ಸೋಮವಾರಪೇಟೆ ಜು.13 NEWS DESK : ತಾಲೂಕಿನಲ್ಲಿ 1152ಬಿಪಿಎಲ್ ಕಾರ್ಡ್ ಗಳು ಅನರ್ಹಗೊಳ್ಳಲಿದೆ ಎಂದು ಆಹಾರ ಇಲಾಖೆ ನಿರೀಕ್ಷಕಿ ಯಶಸ್ವಿನಿ ತಿಳಿಸಿದ್ದಾರೆ. ಪಟ್ಟಣದ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ಸಭೆಯು ಅಧ್ಯಕ್ಷ ಜಿ.ಎಂ.ಕಾಂತರಾಜು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಹಿತಿ ನೀಡಿದರು. ಸರ್ಕಾರದಿಂದ ಈಗಾಗಲೇ ಪಟ್ಟಿ ಬಂದಿದ್ದು 1.2ಲಕ್ಷ ಆದಾಯ ಮೀರಿದ 992ಕಾರ್ಡುಗಳು,7ಎಕರೆ ಮೀರಿ ಕೃಷಿ ಭೂಮಿ ಹೊಂದಿದ್ದ 15,ಜಿ.ಎಸ್.ಟಿ.ಪಾವತಿದಾರರು 5, ಬಹುರಾಷ್ಟ್ರೀಯ ಕಂಪನಿಗಳ ಉದ್ಯೋಗಿಗಳು 37, ಅಂತರ ರಾಜ್ಯದಲ್ಲೂ ಕಾರ್ಡ್ ಹೊಂದಿರುವ 15, ಒಂದು ವರ್ಷದಿಂದ ಪಡಿತರ ಪಡೆಯದಿರುವ 40 ಕಾರ್ಡುಗಳು ಸೇರಿದಂತೆ ಒಟ್ಟು 1152 ಕಾರ್ಡುಗಳು ರದ್ದಾಗಲಿವೆ ಎಂದು ತಿಳಿಸಿದರು. ಗಂಭೀರ ಆರೋಗ್ಯ ಸಮಸ್ಯೆಯಲ್ಲಿರುವ ರೋಗಿಗಳ ಚಿಕಿತ್ಸೆಗಾಗಿ ನೀಡುವ ಕಾರ್ಡ್ಗಳನ್ನು ಮುಂದಿನದಿನಗಳಲ್ಲಿ ಸ್ಥಳೀಯ ಖಚೇರಿಯಲ್ಲಿಯೇ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ ಎಂದರು. ಪಡಿತರದಾರರಿಂದ ಅಕ್ರಮವಾಗಿ ಖರೀದಿಸಿದ 42 ಕ್ವಿಂಟಾಲ್ ಅಕ್ಕಿಯನ್ನು ವಾಹನ ಸಹಿತ ವಶಪಡಿಸಿಕೊಂಡು ಪೊಲೀಸರಿಗೆ ಒಪ್ಪಿಸಿ ಮೊಖದಮ್ಮೆ ದಾಖಲಿಸಲಾಗಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಪಡಿತರಾದಾರರಿಗೆ…
ಲೇಖಕ: admin
ಮಡಿಕೇರಿ ಸೆ.12 NEWS DESK : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಜಿಲ್ಲೆಯ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ನಡೆಯಲಿದ್ದು, ಸಮೀಕ್ಷೆಯಲ್ಲಿ ಯಾರೂ ಸಹ ಬಿಟ್ಟು ಹೋಗದಂತೆ ಶೇ.100 ರಷ್ಟು ಸಮೀಕ್ಷೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧ ಜಿಲ್ಲಾ ಮಟ್ಟದ ಮಾಸ್ಟರ್ ತರಬೇತಿದಾರರಿಗೆ ಏರ್ಪಡಿಸಲಾಗಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಆದಿವಾಸಿ ಕೆಲವು ಕುಟುಂಬಗಳು ಇಂದಿಗೂ ಸಹ ಆಧಾರ ಕಾರ್ಡ್ ಪಡೆದಿರುವುದಿಲ್ಲ. ಹಾಗೆಯೇ ಕೆಲವು ಕುಟುಂಬಗಳಲ್ಲಿ ಪಡಿತರ ಚೀಟಿ ಸಹ ಇರುವುದಿಲ್ಲ. ಇಂತಹ ಕುಟುಂಬಗಳಿಗೆ ಐಟಿಡಿಪಿ ಇಲಾಖೆ ಜೊತೆಗೂಡಿ ಆಧಾರ್ ಕಾರ್ಡ್ ನೋಂದಣಿ ಮಾಡಿಸುವಂತೆ ಆಧಾರ್ ಕಾರ್ಡ್ ಮಾಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು. ‘ಸಮೀಕ್ಷೆ ಸಂದರ್ಭದಲ್ಲಿ ಪ್ರಮುಖವಾಗಿ ಆಧಾರ್ ಕಾರ್ಡ್, ಪಡಿತರ ಚೀಟಿ, ವಿದ್ಯುತ್ ಸಂಪರ್ಕ ಹಾಗೂ ಮೊಬೈಲ್…
