ಕುಶಾಲನಗರ ಆ.6 NEWS DESK : ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ಪರಿಸರ ಸಂರಕ್ಷಣೆ ಹಾಗೂ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಶಿಕ್ಷಣ ಸಬಲೀಕರಣಕ್ಕೆ ಆದ್ಯತೆ ನೀಡುವುದು ಬಹಳ ಮುಖ್ಯವಾಗಿದೆ’ ಎಂದು ತುಮಕೂರಿನ ಪರಿಸರ ಪ್ರೇಮಿ ಹಾಗೂ ಸೈಕ್ಲಿಸ್ಟ್ ಮಹಾಲಿಂಗಯ್ಯ ಕುಶಾಲನಗರದಲ್ಲಿ ಹೇಳಿದರು. ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಉಳಿವು ಮತ್ತು ಪರಿಸರ ಬಗ್ಗೆ ಜಾಗೃತಿ ಮೂಡಿಸಲು ಸೈಕಲ್ ಮೂಲಕ ರಾಜ್ಯ ಪರ್ಯಟನೆ ಕೈಗೊಂಡಿರುವ ಮಹಾಲಿಂಗಯ್ಯ ಮಾತನಾಡಿ, ನಾವು ಗಿಡ- ಮರಗಳನ್ನು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಯೊಂದಿಗೆ ದೇಶವನ್ನು ಹಸಿರಿನಿಂದ ಸಮೃದ್ಧಗೊಳಿಸಿ ಕಂಗೊಳಿಸುವುದು ಸೇರಿದಂತೆ ರಾಜ್ಯದಲ್ಲಿರುವ ಕನ್ನಡ ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಎಂದು ಮನವಿ ಮಾಡಿದರು. ಬೈಸಿಕಲ್ ಜಾಥಾದ ಮೂಲಕ ರಾಜ್ಯಾದ್ಯಂತ ಸಂಚರಿಸುತ್ತಿರುವ ಮಹಾಲಿಂಗಯ್ಯ ಅವರು ಬುಧವಾರ ಬೆಳಿಗ್ಗೆ ಕೊಡಗು ಸಂಚಾರ ಪೂರೈಸಿ ಮೈಸೂರು ಜಿಲ್ಲೆಗೆ ತೆರಳುವ ಸಂದರ್ಭದಲ್ಲಿ ಕುಶಾಲನಗರದಲ್ಲಿ ಪ್ರವಾಸಿ ಮಂದಿರದ ಬಳಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ನಮ್ಮ ಸುತ್ತಲಿನ ಪರಿಸರ ಸಂರಕ್ಷಣೆ ಜತೆಗೆ ಪ್ರತಿ ಗ್ರಾಮ ಮತ್ತು ಊರುಗಳಲ್ಲಿಯೂ…
ಲೇಖಕ: admin
ಮಡಿಕೇರಿ ಆ.6 NEWS DESK : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 15.87 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.94 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2191.25 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2308.27 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 26.35 ಮಿ.ಮೀ. ಕಳೆದ ವರ್ಷ ಇದೇ ದಿನ 9.82 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3298.12 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3203.83 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 10.95 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 18.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1994.20 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2132.80 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 8.48 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ…
