ವಿರಾಜಪೇಟೆ ಆ.5 NEWS DESK : ವಿರಾಜಪೇಟೆ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಕೃಷಿ ಕಾರ್ಯಕ್ರಮದಡಿಯಲ್ಲಿ ಪೊನ್ನಂಪೇಟೆ ವಲಯದ ಶೆಟ್ಟಿಗೇರಿ ಕಾರ್ಯಕ್ಷೇತ್ರದ ಹರಿಹರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕರಾದ ಸುಶೀಲಾ ಅಶೋಕ್ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ತಡಿಯಂಗಡ ಸೌಮ್ಯ ಕರುಂಬಯ್ಯ ಮಾತನಾಡಿ, ಗಿಡಮರಗಳನ್ನು ಬೆಳೆಸಬೇಕು, ನೆಟ್ಟ ಗಿಡಗಳನ್ನು ಪೋಷಣೆ ಮಾಡಬೇಕು, ಪರಿಸರ ಸಂರಕ್ಷಣೆಯಿಂದ ಶುದ್ಧವಾದ ಗಾಳಿ, ನೀರು ಸಿಗುತ್ತದೆ ಹಾಗೂ ಎಲ್ಲಾ ವಿದ್ಯಾರ್ಥಿಗಳು ತಮ್ಮ ಮನೆಯ ಪರಿಸರದಲ್ಲಿ ಗಿಡ ನಾಟಿ ಮಾಡಿ ಪರಿಸರ ಸಂರಕ್ಷಿಸಬೇಕು, ವಾಯು ಮಾಲಿನ್ಯ, ಜಲ ಮಾಲಿನ್ಯ, ಶಬ್ದ ಮಾಲಿನ್ಯದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ಕುರಿತು ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕ ನಾಗರಾಜ್, ಕೃಷಿ ಮೇಲ್ವಿಚಾರಕ ವಸಂತ್, ಶಾಲಾ ಶಿಕ್ಷಕಿಯರಾದ ಸಾವಿತ್ರಿ,…
ಲೇಖಕ: admin
ಮಡಿಕೇರಿ ಆ.5 NEWS DESK : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್ಟಿ ವರ್ಗೀಕರಣ ಸೇರಿದಂತೆ 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು, ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಆಗಸ್ಟ್ 10 ರಂದು ಸುಂಟಿಕೊಪ್ಪದಲ್ಲಿ 9ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಭಾನುವಾರ ಬೆಳಿಗ್ಗೆ 10.30 ಗಂಟೆಗೆ ಸುಂಟಿಕೊಪ್ಪದಲ್ಲಿ ಮಾನವ ಸರಪಳಿ ನಿರ್ಮಿಸಿ ಸಾಂವಿಧಾನಿಕ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು. ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ವಿವರಿಸಲಾಗುವುದು ಎಂದು ಹೇಳಿದ್ದಾರೆ. 2025-26 ರ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್…