ಮಡಿಕೇರಿ ಸೆ.12 NEWS DESK : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸೆಪ್ಟೆಂಬರ್, 15 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸೆ.15 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿಭವನದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿರುವ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ವಿವಿಧ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಕೊಡಗು ಜಿಲ್ಲೆಯಲ್ಲಿನ ಮಳೆಹಾನಿ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 3.30 ಗಂಟೆಗೆ ಕಾವೇರಿ ತೀರ್ಥೋದ್ಭವ ಕುರಿತು ಅಧಿಕಾರಿಗಳೊಂದಿಗೆ ಭಾಗಮಂಡಲದಲ್ಲಿ ಪೂರ್ವಭಾವಿ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ತಿಳಿಸಿದ್ದಾರೆ.
ಮಡಿಕೇರಿ ಸೆ.12 NEWS DESK : ಕೊಡಗು ವಿದ್ಯಾಲಯದ ಎಂಟನೇ ತರಗತಿ ವಿದ್ಯಾರ್ಥಿ ದೇವಾವೃತ್ ಡಿ.ಬಿ. ಮಹಾರಾಷ್ಟ್ರದ ಸದ್ವಿ ಪ್ರೀತಿ ಸುಧಾಜಿ ಇಂಟರ್ನ್ಯಾಷನಲ್ ಸ್ಕೂಲ್ ಮೆಹತಾ ದಲ್ಲಿ ನಡೆದ ಸಿಬಿಎಸ್‌ಸಿ ದಕ್ಷಿಣ ವಲಯ ಮಟ್ಟದ ಅಂಡರ್-14 ಕ್ರಿಕೆಟ್ ಆಯ್ಕೆ ಪ್ರಕ್ರಿಯೆಯಲ್ಲಿ ರಾಷ್ಟ್ರೀಯ ಕ್ರಿಕೆಟ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾನೆ. ಒಟ್ಟು 450 ಆಟಗಾರರು ಪಾಲ್ಗೊಂಡ ಆಯ್ಕೆ ಪ್ರಕ್ರಿಯೆಯಲ್ಲಿ, ಕೇವಲ 18 ಮಂದಿಯ ತಂಡದಲ್ಲಿ ಸ್ಥಾನ ಪಡೆದಿರುವ ದೇವಾವೃತ್ ದಕ್ಷಿಣ ವಲಯ ಮಟ್ಟದ ಕ್ರಿಕೆಟ್ ತಂಡದಲ್ಲಿ ಲೆಗ್ ಸ್ಪಿನ್ನರ್ ಆಗಿ ಆಡಲಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರಾದ ಕೆ.ಎಸ್. ಸುಮಿತ್ರಾ ತಿಳಿಸಿದ್ದಾರೆ. ಸೆ.15 ರಿಂದ 20 ರವರೆಗೆ ನೋಯಿಡಾದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸಿಬಿಎಸ್‌ಇ ಟಿ-20 ಕ್ರಿಕೆಟ್ ಪಂದ್ಯಾಟದಲ್ಲಿ ದೇವಾವೃತ್ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ. ದೇವಾವೃತ್ ಅವರು ದಂಬೆಕೋಡಿ ಭೀಷ್ಮ ಮತ್ತು ಕವನ ದಂಪತಿಯ ಪುತ್ರನಾಗಿದ್ದಾನೆ.