ಮಡಿಕೇರಿ ಆ.6 NEWS DESK : ಬಾಣೆಮೊಟ್ಟೆ ಮತ್ತು ರಾಘವೇಂದ್ರ ದೇವಸ್ಥಾನ ಅಂಗನವಾಡಿ ಕೇಂದ್ರಗಳಲ್ಲಿ ಸ್ತನ್ಯಪಾನ ಮತ್ತು ಉಪಶಮನ ಆರೈಕೆ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು. ನಗರಸಭೆ ಸದಸ್ಯ ಎಸ್.ಸಿ.ಸತೀಶ್ ಮಾತನಾಡಿ, ಎರಡು ಕಾರ್ಯಕ್ರಮವು ಉತ್ತಮವಾದ ಸಂದೇಶವನ್ನು ಒಳಗೊಂಡಿದ್ದು, ಜನರು ಇದರ ಸದುಪಯೋಗ ಪಡೆದುಕೊಳ್ಳಲು ಕರೆ ನೀಡಿದರು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಸ್ತನ್ಯಪಾನ ಸಪ್ತಾಹದ ಮಹತ್ವದ ಬಗ್ಗೆ, ಗರ್ಭಿಣಿ ಬಾಣಂತಿ ಮಗುವಿನ ಆರೈಕೆ ಪೌಷ್ಟಿಕ ಆಹಾರದ ಬಗ್ಗೆ ಹಾಗೂ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ವಿವರವಾಗಿ ತಿಳಿಸಿದರು. ‘ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್’ ನ ಶೋಭಾ ಮಾತನಾಡಿ, ಈ ಸಂಸ್ಥೆ ಸ್ವಯಂ ಸೇವಾ ಸಂಸ್ಥೆಯಾಗಿದ್ದು, 1984 ರಿಂದ ಸರ್ಕಾರ, ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಕಾರ್ಪೋರೇಟ್ ಸಂಸ್ಥೆಗಳು ಹಾಗೂ ಸಮುದಾಯದ ಸಹಭಾಗಿತ್ವದೊಂದಿಗೆ ರಾಜ್ಯಾದ್ಯಾಂತ ಆರೋಗ್ಯ, ಶಿಕ್ಷಣ, ಸಾಮಾಜಿಕ ಆರ್ಥಿಕ ಸಬಲೀಕರಣ ಕಾರ್ಯಕ್ರಮ ಮತ್ತು ತರಬೇತಿ ಹಾಗೂ ಸಂಶೋಧನೆ ಎಂಬ ನಾಲ್ಕು ಕ್ಷೇತ್ರಗಳಲ್ಲಿ…
ನಾಪೋಕ್ಲು ಆ.6 NEWS DESK : ಮೂರ್ನಾಡು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘ ಹಾಗೂ ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸ್ವಚ್ಛತಾ ಶ್ರಮದಾನ ನಡೆಯಿತು. ಮೂರ್ನಾಡಿನ ಸರಕಾರಿ ಪ್ರೌಢ ಶಾಲೆಗೆ ಸುಣ ಬಣ್ಣ ಹೊಡೆದು ಆವರಣದಲ್ಲಿದ್ದ ಮರ ಗಿಡಗಳನ್ನು ಕಡಿದು ಸ್ವಚ್ಛಗೊಳಿಸಲಾಯಿತು. ಸರಕಾರಿ ಪ್ರೌಢ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಎಸ್.ಎಂ.ದೇಚಮ್ಮ ಹರ್ಷ ವ್ಯಕ್ತಪಡಿಸಿ, ಸಂಘದಿಂದ ಉತ್ತಮ ಕೆಲಸ ಆಗುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸಮಾಜಮುಖಿ ಕಾರ್ಯಕ್ರಮ ನಡೆಯುವಂತಾಗಲಿ ಎಂದು ಹಾರೈಸಿದರು. ಕಾಂತೂರು-ಮೂರ್ನಾಡು ಗ್ರಾ.ಪಂ ಅಧ್ಯಕ್ಷ ಕುಶನ್ ರೈ ಮತ್ತು ಕೊಡಗು ಜಿಲ್ಲಾ ಶಾಲಾಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಸಿ.ರಂಗಧಾಮಪ್ಪ, ತ್ರೀನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಸಜನ್ ಗಣಪತಿ, ಪದಾಧಿಕಾರಿಗಳು, ಸದಸ್ಯರು ಹಾಗೂ ನಿವೃತ್ತ ಶಿಕ್ಷಕ ಕೆ.ಪಿ.ಗುರುರಾಜು, ದೈಹಿಕ ಶಿಕ್ಷಣ ಶಿಕ್ಷಕರಾದ ಪಿ.ಬಿ.ಕಸ್ತೂರಿ, ಸಿಬ್ಬಂದಿಗಳು ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಆ.6 NEWS DESK : ರೋಟರಿ ಮಿಸ್ಟಿಹಿಲ್ಸ್ ಸಂಸ್ಥೆ ಹಾಗೂ ನಾಪೋಕ್ಲು ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ಮಿಸ್ಟಿ ಹಿಲ್ಸ್ ಇಂಟರಾಕ್ಟ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು. ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ಇಂಟರಾಕ್ಟ್ ಕ್ಲಬ್ ನ ಅಧ್ಯಕ್ಷ ಬಿ.ಜಿ.ಅನಂತಶಯನ ಮಾತನಾಡಿ, ಇಂಟರಾಕ್ಟ್ ಕ್ಲಬ್ ವಿಶ್ವದಾದ್ಯಂತ ಹೆಸರುಗಳಿಸಿ ಸಮಾಜ ಸೇವೆಯನ್ನು ನಡೆಸುತ್ತಾ ಬಂದಿದೆ. ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಸ್ವಾಮಿ ವಿವೇಕಾನಂದರು ಸಮಾಜದಲ್ಲಿ ಹೇಗೆ ಬದುಕಬೇಕೆಂಬುದನ್ನು ತಿಳಿಸಿದ್ದಾರೆ. ಅವುಗಳನ್ನು ತಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಬೇಕೆಂದರು. ರೋಟರಿ ಕ್ಲಬ್ ಸದಸ್ಯ ರೊಟರಿಯನ್ ಮೋಹನ್ ಪ್ರಭು ಮಾತನಾಡಿ, ಸಂಸ್ಥೆಯ ಕಾರ್ಯ ವೈಖರಿಗಳ ಬಗ್ಗೆ ಮಾಹಿತಿ ನೀಡಿದರು. ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಬಿ.ಎಂ.ಶಾರದ ಮಾತನಾಡಿ, ಇಂಟರಾಕ್ಟ್ ಕ್ಲಬ್ಬಿನ ಸದಸ್ಯರು ತಮ್ಮ ಕಾರ್ಯವೈಖರಿಗಳ ಮೂಲಕ ಎಲ್ಲರಿಗೂ ಮಾದರಿಯಾಗಿರಬೇಕು ಎಂದರು . ರೋಟರಿ ಕಬ್ಬಿನ ಸದಸ್ಯ ರತ್ನಾಕರ ರೈ ಮಾತನಾಡಿ ಕ್ಲಬ್…
ನಾಪೋಕ್ಲು ಆ.6 NEWS DESK : ಪಾರಾಣೆ ಯೂತ್ ಕ್ರಿಕೆಟರ್ಸ್ ವತಿಯಿಂದ ಪಾರಾಣೆ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ನಡೆಯಿತು. ಕೆಸರು ಗದ್ದೆ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಆದರ್ಶ್ ಫ್ರೆಂಡ್ಸ್ ಚೆಡವು ಚಾಂಪಿಯನ್, ಕಗ್ಗೋಡು ಫ್ರೆಂಡ್ಸ್ ತಂಡ ದ್ವಿತೀಯ ಸ್ಥಾನ ಪಡೆಯಿತು. ಕ್ರಿಕೆಟ್ ಪಂದ್ಯದಲ್ಲಿ ಗೋಣಿಕೊಪ್ಪ ತಂಡ ಪ್ರಥಮ ಸ್ಥಾನ ಪಡೆದರೆ, ಓಂ ಸಿ ಸಿ ಬೆಟ್ಟಗೇರಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ಸಮಾರೋಪ ಸಮಾರಂಭದಲ್ಲಿ ಅತಿಥಿಗಳು ಬಹುಮಾನ ವಿತರಿಸಿದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಆ.6 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲ್ಲೂಕು ಕಾನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ, ಲಕ್ಕುಂದ ಪೈಸಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಅಲ್ಲಿನ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು. ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ವಿದ್ಯುತ್, ರಸ್ತೆ ಅಭಿವೃದ್ಧಿ ಹಾಗೂ ಹಕ್ಕುಪತ್ರ ಒದಗಿಸಲು ಕ್ರಮ ಕೈಗೊಳ್ಳುವಂತೆ ನಿವಾಸಿಗಳು ಶಾಸಕರ ಗಮನ ಸೆಳೆದರು. ಈ ಸಂದರ್ಭ ಮಾತನಾಡಿದ ಶಾಸಕರು, ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. :: ಕಾಂಗ್ರೆಸ್‍ಗೆ ಸೇರ್ಪಡೆ :: ಶಾಸಕರ ಜನಪರ ಕಾಳಜಿ, ಅಭಿವೃದ್ಧಿ ಬಗ್ಗೆ ಚಿಂತನೆ ಹಾಗೂ ಕ್ಷೇತ್ರದ ಜನರ ಬಗ್ಗೆ ಅವರು ಹೊಂದಿರುವ ಅಭಿವೃದ್ಧಿಯ ಕನಸುಗಳನ್ನು ಮೆಚ್ಚಿದ ಇತರ ಪಕ್ಷದ ಕಾರ್ಯಕರ್ತರು ಶಾಸಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಪಕ್ಷದ ಶಾಲು ಹೊದಿಸಿ, ಪಕ್ಷಕ್ಕೆ ಬರಮಾಡಿಕೊಂಡ ಶಾಸಕರು ಪಕ್ಷವನ್ನು ಬಲಪಡಿಸುವುದರೊಂದಿಗೆ ಜನಸಾಮಾನ್ಯರ ಬಗ್ಗೆ ಅಪಾರ ಕಾಳಜಿ ವಹಿಸಿಕೊಂಡು ಅವರಿಗೆ ಅನುಕೂಲ…
ಮಡಿಕೇರಿ ಆ.6 NEWS DESK : ಪೊನ್ನಂಪೇಟೆ ತಾಲ್ಲೂಕಿನ ಬಾಳಲೆ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ, ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸಲಹೆಗಳನ್ನು ನೀಡಿದರು. ವಲಯ ಕಾಂಗ್ರೆಸ್ ಅಧ್ಯಕ್ಷರಾದ ಕೋದಂಡ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರು ಶಾಸಕರೊಂದಿಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ, ಹವಾಲುಗಳನ್ನು ನೀಡಿದರು. ಸಭೆಯಲ್ಲಿ ವಲಯ ಕಾಂಗ್ರೆಸ್ ಪದಾಧಿಕಾರಿಗಳು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಅರುಣ್ ಮಾಚಯ್ಯ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ನಿಟ್ಟೂರು ವಲಯ ಅಧ್ಯಕ್ಷ ಪವನ್, ಚೋಂದಮ್ಮ, ಪಂಚಾಯಿತಿ ಸದಸ್ಯರಾದ ವಿನು ಉತ್ತಪ್ಪ, ಸರಕಾರಿ ನಾಮನಿರ್ದೇಶಿತ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
*ಹಠಾತ್ ಮೇಘಸ್ಫೋಟದಿಂದ ಗ್ರಾಮಕ್ಕೆ ಗ್ರಾಮವೇ ನಾಶವಾದ ಘಟನೆ ಉತ್ತರಾಖಂಡದ ಉತ್ತರಕಾಶಿಯ ಧರಾಲಿ ಪ್ರದೇಶದಲ್ಲಿ ಖೀರ್ ಗಂಗಾ ನದಿ ಭಾಗದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ನಡೆದ ಈ ಘಟನೆಯಿಂದ 60ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ನೈಸರ್ಗಿಕ ಮೇಘಸ್ಫೋಟ ಧರಾಲಿ ಮಾರುಕಟ್ಟೆಗೆ ಭಾರಿ ಹಾನಿಯನ್ನುಂಟು ಮಾಡಿದೆ. ಬಲವಾದ ಪ್ರವಾಹದಿಂದಾಗಿ, ಅಂಗಡಿಗಳು, ವಾಹನಗಳು ಮತ್ತು ಮನೆಗಳು ನೀರಿನಲ್ಲಿ ಕೊಚ್ಚಿಹೋಗಿವೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಪ್ರವಾಹದ ಸ್ಥಳವು ತುಂಬಾ ಭಯಾನಕವಾಗಿದ್ದು, ನೀರಿನ ಹರಿವು ಎಷ್ಟು ವೇಗವಾಗಿತ್ತೆಂದರೆ ದೊಡ್ಡ ಕಲ್ಲುಗಳು ಮತ್ತು ಅವಶೇಷಗಳು ಸಹ ಮಾರುಕಟ್ಟೆ ಪ್ರದೇಶಕ್ಕೆ ನುಗ್ಗಿವೆ. ಈ ಪ್ರವಾಹದಲ್ಲಿ ಅನೇಕರು ಕೊಚ್ಚಿ ಹೋಗಿದ್ದಾರೆ. ಧರಾಲಿ ಪ್ರದೇಶದಲ್ಲಿ ಮೇಘಸ್ಫೋಟದಿಂದ ಉಂಟಾದ ಭಾರೀ ಹಾನಿ ದುಃಖಕರ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ. ಜನರ ರಕ್ಷಣಾ ಕಾರ್ಯ ಮುಂದುವರೆದಿದೆ.
*ರಸ್ತೆಯ ಮಧ್ಯ ಭಾಗ ಕುಸಿದು ಬಿದ್ದು ಸುಮಾರು 10 ಸಾವಿರ ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕರ್ ಸಿಲುಕಿಕೊಂಡ ಘಟನೆ ಹೈದರಾಬಾದ್‌ನ ಬಂಜಾರ ಹಿಲ್ಸ್ ಪ್ರದೇಶದ ಮಹೇಶ್ವರಿ ಚೇಂಬರ್ಸ್ ಬಳಿ ನಡೆದಿದೆ.*