ಮಡಿಕೇರಿ ಆ.5 NEWS DESK : ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಕೊಡಗು ಪತ್ರಕತ೯ರ ಸಂಘ (ರಿ) ದ ವತಿಯಿಂದ ಪತ್ರಕತ೯ರು, ಸಾವ೯ಜನಿಕರಿಗೆ ಫೋಟೋ, ವಿಡಿಯೋ, ರೀಲ್ಸ್ ಸ್ಪಧೆ೯ ಆಯೋಜಿಸಲಾಗಿದೆ ಎಂದು ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ ತಿಳಿಸಿದ್ದಾರೆ. ಕೊಡಗು ಪತ್ರಕತ೯ರ ಸಂಘದ ಗೌರವ ಸಲಹೆಗಾರರಾದ ಬಿ.ಜಿ.ಅನಂತಶಯನ ಅವರು ತಮ್ಮ ಪುತ್ರಿ ಡಾ. ಅನುಶ್ರೀ ಅವರ ಹ್ಯಾಪಿ ಟೀತ್ ಕ್ಲಿನಿಕ್ ಹೆಸರಲ್ಲಿ ಸ್ಥಾಪಿಸಿರುವ ಮಾನವೀಯ ಮೌಲ್ಯಗಳ ಕುರಿತಾದ ಅತ್ಯುತ್ತಮ ಫೋಟೋ ಸ್ಪರ್ಧೆಗಾಗಿ ಸ್ಪಧಿ೯ಗಳು. ಗರಿಷ್ಟ 3 ಫೋಟೋಗಳನ್ನು ಕಳುಹಿಸಬಹುದು. ಪತ್ರಕತ೯ರು ಸುದ್ದಿ ಚಿತ್ರಕ್ಕೆ (ನ್ಯೂಸ್ ಫೋಟೋ) ವಿಷಯಕ್ಕೆ ಸಂಬಂಧಿಸಿದಂತೆ ಗರಿಷ್ಟ 3 ಫೋಟೋಗಳನ್ನು ಕಳುಹಿಸಬಹುದು. ಜಲಲ ಜಲಧಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಪತ್ರಕತ೯ರು 1 ನಿಮಿಷ ಕಾಲಾವಧಿಯ ಹಿನ್ನಲೆ ದ್ವನಿಯಿಲ್ಲದ, ಸುದ್ದಿ ಅಲ್ಲದ, ವಿಡಿಯೋಕ್ಕೆ ಆದ್ಯತೆ ನೀಡಿರುವ 1 ವಿಡಿಯೋವನ್ನು ಕಳುಹಿಸಬಹುದು. ಸಾವ೯ಜನಿಕರು ಮಳೆಗಾಲದ ಸಂಕಷ್ಟ (ಫನ್ನಿ ಸೈಡ್, ಹಾಸ್ಯವಾಗಿ) ವಿಷಯಕ್ಕೆ ಸಂಬಂಧಿಸಿದಂತೆ 1 ನಿಮಿಷ ಕಾಲಮಿತಿಯಲ್ಲಿರುವ ಗರಿಷ್ಟ 3…
ಮಡಿಕೇರಿ ಆ.5 NEWS DESK : ಭಾರತ ಮುಖ್ಯ ಹಾಕಿ ತಂಡದಲ್ಲಿ ಕೊಡಗಿನ ಆಟಗಾರ ಚಂದೂರ ಬಿ.ಪೂವಣ್ಣ ಅವರು ಆಯ್ಕೆಯಾಗಿದ್ದಾರೆ. ಹಾಕಿ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳುತ್ತಿರುವ ಭಾರತೀಯ ತಂಡವನ್ನು ಪ್ರಕಟಿಸಿದ್ದು, ಕರ್ನಾಟಕ ರಾಜ್ಯದಿಂದ ತಂಡದಲ್ಲಿ ಪೂವಣ್ಣ ಮಾತ್ರ ಸ್ಥಾನ ಪಡೆಯುವ ಮೂಲಕ ಕೊಡಗಿಗೆ ಕೀರ್ತಿ ತಂದಿದ್ದಾರೆ. ಇತ್ತೀಚೆಗೆ ಪೂವಣ್ಣ ಯುರೋಪ್ ಪ್ರವಾಸ ಕೈಗೊಂಡಿದ್ದ ಭಾರತ ಎ ತಂಡದಲ್ಲಿ ಸ್ಥಾನ ಪಡೆದಿದ್ದರು. ಜೂನಿಯರ್ ಇಂಡಿಯಾ ತಂಡವನ್ನು ಈ ಹಿಂದೆ ಪ್ರತಿನಿಧಿಸಿದ್ದರು. ಪೂವಣ್ಣ ಮೂಲತಃ ಕಂಡಂಗಾಲದ ನಿವಾಸಿ ಚಂದೂರ ಎಸ್.ಪ್ರಭು (ಬಾಬಿ) ಹಾಗೂ ಅನಿಲ (ತಾಮನೆ-ಮಲ್ಲೇಂಗಡ) ದಂಪತಿಯ ಪುತ್ರ.
