂಗ್ ಪಡೆದುಕೊಂಡರು. ಇವರು ಕೈಬುಲಿರ ವಿಠಲ ಹಾಗೂ ನಿಲಮ್ಮ ಅವರ ಪುತ್ರ. ಮುಂದೆ ಇವರ ಅತ್ಯುತ್ತಮ ಸೇವೆ ಭಾರತಾಂಭೆಯ ರಕ್ಷಣೆಗೆ ಒದಗಿ ರಾಷ್ಟ್ರ, ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸುವಂತಾಗಬೇಕು…
ಕಾರ್ಕಳ ಆ.6 NEWS DESK : ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಕ್ರಿಯೇಟಿವ್ ಕೆಸರ್ಡೊಂಜಿ ದಿನ’ ಹಸಿರಿನೊಡನೆ ಕಲಿಕೆಯ ಕಾರ್ಯಕ್ರಮ ನಡೆಯಿತು. ಹಿರ್ಗಾನ ಗ್ರಾಮದ ಬೆಂಗಾಲ್ ಗದ್ದೆಯಲ್ಲಿ ನಡೆದ ನಡೆದ ಕಾರ್ಯಕ್ರಮವನ್ನು ಬೆಂಗಳೂರು ಫೆಡರೇಷನ್ ಆಫ್ ಕ್ವಾರಿ ಮತ್ತು ಕ್ರಷರ್ ಓನರ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷರಾದ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪ್ರಕೃತಿಯ ಮಹತ್ವ, ಸಾಂಸ್ಕೃತಿಕ ಪರಂಪರೆಯ ಹಿನ್ನೆಲೆ ಮತ್ತು ಯುವ ಪೀಳಿಗೆಗೆ ಉತ್ತಮವಾದ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಅಗತ್ಯಗಳ ಬಗ್ಗೆ ಜಾಗೃತಿ ಮೂಡಿಸಿದರು. “ಕೆಸರಿನಲ್ಲಿ ಆಡೋದು ಕೇವಲ ಆಟವಲ್ಲ, ಅದು ಒಂದು ಅನುಭವ, ಜೀವನಕ್ಕೆ ಪಾಠ ಕಲಿಸುವ ಕ್ರಿಯೆ”ಎಂದು ತಿಳಿಸಿದರು. ಸಹ ಸಂಸ್ಥಾಪಕರಾದ ಡಾ.ಗಣನಾಥ ಶೆಟ್ಟಿ. ಬಿ. ಪ್ರಾಸ್ತಾವಿಕ ಮಾತನಾಡಿ, ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮ ಹಮ್ಮಿಕೊಂಡಿರುವ ಉದ್ದೇಶಗಳ ಬಗ್ಗೆ ತಿಳಿಸಿದರು. ಸರ್ವರನ್ನು ಸ್ವಾಗತಿಸಿದರು. ಸ್ಥಳ ದಾನಿ ಯೋಗೀಶ್ ಕಿಣಿ, ಶಿಕ್ಷಕರು, ಸ.ಕಿ.ಪ್ರಾ ಶಾಲೆ ಪಲಾಯಿ ಬಾಕ್ಯಾರು, ತೆಳ್ಳಾರು…
ಮಡಿಕೇರಿ ಆ.6 NEWS DESK : ವಿರಾಜಪೇಟೆ ತಾಲೂಕು ಕೊಟ್ಟೋಳ್ಳಿ ಗ್ರಾಮದ ಕೆ.ಬೋಯಿಕೇರಿ ಆಶ್ರಯ ಕಾಲೋನಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿದರು. ನಿವಾಸಿಗಳ ಕುಂದು ಕೊರತೆಗಳನ್ನು ಆಲಿಸಿದ ಶಾಸಕರು, ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರ ಹಾಗೂ ತಾನು ಜನರ ಏಳಿಗೆಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದು, ಇದರ ಸದುಪಯೋಗವನ್ನು ಕಾಲೋನಿ ನಿವಾಸಿಗಳು ಪಡೆದುಕೊಳ್ಳಬೇಕು ಎಂದು ಹೇಳಿದರು. ಆಶ್ರಯ ಕಾಲೋನಿ ಮಕ್ಕಳೊಂದಿಗೆ ಸಂವಾದ ನಡೆದ ಶಾಸಕರು, ಎಲ್ಲರೂ ವಿದ್ಯಾವಂತರಾಗಿ ಮುಂದಿನ ದಿನಗಳಲ್ಲಿ ಸಮಾಜದಲ್ಲಿ ಉತ್ತಮ ಸಾಧನೆ ಮಾಡುವಂತಾಗಲಿ ಎಂದು ಹಾರೈಸಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ನಡಿಕೇರಿಯಂಡ ಮಹೇಶ್, ಪಂಚಾಯಿತಿ ಅಧ್ಯಕ್ಷರಾದ ಜೇಫ್ರಿ ಉತ್ತಪ್ಪ, ಕೆಡಿಪಿ ಸದಸ್ಯರಾದ ಮಾಳೆಟೀರ ಪ್ರಶಾಂತ್, ಪಂಚಾಯತಿ ಸದಸ್ಯರಾದ ಇಸ್ಮಾಯಿಲ್, ಪವಿತ್ರ ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಮಡಿಕೇರಿ ಆ.6 NEWS DESK : ವಿರಾಜಪೇಟೆ ತಾಲೂಕು ಪೆರಂಬಾಡಿಯಲ್ಲಿರುವ ಎಸ್ ಇ ಎ ಮಹಿಳಾ ಕಾಲೇಜಿನ ನೂತನ ಗ್ರಂಥಾಲಯವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಮನುಷ್ಯನ ಜೀವನದಲ್ಲಿ ವಿದ್ಯಾಭ್ಯಾಸ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಶಾಲಾ ಕಾಲೇಜುಗಳಲ್ಲಿ ಸಿಗುವ ಜ್ಞಾನದೊಂದಿಗೆ ಇಂತಹ ಗ್ರಂಥಾಲಯಗಳಲ್ಲಿ ಲಭ್ಯವಿರುವ ಪ್ರಪಂಚದ ಎಲ್ಲಾ ಇತಿಹಾಸ ಹಾಗೂ ವಿದ್ಯಮಾನಗಳ ಪುಸ್ತಕಗಳನ್ನು ಓದುವ ಅಭಿರುಚಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಜೀವನದಲ್ಲಿ ಸಾಧಿಸಲು ಅಥವಾ ತಮ್ಮ ಗುರಿಯನ್ನು ತಲುಪಲು ಅಪಾರ ಜ್ಞಾನದ ಅವಶ್ಯಕತೆ ಇದ್ದು ಇಂತಹ ಜ್ಞಾನವನ್ನು ಪಡೆದುಕೊಳ್ಳುವಲ್ಲಿ ಗ್ರಂಥಾಲಯಗಳು ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿದರು. ಈ ಸಂದರ್ಭ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಹನೀಫ್, ತಾಲೂಕು ಘಟಕದ ಅಧ್ಯಕ್ಷರಾದ ರಫೀಕ್, ಪುರಸಭೆ ಸದಸ್ಯರಾದ ಮತೀನ್, ಜಾಲಿಲ್, ಬಶೀರ್ ಹಾಜಿ, ಇಸ್ಮಾಯಿಲ್ ಮುಸ್ಲಿಯಾರ್, ಅರ್ಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಫಾತಿಮಾ, ಹಾಗೂ ಪಕ್ಷದ ಪ್ರಮುಖರು…