ಗೋಣಿಕೊಪ್ಪ ಸೆ.12 NEWS DESK : ಪೊನ್ನಂಪೇಟೆ ಗ್ರಾಮ ಪಂಚಾಯಿತಿಯ 2024-25ನೇ ಸಾಲಿನ ಜಮಾಬಂದಿ ಸಭೆಯು ಸೆ.23 ರಂದು ಪಂಚಾಯಿತಿ ಅಧ್ಯಕ್ಷರಾದ ಟಿ.ಎಸ್.ಕುಶಾಲಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಅಂದು ಪೂರ್ವಾಹ್ನ 11 ಗಂಟೆಗೆ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ ಸೆ.12 NEWS DESK : ಕೋಕೇರಿ ಕ್ರಿಕೆಟ್ ಕ್ಲಬ್ ವತಿಯಿಂದ ಕೊಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಮಾಡಲಾಯಿತು. ಶಾಲೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿ, ವಿದ್ಯಾರ್ಥಿಗಳು ಲಭ್ಯವಾಗುವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು. ಕ್ಲಬ್‍ನ ಅಧ್ಯಕ್ಷರು ಹಾಗೂ ಸದಸ್ಯರ ಕಾರ್ಯಕ್ಕೆ ಶಾಲೆಯ ಶಿಕ್ಷಕರು ಶ್ಲಾಘನೆ ವ್ಯಕ್ತಪಡಿಸಿದರು. ಈ ಸಂದರ್ಭ ಕೋಕೇರಿ ಕ್ರಿಕೆಟ್ ಕ್ಲಬ್‍ನ ಅಧ್ಯಕ್ಷರು, ಸದಸ್ಯರು, ಶಾಲೆಯ ಶಿಕ್ಷಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ನಾಪೋಕ್ಲು ಸೆ.12 NEWS DESK : ಪ್ರಾಥಮಿಕ ಕೃಪಿ ಪತ್ತಿನ ಸಹಕಾರ ಸಂಘ ನಾಪೋಕ್ಲು 2024-25 ನೇ ಸಾಲಿನಲ್ಲಿ 51,24,376 ಲಕ್ಷ ರೂ. ನಿವ್ವಳ ಲಾಭಗಳಿಸಿ ಎ ಶ್ರೇಣಿ ಯಲ್ಲಿದೆ ಎಂದು ಸಂಘದ ಅಧ್ಯಕ್ಷ ಕೇಟೋಳಿರ ಎಸ್. ಹರೀಶ್ ಪೂವಯ್ಯ ತಿಳಿಸಿದರು. ಸಂಘದ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂಘದಲ್ಲಿ ಒಟ್ಟು 2549 ಸದಸ್ಯರಿದ್ದು, ಪಾಲು ಬಂಡವಾಳ 1,44,06,280 ಕೋಟಿ ರೂ. ಒಟ್ಟು ನಿಧಿ 2,46,19,543 ಕೋಟಿ ಇದೆ ಎಂದರು. ಸದಸ್ಯರು 47,14,09,896 ಕೋಟಿ ರೂ.ಳನ್ನು ಠೇವಣಿ ಇರಿಸಿದ್ದು, 47,03,09,225 ಕೋಟಿ ರೂ.ಗಳನ್ನು ಸಾಲ ರೂಪದಲ್ಲಿ ಸದಸ್ಯರಿಗೆ ನೀಡಲಾಗಿದೆ. ದುಡಿಯುವ ಬಂಡವಾಳ 63,19,02,569 ಕೋಟಿ ಇದ್ದು, ಸಂಘವು ಪ್ರಸಕ್ತ 2024-25 ಸಾಲಿನಲ್ಲಿ ಒಟ್ಟು 223,44,10.169 ಕೋಟಿ ರೂ.ಗಳ ವಹಿವಾಟು ನಡೆಸುವುದರ ಮೂಲಕ 51,24,376 ಲಕ್ಷ ನಿವ್ವಳ ಲಾಭ ಗಳಿಸಿ ಎ. ಶ್ರೇಣಿಯಲ್ಲಿದೆ ಎಂದು ಮಾಹಿತಿ ನೀಡಿದರು. ಸದಸ್ಯರಿಗೆ ಈ ವರ್ಷ ಶೇ.15 ರಷ್ಟು ಡಿವಿಡೆಂಟ್ ನೀಡಲಾಗುವುದು. ಹಿರಿಯ ನಾಗರಿಕರಿಗೆ ಶೇ.8 …
ಮಡಿಕೇರಿ ಸೆ.20 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಪತ್ರಿಕೋದ್ಯಮ ವಿಭಾಗ, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಹಾಗೂ ಕೊಡಗು ಪ್ರೆಸ್‍ಕ್ಲಬ್ ಸಹಯೋಗದಲ್ಲಿ ಸೆ.22 ರಂದು ಛಾಯಾಚಿತ್ರ ಪತ್ರಿಕೋದ್ಯಮದ ವ್ಯಾಪ್ತಿ ಮತ್ತು ಉದ್ಯೋಗಾವಕಾಶ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಕಾಲೇಜಿನ ವಿಚಾರ ಸಂಕಿರಣ ಕೊಠಡಿಯಲ್ಲಿ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಟೈಮ್ಸ್ ಆಫ್ ಇಂಡಿಯಾ ದಿನ ಪತ್ರಿಕೆಯ ಮಂಗಳೂರು ಆವೃತ್ತಿಯ ಖ್ಯಾತ ಛಾಯಾಚಿತ್ರ ಪತ್ರಕರ್ತ ರವಿ ಪೊಸವಣಿಕೆ ಉಪನ್ಯಾಸ ನೀಡಲಿದ್ದಾರೆ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಬಿ.ರಾಘವ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೊಡಗು ಪ್ರೆಸ್‍ಕ್ಲಬ್ ಮತ್ತು ಎಫ್.ಎಂ.ಕೆ.ಎಂ.ಸಿ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಬೊಳ್ಳಜಿರ ಬಿ.ಅಯ್ಯಪ್ಪ, ಪತ್ರಿಕೋದ್ಯಮ ವಿಭಾಗದ ಸಂಯೋಜಕರಾದ ಪ್ರೊ.ನಯನ ಕಶ್ಯಪ್, ಪತ್ರಿಕೋದ್ಯಮ ಉಪನ್ಯಾಸಕಿ ಎ.ಎನ್.ಮೋನಿಕ ಉಪಸ್ಥಿತರಿರಲಿದ್ದಾರೆ. :: ಛಾಯಾಚಿತ್ರ ಸ್ಪರ್ಧೆ :: ಕಾರ್ಯಕ್ರಮದ ಪ್ರಯುಕ್ತ ಕೊಡಗಿನ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ “ಕೊಡಗಿನ ವರ್ಷಧಾರೆ” ಎಂಬ ವಿಷಯದ…
ನಾಪೋಕ್ಲು ಸೆ.12 NEWS DESK : ಚೆರಿಯಪರಂಬು ಆಟದ ಮೈದಾನದಲ್ಲಿ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬೇತು ಗ್ರಾಮದ ಎಕ್ಸೆಲ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ, ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಕ್ರೀಡಾಕೂಟದಲ್ಲಿ ಪ್ರಾಥಮಿಕ ವಿಭಾಗದಲ್ಲಿ ಶೆಟಲ್ ಬ್ಯಾಡ್ಮಿಂಟನ್ ಸಿಂಗಲ್ಸ್ ಹಾಗೂ ಡಬಲ್ಸ್ ನಲ್ಲಿ ತಾನಿಕ್ ತಮ್ಮಯ್ಯ, ಈತನ್ ಪೂವಣ್ಣ, ಆರವ್ ಅಯ್ಯಪ್ಪ ಪ್ರಥಮ ಸ್ಥಾನ, ಪ್ರೌಢ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಸಿಂಗಲ್ಸ್ ಹಾಗೂ ಡಬಲ್ಸ್ ನಲ್ಲಿ ಚಿನ್ಮಯ್, ನಿಶಾಂತ್ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ವಿಭಾಗದ ಫುಟ್ಬಾಲ್ ನಲ್ಲಿ ದ್ವಿತೀಯ ಸ್ಥಾನ ಪಡೆದು ಏಳು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕರಾದ ಚೋಕಿರ ತಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಅಂಜಪರವಂಡ ರೋಶನ್ ಮಾದಪ್ಪ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಸಕರು, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರ ವೃಂದದವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಶುಭಕೋರಿ, ಹರ್ಷ…
ನಾಪೋಕ್ಲು ಸೆ.12 NEWS DESK : ಚೆನ್ನೈನ ಐಸಿಎಫ್ ಇಂಡೋರ್ ಸ್ಟೇಡಿಯಂ ನಲ್ಲಿ ನಡೆದ 27ನೇ ಅಂತರಾಷ್ಟ್ರೀಯ ಮಹಾತ್ಮ ಗಾಂಧಿ ಕರಾಟೆ ಪಂದ್ಯಾವಳಿಯಲ್ಲಿ ನಾಪೋಕ್ಲುವಿನ ಅಂಕುರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ವರದಿ : ದುಗ್ಗಳ ಸದಾನಂದ.