ಮಡಿಕೇರಿ ಆ.5 NEWS DESK : ಯೋನೆಕ್ಸ್ ಸನ್ ರೈಸ್ ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಸೀನಿಯರ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕೊಡಗಿನ ಬೊಪ್ಪಂಡ ದಿಯಾ ಭೀಮಯ್ಯಗೆ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪ್ರಶಸ್ತಿ ಲಭಿಸಿದೆ. ಜು.27 ರಿಂದ ಆ.2 ರವರೆಗೆ ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ 357 ಕರ್ನಾಟಕದ ಅತ್ಯುತ್ತಮ ಶ್ರೇಯಾಂಕಿತ ಆಟಗಾರರು ಪ್ರಶಸ್ತಿಗಾಗಿ ಸೆಣಸಾಡಿದರು. ಇದರಲ್ಲಿ ದಿಯಾ ಭೀಮಯ್ಯ ಮೂರು ವಿಭಾಗದಲ್ಲಿ ಅಂತಿಮ ಘಟ್ಟಕ್ಕೆ ತಲುಪಿದ್ದು, ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾಳೆ. ಬೊಪ್ಪಂಡ ದಿಯಾ ಭೀಮಯ್ಯ 19 ವರ್ಷದ ಬಾಲಕಿಯರ ಸಿಂಗಲ್ಸ್ ನಲ್ಲಿ ದ್ವಿತೀಯ, ಮಿಕ್ಸ್ ಡಬಲ್ಸ್ ನಲ್ಲಿ ಪ್ರಥಮ ಹಾಗೂ ಸೀನಿಯರ್ ವಿಭಾಗದ ಡಬಲ್ಸ್ ನಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾಳೆ. ಕರ್ನಾಟಕದ ಪ್ರಥಮ ಶ್ರೇಯಾಂಕಿತ ಆಟಗಾರ್ತಿ ಡಬಲ್ಸ್ ವಿಭಾಗದಲ್ಲಿ ಬೆಂಗಳೂರಿನ ಅಶ್ವತಿ ವರ್ಗೀಸ್ ಹಾಗೂ ಮಿಶ್ರ ಡಬಲ್ಸ್ ನಲ್ಲಿ ಎ.ಆರ್.ಸುಮಿತ್ ಅವರೊಂದಿಗೆ ಆಡಿದ್ದಾಳೆ. ಮೈಸೂರಿನ ವಿದ್ಯಾಶ್ರಮ ಕಾಲೇಜಿನಲ್ಲಿ ದ್ವಿತೀಯ…
ಮಡಿಕೇರಿ ಆ.5 NEWS DESK : ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ದೇಶದ 11 ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, 10,277 ಹುದ್ದೆಗಳಿಗೆ ಪೂರ್ವಭಾವಿ ಹಾಗೂ ಮುಖ್ಯ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ರಾಜ್ಯದ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ 1,170 ಹುದ್ದೆಗಳಿಗೆ ಸೇರಿಸಿ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ 10 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ಮುಖ್ಯ ಪರೀಕ್ಷೆ ಆನ್ ಲೈನ್ ನಲ್ಲಿ ನಡೆಯಲಿದೆ. ಈ ಮೊದಲೇ ಸಾಲು-ಸಾಲಾಗಿ ಬ್ಯಾಂಕ್ ನೇಮಕಾತಿ ಪರೀಕ್ಷೆಗಳಿಗೆ ಅಧಿಸೂಚನೆ ಪ್ರಕಟವಾಗಿದೆ. ಸಾಮಾನ್ಯವಾಗಿ ಪದವಿ ಮುಗಿಸಿದ ಅಭ್ಯರ್ಥಿಗಳು ಮೊದಲ ಬಾರಿಗೆ ಈ ಪರೀಕ್ಷೆಗಳನ್ನು ಎದುರಿಸುವಾಗ ಸಹಜವಾಗಿಯೇ ಆತಂಕಗಳು ಎದುರಾಗಿರುತ್ತವೆ. ಇರುವ 1,170 ಹುದ್ದೆಗಳಿಗೆ ಲಕ್ಷಗಟ್ಟಲೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿರುವಾಗ ನನಗೆ ಈ ಹುದ್ದೆಯನ್ನ ಪಡೆಯಲು ಸಾದ್ಯವೇ….? ಎಂಬ ಪ್ರಶ್ನೆ ಪ್ರತಿಯೊಬ್ಬರನ್ನ ಕಾಡುತ್ತಿರುತ್ತದೆ. ಇದು ಪ್ರತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮೊದಲ ಬಾರಿಗೆ ಬರೆಯುವವರಿಗೆ ಕಾಡುವ ಮಿಲಿಯನ್ ಡಾಲರ್ ಪ್ರಶ್ನೆ. ಇದು ಸಹಜ, ಅರ್ಜಿ ಸಲ್ಲಿಸಿದ ಎಲ್ಲ…
ನಾಪೋಕ್ಲು ಆ.5 NEWS DESK : ತಮ್ಮದೇ ಸಂಸ್ಕೃತಿ ಸಂಪ್ರದಾಯವನ್ನು ಹೊಂದಿರುವ ಕೊಡಗು ಗೌಡ ಸಮುದಾಯದವರು ತಮ್ಮ ಶ್ರೇಷ್ಠ ಸಂಸ್ಕೃತಿ ಪರಂಪರೆಯನ್ನು ಸಾರ್ವಜನಿಕ ಸಮಾರಂಭಗಳ ಮೂಲಕ ಇತರರಿಗೂ ಪಸರಿಸುವ ಪ್ರಯತ್ನ ಮಾಡಬೇಕೆಂದು ಮೈಸೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯರು ಹಾಗೂ ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕರಾದ ಕೆ.ವಿ.ಶ್ರೀಧರ್ ಅಭಿಪ್ರಾಯಪಟ್ಟರು. ಆಟಿ 18ರ ಪ್ರಯುಕ್ತ ಮೈಸೂರು ಕೊಡಗು ಗೌಡ ಸಮಾಜದಲ್ಲಿ ಏರ್ಪಡಿಸಿದ್ದ ಆಟಿ ಗೌಜಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕೊಡಗು ಗೌಡರ ಶ್ರೇಷ್ಠ ಭಾಷೆ, ಸಂಸ್ಕೃತಿ, ಆಹಾರ, ಪದ್ಧತಿ ಕ್ರಮಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮೂಲಕ, ತಮ್ಮ ಸಂಸ್ಕೃತಿ ಇತರರಿಗೂ ಹಂಚಿಕೆಯಾಗಿ ಅದು ಶಾಶ್ವತವಾಗಿರುವಂತೆ ನೋಡಿಕೊಳ್ಳಬೇಕೆಂದು ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮೈಸೂರು ಕೊಡಗು ಗೌಡ ಸಮಾಜದ ಅಧ್ಯಕ್ಷ ಕೊಂಬಾರನ ಬಸಪ್ಪ ಮಾತನಾಡಿ, ಕೊಡಗಿನಲ್ಲಿ ಮಳೆಗಾಲದ ವಾತಾವರಣದಲ್ಲಿ ಪರಿಸರದಲ್ಲಿ ಸಿಗುವ ಆಹಾರ ಉತ್ಪನ್ನಗಳನ್ನು ಬಳಸಿ ಜನರು ಆರೋಗ್ಯವನ್ನು ಕಾಪಾಡಿಕೊಳ್ಳುತ್ತಾರೆ, ಮೈಸೂರಿನಲ್ಲಿ ನೆಲೆಸಿರುವ ನಮ್ಮ ಸಮುದಾಯದ ಜನರಿಗೆ ಈ ಆರೋಗ್ಯದಾಯಕ ಆಹಾರವನ್ನು ಒದಗಿಸುವ…
ನಾಪೋಕ್ಲು ಆ.5 NEWS DESK : ಚೋನಕೆರೆ ಹಾಗೂ ಅಜ್ಜಿಮುಟ್ಟ ಅಂಗನವಾಡಿ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ಚೋನಕೆರೆ ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹವನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಸದಸ್ಯರಾದ ಬಿ.ಎಂ.ಪ್ರತೀಪ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಎಲ್ಲರೂ ಮಕ್ಕಳ ಶ್ರೇಯಾ ಅಭಿವೃದ್ಧಿಗೆ ಶ್ರಮಿಸಬೇಕೆಂದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯ ಮೇಲ್ವಿಚಾರಕಿ ಹಾಗೂ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿಗಳಾದ ಶೀಲಾ ಅಶೋಕ್ ಪ್ರಾಸ್ತಾವಿಕ ನುಡಿಗಳನ್ನಾಡಿ ಎದೆಹಾಲಿನ ಮಹತ್ವದ ಬಗ್ಗೆ ಹಾಗೂ ಇಲಾಖೆಯ ಸೌಲಭ್ಯಗಳಾದ ಭಾಗ್ಯಲಕ್ಷ್ಮಿ, ಮಾತೃ ವಂದನಾ ಇನ್ನಿತರ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಕಿರಿಯ ಆರೋಗ್ಯ ಕಾರ್ಯಕರ್ತೆಯವರಾದ ಉಮಾಮಹೇಶ್ವರಿ ಅವರು ಆರೋಗ್ಯ ಇಲಾಖೆಯಿಂದ ದೊರೆಯುವ ಸೌಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಅಜ್ಜಿಮುಟ್ಟ ಪ್ರಾಥಮಿಕ ಶಾಲೆಯ ಶಿಕ್ಷಕಿ ಪುಷ್ಪಾವತಿ, ಆಶಾ ಕಾರ್ಯಕರ್ತೆಯರು, ಮಕ್ಕಳ ತಾಯಂದಿರು, ಗ್ರಾಮಸ್ಥರು ಹಾಗೂ ಪುಟಾಣಿ ಮಕ್ಕಳು ಹಾಜರಿದ್ದರು. ಚೋನಕೆರೆ ಅಂಗನವಾಡಿ ಕಾರ್ಯಕರ್ತೆಯವರಾದ ಸಿ.ಯು.ಪವಿತ್ರ ಸ್ವಾಗತಿಸಿ, ನಿರೂಪಿಸಿದರು. ಅಜ್ಜಿಮುಟ್ಟ ಅಂಗನವಾಡಿ ಕಾರ್ಯಕರ್ತೆಯರಾದ ಸುಜಾತ ಯು.ಎನ್…
ಮಡಿಕೇರಿ NEWS DESK ಆ.4 : ಮಡಿಕೇರಿಯ ರಾಜಾಸೀಟ್‌ನಲ್ಲಿ ‘ಗ್ಲಾಸ್ ಬ್ರಿಡ್ಜ್’ ಮತ್ತು ‘ಫುಡ್ ಕೋರ್ಟ್’ ನಿರ್ಮಾಣಕ್ಕೆ ಸಂಬಂಧಿಸಿದಂತೆ ಟೆಂಡರ್ ಪ್ರಕ್ರಿಯೆಗಳು ನಡೆದಿದ್ದರು, ನಗರಸಭೆಯ ಗಮನಕ್ಕೆ ಬಾರದ ಬಗ್ಗೆ ತುರ್ತು ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತವಾಯಿತು. ಈ ಬಗ್ಗೆ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳುವ ಮೂಲಕ ಮತ್ತೆ ಸಭೆ ನಡೆಸಿ ವಿಸ್ತೃತ ಚರ್ಚೆ ನಡೆಸುವ ನಿರ್ಣಯವನ್ನು ಕೈಗೊಳ್ಳಲಾಯಿತು. ನಗರಸಭೆಯ ಸಭಾಂಗಣದಲ್ಲಿ ಅಧ್ಯಕ್ಷೆ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಆರಂಭದಲ್ಲೆ, ಕಾಂಗ್ರೆಸ್ ಸದಸ್ಯ ಬಿ.ವೈ.ರಾಜೇಶ್ ಸೇರಿದಂತೆ ನಾಮನಿರ್ದೇಶಿತ ಸದಸ್ಯರು, ಗ್ಲಾಸ್ ಬ್ರಿಡ್ಜ್ ಮತ್ತು ಫುಡ್ ಕೋರ್ಟ್ ಯೋಜನೆಯನ್ನು ಸರ್ಕಾರ ರೂಪಿಸಿದೆ. ಇದಕ್ಕೆ ವಿರೋಧ ಮಾಡುವ ಉದ್ದೇಶದಿಂದಲೇ ತುರ್ತು ಸಭೆ ಕರೆಯಲಾಗಿದೆ. ಈ ಸಭೆಯನ್ನು ಯಾವುದೇ ಕಾರಣಕ್ಕೂ ನಡೆಯಲು ಬಿಡುವುದಿಲ್ಲ ಎಂದು ವೇದಿಕೆಯ ಮುಂಭಾಗಕ್ಕೆ ಬಂದು ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು. ಕಾಂಗ್ರೆಸ್ ಸದಸ್ಯರ ವಿರೋಧಕ್ಕೆ ಪ್ರತಿಯಾಗಿ ಬಿಜೆಪಿ ಸದಸ್ಯರು, ನಗರಸಭೆಯ ಗಮನಕ್ಕೆ ಬಾರದೆ ಬಹುಕೋಟಿ ಯೋಜನೆಯನ್ನು ಜಾರಿ ಗೊಳಿಸಲಾಗುತ್ತಿದೆ ಎಂದು ವಿರೋಧ ವ್ಯಕ್ತಪಡಿಸಿದರು. ಈ…
ಮಡಿಕೇರಿ ಆ.4 NEWS DESK : ಕೊಡಗು ಜಿಲ್ಲಾ ಮರಾಠ/ಮರಾಟಿ ಸಮಾಜ ಸೇವಾ ಸಂಘದ ಕುದ್ರೆಪಾಯ ಗ್ರಾಮ ಮಟ್ಟದ ಉಪ ಸಮಿತಿಯನ್ನು ರಚಿಸಲಾಗಿದ್ದು, ನೂತನ ಅಧ್ಯಕ್ಷರಾಗಿ ಕೆ.ಜೆ.ಶಶಿಕಾಂತ್ ಹಾಗೂ ಕಾರ್ಯದರ್ಶಿಯಾಗಿ ಸತೀಶ ಪಿ.ಆರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮರಾಠ, ಮರಾಟಿ ಸಮಾಜ ಸೇವಾ ಸಂಘದ ಕುದ್ರೆಪಾಯ ಗ್ರಾಮ ಮಟ್ಟದ ಸಭೆ ಸಂಘದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಶ್ರೀ ಮಹಾವಿಷ್ಣು ದೈವಸ್ಥಾನದ ಆವರಣದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಯಶೋಧ ಪಿ.ಎಂ, ಉಪ ಕಾರ್ಯದರ್ಶಿಯಾಗಿ ಪ್ರವೀಣ ವಿ.ಆರ್, ಕೋಶಾಧಿಕಾರಿಯಾಗಿ ರಂಜಿತ್ ಕೆ.ಎಂ. ಸಂಚಾಲಕರಾಗಿ ವಿಷ್ಣು ನಾಯ್ಕ್ ಟಿ, ಭಾರತಿ, ಸರಸ್ವತಿ ಮಾಪ್ಲೆಕಜೆ, ಸಲಹೆಗಾರರಾಗಿ ವಸಂತ ಕೆ.ಸಿ, ಸಮಿತಿ ಸದಸ್ಯರಾಗಿ ಸತೀಶ್, ರಾಜೇಶ್ವರ ವಿ.ಸಿ, ಕುಶಾಲಪ್ಪ ಬಳ್ಳಿಕೋಡಿ, ವಿಶ್ವನಾಥ ಚಳ್ಳಂಗಾಯ, ಹೂವಯ್ಯ ಕೆರೆಮೂಲೆ ಅವಿರೋಧವಾಗಿ ಆಯ್ಕೆಯಾದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಪರಮೇಶ್ವರ ಎಂ.ಎಂ ಅವರು ನೂತನ ಪದಾಧಿಕಾರಿಗಳು ಸಂಘಟಿತರಾಗಿ ಸಮಾಜದ ಅಭ್ಯುದಯಕ್ಕಾಗಿ ಶ್ರಮಿಸಬೇಕು ಮತ್ತು ಸಂಘವನ್ನು ಉತ್ತಮ ರೀತಿಯಲ್ಲಿ…






